ಜಾತಿ ಸಮೀಕ್ಷೆ ಟೀಕಿಸಿದ ಜೋಶಿ, ಸೂರ್ಯ ವಿರುದ್ಧ ಬಿಜೆಪಿ ಹೈಕಮಾಂಡ್’ಗೆ ‘ಕೈ’ದೂರು

ಬೆಂಗಳೂರು: ರಾಜ್ಯ ಸರ್ಕಾರ ಕೈಗೊಂಡಿರುವ ಜಾತಿ ಸಮೀಕ್ಷೆ ರಾಜಕೀಯ ಪಕ್ಷಗಳ ಜಂಘಿಕುಸ್ತಿಗೆ ಕಾರಣಾವಾಗಿದೆ. ಇದೀಗ ಈ ಜಟಾಪಟಿ ಬಿಜೆಪಿ ಹೈಕಮಾಂಡ್ ಅಂಗಳ ತಲುಪಿದೆ. ಕರ್ನಾಟಕ ಸರ್ಕಾರದ ಒಬಿಸಿ ಸಮೀಕ್ಷೆಯನ್ನು ವಿರೋಧಿಸಿದ್ದಕ್ಕಾಗಿ ಮತ್ತು ಒಬಿಸಿ ಮೀಸಲಾತಿ ಬಗ್ಗೆ ಬಿಜೆಪಿಯ ಸ್ಪಷ್ಟ ನಿಲುವನ್ನು ಸ್ಪಷ್ಟಪಡಿಸಲು ಕೋರಿ ಕಾಂಗ್ರೆಸ್ ಶಾಸಕ ರಮೇಶ್ ಬಾಬು ಅವರು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರಿಗೆ ಪತ್ರ ಬರೆದಿದ್ದಾರೆ. ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಮತ್ತು ಬೆಂಗಳೂರು ದಕ್ಷಿಣ ಸಂಸದ ಶ್ರೀ ತೇಜಸ್ವಿ ಸೂರ್ಯ ಅವರ ನಡೆ ಬಗ್ಗೆ ಈ ಪತ್ರದಲ್ಲಿ ರಮೇಶ್ ಬಾಬು ಆಕ್ರೋಶ ಹೊರಹಾಕಿದ್ದಾರೆ. ಸಾಮಾಜಿಕ ನ್ಯಾಯ, ಸಮಾನ ಪ್ರಾತಿನಿಧ್ಯ ಮತ್ತು ಹಿಂದುಳಿದ ವರ್ಗಗಳ ಹಿತಾಸಕ್ತಿಗಳ ರಕ್ಷಣೆಯನ್ನು ಖಚಿತಪಡಿಸಿಕೊಳ್ಳಲು ಸಾಂವಿಧಾನಿಕ ನಿಬಂಧನೆಗಳು ಮತ್ತು ಸುಪ್ರೀಂ ಕೋರ್ಟ್ ತೀರ್ಪುಗಳಿಗೆ ಅನುಗುಣವಾಗಿ ಕರ್ನಾಟಕದಲ್ಲಿ ಒಬಿಸಿ ಸಮೀಕ್ಷೆಯನ್ನು ಕೈಗೊಳ್ಳಲಾಗುತ್ತಿದೆ. ಕಲ್ಯಾಣ ನೀತಿಗಳನ್ನು ರೂಪಿಸಲು ಮತ್ತು ಮೀಸಲಾತಿ…

60% ಕಮಿಷನ್‌ ಆರೋಪ; ಸಿದ್ದುಗೆ ಬಿಜೆಪಿ ಗುದ್ದು

ಬೆಂಗಳೂರು: ಹಿಂದಿನ ಬಿಜೆಪಿ ಸರ್ಕಾರದ ವಿರುದ್ಧ 40% ಕಮೀಷನ್ ಆರೋಪ ಬಗ್ಗೆ ಅಭಿಯಾನ ನಡೆಸಿ ಗೆದ್ದು ಬಂದ ಸಿದ್ದರಾಮಯ್ಯ ಅವರಿಗೆ ಇದೀಗ ತಾವು ಬಿಟ್ಟ ಬಾಣವೇ ತಿರುಗಿ ಬಂದಂತಾಗಿದೆ. ಗುತ್ತಿಗೆದಾರರು ಬರೆದಿರುವ ಪತ್ರವನ್ನು ಮುಂದಿಟ್ಟು ಪ್ರತಿಪಕ್ಷ ಬಿಜೆಪಿ, ಸಿದ್ದರಾಮಯ್ಯ ಸರ್ಕಾರದ ವಿರುದ್ಧ 60% ಕಮಿಷನ್‌ ಆರೋಪ ಬಗ್ಗೆ ಅಭಿಯಾನ ಆರಂಭಿಸಿದಂತಿದೆ. ಈ ಕುರಿತಂತೆ ಬಿಜೆಪಿಯು ಸಾಮಾಜಿಕ ಜಾಲತಾಣದಲ್ಲಿ ಹಾಕಿರುವ ಪೋಸ್ಟ್ ಗಮನಸೆಳೆದಿದೆ. ಮುಖ್ಯಮಂತ್ರಿ @siddaramaiah ನೇತೃತ್ವದ ರಾಜ್ಯ ಕಾಂಗ್ರೆಸ್‌ ಸರ್ಕಾರದಲ್ಲಿ ಕಮಿಷನ್‌ ಕಳ್ಳಾಟ ಭರ್ಜರಿಯಾಗಿ ನಡೆಯುತ್ತಿದೆ. ಗುತ್ತಿಗೆದಾರರ ಸಂಘವೇ ಮುಖ್ಯಮಂತ್ರಿಗಳಿಗೆ ಪತ್ರ ಬರೆದು 60% ಕಮಿಷನ್‌ ಆರೋಪವನ್ನು ಅಧಿಕೃತಗೊಳಿಸಿದೆ. ಈ ಹಿಂದೆ ವಿಪಕ್ಷದಲ್ಲಿದ್ದಾಗ ಸುಳ್ಳು ಆರೋಪ ಮಾಡಿ Pay-CM ಅಭಿಯಾನ ನಡೆಸಿದ್ದ @INCKarnataka ನಾಯಕರಿಗೆ ಅದೇ… pic.twitter.com/SI51KVXzKn — BJP Karnataka (@BJP4Karnataka) September 30, 2025 ‘ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಕಾಂಗ್ರೆಸ್‌ ಸರ್ಕಾರದಲ್ಲಿ ಕಮಿಷನ್‌…

ಉತ್ತರ ಕರ್ನಾಟಕಕ್ಕೆ 3,000 ಕೋಟಿ ರೂ. ಪ್ರವಾಹ ಪರಿಹಾರ ಬಿಡುಗಡೆಗೆ ಪ್ರತಿಪಕ್ಷ ಆಗ್ರಹ

ಬೆಂಗಳೂರು: ಪ್ರವಾಹದಿಂದ ತತ್ತರಿಸಿರುವ ಉತ್ತರ ಕರ್ನಾಟಕಕ್ಕೆ ಸರ್ಕಾರ 3,000 ಕೋಟಿ ರೂ. ಪ್ರವಾಹ ಪರಿಹಾರ ನೀಡಬೇಕು ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ ಒತ್ತಾಯಿಸಿದ್ದಾರೆ. ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿ ಪ್ರವಾಹ ಬಂದು ಸಾವು ನೋವು ಉಂಟಾಗಿದೆ. ಕಲಬುರ್ಗಿ ಹಾಗೂ ಬೀದರ್‌ನಲ್ಲಿ ಹೆಚ್ಚು ಹಾನಿ ಉಂಟಾಗಿದೆ. ಈವರೆಗೆ ಯಾವುದೇ ಸಚಿವರು ಕ್ರಮ ವಹಿಸಿಲ್ಲ. ಬಿಜೆಪಿ ಅವಧಿಯಲ್ಲಿ ಡಬಲ್‌ ಪರಿಹಾರ ನೀಡಲಾಗಿತ್ತು. ಸರ್ಕಾರದ ಬಳಿ ಹಣವಿದ್ದರೆ ಸಮರೋಪಾದಿಯಲ್ಲಿ ಕೆಲಸ ಮಾಡುತ್ತಿದ್ದರು. ಹಣವಿಲ್ಲದೆ ಸಚಿವರು ಹಾಗೂ ಸಿಎಂ ಮುಖ ತಪ್ಪಿಸಿಕೊಂಡು ಓಡಾಡುತ್ತಿದ್ದಾರೆ. ಸರ್ಕಾರದ ಸಂಪೂರ್ಣ ಗಮನ ಜಾತಿ ಸಮೀಕ್ಷೆಯ ಕಡೆಗಿದೆ. ಮನೆ ಹಾನಿಗೆ ಹಾಗೂ ಬೆಳೆ ಹಾನಿಗೆ ಎಷ್ಟು ಪರಿಹಾರ ನೀಡಲಾಗುವುದು ಎಂದು ಸರ್ಕಾರ ಸ್ಪಷ್ಟವಾಗಿ ತಿಳಿಸಬೇಕು ಎಂದು ಆಗ್ರಹಿಸಿದರು. ಕೇಂದ್ರ ಸರ್ಕಾರ ತನ್ನ ಪಾಲಿನ ಪರಿಹಾರದ ಹಣವನ್ನು ನೀಡುತ್ತದೆ. ರಾಜ್ಯ ಸರ್ಕಾರದಿಂದ ತಕ್ಷಣ 3,000 ಕೋಟಿ ರೂ. ಪರಿಹಾರ ಘೋಷಿಸಿ ವಿತರಣೆ…

ಜಾತಿ ಸಮೀಕ್ಷೆಯಲ್ಲಿ ವೈಯಕ್ತಿಕ ಮಾಹಿತಿ ನೀಡಬೇಡಿ: ಬಿಜೆಪಿ ನಾಯಕರ ಸಲಹೆ

ಬೆಂಗಳೂರು: ಕಾಂಗ್ರೆಸ್‌ ಸರ್ಕಾರ ನಡೆಸುತ್ತಿರುವ ಜಾತಿ ಸಮೀಕ್ಷೆಯಲ್ಲಿ ಜನರು ವೈಯಕ್ತಿಕ ಮಾಹಿತಿಗಳನ್ನು ನೀಡಲೇಬೇಕು ಎಂದೇನಿಲ್ಲ. ಸೂಕ್ತ ಎನಿಸಿದ ಪ್ರಶ್ನೆಗಳಿಗೆ ಮಾತ್ರ ಜನರು ಉತ್ತರ ನೀಡಬೇಕು. ಸಮೀಕ್ಷೆ ವಿಚಾರದಲ್ಲಿ ಜನರು ಎಚ್ಚರವಾಗಿರಬೇಕು ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ಸರ್ಕಾರ ಮಾಡುತ್ತಿರುವ ಜಾತಿ ಸಮೀಕ್ಷೆಯಲ್ಲಿ ಜನರು ಎಲ್ಲ ವಿವರವನ್ನು ಬಹಿರಂಗೊಳಿಸಬಾರದು. ಜನರ ಬಳಿ ಏನೇನೋ ಪ್ರಶ್ನೆಗಳನ್ನು ಕೇಳುತ್ತಿದ್ದಾರೆ. ಇಂತಹ ಪ್ರಶ್ನೆಗಳಿಗೆ ಉತ್ತರ ನೀಡುವುದು ಜನರಿಗೆ ಬಿಟ್ಟ ವಿಚಾರ. ಇದನ್ನು ಕಾಂಗ್ರೆಸ್‌ ರಾಜಕೀಯಕ್ಕೆ ಬಳಸಿಕೊಳ್ಳುತ್ತಿದೆ. ಖಜಾನೆಯಲ್ಲಿ ಹಣವಿಲ್ಲದೆ, ರೇಷನ್‌ ಕಾರ್ಡ್ ರದ್ದು ಮಾಡುತ್ತಿದ್ದಾರೆ. ಅದಕ್ಕಾಗಿ ಮಾನದಂಡ ಬೇಕಾಗುತ್ತದೆ. ಈ ಕಾರಣಕ್ಕಾಗಿ ಹಾಗೂ ಯೋಜನೆಗಳಿಗೆ ಕತ್ತರಿ ಹಾಕಲು ಜಾತಿ ಸಮೀಕ್ಷೆ ಮಾಡಲಾಗುತ್ತಿದೆ ಎಂದರು. ಮುಂದಿನ ಬಜೆಟ್‌ ರಚನೆ ಸಿಎಂ ಸಿದ್ದರಾಮಯ್ಯನವರಿಗೆ ಕಗ್ಗಂಟಾಗಿದೆ. ಅದಕ್ಕಾಗಿ ಹಣ ಉಳಿಸಬೇಕಿದೆ. ಇದು ಸಾಮಾಜಿಕ-ಶೈಕ್ಷಣಿಕ ಸಮೀಕ್ಷೆ ಅಲ್ಲ, ಇದು ಸಿದ್ದರಾಮಯ್ಯನವರ ಜಾತಿ…

“ಜಾತಿ ಗಣತಿ ಬಹಿಷ್ಕರಿಸಿ”; ರಾಜ್ಯದ ಜನತೆಗೆ ಬಿಜೆಪಿ ಕರೆ

ಬೆಂಗಳೂರು: ಜಾತಿ ಸಮೀಕ್ಷೆ ವಿಚಾರ ರಾಜಕೀಯ ಜಟಾಪಟಿಗೆ ಕಾರಣವಾಗಿದೆ. ರಾಜ್ಯ ಸರ್ಕಾರದ ನಡೆಯ ವಿರುದ್ಧ ಆಕ್ರೋಶ ವ್ಯಕ್ತಪಡಿಸಿರುವ ಪ್ರತಿಪಕ್ಷ ಬಿಜೆಪಿ ನಾಯಕರು ಜಾತಿ ಗಣತಿಯನ್ನು ಬಹಿಷ್ಕರಿಸುವಂತೆ ಕರೆ ನೀಡಿದ್ದಾರೆ. ಜಾತಿಗಣತಿ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡುತ್ತಾ ಸರ್ಕಾರದ ಕಾರ್ಯಕ್ರಮ ಬಗ್ಗೆ ಕಾಟು ಟೀಕೆ ಮಾಡಿದ ಬಿಜೆಪಿ ಸಂಸದ ತೇಜಸ್ವಿ ಸೂರ್ಯ, ರಾಜ್ಯ ಸರ್ಕಾರದ ಮೇಲೆ ನನಗೆ ನಂಬಿಕೆಯಿಲ್ಲ, ನಿಮ್ಮ ಮಾಹಿತಿ ಸುರಕ್ಷಿತವಾಗಿರಲ್ಲ. ಹಾಗಾಗಿ, ಜಾತಿಗಣತಿ ಬಹಿಷ್ಕರಿಸಿ ಎಂದು ಜನತೆಗೆ ಕರೆ ನೀಡಿದರು. ನಾನು ಜಾತಿಗಣತಿಯಲ್ಲಿ ಪಾಲ್ಗೊಳ್ಳಲ್ಲ. ನನ್ನ ಮಾಹಿತಿ ಸುರಕ್ಷಿತವಾಗಿರುತ್ತೆ ಅನ್ನೋ ನಂಬಿಕೆ ಇಲ್ಲ ಎಂದಿರುವ ತೇಜಸ್ವಿ ಸೂರ್ಯ, ನಿಮ್ಮ ಮಾಹಿತಿ ಸುರಕ್ಷಿತವಾಗಿರಲ್ಲ ಜೊತೆಗೆ, ಜಾತಿ ಜಾತಿ ಮಧ್ಯೆ ಗಲಾಟೆ ತರಲು ಇದನ್ನು ಮಾಡುತ್ತಿದ್ದಾರೆ. ಹಾಗಾಗಿ ಇದರಲ್ಲಿ ಪಾಲ್ಗೊಳ್ಳಬೇಡಿ ಎಂದು ಕರೆ ನೀಡಿದ್ದಾರೆ. ಹಿಂದೆ ಲಾಲು ಪ್ರಸಾದ್ ಯಾದವ್ ಮತ್ತು ಮುಲಾಯಂ ಸಿಂಗ್ ಯಾದವ್ ಅವರಂತಹ ನಾಯಕರು ಮಾಡಿದ…

ನಿರ್ಮಿತಿ ಕೇಂದ್ರ, ಕೆಆರ್‌ಐಡಿಎಲ್ ಮೂಲಕ ಬ್ರಹ್ಮಾಂಡ ಭ್ರಷ್ಟಾಚಾರ; ಗುತ್ತಿಗೆದಾರರ ಸಂಘ ಆರೋಪ

ಬೆಂಗಳೂರು: ಹಿಂದಿನ ಬಿಜೆಪಿ ಸರ್ಕಾರಕ್ಕೆ ಹೋಲಿಸಿದರೆ ರಾಜ್ಯದಲ್ಲಿ ಕಾಂಗ್ರೆಸ್ ನೇತೃತ್ವದ ಸರ್ಕಾರದ ಅಡಿಯಲ್ಲಿ ಭ್ರಷ್ಟಾಚಾರ ದುಪ್ಪಟ್ಟಾಗಿದೆ ಎಂದು ಕರ್ನಾಟಕ ರಾಜ್ಯ ಗುತ್ತಿಗೆದಾರರ ಸಂಘ (ಕೆಎಸ್‌ಸಿಎ) ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದು, ಈ ಬೆಳವಣಿಗೆ ಅಚ್ಚರಿಗೆ ಕಾರಣವಾಗಿದೆ. ಕರ್ನಾಟಕ ರಾಜ್ಯ ಗುತ್ತಿಗೆದಾರರ ಸಂಘ (ಕೆಎಸ್‌ಸಿಎ) ಅಧ್ಯಕ್ಷ ಆರ್. ಮಂಜುನಾಥ್ ಮತ್ತು ಜಿ.ಎಂ. ರವೀಂದ್ರ ಅವರು ಸಹಿ ಮಾಡಿದ ಪತ್ರದಲ್ಲಿ, ತಮ್ಮ ಸರ್ಕಾರ ಅಧಿಕಾರಕ್ಕೆ ಬಂದಾಗ ಯಾವುದೇ ಲಂಚ ಇರುವುದಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಬಳಿ ಹೇಳಿಕೊಂಡಿದ್ದಾರೆ. ನಿರ್ಮಿತಿ ಕೇಂದ್ರಗಳು ಮತ್ತು ಕರ್ನಾಟಕ ಗ್ರಾಮೀಣ ಮೂಲಸೌಕರ್ಯ ಅಭಿವೃದ್ಧಿ ನಿಗಮ ಲಿಮಿಟೆಡ್ (ಕೆಆರ್‌ಐಡಿಎಲ್) ಅಡಿಯಲ್ಲಿರುವ ಯೋಜನೆಗಳನ್ನು ಶಾಸಕರು ಮತ್ತು ಸಚಿವರ ಅನುಯಾಯಿಗಳಿಗೆ ಹಂಚಿಕೆ ಮಾಡಲಾಗಿದೆ ಎಂದು ಪತ್ರದಲ್ಲಿ ಆರೋಪಿಸಲಾಗಿದೆ. ಅವರು ಯೋಜನೆಗಳನ್ನು ಗುತ್ತಿಗೆದಾರರಿಗೆ ಹಸ್ತಾಂತರಿಸುತ್ತಾರೆ ಮತ್ತು ಲಂಚ ಪಡೆಯಬೇಕೆಂದು ಒತ್ತಾಯಿಸುತ್ತಾರೆ ಎಂದು ಪಾತ್ರದಲ್ಲಿ ಆರೋಪಿಸಲಾಗಿದೆ. “ಯೋಜನೆಗಳನ್ನು ನಮಗೆ ಉಪಗುತ್ತಿಗೆ ನೀಡಿದಾಗ…

ಬೆಂಗಳೂರು–ಮುಂಬೈ ನಡುವೆ ಹೊಸ ಸೂಪರ್‌ಫಾಸ್ಟ್ ರೈಲು

ಬೆಂಗಳೂರು: ಬೆಂಗಳೂರು–ಮುಂಬೈ ನಡುವೆ ಸೂಪರ್‌ಫಾಸ್ಟ್ ರೈಲು ಸಂಚಾರಕ್ಕೆ ಕೇಂದ್ರ ರೈಲ್ವೆ ಸಚಿವಾಲಯ ಅನುಮೋದನೆ ನೀಡಿದೆ. ಮೂರು ದಶಕಗಳಿಂದ ಬಾಕಿ ಉಳಿದ ಬೇಡಿಕೆ ಈಡೇರಿದಂತಾಗಿದ್ದು, ಈಗಾಗಲೇ ಉದ್ಯಾನ ಎಕ್ಸ್‌ಪ್ರೆಸ್ ಒಂದೇ ರೈಲು ಕಾರ್ಯನಿರ್ವಹಿಸುತ್ತಿತ್ತು. ಹೊಸ ಸೇವೆಯಿಂದ ಲಕ್ಷಾಂತರ ಪ್ರಯಾಣಿಕರಿಗೆ ಕಡಿಮೆ ವೆಚ್ಚದಲ್ಲಿ ಸುಗಮ ಸಂಚಾರ ಸಿಗಲಿದೆ ಎಂದು ಸಂಸದ ತೇಜಸ್ವಿ ಸೂರ್ಯ ತಿಳಿಸಿದ್ದಾರೆ. ಈ ನಿರ್ಧಾರಕ್ಕೆ ಪ್ರಧಾನಮಂತ್ರಿ ನರೇಂದ್ರ ಮೋದಿ ಹಾಗೂ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರಿಗೆ ಧನ್ಯವಾದ ಅರ್ಪಿಸಿರುವ ತೇಜಸ್ವಿ, ರಾಜ್ಯ ರೈಲ್ವೆ ಸಚಿವ ವಿ.ಸೋಮಣ್ಣರಿಗೂ ಕೃತಜ್ಞತೆ ಸಲ್ಲಿಸಿದ್ದಾರೆ. I have some great news for people of Bengaluru and Mumbai. From last 30 years, our two great cities were connected by only one super fast train -Udyan Express. Even that train took…

ಸುಪ್ರೀಂ ಕೋರ್ಟ್ ಆದೇಶದ ಮೇರೆಗೆ ಬಿಲ್ಡರ್‌ಗಳ ವಿರುದ್ಧ ಆರು ಪ್ರಕರಣ

ನವದೆಹಲಿ: ಸಾವಿರಾರು ಮನೆ ಖರೀದಿದಾರರನ್ನು ವಂಚಿಸಿದ ಆರೋಪ ಹೊತ್ತಿರುವ ಬಿಲ್ಡರ್‌ಗಳ ವಿರುದ್ಧ ಸಿಬಿಐ ಭಾರೀ ದಾಳಿ ನಡೆಸಿದೆ. ಸುಪ್ರೀಂ ಕೋರ್ಟ್ ನಿರ್ದೇಶನದಂತೆ, ಕೋಲ್ಕತ್ತಾ, ಬೆಂಗಳೂರು ಮತ್ತು ಮುಂಬೈ ನಗರಗಳಲ್ಲಿ ಶನಿವಾರ 12 ಸ್ಥಳಗಳಲ್ಲಿ ಶೋಧ ನಡೆಸಲಾಗಿದ್ದು, ವಿವಿಧ ದಾಖಲೆಗಳು ಹಾಗೂ ಡಿಜಿಟಲ್ ಪುರಾವೆಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಸಿಬಿಐ ತಿಳಿಸಿದೆ. ಮನೆ ಖರೀದಿದಾರರು ಸಲ್ಲಿಸಿದ್ದ ಅರ್ಜಿಗಳ ಆಧಾರದ ಮೇಲೆ ತನಿಖೆ ಆರಂಭಗೊಂಡಿದ್ದು, ಗೃಹಸಾಲದ ವಿವಾದಾತ್ಮಕ ಸಬ್ವೆನ್ಷನ್ ಯೋಜನೆ ಮೂಲಕ ಬಿಲ್ಡರ್‌ಗಳು ಮತ್ತು ಸಾಲದಾತರ ನಡುವೆ ಅಸಮರ್ಪಕ ಸಂಬಂಧವಿದೆ ಎಂದು ಸುಪ್ರೀಂ ಕೋರ್ಟ್ ಹಿಂದೆಯೇ ಗಮನಿಸಿದೆ. ಅದರಂತೆ, ಏಳು ಪ್ರಾಥಮಿಕ ವಿಚಾರಣೆಗಳನ್ನು ಸಿಬಿಐಗೆ ಒಪ್ಪಿಸಲಾಗಿತ್ತು. ಇದಕ್ಕೂ ಮೊದಲು NCR ಪ್ರದೇಶದಲ್ಲಿ 22 ಎಫ್‌ಐಆರ್‌ಗಳನ್ನು ದಾಖಲಿಸಿದ್ದ ಸಿಬಿಐ, ಇದೀಗ NCR ಹೊರಗಿನ ಯೋಜನೆಗಳನ್ನು ಒಳಗೊಂಡ ಏಳನೇ ವಿಚಾರಣೆಯ ನಂತರ, ಸುಪ್ರೀಂ ಕೋರ್ಟ್ ಸೂಚನೆಯಂತೆ ಆರು ನಿಯಮಿತ ಪ್ರಕರಣಗಳನ್ನು ದಾಖಲಿಸಿದೆ. ಇಥಾಕಾ ಎಸ್ಟೇಟ್…

ಸರ್ಕಾರಿ ಗೌರವಗಳೊಂದಿಗೆ ಸಾಹಿತಿ ಎಸ್.ಎಲ್. ಭೈರಪ್ಪ ಅಂತ್ಯಕ್ರಿಯೆ

ಮೈಸೂರು: ಹಿರಿಯ ಸಾಹಿತಿ ಡಾ. ಎಸ್.ಎಲ್. ಭೈರಪ್ಪ ಅವರ ಅಂತ್ಯಕ್ರಿಯೆ ಇಂದು ಮಧ್ಯಾಹ್ನ 12:30ಕ್ಕೆ ಚಾಮುಂಡಿ ಬೆಟ್ಟದ ತಪ್ಪಲಿನ ರುದ್ರಭೂಮಿಯಲ್ಲಿ ಸರ್ಕಾರಿ ಗೌರವಗಳೊಂದಿಗೆ ನೆರವೇರಿತು. ಬ್ರಾಹ್ಮಣ ಸಂಪ್ರದಾಯದಂತೆ ನಡೆದ ಅಂತಿಮ ವಿಧಿವಿಧಾನದಲ್ಲಿ ಪೊಲೀಸ್ ಪಡೆ ಮೂರು ಸುತ್ತು ಗಾಳಿಯಲ್ಲಿ ಗುಂಡು ಹಾರಿಸಿ ಸರ್ಕಾರಿ ಗೌರವ ಸಲ್ಲಿಸಿತು. ಕೇಂದ್ರ ಸಚಿವ ಪ್ರಹ್ಲಾದ್‌ ಜೋಷಿ, ಜಿಲ್ಲಾ ಉಸ್ತುವಾರಿ ಸಚಿವ ಎಚ್.ಸಿ. ಮಹದೇವಪ್ಪ, ಶಾಸಕ ಟಿ.ಎಸ್. ಶ್ರೀವತ್ಸ ಸೇರಿದಂತೆ ಅನೇಕ ಗಣ್ಯರು ಭಾಗಿಯಾಗಿ ನಮನ ಸಲ್ಲಿಸಿದರು. ರಾಷ್ಟ್ರಧ್ವಜವನ್ನು ಪ್ರಹ್ಲಾದ್ ಜೋಷಿ ಹಾಗೂ ಮಹದೇವಪ್ಪ ಅವರು ಭೈರಪ್ಪರ ಪುತ್ರರಾದ ರವಿಶಂಕರ್ ಮತ್ತು ಉದಯ್ ಶಂಕರ್ ಅವರಿಗೆ ಹಸ್ತಾಂತರಿಸಿದರು. ಪುತ್ರರು ಅಂತಿಮ ವಿಧಿ ನೆರವೇರಿಸಿದ ವೇಳೆ, ಭೈರಪ್ಪರ ಇಚ್ಛೆಯಂತೆ ಉದಯೋನ್ಮುಖ ಲೇಖಕಿ ಸಹನಾ ವಿಜಯ್‌ಕುಮಾರ್ ಸಹ ಹಾಜರಿದ್ದರು. ವಿಧಿ ವಿಧಾನಗಳ ಬಳಿಕ ಪುತ್ರರ ಜೊತೆಗೂಡಿ ಅವರು ಭೈರಪ್ಪರ ಚಿತೆಗೆ ಅಗ್ನಿ ಸ್ಪರ್ಶ ಮಾಡಿದರು.

KRS: ಕಾವೇರಿ ಆರತಿ ವೀಕ್ಷಿಸುವ ಪ್ರವಾಸಿಗರಿಗೆ ಉಚಿತವಾಗಿ ಕಾವೇರಿ ಲಡ್ಡು ಪ್ರಸಾದ

ಮಂಡ್ಯ: ಗಂಗಾ ಆರತಿ ಮಾದರಿಯಲ್ಲಿ ದಕ್ಷಿಣ ಭಾರತದಲ್ಲಿ ಮೊದಲ ಬಾರಿಗೆ ಕಾವೇರಿ ನದಿಗೆ “ಕಾವೇರಿ ಆರತಿ” ಮಾಡುವ ಕಾರ್ಯಕ್ರಮವು ಸೆಪ್ಟೆಂಬರ್ 26ರ ಶುಕ್ರವಾರದಿಂದ ಐದು ದಿನಗಳ ಕಾಲ‌ ಕೆಆರ್ ಎಸ್ ನಲ್ಲಿ ನೆರವೇರಲಿದೆ. ಕಾವೇರಿ ಆರತಿ ಕಾರ್ಯಕ್ರಮದ ವೀಕ್ಷಣೆಗೆ ಪ್ರತಿ ನಿತ್ಯ 8 ರಿಂದ ಹತ್ತು ಸಾವಿರಕ್ಕೂ ಅಧಿಕ ಪ್ರವಾಸಿಗರು ರಾಜ್ಯ ಹೊರರಾಜ್ಯದ ನಾನಾ ಭಾಗಗಳಿಂದ ಆಗಮಿಸಿ “ಕಾವೇರಿ ಆರತಿ”ಯನ್ನು ವೀಕ್ಷಿಸಿ ಕಣ್ತುಂಬಿಕೊಳ್ಳಲಿದ್ದಾರೆ. ಕಾವೇರಿ ಆರತಿ ವೀಕ್ಷಿಸಲು ಆಗಮಿಸುವ ಪ್ರವಾಸಿಗರಿಗೆ ಉಪಮುಖ್ಯಮಂತ್ರಿ ಹಾಗೂ ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಅವರು ಲಡ್ಡು ಮಾಡಿಸಿದ್ದಾರೆ ಪ್ರತಿನಿತ್ಯ ಲಾಡು ವಿತರಣೆಗೆ ಎಲ್ಲಾ ರೀತಿಯ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಆಗಮಿಸುವವರಿಗೆ ಲಾಡು ವಿತರಣೆ ಮಾಡುವ ಮಾದರಿಯಲ್ಲಿ “ಕಾವೇರಿ ಆರತಿ” ವೀಕ್ಷಣೆಗೆ ಆಗಮಿಸುವ ಪ್ರವಾಸಿಗರಿಗೆ ಕಾವೇರಿ ತಾಯಿ ಪ್ರಸಾದವಾಗಿ ಲಡ್ಡನ್ನು ಉಚಿತವಾಗಿ ವಿತರಣೆ ಮಾಡಲಾಗುವುದು. ಕಾವೇರಿ ಕನ್ನಡ ನಾಡಿನ ಜೀವನದಿ. ಕೇರಳ, ತಮಿಳುನಾಡು ಹಾಗೂ ರಾಜ್ಯದ…