ಬೆಂಗಳೂರು: ಆರೆಸ್ಸೆಸ್ ಬಿಜೆಪಿ ನಾಯಕರನ್ನು ಟೀಕಿಸುವ ಆತುರದಲ್ಲಿ ದಿವಂಗತ ಅನಂತ್ ಕುಮಾರ್ ಅವರ ಹಳೆಯ ವೀಡಿಯೋವನ್ನು ವೈರಲ್ ಮಾಡಿದ ಸಚಿವ ಪ್ರಿಯಾಂಕ್ ವಿರುದ್ಧ ಐಶ್ವರ್ಯ ಅನಂತಕುಮಾರ್ ತರಾಟೆಗೆ ತೆಗೆದುಕೊಂಡಿದ್ದಾರೆ. ‘Priank Kharge, this is a new low for you too’ ಎನ್ನುತ್ತಾ ಕಟುವಾಗಿ ಟೀಕಿಸಿರುವ ಐಶ್ವರ್ಯ, ‘ಆರ್‌ಎಸ್‌ಎಸ್‌ಗೆ ಮಸಿ ಬಳಿಯುವ ನಿಮ್ಮ ವಿಫಲ ಪ್ರಯತ್ನದ ನಂತರ, ನೀವು ಈಗ ಕರ್ನಾಟಕಕ್ಕಾಗಿ ಅನಂತಕುಮಾರ್ ಜಿ ಅವರ ಕೆಲಸವನ್ನು ನಿಮ್ಮ ಸ್ವಂತ ಪಕ್ಷದ ನಾಯಕರು ಸಹ ಮೆಚ್ಚಿದ್ದಾರೆ. ಆದಷ್ಟೇ ನೀವು ಮರೆತಿದ್ದೀರಿ’ ಎಂದು ಚಿವುಟಿದ್ದಾರೆ. ‘ನೀವು ಮರೆತಿದ್ದರೆ, ಈ ವೀಡಿಯೊದಲ್ಲಿನ ಚರ್ಚೆಯು ನಿಮ್ಮ ಪಕ್ಷದ ಹೈಕಮಾಂಡ್‌ನ ಮೊದಲಕ್ಷರಗಳನ್ನು ಹೊಂದಿದ್ದ ಕಾಂಗ್ರೆಸ್ ಸಿಎಂ ಬಗ್ಗೆ ಒಬ್ಬ ಕುಖ್ಯಾತರ ಡೈರಿಯ ಬಗ್ಗೆ ಮತ್ತು ಅವರಿಗೆ ನೀಡಲಾದ ದೊಡ್ಡ ಪ್ರಮಾಣದ ಲಂಚದ ಬಗ್ಗೆ ಎಂಬುದನ್ನು ನಿಮಗೆ ನೆನಪಿಸುತ್ತೇನೆ ಎಂದು ಐಶ್ವರ್ಯ ಎದಿರೇಟು…
Category: ಜಿಲ್ಲೆ | ತಾಲೂಕು
ಮೈಸೂರು: ಕಾಲುವೆಗೆ ಈಜಲು ಹೋದ ಮಕ್ಕಳು ಜಲಸಮಾಧಿ
ಮೈಸೂರು: ದೀಪಾವಳಿ ಹಬ್ಬದ ಸಂಭ್ರಮದ ನಡುವೆಯೇ ಮೈಸೂರಿನಲ್ಲಿ ದಾರುಣ ಘಟನೆ ಸಂಭವಿಸಿದೆ. ಕಾಲುವೆಯಲ್ಲಿ ಈಜಲು ಹೋದ ಮೂವರು ಬಾಲಕರು ನೀರುಪಾಲಾಗಿ ಮೃತಪಟ್ಟಿದ್ದಾರೆ. ಸಾಲಿಗ್ರಾಮ ಪಟ್ಟಣದ ಚಾಮರಾಜ ಎಡದಂಡೆ ಕಾಲುವೆಯಲ್ಲಿ ಈ ಘಟನೆ ಸಂಭವಿಸಿದ್ದು, ಮೃತರು ಕೆ.ಆರ್. ಪೇಟೆಯ ನವೋದಯ ಶಾಲೆಯ ವಿದ್ಯಾರ್ಥಿಗಳೆಂದು ತಿಳಿದುಬಂದಿದೆ. ಭಾನುವಾರ ಮಧ್ಯಾಹ್ನ ಸ್ನಾನಕ್ಕಾಗಿ ಕಾಲುವೆಗೆ ತೆರಳಿದ ಮಕ್ಕಳು ಸಂಜೆಗೂ ಮನೆಗೆ ಮರಳದ ಕಾರಣ ಕುಟುಂಬದವರು ಹುಡುಕಾಟ ನಡೆಸಿದರು. ಹುಡುಕಾಟದ ವೇಳೆ ಕಾಲುವೆದಂಡೆಯಲ್ಲಿ ಮಕ್ಕಳ ಬಟ್ಟೆ ಹಾಗೂ ಚಪ್ಪಲಿಗಳು ಪತ್ತೆಯಾಗಿದ್ದವು. ಘಟನೆಯ ಮಾಹಿತಿ ದೊರಕುತ್ತಿದ್ದಂತೆಯೇ ಪೊಲೀಸರು ಹಾಗೂ ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಶೋಧ ಕಾರ್ಯ ಆರಂಭಿಸಿದರು. ಈ ವೇಳೆ ಇಬ್ಬರ ಮೃತದೇಹ ಪತ್ತೆಯಾಗಿದ್ದು, ಇನ್ನೊಬ್ಬ ಬಾಲಕನಿಗಾಗಿ ಶೋಧ ಕಾರ್ಯ ಮುಂದುವರಿದಿದೆ.
ರಾಜ್ಯ ಸರ್ಕಾರ ಆರ್.ಎಸ್.ಎಸ್ ನಿಷೇಧ ಮಾಡಿಲ್ಲ; ಸಿಎಂ ಸ್ಪಷ್ಟನೆ
ಮಂಗಳೂರು: ರಾಜ್ಯ ಸರ್ಕಾರ ಆರ್.ಎಸ್.ಎಸ್ ನಿಷೇಧ ಮಾಡಿಲ್ಲ. ಶಾಲಾ – ಕಾಲೇಜು ಆವರಣದಲ್ಲಿ ಸಂಘ ಸಂಸ್ಥೆಗಳು ಅನುಮತಿ ಪಡೆಯಬೇಕೆಂದು ಹೊರಡಿಸಿರುವ ಆದೇಶದಲ್ಲಿ ಆರ್.ಎಸ್.ಎಸ್ ಎಂದು ಎಲ್ಲಿಯೂ ಉಲ್ಲೇಖವಾಗಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. ಪುತ್ತೂರಿನಲ್ಲಿ ಶಾಸಕ ಅಶೋಕ್ ರೈ ಸಾರಥ್ಯದ ರೈ ಎಸ್ಟೇಟ್ ಎಜುಕೇಷನಲ್ ಮತ್ತು ಚಾರಿಟೇಬಲ್ ಟ್ರಸ್ಟ್ ಆಯೋಜಿಸಿದ್ದ ‘ಅಶೋಕ ಜನ – ಮನ 2025’ ಕಾರ್ಯಕ್ರಮ ಉದ್ಘಾಟಿಸಿದ ಸಿದ್ದರಾಮಯ್ಯ, ಆಶಿಕ್ ರೈ ಅವರ ಜನಪರ ಸೇವೆಯನ್ನು ಕೊಡಾಡಿದರು. ಈ ಸಂದರ್ಭದಲ್ಲಿ RSS ನಿಷೇಧ ಕುರಿತ ಬಿಜೆಪಿ ನಾಯಕರ ಹೇಳಿಕೆಗಳಿಗೆ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ, ಶಾಲಾ – ಕಾಲೇಜು ಆವರಣದಲ್ಲಿ ಸಂಘ ಸಂಸ್ಥೆಗಳು ಅನುಮತಿ ಪಡೆಯಬೇಕೆಂದು ಹೊರಡಿಸಿರುವ ಆದೇಶದಲ್ಲಿ ಆರ್.ಎಸ್.ಎಸ್ ಎಂದು ಎಲ್ಲಿಯೂ ಉಲ್ಲೇಖವಾಗಿಲ್ಲ ಎಂದರು. ಆದೇಶದಲ್ಲಿ ಯಾವುದೇ ನಿರ್ದಿಷ್ಟ ಸಂಘ ಅಥವಾ ಸಂಸ್ಥೆ ಎಂದು ಇಲ್ಲ. ಬಿಜೆಪಿ ಸರ್ಕಾರ ಆದೇಶ ಮಾಡಿದ್ದನ್ನೇ ನಾವು ಪುನರುಚ್ಚರಿಸಿದ್ದೇವೆ. ಅವರು…
ಜಾತಿ ಜನಗಣತಿ ಅಕ್ಟೋಬರ್ 31 ರವರೆಗೆ ವಿಸ್ತರಣೆ, ಶಿಕ್ಷಕರಿಗೆ ವಿನಾಯಿತಿ
ಬೆಂಗಳೂರು: ರಾಜ್ಯದ ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆ (ಜಾತಿ ಜನಗಣತಿ) ಕಾರ್ಯವನ್ನು ಅಕ್ಟೋಬರ್ 31 ರವರೆಗೆ ವಿಸ್ತರಿಸಲಾಗಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಹಿಂದುಳಿದ ವರ್ಗಗಳ ಆಯೋಗದ ನೇತೃತ್ವದಲ್ಲಿ ಸೆಪ್ಟೆಂಬರ್ 22ರಂದು ಆರಂಭವಾದ ಈ ಸಮೀಕ್ಷೆ ಮೂಲತಃ ಅಕ್ಟೋಬರ್ 7ರೊಳಗೆ ಪೂರ್ಣಗೊಳ್ಳಬೇಕಿತ್ತು. ಆದರೆ ದಸರಾ ರಜೆ ಹಾಗೂ ಮಧ್ಯಾವಧಿ ತೊಂದರೆಗಳಿಂದಾಗಿ ಸರ್ಕಾರ ಕಾರ್ಯಾವಧಿಯನ್ನು ಮುಂದೂಡಿದೆ. ಈಗ ಶಿಕ್ಷಕರನ್ನು ಗಣತಿ ಕರ್ತವ್ಯದಿಂದ ಬಿಡುಗಡೆ ಮಾಡಲಾಗಿದ್ದು, ಸರ್ಕಾರಿ ನೌಕರರನ್ನು ಸಮೀಕ್ಷೆ ಪೂರ್ಣಗೊಳಿಸುವ ಕಾರ್ಯಕ್ಕೆ ನಿಯೋಜಿಸಲು ನಿರ್ಧರಿಸಲಾಗಿದೆ ಎಂದು ಡಿಕೆಶಿ ಭಾನುವಾರ ತಿಳಿಸಿದ್ದಾರೆ. “ಬೆಂಗಳೂರು ದಕ್ಷಿಣ, ಬೀದರ್ ಮತ್ತು ಧಾರವಾಡ ಹೊರತುಪಡಿಸಿ, ಬಹುತೇಕ ಜಿಲ್ಲೆಗಳಲ್ಲಿ 90 ಶೇಕಡಾ ವ್ಯಾಪ್ತಿ ಸಾಧಿಸಲಾಗಿದೆ. ಬೆಂಗಳೂರಿನಲ್ಲಿ 67 ಶೇಕಡಾ ಪ್ರತಿಕ್ರಿಯೆ ದೊರೆತಿದ್ದು, ಸುಮಾರು 20 ಶೇಕಡಾ ನಾಗರಿಕರು ತಮ್ಮ ಮಾಹಿತಿಯನ್ನು ನೀಡಿಲ್ಲ,” ಎಂದು ಶಿವಕುಮಾರ್ ತಿಳಿಸಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಭಾನುವಾರ ಹಿರಿಯ ಸಚಿವರು, ಅಧಿಕಾರಿಗಳು…
ಅತಿವೃಷ್ಟಿ ಸಂಕಷ್ಟ ತಿಳಿಯದ ಸರ್ಕಾರದ ವಿರುದ್ಧ ರೈತರ ರೊಚ್ಚು
ಬಸವಕಲ್ಯಾಣ: ರಾಜ್ಯದ ವಿವಿಧ ಭಾಗಗಳಲ್ಲಿ ಅತಿವೃಷ್ಟಿಯಿಂದ ಬೆಳೆ ನಾಶವಾಗಿ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಆದರೆ ರಾಜ್ಯ ಸರ್ಕಾರ ಜಾತಿ ಸಮೀಕ್ಷೆ ಹಾಗೂ ರಾಜಕೀಯ ವಿಚಾರಗಳಲ್ಲಿ ಕೇಂದ್ರೀಕೃತವಾಗಿದೆ ಎಂಬ ಆರೋಪ ಕೇಳಿ ಬಂದಿದೆ. ಈ ನಡುವೆ ಭಾನುವಾರ ಬಸವಕಲ್ಯಾಣದಲ್ಲಿ ಸಂತ್ರಸ್ತ ರೈತರು ಹಾಗೂ ಬಿಜೆಪಿ ರೈತ ಮೋರ್ಚಾ ಕಾರ್ಯಕರ್ತರು ಬೃಹತ್ ಪ್ರತಿಭಟನೆ ನಡೆಸಿದರು. ರಾಜ್ಯ ಸರ್ಕಾರದಿಂದ ತಕ್ಷಣದ ಬೆಳೆ ಪರಿಹಾರ ನೀಡುವಂತೆ ಆಗ್ರಹಿಸಿದರು. ಪ್ರತಿಭಟನೆಯಲ್ಲಿ ಕೆಲವರು ಅರೆಬೆತ್ತಲೆ ತೊಡಗಿಸಿಕೊಂಡು ಸರ್ಕಾರದ ನಿರ್ಲಕ್ಷ್ಯಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ಶಾಸಕ ಶರಣು ಸಲಗಾರ್, ಬಿಜೆಪಿ ಜಿಲ್ಲಾ ಮತ್ತು ರೈತ ಮೋರ್ಚಾ ಪದಾಧಿಕಾರಿಗಳು, ರೈತ ನಾಯಕರು ಹಾಗೂ ಕಾರ್ಯಕರ್ತರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.
RSS ನಿರ್ಬಂಧಕ್ಕೆ ಹೊರಟ ಸರ್ಕಾರಕ್ಕೆ ಹೈಕೋರ್ಟ್ ಚಾಟಿ ಬೀಸಿದೆ ಎಂದ ಬಿಜೆಪಿ
ಬೆಂಗಳೂರು: ಚಿತ್ತಾಪುರದಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ ಪಥಸಂಚಲನಕ್ಕೆ ಅನುಮತಿ ನೀಡಿದ ಘನ ಉಚ್ಛ ನ್ಯಾಯಾಲಯದ ತೀರ್ಪು ಜನತಂತ್ರದ ವಿಜಯವಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಪ್ರತಿಕ್ರಿಯಿಸಿದ್ದಾರೆ. ಹೈಕೋರ್ಟ್ ಪೀಠದ ಆದೇಶವನ್ನು ಸ್ವಾಗತಿಸಿರುವ ಅವರು, ಪ್ರಜಾತಂತ್ರದ ಹಕ್ಕು ಕಸಿಯಲು ಹೊರಟ ಕಾಂಗ್ರೆಸ್ ಸರ್ಕಾರಕ್ಕೆ ಉಚ್ಛ ನ್ಯಾಯಾಲಯ ಚಾಟಿ ಬೀಸಿ ಸಂವಿಧಾನದ ಘನತೆಯನ್ನು ಎತ್ತಿ ಹಿಡಿದಿದೆ ಎಂದು ಬಣ್ಣಿಸಿದ್ದಾರೆ. ಚಿತ್ತಾಪುರದಲ್ಲಿ RSS ಪಥಸಂಚಲನ ನಿರ್ಬಂಧಿಸಲು ಹೊರಟವರಿಗೆ ಮುಖಭಂಗವಾಗಿದೆ. ಇಂದಿನ ನ್ಯಾಯಾಲಯದ ತೀರ್ಪು ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಸರ್ವಾಧಿಕಾರಿ ಆಡಳಿತ ನಡೆಸಲು ಅವಕಾಶವಿಲ್ಲ ಎಂಬ ಸ್ಪಷ್ಟ ಸಂದೇಶ ಸಾರಿದೆಯಲ್ಲದೇ, ದಿನಬೆಳಗಾದರೆ ಸಂವಿಧಾನದ ಬಗ್ಗೆ ಬೊಗಳೆ ಮಾತನಾಡುವವರಿಗೆ ತಕ್ಕ ಪಾಠ ಹೇಳಿದೆ ಎಂದು ವಿಜಯೇಂದ್ರ ಸಾಮಾಜಿಕ ಮಾಧ್ಯಮ “X’ನಲ್ಲಿ ಪ್ರತಿಕ್ರಿಯಿಸಿದ್ದಾರೆ. ಸಾಂಸ್ಕೃತಿಕ ಹಾಗೂ ಸಾರ್ವಜನಿಕ ಜಾಗೃತಿ ಕಾರ್ಯಕ್ರಮಗಳಿಗೆ ಕಾನೂನು ಸುವ್ಯವಸ್ಥೆಯ ಷರತ್ತು ವಿಧಿಸಿ ಅನುಮತಿ ನೀಡಬೇಕಾಗಿರುವುದು ಸರ್ಕಾರದ ಕರ್ತವ್ಯ, ಆದರೆ ಕಾನೂನು ಸುವ್ಯವಸ್ಥೆಯ ಹೆಸರಿನಲ್ಲಿ…
ಕಲಬುರಗಿ ಜಿಲ್ಲೆ ಚಿತ್ತಾಪುರದಲ್ಲಿ RSS ಪಥಸಂಚಲನಕ್ಕೆ ಹೈಕೋರ್ಟ್ ಅನುಮತಿ
ಕಲಬುರಗಿ: RSS ನಿರ್ಬಂಧಿಸಲು ಹೊರಟ ಸಿದ್ದರಾಮಯ್ಯ ಸರ್ಕಾರಕ್ಕೆ ತೀವ್ರ ಮುಖಭಂಗವಾಗಿದೆ. ಪ್ರಿಯಾಂಕ್ ಖರ್ಗೆ ಕ್ಷೇತ್ರದಲ್ಲಿ ಪಥಸಂಚಲನಕ್ಕೆ ಹೈಕೋರ್ಟ್ ಅನುಮತಿ ನೀಡಿದೆ. ಕಲಬುರಗಿ ಜಿಲ್ಲೆಯ ಚಿತ್ತಾಪುರದಲ್ಲಿ RSSನ ಶತಾಬ್ದಿ ಪಥಸಂಚಲನಕ್ಕೆ ಅನುಮತಿ ನೀಡುವ ವಿಚಾರಕ್ಕೆ ಸಂಬಂಧಿಸಿದಂತೆ ವಿಚಾರಣೆ ಮಾಡಿದ ಕಲಬುರಗಿ ಹೈಕೋರ್ಟ್ ಪೀಠ ನವೆಂಬರ್ 2ರಂದು ಪಥಸಂಚಲನಕ್ಕೆ ಅನುಮತಿ ನೀಡಿದೆ. ರಾಜ್ಯ ಸರ್ಕಾರದ ನಿಲುವನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿ ಕುರಿತಂತೆ ಭಾನುವಾರ ನಡೆಸಿದ ಹೈಕೋರ್ಟ್ ಪೀಠ, ಅರ್ಜಿದಾರರ ಮನವಿಯನ್ನು ಪರಿಗಣಿಸುವಂತೆ ಸರ್ಕಾರಕ್ಕೆ ಹೈಕೋರ್ಟ್ ಸೂಚಿಸಿದೆ. ಜೊತೆಗೆ ಪಥಸಂಚಲನ ಮಾರ್ಗ ಕುರಿತಂತೆ ಜಿಲ್ಲಾಧಿಕಾರಿಗಳಿಗೆ ಹೊಸದಾಗಿ ಅರ್ಜಿ ಸಲ್ಲಿಸುವಂತೆ ಅರ್ಜಿದಾರರಿಗೆ ಸೂಚನೆ ನೀಡಿ ರುವ ಹೈಕೋರ್ಟ್, ವಿಚಾರಣೆಯನ್ನು ಅಕ್ಟೋಬರ್ 24ರ ಮಧ್ಯಾಹ್ನ 2.30ಕ್ಕೆ ವಿಚಾರಣೆ ಮುಂದೂಡಿದೆ. ಚಿತ್ತಾಪುರದಲ್ಲಿ ಭಾನುವಾರ RSS ಪಥ ಸಂಚಲನಕ್ಕೆ ಸ್ಥಳೀಯ ತಹಶೀಲ್ದಾರ್ ನಾಗಯ್ಯ ಹಿರೇಮಠ ಅನುಮತಿ ನಿರಾಕರಿಸಿದ್ದರು. ಇದನ್ನು ಪ್ರಶ್ನಿಸಿ ಆರ್ಎಸ್ಎಸ್ ಪ್ರಮುಖರು ಕಲಬುರಗಿ ಹೈಕೋರ್ಟ್…
‘ಕಿರಿಕ್ ನಾವಲ್ಲ; ರಾಷ್ಟ್ರ ಸೇವಕರು ನಾವೆಲ್ಲ’; ಬಂಟ್ವಾಳದಲ್ಲಿ RSS ಶಕ್ತಿಪ್ರದರ್ಶನ
ಮಂಗಳೂರು: ಕಲಬುರಗಿ ಜಿಲ್ಲೆಯಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ ಕಾರ್ಯಕ್ರಮಕ್ಕೆ ಸಚಿವ ಪ್ರಿಯಾಂಕ್ ಖರ್ಗೆ ಅಡ್ಡಿಪಡಿಸಿದರೆ, ಇತ್ತ ದಕ್ಷಿಣಕನ್ನಡದಲ್ಲಿ ಸಂಘ ಸೈನಿಕರ ವಿಜಯೋತ್ಸವ ಸಂಭ್ರಮ ಮನೆಮಾಡಿದೆ. ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ತನ್ನ ಚಟುವಟಿಕೆಯನ್ನು ಆರಂಭಿಸಿ ನೂರು ವರ್ಷಗಳನ್ನು ಪೂರೈಸಿರುವ ಹಿನ್ನೆಲೆಯಲ್ಲಿ ದೇಶವ್ಯಾಪಿ ಶತಾಬ್ದಿ ಪಥಸಂಚಲನ ನಡೆಯುತ್ತಿದ್ದು, ಭದ್ರಕೋಟೆ ಕರಾವಳಿ ಜಿಲ್ಲೆಯಲ್ಲಿ RSS ಕಾರ್ಯಕರ್ತರು ಶಕ್ತಿ ಪ್ರದರ್ಶನ ನಡೆಸಿದರು. ದಕ್ಷಿಣಕನ್ನಡ ಜಿಲ್ಲೆ ಬಂಟ್ವಾಳದಲ್ಲಿ ನಡೆದ ರಾಷ್ಟ್ರೀಯ ಸ್ವಯಂಸೇವಕ ಸಂಘ ಕಾರ್ಯಕರ್ತರ ಪಥಸಂಚಲನ ಗಮನಸೆಳೆಯಿತು. ಅಪಾರ ಸಂಖ್ಯೆಯಲ್ಲಿ ಗಣವೇಷಧಾರಿ ಸ್ವಯಂಸೇವಕರು ಪಥಸಂಚಲನದಲ್ಲಿ ಭಾಗಿಯಾದರು. ಸಂಘ ಸೈನಿಕರು ಬಂಟ್ವಾಳದ ಪ್ರಮುಖ ರಸ್ತೆಯಲ್ಲಿ ಪಾಠ ಸಂಚಲನ ನಡೆಸಿದರು. ವಿವಿಧ ವಾಹಿನಿಗಳಲ್ಲಿ ನೂರಾರು ಸ್ವಯಂಸೇವಕರು ಘೋಷ್ ವಾದ್ಯಕ್ಕೆ ತಕ್ಕಂತೆ ಹೆಜ್ಜೆ ಹಾಕಿದ ವೈಖರಿ ಸಂಘ ಶಿಸ್ತಿಗೆ ಸಾಕ್ಷಿಯಾಯಿತು. ಪಥಸಂಚಲನ ಸಾಗಿದ ಮಾರ್ಗದುದ್ದಕ್ಕೂ ಸಾರ್ವಜನಿಕರು ಗಣವೇಷಧಾರಿ ಕಾರ್ಯಕರ್ತರಿಗೆ ಪುಷ್ಪಾರ್ಚನೆ ಮಾಡಿ ದೇಶಭಕ್ತಿ ಪ್ರದರ್ಶಿಸುತ್ತಿದ್ದ ಸನ್ನಿವೇಶವು ಕುತೂಹಲದ…
ಸಂವಿಧಾನ ಹೆಸರಿನಲ್ಲಿ ಬೊಗಳೆ ಬಿಡುವವರಿಂದಲೇ ಸಾಂವಿಧಾನಿಕ ಹಕ್ಕು ಹೈಜಾಕ್; ವಿಜಯೇಂದ್ರ ಟ್ವೀಟಾಸ್ತ್ರ
ಬೆಂಗಳೂರು: ಚಿತ್ತಾಪುರದಲ್ಲಿ ಸಂವಿಧಾನದ ಹೆಸರಿನಲ್ಲಿ ಬೊಗಳೆ ಬಿಡುವವರಿಂದಲೇ ಸಾಂವಿಧಾನಿಕ ಹಕ್ಕು ಕಸಿಯಲಾಗುತ್ತಿದೆ ಎಂದು ಕಾಂಗ್ರೆಸ್ ಸರ್ಕಾರದ ವಿರುದ್ಧ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆಕ್ರೋಶ ಹೊರಹಾಕಿದ್ದಾರೆ. ರಾಷ್ಟ್ರೀಯ ಸ್ವಯಂಸೇವಕ ಸಂಘದ ಶತಮಾನೋತ್ಸವದ ಸಂಭ್ರಮಾಚರಣೆಗೆ ತಹಸೀಲ್ದಾರರ ಮೂಲಕ 12 ಮಾಹಿತಿ ಹಾಗೂ ದಾಖಲೆಗಳನ್ನು ಸಲ್ಲಿಸಿಲ್ಲವೆಂದು ಅನುಮತಿ ನಿರಾಕರಿಸಿರುವ ಪರಿ ಉತ್ತರ ಕೋರಿಯಾದ ತಿಕ್ಕಲು ಸರ್ವಾಧಿಕಾರಿ ಕಿಂಗ್ ಜಾಂಗ್ ಉನ್ ಆಡಳಿತ ವೈಖರಿಯನ್ನು ನೆನಪಿಸುತ್ತಿದೆ ಎಂದು ವಿಜಯೇಂದ್ರ ಬಣ್ಣಿಸಿದ್ದಾರೆ. ಸಚಿವ ಪ್ರಿಯಾಂಕ್ ಖರ್ಗೆಯವರಿಗೆ ದೇಶದ ಮೇಲೆ ತುರ್ತು ಪರಿಸ್ಥಿತಿ ಹೇರಿದ್ದ ಕಾಂಗ್ರೆಸ್ ಪಕ್ಷದ ಕರಾಳ ಇತಿಹಾಸ ಅತ್ಯಂತ ಪ್ರಿಯವಾಗಿರುವಂತಿದೆ, ಈ ಕಾರಣಕ್ಕಾಗಿಯೇ ಕಲಬುರಗಿ ಜಿಲ್ಲೆಯಲ್ಲಿ ತುರ್ತುಪರಿಸ್ಥಿತಿ ನೆನಪಿಸುವ ರೀತಿಯ ಆಡಳಿತವನ್ನು ಜಾರಿಗೆ ತರಲು ಹೊರಟಿದ್ದಾರೆ, ಇದಕ್ಕಾಗಿ ಚಿತ್ತಾಪುರವನ್ನು ಚಿಮ್ಮುವ ಹಲಗೆಯಂತೆ ಪ್ರಯೋಗಿಸುತ್ತಿದ್ದಾರೆ ಎಂದವರು ಸಾಮಾಜಿಕ ಮಾಧ್ಯಮ ‘X’ನಲ್ಲಿ ಪ್ರತಿಕ್ರಿಯಿಸಿದ್ದಾರೆ. ಡಾ.ಬಾಬಾ ಸಾಹೇಬ್ ಅವರು ರಚಿಸಿದ ಸಂವಿಧಾನದ ಆಶಯ ಹಾಗೂ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಅಣಕಿಸುವ…
RSS ನಡೆನುಡಿಗಳೇ ನಿಗೂಢ’; ಸಚಿವ ಪ್ರಿಯಾಂಕ್ ಖರ್ಗೆ
ಬೆಂಗಳೂರು: RSS ನಂತಹ ಸಂಘಟನೆಗಳನ್ನು ನಿಗ್ರಹಿಸಿದಾಗ ಮೂಲಭೂತವಾದವನ್ನು ನಿಗ್ರಹಿಸಿದಂತಾಗುತ್ತದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. RSS ನಿಷೇಧ ಕುರಿತ ತಮ್ಮ ಸಮರ್ಥಿಸಿ ಸಾಮಾಜಿಕ ಜಾಲತಾಣ ‘X’ನಲ್ಲಿ ಪೋಸ್ಟ್ ಹಾಕಿರುವ ಪ್ರಿಯಾಂಕ್ ಖರ್ಗೆ, ‘ನಾನು ಮೂಲಭೂತವಾದದ ವಿರೋಧಿಯೇ ಹೊರತು ಯಾವುದೇ ಧರ್ಮಶ್ರದ್ದೆಯ ವಿರೋಧಿಯಲ್ಲ’ ಎಂದಿದ್ದಾರೆ. ‘ಯಾವುದೇ ಒಂದು ಸಂಸ್ಥೆ ಅಥವಾ ಸಂಘಟನೆ ತಾವು ಯಾವ ಕ್ಷೇತ್ರದಲ್ಲಿ ಕೆಲಸ ಮಾಡುತ್ತೇವೆ ಎಂಬುದನ್ನು ಸ್ಪಷ್ಟಪಡಿಸಬೇಕಾಗುತ್ತದೆ. ಆದರೆ RSS ತಮ್ಮದು ಧಾರ್ಮಿಕ ಸಂಘಟನೆಯಲ್ಲ ಎನ್ನುತ್ತದೆ, ಧರ್ಮದ ಹೆಸರಲ್ಲಿ ಅವಾಂತರ ಸೃಷ್ಟಿಸುತ್ತದೆ.ತಮ್ಮದು ರಾಜಕೀಯ ಸಂಘಟನೆಯಲ್ಲ ಎನ್ನುತ್ತದೆ, ನೇರಾನೇರಾ ರಾಜಕೀಯ ಮಾಡುತ್ತದೆ. ಹೀಗೆ ಇವರು ನಡೆನುಡಿಗಳೇ ನಿಗೂಢ’ ಎಂದು ಅವರು ವಿಶ್ಲೇಷಿಸಿದ್ದಾರೆ. ಆರ್ಎಸ್ಎಸ್ ನಂತಹ ಸಂಘಟನೆಗಳನ್ನು ನಿಗ್ರಹಿಸಿದಾಗ ಮೂಲಭೂತವಾದವನ್ನು ನಿಗ್ರಹಿಸಿದಂತಾಗುತ್ತದೆ.ನಾನು ಮೂಲಭೂತವಾದದ ವಿರೋಧಿಯೇ ಹೊರತು ಯಾವುದೇ ಧರ್ಮಶ್ರದ್ದೆಯ ವಿರೋಧಿಯಲ್ಲ. ಯಾವುದೇ ಒಂದು ಸಂಸ್ಥೆ ಅಥವಾ ಸಂಘಟನೆ ತಾವು ಯಾವ ಕ್ಷೇತ್ರದಲ್ಲಿ ಕೆಲಸ ಮಾಡುತ್ತೇವೆ ಎಂಬುದನ್ನು…
