‘ವಿಳಂಬವೇ ಭ್ರಷ್ಟಾಚಾರದ ಮೂಲ’; ಕಡತಗಳ ತ್ವರಿತ ವಿಲೇವಾರಿಗೆ ಸೂಚನೆ

ಬೆಂಗಳೂರು: ಕರ್ನಾಟಕ ಆಡಳಿತ ಸೇವಾ (KAS) ಅಧಿಕಾರಿಗಳ ಬಡ್ತಿಗೆ ಶೀಘ್ರ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಭರವಸೆ ನೀಡಿದ್ದಾರೆ. ಬಡ್ತಿಗಳಿಗೆ ಸಂಬಂಧಿಸಿದಂತೆ ಕಂದಾಯ ಸಚಿವರು ಕ್ರಿಯಾಶೀಲರಾಗಿದ್ದು, ಶೀಘ್ರದಲ್ಲೇ ಪ್ರಕ್ರಿಯೆ ಪೂರ್ಣಗೊಳ್ಳಲಿದೆ ಎಂದರು. ಜೊತೆಗೆ, 33% ಅಧಿಕಾರಿಗಳನ್ನು ಸಿಇಒಗಳಾಗಿ ನೇಮಿಸುವ ದಿಶೆಯಲ್ಲಿ ಸರ್ಕಾರ ಕ್ರಮ ಕೈಗೊಳ್ಳಲಿದೆ ಎಂದು ತಿಳಿಸಿದರು. ಬೆಂಗಳೂರಿನಲ್ಲಿ ಕರ್ನಾಟಕ ಆಡಳಿತ ಸೇವಾ ಅಧಿಕಾರಿಗಳ ಸಂಘದ ನವೀಕೃತ ಕಟ್ಟಡ ಉದ್ಘಾಟಿಸಿದ ಅವರು, ಕಡತ ವಿಲೇವಾರಿ ವಿಷಯದಲ್ಲಿ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು. “ಯಾವುದೇ ಕಾರಣಕ್ಕೂ ಕಡತಗಳ ಪ್ರಕ್ರಿಯೆಯಲ್ಲಿ ವಿಳಂಬ ಮಾಡಬಾರದು. ವಿಳಂಬವೇ ಭ್ರಷ್ಟಾಚಾರದ ಮೂಲ” ಎಂದು ಎಚ್ಚರಿಸಿದರು. ಕೆಎಎಸ್ ಅಧಿಕಾರಿಗಳು ತಮ್ಮ ಕರ್ತವ್ಯಗಳನ್ನು ಪ್ರಾಮಾಣಿಕತೆ ಮತ್ತು ಸಮಗ್ರತೆಯಿಂದ ನಿರ್ವಹಿಸಬೇಕು ಎಂದು ತಿಳಿಸಿದ ಸಿಎಂ, ಸಂಘದ ನೂರು ವರ್ಷಗಳ ಇತಿಹಾಸವನ್ನು ಉಲ್ಲೇಖಿಸಿ ನಾಲ್ವಡಿ ಕೃಷ್ಣರಾಜ ಒಡೆಯರ್ (Nalvadi Krishnaraja Wadiyar) ಅವರ ಆಡಳಿತ ಸಾಧನೆಗಳನ್ನು ಸ್ಮರಿಸಿದರು.…

ಮತ್ತೆ ಸಿಎಂ ಕುರ್ಚಿ ಚರ್ಚೆ ಜೋರು; ಸಿದ್ದು ಬೆಂಬಲಿಗ ಶಾಸಕರ ದೆಹಲಿ ಯಾತ್ರೆ?

ಕೋಲಾರ: ರಾಜ್ಯ ರಾಜಕೀಯದಲ್ಲಿ ಮತ್ತೆ ಸಿಎಂ ಕುರ್ಚಿ ಚರ್ಚೆ ಜೋರಾಗಿದೆ ಎಂಬ ಆರೋಪ ಕೇಳಿಬಂದಿದೆ. ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ (H. D. Kumaraswamy), ಮುಖ್ಯಮಂತ್ರಿ ಹುದ್ದೆಗಾಗಿ 40ರಿಂದ 50 ಶಾಸಕರು ದೆಹಲಿಗೆ ತೆರಳಲು ಸಿದ್ಧತೆ ನಡೆಸುತ್ತಿದ್ದಾರೆ ಎಂದು ಗಂಭೀರ ಆರೋಪ ಮಾಡಿದ್ದಾರೆ. ಕೋಲಾರ ಜಿಲ್ಲೆಯ ಮಾಲೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. “ರಾಜ್ಯದಲ್ಲಿ ಕುಡಿಯುವ ನೀರು ಸಮಸ್ಯೆ, ತೀವ್ರ ಬಿಸಿಲು – ಜನ ಕಷ್ಟದಲ್ಲಿದ್ದಾರೆ. ಆದರೆ ಸರ್ಕಾರಕ್ಕೆ ಇದರ ಬಗ್ಗೆ ಯಾವುದೇ ಚಿಂತನೆ ಇಲ್ಲ” ಎಂದು ಟೀಕಿಸಿದರು. ಅಳಂದದ ಹಿರಿಯ ಶಾಸಕ ಬಿ.ಆರ್. ಪಾಟೀಲ್ (B. R. Patil) ಅವರ ಹೇಳಿಕೆಯನ್ನು ಉಲ್ಲೇಖಿಸಿದ ಕುಮಾರಸ್ವಾಮಿ, “ನೀರು ಸಮಸ್ಯೆ ಪರಿಹರಿಸಲು ಹಣವೇ ಇಲ್ಲ, ಪಿಡಿಓಗಳು ಲಭ್ಯವಿಲ್ಲ ಎಂದು ಅವರು ಹೇಳಿದ್ದಾರೆ. ಇದೇ ಸರ್ಕಾರದ ಸ್ಥಿತಿ” ಎಂದು ಹೇಳಿದರು. ಜನಪ್ರತಿನಿಧಿಗಳು…

‘ಮೆಟ್ರೋ ಚಿಕ್ಸ್’ ಪ್ರಕರಣ: ‘ಇದು ಗಂಭೀರ ಅಪರಾಧ’ ಎನ್ನುತ್ತಾ ಆರೋಪಿಯ ಅರ್ಜಿ ವಜಾ ಮಾಡಿದ ಹೈಕೋರ್ಟ್

ಬೆಂಗಳೂರು: ‘ನಮ್ಮ ಮೆಟ್ರೋ’ ರೈಲುಗಳಲ್ಲಿ ಮಹಿಳೆಯರ ಅಶ್ಲೀಲ ವೀಡಿಯೊಗಳನ್ನು ಚಿತ್ರೀಕರಿಸಿ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ, ಕರ್ನಾಟಕ ಹೈಕೋರ್ಟ್ (Karnataka High Court) ಮಹತ್ವದ ತೀರ್ಪು ನೀಡಿದೆ. ಆರೋಪಿಯ ಅರ್ಜಿಯನ್ನು ತಳ್ಳಿಹಾಕಿದ ನ್ಯಾಯಾಲಯ, ಕೃತ್ಯದ ಗಂಭೀರತೆಯನ್ನು ತೀವ್ರವಾಗಿ ಖಂಡಿಸಿದೆ. ದಿಗಂತ್ ಬಿ.ಕೆ (Diganth B.K) ಎಂಬ ಆರೋಪಿಯು ತನ್ನ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಪ್ರಕರಣಗಳನ್ನು ರದ್ದುಗೊಳಿಸುವಂತೆ ಕೋರಿ ಹೈಕೋರ್ಟ್ ಮೆಟ್ಟಿಲೇರಿದ್ದ. ಆದರೆ, ನ್ಯಾಯಮೂರ್ತಿ ಎಂ. ನಾಗಪ್ರಸನ್ನ (M. Nagaprasanna) ನೇತೃತ್ವದ ಪೀಠವು ಅರ್ಜಿಯನ್ನು ವಜಾಗೊಳಿಸಿ, ಆರೋಪಿಯ ವರ್ತನೆಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ. “ಮಹಿಳೆಯರನ್ನು ಒಪ್ಪಿಗೆಯಿಲ್ಲದೆ ಅಶ್ಲೀಲವಾಗಿ ಚಿತ್ರೀಕರಿಸಿ ಅಪ್‌ಲೋಡ್ ಮಾಡುವುದು ಹೇಗೆ ಸಮ್ಮತಾರ್ಹ?” ಎಂದು ಪ್ರಶ್ನಿಸಿದ ನ್ಯಾಯಾಲಯ, ಇಂತಹ ಕೃತ್ಯಗಳು ಮಹಿಳೆಯರ ಸುರಕ್ಷತೆಗೆ ದೊಡ್ಡ ಅಪಾಯ ಎಂದು ಹೇಳಿದೆ. “ನೀವು ಯಾವ ರೀತಿಯ ವ್ಯಕ್ತಿ?” ಎಂದು ಆರೋಪಿಯನ್ನು ತರಾಟೆಗೆ ತೆಗೆದುಕೊಂಡಿದೆ. ಪ್ರಕರಣದ ವಿವರ ಪ್ರಕಾರ, “ಬೆಂಗಳೂರು…

ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ ಆರೋಪಿಗೆ ಶಿಕ್ಷೆ; ಕಾಂಗ್ರೆಸ್ ನಾಯಕರ ಹಳೆಯ ಟೀಕೆಗೆ ಬಿಜೆಪಿ ತರಾಟೆ

ಬೆಂಗಳೂರು: ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟದ ಆರೋಪಿ ಶಾರೀಕ್‌ ಗೆ ನ್ಯಾಯಾಲಯ ಕಠಿಣ ಶಿಕ್ಷೆಯ ತೀರ್ಪು ಪ್ರಕಟಿಸಿದೆ. NIA ನ್ಯಾಯಾಲಯ ಆತನಿಗೆ 10 ವರ್ಷಗಳ ಕಠಿಣ ಶಿಕ್ಷೆಯ ತೀರ್ಪನ್ನು ಸೋಮವಾರ ಪ್ರಕಟಿಸಿದೆ. ಈ ತೀರ್ಪನ್ನು ಸ್ವಾಗತಿಸಿರುವ ಕರ್ನಾಟಕ ಪ್ರದೇಶ ಬಿಜೆಪಿ, ಆಡಳಿತಾರೂಢ ಕಾಂಗ್ರೆಸ್ ನಾಯಕರ ಪ್ರತಿಕ್ರಿಯೆಗಳ ಬಗ್ಗೆ ವ್ಯಂಗ್ಯವಾಡಿದೆ. ‘ಅಂದು ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟವನ್ನು ಕೇವಲ ‘ಡೈವರ್ಶನ್ ಪಾಲಿಟಿಕ್ಸ್’ ಎಂದು ಲೇವಡಿ ಮಾಡಿ ಉಗ್ರರ ಪರ ನಿಂತಿದ್ದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹಾಗೂ ಕಾಂಗ್ರೆಸ್ ನಾಯಕರಿಗೆ ಈಗ ಸತ್ಯದ ದರ್ಶನವಾಗಿದೆ ಎಂದು ಬಿಜೆಪಿ ಪ್ರತಿಕ್ರಿಯಿಸಿದೆ. ಈ ಕುರಿತಂತೆ ಸಾಮಾಜಿಕ ಮಾಧ್ಯಮ ‘X’ ನಲ್ಲಿ ಪೋಸ್ಟ್ ಹಾಕಿರುವ ಬಿಜೆಪಿ, ‘ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣದ ಉಗ್ರ ಶಾರೀಕ್‌ನ ಕೃತ್ಯ ಸಾಬೀತಾಗಿದ್ದು, NIA ನ್ಯಾಯಾಲಯ ಆತನಿಗೆ 10 ವರ್ಷಗಳ ಕಠಿಣ ಶಿಕ್ಷೆ ವಿಧಿಸಿದೆ. ರಾಷ್ಟ್ರೀಯ ಭದ್ರತೆಯಂತಹ ಗಂಭೀರ…

ಕೆಎಎಸ್ ಅಧಿಕಾರಿಗಳ ಬಡ್ತಿ ಶೀಘ್ರ: ಸಿಎಂ ಸಿದ್ದರಾಮಯ್ಯ ಭರವಸೆ

ಬೆಂಗಳೂರು: ಕರ್ನಾಟಕ ಆಡಳಿತ ಸೇವಾ (KAS) ಅಧಿಕಾರಿಗಳ ಬಡ್ತಿಗೆ ಶೀಘ್ರ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಭರವಸೆ ನೀಡಿದ್ದಾರೆ. ಬಡ್ತಿಗಳಿಗೆ ಸಂಬಂಧಿಸಿದಂತೆ ಕಂದಾಯ ಸಚಿವರು ಕ್ರಿಯಾಶೀಲರಾಗಿದ್ದು, ಶೀಘ್ರದಲ್ಲೇ ಪ್ರಕ್ರಿಯೆ ಪೂರ್ಣಗೊಳ್ಳಲಿದೆ ಎಂದರು. ಜೊತೆಗೆ, 33% ಅಧಿಕಾರಿಗಳನ್ನು ಸಿಇಒಗಳಾಗಿ ನೇಮಿಸುವ ದಿಶೆಯಲ್ಲಿ ಸರ್ಕಾರ ಕ್ರಮ ಕೈಗೊಳ್ಳಲಿದೆ ಎಂದು ತಿಳಿಸಿದರು. ಬೆಂಗಳೂರಿನಲ್ಲಿ ಕರ್ನಾಟಕ ಆಡಳಿತ ಸೇವಾ ಅಧಿಕಾರಿಗಳ ಸಂಘದ ನವೀಕೃತ ಕಟ್ಟಡ ಉದ್ಘಾಟಿಸಿದ ಅವರು, ಕಡತ ವಿಲೇವಾರಿ ವಿಷಯದಲ್ಲಿ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು. “ಯಾವುದೇ ಕಾರಣಕ್ಕೂ ಕಡತಗಳ ಪ್ರಕ್ರಿಯೆಯಲ್ಲಿ ವಿಳಂಬ ಮಾಡಬಾರದು. ವಿಳಂಬವೇ ಭ್ರಷ್ಟಾಚಾರದ ಮೂಲ” ಎಂದು ಎಚ್ಚರಿಸಿದರು. ಕೆಎಎಸ್ ಅಧಿಕಾರಿಗಳು ತಮ್ಮ ಕರ್ತವ್ಯಗಳನ್ನು ಪ್ರಾಮಾಣಿಕತೆ ಮತ್ತು ಸಮಗ್ರತೆಯಿಂದ ನಿರ್ವಹಿಸಬೇಕು ಎಂದು ತಿಳಿಸಿದ ಸಿಎಂ, ಸಂಘದ ನೂರು ವರ್ಷಗಳ ಇತಿಹಾಸವನ್ನು ಉಲ್ಲೇಖಿಸಿ ನಾಲ್ವಡಿ ಕೃಷ್ಣರಾಜ ಒಡೆಯರ್ (Nalvadi Krishnaraja Wadiyar) ಅವರ ಆಡಳಿತ ಸಾಧನೆಗಳನ್ನು ಸ್ಮರಿಸಿದರು.…

‘ಭಾಷಣ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯ’; SJCLಯಲ್ಲಿ ಅಂತರರಾಷ್ಟ್ರೀಯ ಸಮ್ಮೇಳನ

ಬೆಂಗಳೂರು: ಸಂತ ಜೋಸೆಫ್ ಕಾನೂನು ಕಾಲೇಜು (ಸಂತ ಜೋಸೆಫ್ ಕಾನೂನು ಕಾಲೇಜು (St. Joseph’s College of Law)), ಬೆಂಗಳೂರು, ಇದರ ನೇತೃತ್ವದಲ್ಲಿ “ಭಾಷಣ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯ” ಕುರಿತು ನಡೆದ ಅಂತರರಾಷ್ಟ್ರೀಯ ಸಮ್ಮೇಳನ ಗಮನಸೆಳೆಯಿತು. ಈ ಸಮ್ಮೇಳನದಲ್ಲಿ ದೇಶದ 45ಕ್ಕೂ ಹೆಚ್ಚು ಶೈಕ್ಷಣಿಕ ಮತ್ತು ಸಂಶೋಧನಾ ಸಂಸ್ಥೆಗಳ 110ಕ್ಕೂ ಹೆಚ್ಚು ಪ್ರತಿನಿಧಿಗಳು ಭಾಗವಹಿಸಿದ್ದರು. “ಆಧುನಿಕ ಭಾರತದಲ್ಲಿ ಸ್ವಾತಂತ್ರ್ಯ, ಭಿನ್ನಮತ ಮತ್ತು ಸಾರ್ವಜನಿಕ ಸುವ್ಯವಸ್ಥೆಯ ನಡುವಿನ ಸಮತೋಲನ” ಕುರಿತು ಆಳವಾದ ಚರ್ಚೆ ನಡೆಯಿತು. ಮುಖ್ಯ ಭಾಷಣಕಾರರಾಗಿ ನಿಖಿಲ್ ದೇಯ್ (Nikhil Dey) ಭಾಗವಹಿಸಿ, ಮಾಹಿತಿ ಹಕ್ಕು ಮತ್ತು ಉದ್ಯೋಗ ಹಕ್ಕು ಚಳವಳಿಗಳ ಬೆಳವಣಿಗೆಯಲ್ಲಿ ಪಾರದರ್ಶಕತೆ, ಹೊಣೆಗಾರಿಕೆ ಮತ್ತು ತಳಮಟ್ಟದ ಪ್ರಜಾಪ್ರಭುತ್ವದ ಪಾತ್ರವನ್ನು ಒತ್ತಿಹೇಳಿದರು. ಸಮಾರೋಪ ಭಾಷಣ ಮಾಡಿದ ಭಾವನ ಮಹಾದೇವ್ (Bhavna Mahadeo), ಅಂತರರಾಷ್ಟ್ರೀಯ ಆರ್ಥಿಕ ಕಾನೂನು ಹಾಗೂ ಕಾನೂನು ಸಂಶೋಧನಾ ವಿಧಾನಗಳ ಕುರಿತು ಮಹತ್ವದ ಸಂಗತಿಗಳನ್ನು…

ಒಳ ಮೀಸಲಾತಿ: ವಿಶೇಷ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಧಾರ

ಬೆಂಗಳೂರು: ಪರಿಶಿಷ್ಟ ಜಾತಿಯ ಎಲ್ಲಾ ಸಮುದಾಯಗಳಿಗೂ ನ್ಯಾಯ ಒದಗಿಸುವ ನಿಟ್ಟಿನಲ್ಲಿ ಸಚಿವ ಸಂಪುಟ ಸಭೆ ಐತಿಹಾಸಿಕ ನಿರ್ಧಾರವನ್ನು ತೆಗೆದುಕೊಂಡಿದೆ. ಎಡ, ಬಲ ಹಾಗೂ ಇತರೇ ಸಮುದಾಯಗಳಿಗೆ 5.25, 5.25 ಮತ್ತು 4.5 ಮೀಸಲಾತಿ ಕಲ್ಪಿಸಲು ಸರ್ವಾನುಮತದಿಂದ ಒಪ್ಪಿಗೆ ನೀಡಿದೆ. ಒಳಮೀಸಲಾತಿಗೆ ಸಂಬಂಧಿಸಿದಂತೆ ಇಂದು ನಡೆದ ಸಂಪುಟ ಸಭೆಯ ನಂತರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿ, ಮೀಸಲಾತಿಯನ್ನು ಶೇ.50ಕ್ಕೆ ಮಿತಿಗೊಳಿಸುವ ಹೈಕೋರ್ಟ್ ತೀರ್ಪಿನ ಪ್ರಕಾರ ಪರಿಶಿಷ್ಟ ಜಾತಿಯೊಳಗೆ ಒಳ ಮೀಸಲಾತಿಯನ್ನು ಮರು ನಿಗದಿಪಡಿಸಿ ಪರಿಶಿಷ್ಟ ಜಾತಿಗೆ 15% ಹಾಗೂ ಪರಿಶಿಷ್ಟ ವರ್ಗಗಳಿಗೆ ಶೇ3 ರಷ್ಟು ಮೀಸಲಾತಿ ನೀಡಲಾಗಿದೆ. ಒಳಮೀಸಲಾತಿಗೆ ರಚಿಸಲಾಗಿದ್ದ ಕಾಯ್ದೆಗೆ ಅನುಗುಣವಾಗಿ 17% ಮೀಸಲಾತಿಗೆ 6%, 6% ಹಾಗೂ 5% ಇದ್ದರೆ, ಈಗಿನ 15% ಮೀಸಲಾತಿಗೆ 5.3%, 5.3% ಹಾಗೂ 4.4% ಮೀಸಲಾತಿಯನ್ನು ನಿಗದಿ ಮಾಡಿ ವರದಿ ನೀಡಲಾಗಿದ್ದು, ಅಂತಿಮವಾಗಿ ಸಚಿವ ಸಂಪುಟ ಸಭೆಯು…

ಶೀಘ್ರದಲ್ಲೇ ಪಶ್ಚಿಮ ಬೆಂಗಳೂರಿನಲ್ಲಿ ಜಯದೇವ 100 ಹಾಸಿಗೆ ಕಾರ್ಡಿಯಾಕ್ ಹಬ್ ಘಟಕ

ಬೆಂಗಳೂರು: ಎಲ್ಲರಿಗೂ ಕೈಗೆಟಕುವ ದರದಲ್ಲಿ ಹೃದಯ ಆರೋಗ್ಯ ಸೇವೆಯನ್ನು ನೀಡಲು ಹಾಗೂ ಆಡಳಿತ ವಿಕೇಂದ್ರೀಕರಣ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ ಇರಿಸಲಾಗಿದೆ. ಜಯದೇವ ಹೃದಯರಕ್ತನಾಳ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆ (ಎಸ್‌ಜೆಐಸಿಎಸ್ ಮತ್ತು ಆರ್) ಶುಕ್ರವಾರ ಪಶ್ಚಿಮ ಬೆಂಗಳೂರಿನ ಗೋವಿಂದರಾಜನಗರದಲ್ಲಿ 100 ಹಾಸಿಗೆಗಳ ಜಯದೇವ ಘಟಕವನ್ನು ಸ್ಥಾಪಿಸಲು ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ಜೊತೆ ಒಪ್ಪಂದಕ್ಕೆ ಸಹಿ ಹಾಕಿದೆ. ಇದರೊಂದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯ ಬಜೆಟ್‌ನಲ್ಲಿ ಮಾಡಿದ ಪ್ರಮುಖ ಭರವಸೆಯನ್ನು ಈಡೇರಿಸಿದಂತಾಗಿದೆ. ಜಯದೇವ ಆಸ್ಪತ್ರೆಯ ನಿರ್ದೇಶಕ ಡಾ. ಬಿ. ದಿನೇಶ್ ಮತ್ತು ಜಿಬಿಎ ಮುಖ್ಯ ಆಯುಕ್ತ ಎನ್. ಮಹೇಶ್ವರ ರಾವ್, ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಜೀವನೋಪಾಯ ಮತ್ತು ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಶರಣಪ್ರಕಾಶ್ ಆರ್. ಪಾಟೀಲ್, ಗೋವಿಂದರಾಜನಗರ ಶಾಸಕ ಪ್ರಿಯಾ ಕೃಷ್ಣ, ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಮೊಹಮ್ಮದ್ ಮೋಶಿನ್, ಪಶ್ಚಿಮ ಮಹಾನಗರ…

ರಾಜ್ಯದ ಆರ್ಥಿಕತೆಯಲ್ಲಿ ಕೃಷಿ ಕ್ಷೇತ್ರದ ಪಾತ್ರ ಅತ್ಯಂತ ಮಹತ್ವವಾದದ್ದು: ಎನ್.ಚಲುವರಾಯಸ್ವಾಮಿ

ಬೆಂಗಳೂರು: ರಾಜ್ಯದ ಆರ್ಥಿಕತೆಯಲ್ಲಿ ಕೃಷಿ ಕ್ಷೇತ್ರದ ಪಾತ್ರ ಅತ್ಯಂತ ಮಹತ್ವದ್ದಾಗಿದೆ ಎಂದು ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ಹೇಳಿದ್ದಾರೆ. ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆದ ಅಗ್ರಿ-ಟೆಕ್ ಸಮಿಟ್-2026ರಲ್ಲಿ ಮಾತನಾಡಿದ ಅವರು, ಕೃಷಿ ಕ್ಷೇತ್ರವು ರಾಜ್ಯದ ಒಟ್ಟು ಆದಾಯದಲ್ಲಿ ಸುಮಾರು 17% ಕೊಡುಗೆ ನೀಡುವುದರ ಜೊತೆಗೆ, ಶೇಕಡಾ 58ರಷ್ಟು ಜನರಿಗೆ ಉದ್ಯೋಗವನ್ನು ಒದಗಿಸುತ್ತಿದೆ ಎಂದು ತಿಳಿಸಿದರು. 2025-26ನೇ ಸಾಲಿನಲ್ಲಿ ದೇಶದ ಆಹಾರ ಉತ್ಪಾದನೆ 355 ದಶಲಕ್ಷ ಟನ್ ತಲುಪುವ ನಿರೀಕ್ಷೆಯಿದ್ದು, ಕರ್ನಾಟಕದಲ್ಲಿಯೂ 155-160 ದಶಲಕ್ಷ ಟನ್ ಮಟ್ಟದಲ್ಲಿ ಉತ್ಪಾದನೆ ಸಾಧನೆಯಾಗಿದೆ ಎಂದು ಅವರು ಹೇಳಿದರು. ಸರ್ಕಾರದ ಯೋಜನೆಗಳು, ಕೃಷಿ ವಿಜ್ಞಾನಿಗಳ ಸಂಶೋಧನೆ ಹಾಗೂ ರೈತರ ಪರಿಶ್ರಮದಿಂದ ಕೃಷಿ ಕ್ಷೇತ್ರದಲ್ಲಿ ಗಮನಾರ್ಹ ಪ್ರಗತಿ ಕಂಡುಬಂದಿದೆ. ತೋಟಗಾರಿಕೆ ಉತ್ಪಾದನೆ ಹಾಗೂ ಕೃಷಿ ಉತ್ಪನ್ನಗಳ ಮೌಲ್ಯವರ್ಧನೆಗೆ ಒತ್ತು ನೀಡಲಾಗಿದ್ದು, ಸಂಸ್ಕರಣೆ, ಪ್ಯಾಕೇಜಿಂಗ್, ಬ್ರಾಂಡಿಂಗ್ ಮತ್ತು ಮಾರುಕಟ್ಟೆ ಸಂಪರ್ಕವನ್ನು ಬಲಪಡಿಸುವ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು…

ಅಖಿಲ ಭಾರತ ವೀರಶೈವ-ಲಿಂಗಾಯಿತ ಮಹಾಸಭಾ ಮಹಿಳಾ ಮತ್ತು ಯುವ ವಿಭಾಗಗಳ ಪದಗ್ರಹಣ

ಬೆಂಗಳೂರು: ನಗರದ ಟೌನ್ ಹಾಲ್‌ನಲ್ಲಿ ಅಖಿಲ ಭಾರತ ವೀರಶೈವ–ಲಿಂಗಾಯಿತ ಮಹಾಸಭಾ (ರಿ) ರಾಷ್ಟ್ರೀಯ ಮಹಿಳಾ ಮತ್ತು ಯುವ ವಿಭಾಗಗಳ ಪದಗ್ರಹಣ ಸಮಾರಂಭ ಭಾನುವಾರ ವೈಭವವಾಗಿ ನಡೆಯಿತು. ಪಟ್ಟದ ಶ್ರೀ ಡಾ. ಮಲಯಶಾಂತಮುನಿ ದೇಶಿಕೇಂದ್ರ ಶಿವಾಚಾರ್ಯ ಮಹಾಸ್ವಾಮಿಗಳು, ಡಾ. ಶ್ರೀ ಶ್ರೀ ತ್ರಿನೇತ್ರ ಮಹಂತ ಶಿವಯೋಗಿ ಸ್ವಾಮಿಗಳು, ಸಂಸದ ಹಾಗೂ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್, ಮಹಾಸಭಾ ಅಧ್ಯಕ್ಷರೂ ಆಗಿರುವ ಸಚಿವ ಈಶ್ವರ ಬಿ. ಖಂಡ್ರೆ, ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್, ಶರಣ ಪ್ರಕಾಶ ಪಾಟೀಲ್ ಸೇರಿದಂತೆ ಹಲವರು ದೀಪ ಬೆಳಗಿಸಿ ಕಾರ್ಯಕ್ರಮ ಉದ್ಘಾಟಿಸಿದರು. ಹಾನಗಲ್ ಕುಮಾರಸ್ವಾಮಿಗಳ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಪದಗ್ರಹಣಕ್ಕೆ ಚಾಲನೆ ನೀಡಲಾಯಿತು. ಸಭೆಯನ್ನುದ್ದೇಶಿಸಿ ಮಾತನಾಡಿದ ಮಲಯಶಾಂತಮುನಿ ದೇಶಿಕೇಂದ್ರ ಸ್ವಾಮೀಜಿ, ಸಮಾಜ ನಿರ್ಮಾಣದಲ್ಲಿ ಮಹಿಳೆಯರು ಮತ್ತು ಯುವಕರ ಪಾತ್ರ ಮಹತ್ವದ್ದಾಗಿದೆ ಎಂದರು. ಪ್ರತೀ ಮನೆಯಲ್ಲಿ ಒಬ್ಬ ಸಮಾಜಸೇವಕ ಇದ್ದರೆ ಸಮಾಜದ ಅಭಿವೃದ್ಧಿ…