ಪ್ರವಾಹ ಸ್ಥಳಗಳಿಗೆ ಬಿಜೆಪಿ ನಾಯಕರ ಭೇಟಿ; ಸರ್ಕಾರದ ನಿರ್ಲಕ್ಷ್ಯ ಬಗ್ಗೆ ಟೀಕೆ

ವಿಜಯಪುರ: ವಿಜಯಪುರದಲ್ಲಿ ಪ್ರವಾಹ ಮತ್ತು ಅತಿಯಾದ ಮಳೆಯ ಪರಿಣಾಮವಾಗಿ ಬೆಳೆ ಹಾನಿ ಹಿನ್ನೆಲೆಯಲ್ಲಿ ಕರ್ನಾಟಕ ಬಿಜೆಪಿ ಶನಿವಾರ ರಾಜ್ಯ ಸರ್ಕಾರವನ್ನು ತಕ್ಷಣ ಬೆಳೆ ಹಾನಿ ಸಮೀಕ್ಷೆ ನಡೆಸಿ ರೈತರಿಗೆ ಪರಿಹಾರ ನೀಡಲು ಒತ್ತಾಯಿಸಿದೆ. ವಿಜಯಪುರ ಜಿಲ್ಲೆಯಲ್ಲಿ ಪ್ರವಾಹದಿಂದ ಹಾನಿಗೊಳಗಾದ ಪ್ರದೇಶಗಳು ಹಾಗೂ ಕಡಲೆ, ಸೂರ್ಯಕಾಂತಿ ಮತ್ತು ಕಬ್ಬಿನ ಬೆಳೆ ಹಾನಿ ಸಂಭವಿಸಿರುವ ತೋಟಗಳಿಗೆ ಭೇಟಿ ನೀಡಿದ ನಂತರ, ರಾಜ್ಯ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್. ಅಶೋಕ ಅವರು ಸರ್ಕಾರದ ಕಡೆಗೆ ಶಬ್ದ ಎತ್ತಿ, “ಸಂಕಷ್ಟದಲ್ಲಿರುವ ರೈತರಿಗೆ ತಕ್ಷಣ ಪರಿಹಾರ ನೀಡಬೇಕು” ಎಂದು ತಿಳಿಸಿದ್ದಾರೆ. ಬಿಜೆಪಿ ಪಕ್ಷದ ವಿಧಾನ ಪರಿಷತ್ತಿನ ಮುಖ್ಯ ಸಚೇತಕ ಎನ್. ರವಿಕುಮಾರ್, ಮಾಜಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಮತ್ತು ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ, ಸಂಸದರು ರಮೇಶ್ ಜಿಗಜಿಣಗಿ, ಪಿ.ಸಿ. ಗದ್ದಿಗೌಡರ್ ಮತ್ತು ಇತರರು ಅಶೋಕ ಅವರ ನೇತೃತ್ವದಲ್ಲಿ ನಿಯೋಗ ರೂಪಿಸಿಕೊಂಡು…

“ನವೆಂಬರ್‌ನಲ್ಲಿ ಬದಲಾವಣೆ ಆಗುತ್ತದೆ ಎನ್ನುವುದು ಸುಳ್ಳು” — ಮಾಜಿ ಸಚಿವ ಕೆ.ಎನ್. ರಾಜಣ್ಣ

ತುಮಕೂರು: “ನವೆಂಬರ್‌ನಲ್ಲಿ ಕ್ರಾಂತಿ ಅಥವಾ ಸರ್ಕಾರ ಬದಲಾವಣೆ ಆಗುತ್ತದೆ ಎನ್ನುವುದು ಸಂಪೂರ್ಣ ಸುಳ್ಳು,” ಎಂದು ಮಾಜಿ ಸಚಿವ ಕೆ.ಎನ್. ರಾಜಣ್ಣ ಸ್ಪಷ್ಟಪಡಿಸಿದ್ದಾರೆ. ತುಮಕೂರಿನಲ್ಲಿ ಮಾಧ್ಯಮದೊಂದಿಗೆ ಮಾತನಾಡಿದ ಅವರು, “ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಐದು ವರ್ಷಗಳ ಅವಧಿ ಪೂರೈಸುತ್ತದೆ. ಬದಲಾವಣೆಯ ಯಾವುದೇ ಸಾಧ್ಯತೆ ಇಲ್ಲ,” ಎಂದರು. ಅವರು ಮುಂದುವರಿದು, “ಮುಂದಿನ ದಿನಗಳಲ್ಲಿ ಕಾಂಗ್ರೆಸ್ ಪಕ್ಷವು ಕಾರ್ಪೊರೇಷನ್, ಜಿಲ್ಲಾ ಪಂಚಾಯತ್ ಹಾಗೂ ತಾಲೂಕು ಪಂಚಾಯತ್ ಚುನಾವಣೆಗಳನ್ನು ಶೀಘ್ರದಲ್ಲೇ ನಡೆಸುವ ಉದ್ದೇಶ ಹೊಂದಿದೆ,” ಎಂದರು. ನವೆಂಬರ್‌ನಲ್ಲಿ ಸರ್ಕಾರದಲ್ಲಿ ಬದಲಾವಣೆ ಅಥವಾ ಕ್ರಾಂತಿ ಆಗಲಿದೆ ಎಂಬ ಕೆಲವು ವದಂತಿಗಳ ಬಗ್ಗೆ ಪ್ರತಿಕ್ರಿಯಿಸಿದ ರಾಜಣ್ಣ, “ಇಂತಹ ಊಹಾಪೋಹಗಳಿಗೆ ಯಾವುದೇ ಆಧಾರವಿಲ್ಲ. ಜನರನ್ನು ತಪ್ಪು ದಾರಿಗೆಳೆವ ಪ್ರಯತ್ನ ಮಾತ್ರ ನಡೆಯುತ್ತಿದೆ,” ಎಂದು ಹೇಳಿದರು.

ಕೋಟ್ಯಂತರ ಜನರ ಜೀವನದಲ್ಲಿ ಬದಲಾವಣೆ ತಂದ ಗ್ಯಾರಂಟಿ: ಸುರ್ಜೆವಾಲಾ

ಬೆಂಗಳೂರು: ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಜಾರಿಗೊಳಿಸಿರುವ ಐದು ಪಂಚಗ್ಯಾರಂಟಿ ಯೋಜನೆಗಳು ಕೇವಲ ಜನಪರ ಯೋಜನೆಗಳಲ್ಲ. ಬದಲಿಗೆ ಇವು ‘ಸಾಮಾಜಿಕ ನ್ಯಾಯ’ವನ್ನು ಎತ್ತಿ ಹಿಡಿದು ಕೋಟ್ಯಂತರ ಜನರ ಜೀವನದಲ್ಲಿ ಬದಲಾವಣೆಯನ್ನು ತಂದಿವೆ. ಆದರೆ, ಈಗ ಕಾಂಗ್ರೆಸ್‌ನ ಗ್ಯಾರಂಟಿಗಳನ್ನು ವಿರೋಧಿಸಲು ಮಾಜಿ ಪ್ರಧಾನಿಗಳಾದ ಶ್ರೀ ಎಚ್.ಡಿ. ದೇವೇಗೌಡರನ್ನೇ ಬಿಜೆಪಿ ಕಣಕ್ಕಿಳಿಸಿದೆ ಎಂದು ಎಐಸಿಸಿ ಕಾರ್ಯದರ್ಶಿ ಹಾಗೂ ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಆರೋಪಿಸಿದ್ದಾರೆ. ಗ್ಯಾರಂಟಿ ಯೋಜನೆಗಳಿಂದ ರಾಜ್ಯದ ಆರ್ಥಿಕ ಪರಿಸ್ಥಿತಿ ಹದಗೆಟ್ಟಿದೆ ಎಂಬ ಜೆಡಿಎಸ್ ವರಿಷ್ಠ ಹಾಗೂ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ಹೇಳಿಕೆಗೆ ಪ್ರತಿಕ್ರಿಯೆ ನೀಡಿರುವ ಸುರ್ಜೇವಾಲಾ, ಬಿಜೆಪಿ-ಜೆಡಿಎಸ್ ಮೈತ್ರಿಯ ದ್ವೇಷಕ್ಕೆ ಮಿತಿಯೇ ಇಲ್ಲ. ಜನರ ಬದುಕಿಗೆ ಬೆಳಕಾಗಿರುವ ಈ ಯೋಜನೆಗಳನ್ನು ವಿರೋಧಿಸಲು ದೇವೇಗೌಡರನ್ನೇ ಬಿಜೆಪಿ ಮುಂದೆ ಬಿಟ್ಟಿದೆ. ಇಂತಹ ‘ಕುರುಡು ದೃಷ್ಟಿಯುಳ್ಳ ಪಕ್ಷಗಳು’ ನಾಚಿಕೆಪಡಬೇಕು ಎಂದು ಖಂಡಿಸಿದ್ದಾರೆ. ಗ್ಯಾರಂಟಿಗಳಿಂದ ಆದ ಪರಿವರ್ತನೆ: ಈ ಯೋಜನೆಗಳ…

ರಾಜ್ಯದ ಸಾಮಾಜಿಕ, ಆರ್ಥಿಕ ಸ್ಥಿತಿಗೆ ‘ಶಕ್ತಿ’ ನೀಡಿದ ಗ್ಯಾರೆಂಟಿ.. ಅಧ್ಯಯನ ವರದಿಯ ಹೈಲೈಟ್ಸ್ ಹೀಗಿದೆ.

ನವದೆಹಲಿ: ಕಳೆದ ಎರಡು ವರ್ಷಗಳಲ್ಲಿ ಜಾರಿಗೆ ತಂದ ಕರ್ನಾಟಕ ಸರ್ಕಾರದ ಐದು ಗ್ಯಾರೆಂಟಿ ಯೋಜನೆಗಳು ಕರ್ನಾಟಕದಲ್ಲಿ ಪರಿಣಾಮಕಾರಿ ಬದಲಾವಣೆಯನ್ನು ತಂದಿವೆ ಎಂದು ಅಖಿಲ ಭಾರತ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿ (ಸಂವಹನ) ಸಂಸದ ಜೈರಾಮ್ ರಮೇಶ್ ಹೇಳಿದ್ದಾರೆ. Our statement on a new study led by @tarauk evaluating the impact of Karnataka’s guarantee schemes on the empowerment of women pic.twitter.com/hz1BNPlLnE — Jairam Ramesh (@Jairam_Ramesh) October 3, 2025 ಕರ್ನಾಟಕ ಸರ್ಕಾರದ ಗ್ಯಾರೆಂಟಿ ಯೋಜನೆಗಳ ಯಶೋಗಾಥೆ ಕುರಿತಂತೆ ಮಾಧ್ಯಮ ಹೇಳಿಕೆಯಲ್ಲಿ ಮಾಹಿತಿ ಹಂಚಿಕೊಂಡಿರುವ ಜೈರಾಮ್ ರಮೇಶ್, ನಾಲ್ಕು ಖ್ಯಾತ ಸಂಶೋಧನೆ ಮತ್ತು ಶೈಕ್ಷಣಿಕ ಸಂಸ್ಥೆಗಳನ್ನು ಒಳಗೊಂಡ ಸ್ವತಂತ್ರ ಅಧ್ಯಯನದ ಹೊಸ ವರದಿಯು ಈ ಖಾತರಿಗಳ ಫಲಿತಾಂಶಗಳನ್ನು ಸಮಗ್ರವಾಗಿ ಮೌಲ್ಯಮಾಪನ ಮಾಡುತ್ತದೆ ಎಂದಿದ್ದಾರೆ. ಅದರಲ್ಲೂ ಶಕ್ತಿ ಯೋಜನೆಯಿಂದಾಗಿ ಕರ್ನಾಟಕದಲ್ಲಿ…

ಪೇಸ್‌ಮೇಕರ್ ಶಸ್ತ್ರಚಿಕಿತ್ಸೆಯ ನಂತರ ಆಸ್ಪತ್ರೆಯಿಂದ ಖರ್ಗೆ ಡಿಸ್ಚಾರ್ಜ್

ಬೆಂಗಳೂರು: ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಯಶಸ್ವಿ ಪೇಸ್‌ಮೇಕರ್ ಶಸ್ತ್ರಚಿಕಿತ್ಸೆ ನಂತರ ಬೆಂಗಳೂರಿನ ಎಂ.ಎಸ್. ರಾಮಯ್ಯ ಆಸ್ಪತ್ರೆ ಯಿಂದ ಬಿಡುಗಡೆಯಾಗಿದ್ದಾರೆ. ಕಾಂಗ್ರೆಸ್ ಬಿಡುಗಡೆ ಮಾಡಿರುವ ಹೇಳಿಕೆಯಲ್ಲಿ, ‘ಮಲ್ಲಿಕಾರ್ಜುನ ಖರ್ಗೆ ಅವರನ್ನು ಸಂಜೆ ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದೆ. ಅವರು ಆರೋಗ್ಯವಾಗಿದ್ದಾರೆ ಮತ್ತು ಎಲ್ಲರ ಶುಭ ಹಾರೈಕೆಗಳಿಗೆ ಧನ್ಯವಾದಗಳು” ಎಂದು ಹೇಳಲಾಗಿದೆ. ಖರ್ಗೆ ಆಯಾಸ ಮತ್ತು ಉಸಿರಾಟದ ತೊಂದರೆಗಳಿಂದ ಬಳಲುತ್ತಿದ್ದುದರಿಂದ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ವೈದ್ಯರ ಸಲಹೆಯಂತೆ ಅವರು ಶೀಘ್ರವೇ ತಮ್ಮ ಚಟುವಟಿಕೆಗಳನ್ನು ಪುನರಾರಂಭಿಸಬಹುದು ಎಂದು ತಿಳಿಸಲಾಗಿದೆ. ಈ ಕುರಿತು ಅವರ ಪುತ್ರ ಪ್ರಿಯಾಂಕ್ ಖರ್ಗೆ ಮಾಧ್ಯಮದೊಂದಿಗೆ ಮಾತನಾಡಿ, ಪೇಸ್‌ಮೇಕರ್ ಶಸ್ತ್ರಚಿಕಿತ್ಸೆ ಸಣ್ಣ ಪ್ರಕ್ರಿಯೆಯಾಗಿತ್ತು. ಚಿಕಿತ್ಸೆ ಬಳಿಕ ಅವರು ಸ್ಥಿರರಾಗಿದ್ದಾರೆ. ಅಕ್ಟೋಬರ್ 3ರಿಂದ ತಮ್ಮ ಕರ್ತವ್ಯವನ್ನು ಪುನರಾರಂಭಿಸಲಿದ್ದಾರೆ ಎಂದು ತಿಳಿಸಿದ್ದಾರೆ. ಶಸ್ತ್ರಚಿಕಿತ್ಸೆಯ ನಂತರ ಪ್ರಧಾನಿ ನರೇಂದ್ರ ಮೋದಿ ಅವರು ಖರ್ಗೆಯೊಂದಿಗೆ ಮಾತನಾಡಿ ಶೀಘ್ರ ಗುಣಮುಖರಾಗುದುವಂತೆ ಹಾರೈಸಿದ್ದರು. ಮುಖ್ಯಮಂತ್ರಿ ಸಿದ್ದರಾಮಯ್ಯ…

ಮೈಸೂರು ದಸರಾ ಮೆರವಣಿಗೆಯಲ್ಲಿ ಕುತೂಹಲ ಕೆರಳಿಸಿದ ‘ಶಕ್ತಿ’ ಸ್ತಬ್ಧಚಿತ್ರ

ಮೈಸೂರು: ಜಗದ್ವಿಖ್ಯಾತ ಮೈಸೂರು ದಸರಾ ಜಂಬೂ ಸವಾರಿಯಲ್ಲಿ ಈ ಬಾರಿ ಸ್ತಬ್ಧಚಿತ್ರಗಳ ಅದ್ಧೂರಿ ಮೆರವಣಿಗೆ ವೈಭವ ಹೆಚ್ಚಿಸಿತು. ಚಿನ್ನದ ಅಂಬಾರಿಯಲ್ಲಿ ಕಂಗೊಳಿಸುತ್ತಿದ್ದ ನಾಡದೇವಿ ಚಾಮುಂಡೇಶ್ವರಿಯನ್ನು ಹೊತ್ತ ಅಭಿಮನ್ಯು ಆನೆ ಲಕ್ಷಾಂತರ ಜನರನ್ನು ರಂಜಿಸಿತು. 750 ಕೆ.ಜಿ ತೂಕದ ಅಂಬಾರಿ ಹೊತ್ತ ಅಭಿಮನ್ಯು ಗಾಂಭೀರ್ಯದಿಂದ ಹೆಜ್ಜೆ ಹಾಕಿದ ದೃಶ್ಯ ಮನಮುಟ್ಟಿತು. ಕುಮ್ಕಿ ಆನೆಗಳು ಕಾವೇರಿ, ರೂಪಾ ಸಾಥ್ ನೀಡಿದವು. ಅರಮನೆಯ ಬಲರಾಮ ದ್ವಾರದಿಂದ ಪ್ರಾರಂಭವಾದ ಜಂಬೂ ಸವಾರಿ, ಸುಮಾರು 5 ಕಿ.ಮೀ ಉದ್ದದ ಮಾರ್ಗದಲ್ಲಿ ಸಾಗಿತು. ಮಾರ್ಗಮಧ್ಯೆ ನಡೆದ 58 ಸ್ತಬ್ಧಚಿತ್ರಗಳು ಜನರ ಕುತೂಹಲ ಕೆರಳಿಸಿದವು. ರಾಜ್ಯ ಸರ್ಕಾರದ ವಿವಿಧ ಯೋಜನೆಗಳು ಹಾಗೂ ಅಭಿವೃದ್ಧಿ ಕಾರ್ಯಕ್ರಮಗಳನ್ನು ಜನರ ಮುಂದಿಡುವ ಉದ್ದೇಶದಿಂದ ಸ್ತಬ್ಧಚಿತ್ರಗಳನ್ನು ರೂಪಿಸಲಾಗಿತ್ತು. ವಿಶೇಷವಾಗಿ ಮಹಿಳೆಯರಿಗೆ ಉಚಿತ ಸಾರಿಗೆ ಒದಗಿಸಿರುವ ‘ಶಕ್ತಿ’ ಗ್ಯಾರೆಂಟಿ ಯೋಜನೆಯ ಸ್ತಬ್ಧಚಿತ್ರ ಜನಮೆಚ್ಚುಗೆಗೆ ಪಾತ್ರವಾಯಿತು. ಸಮಾಜದಲ್ಲಿ ಬದಲಾವಣೆಗೆ ಕಾರಣವಾಗಿರುವ ಈ ಯೋಜನೆಯ ಯಶಸ್ಸು ಮೆರವಣಿಗೆಯಲ್ಲಿ…

ಗಾಂದೀಜಿ ಹಾದಿಯಲ್ಲಿ ರಾಜ್ಯ ಸರ್ಕಾರ; ಆರ್ಥಿಕ ದುರ್ಬಲರಿಗೆ ಗ್ಯಾರಂಟಿ ಮೂಲಕ ‘ಶಕ್ತಿ’ಯಾಗಿದ್ದೇವೆ ಎಂದ ರಾಮಲಿಂಗಾ ರೆಡ್ಡಿ

ಬೆಂಗಳೂರು: ವಿಧಾನಸೌಧದಲ್ಲಿ ಸರ್ಕಾರದ ವತಿಯಿಂದ ಆಯೋಜಿಸಿದ್ದ ಮಹಾತ್ಮ ಗಾಂಧಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರೀ ರವರ ಜಯಂತಿ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿಗಳ ಅನುಪಸ್ಥಿತಿಯಲ್ಲಿ, ಸರ್ಕಾರದ‌ ಪರವಾಗಿ ಸಾರಿಗೆ ಹಾಗೂ ಮುಜರಾಯಿ ಸಚಿವ ರಾಮಲಿಂಗಾ ರೆಡ್ಡಿ ಅವರು ರಾಷ್ಟ್ರನಾಯಕರಿಗೆ ಗೌರವ ಸಲ್ಲಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ರಾಮಲಿಂಗಾ ರೆಡ್ಡಿ ಭಾರತೀಯರ ಮನಸ್ಸಿನಲ್ಲಿ ಅಚ್ಚಳಿಯದೇ ಸದಾ ಶಾಶ್ವತವಾಗಿರುವ ಹೆಸರು ಅಂದರೆ ಅದು ರಾಷ್ಟ್ರಪಿತ ಮಹಾತ್ಮ ಗಾಂಧಿ. ಅಹಿಂಸಾ ಮಾರ್ಗದಲ್ಲಿ ನಡೆದು ದೇಶಕ್ಕೆ ಸ್ವಾತಂತ್ರ್ಯ ಗಳಿಸಿಕೊಟ್ಟ ಗಾಂಧಿಜಿ ದೇಶ ಕಂಡ ಮಹಾನ್ ನಾಯಕ ಎಂದರು. ದೇಶದ ಸ್ವಾತಂತ್ರ್ಯ ಹೋರಾಟದಲ್ಲಿ ಹಲವು ಮಹನೀಯರು ಮಹತ್ವದ ಪಾತ್ರವಹಿಸಿದ್ದಾರೆ. ಮಹಾರಾಷ್ಟ್ರ ಪ್ರಾಂತ್ಯದಲ್ಲಿ ಗೋಪಾಲಕೃಷ್ಣ ಗೋಖಲೆ (ಗಾಂಧಿಯವರು ಗುರುಗಳು), ಲಾಲಲಜಪತರಾಯ್ ಪಂಜಾಬ್, ಬಿಪಿನ್ ಚಂದ್ರ ಪಾಲ್ ಬಂಗಾಳ, ಬಾಲಗಂಗಾಧರ ನಾಥ್ ತಿಲಕ್ , ಮೋತಿಲಾಲ್ ನೆಹರು, ಇವರೆಲ್ಲರೂ 1930 ರ ಮುಂಚೆಯೇ ಸ್ವಾತಂತ್ರ್ಯ ಹೋರಾಟದಲ್ಲಿ ಭಾಗಿಯಾಗಿದ್ದರು. ಪಶ್ಚಿಮ‌ ಬಂಗಾಳದಲ್ಲಿ…

ಆರ್‌ಎಸ್‌ಎಸ್ ಶತಮಾನೋತ್ಸವ: ಸಾವಿರಾರು ಸ್ವಯಂಸೇವಕರ ವಿಜಯದಶಮಿಯ ಪಥಸಂಚಲನ

ನವದೆಹಲಿ: ರಾಷ್ಟ್ರಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ತನ್ನ ಸ್ಥಾಪನೆಯ 100 ವರ್ಷಗಳನ್ನು ಪೂರೈಸಿ 101ನೇ ವರ್ಷಕ್ಕೆ ಕಾಲಿಟ್ಟಿದೆ. ಈ ಹಿನ್ನೆಲೆಯಲ್ಲಿ ದೇಶಾದ್ಯಂತ ಆರ್‌ಎಸ್‌ಎಸ್ ಶತಮಾನೋತ್ಸವ ಗಮನಸೆಳೆದಿದೆ. 1925ರ ವಿಜಯದಶಮಿಯಂದು ಡಾ. ಕೇಶವ್ ಬಲಿರಾಮ ಹೆಡ್ಗೆವಾರ್ ಸಂಘವನ್ನು ಸ್ಥಾಪಿಸಿದ್ದರು. ಈ ಸಂಘಟನೆಗೆ ಇದೀಗ ಶತಮಾನೋತ್ಸವ. ಈ ಹಿನ್ನೆಲೆಯಲ್ಲಿ, ದೆಹಲಿಯಲ್ಲಿ ವಿಜಯದಶಮಿ ಪೂಜೆ ಹಾಗೂ ಪಥಸಂಚಲನಗಳನ್ನು ಅದ್ದೂರಿಯಾಗಿ ಆಯೋಜಿಸಲಾಯಿತು. ಶಾಸ್ತ್ರಪೂಜೆ ಮತ್ತು ಪಥಮೆರವಣಿಗೆಗಳು ಸೇರಿದಂತೆ ದೇಶಾದ್ಯಂತ 346 ಸ್ಥಳಗಳಲ್ಲಿ ಕಾರ್ಯಕ್ರಮಗಳು ಜರುಗಿದವು. ದೆಹಲಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಾವಿರಾರು ಸ್ವಯಂಸೇವಕರು ಸಂಪೂರ್ಣ ಸಮವಸ್ತ್ರದಲ್ಲಿ ಸಾಂಪ್ರದಾಯಿಕ ಸಂಘ ಘೋಷ್ ಜೊತೆ ಪಥಸಂಚಲನ ನಡೆಸಿದರು. ಅನೇಕರು ವ್ಯವಸ್ಥಾಪನಾ ಕಾರ್ಯದಲ್ಲಿ ತೊಡಗಿಕೊಂಡಿದ್ದರು. ಪಥಸಂಚಲನ ಹಾದುಹೋದ ಮಾರ್ಗದಲ್ಲಿ ನಾಗರಿಕರು ಪುಷ್ಪಾರ್ಚನೆ ಮೂಲಕ ಸ್ವಾಗತಿಸಿದರು. ಆರ್‌ಎಸ್‌ಎಸ್ ರಾಷ್ಟ್ರೀಯ ಹಾಗೂ ಪ್ರಾಂತೀಯ ನಾಯಕರು ವಿವಿಧ ಕೇಂದ್ರಗಳಲ್ಲಿ ಭಾಗವಹಿಸಿ ಸ್ವಯಂಸೇವಕರನ್ನು ಉದ್ದೇಶಿಸಿ ಮಾತನಾಡಿದರು. ಪಶ್ಚಿಮ ವಿಹಾರ್‌ನಲ್ಲಿ ಡಾ. ಅನಿಲ್ ಅಗರ್ವಾಲ್ ಮತ್ತು ಇಂದ್ರೇಶ್…

ಸಿಎಂ ಹುದ್ದೆ ಉಳಿಸಿಕೊಳ್ಳಲು ಸಿದ್ದರಾಮಯ್ಯ ಜಾತಿ ಜನಗಣತಿ: ಜೋಶಿ ಆರೋಪ

ಧಾರವಾಡ: ರಾಜ್ಯದಲ್ಲಿ ನಡೆಯುತ್ತಿರುವ ಜಾತಿ ಜನಗಣತಿ ಕುರಿತಂತೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮೇಲೆ ಕಿಡಿಕಾರಿದ್ದಾರೆ. ಧಾರವಾಡದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಜೋಶಿ, “ಸಿದ್ದರಾಮಯ್ಯ ಐದು ವರ್ಷಗಳ ಕಾಲ ಮುಖ್ಯಮಂತ್ರಿಯಾಗುವುದಾಗಿ ಹೇಳಿಕೊಂಡಿದ್ದಾರೆ. ಆದರೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಬಣದ ನಾಯಕರು ಈಗಾಗಲೇ ನಾಯಕತ್ವ ಬದಲಾವಣೆ ಕುರಿತು ಚರ್ಚೆ ನಡೆಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ತಮ್ಮ ಹುದ್ದೆ ಉಳಿಸಿಕೊಳ್ಳಲು ರಾಜಕೀಯ ಲೆಕ್ಕಾಚಾರವಾಗಿ ಜಾತಿ ಜನಗಣತಿಯನ್ನು ಮುನ್ನಡೆಸುತ್ತಿದ್ದಾರೆ” ಎಂದು ವಾಗ್ದಾಳಿ ನಡೆಸಿದರು. ರಾಜ್ಯ ಸರ್ಕಾರ ನಡೆಸುತ್ತಿರುವ ಸಮೀಕ್ಷೆ ಅನಗತ್ಯ ಹಾಗೂ ವೈಯಕ್ತಿಕ ಪ್ರಶ್ನೆಗಳನ್ನು ಒಳಗೊಂಡಿದೆ ಎಂದು ಅವರು ಟೀಕಿಸಿದರು. “ಕ್ರಿಶ್ಚಿಯನ್ ಲಿಂಗಾಯತ ಅಥವಾ ಕ್ರಿಶ್ಚಿಯನ್ ಬ್ರಾಹ್ಮಣ ಎಂದು ವರ್ಗೀಕರಣ ಮಾಡುವುದರ ಅರ್ಥವೇನು? ಇದು ಹಿಂದೂ ಮತಾಂತರಕ್ಕೆ ಉತ್ತೇಜನ ನೀಡುವ ಸಮೀಕ್ಷೆ” ಎಂದು ಜೋಶಿ ಆಕ್ರೋಶ ವ್ಯಕ್ತಪಡಿಸಿದರು. ವೀರಶೈವ-ಲಿಂಗಾಯತ ಮಠಾಧೀಶರೂ ಸಹ ಎಲ್ಲರೂ ಹಿಂದೂಗಳೇ ಎಂಬ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.…

ಮಲ್ಲಿಕಾರ್ಜುನ ಖರ್ಗೆ ಚೇತರಿಕೆ: ಡಾ. ಶರಣಪ್ರಕಾಶ್‌ ಪಾಟೀಲ್‌

ಬೆಂಗಳೂರು: ಎಐಸಿಸಿ ಅಧ್ಯಕ್ಷರೂ ಹಾಗು ಮಾರ್ಗದರ್ಶಕರೂ ಆಗಿರುವ ಮಲ್ಲಿಕಾರ್ಜುನ ಖರ್ಗೆ ಅವರು ಈಗ ಚೇತರಿಸಿಕೊಳ್ಳುತ್ತಿದ್ದಾರೆ ಎಂದು ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಜೀವನೋಪಾಯ ಮತ್ತು ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಶರಣ ಪ್ರಕಾಶ್ ಆರ್‌. ಪಾಟೀಲ್ ತಿಳಿಸಿದ್ದಾರೆ. ಈ ಸಂಬಂಧ ಬುಧವಾರ ಪತ್ರಿಕಾ ಪ್ರಕಟಣೆ ಹೊರಡಿಸಿರುವ ಸಚಿವರು, ಬೆಂಗಳೂರಿನ ಎಂಎಸ್ ರಾಮಯ್ಯ ಆಸ್ಪತ್ರೆಗೆ ದಾಖಲಾಗಿದ್ದ ಖರ್ಗೆ ಅವರಿಗೆ ಉಸಿರಾಟ ಸಮಸ್ಯೆ ಕಾಣಿಸಿಕೊಂಡಿತ್ತು. ವೈದ್ಯರು ನಿರಂತರ ನಿಗಾ ವಹಿಸಿ ಚಿಕಿತ್ಸೆ ನೀಡಿದ್ದರಿಂದ ಈಗ ಚೇತರಿಸಿಕೊಂಡಿದ್ದಾರೆ ಎಂದು ಹೇಳಿದ್ದಾರೆ. ಸದ್ಯ ಮಲ್ಲಿಕಾರ್ಜುನ ಖರ್ಗೆ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರ ಆರೋಗ್ಯದ ಮೇಲೆ ಹಿರಿಯ ವೈದ್ಯರು ನಿಗಾ ಇರಿಸಿದ್ದಾರೆ. ಯಾವುದೇ ಆತಂಕಪಡುವ ಅಗತ್ಯವಿಲ್ಲ. ಶೀಘ್ರದಲ್ಲೇ ಗುಣಮುಖರಾಗಲಿದ್ದಾರೆ ಎಂದು ಸಚಿವರು ತಿಳಿಸಿದ್ದಾರೆ. ವೈದ್ಯರ ಸಲಹೆ-ಸೂಚನೆಯಂತೆ ಮಲ್ಲಿಕಾರ್ಜುನ ಖರ್ಗೆ ಅವರು ಒಂದು ವಾರಗಳ ಕಾಲ ವಿಶ್ರಾಂತಿ ಪಡೆಯಲಿದ್ದಾರೆ. ನಂತರ ಎಂದಿನ ದೈನಂದಿನ ಕಾರ್ಯ…