ಅಕ್ಟೋಬರ್​ 3 ರಂದು ಮೈಸೂರು ದಸರಾ ಉದ್ಘಾಟನೆ; ಈಬಾರಿಯೂ ಅಂಬಾರಿ ಹೊರಲಿರುವ ಅಭಿಮನ್ಯು

ಮೈಸೂರು: ಮೈಸೂರು ದಸರಾ ಮಹೋತ್ಸವ-2024 ಅಕ್ಟೋಬರ್​ 3 ರಂದು ಉದ್ಘಾಟನೆಯಾಗಲಿದೆ. ಅಕ್ಟೋಬರ್ 12 ರಂದು ಜಂಬೂಸವಾರಿ ನಡೆಯಲಿದ್ದು ನಾಡಹಬ್ಬದ ತಯಾರಿಗೆ ಮುನ್ನುಡಿ ಬರೆಯಲಾಗಿದೆ. ದಸರಾ ಜಂಬೂಸವಾರಿಯಲ್ಲಿ 13 ಗಂಡು ಮತ್ತು 05 ಹೆಣ್ಣು ಆನೆಗಳು ಭಾಗಿಯಾಗಲಿದ್ದು, ಗಜಪಡೆಯ ಪಟ್ಟಿಯನ್ನು ಪ್ರಕಟಿಸಲಾಗಿದೆ. ಈ ಬಾರಿಯೂ ಅಭಿಮನ್ಯುವೇ ಅಂಬಾರಿ ಹೊರಲಿದ್ದು, ಸೇರಿ 14 ಆನೆಗಳು ಭಾಗಿಯಾಗಲಿವೆ. ಈ ಗಜಪಡೆಗಳು ಎರಡು ಹಂತಗಳಲ್ಲಿ ಸಾಂಸ್ಕೃತಿಕ ನಾಗರಿಗೆ ಆಗಮಿಸಲಿದ್ದು, ಮೊದಲನೇ ತಂಡದಲ್ಲಿ ಅಭಿಮನ್ಯು, ವರಲಕ್ಷ್ಮೀ, ಧನಂಜಯ, ಗೋಪಿ, ಭೀಮ, ಲಕ್ಷ್ಮೀ, ಕಂಜನ್, ರೋಹಿತ್, ಏಕಲವ್ಯ ಬರಲಿವೆ. ಎರಡನೇಯ ತಂಡದಲ್ಲಿ ಪ್ರಶಾಂತ, ಮಹೇಂದ್ರ, ಸುಗ್ರೀವ, ಲಕ್ಷ್ಮೀ, ಹಿರಣ್ಯ, ಮೀಸಲು, ಹರ್ಷ, ಅಯ್ಯಪ್ಪ, ಪಾರ್ಥಸಾರಥಿ, ಮಾಲದೇವಿ ಆನೆಗಳ ಆಗಮನವಾಗಲಿದೆ. ಆಗಸ್ಟ್ 21ಕ್ಕೆ ಗಜಪಯಣ ನಿಗದಿ ಆಗಿದ್ದು, ದಸರಾ ಮಹೋತ್ಸವದ ಸುಮಾರು 2 ತಿಂಗಳ ಮುಂಚಿತವಾಗಿ ಮೈಸೂರಿಗೆ ಗಜಪಡೆ ಆಗಮಿಸಲಿವೆ.

‘ಯಕ್ಷಗಾನ ಉತ್ಸವ-2024’: ತಾಳಮದ್ದಳೆಯಲ್ಲಿ ಆಂಜನೇಯ ಪಾತ್ರಧಾರಿಯಾಗಿ ಗಮನಸೆಳೆದ IPS ಅಧಿಕಾರಿ ಧರಣೀದೇವಿ

ಬೆಂಗಳೂರು: ಯಕ್ಷಗಾನ ಕೇವಲ ಪುರುಷರಿಗಷ್ಟೇ ಸೀಮಿತವಾಗಿಲ್ಲ. ಈ ರಂಗದಲ್ಲಿ ಹಿಮ್ಮೇಳ ಮತ್ತು ಮುಮ್ಮೇಳದಲ್ಲಿ ಮಹಿಳೆಯರೂ ಹಂತಹಂತವಾಗಿ ಪಾಲ್ಗೊಂಡು ಪುರುಷರಂತೆಯೇ ಸಾಧನೆ ಮಾಡಿದ್ದಾರೆ ಹಾಗೂ ಮಾಡುತ್ತಿದ್ದಾರೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನಿರ್ದೇಶಕರಾಗಿರುವ ಹಿರಿಯ ಐಪಿಎಸ್‌ ಅಧಿಕಾರಿ ಡಾ. ಧರಣೀದೇವಿ ಮಾಲಗತ್ತಿ ಅಭಿಪ್ರಾಯಪಟ್ಟಿದ್ದಾರೆ. ಕರ್ನಾಟಕ ಮಹಿಳಾ ಯಕ್ಷಗಾನ ಸಂಸ್ಥೆ ಶನಿವಾರ ಬೆಂಗಳೂರಿನ ನಯನ ಸಭಾಂಗಣದಲ್ಲಿ ಶನಿವಾರ ಏರ್ಪಡಿಸಿದ್ದ ಯಕ್ಷಗಾನ ಉತ್ಸವ-2024 ಕಾರ್ಯಕ್ರಮದಲ್ಲಿ ಭಾಗವಹಿಸಿದ ಅವರು, ಯಕ್ಷಗಾನದಲ್ಲಿ ಮಹಿಳೆಯರ ಸಹಭಾಗಿತ್ವವನ್ನು ಪ್ರೋತ್ಸಾಹಿಸಬೇಕಿದೆ ಎಂದು ಪ್ರತಿಪಾದಿಸಿದರು. ಸ್ವತಃ “ಶರಸೇತು ಬಂಧ” ಎಂಬ ಮಹಿಳಾ ಯಕ್ಷಗಾನ ತಾಳಮದ್ದಲೆ ಕಾರ್ಯಕ್ರಮದಲ್ಲಿ ಆಂಜನೇಯನ ಪಾತ್ರವಹಿಸಿ ಅರ್ಥಗಾರಿಕೆ ಮಾಡಿದ ಧರಣೀದೇವಿ ಅವರು, ಭಾಗವತಿಕೆಯಲ್ಲಿ, ಚೆಂಡೆ ವಾದನದಲ್ಲಿ, ಮುಮ್ಮೇಳ ಕಲಾವಿದರಾಗಿ ಬಹಳ ಹಿಂದಿನಿಂದಲೂ ಮಹಿಳೆಯರು ಅವರದೇ ಛಾಪು ಮೂಡಿಸಿದ್ದಾರೆ. ಬಣ್ಣದ ವೇಷದಲ್ಲೂ ತೊಡಗಿಸಿಕೊಂಡು, ಆಯಾ ಪಾತ್ರಕ್ಕೆ ಅನುಗುಣವಾದ ಧ್ವನಿಯನ್ನೂ ನೀಡಿ ಪಾತ್ರಕ್ಕೆ ನ್ಯಾಯ ಒದಗಿಸಿದ ನಿದರ್ಶನಗಳು ಇವೆ…

ಕೃಷಿಯಲ್ಲಿ ಕ್ರಾಂತಿಗೆ ಮೋದಿ ಮುನ್ನುಡಿ; ಬರೋಬ್ಬರಿ 109 ತಳಿಗಳ ಬಿಡುಗಡೆ

ನವದೆಹಲಿ: ಮೂರನೇ ಬಾರಿಗೆ ಪ್ರಧಾನಿಯಾಗಿರುವ ನರೇಂದ್ರ ಮೋದಿ, ಕೃಷಿ ಕ್ಷೇತ್ರದಲ್ಲಿ ಹೊಸ ಮನ್ವಂತಕ್ಕೆ ಮುನ್ನುಡಿ ಬರೆದಿದ್ದಾರೆ. ಮುಂಗಾರು ಆರಂಭದಲ್ಲಿ ಅವರು, ರೈತರಿಗೆ ಅಧಿಕ ಆದಾಯ ತರಬಲ್ಲ ಹೊಸ ತಳಿಗಳನ್ನು ಬಿಡುಗಡೆ ಮಾಡಲಿದ್ದಾರೆ. 27 ತೋಟಗಾರಿಕಾ ಬೆಳೆಗಳು, 34 ಕ್ಷೇತ್ರ ಬೆಳೆಗಳು ಮತ್ತು 61 ಬೆಳೆಗಳು ಸೇರಿ ಒಟ್ಟು 109 ತಳಿಗಳನ್ನು ಬಿಡುಗಡೆ ಮಾಡಲಾಗುವುದು ಎಂದು ಕೃಷಿ ಸಚಿವಾಲಯದ ಮೂಲಗಳು ತಿಳಿಸಿವೆ. ಅಧಿಕ ಇಳುವರಿ, ಹವಾಮಾನಕ್ಕೆ ಹೊಂದಿಕೊಳ್ಳುವ ಮತ್ತು ಜೈವಿಕ ಬಲವರ್ಧಿತ ಬೆಳೆಗಳ 109 ತಳಿಗಳನ್ನು ಪ್ರಧಾನಿ ಭಾನುವಾರ ದೆಹಲಿಯಲ್ಲಿರುವ ಭಾರತೀಯ ಕೃಷಿ ಸಂಶೋಧನ ಸಂಸ್ಥೆಯಲ್ಲಿ ಭಾನುವಾರ ಬೆಳೆಗಳ ತಳಿಗಳನ್ನು ಬಿಡುಗಡೆ ಮಾಡಲಿದ್ದಾರೆ. ಪ್ರಮುಖ ಕ್ಷೇತ್ರ ಬೆಳೆಗಳು (ಸಿರಿಧಾನ್ಯ ಹಾಗೂ ವಿವಿಧ ಧಾನ್ಯಗಳು): ಎಣ್ಣೆ ಬೀಜಗಳು, ದ್ವಿದಳ ಧಾನ್ಯ, ಗೋಧಿ, ಭತ್ತ, ಕಬ್ಬು, ಹತ್ತಿ, ಮೇವು ಬೆಳೆ, ಹಾಗೂ ಇತರ ಬೆಳೆಗಳು ಪ್ರಮುಖ ತೋಟಗಾರಿಕಾ ಬೆಳೆಗಳು: ವಿವಿಧ ಹಣ್ಣುಗಳು,…

ಬೋರ್‌ವೆಲ್‌ನಲ್ಲಿ ಹಾಲು..! ಇದು ಕಲಿಯುಗದ ಪವಾಡ ಅಂತಿದ್ದಾರೆ ಜನ..!

ಕೊಳವೆ ಬಾವಿಯಲ್ಲಿ ನೀರು ಬುರುವುದು ಸಾಮಾನ್ಯ.. ಆದರೆ, ಬೋರ್‌ವೆಲ್‌ನಲ್ಲಿ ಹಾಲು ಬರಲು ಸಾಧ್ಯವೇ? ಕೊಳವೆ ಬಾವಿಯಲ್ಲಿ ನೀರಿನ ಬದಲು ಹಾಲು ಬರುತ್ತಿದೆ ಎಂಬ ಸುದ್ದಿ ಕುತೂಹಲದ ಕೇಂದ್ರ ಬಿಂದುವಾಗಿದೆ. ಉತ್ತರ ಪ್ರದೇಶದ ಮೊರಾಬಾದ್‌ನಲ್ಲಿ ಬೋರ್‌ವೆಲ್‌ನಲ್ಲಿ ನೀರಿನ ಬದಲು ಬಿಳಿ ಬಣ್ಣದ ನೀರು ಬರಲು ಆರಂಭಿಸಿದೆ. ಇದನ್ನು ಕ್ಷೀರ ಕ್ರಾಂತಿ ಎನ್ನುತ್ತಿರುವ ಸ್ಥಳೀಯರು ‘ಕಲಿಯುಗದ ವಿಸ್ಮಯ’ ಎಂದು ಬಣ್ಣಿಸುತ್ತಿದ್ದಾರೆ. ಈ ಬೋರ್‌ವೆಲ್ ಬಗ್ಗೆ ಸುದ್ದಿ ಹರಡುತ್ತಿದ್ದಂತೆಯೇ ಇದನ್ನು ನೋಡಲೆಂದು ಭಾರೀ ಸಂಖ್ಯೆಯಲ್ಲಿ ಜನ ಸ್ಥಳಕ್ಕೆ ದೌಡಾಯಿಸುತ್ತಿದ್ದಾರೆ. ಅಷ್ಟೇ ಅಲ್ಲ, ಬೋರ್‌ವೆಲ್‌ನಲ್ಲಿ ಹಾಲು ಬರುತ್ತಿದೆ ಎಂಬ ಸುದ್ದಿ ಹರಡುತ್ತಿದ್ದಂತೆಯೇ ಸ್ಥಳೀಯರು ಕ್ಯಾನ್, ಪಾತ್ರೆಗಳೊಂದಿಗೆ ಧಾವಿಸಿ ಹಾಲು ರೂಪದ ನೀರನ್ನು ಹೊತ್ತೊಯ್ಯುವ ಪ್ರಸಂಗವೂ ಅಚ್ಚರಿಗೆ ಕಾರಣವಾಗಿದೆ. जैसे हर चमकती चीज सोना नहीं होती, वैसे सफ़ेद रंग केवल दूध का ही नहीं होता। मगर लोगों…

ಜನಪ್ರಿಯ ಕ್ರೀಡೆ ಕಂಬಳವನ್ನು ಬೆಂಗಳೂರಿನಲ್ಲಿ ಪ್ರತಿ ವರ್ಷ ಮುಂದುವರೆಸುವಂತಾಗಬೇಕು

ಬೆಂಗಳೂರು: ಜನಪ್ರಿಯ ಕ್ರೀಡೆ ಕಂಬಳವನ್ನು ಬೆಂಗಳೂರಿನಲ್ಲಿ ಪ್ರತಿ ವರ್ಷ ಮುಂದುವರೆಸುವಂತಾಗಬೇಕು ಎಂದು ಸಿಎಂ ಸಿದ್ದರಾಮಯ್ಯ ಅಭಿಪ್ರಾಯ ಪಟ್ಟಿದ್ದಾರೆ.  ಬೆಂಗಳೂರಿನಲ್ಲಿ ಕಂಬಳ ಉತ್ಸವ ಹಾಗೂ ತುಳುನಾಡಿನ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಕರ್ನಾಟಕದಲ್ಲಿ ತುಳು ಭಾಷೆಗೆ ಹೆಚ್ಚುವರಿ ಭಾಷೆಯ ಸ್ಥಾನಮಾನ ದೊರಕಬೇಕೆಂದು ಕೋರಿಕೆಯಿದ್ದು ಈ ಬಗ್ಗೆ ಕನ್ನಡ ಮತ್ತು ಸಂಸ್ಕೃತಿ ಸಚಿವರೊಂದಿಗೆ ಚರ್ಚಿಸಿ ತೀರ್ಮಾನಿಸುತ್ತೇವೆ. ಕಂಬಳ ಕರಾವಳಿ ಭಾಗದ ಜನಪ್ರಿಯ ಕ್ರೀಡೆ. ಮಂಗಳೂರು, ಉಡುಪಿ ಜಿಲ್ಲೆಗಳ ಜಾನಪದ ಕ್ರೀಡೆ. ಅಶೋಕ್ ರೈ ಅವರ ನೇತೃತ್ವದಲ್ಲಿ ಕರಾವಳಿ ಪ್ರದೇಶದ ಜಾನಪದ ಕ್ರೀಡೆಯನ್ನು ಬೆಂಗಳೂರು ನಗರಕ್ಕೆ ಪರಿಚಯಿಸುವುದು ನಿಜಕ್ಕೂ ಶ್ಲಾಘನೀಯ ಎಂದರು.‌ ಕಂಬಳ ನೋಡಲು ಇಷ್ಟು ಜನರು ಆಗಮಿಸುವ ನಿರೀಕ್ಷೆ ಇರಲಿಲ್ಲ. ಕಂಬಳ ಕರಾವಳಿ ಪ್ರದೇಶದ ಕ್ರೀಡೆಯಾದಾರೂ ಬೆಂಗಳೂರಿನಲ್ಲಿ ಲಕ್ಷಾಂತರ ಜನ ಕರಾವಳಿ ಪ್ರದೇಶದವರು ವಾಸಿಸುತ್ತಿದ್ದು ಅವರಿಗೆ ಮಾತ್ರವಲ್ಲದೇ ಬೆಂಗಳೂರಿನ ಜನ ಸೇರಿದಂತೆ ರಾಜ್ಯದ ಮೂಲೆ ಮೂಲೆಯಿಂದ ಬಂದು…

ಸಿಲಿಕಾನ್ ಸಿಟಿಯಲ್ಲಿ ತುಳುನಾಡ ಐಸಿರಿ.. ಹೊಸ ಚರಿತ್ರೆ ಬರೆದ ‘ಬೆಂಗಳೂರು ಕಂಬಳ’

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ತುಳುನಾಡ ವೈಭವ ಗರಿಗೆದರಿದೆ. ಇತಿಹಾಸದಲ್ಲೇ ಮೊದಲೆಂಬಂತೆ ಬೆಂಗಳೂರಿನಲ್ಲಿ ಕಂಬಳ ಆಯೋಜಿತವಾಗಿದ್ದು, ಅರಮನೆ ಮೈದಾನದಲ್ಲಿ ಈ ಮಹಾ ವೈಭವಕ್ಕೆ ಚಾಲನೆ ಸಿಕ್ಕಿದೆ. ಶನಿವಾರ ಮತ್ತು ಭಾನುವಾರ ಎರಡು ದಿನಗಳ ಕಾಲ ‘ನಮ್ಮ ಕಂಬಳ, ಬೆಂಗಳೂರು ಕಂಬಳ’ ಎಂಬ ಹೆಸರಿನಲ್ಲಿ ಕಂಬಳ ಆಯೋಜಿತವಾಗಿದೆ. ‘ನಮ್ಮ ಕಂಬಳ, ಬೆಂಗಳೂರು ಕಂಬಳ’ದ ವೈಶಿಷ್ಟ್ಯ ಹೀಗಿದೆ.. ಕಂಬಳದ ವೇದಿಕೆಗೆ ದಿವಂಗತ ನಟ ಪುನಿತ್ ರಾಜಕುಮಾರ್ ಹೆಸರಿಡಲಾಗಿದೆ. ಕಂಬಳದ ಕರೆಗೆ ರಾಜ ಮಹಾರಾಜ ಎಂದು ಹೆಸರು ಇಡಲಾಗಿದೆ. ಸಾಂಸ್ಕೃತಿಕ ವೇದಿಕೆಗೆ ನಾಲ್ವಡಿ ಕೃಷ್ಣರಾಜ ಒಡೆಯರ್ ಹೆಸರು ಇಡಲಾಗಿದೆ. ಸಾಮಾನ್ಯವಾಗಿ ಕಂಬಳ ಕೋಣಗಳು ಓಡುವ ಟ್ರ್ಯಾಕ್ 147 ಮೀಟರ್ ಉದ್ದ ಇರುತ್ತದೆ, ಆದರೆ ಬೆಂಗಳೂರು ಕಂಬಳದ ಟ್ರ್ಯಾಕ್ 155 ಮೀಟರ್ ಉದ್ದವಿದೆ. ಸುಮಾರು 200 ಜೋಡಿ ಕೋಣಗಳು ಭಾಗವಹಿಸುವ ನಿರೀಕ್ಷೆ ಇದೆ. ಬೆಂಗಳೂರು ಕಂಬಳವನ್ನು ಲಕ್ಷಾಂತರ ಜನರು ವೀಕ್ಷಿಸಲಿದ್ದು, ಸೂಕ್ತ ವ್ಯವಸ್ಥೆ ಮಾಡಲಾಗಿದೆ.…

‘ಪೂವರಿ’ ಸಾರಥ್ಯದಲ್ಲಿ ‘ತುಡರ ಪರ್ಬೊದ ಪೊಲಬು’ ವಿಶಿಷ್ಠ ಕಾರ್ಯಕ್ರಮ

ತುಳು ಅಪ್ಪೆ ಕೂಟ ಮತ್ತು ಪೂವರಿ ಪತ್ರಿಕೆಯಿಂದ ತುಡರ ಪರ್ಬದ ಪೊಲಬು, ತುಳು ತಾಳಮದ್ದಳೆ ಕಾರ್ಯಕ್ರಮ.. ಕೃಷಿ ಸಂಸ್ಕೃತಿ ನಶಿಸುತ್ತಿದ್ದಂತೆ ಹಬ್ಬಗಳ ಸೊಗಡು ಮರೆಯಾಯಿತು ಎಂದ ಗಣ್ಯರು.. ಸಮಾರಂಭಕ್ಕೆ ಆಕರ್ಷಣೆ ತುಂಬಿದ ತಾಳಮದ್ದಳೆ ವೈಭವ.. ಮಂಗಳೂರು: ತುಳು ಪರಂಪರೆ, ಸಂಸ್ಕೃತಿ ವಿಚಾರದಲ್ಲಿ ನಿರಂತರ ಕಾರ್ಯಕ್ರಮಗಳ ಮೂಲಕ ತುಳುನಾಡಿನ ಸೊಗಡಿಗೆ ಶ್ರೀಮಂತಿಕೆ ತುಂಬುತ್ತಿರುವ ಏಕೈಕ ತುಳು ಮಾಸಿಕ ‘ಪೂವರಿ’ ಆಯೋಜಿಸಿದ ‘ತುಳು ಪರ್ಬೋ’ (ತುಳು ಹಬ್ಬ) ಗಮನಸೆಳೆಯಿತು. ಕಾರ್ಯಕ್ರಮದಲ್ಲಿ ಭಾಗಿಯಾದ ಗಣ್ಯರು ನಾಡು-ನುಡಿ-ವೈಭವ ಕುರಿತು ತಮ್ಮದೇ ಶೈಲಿಯಲ್ಲಿ ವ್ಯಾಖ್ಯಾನಿಸಿ ಕುತೂಹಲದ ಕೇಂದ್ರಬಿಂದುವಾದರು. ತುಳುನಾಡಿನಲ್ಲಿ ಕೃಷಿ ಸಂಸ್ಕೃತಿಯ ಪ್ರತಿಫಲನ ಹಬ್ಬಗಳ ಆಚರಣೆಯಲ್ಲಿ ಪ್ರತಿಫಲಿಸುತ್ತಿತ್ತು. ಆದರೆ ಇಂದು ಕೃಷಿ ನಾಶವಾಗಿ ಸಿಮೆಂಟ್ ನೆಲದಲ್ಲಿ ಹಣತೆ ಹಚ್ಚುವ ಅನಿವಾರ್ಯತೆ ನಮ್ಮದಾಗಿದೆ. ಆದರೂ ಮುಂದಿನ ತಲೆಮಾರಿಗೆ ನಮ್ಮ ಆಚರಣೆಗಳನ್ನು ತಿಳಿಸಲು ಇದು ಅನಿವಾರ್ಯ ಎಂದು ವಕೀಲ ಹಾಗೂ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಮಾಜಿ…

72ನೇ ಮಿಸ್‌ ಯೂನಿವರ್ಸ್‌ ಆಗಿ ನಿಕರಾಗುವಾದ ‘ಶೆಯ್ನಿಸ್ ಪಲಾಸಿಯೋಸ್’

ಎಲ್‌. ಸಾಲ್ವಡಾರ್‌ನಲ್ಲಿ ನಡೆದ 72ನೇ ಮಿಸ್‌ ಯೂನಿವರ್ಸ್‌ ಸ್ಪರ್ಧೆಯಲ್ಲಿ ನಿಕರಾಗುವಾದ ಸುಂದರಿ ಶೆಯ್ನಿಸ್ ಪಲಾಸಿಯೋಸ್ ಕಿರೀಟ ಮುಡಿಗೇರಿಸಿಕೊಂಡಿದ್ದಾರೆ. 90 ಕ್ಕೂ ಹೆಚ್ಚು ದೇಶಗಳಿಂದ ಸ್ಪರ್ಧಿಗಳ ಪೈಕಿ  ವಿಶ್ವ ಸುಂದರಿ ಪಟ್ಟವನ್ನು ಶೆಯ್ನಿಸ್ ಪಲಾಸಿಯೋಸ್ ಪಡೆದುಕೊಂಡಿದ್ದಾರೆ‌  ಭಾರತೀಯ ಕಾಲಮಾನ ಭಾನುವಾರ ಬೆಳಿಗ್ಗೆ 6:30 ಕ್ಕೆ ಮಿಸ್ ಯೂನಿವರ್ಸ್ ವಿಜೇತರ ಹೆಸರನ್ನು ಘೋಷಿಸಲಾಯಿತು. 23 ವರ್ಷದ ಶೆಯ್ನಿಸ್ ಅಲೋಂಡ್ರಾ ಪಲಾಸಿಯೊಸ್ ಕಾರ್ನೆಜೊ ಅವರು ಕಳೆದ ವರ್ಷದ ವಿಜೇತ ಆರ್’ಬೊನಿ ಗೇಬ್ರಿಯಲ್ ಅವರಿಂದ 2023 ರ ವಿಶ್ವ ಸುಂದರಿ ಕಿರೀಟವನ್ನು ಹಸ್ತಾಂತರಿಸಿದರು. ಇದೇ ವೇಳೆ, ಥಾಯ್ಲೆಂಡ್‌ನ ಆಂಟೋನಿಯಾ ಪೋರ್ಸಿಲ್ಡ್ ರನ್ನರ್ ಅಪ್ ಪ್ರಶಸ್ತಿಗೆ ತೃಪ್ತಿಪಟ್ಟುಕೊಂಡರು. ಆಸ್ಟ್ರೇಲಿಯಾದ ಮೊರಾಯಾ ವಿಲ್ಸನ್ ಎರಡನೇ ರನ್ನರ್ ಅಪ್ ಸ್ಥಾನಕ್ಕೆ ಗುರುತಾದರು. ಭಾರತದ ಸುಂದರಿ 23 ವರ್ಷದ ಶ್ವೇತಾ ಶಾರ್ದಾ ಅವರು ಸೆಮಿಫೈನಲ್‌‌ವರಗೆ ತಲುಪಿದ್ದರು. ಅಗ್ರ 20 ಫೈನಲಿಸ್ಟ್‌ಗಳಲ್ಲಿ ಅವರು ಸ್ಥಾನ ಪಡೆಕೊಂಡಿದ್ದಾರೆ. MISS UNIVERSE 2023…