ಭಾರತೀಯ ಪರಂಪರೆಯಲ್ಲಿ ಹಬ್ಬಕ್ಕೆ ವಿಶಿಷ್ಟವಾದ ಸ್ಥಾನಮಾನವಿದೆ. ಅದರಲ್ಲೂ ವರ್ಷಾರಂಭಕ್ಕೆ ಮುನ್ನುಡಿ ಬರೆಯುವ ಯುಗಾದಿ ಹಬ್ಬಕ್ಕೆ ತನ್ನದೇ ಆದ ವಿಶೇಷ ಸ್ಥಾನವಿದೆ. ಭಾರತೀಯ ಪರಂಪರೆಯಲ್ಲಿ ಯುಗಾದಿಯೇ ಹೊಸವರ್ಷಾರಂಭ. ಯುಗದ ಆದಿಯೇ ಯುಗಾದಿ ಎಂಬ ಅರ್ಥದಲ್ಲಿ ಒಂದು ವರ್ಷದ ಅವಧಿಯ ಆದಿ ಇಂದು. ಹಾಗಾಗಿಯೇ ವ್ಯವಹಾರಿಕ ವರ್ಷಕ್ಕೆ ಕ್ಯಾಲೆಂಡರ್ ಆಧಾರವಾಗಿದ್ದರೆ, ಸಂಪ್ರದಾಯ, ಧಾರ್ಮಿಕ ಆಚರಣೆಗೆ ಸಂವತ್ಸರವೇ ಆಧಾರ. ಹಾಗಾಗಿ ಸಂವತ್ಸರದ ಮೊದಲ ದಿನ (ಆದ್ಯ ದಿನ) ಈ ‘ಯುಗಾದಿ’ಗೆ ಧಾರ್ಮಿಕ ಮಹತ್ವ ಇದೆ. ಪ್ರಕೃತಿಯೂ ಸಹ ಹೊಸತನಕ್ಕೆ ಸಾಕ್ಷಿಯಾಗುತ್ತಿದೆ. ಈ ಸಮಯದಲ್ಲಿ ವೃಕ್ಷಗಳೂ ಹಳೇ ಎಲೆಗಳನ್ನು ಕಳೆದುಕೊಂಡು ಹೊಸ ಎಲೆಗಳೊಂದಿಗೆ ಚಿಗುರಿ ತನ್ನ ಯೌವ್ವನವನ್ನು ಮತ್ತೆ ಹೊಸದಾಗಿ ಆರಂಭಿಸುತ್ತದೆ. ಯುಗಾದಿಯ ದಿನದಂದೇ ಬ್ರಹ್ಮ ದೇವರು ಈ ಭೂಮಿಯನ್ನು ಸೃಷ್ಟಿಸಲು ಪ್ರಾರಂಭಿಸಿದರೆಂಬ ನಂಬಿಕೆಗೆ ಪ್ರಕೃತಿಯ ಈ ಬದಲವಣೆಯೂ ಉದಾಹರಣೆ ಅಂತಿದ್ದಾರೆ ಪಾಂಡಿತ್ಯವುಳ್ಳವರು. ಜ್ಯೋತಿಷ್ಯ ಲೆಕ್ಕಾಚಾರಗಳ ಪ್ರಕಾರ, ಚೈತ್ರ ಮಾಸದ ಈ ದಿನವು…
Category: ವೈವಿದ್ಯ
ವಿಶ್ವ ಮಹಿಳಾ ದಿನ.. ‘ವನಿತಾ ಪಾರ್ಕ್’ನಲ್ಲಿ ಅನನ್ಯ ವಿಶೇಷ..
ಮಂಗಳೂರು; ಮಂಗಳೂರು ನಗರದ ವನಿತಾ ಪಾರ್ಕ್ ನಲ್ಲಿ ಬುಧವಾರ ಬೆಸೆಂಟ್ ಕಾಲೇಜಿನ ಯುವ ರೆಡ್ ಕ್ರಾಸ್ ಘಟಕ ಮತ್ತು ಪರಿಸರ ಅಧ್ಯಯನ ಕೇಂದ್ರ ನೆಲ್ಲಿಗುಡ್ಡೆಯ ವತಿಯಿಂದ ವಿಶ್ವ ಮಹಿಳಾ ದಿನಾಚರಣೆ ಸಮಾರಂಭ ಗಮನಸೆಳೆಯಿತು. ಉದ್ಯಾನವನದಲ್ಲಿ ಗಿಡನೆಡುವ ಮೂಲಕ ವಿದ್ಯಾರ್ಥಿನಿಯರು ಕಾರ್ಯಕ್ರಮದಲ್ಲಿ ಪಾಲ್ಗೊಂಡರು. ಈ ಸಂದರ್ಭದಲ್ಲಿ ಹಿಂದುಸ್ತಾನಿ ಸಂಗೀತ ವಿದುಷಿ ವಿಭಾಶ್ರೀ ನಿವಾಸ್ ನಾಯಕ್ ಅವರನ್ನು ಗೌರವಿಸಲಾಯಿತು. ವಿಶ್ವ ಮಹಿಳಾ ದಿನದ ಮಹತ್ವದ ಬಗ್ಗೆ ಮಾತನಾಡಿದ ವಿಭಾ ಶ್ರೀನಿವಾಸ ನಾಯಕ್, ಸಮಾಜದಲ್ಲಿ ಮಹಿಳೆ ಒಂದು ಶಕ್ತಿ. ಆ ಶಕ್ತಿ ಆಕೆಗೆ ಪ್ರಕೃತಿಯ ಕೊಡುಗೆ. ಆದುದರಿಂದ ಮಹಿಳೆ ಮನೆ ಇರಲಿ ಯಾವುದೇ ಕ್ಷೇತ್ರದಲ್ಲಿ ಯೂ ಯಾವ ಅಡೆ ತಡೆ ಬಂದರೂ ಅವುಗಳನ್ನು ಮೀರಿ ತನ್ನ ತಾಳ್ಮೆ,ಮಮತೆ, ಸಹನೆ,ಹೊಣೆಗಾರಿಕೆ ಯೊಂದಿಗೆ ಕರ್ತವ್ಯ ನಿರ್ವಹಿಸುತ್ತಾಳೆ. ಮಹಿಳೆಯರು ಸಮಾಜದಲ್ಲಿ ಮುಂದೆ ಬರಲು ಅವರ ಜೊತೆ ಇರುವ ಪುರುಷರು ಮುಖ್ಯರಾಗುತ್ತಾರೆ. ತಾನು ಮತ್ತು ತನ್ನ ಸುತ್ತಲಿನ…
ಮಾ.7ರಂದು ‘ಫಲಾನುಭವಿಗಳ ಉತ್ಸವ’: ಎಸ್.ಟಿ.ಸೋಮಶೇಖರ್ ಸಾರಥ್ಯದಲ್ಲಿ ವಿನೂತನ ಕಾರ್ಯಕ್ರಮ
ಮೈಸೂರು: ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ವಿವಿಧ ಯೋಜನೆಗಳ ಸೌಲಭ್ಯಗಳನ್ನು ಪಡೆದುಕೊಂಡಿರುವ ಫಲಾನುಭವಿಗಳ ಉತ್ಸವ ಕಾರ್ಯಕ್ರಮವನ್ನು ಜಿಲ್ಲೆಯಲ್ಲಿ ಮಾ. 7 ರಂದು ಹಮ್ಮಿಕೊಳ್ಳಲಾಗಿದೆ ಎಂದು ಸಹಕಾರ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್ ತಿಳಿಸಿದ್ದಾರೆ. ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಫಲಾನುಭವಿಗಳ ಉತ್ಸವ ಕಾರ್ಯಕ್ರಮ ಆಯೋಜನೆ ಕುರಿತ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಅಂದು ಮುಖ್ಯ ಮಂತ್ರಿಗಳು ಕಾರ್ಯಕ್ರಮವನ್ನು ಉದ್ಘಾಟಿಸಿ ಫಲಾನುಭವಿಗಳಿಗೆ ಸೌಲಭ್ಯಗಳನ್ನು ವಿತರಿಸುವರು. ಕಾರ್ಯಕ್ರಮವನ್ನು ಮಹಾರಾಜ ಕಾಲೇಜು ಆವರಣದಲ್ಲಿ ಹಮ್ಮಿಕೊಳ್ಳಲಾಗುವುದು. ಕಾರ್ಯಕ್ರಮದ ಯಶಸ್ಸಿಗೆ ಎಲ್ಲಾ ಜನ ಪ್ರತಿನಿಧಿಗಳು ಸಹಕರಿಸಬೇಕು. ಅಧಿಕಾರಿಗಳು ಕಾರ್ಯಕ್ರಮದ ಯಶಸ್ಸಿಗೆ ಕಾರ್ಯನಿರ್ವಹಿಸಬೇಕು ಎಂದು ಅವರು ತಿಳಿಸಿದರು. ಕಾರ್ಯಕ್ರಮಕ್ಕೆ ಜಿಲ್ಲಾ ಪಂಚಾಯತ್ ವ್ಯಾಪ್ತಿಯಲ್ಲಿ 27 ಸಾವಿರ ಫಲಾನುಭವಿಗಳು, ನಗರಾಭಿವೃದ್ಧಿ ಇಲಾಖೆಯ ವ್ಯಾಪ್ತಿಯಲ್ಲಿ 10 ಸಾವಿರ ಫಲಾನುಭವಿಗಳು, ಮಹಾನಗರ ಪಾಲಿಕೆಯ ವ್ಯಾಪ್ತಿಯಲ್ಲಿ 5 ಸಾವಿರ ಫಲಾನುಭವಿಗಳು, ಆರೋಗ್ಯ ಇಲಾಖೆ ವ್ಯಾಪ್ತಿಯಲ್ಲಿ 4…
ಏಕೈಕ ‘ತುಳು ಪತ್ರಿಕೆಯ ಧೀರ’ ವಿಜಯಕುಮಾರ್ ಹೆಬ್ಬಾರಬೈಲು ಸಾಧನೆಯ ಕಿರೀಟಕ್ಕೆ ಪ್ರಶಸ್ತಿಯ ಗರಿ..
‘ಗಡಿನಾಡ ಧ್ವನಿ’ಯಾದ ಏಕೈಕ ‘ತುಳು ಪತ್ರಿಕೆಯ ಧೀರ”ನಿಗೆ ರಾಜ್ಯ ಪ್ರಶಸ್ತಿ.. ವಿಜಯಕುಮಾರ್ ಹೆಬ್ಬಾರಬೈಲು ಅವರಿಗೆ ಪುರಸ್ಕಾರ.. ಮಂಗಳೂರು: ಕವಿ, ಪತ್ರಕರ್ತ ವಿಜಯಕುಮಾರ್ ಭಂಡಾರಿ ಹೆಬ್ಬಾರಬೈಲು ಅವರ ಸಂಪಾದಕತ್ವದ ‘ಪೂವರಿ’ ಪತ್ರಿಕೆಯು ತುಳು ಪತ್ರಿಕಾ ಕ್ಷೇತ್ರದಲ್ಲಿ ನಾಡಿಗೆ ಸಲ್ಲಿಸಿದ ಅನುಪಮ ಸಾಧನೆಗಾಗಿ ಆರನೇ ಕರ್ನಾಟಕ ಗಡಿನಾಡ ಸಮ್ಮೇಳನ – 2023ರ “ಗಡಿನಾಡ ಧ್ವನಿ ಮಾಧ್ಯಮ ರಾಜ್ಯ ಪ್ರಶಸ್ತಿ”ಯನ್ನು ಪಡೆದುಕೊಂಡಿದೆ. ಪುತ್ತೂರು ಸಮೀಪದ ಒಡ್ಯ ಸರಕಾರಿ ಶಾಲಾ ವಠಾರದಲ್ಲಿ ನಡೆದ ಈ ಪ್ರಶಸ್ತಿಯನ್ನು ಸಂಪಾದಕ ವಿಜಯಕುಮಾರ್ ಭಂಡಾರಿ ಹೆಬ್ವಾರಬೈಲು ಅವರಿಗೆ ಪ್ರಧಾನ ಮಾಡಲಾಗಿದೆ. ತುಳುನಾಡಿನಲ್ಲಿ ಕಳೆದ ಎಂಟು ವರ್ಷಗಳಿಂದ ಸದ್ದು ಮಾಡುತ್ತಿರುವ ತುಳು ಭಾಷೆಯ ಏಕೈಕ ತುಳು ಮಾಸಿಕ ‘ಪೂವರಿ’ ಇತ್ತೀಚೆಗೆ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ, ಒಡಿಯೂರು ತುಳು ಸಾಹಿತ್ಯ ಸಮ್ಮೇಳನದ ಪ್ರಶಸ್ತಿ ಸಹಿತ ಅನೇಕ ಮಾಧ್ಯಮ ಪ್ರಶಸ್ತಿಗಳ ಪಡೆದುಕೊಂಡಿದೆ. ಇದೀಗ ಈ ಸಾಧನೆಗಳ ಕಿರೀಟಕ್ಕೆ ಮತ್ತೊಂದು ಪುರಸ್ಕಾರದ…
‘ಏರೋ ಇಂಡಿಯಾ’ 2ನೇ ದಿನ.. ಬಾನಂಗಳದಲ್ಲಿ ಚಮತ್ಕಾರ..
Flying Display at Day 2 #AeroIndia2023 https://t.co/mwRXULMrdH — Defence Production India (@DefProdnIndia) February 14, 2023
‘ಅಂಬಲಿ ಹಲಸಿತು, ಕಂಬಳಿ ಬಿಸಿತು’: ಹೀಗಿದೆ ಮೈಲಾರಲಿಂಗೇಶ್ವರ ಕಾರಣಿಕ ನುಡಿ
ಉತ್ತರ ಕರ್ನಾಟಕದ ಐತಿಹಾಸಿಕ ಸುಪ್ರಸಿದ್ಧ ಮೈಲಾರಲಿಂಗೇಶ್ವರ ಜಾತ್ರೆ 2023ರ ಕಾಣಿಕೋತ್ಸವ#ಅಂಬಲಿ_ಹಳಸಿತು_ಕಂಬಳಿ_ಬೀಸುತ್ತಲೇ_ಪರಾಕ್ pic.twitter.com/A4lK1PcXax — P C ಗಾಣಿಗೇರ (@prashantganige6) February 7, 2023
ಕೊರಳೇರಿದ ‘ಅಡಿಕೆ ಹಾರ’; ಮಂತ್ರಿ ಅರಗ ವೈಖರಿಗೆ ಮೋದಿ ಖುಷ್
ತುಮಕೂರು: ಗಣ್ಯಾತಿಗಣ್ಯರ ಆಗಮನ ಸಂದರ್ಭದಲ್ಲಿ ನಾಡಿನ ಸೊಗಡಿನ ಪ್ರತಿಬಿಂಬವೆಂಬಂತೆ ವಿಶೇಷ ರೀತಿ ಸನ್ಮನ ಮಾಡುವುದು ಸಾಮಾನ್ಯ. ಅದರಲ್ಲೂ ಕರುನಾಡಿನಲ್ಲಿ ಮೈಸೂರು ಪೇಟ ತೊಡಿಸುವುದು, ಏಲಕ್ಕಿ ಹಾರ ಹಾಕುವುದು, ಮಲ್ಲಿಗೆಯ ಹಾರದೊಂದಿಗೆ ಸನ್ಮಾನಿಸುವುದು, ಇಳಕಲ್ ಸೀರೆ ಸಮರ್ಪಿಸುವುದು ಇತ್ಯಾದಿ ರೀತಿಯ ಗೌರವ ಸಾಮಾನ್ಯ. ಆದರೆ ಈ ಬಾರಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ರೈತರ ಪರವಾಗಿ ಸನ್ಮಾನಿಸಿದ ವೈಖರಿ ನಾಡಿನ ಗಮನಸೆಳೆಯಿತು. ಪ್ರಧಾನಿ ಮೋದಿಗೆ ತುಮಕೂರಿನ ಕಾರ್ಯಕ್ರಮದಲ್ಲಿ ಅಡಿಕೆಯ ಹಾರದೊಂದಿಗೆ ಸನ್ಮಾನಿಸಲಾಯಿತು. ಸ್ವತಃ ಅಡಿಕೆ ಕೃಷಿಕರೂ ಆದ ಗೃಹ ಸಚಿವ ಅರಗ ಜ್ಞಾನೇಂದ್ರ ಅವರು ಪ್ರಧಾನಿಯನ್ನು ಅಡಿಕೆ ಹಾರದೊಂದಿಗೆ ಸನ್ಮಾನಿಸಿದರು. ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲು ರಾಜ್ಯಕ್ಕೆ ಆಗಮಿಸಿದ ನಮ್ಮೆಲ್ಲರ ನೆಚ್ಚಿನ ಪ್ರಧಾನಮಂತ್ರಿ ಶ್ರೀ @narendramodi ಅವರಿಗೆ ಅಡಿಕೆಯಲ್ಲಿ ತಯಾರಿಸಿದ ವಿಶೇಷ ಹಾರವನ್ನು ಅರ್ಪಿಸುವ ಮೂಲಕ ಕಾರ್ಯಕ್ರಮಕ್ಕೆ ಆತ್ಮೀಯವಾಗಿ ಸ್ವಾಗತಿಸಲಾಯಿತು. ಮಾನ್ಯ ಮುಖ್ಯಮಂತ್ರಿ ಶ್ರೀ ಬಸವರಾಜ ಬೊಮ್ಮಾಯಿ ಅವರು ಉಪಸ್ಥಿತರಿದ್ದರು.@BSBommai…
ಗಣರಾಜ್ಯೋತ್ಸವ: ಕೇವಲ ಎಂಟು ಹತ್ತು ದಿನಗಳಲ್ಲಿ ‘ನಾರಿ ಶಕ್ತಿ’ ಸ್ಥಬ್ಧಚಿತ್ರ ಸಿದ್ದ
ಬೆಂಗಳೂರು: ಸಣ್ಣ ಭಾವನೆಗಳನ್ನು ಬಿಟ್ಟು,ಕರ್ನಾಟಕದ ಬಗ್ಗೆ ಎಲ್ಲರೂ ಒಂದಾಗಬೇಕು ಎಂದು ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ಕರ್ನಾಟಕದ ಸ್ತಬ್ಧಚಿತ್ರ ಗಣರಾಜ್ಯೋತ್ಸವ ಬಗ್ಗೆ ಪಾಲ್ಗೊಳ್ಳುವ ಕುರಿತು ಮಾಧ್ಯಮದವರೊಂದಿಗೆ ಮಾತನಾಡಿದರು. ಕೆಪಿಸಿಸಿ ಅಧ್ಯಕ್ಷರು ಈ ಕುರಿತು ನೀಡಿರುವ ಹೇಳಿಕೆಗೆ ಉತ್ತರಿಸಿ ನವದೆಹಲಿಯಲ್ಲಿ 2009 ರಲ್ಲಿ ಯು.ಪಿ.ಎ ಸರ್ಕಾರವಿತ್ತು. ರಾಜ್ಯದಿಂದ ಕಳುಹಿಸಿದ ಸ್ಥಬ್ಧಚಿತ್ರವನ್ನು ನಿರಾಕರಿಸಲಾಗಿತ್ತು. ಕರ್ನಾಟಕದ ಬಗ್ಗೆ ಅಷ್ಟು ಸ್ವಾಭಿಮಾನ ಇರುವವರು, ಆಗ ಯಾರ ಮೇಲಾದರೂ ಒತ್ತಡ ಹೇರಿ ಸ್ಥಬ್ಧಚಿತ್ರಕ್ಕೆ ಸ್ಥಾನಪಡೆದುಕೊಳ್ಳಬಹುದಿತ್ತು. ನಂತರ ಸತತ 14 ವರ್ಷ ಸ್ಥಬ್ಧಚಿತ್ರ ಗಣರಾಜ್ಯೋತ್ಸವ ಪರೇಡ್ ನಲ್ಲಿ ಭಾಗವಹಿಸಿದೆ. ಕಳೆದ ಬಾರಿ ಪ್ರಶಸ್ತಿ ಪಡೆದವರಿಗೆ ಬೇರೆಯದರಲ್ಲಿ ಅವಕಾಶ ನೀಡಬೇಕೆಂಬ ವಿಚಾರವಿತ್ತು.ಆದಾಗ್ಯೂ ನಾನು ರಕ್ಷಣಾ ಸಚಿವರೊಂದಿಗೆ ಮಾತನಾಡಿ, ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಯವರೂ ಮಾತನಾಡಿ ಸ್ತಬ್ಧ ಚಿತ್ರಕ್ಕೆ ಅನುಮತಿ ನೀಡಿದ್ದಾರೆ. ಕೇವಲ ಎಂಟು ಹತ್ತು ದಿನಗಳಲ್ಲಿ ನಾರಿ ಶಕ್ತಿ ಎಂಬ ವಿಷಯದ…
ಲಂಡನ್‌ನಲ್ಲಿ ಕನ್ನಡ ಪ್ರೇಮ.. MS ಪದವಿ ಪ್ರದಾನ ಸಮಾರಂಭದಲ್ಲಿ ರಾರಾಜಿಸಿದ ಕನ್ನಡ ಧ್ವಜ
ಲಂಡನ್: ಲಂಡನ್‌ನಲ್ಲಿ ಎಂಎಸ್ ವಿದ್ಯಾರ್ಥಿಯೊಬ್ಬ ಪದವಿ ಸ್ವೀಕರಿಸಿದ ಸಂದರ್ಭದಲ್ಲಿ ಕನ್ನಡ ಧ್ವಜ ಹಿಡಿದು ತಾಯ್ನಾಡಿನ ಬಗ್ಗೆ ಅಭಿಮಾನ ವ್ಯಕ್ತಪಡಿಸಿ ಗಮನಸೆಳೆದಿದ್ದಾನೆ. ಪದವಿ ಪ್ರದಾನ ಸಮಾರಂಭದಲ್ಲಿ ತನ್ನ ಸರದಿ ಬಂದಾಗ ಕರ್ನಾಟಕ ಮೂಲದ MS ವಿದ್ಯಾರ್ಥಿ ಆದಿಷ್ ವಾಲಿ ಕನ್ನಡ ಧ್ವಜ ಹಿಡಿದು ಹೆಜ್ಜೆ ಹಾಕಿದ್ದಾನೆ. ಈ ಕುರಿತ ವೀಡಿಯೋವನ್ನು ಈ ವಿದ್ಯಾರ್ಥಿ ಟ್ವೀಟ್ ಮಾಡಿದ್ದು, ನೆಟ್ಟಿಗರಿಂದ ಭಾರೀ ಮೆಚ್ಚುಗೆ ವ್ಯಕ್ತವಾಗಿದೆ. ನಾನು @CityUniLondon – @BayesBSchool ನಿಂದ ಮ್ಯಾನೇಜ್‌ಮೆಂಟ್‌ನಲ್ಲಿ ಮಾಸ್ಟರ್ಸ್ ಎಂಎಸ್ (MS) ಪದವಿ ಪಡೆದಿದ್ದೇನೆ. ಲಂಡನ್, ಬ್ರಿಟನ್‌ನಲ್ಲಿ ನಡೆದ ಸಮಾರಂಭದಲ್ಲಿ ನಾನು ನಮ್ಮ ಕರ್ನಾಟಕ ರಾಜ್ಯ ಧ್ವಜವನ್ನು ಹಾರಿಸಿದಾಗ ಹೆಮ್ಮೆಯ ಕ್ಷಣ. 💛♥️#karnataka #bidar #kannada #kannadiga #london #uk #England #karnatakaflag — Adhish R. Wali (@AdhishWali) January 22, 2023 ಇದೇ ವೇಳೆ ಸಂತಸ ಹಂಚಿಕೊಂಡಿರುವ ವಿದ್ಯಾರ್ಥಿ ಆದಿಷ್, ‘ನಾನು ಲಂಡನ್‌ನ…
86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ತೆರೆ: ಸಮಾರೋಪ ಸಮಾರಂಭದಲ್ಲಿ ಅಭಿವೃದ್ಧಿ ಮಂತ್ರ
ಗಡಿನಾಡಿನ ಅಭಿವೃದ್ಧಿಗೆ 100 ಕೋಟಿ ರೂ.. ಶಾಸ್ತ್ರೀಯ ಭಾಷೆ ಸಂಶೋಧನೆಗೆ ಸರ್ಕಾರದ ಪ್ರೋತ್ಸಾಹ.. 3 ಕೋಟಿ ವೆಚ್ಚದಲ್ಲಿ ಹಾವೇರಿಯಲ್ಲಿ ಕಸಾಪ ಭವನ.. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಣೆ.. ಹಾವೇರಿ: ಏಲಕ್ಕಿ ನಾಡು ಹಾವೇರಿಯಲ್ಲಿ 86 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ತೆರೆಬಿದ್ದಿದೆ. ಸಮಾರೋಪ ಸಮಾರಂಭದಲ್ಲಿ ಪಾಲ್ಗೊಂಡ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಸಮ್ಮೇಳನದ ವೇದಿಕೆಯಲ್ಲಿ ಹಲವಾರು ಕಾರ್ಯಕ್ರಮಗಳನ್ನು ಘೋಷಿಸಿದರು. ಗಡಿನಾಡಿನ ಶಿಕ್ಷಣ,ಆರೋಗ್ಯ ಮೂಲಸೌಕರ್ಯಗಳ ಅಭಿವೃದ್ಧಿಗೆ ಸರ್ಕಾರ 100 ಕೋಟಿ ರೂ.ಒದಗಿಸಲಿದೆ.ಕನ್ನಡದ ಶಾಸ್ತ್ರೀಯ ಭಾಷೆ ಸ್ಥಾನಮಾನದ ಸಂಶೋಧನಾ ಕಾರ್ಯಗಳಿಗೆ ಸಾಹಿತಿಗಳ ಸಮಿತಿ ರಚಿಸಲಾಗುವುದು.ಸಮಿತಿ ಸೂಚಿಸುವ ಸಂಶೋಧನಾ ಕಾರ್ಯಗಳಿಗೆ ಬೇಕಾದ ಹಣವನ್ನು ಸರ್ಕಾರ ಒದಗಿಸಲಿದೆ. ಸಮ್ಮೇಳನದ ನೆನಪಿಗೆ ಹಾವೇರಿಯಲ್ಲಿ 3 ಕೋಟಿ ರೂ.ವೆಚ್ಚದಲ್ಲಿ ಕಸಾಪ ಭವನ ನಿರ್ಮಿಸಿ,ಕರ್ನಾಟಕ ಜಾನಪದ ವಿವಿ ಸಹಯೋಗದಲ್ಲಿ ಗುಣಮಟ್ಟದ ಸಂಶೋಧನಾ ಕೇಂದ್ರವನ್ನು ಅಭಿವೃದ್ಧಿ ಪಡಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಗಡಿನಾಡಿನ…
