ಮಂಡ್ಯ: ಮುಖ್ಯಮಂತ್ರಿ ಸಿದ್ದರಾಮಯ್ಯನವರು ಡಿಕ್ಟೇಟ್ ಮಾಡಿ ಬರೆಸುವ ಜಾತಿ ಸಮೀಕ್ಷೆ ಅಧಿಕೃತವಲ್ಲ. ಇದು ಜಾತಿಗಳನ್ನು ಒಡೆಯುವ ಸಮೀಕ್ಷೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಹೇಳಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,ಜಾತಿ ಸಮೀಕ್ಷೆಯಲ್ಲಿ ಮತಾಂತರಕ್ಕೆ ಪ್ರೋತ್ಸಾಹ ನೀಡಲಾಗಿದೆ. ಮತಾಂತರ ಮಾಡಲು ಸಿಎಂ ಸಿದ್ದರಾಮಯ್ಯ ವೇದಿಕೆ ಸೃಷ್ಟಿಸಿದ್ದಾರೆ. ಒಕ್ಕಲಿಗ, ದಲಿತ, ವಿಶ್ವಕರ್ಮರನ್ನು ಕ್ರೈಸ್ತ ಧರ್ಮಕ್ಕೆ ಸೇರಿಸಲು 52 ಹೊಸ ಜಾತಿಗಳನ್ನು ಸೃಷ್ಟಿ ಮಾಡಲಾಗಿದೆ. ತಮಗೆ ಬೇಕಾದ ಜಾತಿಗಳ ಸಂಖ್ಯೆಯನ್ನು ಕಡಿಮೆ ಅಥವಾ ಹೆಚ್ಚು ಎಂದು ತೋರಿಸಬಹುದು. ಮುಸ್ಲಿಮರು ಹಾಗೂ ಕ್ರೈಸ್ತರಲ್ಲಿ ಅನೇಕ ಜಾತಿಗಳಿದ್ದು, ಅದನ್ನು ಬಹಿರಂಗ ಮಾಡುತ್ತಿಲ್ಲ. ಆದರೆ ಹಿಂದೂಗಳಲ್ಲಿ ತಾರತಮ್ಯ ಇದೆ ಎಂದು ಸಿಎಂ ಸಿದ್ದರಾಮಯ್ಯ ಹೇಳುತ್ತಾರೆ. ಮಸೀದಿಗಳಿಗೆ ಮಹಿಳೆಯರಿಗೆ ಪ್ರವೇಶವಿಲ್ಲ, ಮಹಿಳೆಯರಿಗೆ ಬುರ್ಕಾ ಧರಿಸಬೇಕು. ಹೀಗೆ ಎಲ್ಲ ಧರ್ಮಗಳಲ್ಲಿ ತಾರತಮ್ಯ ಇದೆ ಎಂದರು. ರಾಜ್ಯದಲ್ಲಿ ಲಿಂಗಾಯತರ ಸಂಖ್ಯೆ ಅತ್ಯಧಿಕ, ನಂತರ ಒಕ್ಕಲಿಗರ ಸಂಖ್ಯೆ ಇದೆ. ಸಿಎಂ ಸಿದ್ದರಾಮಯ್ಯ ಈ ಪ್ರಮಾಣವನ್ನೇ…
Category: ವಿದೇಶ
ಪೂಜಾ ಶುಲ್ಕ ವಿವಾದ; ಧರ್ಮದ ಹೆಸರಲ್ಲಿ ಜನರಲ್ಲಿ ತಪ್ಪು ಕಲ್ಪನೆ ಮೂಡಿಸಲು ಬಿಜೆಪಿ ಯತ್ನ ಎಂದ ರಾಮಲಿಂಗಾ ರೆಡ್ಡಿ
ಬೆಂಗಳೂರು: ರಾಜ್ಯದ ಪ್ರಮುಖ ದೇವಾಲಯಗಳಲ್ಲಿ ಪೂಜೆ, ಸೇವಾ ದರ ಹೆಚ್ಚಳ ಮಾಡಲಾಗಿದೆ ಎಂಬ ವಿಚಾರ ರಾಜಕೀಯ ಪಕ್ಷಗಳ ಕಾರಣವಾಗಿದೆ. ಈ ವಿಚಾರದಲ್ಲಿ, ಪ್ರತಿಪಕ್ಷ ಬಿಜೆಪಿಯು ಸಿದ್ದರಾಮಯ್ಯ ನೇತೃತ್ವದ ಸರ್ಕಾರದ ವಿರುದ್ಧ ಆಕ್ರೋಶ ಹೊರಕಿದೆ. ಇದಕ್ಕೆ ತಿರುಗೇಟು ನೀಡಿರುವ ಮುಜರಾಯಿ ಸಚಿವ ರಾಮಲಿಂಗಾ ರೆಡ್ಡಿ, ದೇಗುಲಗಳ ವಿಚಾರದಲ್ಲಿನ ಬಿಜೆಪಿ ನಾಯಕರ ಟೀಕೆಯು ಅವರ ಬೌದ್ಧಿಕ ಅಧಃಪತನದ ಪರಾಮಾವಧಿಯಾಗಿದೆ ಎಂದು ಪ್ರತಿಕ್ರಿಯಿಸಿದ್ದಾರೆ. ಧರ್ಮದ ಹೆಸರಲ್ಲಿ ಜನರಲ್ಲಿ ತಪ್ಪು ಕಲ್ಪನೆ ಮೂಡಿಸಲು ಹತಾಶ ಪ್ರಯತ್ನ ಬಿಜೆಪಿ ನಾಯಕರದ್ದು ಎಂದು ಸಚಿವರು ಆರೋಪಿಸಿದ್ದಾರೆ. ಧರ್ಮ ರಕ್ಷಣೆಗಾಗಿಯೇ ಅಧಿಕಾರಕ್ಕೆ ಬಂದವರು ನಾವು ಎನ್ನುವ ‘ನಕಲಿ ಧರ್ಮರಕ್ಷಕ’ ಬಿಜೆಪಿ ಸರ್ಕಾರದವರು 2019-2023 ಅವಧಿಯಲ್ಲಿ 24 ಹಿಂದೂ ದೇವಾಲಯಗಳ ಪೂಜಾ ಸೇವಾ ಶುಲ್ಕವನ್ನು ಏರಿಕೆ ಮಾಡಿದ್ದರು. ಬಿಜೆಪಿ ಸರ್ಕಾರದ ಅವಧಿಯಲ್ಲಿ ಪೂಜಾ ಶುಲ್ಕ ಹೆಚ್ಚಳವಾಗಿದ್ದ ದೇವಾಲಯಗಳ ಪಟ್ಟಿಯನ್ನು ರಾಮಲಿಂಗಾ ರೆಡ್ಡಿ ಬಹಿರಂಗಪಡಿಸಿದ್ದಾರೆ. ಶ್ರೀ ವೀರಭದ್ರ ಸ್ವಾಮಿ ದೇವಾಲಯ,…
ಬೆಂಗಳೂರು: ಗುಂಡಿ ಮುಚ್ಚದೆ ಇರುವುದು ಅಕ್ಷಮ್ಯ ಎಂದ ಸಿಎಂ ಸಿದ್ದರಾಮಯ್ಯ
ಬೆಂಗಳೂರು: ಕಾಮಗಾರಿಯಿಂದಾಗಿ ಬೆಂಗಳೂರು ನಗರದ ರಸ್ತೆಗಳು ಹಾಳಾಗಿದ್ದು ಸಾರ್ವಜನಿಕರ ಆಕ್ರೋಶ ಸ್ಫೋಟಗೊಂಡಿದೆ. ಮಾಧ್ಯಮಗಳಲ್ಲಿ ಈ ಬಗ್ಗೆ ಸರಣಿ ವರದಿಗಳು ಬಿತ್ತರವಾಗುತ್ತಿದ್ದಂತೆಯೇ ಎಚ್ಛೆತ್ತುಕೊಂಡಿರುವ ಸಿಎಂ ಸಿದ್ದರಾಮಯ್ಯ, ಬೆಂಗಳೂರು ನಗರ ರಸ್ತೆಗಳ ಸುಧಾರಣೆ ಹಾಗೂ ಸಂಚಾರ ವ್ಯವಸ್ಥೆ ಕುರಿತು ಗೃಹ ಕಚೇರಿ ಕೃಷ್ಣಾದಲ್ಲಿ ಸಭೆ ನಡೆಸಿ, ಸೂಚನೆಗಳನ್ನು ನೀಡಿದ್ದಾರೆ. ರಸ್ತೆ ಗುಂಡಿಗಳಿಂದ ವಾಹನ ಸವಾರರು ನಿತ್ಯ ಸಮಸ್ಯೆ ಎದುರಿಸುತ್ತಿದ್ದಾರೆ, ಈ ಬಗ್ಗೆ ಆಕ್ರೋಶ ಕೇಳಿಬರುತ್ತಿದ್ದರೂ ಈ ವರೆಗೆ ಗುಂಡಿ ಮುಚ್ಚದೆ ಇರುವುದು ಅಕ್ಷಮ್ಯ ಎಂದಿರುವ ಸಿಎಂ, ಪ್ರತಿ ವಾರ್ಡ್ ನ ಎಂಜಿನಿಯರ್ ಗಳು, ಮುಖ್ಯ ಎಂಜಿನಿಯರ್ ಗಳು ಈಗಾಗಲೇ ಕ್ರಮ ವಹಿಸಬೇಕಿತ್ತು. ಇನ್ನು ಒಂದು ತಿಂಗಳ ಕಾಲಾವಕಾಶ ನೀಡುತ್ತೇವೆ. ರಸ್ತೆ ಗುಂಡಿಗಳನ್ನು ಮುಚ್ಚಲು ಕಟ್ಟುನಿಟ್ಟಿನ ಕ್ರಮ ವಹಿಸಲೇಬೇಕು ಮತ್ತು ರಸ್ತೆಗಳನ್ನು ಸಂಚಾರ ಯೋಗ್ಯ ಮಾಡಲೇಬೇಕು. ರಸ್ತೆ ನಿರ್ವಹಣೆಗೆ ಸೂಕ್ತ ಕ್ರಮ ವಹಿಸದ ಅಧಿಕಾರಿಗಳ ಮೇಲೆ ಮುಲಾಜಿಲ್ಲದೆ ಕಠಿಣ ಕ್ರಮ ಕೈಗೊಳ್ಳಲಾಗುವುದು…
ಕ್ರೈಸ್ತ ಜಾತಿ ವಿವಾದಕ್ಕೆ ತೆರೆ ಎಳೆದ ಸರ್ಕಾರ; ಸಿಎಂ ನಿರ್ಧಾರಕ್ಕೆ ಶಾಜಿ ಸ್ವಾಗತ
ಬೆಂಗಳೂರು: ಜಾತಿ ಸಂಘರ್ಷದ ಕಿಚ್ಚುಹಚ್ಚಿದ್ದಾರೆ ಎಂದು ಸಿಎಂ ವಿರುದ್ಧ ಕ್ರೈಸ್ತ ಸಮುದಾಯ ಆಕ್ರೋಶ ಹೊಮ್ಮುತ್ತಿದ್ದಂತೆಯೇ ಸಿಎಂ ಸಿದ್ದರಾಮಯ್ಯ ಜಾಣ್ಮೆಯ ನಿರ್ಧಾರ ಕೈಗೊಂಡಿದ್ದಾರೆ. ಕ್ರಿಶ್ಚಿಯನ್ ಧರ್ಮದಲ್ಲಿ ಜಾತಿ ವ್ಯವಸ್ಥೆ ಸೃಷ್ಠಿಸಲು ರಾಜ್ಯ ಸರ್ಕಾರ ಮುಂದಾಗಿರುವುದು ಸರಿಯಲ್ಲ, ಈ ಸಂಬಂಧದ ನಿರ್ಧಾರವನ್ನು ಕೈಬಿಡಬೇಕೆಂದು ಕ್ರಿಶ್ಚಿಯನ್ ಸೇವಾ ಸಂಘ (CSS) ಮನವಿ ಸಲ್ಲಿಸಿದ ಬೆನ್ನಲ್ಲೇ, ಕ್ರಿಶ್ಚಿಯನ್ ಜಾತಿಗಳ ಮುಂದಿದ್ದ ಹಿಂದೂ ಹೆಸರುಗಳನ್ನೂ ಕೈಬಿಡಬೇಕೆಂದು ಸಿಎಂ ಸಿದ್ದರಾಮಯ್ಯ ಆದೇಶಿಸಿದ್ದಾರೆ. ಸಿಎಂ ಆದೇಶದ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗವು ಸೂಕ್ತ ತಿದ್ದುಪಡಿಗೆ ಮುಂದಾಗಿದೆ ಎಂದು ಮೂಲಗಳು ತಿಳಿಸಿವೆ. ಇದೇ ವೇಳೆ, ಕ್ರೈಸ್ತ ಜಾತಿ ವಿವಾದಕ್ಕೆ ತೆರೆ ಎಳೆದ ಸಿಎಂ ನಿರ್ಧಾರವನ್ನು ಕ್ರಿಶ್ಚಿಯನ್ ಸೇವಾ ಸಂಘದ ಅಧ್ಯಕ್ಷ ಶಾಜಿ ಟಿ ವರ್ಗೀಸ್ ಸ್ವಾಗತಿಸಿದ್ದಾರೆ. ರಾಷ್ಟ್ರೀಯ ಹಿತಾಸಕ್ತಿಯನ್ನು ಪ್ರತಿಪಾದಿಸುತ್ತಿರುವ ಕ್ರೈಸ್ತಧರ್ಮದ ಹಾಗೂ ಜನರ ಹಿತಾಸಕ್ತಿ ಸಂಬಂಧ ವಿವಿಧ ಕಾರ್ಯಕ್ರಮಗಳನ್ನು ನಡೆಸುತ್ತಾ ಬರುತ್ತಿರುವ ಕ್ರಿಶ್ಚಿಯನ್ ಸೇವಾ…
ಬೆಳಗಾವಿಯಲ್ಲೂ ತಿರುಪತಿ ದೇವಸ್ಥಾನ ನಿರ್ಮಿಸಲು ಟಿಟಿಡಿ ನಿರ್ಧಾರ
ಬೆಂಗಳೂರು: ಉತ್ತರ ಕರ್ನಾಟಕ, ಗೋವಾ ಹಾಗೂ ಮಹರಾಷ್ಟ್ರ ರಾಜ್ಯದ ಭಕ್ತಾದಿಗಳಿಗೆ ಅನುಕೂಲ ಮಾಡಿಕೊಡುವ ನಿಟ್ಟಿನಲ್ಲಿ, ಬೆಳಗಾವಿಯಲ್ಲಿ ತಿರುಪತಿ – ತಿರುಮಲ ದೇವಸ್ಥಾನ ನಿರ್ಮಾಣಕ್ಕೆ ಟಿಟಿಡಿ ಆಡಳಿತ ಮಂಡಳಿ ಅನುಮೋದನೆ ನೀಡಿದೆ ಎಂದು ಟಿಟಿಡಿ ಸದಸ್ಯರಾದ ಎಸ್ ನರೇಶ್ ಕುಮಾರ್ ತಿಳಿಸಿದ್ದಾರೆ. ಬೆಂಗಳೂರಿನ ಮಲ್ಲೇಶ್ವರಂನ ವೈಯಾಲಿಕಾವಲ್‌ನಲ್ಲಿರುವ ಶ್ರೀ ವೆಂಕಟೇಶ್ವರ ದೇವಸ್ಥಾನದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಉತ್ತರ ಕರ್ನಾಟಕ, ಗೋವಾ ಹಾಗೂ ಮಹರಾಷ್ಟ್ರ ರಾಜ್ಯದ ಭಕ್ತಾದಿಗಳಿಗೆ ಅನುಕೂಲ ಮಾಡಿಕೊಡುವ ನಿಟ್ಟಿನಲ್ಲಿ ಬೆಳಗಾವಿಯಲ್ಲಿ ದೇವಸ್ಥಾನ ನಿರ್ಮಾಣಕ್ಕೆ ಟಿಟಿಡಿ ಆಡಳಿತ ಮಂಡಳಿ ಅನುಮೋದನೆ ನೀಡಿದೆ ಎಂದರು. 16.09.2025 ರಂದು ನಡೆದ ಟಿಟಿಡಿ ಆಡಳಿತ ಮಂಡಳಿ ಸಭೆಯಲ್ಲಿ ಈ ಬಗ್ಗೆ ವಿಸ್ತ್ರುತವಾಗಿ ಚರ್ಚಿಸಲಾಯಿತು. ಬೆಂಗಳೂರು ಹಾಗೂ ದೇಶದ ಇತರೆ ಭಾಗಗಳಲ್ಲಿ ಇರುವಂತೆ ಬೆಳಗಾವಿಯಲ್ಲೂ ದೇವಸ್ಥಾನ ನಿರ್ಮಿಸುವುದರಿಂದ ಆಭಾಗದ ಭಕ್ತಾದಿಗಳಿಗೆ ಅನುಕೂಲವಾಗಲಿದೆ ಎಂದರು. ಪ್ರತಿ ಬಾರಿಯೂ ತಿರುಪತಿ-ತಿರುಮಲಕ್ಕೆ ಭೇಟಿ ನೀಡುವ ಬದಲಾಗಿ, ಸ್ಥಳೀಯವಾಗಿಯೇ ಶ್ರೀ ವೆಂಕಟೇಶ್ವರ…
ರಾಜ್ಯದ 53 ಪ್ರಯೋಗಾಲಯಗಳಿಗೆ NABL ಮಾನ್ಯತೆ: ಚಲುವರಾಯಸ್ವಾಮಿ
ಬೆಂಗಳೂರು: ಯಾವುದೇ ಸರ್ಕಾರಗಳು ಬರಲಿ ಕೃಷಿ ಅಧಿಕಾರಿಗಳು ಪ್ರಾಮಾಣಿಕವಾಗಿ ರೈತರ ಪರವಾದ ಕೆಲಸಗಳನ್ನು ಮಾಡಬೇಕು ಎಂದು ಕೃಷಿ ಸಚಿವ ಎನ್ ಚಲುವರಾಯಸ್ವಾಮಿ ಹೇಳಿದ್ದಾರೆ. ಕೃಷಿ ಆಯುಕ್ತಾಲಯದಲ್ಲಿರುವ ಸಂಗಮ ಸಂಭಾಗಣದಲ್ಲಿ,NABL ಮಾನ್ಯತೆ ಪಡೆದಿರುವ ಪ್ರಯೋಗಾಲಯಗಳ ಅಭಿನಂದನಾ ಸಮಾರಂಭವನ್ನು ಉದ್ಘಾಟಿಸಿ ಮತನಾಡಿದ ಸಚಿವರು, ಕೃಷಿ ಇಲಾಖೆಯ ಯೋಜನೆಗಳು ರೈತರಿಗೆ ತಲುಪಬೇಕು, ಇದಕ್ಕಾಗಿ ಅಧಿಕಾರಿಗಳು ಒಗ್ಗಟ್ಟಿನಿಂದ ಕೆಲಸ ಮಾಡಿದಾಗ ಉತ್ತಮ ಫಲಿತಾಂಶ ಹೊರಬರಲಿದೆ ಎಂದು ಸಚಿವರು ತಿಳಿಸಿದರು. ಕೃಷಿ ಇಲಾಖೆಯ 29, ತೋಟಗಾರಿಕೆ ಇಲಾಖೆಯ 6, ರೇಷ್ಮೆ ಇಲಾಖೆಯ 1, ಕೃಷಿ ವಿಶ್ವವಿದ್ಯಾಲಯಗಳ 3 ಮತ್ತು ಕೃಷಿ ವಿಜ್ಞಾನ ಕೇಂದ್ರಗಳ 5 ಮಣ್ಣು ಪರೀಕ್ಷಾ ಪ್ರಯೋಗಾಲಗಳು ಸೇರಿ ಒಟ್ಟು 44 ಮಣ್ಣು ಪರೀಕ್ಷಾ ಪ್ರಯೋಗಾಲಯಗಳು NABL Recognition ಪಡೆದಿರುವುದಕ್ಕೆ ಸಚಿವರು ಅಭಿನಂದನೆ ತಿಳಿಸಿದರು. ಅಲ್ಲದೆ, ಕೃಷಿ ಇಲಾಖೆಯ 6 ರಸಗೊಬ್ಬರ ನಿಯಂತ್ರಣ ಪ್ರಯೋಗಾಲಯಗಳು, 2 ರಾಜ್ಯ ಪೀಡೆನಾಶಕ ಪರೀಕ್ಷಾ ಪ್ರಯೋಗಾಲಯಗಳು ಮತ್ತು…
ದೇವಾಲಯಗಳ ಸೇವಾ ಶುಲ್ಕ ಹೆಚ್ಚಳ ; ಸಿದ್ದು ಸರ್ಕಾರದ ವಿರುದ್ಧ ಆಕ್ರೋಶ ಸ್ಫೋಟ
ಬೆಂಗಳೂರು: ರಾಜ್ಯದ ದೇವಾಲಯಗಳ ಸೇವಾ ಶುಲ್ಕ ಹೆಚ್ಚಳ ಮಾಡಿರುವ ರಾಜ್ಯ ಸರ್ಕಾರದ ಕ್ರಮಕ್ಕೆ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ರಾಜ್ಯ ಮುಜರಾಯಿ ದೇವಸ್ಥಾನಗಳ ಕುರಿತಂತೆ ಸರ್ಕಾರ ಕೈಗೊಂಡಿರುವ ನಿರ್ಧಾರವನ್ನು ಪ್ರತಿಪಕ್ಷ ಬಿಜೆಪಿ ಖಂಡಿಸಿದೆ. ಗಣೇಶ ಚತುರ್ಥಿಯನ್ನು ರಣರಂಗವಾಗಿಸಿದ ಕಾಂಗ್ರೆಸ್ ಸರ್ಕಾರ ಈಗ ನವರಾತ್ರಿ, ದೀಪಾವಳಿಯ ಸಂಭ್ರಮವನ್ನೂ ಹಾಳು ಮಾಡಲು ಮುಂದಾಗಿದೆ. ʼಎʼ ದರ್ಜೆಯ ಮುಜರಾಯಿ ಇಲಾಖೆಯ ವ್ಯಾಪ್ತಿಯಲ್ಲಿ ಬರುವ ಪ್ರಮುಖ ದೇವಸ್ಥಾನಗಳಲ್ಲಿ ಸೇವೆಯ ದರವನ್ನು ಏರಿಸುವ ಮೂಲಕ ಹಿಂದೂ ಧರ್ಮೀಯರ ಮೇಲೆ ತನ್ನ ಅಸಹನೆಯನ್ನು ತೋರಿಸಿದೆ ಎಂದು ಬಿಜೆಪಿ ದೂರಿದೆ. ಹಿಂದೂಗಳು ಸುಮ್ಮನಿದ್ದಾರೆ, ಏನು ಮಾಡಿದರೂ ನಡೆಯುತ್ತದೆ ಎಂದು ಸಿದ್ದರಾಮಯ್ಯ ಸರ್ಕಾರ ಅಹಂಭಾವ ಪ್ರದರ್ಶಿಸುತ್ತಿದೆ. ಕಟೀಲು ದೇವಸ್ಥಾನವೊಂದರಲ್ಲೇ ಅತಿಹೆಚ್ಚು ಜನರು ಭಕ್ತಿಯಿಂದ ಸಮರ್ಪಿಸುವ ಹೂವಿನ ಪೂಜೆಯ ದರವನ್ನು ಬರೋಬ್ಬರಿ 184% ಹೆಚ್ಚಳ ಮಾಡಿರುವುದು, ಕುಕ್ಕೆ ಸುಬ್ರಹ್ಮಣ್ಯದಲ್ಲಿನ ಆಶ್ಲೇಷ ಪೂಜೆ, ನಾಗಪ್ರತಿಷ್ಠೆ ಸೇವೆಗಳ ಸೇವಾ ದರವನ್ನೂ ಹೆಚ್ಚಿಸಿರುವುದು ಸರ್ಕಾರದ ಹಿಂದೂ…
ಬೆಂಗಳೂರಿನಲ್ಲಿ ನವೆಂಬರ್ 4 ರಿಂದ ಮೊಟ್ಟ ಮೊದಲ ಕೌಶಲ್ಯ ಶೃಂಗಸಭೆ
ಬೆಂಗಳೂರು: ಕೌಶಲ್ಯಾಭಿವೃದ್ಧಿಗೆ ವಿಶೇಷ ಆದ್ಯತೆ ನೀಡುತ್ತಿರುವ ನಮ್ಮ ಸರ್ಕಾರ ಮುಂದಿನ ನವೆಂಬರ್‌ನಲ್ಲಿ ಬೆಂಗಳೂರು ಕೌಶಲ್ಯ ಶೃಂಗಸಭೆ 2025 ಆಯೋಜಿಸುತ್ತಿದೆ. ಕೌಶಲ್ಯತೆ, ನಾವೀನ್ಯತೆ ಮತ್ತು ವಿಶೇಷ ಸೌಲಭ್ಯಗಳ ತಾಣವಾಗಿ ಕರ್ನಾಟಕ ಹೊರಹೊಮ್ಮಲಿದೆ ಎಂದು ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಜೀವನೋಪಾಯ ಮತ್ತು ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಶರಣ ಪ್ರಕಾಶ್ ಆರ್. ಪಾಟೀಲ್ ತಿಳಿಸಿದ್ದಾರೆ. ವಿಧಾನಸೌಧದಲ್ಲಿ ಶುಕ್ರವಾರ ಪತ್ರಿಕಾಗೋಷ್ಠಿ ನಡೆಸಿದ ಸಚಿವರು, ಹಲವಾರು ಮಾಹಿತಿ ನೀಡಿದರು. ಬೆಂಗಳೂರಿನ ಹೋಟೆಲ್ ಲಲಿತ್ ಅಶೋಕ್‌ನಲ್ಲಿ ನವೆಂಬರ್ 4 ರಿಂದ 6 ರವರೆಗೆ ಈ ಶೃಂಗಸಭೆ ನಡೆಯಲಿದೆ. ಇದೇ ಮೊದಲ ಬಾರಿಗೆ ಇಂಥ ಮಹತ್ವಾಕಾಂಕ್ಷೆಯ ಸಮಾವೇಶವನ್ನು ಆಯೋಜಿಸಲಾಗುತ್ತಿದೆ. ಮುಖ್ಯಮಂತ್ರಿಗಳು ಈ ಶೃಂಗಸಭೆಗೆ ಚಾಲನೆ ನೀಡಲಿದ್ದಾರೆ ಎಂದು ತಿಳಿಸಿದರು. “ಬೆಂಗಳೂರು ಕೌಶಲ್ಯ ಶೃಂಗಸಭೆಯ ಮೂಲಕ ಯುವ ಸಮುದಾಯಕ್ಕೆ ಮುಖ್ಯವಾಗಿ ಮಹಿಳೆಯರು, ಗ್ರಾಮೀಣ ಸಮುದಾಯಗಳು ಮತ್ತು ಅಂಗವಿಕಲರಿಗೆ ಹೆಚ್ಚು ಆದ್ಯತೆ ನೀಡಲು ಗಮನಹರಿಸಲಾಗುವುದು. ಕೌಶಲ್ಯದ ಮೂಲಕ…
ಕ್ರಿಶ್ಚಿಯನ್ ಧರ್ಮದಲ್ಲಿ ಜಾತಿ ವ್ಯವಸ್ಥೆ; ಸರ್ಕಾರದ ನಡೆಗೆ CSS ಆಕ್ಷೇಪ
ಬೆಂಗಳೂರು: ಜಾತಿ ಸಂಘರ್ಷದ ಕಿಚ್ಚುಹಚ್ಚಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ವಿರುದ್ಧ ಕ್ರೈಸ್ತ ಸಮುದಾಯ ಆಕ್ರೋಶ ಹೊರಹಾಕಿದೆ. ಕ್ರಿಶ್ಚಿಯನ್ ಧರ್ಮದಲ್ಲಿ ಜಾತಿ ವ್ಯವಸ್ಥೆ ಸೃಷ್ಠಿಸಲು ರಾಜ್ಯ ಸರ್ಕಾರ ಮುಂದಾಗಿರುವುದು ಸರಿಯಲ್ಲ, ಈ ಸಂಬಂಧದ ನಿರ್ಧಾರವನ್ನು ಕೈಬಿಡಬೇಕೆಂದು ಕ್ರಿಶ್ಚಿಯನ್ ಸೇವಾ ಸಂಘ (CSS) ಒತ್ತಾಯಿಸಿದೆ. ರಾಷ್ಟ್ರೀಯ ಹಿತಾಸಕ್ತಿಯನ್ನು ಪ್ರತಿಪಾದಿಸುತ್ತಿರುವ ಕ್ರೈಸ್ತಧರ್ಮದ ಹಾಗೂ ಜನರ ಹಿತಾಸಕ್ತಿ ಸಂಬಂಧ ವಿವಿಧ ಕಾರ್ಯಕ್ರಮಗಳನ್ನು ನಡೆಸುತ್ತಾ ಬರುತ್ತಿರುವ ಕ್ರಿಶ್ಚಿಯನ್ ಸೇವಾ ಸಂಘದ ಅಧ್ಯಕ್ಷ ಶಾಜಿ ಟಿ ವರ್ಗೀಸ್ ಅವರು, ರಾಜ್ಯ ಸರ್ಕಾರದ ನಡೆ ವಿರೋಧಿಸಿ ಸಿಎಂ ಸಿದ್ದರಾಮಯ್ಯ, ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರು, ಮುಖ್ಯ ಕಾರ್ಯದರ್ಶಿ, ರಾಜ್ಯ ಹಿಂದುಳಿದ ವರ್ಗಗಳ ಆಯುಕ್ತರಿಗೆ ಪತ್ರ ಬರೆ ಬೆಳವಣಿಗೆ ಗಮನಸೆಳೆದಿದೆ. ಸಂವಿಧಾನದ ಆಶಯಗಳನ್ನು ಗೌರವಿಸುವ ಬಗ್ಗೆ ಭರವಸೆ ನೀಡಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಪಕ್ಷವು ಕಳೆದ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಈ ರಾಜ್ಯವನ್ನು ‘ಸರ್ವ ಜನಾಂಗಗಳ ಶಾಂತಿಯ ತೋಟ’ವನ್ನಾಗಿ…
ಬೆಂಗಳೂರು ಈಗ ಗುಂಡಿಯೂರು ಆಗಿ ಕುಖ್ಯಾತಿ ಆಗುತ್ತಿರುವುದು ದುರ್ದೈವ; ಹೆಚ್ಡಿಕೆ
ಬೆಂಗಳೂರು: ನಾಡಪ್ರಭು ಕೆಂಪೇಗೌಡರು ಕಟ್ಟಿದ ಹೆಮ್ಮೆಯ ಬೆಂಗಳೂರು ನಗರದ ಪ್ರತಿಷ್ಠೆಗೆ ಘೋರ ಪೆಟ್ಟು ಬಿದ್ದಿದೆ. ಬೆಂಗಳೂರು ಈಗ ಗುಂಡಿಯೂರು ಆಗಿ ಕುಖ್ಯಾತಿ ಆಗುತ್ತಿರುವುದು ದುರ್ದೈವ ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ. ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ ಇಬ್ಬರು ಈ ಅಪಮಾನಕ್ಕೆ ಹೊಣೆಗಾರರು. ಬೆಂಗಳೂರು ಮತ್ತು ಕರ್ನಾಟಕ ಇವತ್ತು ಅದಕ್ಷರು, ಭ್ರಷ್ಟರ ಕೈಯ್ಯಲ್ಲಿ ಸಿಕ್ಕಿ ನರಳುತ್ತಿವೆ. ಹೆಜ್ಜೆ ಹೆಜ್ಜೆಗೂ ಸಾವಿನ ಗುಂಡಿ. ಕಂಡೆಲ್ಲೆಲ್ಲ ಕಸದ ರಾಶಿ. ಗ್ರೇಟರ್ ಬೆಂಗಳೂರು ಎಂದರೆ ಇದೇನಾ? ಜಿಬಿಎ ಏನು ಮಾಡುತ್ತಿದೆ? ಜನರ ತೆರಿಗೆ ದುಡ್ಡು ನುಂಗಿ ಗೊರಕೆ ಹೊಡೆಯುತ್ತಿದೆಯಾ? ಎಂದವರು ಪ್ರಶ್ನಿಸಿದ್ದಾರೆ. ಸಾಮಾಜಿಕ ಮಾಧ್ಯಮ ‘X’ನಲ್ಲಿ ಬೆಂಗಳೂರು ನಗರದ ಪರಿಸ್ಥಿತಿ ಬಗ್ಗೆ ತಮ್ಮದೇ ಶಾಲಿಯಲ್ಲಿ ವ್ಯಾಖ್ಯಾನಿಸಿದ್ದಾರೆ. ಬೆಂಗಳೂರಿನಲ್ಲಿ ಆಡಳಿತದ ಘೋರ ವೈಫಲ್ಯವಾಗಿದೆ ಎಂದು ಉದ್ಯಮಿಗಳು ದೂರಿರುವುದು ಸರಿ ಇದೆ. ಅಂಗೈ ಹುಣ್ಣಿಗೆ ಕನ್ನಡಿ ಬೇಕಿಲ್ಲ. ಉದ್ಯಮಿಗಳು ಸರಕಾರದ ವೈಫಲ್ಯವನ್ನು ಇಷ್ಟು ಕಠಿಣವಾಗಿ ಎತ್ತಿ…
