ಕೇಂದ್ರ ಉಕ್ಕಿನ ಸಚಿವರ ಕ್ಷೇತ್ರದಲ್ಲೇ ಕಾಂಗ್ರೆಸ್ ಇತಿಹಾಸ ಸೃಷ್ಟಿಸಿದೆ: ಚೆಲುವರಾಯಸ್ವಾಮಿ

ಬೆಂಗಳೂರು: ಕೇಂದ್ರದ ಉಕ್ಕಿನ ಸಚಿವರ ಕ್ಷೇತ್ರದಲ್ಲಿ ಇತಿಹಾಸದಲ್ಲೇ ಮೊದಲ ಬಾರಿಗೆ ಡಿ.ಸಿ ಸಿ ಬ್ಯಾಂಕ್ ಚುನಾವಣೆಯಲ್ಲಿ 8 ಜನ ಕಾಂಗ್ರೆಸ್ ಬೆಂಬಲ 8 ಪ್ರತಿನಿಧಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಎನ್ ಚೆಲುವರಾಯಸ್ವಾಮಿ ಅವರು ಹೇಳಿದ್ದಾರೆ. ಸರ್ ಎಂ ವಿಶ್ವೇಶ್ವರಯ್ಯ ಕ್ರೀಡಾಂಗಣದಲ್ಲಿ ಪತ್ರಕರ್ತರ ಜೊತೆ ಮಾತನಾಡಿದ ಅವರು ಜಿಲ್ಲೆಯಲ್ಲಿ ಜೆ ಡಿಎಸ್ ಪಕ್ಷದವರು ಚೇಸ್ಟೆ ಬಿಟ್ಟು ಸೋಲು-ಗೆಲುವನ್ನ ಸಮವಾಗಿ ತೆಗೆದುಕೊಳ್ಳಬೇಕು. ಇಂದು ಕಾಂಗ್ರೆಸ್ ಬೆಂಬಲಿತ ಮತ್ತೋಬ್ಬ ಪ್ರತಿನಿಧಿ ಆಯ್ಕೆಯಾಗುವ ಸಾಧ್ಯತೆ ಇದೆ, ಉಳಿದ 3 ಸ್ಥಾನಕ್ಕೆ ಚುನಾವಣೆ ನಡೆಯಲಿದೆ. ಶಾಸಕರು, ಪಕ್ಷದ ಮುಖಂಡರು ಜವಾಬ್ದಾರಿ ತೆಗೆದುಕೊಂಡು ಚುನಾವಣೆ ಮಾಡಿದ್ದಾರೆ ಎಂದು ಹೇಳಿದರು. ಸಹಕಾರ ಕ್ಷೇತ್ರದ ಪರಿಕಲ್ಪನೆ ಕಟ್ಟಿದ್ದು ಶಂಕರೇಗೌಡರು, ನಾನು ಸಹ ಸಹಕಾರ ಕ್ಷೇತ್ರದಿಂದ ಬಂದಿಲ್ಲ ಸ್ಥಳಿಯ ಪಂಚಾಯತ್ ನಿಂದ ಬಂದವನು, ಸಹಕಾರ ಕ್ಷೇತ್ರ ಸಾರ್ವಜನಿಕರಿಗೆ ಅತ್ತಿರವಾಗಿದೆ ಎಂದು ತಿಳಿಸಿದರು. ನಮ್ಮ ಗೆಲುವಿಗೆ ಕಾರಣರಾದ ಕಾಂಗ್ರೆಸ್ ಕಾರ್ಯಕರ್ತರಿಗೆ ಶಕ್ತಿ…

ಗ್ರಾಮಗಳ ಬೆಳವಣಿಗೆಗೆ ಸರ್ಕಾರದಿಂದ ಮತ್ತೊಂದು ಮಹತ್ವದ ತೀರ್ಮಾನ

ಬೆಂಗಳೂರು: ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಸ್ಥಳೀಯ ಯೋಜನಾ ಪ್ರದೇಶವನ್ನು ಹೊರತುಪಡಿಸಿದ ಪ್ರದೇಶಗಳಲ್ಲಿನ ಭೂಪರಿವರ್ತಿತ ಜಮೀನುಗಳಲ್ಲಿ ಬಡಾವಣೆಗಳನ್ನು ನಿರ್ಮಿಸಲು ನಿಯಮಗಳ ಸುತ್ತೋಲೆಯನ್ನು ಸರ್ಕಾರ ಹೊರಡಿಸಿದೆ. ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ (ತಿದ್ದುಪಡಿ) ಅಧಿನಿಯಮ, 2025 ರ ಪ್ರಕರಣ 199(ಬಿ) ರಲ್ಲಿ ಕಟ್ಟಡ ನಿರ್ಮಾಣ ಉದ್ದೇಶಗಳಿಗಾಗಿ ಇರುವ ಕಟ್ಟಡ ನಿವೇಶನಗಳಿಗಾಗಿ ಹೊಸ ಖಾತಾ ಅಥವಾ ಪಿ.ಐ.ಡಿಯನ್ನು ನೀಡಲು, ಗ್ರಾಮ ಪಂಚಾಯತಿ ಅಥವಾ ಸರ್ಕಾರವು ಅಧಿಸೂಚನೆಯ ಮೂಲಕ ಗೊತ್ತುಪಡಿಸಲಾದ ಪ್ರಾಧಿಕಾರಗಳು, ಅಧಿಕಾರ ವ್ಯಾಪ್ತಿಯ ಯೋಜನಾ ಪ್ರಾಧಿಕಾರದ ಮೂಲಕ ಬಡಾವಣೆ ನಕ್ಷೆಗಾಗಿ ಪೂರ್ವಾನುಮೋದನೆಯನ್ನು ಪಡೆದುಕೊಳ್ಳಲು ಅಭಿವೃದ್ಧಿದಾರರು ನಮೂನೆ-1ರಲ್ಲಿ ಅರ್ಜಿಯನ್ನು ಅಗತ್ಯ ದಾಖಲೆಗಳೊಂದಿಗೆ ಗ್ರಾಮ ಪಂಚಾಯತಿಗೆ ಸಲ್ಲಿಸಬೇಕು. ವಿನ್ಯಾಸ ನಕ್ಷೆಯ ಪ್ರಕಾರ ಬಡಾವಣೆಯ ಮಾಲೀಕರು ಸಂಬಂಧಿಸಿದ ಗ್ರಾಮ ಪಂಚಾಯತಿಗೆ ವಿನ್ಯಾಸ ನಕ್ಷೆಯ ಪ್ರಕಾರ ರಸ್ತೆಗಳ ಅಗಲೀಕರಣಕ್ಕೆ ಮೀಸಲಿರಿಸಿದ ರಸ್ತೆಗಳು ಸೇರಿದಂತೆ ರಸ್ತೆಗಳು, ಪಾರ್ಕ್ಗಳು, ವಾಹನ ನಿಲ್ದಾಣಗಳು, ನಾಗರೀಕ ಸೌಲಭ್ಯದ ಪ್ರದೇಶಗಳು, ಸಾರ್ವಜನಿಕ…

RSS ನಿರ್ಬಂಧ; ಹಳೇಯ ಸೇಡು ತೀರಿಸುತ್ತಿದ್ದಾರೆಯೇ ಹೆಗ್ಡೆ? ರಮೇಶ್ ಬಾಬು ಅನುಮಾನ

ಬೆಂಗಳೂರು: RSS ಮೇಲಿನ ನಿರ್ಬಂಧ ಕುರಿತ ಖಾಸಗಿ ಚಾನೆಲ್ ಗೆ ಸಂದರ್ಶನ ನೀಡಿರುವ ನ್ಯಾಯಮೂರ್ತಿ ಸಂತೋಷ ಹೆಗ್ಡೆ ಹೊಸ ಚರ್ಚೆಯನ್ನು ಹುಟ್ಟು ಹಾಕಿದ್ದಾರೆ. RSS ಬ್ಯಾನ್ ಮಾಡುವುದಾದರೆ ಕಾಂಗ್ರೆಸ್ ಪಕ್ಷವನ್ನು ಬ್ಯಾನ್ ಮಾಡಬಹುದಲ್ಲವೇ ಎಂಬ ನ್ಯಾಯಮೂರ್ತಿ ಸಂತೋಷ ಹೆಗ್ಡೆಯವರ ಹೇಳಿಕೆಯು ಅವರ ದ್ವಂದ್ವ ವ್ಯಕ್ತಿತ್ವವನ್ನು ತೋರಿಸಿದಂತಿದೆ ಎಂದು ಕೆಪಿಸಿಸಿ ಮಾಧ್ಯಮ ವಿಭಾಗದ ಅಧ್ಯಕ್ಷರೂ ಆದ ವಿಧಾನ ಪರಿಷತ್ ಸದಸ್ಯ ರಮೇಶ್ ಪ್ರತಿಕ್ರಿಯಿಸಿದ್ದಾರೆ. ವಕೀಲರೂ ಆದ ರಮೇಶ್ ಬಾಬು ಶನಿವಾರ ಬೆಂಗಳೂರಿನಲ್ಲಿ ನಡೆಸಿದ ಸುದ್ದಿಗೋಷ್ಠಿ ಗಮನಸೆಳೆಯಿತು. ಸ್ವತಂತ್ರ ಪೂರ್ವದಲ್ಲಿ ಎರಡು ಬಾರಿ ಮತ್ತು ಸ್ವತಂತ್ರಾ ನಂತರ ಮೂರು ಬಾರಿ ಬ್ಯಾನ್ ಗೆ ಒಳಗಾಗಿದ್ದ ಸಂಘ ಪರಿವಾರದ ಪರವಾಗಿ ಸಮರ್ಥ ವಕ್ತಾರರಾಗಿ ಕೆಲಸ ಮಾಡುವ ಜವಾಬ್ದಾರಿಯನ್ನು ಸಂತೋಷ ಹೆಗ್ಡೆಯವರು ವಹಿಸಿಕೊಂಡಂತಿದೆ ಎಂದು ಟೀಕಿಸಿದರು. ಸರ್ವೋಚ್ಚ ನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿ ಮೇಲೆ ಹಲ್ಲೆಗೆ ಯತ್ನಿಸಿದ ಸನಾತನಿಗಳ ಮೇಲೆ ಧ್ವನಿ ಎತ್ತದ ಸಂತೋಷ…

ರಾಣಿ ಚೆನ್ನಮ್ಮನವರ ಐಕ್ಯ ಸ್ಥಳವನ್ನು ರಾಷ್ಟ್ರೀಯ ಸ್ಮಾರಕ; ಸಿಎಂ

ಬೆಳಗಾವಿ: ರಾಣಿ ಚೆನ್ನಮ್ಮನವರ ಐಕ್ಯ ಸ್ಥಳವನ್ನು ರಾಷ್ಟ್ರೀಯ ಸ್ಮಾರಕ ಎಂದು ಘೋಷಿಸುವಂತೆ ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ್ದು ಕೂಡ ನಮ್ಮ ಸರ್ಕಾರವೇ. ಹಲವು ಮಹಾನ್ ವ್ಯಕ್ತಿಗಳ ಜಯಂತಿಯನ್ನು ಆಚರಣೆಗೆ ತಂದಿದ್ದು ಕೂಡ ನಾವೆ. ಇದು ನಮ್ಮ‌ ಸಂಸ್ಕೃತಿ ಎಂದ ಸಿಎಂ ಸಿದ್ದರಾಮಯ್ಯ, ಬೆಳಗಾವಿ ವಿಮಾನ ನಿಲ್ದಾಣಕ್ಕೆ ವೀರ ರಾಣಿ ಚೆನ್ನಮ್ಮ ಅವರ ಹೆಸರಿಡುವಂತೆ ಕೇಂದ್ರಕ್ಕೆ ಪತ್ರ ಬರೆದಿದ್ದೇವೆ. ಕೇಂದ್ರ ಇನ್ನೂ ತೀರ್ಮಾನ ತೆಗೆದುಕೊಂಡಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು. ಕಿತ್ತೂರು ಅಭಿವೃದ್ಧಿ ಪ್ರಾಧಿಕಾರ ಆಯೋಜಿಸಿದ್ದ 201ನೇ ವರ್ಷದ ಕಿತ್ತೂರು ಉತ್ಸವದ ಸಮಾರೋಪ ಸಮಾರಂಭದಲ್ಲಿ ಪಾಲ್ಗೊಂಡು, ಸ್ವಾತಂತ್ರ್ಯ ಹೋರಾಟದ ಇತಿಹಾಸವನ್ನು ಅವರು ಸ್ಮರಿಸಿದರು. 1857ರ ಸಿಪಾಯಿ ದಂಗೆಗೂ 33 ವರ್ಷಗಳ ಮೊದಲೇ ಬ್ರಿಟೀಷರನ್ನು ಕಿತ್ತೂರು ಚೆನ್ನಮ್ಮ ಸೋಲಿಸಿದರು. ಬ್ರಿಟೀಷರನ್ನು ಸೋಲಿಸಿ ಕಿತ್ತೂರಿನ ಸ್ವಾಭಿಮಾನವನ್ನು ಗೆಲ್ಲಿಸಿದ ದಿನವೇ ಕಿತ್ತೂರು ಉತ್ಸವದ ದಿನವಾಗಿದೆ. 2017 ರಲ್ಲಿ ಕಿತ್ತೂರು ಉತ್ಸವವನ್ನು ಮೊದಲ ಬಾರಿಗೆ ಆರಂಭಿಸಿದ್ದು…

‘ಹಿಟ್ ಅಂಡ್ ರನ್ ಪ್ರಕರಣ: ಬೆಂಗಳೂರು ಪೊಲೀಸರಿಂದ ದಿವ್ಯಾ ಸುರೇಶ್ ವಿಚಾರಣೆ?

ಬೆಂಗಳೂರು: ಬೆಂಗಳೂರಿನ ಬ್ಯಾಟರಾಯನಪುರ ಸಂಚಾರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ವರದಿಯಾದ ಹಿಟ್ ಅಂಡ್ ರನ್ ಪ್ರಕರಣದ ಪೊಲೀಸ್ ತನಿಖೆಯಲ್ಲಿ ಕನ್ನಡ ನಟಿ ಮತ್ತು ಬಿಗ್ ಬಾಸ್ ಕನ್ನಡ ಸ್ಪರ್ಧಿ ದಿವ್ಯಾ ಸುರೇಶ್ ಭಾಗಿಯಾಗಿರುವುದು ಬೆಳಕಿಗೆ ಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಘಟನೆಯಲ್ಲಿ ಮೂವತ್ನಾಲ್ಕು ವರ್ಷದ ಅನಿತಾ ಅವರ ಕಾಲಿನ ಮೂಳೆ ಮುರಿತಕ್ಕೊಳಗಾಗಿದ್ದು, ಬೈಕ್‌ನಲ್ಲಿ ಪ್ರಯಾಣಿಸುತ್ತಿದ್ದ ಇತರ ಇಬ್ಬರು ಸವಾರರು ಘಟನೆಯಲ್ಲಿ ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ ಎನ್ನಲಾಗಿದೆ. Weeks after a late-night hit-and-run accident in Bengaluru, the city traffic police on Friday identified ex Bigg Boss Kannada contestant Divya Suresh as the alleged driver of the car involved in the accident that left three people injured. The accident took place near…

ಗೃಹಲಕ್ಷ್ಮಿ ಫಲಾನುಭವಿಗಳಿಗಾಗಿ ಸಹಕಾರ ಸಂಘಗಳ ಸ್ಥಾಪನೆ

ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರವು ಮಹಿಳೆಯರ ಆರ್ಥಿಕ ಸಬಲೀಕರಣದತ್ತ ಮತ್ತೊಂದು ಮಹತ್ವದ ಹೆಜ್ಜೆ ಇಟ್ಟಿದೆ. ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳಿಗಾಗಿ ವಿವಿದೋದ್ದೇಶ ಸಹಕಾರ ಸಂಘಗಳನ್ನು ಸ್ಥಾಪಿಸಲು ಸರ್ಕಾರ ನಿರ್ಧರಿಸಿದೆ. ಮಹಿಳೆಯರನ್ನು ಆರ್ಥಿಕವಾಗಿ ಸದೃಢಗೊಳಿಸುವ ಗುರಿಯೊಂದಿಗೆ ಕೈಗೊಂಡಿರುವ ಈ ಕ್ರಮದಡಿ, ಗೃಹಲಕ್ಷ್ಮಿ ಫಲಾನುಭವಿಗಳಿಗೆ ಸಾಲ ಸೌಲಭ್ಯ ನೀಡುವುದು, ಅವರ ಆರ್ಥಿಕ ಸ್ಥಿತಿಯನ್ನು ಬಲಪಡಿಸುವುದು ಹಾಗೂ ಸ್ವ ಉದ್ಯೋಗಕ್ಕೆ ಪ್ರೋತ್ಸಾಹ ನೀಡುವುದು ಸಂಘಗಳ ಪ್ರಮುಖ ಉದ್ದೇಶವಾಗಲಿದೆ. “ಗೃಹಲಕ್ಷ್ಮಿಯರಿಗೆ ಆರ್ಥಿಕ ಬಲ – ಸ್ವ ಉದ್ಯೋಗಕ್ಕೆ ಬೆಂಬಲ” ಎಂಬ ಆಶಯದೊಂದಿಗೆ ಕಾಂಗ್ರೆಸ್ ಸರ್ಕಾರ ಮಹಿಳಾ ಸಬಲೀಕರಣದ ನವ ಅಧ್ಯಾಯವನ್ನು ಆರಂಭಿಸಿದೆ ಎಂದು ಪಕ್ಷದ ವಕ್ತಾರರು ತಿಳಿಸಿದ್ದಾರೆ. ರಾಜ್ಯ ಕಾಂಗ್ರೆಸ್ ಸರ್ಕಾರದಿಂದ ಮಹಿಳಾ ಸಬಲೀಕರಣಕ್ಕೆ ಮತ್ತೊಂದು ಮಹತ್ವದ ಹೆಜ್ಜೆ ಮಹಿಳೆಯರನ್ನು ಆರ್ಥಿಕವಾಗಿ ಸದೃಢಗೊಳಿಸುವ ಗುರಿಯೊಂದಿಗೆ ರಾಜ್ಯ ಕಾಂಗ್ರೆಸ್ ಸರ್ಕಾರ "ಗೃಹಲಕ್ಷ್ಮಿ ಯೋಜನೆ"ಯ ಫಲಾನುಭವಿಗಳಿಗಾಗಿ ವಿವಿದೋದ್ದೇಶ ಸಹಕಾರ ಸಂಘಗಳನ್ನು ಸ್ಥಾಪಿಸುವ ಮಹತ್ವದ ನಿರ್ಣಯ ಕೈಗೊಂಡಿದೆ.ಗೃಹಲಕ್ಷ್ಮಿ ಯೋಜನೆಯ…

ಸಂಪುಟದಿಂದ ಸಚಿವ ಜಮೀರ್ ಅಹ್ಮದ್ ವಜಾಕ್ಕೆ ಜೆಡಿಎಸ್ ಆಗ್ರಹ

ಬೆಂಗಳೂರು: ವಂಚಕ ಸಂಬಂಧಿಗೆ ಸಹಾಯ ಮಾಡಲು ಪೊಲೀಸರಿಗೆ ಸಚಿವ ಜಮೀರ್ ಅಹ್ಮದ್ ಅವರು ಒತ್ತಡ ಹೇರಿದ್ದಾರೆ ಎನ್ನಲಾದ ಆಡಿಯೋ ರಾಜ್ಯ ರಾಜಕೀಯದಲ್ಲಿ ಸಂಚಲನ ಸೃಷ್ಟಿಸಿದೆ. ವಂಚನೆ ಪ್ರಕರಣದಲ್ಲಿ ತಮ್ಮ ಸಂಬಂಧಿಕರ ಪರವಾಗಿ ಸಹಾಯ ಮಾಡುವಂತೆ ಪೊಲೀಸ್‌ ಅಧಿಕಾರಿಗೆ ಫೋನ್‌ ಮಾಡಿ ಶಿಫಾರಸ್ಸು ಮಾಡಿರುವ ಸಚಿವ ಬಿ.ಜೆಡ್.ಜಮೀರ್ ಅಹ್ಮದ್ ಅವರು, ಕರ್ನಾಟಕದ ಅನ್ನ ತಿಂದು, ಕನ್ನಡಿಗರ ಮತ ಪಡೆದು ಕನ್ನಡಿಗರಿಗೆ ದ್ರೋಹ ಬಗೆದಿದ್ದಾರೆ ಎಂದು ಜೆಡಿಎಸ್ ಪಕ್ಷ ಆರೋಪಿಸಿದೆ. ಕರ್ನಾಟಕದ ಅನ್ನ ತಿಂದು, ಕನ್ನಡಿಗರ ಮತ ಪಡೆದು ಕನ್ನಡಿಗರಿಗೆ ದ್ರೋಹ ಬಗೆಯುವ ಸಚಿವ @BZZameerAhmedK ನಿಮಗೆ ನಾಚಿಕೆಯಾಗಬೇಕು ! ರಾಜ್ಯದ ರೈತರಿಗೆ ವಂಚಿಸಿರುವ ನಿಮ್ಮ ಸಂಬಂಧಿಕರ ಪರವಾಗಿ ಸಹಾಯ ಮಾಡುವಂತೆ ಪೊಲೀಸ್‌ ಅಧಿಕಾರಿಗೆ ಫೋನ್‌ ಮಾಡಿ ಶಿಫಾರಸ್ಸು ಮಾಡಿರುವುದು ಅಕ್ಷಮ್ಯ. ರಾಜ್ಯದ ಜವಾಬ್ದಾರಿಯುತ ಸಚಿವರಾಗಿ ವಂಚಕರ ಪರ ವಹಿಸಿ,… pic.twitter.com/rNrq8xNbTV — Janata Dal Secular (@JanataDal_S) October…

ಖರ್ಗೆಯವರ ಕುಟುಂಬ ಯಾವುದೇ ದಲಿತರನ್ನು ಬೆಳೆಸಿಲ್ಲ; ಛಲವಾದಿ ನಾರಾಯಣ ಸ್ವಾಮಿ

ಬೆಂಗಳೂರು: ಮಲ್ಲಿಕಾರ್ಜುನ ಖರ್ಗೆಯವರ ಕುಟುಂಬ ಯಾವುದೇ ದಲಿತರನ್ನು ಬೆಳೆಸಿಲ್ಲ ಎಂದು ವಿಧಾನಪರಿಷತ್ ಪ್ರತಿಪಕ್ಷ ನಾಯಕ ಛಲವಾದಿ ನಾರಾಯಣ ಸ್ವಾಮಿ ಆರೋಪಿಸಿದ್ದಾರೆ. ಅದರಲ್ಲೂ ಪ್ರಿಯಾಂಕ್ ಖರ್ಗೆ ವಿರುದ್ಧ ಅವರು ಅಕ್ರೋಶ ವ್ಯಕ್ತಪಡಿಸಿರುವ ವೈಖರಿ ಗಮನಸೆಳೆದಿದೆ. ಪ್ರಿಯಾಂಕ್ ಖರ್ಗೆ ಅವರೇ, ನಿಮ್ಮ ಕುಟುಂಬ ಯಾವುದೇ ದಲಿತರನ್ನು ಬೆಳೆಸಿಲ್ಲ. ದಲಿತ ಸಮುದಾಯದ ಸಮಸ್ಯೆಗಳ ಕುರಿತು ಧ್ವನಿಯನ್ನೂ ಎತ್ತಿಲ್ಲ. ದಲಿತ ಸಮುದಾಯದ ಯಾವುದೇ ಹೋರಾಟಕ್ಕೂ ಕೈಜೋಡಿಸಿಲ್ಲ. ದಲಿತ ಸಮುದಾಯವನ್ನು ನಿಮ್ಮ ಸ್ವಾರ್ಥಕ್ಕಾಗಷ್ಟೇ ಬಳಸಿಕೊಂಡಿದ್ದೀರಿ. ನೂರು ವರ್ಷಗಳಿಂದ ದೇಶಕ್ಕಾಗಿ ಮತ್ತು ಸಮಾಜಕ್ಕಾಗಿ ಕೆಲಸ ಮಾಡಿರುವ… pic.twitter.com/oP5sHqdPU7 — BJP Karnataka (@BJP4Karnataka) October 24, 2025 ‘ಪ್ರಿಯಾಂಕ್ ಖರ್ಗೆ ಅವರೇ, ನಿಮ್ಮ ಕುಟುಂಬ ಯಾವುದೇ ದಲಿತರನ್ನು ಬೆಳೆಸಿಲ್ಲ. ದಲಿತ ಸಮುದಾಯದ ಸಮಸ್ಯೆಗಳ ಕುರಿತು ಧ್ವನಿಯನ್ನೂ ಎತ್ತಿಲ್ಲ. ದಲಿತ ಸಮುದಾಯದ ಯಾವುದೇ ಹೋರಾಟಕ್ಕೂ ಕೈಜೋಡಿಸಿಲ್ಲ. ದಲಿತ ಸಮುದಾಯವನ್ನು ನಿಮ್ಮ ಸ್ವಾರ್ಥಕ್ಕಾಗಷ್ಟೇ ಬಳಸಿಕೊಂಡಿದ್ದೀರಿ’ ಎಂದು ಛಲವಾದಿ ನಾರಾಯಣ…

ಸಿದ್ದರಾಮಯ್ಯ ಬದಲಾವಣೆ, ಜಾರಕಿಹೊಳಿಗೆ ನಾಯಕತ್ವ? ಯತೀಂದ್ರ ಹೇಳಿಕೆಯ ಅಚ್ಚರಿ

ಬೆಂಗಳೂರು: ರಾಜಕೀಯ ಜೀವನದ ಕೊನೆಯ ಹಂತದಲ್ಲಿದ್ದಾರೆ. ಮುಂದಿನ ದಿನಗಳಲ್ಲಿ ವೈಜ್ಞಾನಿಕ ಹಾಗೂ ಪ್ರಗತಿಪರ ಚಿಂತನೆ ಹೊಂದಿರುವ ಸತೀಶ್ ಜಾರಕಿಹೊಳಿ ಅವರು ನಾಯಕತ್ವ ವಹಿಸಬಹುದು ಎಂಬ ಯತೀಂದ್ರ ಸಿದ್ದರಾಮಯ್ಯ ಹೇಳಿಕೆ ರಾಜ್ಯ ರಾಜಕಾರಣದಲ್ಲಿ ಸಂಚಲನ ಸೃಷ್ಟಿಸಿದೆ. ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಸನ್ನಿಹಿತವೇ ಎಂಬ ಪ್ರಶ್ನೆಯನ್ನು ಇದು ಹುಟ್ಟುಹಾಕಿದೆ. ಯತೀಂದ್ರರ ಈ ಹೇಳಿಕೆ ರಾಜ್ಯ ರಾಜಕೀಯ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿರುವಂತೆಯೇ, ಸ್ಪಷ್ಟನೆ ನೀಡಿರುವ ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ‘ಕರ್ನಾಟಕದಲ್ಲಿ ನಾಯಕತ್ವ ಬದಲಾವಣೆಯೇ ಇಲ್ಲ. ಹೈಕಮಾಂಡ್ ಇದನ್ನು ಸ್ಪಷ್ಟಪಡಿಸಿದೆ’ ಎಂದಿದ್ದಾರೆ. ರಾಜ್ಯ ನಾಯಕತ್ವ ಬದಲಾವಣೆಯ ಕುರಿತಂತೆ ಸಿದ್ದರಾಮಯ್ಯ ಅವರ ಪುತ್ರ ಹಾಗೂ ಕಾಂಗ್ರೆಸ್ ಎಂಎಲ್‌ಸಿ ಯತೀಂದ್ರ ಸಿದ್ದರಾಮಯ್ಯ ಅವರ ಹೇಳಿಕೆಗೆ ಮಂತ್ರಾಲಯ ಪ್ರವಾಸದ ಸಂದರ್ಭದಲ್ಲಿ ಪ್ರತಿಕ್ರಿಯೆ ನೀಡಿರುವ ಡಿ.ಕೆ.ಶಿವಕುಮಾರ್, “ಯತೀಂದ್ರ ಏನು ಹೇಳಿದ್ದಾರೆ ಎನ್ನುವುದರ ಬಗ್ಗೆ ಮಾಹಿತಿ ಇಲ್ಲ” ಎಂದರು. “ಪಕ್ಷ ನನಗೆ ಎಲ್ಲವನ್ನೂ ನೀಡಿದೆ. ನಾನು ಪಕ್ಷದ…

2028ರಲ್ಲಿ ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ: ಡಿ.ಕೆ. ಶಿವಕುಮಾರ್ ವಿಶ್ವಾಸ

ರಾಯಚೂರು: “2028ರಲ್ಲಿ ಕಾಂಗ್ರೆಸ್ ಸರ್ಕಾರ ಮತ್ತೆ ಅಧಿಕಾರಕ್ಕೆ ಬರಲಿದೆ. ಅದಕ್ಕಾಗಿ ಕಾರ್ಯಕರ್ತರು ಸಿದ್ಧತೆ ಪ್ರಾರಂಭಿಸಬೇಕು,” ಎಂದು ಉಪಮುಖ್ಯಮಂತ್ರಿ ಹಾಗೂ ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ರಾಯಚೂರು ಜಿಲ್ಲೆಯ ಪಂಚಮುಖಿಯಲ್ಲಿ ಬುಧವಾರ ನಡೆದ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ಪಕ್ಷವು ವ್ಯಕ್ತಿಗಳಿಗಿಂತ ಶ್ರೇಷ್ಠ ಎಂಬುದನ್ನು ಕಾರ್ಯಕರ್ತರು ಅರಿತುಕೊಳ್ಳಬೇಕು ಎಂದು ಹೇಳಿದರು. “ಪಕ್ಷವೇ ನಮಗೆ ಅಸ್ತಿತ್ವ ನೀಡಿದೆ. ಪಕ್ಷದ ಆಶ್ರಯದಿಂದಲೇ ನಾನು ಉಪಮುಖ್ಯಮಂತ್ರಿಯಾಗಿದ್ದೇನೆ, ಬಸನಗೌಡ ದದ್ದಲ್ ಶಾಸಕರಾಗಿದ್ದಾರೆ, ಮತ್ತು ಎನ್.ಎಸ್. ಬೋಸರಾಜು ಸಚಿವರಾಗಿದ್ದಾರೆ,” ಎಂದರು. “ಪಕ್ಷದ ಕಾರ್ಯಕರ್ತರ ಸೇವೆ ಹಾಗೂ ನಿಷ್ಠೆಗೆ ಗೌರವ ನೀಡಲಾಗುತ್ತದೆ. ಯಾವುದೇ ಹುದ್ದೆಯನ್ನು ಅಲ್ಪ ಎಂದು ಭಾವಿಸಬೇಡಿ; ರಾಜಕೀಯದಲ್ಲಿ ಯಾರಾದರೂ ಯಾವುದೇ ಮಟ್ಟಕ್ಕೆ ಏರಬಹುದು,” ಎಂದು ಕಾರ್ಯಕರ್ತರಿಗೆ ಸಲಹೆ ನೀಡಿದರು. “ಕಾಂಗ್ರೆಸ್ ಅಧಿಕಾರಕ್ಕೆ ಬಂದ ನಂತರ ನಾವು ಐದು ಖಾತರಿ ಯೋಜನೆಗಳನ್ನು ಜಾರಿಗೆ ತಂದಿದ್ದೇವೆ. ಬಿಜೆಪಿ ಅಣಕಿಸಿದರೂ, ನಮ್ಮ ಮೊದಲ ಸಚಿವ…