ಬೆಂಗಳೂರು: ಸರಕಾರಿ ಸ್ಥಳಗಳಲ್ಲಿ ಯಾವುದೇ ಸಂಘ ಸಂಸ್ಥೆಗಳು ಚಟುವಟಿಕೆ ನಡೆಸಬೇಕಾದರೆ ಸಂಬಂಧಪಟ್ಟ ಸ್ಥಳೀಯ ಸಂಸ್ಥೆಗಳ ಅನುಮತಿ ಪಡೆಯಬೇಕು ಎಂಬ ಸಚಿವ ಸಂಪುಟದ ತೀರ್ಮಾನ ಸಮರ್ಥನೀಯ ಎಂದು ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಜೀವನೋಪಾಯ ಮತ್ತು ರಾಯಚೂರು ಜಿಲ್ಲಾ ಉಸ್ತುವಾರಿ ಶಿಕ್ಷಣ ಸಚಿವರಾದ ಡಾ. ಶರಣಪ್ರಕಾಶ ಆರ್. ಪಾಟೀಲ್ ತಿಳಿಸಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ರಾಜಕೀಯ ವಿದ್ಯಮಾನಗಳ ಕುರಿತಾಗಿಯೂ ಸಚಿವರು ಪ್ರತಿಕ್ರಿಯೆ ನೀಡಿದ ಶರಣಪ್ರಕಾಶ ಪಾಟೀಲ್, ‘ನಮ್ಮ ಸರ್ಕಾರ ಜಾರಿಗೆ ಈ ನಿಷೇಧ ಹೇರಿಲ್ಲ. ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರ ಅಧಿಕಾರಾವಧಿಯಲ್ಲಿ ಜಾರಿಗೆ ತರಲಾಗಿತ್ತು. ಇದನ್ನು ನಮ್ಮ ಸರ್ಕಾರ ಅನುಷ್ಠಾನ ಮಾಡಿದೆಯಷ್ಟೇ. ಮಾಡಲು ಕೆಲಸವಿಲ್ಲದ ಬಿಜೆಪಿಯವರು ಜನರಲ್ಲಿ ಗೊಂದಲ ಸೃಷ್ಟಿಸಲು ಯತ್ನಿಸುತ್ತಿದ್ದಾರೆ’ ಎಂದು ತಿರುಗೇಟು ನೀಡಿದರು. ಗ್ರಾಮೀಣಭಿವೃದ್ದಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಅವರು ಆರೆಸ್ಸೆಸ್ ನಿಷೇಧ ಮಾಡಬೇಕು ಎಂದು ಎಲ್ಲಿಯೂ ಹೇಳಿಲ್ಲ.ಎಲ್ಲರೂ ಅವರ ಮಾತನ್ನ ತಪ್ಪಾಗಿ ಅರ್ಥೈಸಿಕೊಂಡಿದ್ದಾರೆ.…
Category: ವಿದೇಶ
RSS ಗೆ ಸರ್ಕಾರದ ಅಂಕುಶ, ಶುರುವಾಯಿತು “I Love Karnataka’ ಅಭಿಯಾನ
ಬೆಂಗಳೂರು: RSS ವಿರುದ್ದದ ಸಿದ್ದರಾಮಯ್ಯ ಸರ್ಕಾರದ ಪ್ರಹಾರಕ್ಕೆ ಕನ್ನಡ ಕಾರ್ಯಕರ್ತರು ತತ್ತರಗೊಂಡಿದ್ದಾರೆ. ಸಾರ್ವಜನಿಕ ಸ್ಥಳಗಳಲ್ಲಿ ಸಂಘ ಸಂಸ್ಥೆಗಳ ಚಟುವಟಿಕೆ ಮೇಲೆ ರಾಜ್ಯ ಸರ್ಕಾರ ನಿರ್ಬಂಧ ವಿಧಿಸಿರುವ ಕ್ರಮ ಇದೀಗ ರಾಜ್ಯ ಸರ್ಕಾರಕ್ಕೆ ತಿರುಗುಬಾಣ ಎಂಬಂತಾಗಿದೆ. RSS ಮೇಲಿನ ದ್ವೇಷದ ನಡೆಯಿಂದಾಗಿ ಕನ್ನಡ ಸಂಘಟನೆಗಳೂ ಅಸ್ತಿತ್ವ ಕಳೆದುಕೊಳ್ಳುವಂತಾಗಿದೆ ಎಂಬ ಅಭಿಪ್ರಾಯ ಸಾರ್ವಜನಿಕ ವಲಯದಲ್ಲಿ ಕೇಳಿಬರುತ್ತಿದೆ. RSSಗೆ ತನ್ನ ಶಾಖೆಯನ್ನು ನಡೆಸಲು ಸಾರ್ವಜನಿಕ ಸ್ಥಳವೇ ಆಗಬೇಕೆಂದಿಲ್ಲ. ಬಹುತೇಕ ಊರುಗಳಲ್ಲಿ ಯಾರದಾದರೂ ಮನೆಗಳಲ್ಲಿ ಶಾಖೆ ಹಾಗೂ ಬೈಠಕ್’ಗಳನ್ನು ನಡೆಸಲಾಗುತ್ತದೆ. ಬಹಿರಂಗ ಸಮಾವೇಶ ಮತ್ತು ಪಾಠ ಸಂಚಲನಗಳು ಮಾತ್ರ ಸಾರ್ವಜನಿಕ ಸ್ಥಳಗಳಲ್ಲಿ ನಡೆಯುತ್ತವೆಯಾದರೂ ಅವು ವರುಷಕ್ಕೊಮ್ಮೆ ಮಾತ್ರ. ಹಾಗಾಗಿ ನಿರ್ಬಂಧದಿಂದ RSSಗೆ ಸಮಸ್ಯೆಯಾಗದು, ಆದರೆ ಇದರ ಪರಿಣಾಮ ಬೀರುವುದು ಕನ್ನಡಿಗರ ಮೇಲೆ. ಕರುನಾಡಿನ ಗಲ್ಲಿಗಲ್ಲಿಗಳಲ್ಲಿ ಕನ್ನಡ ಧ್ವಜ ಹಾರಿಸುವ ಕನ್ನಡಿಗರಿಗೆ ಸಿದ್ದರಾಮಯ್ಯ ಸರ್ಕಾರದ ಈ ದ್ವೇಷದ ನಿಯಮದಿಂದಾಗಿ ಅನ್ಯಾಯವಾಗುತ್ತದೆ. ತಮಿಳುನಾಡು ಸಹಿತ ಹಲವು…
ಬಿಹಾರ ಚುನಾವಣೆಗೆ ಕರ್ನಾಟಕದಿಂದ ಹಣ; ಶೆಟ್ಟರ್ ಆರೋಪ
ಬೆಳಗಾವಿ: ಬಿಹಾರ ವಿಧಾನಸಭಾ ಚುನಾವಣೆಗೆ ಹಣ ಸಂಗ್ರಹಿಸುವ ಉದ್ದೇಶದಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಇತ್ತೀಚಿಗೆ ತಮ್ಮ ಸಂಪುಟ ಸಹೋದ್ಯೋಗಿಗಳಿಗೆ ಔತಣಕೂಟ ಆಯೋಜಿಸಿದ್ದರು ಎಂದು ಸಂಸದ ಜಗದೀಶ್ ಶೆಟ್ಟರ್ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹೈಕಮಾಂಡ್ ಸೂಚನೆ ಹಿನ್ನೆಲೆಯಲ್ಲಿ ಬಿಹಾರ ಚುನಾವಣೆಗೆ ಹಣವನ್ನು ಸಂಗ್ರಹಿಸುವ ಉದ್ದೇಶವನ್ನು ಸಿದ್ದರಾಮಯ್ಯ ಈಡೇರಿಸಬೇಕಿದೆ. ಈ ಊದೇಶಕ್ಕಾಗಿ ಅವರು ಮಂತ್ರಿಗಳಿಗೆ ಔತಣಕೂಟವನ್ನು ಆಯೋಜಿಸಿದ್ದ ಪ್ರತಿಯೊಬ್ಬರಲ್ಲೂ ಚುನಾವಣೆಗೆ ಹಣ ನೀಡುವಂತೆ ಕೇಳಿಕೊಂಡಿದ್ದಾರೆ ಎಂದು ಬಾಂಬ್ ಸಿಡಿಸಿದರು. ಕರ್ನಾಟಕವನ್ನು ಚುನಾವಣೆಗೆ ಎಟಿಎಂ ಆಗಿ ಕಾಂಗ್ರೆಸ್ ಹೈಕಮಾಡ್ ಮಾಡಿಕೊಂಡಿದೆ ಎಂದು ಅವರು ದೂರಿದರು. ಸಿಎಂ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿ ಕಾರ್ಯನಿರ್ವಹಿಸುವಲ್ಲಿ ವಿಫಲರಾಗಿದ್ದಾರೆ ಎಂದು ಆರೋಪಿಸಿದ ಅವರು, ಕಾಂಗ್ರೆಸ್ ರಾಜ್ಯ ಘಟಕದಲ್ಲಿ ಆಂತರಿಕ ಕಚ್ಚಾಟ ಹೆಚ್ಚಿದ್ದು, ಸಿಎಂ ಸ್ಥಾನದ ಬಗ್ಗೆ ಪಕ್ಷದ ಹೈಕಮಾಂಡ್ ತೀರ್ಮಾನ ತೆಗೆದುಕೊಳ್ಳಲಿದೆ ಎಂದು ಶೆಟ್ಟರ್ ವಿಶ್ಲೇಷಿಸಿದರು.
ಕರ್ನಾಟಕ ಮಾಹಿತಿ ಆಯೋಗಕ್ಕೆ ನೂತನ ಆಯುಕ್ತರನ್ನಾಗಿ ನಿವೃತ್ತ ಐಎಎಸ್ ಅಧಿಕಾರಿ ಡಾ.ರಿಚರ್ಡ್ ವಿನ್ಸೆಂಟ್ ಡಿ ಸೋಜಾ ನೇಮಕ; ಸರ್ಕಾರದ ಆದೇಶ
ಬೆಂಗಳೂರು: ಕರ್ನಾಟಕ ಮಾಹಿತಿ ಆಯೋಗದಲ್ಲಿ ಖಾಲಿ ಇರುವ ಮೂರು ಆಯುಕ್ತರ ಹುದ್ದೆಗಳಿಗೆ ರಾಜ್ಯ ಸರ್ಕಾರ ನೇಮಕ ಮಾಡಿದೆ. ನಿವೃತ್ತ ಐಎಎಸ್ ಅಧಿಕಾರಿ ಡಾ.ರಿಚರ್ಡ್ ವಿನ್ಸೆಂಟ್ ಡಿ ಸೋಜಾ, ಹಾಗೂ ವಿಧಾನಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿಯವರ ವಿಶೇಷ ಕರ್ತವ್ಯಾಧಿಕಾರಿ ಡಾ. ಮಹೇಶ್ ವಾಳ್ವೇಕರ್ ಆಯೋಗದ ಬೆಂಗಳೂರು ಪೀಠಗಳಿಗೆ ಕಮೀಷನರ್ ಆಗಿ ಸರ್ಕಾರ ನೇಮಕ ಮಾಡಿದೆ. ಕಲಬುರಗಿ ಪೀಠಕ್ಕೆ ಬಿ.ವೆಂಕಟ್ ಸಿಂಗ್ ಅವರನ್ನು ಆಯುಕ್ತರನ್ನಾಗಿ ಸರ್ಕಾರ ನೇಮಕ ಮಾಡಿ ಆದೇಶ ಹೊರಡಿಸಿದೆ. ಡಾ.ರಿಚರ್ಡ್ ವಿನ್ಸೆಂಟ್ ಡಿ ಸೋಜಾ ರವರು ಭಾರತೀಯ ಆಡಳಿತ ಸೇವೆ ಅಧಿಕಾರಿಯಾಗಿ, ವಿವಿಧ ಆಡಳಿತ, ವ್ಯವಸ್ಥಾಪಕ ಮತ್ತು ತಾಂತ್ರಿಕ ಕ್ಷೇತ್ರಗಳಲ್ಲಿ ಸಾಕಷ್ಟು ಅನುಭವ ಹೊಂದಿರುವ ಡಾ.ರಿಚರ್ಡ್ ವಿನ್ಸೆಂಟ್ ಡಿ ಸೋಜಾ, ರಸ್ತೆ ಸುರಕ್ಷತೆ, ಸಾರ್ವಜನಿಕ ಕಲ್ಯಾಣ ಮತ್ತು ಸಂಪನ್ಮೂಲ ನಿರ್ವಹಣೆಯಲ್ಲಿ ಮಾಡಿರುವ ಸಾಧನೆ ಹೆಗ್ಗುರುತಾಗಿದೆ. ಮೆಕ್ಯಾನಿಕಲ್ ಎಂಜಿನಿಯರಿಂಗ್‌ನಲ್ಲಿ ಬ್ಯಾಚುಲರ್ ಆಫ್ ಎಂಜಿನಿಯರಿಂಗ್ ಪದವಿ ನಂತರ, ಮಾನವ ಸಂಪನ್ಮೂಲ…
ಬಿಜೆಪಿ ಆಡಳಿತವಿರುವ ರಾಜ್ಯಗಳಿಗಿಂತ ಕರ್ನಾಟಕದ ಸಾರಿಗೆ ವ್ಯವಸ್ಥೆಯೇ ಮೇಲು; ರಾಮಲಿಂಗಾ ರೆಡ್ಡಿ
ಬೆಂಗಳೂರು: ರಾಜ್ಯದ ಸಾರಿಗೆ ವ್ಯವಸ್ಥೆ ಬಗ್ಗೆ ಟೀಕಿಸಿರುವ, ಅದರಲ್ಲೂ ಬೆಂಗಳೂರಿನ ಸಾರಿಗೆ ವ್ಯವಸ್ಥೆ ಬಗ್ಗೆ ವ್ಯಂಗ್ಯವಾಡಿರುವ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಹಾಗೂ ಉದ್ಯಮಿ ಮೋಹನದಾಸ್ ಪೈ ಅವರನ್ನು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ತರಾಟೆಗೆ ತೆಗೆದುಕೊಂಡಿದ್ದಾರೆ. ಕರ್ನಾಟಕದ ಸಾರಿಗೆ ನಿಗಮಗಳ ಸುಧಾರಣೆ ಬಗ್ಗೆ ಅಂಕಿಅಂಶಗಳನ್ನು ಮುಂದಿಟ್ಟಿರುವ ರಸಚಿವ ರಾಮಲಿಂಗಾ ರೆಡ್ಡಿ, ಬಿಜೆಪಿ ಆಡಳಿತವಿರುವ ಉತ್ತರ ಪ್ರದೇಶ, ಮಹಾರಾಷ್ಟ್ರ, ಬಿಹಾರ, ಗುಜರಾತ್, ರಾಜಸ್ಥಾನ, ಒಡಿಶಾಗಳಲ್ಲಿ ಪ್ರತಿ ಸಾವಿರ ಜನರಿಗೆ ಲಭ್ಯವಿರುವ ಬಸ್ಸುಗಳ ಸಂಖ್ಯೆ ಕಡಿಮೆಯಿದೆ. ಕರ್ನಾಟಕ ಆ ಎಲ್ಲಾ ರಾಜ್ಯಗಳಿಗಿಂತ ಪ್ರಗತಿ ಸಾಧಿಸಿದೆ ಎಂದು ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಂಗಳವಾರ ಸುದ್ದಿಗೋಷ್ಠಿ ನಡೆಸಿದ ರಾಮಲಿಂಗಾ ರೆಡ್ಡಿ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಹಾಗೂ ಉದ್ಯಮಿ ಮೋಹನದಾಸ್ ಪೈ ಅವರ ಟೀಕೆಗಳಿಗೆ ತಮ್ಮದೇ ಶೈಲಿಯಲ್ಲಿ ಎದಿರೇಟು ನೀಡಿದರು. ಬೆಂಗಳೂರು ನಗರದ ಜೀವನಾಡಿಯಾಗಿರುವ ಬಿಎಂಟಿಸಿಯು ಪ್ರತಿದಿನ 48 ಲಕ್ಷ ಜನರಿಗೆ ಸಾರಿಗೆ…
ಬೆಂಗಳೂರಿನಲ್ಲಿ ಸಣ್ಣ ವಿಸ್ತೀರ್ಣದ ಮನೆಗಳಿಗೆ ಇನ್ನು OC ಅಗತ್ಯವಿಲ್ಲ
ಬೆಂಗಳೂರು: ರಾಜಧಾನಿ ಬೆಂಗಳೂರು ನಗರದಲ್ಲಿ ಬಡವರು ಹಾಗೂ ಮಧ್ಯಮ ವರ್ಗದವರು ನಿರ್ಮಿಸಿರುವ ಸಣ್ಣ ವಿಸ್ತೀರ್ಣದ ಮನೆಗಳಿಗೆ ಈಗ ಸ್ವಾಧೀನಾನುಭವ (Occupancy Certificate–OC) ಅಗತ್ಯವಿಲ್ಲ ಎಂಬ ಮಹತ್ವದ ಆದೇಶವನ್ನು ರಾಜ್ಯ ಸರ್ಕಾರ ಹೊರಡಿಸಿದೆ. ಇದುವರೆಗೆ ಓಸಿ ಇಲ್ಲದ ಕಟ್ಟಡಗಳಿಗೆ ಬೆಸ್ಕಾಂ ವಿದ್ಯುತ್ ಸಂಪರ್ಕ ಹಾಗೂ ಜಲಮಂಡಳಿ ನೀರಿನ ಸಂಪರ್ಕ ನೀಡುತ್ತಿರಲಿಲ್ಲ. ಆದರೆ ಇದೀಗ 30×40 ಅಡಿ ವಿಸ್ತೀರ್ಣದ ನಿವೇಶನಗಳ ಮನೆಗಳಿಗೆ ಓಸಿ ವಿನಾಯಿತಿ ನೀಡುವಂತೆ ಸರ್ಕಾರ ತೀರ್ಮಾನಿಸಿದೆ. ಸಚಿವ ಸಂಪುಟದ ಅನುಮೋದನೆಯಂತೆ ನಗರಾಭಿವೃದ್ಧಿ ಇಲಾಖೆ ಮಂಗಳವಾರ ಅಧಿಕೃತ ಆದೇಶ ಹೊರಡಿಸಿದ್ದು, ಸಾವಿರಾರು ಸಣ್ಣ ಮನೆಮಾಲೀಕರಿಗೆ ಇದರಿಂದ ದೊಡ್ಡದಾದ ತಾತ್ಕಾಲಿಕ ನಿಟ್ಟಿನಲ್ಲಿಯೇ ನಿಟ್ಟಿನ ಸುಧಾರಣೆಯಾಗಿದೆ ಎಂದು ನಗರಾಭಿವೃದ್ಧಿ ವಲಯದಲ್ಲಿ ಅಭಿಪ್ರಾಯ ವ್ಯಕ್ತವಾಗಿದೆ.
‘ಎರಡು ಐತಿಹಾಸಿಕ ವಿಶ್ವ ದಾಖಲೆಗಳೊಂದಿಗೆ KSRTC ಜಾಗತಿಕ ವೇದಿಕೆಗೆ ಪ್ರವೇಶಿಸಿದೆ’
ಬೆಂಗಳೂರು: ಲಂಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ಸ್ ನಿಂದ ಪ್ರಮಾಣೀಕರಿಸಲ್ಪಟ್ಟ ಎರಡು ಐತಿಹಾಸಿಕ ವಿಶ್ವ ದಾಖಲೆಗಳೊಂದಿಗೆ ಕರ್ನಾಟಕ ಜಾಗತಿಕ ವೇದಿಕೆಗೆ ಪ್ರವೇಶಿಸಿದೆ ಎಂದು ಸಿಎಂ ಸಿದ್ದರಾಮಯ್ಯ ಸಂತಸ ವ್ಯಕ್ತಪಡಿಸಿದ್ದಾರೆ. ಶಕ್ತಿ ಯೋಜನೆಯ ಯಶಸ್ಸಿನ ಬಗ್ಗೆ ಸಾಮಾಜಿಕ ಮಾಧ್ಯಮದಲ್ಲಿ ಮಾಹಿತಿ ಹಂಚಿಕೊಂಡಿರುವ ಸಿಎಂ, ಶಕ್ತಿ ಯೋಜನೆ ಮಹಿಳೆಯರು ಪಡೆದ ಅತಿ ಹೆಚ್ಚು ಉಚಿತ ಬಸ್ ಪ್ರಯಾಣಗಳು – 564.10 ಕೋಟಿ ಪ್ರಯಾಣಗಳು, ದೈನಂದಿನ ಚಲನಶೀಲತೆಯನ್ನು ಸಬಲೀಕರಣಗೊಳಿಸುತ್ತವೆ ಎಂದಿದ್ದಾರೆ. ಕೆಎಸ್‌ಆರ್‌ಟಿಸಿ ವಿಶ್ವದ ಅತಿ ಹೆಚ್ಚು ಪ್ರಶಸ್ತಿ ವಿಜೇತ ರಸ್ತೆ ಸಾರಿಗೆ ನಿಗಮ – 1997 ರಿಂದ 464 ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಗೌರವಗಳನ್ನು ಪಡೆದುಕೊಂಡಿದೆ. ನಮ್ಮ ಆಡಳಿತದ ದೃಷ್ಟಿಕೋನವು ಸಾಮಾಜಿಕ ನ್ಯಾಯ, ಮಹಿಳಾ ಸಬಲೀಕರಣ ಮತ್ತು ವಿಶ್ವ ದರ್ಜೆಯ ಸಾರ್ವಜನಿಕ ಸೇವೆಯಲ್ಲಿ ಬೇರೂರಿದೆ. ಈ ಮನ್ನಣೆಗಳು ಸಮಗ್ರ ಮತ್ತು ಸಹಾನುಭೂತಿಯ ನೀತಿ ನಿರೂಪಣೆಯು ಏನನ್ನು ಸಾಧಿಸಬಹುದು ಎಂಬುದರ ಪ್ರತಿಬಿಂಬವಾಗಿದೆ ಎಂದವರು…
ಸಿಜೆಐ ಮೇಲಿನ ದಾಳಿ ಸಮರ್ಥಿಸಿ ಪೋಸ್ಟ್; ವಕೀಲರ ಆಕ್ರೋಶ, ಕ್ರಿಮಿನಲ್ ಪ್ರಕ್ರಿಯೆಗೆ ಆದೇಶಿಸಲು ಸಿಎಂಗೆ ಆಗ್ರಹ
ಮಂಗಳೂರು: ಸುಪ್ರೀಂ ಕೋರ್ಟ್ ನಲ್ಲಿ ಮುಖ್ಯ ನ್ಯಾಯಮೂರ್ತಿ ಗವಾಯಿ ಅವರ ಮೇಲೆ ವಕೀಲ ರಾಕೇಶ್ ಕಿಶೋರ್ ಶೂ ಎಸೆದು ಅಪಮಾನಿಸಿದ ಕೃತ್ಯದ ವಿರುದ್ಧ ಕೃತ್ಯದ ಬಗ್ಗೆ ವ್ಯಾಪಕ ಖಂಡನೆ ವ್ಯಕ್ತವಾಗಿದೆ. ಅಷ್ಟೇ ಅಲ್ಲ ದೇಶದ ಹಲವೆಡೆ ಪ್ರಕರಣಗಳು ದಾಖಲಾಗಿವೆ. ಆದರೆ. ಇನ್ನೊಂದೆಡೆ ಮುಖ್ಯ ನ್ಯಾಯಮೂರ್ತಿ ಗವಾಯಿ ಅವರ ಮೇಲೆ ವಕೀಲ ನಡೆಸಿದ ಕೃತ್ಯವನ್ನು ಸಮರ್ಥಿಸುತ್ತಿರುವ ಸನ್ನಿವೇಶವೂ ಕಂಡುಬರುತ್ತಿದೆ. ಈ ಬೆಳವಣಿಗೆ ಬಗ್ಗೆ ಕಾನೂನು ತಜ್ಞರು ಹಾಗೂ ವಕೀಲರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ರಾಕೇಶ್ ಕಿಶೋರ್ ನಡೆಸಿರುವ ಸಂವಿಧಾನ ವಿರೋಧಿ ಕೃತ್ಯವನ್ನು ಕೆಲವರು ಸಮರ್ಥಿಸಿ ಸಾಮಾಜಿಕ ಮಾಧ್ಯಮಗಳಲ್ಲಿ ಪೋಸ್ಟ್ ಹಾಕಿರುವ ಪ್ರಕರಣಕ್ಕೆ ಕರ್ನಾಟಕವೂ ಸಾಕ್ಷಿಯಾಗಿವೆ. ಈ ಬಗ್ಗೆ ತೀಕ್ಷ್ಣ ಪ್ರತಿಕ್ರಿಯೆ ನೀಡಿರುವ ಮಾಜಿ ಸರ್ಕಾರಿ ಅಭಿಯೋಜಕರೂ ಆದ ಮಂಗಳೂರಿನ ಹಿರಿಯ ವಕೀಲ ಮನೋರಾಜ್ ರಾಜೀವ್, ಅಂತಹಾ ಕೃತ್ಯವನ್ನು ಬೆಂಬಲಿಸಿ ಪ್ರಚಾರ ಮಾಡುವವರ ವಿರುದ್ಧ ಕ್ರಿಮಿನಲ್ ನ್ಯಾಯಾಂಗ ನಿಂದನೆ ಪ್ರಕರಣ ದಾಖಲಿಸಬೇಕು…
ಕಾರ್ಕಳದ ಮಾಜಿ ಶಾಸಕಗೋಪಾಲ ಭಂಡಾರಿ ಅವರ ಪುತ್ರ ಸುದೀಪ್ ವಿಧಿವಶ
ಕಾರ್ಕಳ: ಮಾಜಿ ಶಾಸಕ ದಿವಂಗತ ಹೆಚ್. ಗೋಪಾಲ ಭಂಡಾರಿ ಅವರ ಪುತ್ರ ಸುದೀಪ್ ಭಂಡಾರಿ ಅವರು ಸಾವಿಗೆ ಶರಣಾಗಿದ್ದಾರೆ. ಅವರ ಮೃತದೇಹ ಬಾರ್ಕೂರು ಬಳಿ ಪತ್ತೆಯಾಗಿದೆ. ಬ್ರಹ್ಮಾವರ ಪೊಲೀಸ್ ಠಾಣೆ ಬಳಿ ಘಟನೆ ಸಂಭವಿಸಿದ್ದು, ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ. ಹೆಬ್ರಿ ತಾಲ್ಲೂಕಿನ ನಿವಾಸಿಯಾಗಿರುವ ಸುದೀಪ್ ಅವರು, ಬಾರ್ಕೂರು ರೈಲು ಮಾರ್ಗದ ಬಳಿ ಸಾವಿಗೆ ಶರಣಾಗಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಸುದೀಪ್ ಅವರ ತಂದೆ ಹೆಚ್. ಗೋಪಾಲ ಭಂಡಾರಿ ಅವರು 1999ರಲ್ಲಿ ಮತ್ತು ನಂತರ 2008ರಲ್ಲಿ ಕಾರ್ಕಳ ವಿಧಾನಸಭಾ ಕ್ಷೇತ್ರದಿಂದ ಎರಡು ಅವಧಿ ಶಾಸಕರಾಗಿದ್ದರು. ಅವರು ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರಾಗಿದ್ದು, ತಮ್ಮ ಪ್ರಾಮಾಣಿಕತೆ ಮತ್ತು ಸರಳ ರಾಜಕೀಯ ಜೀವನಕ್ಕಾಗಿ ಹೆಸರುವಾಸಿಯಾಗಿದ್ದರು.
ದೀಪಾವಳಿ ಹಬ್ಬದ ಪ್ರಯುಕ್ತ 2500 ಹೆಚ್ಚುವರಿ ಬಸ್ಸುಗಳ ವಿಶೇಷ ಸಾರಿಗೆ ವ್ಯವಸ್ಥೆ ಕಲ್ಪಿಸಿದ KSRTC
ಬೆಂಗಳೂರು: ದೀಪಾವಳಿ ಹಬ್ಬದ ಪ್ರಯುಕ್ತ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ (KSRTC) ಸುಮಾರು 2500 ಹೆಚ್ಚುವರಿ ಬಸ್ಸುಗಳ ವಿಶೇಷ ಸಾರಿಗೆ ವ್ಯವಸ್ಥೆ ಕಲ್ಪಿಸಿದೆ. ಹಲವು ದಿನಗಳ ರಜೆಯ ನಡುವೆ ದೀಪಾವಳಿ ಸಂಭ್ರಮಿಸಲು ಊರುಗಳಿಗೆ ತೆರಳುವ ಮಂದಿಗೆ ಅನುಕೂಲವಾಗುವಂತೆ ನಿಗಮವು ಈ ಹೆಚ್ಚುವರಿ ಬಸ್ ಸೌಕರ್ಯ ಮಾಡಿದೆ. ಬೆಂಗಳೂರು ಸಹಿತ ರಾಜ್ಯದ ನಗರಗಳಲ್ಲಿ ನೆಲೆಸಿರುವ ಮಂದಿ ದೀಪಗಳ ಹಬ್ಬದಲ್ಲಿ ಪಾಲ್ಗೊಳ್ಳುವುದರಿಂದ ವಂಚಿತರಾಗಬಾರದೆಂಬ ಹಿನ್ನೆಲೆಯಲ್ಲಿ ಪ್ರತೀವರ್ಷದಂತೆ ಈಬಾರಿಯೂ ವಿಶೇಷ ಬಸ್ ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ನಿಗಮದ ಅಧಿಕಾರಿಗಳು ತಿಳಿಸಿದ್ದಾರೆ. 20.10.2025ರಂದು ನರಕ ಚತುರ್ದಶಿ, ದಿನಾಂಕ 22.10.2025ರಂದು ಬಲಿಪಾಡ್ಯಮಿ ಹಬ್ಬವಿರುವುದರಿಂದ ಕರಾರಸಾ ನಿಗಮವು, ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ 17.10.2025 ರಿಂದ 20.10.2025 ರವರೆಗೆ ಬೆಂಗಳೂರಿನಿಂದ ಈ ಕೆಳಕಂಡ ಸ್ಥಳಗಳಿಗೆ 2500 ಹೆಚ್ಚುವರಿ ವಾಹನಗಳ ವಿಶೇಷ ಸಾರಿಗೆ ವ್ಯವಸ್ಥೆ ಮಾಡಿದೆ. ನಂತರ ರಾಜ್ಯದ ಮತ್ತು ಅಂತರರಾಜ್ಯದ ವಿವಿಧ ಸ್ಥಳಗಳಿಂದ ಬೆಂಗಳೂರಿಗೆ 22.10.2025 ಹಾಗೂ…
