ಬೆಂಗಳೂರು, ಆ.18: ರಾಜ್ಯಕ್ಕೆ ಹಬ್ಬಕ್ಕೆ ಮುನ್ನವೇ ದೀಪಾವಳಿ ಸಡಗರ ಬಂದಿದೆ. 2025-26ನೇ ಸಾಲಿನ ಶೈಕ್ಷಣಿಕ ವರ್ಷಕ್ಕೆ ಅನ್ವಯವಾಗುವಂತೆ ಸರಕಾರಿ ವೈದ್ಯಕೀಯ ಕಾಲೇಜುಗಳಲ್ಲಿ 422 ಪಿಜಿ ಸೀಟುಗಳ ಸಂಖ್ಯ ಹೆಚ್ಚಳವಾಗಿದೆ. ಹಲವಾರು ವರ್ಷಗಳ ಬೇಡಿಕೆ ಈಗ ಈಡೇರಿದಂತಾಗಿದೆ ಎಂದು ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಜೀವನೋಪಾಯ ಮತ್ತು ರಾಯಚೂರು ಜಿಲ್ಲಾ ಉಸ್ತುವಾರಿ ಶಿಕ್ಷಣ ಸಚಿವರಾದ ಡಾ. ಶರಣಪ್ರಕಾಶ ಆರ್. ಪಾಟೀಲ್ ತಿಳಿಸಿದ್ದಾರೆ. ವಿಕಾಸಸೌಧದಲ್ಲಿ ಶನಿವಾರ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಸಚಿವರು ಈ ಕುರಿತು ಮಾಹಿತಿ ನೀಡಿದರು. ಉತ್ತಮ ಗುಣಮಟ್ಟದ ಉನ್ನತ ಶಿಕ್ಷಣ ನೀಡುವುದೇ ನಮ್ಮ ಸರ್ಕಾರದ ಗುರಿ ಎಂದು ಸಚಿವರು ಇದೇ ಸಂದರ್ಭದಲ್ಲಿ ಸ್ಪಷ್ಟಪಡಿಸಿದರು. ಪ್ರೀ ಕ್ಲೀನಿಕಲ್, ಪ್ಯಾರಾ ಕ್ಲೀನಿಕಲ್ ಮತ್ತು ಕ್ಲೀನಿಕಲ್ ವಿಭಾಗಕ್ಕೆ ಒಟ್ಟು 422 ಪಿಜಿ ಸೀಟುಗಳ ಹೆಚ್ಚಳ ಮಾಡಲಾಗಿದೆ ಎಂದು ಡಾ. ಪಾಟೀಲ್ ವಿವರಿಸಿದರು. ಪೀಡಿಯಾಟ್ರಿಕ್ಸ್, ಅನಸ್ತೇಸಿಯಾ, ಫೋರೆನ್ಸಿಕ್ ಮೆಡಿಸಿನ್, ಮೈಕ್ರೊ ಬಯಲಾಜಿ ಸೇರಿದಂತೆ ಇಪ್ಪತ್ತಕ್ಕೂ…
Category: ಜಿಲ್ಲೆ | ತಾಲೂಕು
RSS ಬಗ್ಗೆ ಎಚ್ಚರಿಕೆಯಿಂದ ಇರಬೇಕು ಎಂದ ಸಿಎಂ ಸಿದ್ದರಾಮಯ್ಯ
ಬೆಂಗಳೂರು: ಸಂಘ ಪರಿವಾರ ಮತ್ತು ಆರ್.ಎಸ್.ಎಸ್ ನವರು ಅಂಬೇಡ್ಕರ್ ಅವರ ಸಂವಿಧಾನವನ್ನು ಹಿಂದೆಯೂ ವಿರೋಧಿಸಿದ್ದರು, ಈಗಲೂ ವಿರೋಧಿಸುತ್ತಿದ್ದಾರೆ. ಹೀಗಾಗಿ ಇವರ ಬಗ್ಗೆ ಎಚ್ಚರಿಕೆ ಇಂದ ಇರಬೇಕು ಎಂದು ಸಿಎಂ ಸಿದ್ದರಾಮಯ್ಯ ಪ್ರತಿಪಾದಿಸಿದ್ದಾರೆ. ಮೈಸೂರು ವಿಶ್ವ ವಿದ್ಯಾಲಯದ ರಜತ ಮಹೋತ್ಸವ ಹಾಗೂ ನೂತನ ಜ್ಞಾನ ದರ್ಶನ ಕಟ್ಟಡವನ್ನು ಉದ್ಘಾಟಿಸಿದ ಅವರು, ಅಂಬೇಡ್ಕರ್ ಅವರು ತಮ್ಮ ಜ್ಞಾನವನ್ನು ಸಮಾಜದ ಬದಲಾವಣೆಗೆ ಬಳಸಿದ ಮಹಾನ್ ಚೇತನ. ಇವರು ಸಮಾಜವನ್ನು ಅರ್ಥ ಮಾಡಿಕೊಳ್ಳಲು ಜ್ಞಾನ ಸಂಪಾದನೆ ಮಾಡಿದರು. ಬಳಿಕ ತಮ್ಮ ಜ್ಞಾನವನ್ನು ಬದುಕಿನುದ್ದಕ್ಕೂ ಸಮಾಜದ ಬದಲಾವಣೆಗೆ ಬಳಸಿದರು ಎಂದರು. ಅಂಬೇಡ್ಕರ್ ಅವರ ಹೆಸರಲ್ಲಿ ಬಿಜೆಪಿಯವರು, ಸಂಘ ಪರಿವಾರದವರು ಅಪಪ್ರಚಾರ ಮಾಡುತ್ತಿದ್ದಾರೆ. ಅವರನ್ನು ಚುನಾವಣೆಯಲ್ಲಿ ಸೋಲಿಸಿದ್ದು ಕಾಂಗ್ರೆಸ್ ಎಂದು ಅಪಪ್ರಚಾರ ಮಾಡುತ್ತಿದ್ದಾರೆ. ಆದರೆ, ಸತ್ಯ ಏನೆಂದರೆ “ನನ್ನನ್ನು ಚುನಾವಣೆಯಲ್ಲಿ ಸೋಲಿಸಿದ್ದು ಸಾವರ್ಕರ್ ಮತ್ತು ಡಾಂಗೆ” ಎಂದು ಸ್ವತಃ ಅಂಬೇಡ್ಕರ್ ಅವರೇ ತಮ್ಮದೇ ಹಸ್ತಾಕ್ಷರದಲ್ಲಿ ಬರೆದಿದ್ದಾರೆ.…
RSS ಚಟುವಟಿಕೆ ನಿಷೇಧ: ಜನರ ಹಾದಿ ತಪ್ಪಿಸುವುದರಲ್ಲಿ ಬಿಜೆಪಿಗರು ನಿಸ್ಸೀಮರು ಎಂದ ಸಚಿವ
ಬೆಂಗಳೂರು: ಸರಕಾರಿ ಸ್ಥಳಗಳಲ್ಲಿ ಯಾವುದೇ ಸಂಘ ಸಂಸ್ಥೆಗಳು ಚಟುವಟಿಕೆ ನಡೆಸಬೇಕಾದರೆ ಸಂಬಂಧಪಟ್ಟ ಸ್ಥಳೀಯ ಸಂಸ್ಥೆಗಳ ಅನುಮತಿ ಪಡೆಯಬೇಕು ಎಂಬ ಸಚಿವ ಸಂಪುಟದ ತೀರ್ಮಾನ ಸಮರ್ಥನೀಯ ಎಂದು ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಜೀವನೋಪಾಯ ಮತ್ತು ರಾಯಚೂರು ಜಿಲ್ಲಾ ಉಸ್ತುವಾರಿ ಶಿಕ್ಷಣ ಸಚಿವರಾದ ಡಾ. ಶರಣಪ್ರಕಾಶ ಆರ್. ಪಾಟೀಲ್ ತಿಳಿಸಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ರಾಜಕೀಯ ವಿದ್ಯಮಾನಗಳ ಕುರಿತಾಗಿಯೂ ಸಚಿವರು ಪ್ರತಿಕ್ರಿಯೆ ನೀಡಿದ ಶರಣಪ್ರಕಾಶ ಪಾಟೀಲ್, ‘ನಮ್ಮ ಸರ್ಕಾರ ಜಾರಿಗೆ ಈ ನಿಷೇಧ ಹೇರಿಲ್ಲ. ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರ ಅಧಿಕಾರಾವಧಿಯಲ್ಲಿ ಜಾರಿಗೆ ತರಲಾಗಿತ್ತು. ಇದನ್ನು ನಮ್ಮ ಸರ್ಕಾರ ಅನುಷ್ಠಾನ ಮಾಡಿದೆಯಷ್ಟೇ. ಮಾಡಲು ಕೆಲಸವಿಲ್ಲದ ಬಿಜೆಪಿಯವರು ಜನರಲ್ಲಿ ಗೊಂದಲ ಸೃಷ್ಟಿಸಲು ಯತ್ನಿಸುತ್ತಿದ್ದಾರೆ’ ಎಂದು ತಿರುಗೇಟು ನೀಡಿದರು. ಗ್ರಾಮೀಣಭಿವೃದ್ದಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಅವರು ಆರೆಸ್ಸೆಸ್ ನಿಷೇಧ ಮಾಡಬೇಕು ಎಂದು ಎಲ್ಲಿಯೂ ಹೇಳಿಲ್ಲ.ಎಲ್ಲರೂ ಅವರ ಮಾತನ್ನ ತಪ್ಪಾಗಿ ಅರ್ಥೈಸಿಕೊಂಡಿದ್ದಾರೆ.…
RSS ಗೆ ಸರ್ಕಾರದ ಅಂಕುಶ, ಶುರುವಾಯಿತು “I Love Karnataka’ ಅಭಿಯಾನ
ಬೆಂಗಳೂರು: RSS ವಿರುದ್ದದ ಸಿದ್ದರಾಮಯ್ಯ ಸರ್ಕಾರದ ಪ್ರಹಾರಕ್ಕೆ ಕನ್ನಡ ಕಾರ್ಯಕರ್ತರು ತತ್ತರಗೊಂಡಿದ್ದಾರೆ. ಸಾರ್ವಜನಿಕ ಸ್ಥಳಗಳಲ್ಲಿ ಸಂಘ ಸಂಸ್ಥೆಗಳ ಚಟುವಟಿಕೆ ಮೇಲೆ ರಾಜ್ಯ ಸರ್ಕಾರ ನಿರ್ಬಂಧ ವಿಧಿಸಿರುವ ಕ್ರಮ ಇದೀಗ ರಾಜ್ಯ ಸರ್ಕಾರಕ್ಕೆ ತಿರುಗುಬಾಣ ಎಂಬಂತಾಗಿದೆ. RSS ಮೇಲಿನ ದ್ವೇಷದ ನಡೆಯಿಂದಾಗಿ ಕನ್ನಡ ಸಂಘಟನೆಗಳೂ ಅಸ್ತಿತ್ವ ಕಳೆದುಕೊಳ್ಳುವಂತಾಗಿದೆ ಎಂಬ ಅಭಿಪ್ರಾಯ ಸಾರ್ವಜನಿಕ ವಲಯದಲ್ಲಿ ಕೇಳಿಬರುತ್ತಿದೆ. RSSಗೆ ತನ್ನ ಶಾಖೆಯನ್ನು ನಡೆಸಲು ಸಾರ್ವಜನಿಕ ಸ್ಥಳವೇ ಆಗಬೇಕೆಂದಿಲ್ಲ. ಬಹುತೇಕ ಊರುಗಳಲ್ಲಿ ಯಾರದಾದರೂ ಮನೆಗಳಲ್ಲಿ ಶಾಖೆ ಹಾಗೂ ಬೈಠಕ್’ಗಳನ್ನು ನಡೆಸಲಾಗುತ್ತದೆ. ಬಹಿರಂಗ ಸಮಾವೇಶ ಮತ್ತು ಪಾಠ ಸಂಚಲನಗಳು ಮಾತ್ರ ಸಾರ್ವಜನಿಕ ಸ್ಥಳಗಳಲ್ಲಿ ನಡೆಯುತ್ತವೆಯಾದರೂ ಅವು ವರುಷಕ್ಕೊಮ್ಮೆ ಮಾತ್ರ. ಹಾಗಾಗಿ ನಿರ್ಬಂಧದಿಂದ RSSಗೆ ಸಮಸ್ಯೆಯಾಗದು, ಆದರೆ ಇದರ ಪರಿಣಾಮ ಬೀರುವುದು ಕನ್ನಡಿಗರ ಮೇಲೆ. ಕರುನಾಡಿನ ಗಲ್ಲಿಗಲ್ಲಿಗಳಲ್ಲಿ ಕನ್ನಡ ಧ್ವಜ ಹಾರಿಸುವ ಕನ್ನಡಿಗರಿಗೆ ಸಿದ್ದರಾಮಯ್ಯ ಸರ್ಕಾರದ ಈ ದ್ವೇಷದ ನಿಯಮದಿಂದಾಗಿ ಅನ್ಯಾಯವಾಗುತ್ತದೆ. ತಮಿಳುನಾಡು ಸಹಿತ ಹಲವು…
ರಾಣೇಬೆನ್ನೂರು ಬಳಿ ಭೀಕರ ಅಪಘಾತ; ಮೂವರು ದುರ್ಮರಣ
ಹಾವೇರಿ: ರಾಣೇಬೆನ್ನೂರು ತಾಲೂಕಿನ ಕಾಕೋಳ ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ನಿಂತಿದ್ದ ಟ್ರ್ಯಾಕ್ಟರ್ ಟ್ರ್ಯಾಕ್ಟರ್ ಟ್ರೈಲರ್ ಗೆ ಟಾಟಾ ಏಸ್ ವಾಹನ ಡಿಕ್ಕಿಯಾಗಿ ಭೀಕರ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. 20 ಜನರಿಗೆ ಗಾಯಗಳಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಮೃತರನ್ನು ದಾವಣಗೆರೆ ಜಿಲ್ಲೆ ಮಲೇಬೆನ್ನೂರಿನ ನಿವಾಸಿಗಳಾದ ನಿಂಗಮ್ಮ ಜಿಗಳೇರ್ (70), ಚಮನಸಾಬ್ ಕೆರಿಮತ್ತಿಹಳ್ಳಿ (65), ಮಾಬುಸಾಬ್ ದೊಡ್ಡಗುಬ್ಬಿ (65) ಎಂದು ಗುರುತಿಸಲಾಗಿದೆ.
ಬಿಹಾರ ಚುನಾವಣೆಗೆ ಕರ್ನಾಟಕದಿಂದ ಹಣ; ಶೆಟ್ಟರ್ ಆರೋಪ
ಬೆಳಗಾವಿ: ಬಿಹಾರ ವಿಧಾನಸಭಾ ಚುನಾವಣೆಗೆ ಹಣ ಸಂಗ್ರಹಿಸುವ ಉದ್ದೇಶದಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಇತ್ತೀಚಿಗೆ ತಮ್ಮ ಸಂಪುಟ ಸಹೋದ್ಯೋಗಿಗಳಿಗೆ ಔತಣಕೂಟ ಆಯೋಜಿಸಿದ್ದರು ಎಂದು ಸಂಸದ ಜಗದೀಶ್ ಶೆಟ್ಟರ್ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹೈಕಮಾಂಡ್ ಸೂಚನೆ ಹಿನ್ನೆಲೆಯಲ್ಲಿ ಬಿಹಾರ ಚುನಾವಣೆಗೆ ಹಣವನ್ನು ಸಂಗ್ರಹಿಸುವ ಉದ್ದೇಶವನ್ನು ಸಿದ್ದರಾಮಯ್ಯ ಈಡೇರಿಸಬೇಕಿದೆ. ಈ ಊದೇಶಕ್ಕಾಗಿ ಅವರು ಮಂತ್ರಿಗಳಿಗೆ ಔತಣಕೂಟವನ್ನು ಆಯೋಜಿಸಿದ್ದ ಪ್ರತಿಯೊಬ್ಬರಲ್ಲೂ ಚುನಾವಣೆಗೆ ಹಣ ನೀಡುವಂತೆ ಕೇಳಿಕೊಂಡಿದ್ದಾರೆ ಎಂದು ಬಾಂಬ್ ಸಿಡಿಸಿದರು. ಕರ್ನಾಟಕವನ್ನು ಚುನಾವಣೆಗೆ ಎಟಿಎಂ ಆಗಿ ಕಾಂಗ್ರೆಸ್ ಹೈಕಮಾಡ್ ಮಾಡಿಕೊಂಡಿದೆ ಎಂದು ಅವರು ದೂರಿದರು. ಸಿಎಂ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿ ಕಾರ್ಯನಿರ್ವಹಿಸುವಲ್ಲಿ ವಿಫಲರಾಗಿದ್ದಾರೆ ಎಂದು ಆರೋಪಿಸಿದ ಅವರು, ಕಾಂಗ್ರೆಸ್ ರಾಜ್ಯ ಘಟಕದಲ್ಲಿ ಆಂತರಿಕ ಕಚ್ಚಾಟ ಹೆಚ್ಚಿದ್ದು, ಸಿಎಂ ಸ್ಥಾನದ ಬಗ್ಗೆ ಪಕ್ಷದ ಹೈಕಮಾಂಡ್ ತೀರ್ಮಾನ ತೆಗೆದುಕೊಳ್ಳಲಿದೆ ಎಂದು ಶೆಟ್ಟರ್ ವಿಶ್ಲೇಷಿಸಿದರು.
ಕರ್ನಾಟಕ ಮಾಹಿತಿ ಆಯೋಗಕ್ಕೆ ನೂತನ ಆಯುಕ್ತರನ್ನಾಗಿ ನಿವೃತ್ತ ಐಎಎಸ್ ಅಧಿಕಾರಿ ಡಾ.ರಿಚರ್ಡ್ ವಿನ್ಸೆಂಟ್ ಡಿ ಸೋಜಾ ನೇಮಕ; ಸರ್ಕಾರದ ಆದೇಶ
ಬೆಂಗಳೂರು: ಕರ್ನಾಟಕ ಮಾಹಿತಿ ಆಯೋಗದಲ್ಲಿ ಖಾಲಿ ಇರುವ ಮೂರು ಆಯುಕ್ತರ ಹುದ್ದೆಗಳಿಗೆ ರಾಜ್ಯ ಸರ್ಕಾರ ನೇಮಕ ಮಾಡಿದೆ. ನಿವೃತ್ತ ಐಎಎಸ್ ಅಧಿಕಾರಿ ಡಾ.ರಿಚರ್ಡ್ ವಿನ್ಸೆಂಟ್ ಡಿ ಸೋಜಾ, ಹಾಗೂ ವಿಧಾನಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿಯವರ ವಿಶೇಷ ಕರ್ತವ್ಯಾಧಿಕಾರಿ ಡಾ. ಮಹೇಶ್ ವಾಳ್ವೇಕರ್ ಆಯೋಗದ ಬೆಂಗಳೂರು ಪೀಠಗಳಿಗೆ ಕಮೀಷನರ್ ಆಗಿ ಸರ್ಕಾರ ನೇಮಕ ಮಾಡಿದೆ. ಕಲಬುರಗಿ ಪೀಠಕ್ಕೆ ಬಿ.ವೆಂಕಟ್ ಸಿಂಗ್ ಅವರನ್ನು ಆಯುಕ್ತರನ್ನಾಗಿ ಸರ್ಕಾರ ನೇಮಕ ಮಾಡಿ ಆದೇಶ ಹೊರಡಿಸಿದೆ. ಡಾ.ರಿಚರ್ಡ್ ವಿನ್ಸೆಂಟ್ ಡಿ ಸೋಜಾ ರವರು ಭಾರತೀಯ ಆಡಳಿತ ಸೇವೆ ಅಧಿಕಾರಿಯಾಗಿ, ವಿವಿಧ ಆಡಳಿತ, ವ್ಯವಸ್ಥಾಪಕ ಮತ್ತು ತಾಂತ್ರಿಕ ಕ್ಷೇತ್ರಗಳಲ್ಲಿ ಸಾಕಷ್ಟು ಅನುಭವ ಹೊಂದಿರುವ ಡಾ.ರಿಚರ್ಡ್ ವಿನ್ಸೆಂಟ್ ಡಿ ಸೋಜಾ, ರಸ್ತೆ ಸುರಕ್ಷತೆ, ಸಾರ್ವಜನಿಕ ಕಲ್ಯಾಣ ಮತ್ತು ಸಂಪನ್ಮೂಲ ನಿರ್ವಹಣೆಯಲ್ಲಿ ಮಾಡಿರುವ ಸಾಧನೆ ಹೆಗ್ಗುರುತಾಗಿದೆ. ಮೆಕ್ಯಾನಿಕಲ್ ಎಂಜಿನಿಯರಿಂಗ್‌ನಲ್ಲಿ ಬ್ಯಾಚುಲರ್ ಆಫ್ ಎಂಜಿನಿಯರಿಂಗ್ ಪದವಿ ನಂತರ, ಮಾನವ ಸಂಪನ್ಮೂಲ…
ಬಿಜೆಪಿ ಆಡಳಿತವಿರುವ ರಾಜ್ಯಗಳಿಗಿಂತ ಕರ್ನಾಟಕದ ಸಾರಿಗೆ ವ್ಯವಸ್ಥೆಯೇ ಮೇಲು; ರಾಮಲಿಂಗಾ ರೆಡ್ಡಿ
ಬೆಂಗಳೂರು: ರಾಜ್ಯದ ಸಾರಿಗೆ ವ್ಯವಸ್ಥೆ ಬಗ್ಗೆ ಟೀಕಿಸಿರುವ, ಅದರಲ್ಲೂ ಬೆಂಗಳೂರಿನ ಸಾರಿಗೆ ವ್ಯವಸ್ಥೆ ಬಗ್ಗೆ ವ್ಯಂಗ್ಯವಾಡಿರುವ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಹಾಗೂ ಉದ್ಯಮಿ ಮೋಹನದಾಸ್ ಪೈ ಅವರನ್ನು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ತರಾಟೆಗೆ ತೆಗೆದುಕೊಂಡಿದ್ದಾರೆ. ಕರ್ನಾಟಕದ ಸಾರಿಗೆ ನಿಗಮಗಳ ಸುಧಾರಣೆ ಬಗ್ಗೆ ಅಂಕಿಅಂಶಗಳನ್ನು ಮುಂದಿಟ್ಟಿರುವ ರಸಚಿವ ರಾಮಲಿಂಗಾ ರೆಡ್ಡಿ, ಬಿಜೆಪಿ ಆಡಳಿತವಿರುವ ಉತ್ತರ ಪ್ರದೇಶ, ಮಹಾರಾಷ್ಟ್ರ, ಬಿಹಾರ, ಗುಜರಾತ್, ರಾಜಸ್ಥಾನ, ಒಡಿಶಾಗಳಲ್ಲಿ ಪ್ರತಿ ಸಾವಿರ ಜನರಿಗೆ ಲಭ್ಯವಿರುವ ಬಸ್ಸುಗಳ ಸಂಖ್ಯೆ ಕಡಿಮೆಯಿದೆ. ಕರ್ನಾಟಕ ಆ ಎಲ್ಲಾ ರಾಜ್ಯಗಳಿಗಿಂತ ಪ್ರಗತಿ ಸಾಧಿಸಿದೆ ಎಂದು ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಂಗಳವಾರ ಸುದ್ದಿಗೋಷ್ಠಿ ನಡೆಸಿದ ರಾಮಲಿಂಗಾ ರೆಡ್ಡಿ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಹಾಗೂ ಉದ್ಯಮಿ ಮೋಹನದಾಸ್ ಪೈ ಅವರ ಟೀಕೆಗಳಿಗೆ ತಮ್ಮದೇ ಶೈಲಿಯಲ್ಲಿ ಎದಿರೇಟು ನೀಡಿದರು. ಬೆಂಗಳೂರು ನಗರದ ಜೀವನಾಡಿಯಾಗಿರುವ ಬಿಎಂಟಿಸಿಯು ಪ್ರತಿದಿನ 48 ಲಕ್ಷ ಜನರಿಗೆ ಸಾರಿಗೆ…
ಬೆಂಗಳೂರಿನಲ್ಲಿ ಸಣ್ಣ ವಿಸ್ತೀರ್ಣದ ಮನೆಗಳಿಗೆ ಇನ್ನು OC ಅಗತ್ಯವಿಲ್ಲ
ಬೆಂಗಳೂರು: ರಾಜಧಾನಿ ಬೆಂಗಳೂರು ನಗರದಲ್ಲಿ ಬಡವರು ಹಾಗೂ ಮಧ್ಯಮ ವರ್ಗದವರು ನಿರ್ಮಿಸಿರುವ ಸಣ್ಣ ವಿಸ್ತೀರ್ಣದ ಮನೆಗಳಿಗೆ ಈಗ ಸ್ವಾಧೀನಾನುಭವ (Occupancy Certificate–OC) ಅಗತ್ಯವಿಲ್ಲ ಎಂಬ ಮಹತ್ವದ ಆದೇಶವನ್ನು ರಾಜ್ಯ ಸರ್ಕಾರ ಹೊರಡಿಸಿದೆ. ಇದುವರೆಗೆ ಓಸಿ ಇಲ್ಲದ ಕಟ್ಟಡಗಳಿಗೆ ಬೆಸ್ಕಾಂ ವಿದ್ಯುತ್ ಸಂಪರ್ಕ ಹಾಗೂ ಜಲಮಂಡಳಿ ನೀರಿನ ಸಂಪರ್ಕ ನೀಡುತ್ತಿರಲಿಲ್ಲ. ಆದರೆ ಇದೀಗ 30×40 ಅಡಿ ವಿಸ್ತೀರ್ಣದ ನಿವೇಶನಗಳ ಮನೆಗಳಿಗೆ ಓಸಿ ವಿನಾಯಿತಿ ನೀಡುವಂತೆ ಸರ್ಕಾರ ತೀರ್ಮಾನಿಸಿದೆ. ಸಚಿವ ಸಂಪುಟದ ಅನುಮೋದನೆಯಂತೆ ನಗರಾಭಿವೃದ್ಧಿ ಇಲಾಖೆ ಮಂಗಳವಾರ ಅಧಿಕೃತ ಆದೇಶ ಹೊರಡಿಸಿದ್ದು, ಸಾವಿರಾರು ಸಣ್ಣ ಮನೆಮಾಲೀಕರಿಗೆ ಇದರಿಂದ ದೊಡ್ಡದಾದ ತಾತ್ಕಾಲಿಕ ನಿಟ್ಟಿನಲ್ಲಿಯೇ ನಿಟ್ಟಿನ ಸುಧಾರಣೆಯಾಗಿದೆ ಎಂದು ನಗರಾಭಿವೃದ್ಧಿ ವಲಯದಲ್ಲಿ ಅಭಿಪ್ರಾಯ ವ್ಯಕ್ತವಾಗಿದೆ.
‘ಎರಡು ಐತಿಹಾಸಿಕ ವಿಶ್ವ ದಾಖಲೆಗಳೊಂದಿಗೆ KSRTC ಜಾಗತಿಕ ವೇದಿಕೆಗೆ ಪ್ರವೇಶಿಸಿದೆ’
ಬೆಂಗಳೂರು: ಲಂಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ಸ್ ನಿಂದ ಪ್ರಮಾಣೀಕರಿಸಲ್ಪಟ್ಟ ಎರಡು ಐತಿಹಾಸಿಕ ವಿಶ್ವ ದಾಖಲೆಗಳೊಂದಿಗೆ ಕರ್ನಾಟಕ ಜಾಗತಿಕ ವೇದಿಕೆಗೆ ಪ್ರವೇಶಿಸಿದೆ ಎಂದು ಸಿಎಂ ಸಿದ್ದರಾಮಯ್ಯ ಸಂತಸ ವ್ಯಕ್ತಪಡಿಸಿದ್ದಾರೆ. ಶಕ್ತಿ ಯೋಜನೆಯ ಯಶಸ್ಸಿನ ಬಗ್ಗೆ ಸಾಮಾಜಿಕ ಮಾಧ್ಯಮದಲ್ಲಿ ಮಾಹಿತಿ ಹಂಚಿಕೊಂಡಿರುವ ಸಿಎಂ, ಶಕ್ತಿ ಯೋಜನೆ ಮಹಿಳೆಯರು ಪಡೆದ ಅತಿ ಹೆಚ್ಚು ಉಚಿತ ಬಸ್ ಪ್ರಯಾಣಗಳು – 564.10 ಕೋಟಿ ಪ್ರಯಾಣಗಳು, ದೈನಂದಿನ ಚಲನಶೀಲತೆಯನ್ನು ಸಬಲೀಕರಣಗೊಳಿಸುತ್ತವೆ ಎಂದಿದ್ದಾರೆ. ಕೆಎಸ್‌ಆರ್‌ಟಿಸಿ ವಿಶ್ವದ ಅತಿ ಹೆಚ್ಚು ಪ್ರಶಸ್ತಿ ವಿಜೇತ ರಸ್ತೆ ಸಾರಿಗೆ ನಿಗಮ – 1997 ರಿಂದ 464 ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಗೌರವಗಳನ್ನು ಪಡೆದುಕೊಂಡಿದೆ. ನಮ್ಮ ಆಡಳಿತದ ದೃಷ್ಟಿಕೋನವು ಸಾಮಾಜಿಕ ನ್ಯಾಯ, ಮಹಿಳಾ ಸಬಲೀಕರಣ ಮತ್ತು ವಿಶ್ವ ದರ್ಜೆಯ ಸಾರ್ವಜನಿಕ ಸೇವೆಯಲ್ಲಿ ಬೇರೂರಿದೆ. ಈ ಮನ್ನಣೆಗಳು ಸಮಗ್ರ ಮತ್ತು ಸಹಾನುಭೂತಿಯ ನೀತಿ ನಿರೂಪಣೆಯು ಏನನ್ನು ಸಾಧಿಸಬಹುದು ಎಂಬುದರ ಪ್ರತಿಬಿಂಬವಾಗಿದೆ ಎಂದವರು…
