ಜಾತಿ ಕದನ: ರಾಜಭವನ ಅಂಗಳಕ್ಕೆ ಜಿಗಿದ ಕಮಲ ನಿಯೋಗ

ಬೆಂಗಳೂರು: ಕರಡು ಜಾತಿ ಪಟ್ಟಿಯಿಂದ ಕ್ರಿಶ್ಚಿಯನ್ ಉಪಜಾತಿಗಳನ್ನು ತೆಗೆದುಹಾಕಬೇಕೆಂದು ಒತ್ತಾಯಿಸಿ, ಬಿಜೆಪಿ ನಾಯಕರ ನಿಯೋಗವು ಮಂಗಳವಾರ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿತು. ಸಾಮಾಜಿಕ ನ್ಯಾಯ ಜಾಗೃತಿ ವೇದಿಕೆಯ ಬ್ಯಾನರ್ ಅಡಿಯಲ್ಲಿ ಬಿಜೆಪಿ ಆಯೋಜಿಸಿದ್ದ ದುಂಡುಮೇಜು ಸಭೆಯಲ್ಲಿ, ಜಾತಿ ಜನಗಣತಿ (ಸಾಮಾಜಿಕ-ಆರ್ಥಿಕ, ಶೈಕ್ಷಣಿಕ ಸಮೀಕ್ಷೆ) ಕುರಿತು ಏಳು ನಿರ್ಣಯಗಳನ್ನು ಅಂಗೀಕರಿಸಲಾಯಿತು. ಸಭೆಯಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಜಗದೀಶ್ ಶೆಟ್ಟರ್, ಬಸವರಾಜ ಬೊಮ್ಮಾಯಿ, ಕೇಂದ್ರ ಸಚಿವ ವಿ. ಸೋಮಣ್ಣ, ಜೊತೆಗೆ ಪ್ರಭಾಕರ್ ಕೋರೆ, ವಿಜಯ್ ಸಂಕೇಶ್ವರ್ ಹಾಗೂ ವೀರಶೈವ-ಲಿಂಗಾಯತ ಸಮುದಾಯದ ನಾಯಕರು ಪಾಲ್ಗೊಂಡಿದ್ದರು. ಸಭೆಯ ನಿರ್ಣಯ ಪ್ರಕಾರ, ಮತಾಂತರಗೊಂಡವರಿಗೆ ಮೀಸಲು ನೀಡಲಾದ ಉಪಜಾತಿ ಸಂಕೇತಗಳನ್ನು ತಕ್ಷಣ ಹಿಂತೆಗೆದುಕೊಳ್ಳಬೇಕು. ಲಿಂಗಾಯತ ಕ್ರಿಶ್ಚಿಯನ್, ವಿಶ್ವಕರ್ಮ ಕ್ರಿಶ್ಚಿಯನ್, ದೇವಾಂಗ ಕ್ರಿಶ್ಚಿಯನ್, ಕುರುಬ ಕ್ರಿಶ್ಚಿಯನ್ ಸೇರಿ ಒಟ್ಟು 47 ಉಪಜಾತಿಗಳನ್ನು ಕರಡು ಪಟ್ಟಿಯಿಂದ ತೆಗೆದುಹಾಕಬೇಕು ಎಂದು ಒತ್ತಾಯಿಸಲಾಯಿತು. “ಈ ಉಪಜಾತಿಗಳನ್ನು…

ಯುವ ರೈತರಿಗೆ ಪಿಎಂಎಫ್ ಎಂಇ ಯೋಜನೆ ಮಾದರಿ: ಎನ್. ಚಲುವರಾಯಸ್ವಾಮಿ.

ಚಿಕ್ಕಮಗಳೂರು: ಕೃಷಿ ಕುಟುಂಬದ ಯುವಕರು, ಉದ್ಯೋಗಕ್ಕಾಗಿ ಅಲೆದಾಡುವ ಬದಲು, ಬೇರೆಯವರ ಎದುರು ಕೆಲಸಕ್ಕೆ ಅವಲಂಬಿತರಾಗಿರುವವರಿಗೆ ಕಿರು ಉದ್ದಿಮೆ ಮಾದರಿಯಾಗಿದೆ ಹಾಗೂ ಸಹಕಾರಿಯಾಗಲಿದೆ ಎಂದು ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಹೇಳಿದ್ದಾರೆ. ಚಿಕ್ಕಮಗಳೂರು ಜಿಲ್ಲಾ ಪಂಚಾಯ್ತಿ ಸಭಾಂಗಣದಲ್ಲಿ ಇಂದು ನಡೆದ ಪ್ರಧಾನಮಂತ್ರಿಗಳ ಕಿರು ಆಹಾರ ಸಂಸ್ಕರಣ ಉದ್ದಿಮೆಗಳ ನಿಯಮಬದ್ಧಗೊಳಿಸುವುಕೆ ಯೋಜನೆ ಕುರಿತು ಅರಿವು ಮೂಡಿಸುವ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು. ವಿದ್ಯೆಗೂ ವೃತ್ತಿಗೂ ಸಂಬಂಧವಿಲ್ಲ. ಶಿಕ್ಷಣ ಜ್ಞಾನಕಷ್ಟೇ ದಾರಿಯಾಗಿದೆ. ಸಾಮನ್ಯ ರೈತ ಕೃಷಿಯಲ್ಲಿ ತೊಡಗುವುದಕ್ಕೂ, ವಿದ್ಯಾವಂತರಾದವರೂ ತೊಡಗುವುದಕ್ಕೂ ವ್ಯತ್ಯಾಸವಿದೆ ಎಂದರು. ಕಿರು ಉದ್ದಿಮೆ ನಡೆಸುವ ರೈತರಿಗೆ, ಹಾಗೂ ಯುವ ಸಮುದಾಯಕ್ಕೆ ದೊಡ್ಡ ಪ್ರಮಾಣದಲ್ಲಿ ಸಬ್ಸಿಡಿಯನ್ನು ಕಾಂಗ್ರೆಸ್ ಸರ್ಕಾರ ನೀಡುತ್ತಿದೆ. ಒಟ್ಟು 15 ಲಕ್ಷ ರೂಪಾಯಿ ಸಬ್ಸಡಿಯಲ್ಲಿ 9 ಲಕ್ಷ ಸಬ್ಸಡಿಯನ್ನು ರಾಜ್ಯ ಸರ್ಕಾರ ಭರಿಸಿದರೆ, 6 ಲಕ್ಷ ರೂಪಾಯಿ ಸಬ್ಸಿಡಿಯನ್ನು ಮಾತ್ರ ಕೇಂದ್ರ ಸರ್ಕಾರ ಭರಿಸುತ್ತಿದೆ. ಇದು ದೇಶದಲ್ಲಿ ನಮ್ಮ ಕರ್ನಾಟಕ ರಾಜ್ಯದಲ್ಲಿ…

EDಯಿಂದ ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ಬಂಧನ

ಬೆಂಗಳೂರು: ಬೇಲೆಕೇರಿ ಬಂದರಿನಿಂದ ಅಕ್ರಮ ಕಬ್ಬಿಣದ ಅದಿರು ರಫ್ತು ಮಾಡಿದ ಪ್ರಕರಣದಲ್ಲಿ ಕಾಂಗ್ರೆಸ್ ಶಾಸಕ ಸತೀಶ್ ಕೃಷ್ಣ ಸೈಲ್ ಅವರನ್ನು ಜಾರಿ ನಿರ್ದೇಶನಾಲಯ ಮಂಗಳವಾರ ಬಂಧಿಸಿದೆ. ಈ ಪ್ರಕರಣದಲ್ಲಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಸೈಲ್ ಅವರಿಗೆ ಏಳು ವರ್ಷಗಳ ಜೈಲು ಶಿಕ್ಷೆ ವಿಧಿಸಿತ್ತು. ಸಾವಿರಾರು ಟನ್ ಕಬ್ಬಿಣದ ಅದಿರನ್ನು ಬಂದರಿನಿಂದ ಕಳವು ಮಾಡಿ ಅಕ್ರಮವಾಗಿ ಸಾಗಿಸಲಾಗಿತ್ತು ಎಂಬುದು ಆರೋಪ ಬಗ್ಗೆ ಇಡಿ ಕೂಡಾ ಇಸಿಐಆರ್ ದಾಖಲಿಸಿಕೊಂಡು ತನಿಖೆ ನಡೆಸುತ್ತಿತ್ತು. ವಿಚಾರಣೆಗೆ ಹಾಜರಾಗುವಂತೆ ಸೈಲ್ ಅವರಿಗೆ ಸಮನ್ಸ್‌ ಜಾರಿ ಮಾಡಿತ್ತು. ಮಂಗಳವಾರ ಶಾಂತಿನಗರ ಕಚೇರಿಗೆ ಹಾಜರಾದ ಸೈಲ್ ತನಿಖೆಗೆ ಸಹಕರಿಸದ ಹಿನ್ನೆಲೆಯಲ್ಲಿ ಅಧಿಕಾರಿಗಳು ಬಂಧಿಸಿದ್ದಾರೆ ಎನ್ನಲಾಗಿದೆ.

ಕೇಂದ್ರದಿಂದ ರಾಜ್ಯಕ್ಕೆ ಎಲೆಕ್ಟ್ರಿಕ್ ಬಸ್ ಗಿಫ್ಟ್ ಎಂದ ಬಿಜೆಪಿಗೆ ಟಾಂಗ್.. ಬಸ್ ಕೊಡುಗೆಯ ಇತಿಹಾಸ ತೆರೆದಿಟ್ಟ ಕಾಂಗ್ರೆಸ್

ಬೆಂಗಳೂರು: ಎಲೆಕ್ಟ್ರಿಕ್ ಬಸ್ಸುಗಳನ್ನು ಖಾಸಗಿಯವರಿಂದ ಬಾಡಿಗೆಗೆ ಪಡೆದು ಸಾರಿಗೆ ಸಂಸ್ಥೆಗಳಿಗೆ ನೀಡಿರುವುದನ್ನು ಕೇಂದ್ರ ಸರ್ಕಾರ ಬಸ್ ಖರೀದಿ ಮಾಡಿ ಸಾರಿಗೆ ಸಂಸ್ಥೆಗಳಿಗೆ ನೀಡಿದೆ ಎಂದು ತಪ್ಪಾಗಿ ಅರ್ಥೈಸಿ ಬೊಬ್ಬೆ ಹೊಡೆಯುವುದನ್ನು ಬಿಟ್ಟು ಬಾಡಿಗೆ/ಲೀಸ್ ಮತ್ತು ಖರೀದಿಯ ವ್ಯತ್ಯಾಸವನ್ನಾದರೂ ತಿಳಿಯಬೇಡವೇ? ಒಂದಷ್ಟಾದರೂ ಸಾಮಾನ್ಯ ಜ್ಞಾನ ಬೆಳೆಸಿಕೊಳ್ಳಿ, ನಿಮ್ಮ ಮಾಹಿತಿಗಾಗಿ ಓದಿಕೊಳ್ಳಿ ಎಂದು ಕಾಂಗ್ರೆಸ್ ಪಕ್ಷ ಟಾಂಗ್ ಕೊಟ್ಟಿದೆ. PM e-Drive / PM e-Seva ಯೋಜನೆಗಳಡಿಯಲ್ಲಿ ಸಾರಿಗೆ ಸಂಸ್ಥೆಗಳಿಗೆ 5250 ಎಲೆಕ್ಟ್ರಿಕ್ ಬಸ್ಸುಗಳನ್ನು‌ ಕೇಂದ್ರ ಸರ್ಕಾರ ಖರೀದಿಸಿ ನೀಡಿದೆ ಎಂಬ ಭ್ರಮೆಯಲ್ಲಿ‌ ತಪ್ಪು ಮಾಹಿತಿಯೊಂದಿಗೆ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡು ಸಂಭ್ರಮಿಸಿದ ವಾಸ್ತವ ಸತ್ಯ ಏನೆಂದರೆ, ವಿನಿಮ್ಮ ಕೇಂದ್ರ‌ ಸರ್ಕಾರ ಎಲೆಕ್ಟ್ರಿಕ್ ಬಸ್ಸುಗಳನ್ನು ಖರೀದಿಸಲು ಖಾಸಗಿ ಕಂಪನಿಗಳಿಗೆ ಅಂದರೆ ಒಲೆಕ್ಟ್ರಾ, ಜೆ.ಬಿ.ಎಂ, ಟಾಟಾ, ಸ್ವಿಪ್ಟ್ ಮೊಬಿಲಿಟಿ ಅವರಿಗೆ ಅನುದಾನ ನೀಡಿ, ಖಾಸಗಿಯವರು ಸಾರಿಗೆ ಸಂಸ್ಥೆಗಳಿಗೆ ಆ ಬಸ್ಸುಗಳನ್ನು ಬಾಡಿಗೆಗೆ/ಲೀಸ್ ಆಧಾರದಲ್ಲಿ…

‘ಮುಡಾ’ ವಿಷಯದಲ್ಲಿ, ಸಿದ್ದರಾಮಯ್ಯ ತಪ್ಪಿತಸ್ಥರು, ಪ್ರಮುಖ ವಿಷಯಗಳನ್ನು ಮುಚ್ಚಿಟ್ಟು ಕ್ಲೀನ್ ಚಿಟ್ ನೀಡಲಾಗಿದೆ: ಬಿಜೆಪಿ ಆರೋಪ

ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಕುಟುಂಬಕ್ಕೆ ಏಕಸದಸ್ಯ ಆಯೋಗವು ಕ್ಲೀನ್ ಚಿಟ್ ನೀಡಿದ ಬೆಳವಣಿಗೆಯನ್ನು ಬಿಜೆಪಿ ಆಕ್ಷೇಪಿಸಿದೆ. ಸರ್ಕಾರದ ವಿರುದ್ಧ ಗಂಭೀರ ಆರೋಪಗಳನ್ನು ಹೊರಹಾಕಿದೆ. ಶುಕ್ರವಾರ ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ವಿಧಾನ ಪರಿಷತ್ತಿನ ವಿರೋಧ ಪಕ್ಷದ ಮುಖ್ಯ ಸಚೇತಕ ಎನ್. ರವಿಕುಮಾರ್, “ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ರಕ್ಷಣೆ ಒದಗಿಸಲು ಆಯೋಗದ ವರದಿಯನ್ನು ತಿರುಚಲಾಗಿದೆ. ವಾಸ್ತವದಲ್ಲಿ ಅವರು ಶೇ. 100ರಷ್ಟು ತಪ್ಪಿತಸ್ಥರು” ಎಂದು ಆರೋಪಿಸಿದರು. “60 ಕೋಟಿ ರೂ. ಪಾವತಿಸಿದರೆ ನಿವೇಶನಗಳನ್ನು ಹಿಂತಿರುಗಿಸಲಾಗುತ್ತದೆ ಎಂದು ಸಿಎಂ ಸ್ವತಃ ಹೇಳಿದ್ದರು. ನಂತರ ಅವರು ಮಾತು ತಪ್ಪಿದರು. ಕ್ಲೀನ್ ಚಿಟ್‌ನಲ್ಲಿ ಹಲವು ಅಂಶಗಳನ್ನು ಮುಚ್ಚಿಡಲಾಗಿದೆ. ಇದು ಭ್ರಷ್ಟಾಚಾರದ ಉದಾಹರಣೆ” ಎಂದರು. ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಮತಪತ್ರ ಬಳಕೆಯ ನಿರ್ಧಾರವನ್ನು ಟೀಕಿಸಿದ ಅವರು, “ಇವಿಎಂ ಬಿಟ್ಟು ಮತಪತ್ರಗಳನ್ನು ಬಳಸಿ ಚುನಾವಣೆ ನಡೆಸುವುದು ರಾಜ್ಯವನ್ನು…

ಸ್ಥಳೀಯ ಚುನಾವಣೆ: ಮತಪತ್ರ ಬಳಕೆಯ ನಿರ್ಧಾರಕ್ಕೆ ಬಿಜೆಪಿಯ ವಿರೋಧ ಏಕೆ? ಡಿಕೆಶಿ ಪ್ರಶ್ನೆ

ಬೆಂಗಳೂರು: ಸ್ಥಳೀಯ ಸಂಸ್ಥೆಗಳ ಚುನಾವಣೆಗಳನ್ನು ಇವಿಎಂ ಬದಲಿಗೆ ಮತಪತ್ರಗಳ ಮೂಲಕ ನಡೆಸುವ ರಾಜ್ಯ ಸರ್ಕಾರದ ನಿರ್ಧಾರಕ್ಕೆ ಬಿಜೆಪಿ ತೀವ್ರ ಆಕ್ಷೇಪ ವ್ಯಕ್ತಪಡಿಸಿರುವ ಹಿನ್ನೆಲೆಯಲ್ಲಿ, ಉಪಮುಖ್ಯಮಂತ್ರಿ ಮತ್ತು ಪ್ರದೇಶ ಕಾಂಗ್ರೆಸ್ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಬಿಜೆಪಿ ನಿಲುವನ್ನು ಪ್ರಶ್ನಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇದು ಸರ್ಕಾರದ ನಿರ್ಧಾರ. ಸ್ಥಳೀಯ ಸಂಸ್ಥೆಗಳ ಚುನಾವಣೆಯನ್ನು ನಡೆಸುವ ಅಧಿಕಾರ ರಾಜ್ಯ ಸರ್ಕಾರಕ್ಕಿದೆ. ಕಾನೂನಿನಲ್ಲಿ ಸ್ಪಷ್ಟವಾಗಿಯೇ — ಇವಿಎಂ ಅಥವಾ ಮತಪತ್ರ ಬಳಸಬಹುದು ಎಂದು ಹೇಳಿದೆ. ಆ ಕಾನೂನು ತಂದದ್ದು ಬಿಜೆಪಿ ಸರ್ಕಾರವೇ. ಹೀಗಿರುವಾಗ ಏಕೆ ಅಸಮಾಧಾನ? ಎಂದು ಪ್ರಶ್ನಿಸಿದರು. ರೈತ ಭೂಸ್ವಾಧೀನ ಪ್ರತಿಭಟನೆ, ತಮ್ಮ ವಿರುದ್ಧ ಹಾಗೂ ಸಹೋದ್ಯೋಗಿಗಳ ವಿರುದ್ಧ ದಾಖಲಾಗಿದ್ದ ಪ್ರಕರಣಗಳ ಹಿಂಪಡೆಯುವ ಕುರಿತು ಕೇಳಿದ ಪ್ರಶ್ನೆಗಳಿಗೆ ಉತ್ತರಿಸುತ್ತಾ, “ಅನೇಕ ಪ್ರಕರಣಗಳನ್ನು ಹಿಂದಕ್ಕೆ ಪಡೆಯಲಾಗಿದೆ. ರಾಜಕೀಯ ಒತ್ತಡದಿಂದ ಬಿಜೆಪಿ ಸರ್ಕಾರವೇ ಹಲವಾರು ಪ್ರಕರಣಗಳನ್ನು ದಾಖಲಿಸಿತ್ತು. ಭಾಷೆ, ನೀರಿನ ಹಕ್ಕು, ರೈತರ…

ಸಿದ್ದು ಸರ್ಕಾರದಲ್ಲಿ ಕಮೀಷನ್ ತಲ್ಲಣ; ಭೋವಿ ನಿಗಮ ಅಧ್ಯಕ್ಷ ಸ್ಥಾನಕ್ಕೆ ರವಿಕುಮಾರ್ ರಾಜೀನಾಮೆ

ಬೆಂಗಳೂರು: ರಾಜ್ಯ ಭೋವಿ ಅಭಿವೃದ್ಧಿ ನಿಗಮದಲ್ಲಿ ಅಕ್ರಮ ಆರೋಪದ ನಡುವೆಯೇ ನಿಗಮದ ಅಧ್ಯಕ್ಷ ಎಸ್. ರವಿಕುಮಾರ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಅವರು ಶುಕ್ರವಾರ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ರಾಜೀನಾಮೆ ಪತ್ರ ಸಲ್ಲಿಸಿದರೆಂಬ ಸುದ್ದಿ ಕುತೂಹಲ ಕೆರಳಿಸಿದೆ. ಕಮಿಷನ್ ವಸೂಲಿ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡುವಂತೆ ಸೂಚನೆ ನೀಡಿದ್ದರಿಂದ ಈ ಬೆಳವಣಿಗೆ ನಡೆದಿದೆ ಎನ್ನಲಾಗಿದೆ. ಸುಮಾರು ₹15 ಕೋಟಿ ವೆಚ್ಚದಲ್ಲಿ ಜಾರಿಗೊಂಡ ಭೂಒಡೆತನ ಯೋಜನೆಯಡಿ 60 ಎಕರೆ ಭೂಮಿ ಖರೀದಿ ಮಾಡಿ ಫಲಾನುಭವಿಗಳಿಗೆ ಹಂಚಿಕೆ ಮಾಡುವ ಪ್ರಕ್ರಿಯೆಯಲ್ಲಿ, ಶೇಕಡ 60ರಷ್ಟು ಕಮಿಷನ್ ವಸೂಲಿ ಮಾಡಲಾಗಿದೆ ಎಂಬ ಗಂಭೀರ ಆರೋಪ ಹೊರಬಿದ್ದಿತ್ತು. ಈ ಸಂಬಂಧಿತ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು. ಈ ವಿಷಯ ರಾಜಕೀಯ ವಲಯದಲ್ಲಿ ಚರ್ಚೆಗೆ ಕಾರಣವಾಗಿದ್ದರೆ, ರವಿಕುಮಾರ್ ಅವರು ಆರೋಪಗಳನ್ನು ತಳ್ಳಿಹಾಕಿದ್ದರು. ಆದಾಗ್ಯೂ ಪಕ್ಷಕ್ಕೆ ಮುಜುಗರ ಉಂಟಾಗದಂತೆ…

ಮೆಟ್ರೋ ಪ್ರಯಾಣ ದುಬಾರಿ: ತೇಜಸ್ವಿ ಸೂರ್ಯ ಆಕ್ಷೇಪ

ಬೆಂಗಳೂರು: ಬೆಂಗಳೂರು ಮೆಟ್ರೋ ರೈಲು ಪ್ರಯಾಣ ದರ ಏರಿಕೆಯನ್ನು ಬಿಜೆಪಿ ಸಂಸದ ತೇಜಸ್ವಿ ಸೂರ್ಯ ತೀವ್ರವಾಗಿ ಆಕ್ಷೇಪಿಸಿದ್ದಾರೆ. ನಗರದ ಮೆಟ್ರೋದಲ್ಲಿ ದಿನವೂ ಸರಾಸರಿ 10 ಲಕ್ಷ ಜನರು – ವಿದ್ಯಾರ್ಥಿಗಳು, ಸಾಮಾನ್ಯ ಉದ್ಯೋಗಿಗಳು, ಐಟಿ-ಬಿಟಿ ವಲಯದವರು – ಪ್ರಯಾಣಿಸುತ್ತಾರೆ. ಆದರೆ ಇತ್ತೀಚಿನ ದರ ಏರಿಕೆಯಿಂದ ಸಾಮಾನ್ಯ ಬಳಕೆದಾರರಿಗೆ ಮೆಟ್ರೋ ದುಬಾರಿಯಾಗಿದೆ ಎಂದು ಅವರು ಸಾಮಾಜಿಕ ಜಾಲತಾಣದಲ್ಲಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ. “ದರ ಏರಿಕೆಯಿಂದ ಬೆಂಗಳೂರು ಮೆಟ್ರೋ ದೇಶದಲ್ಲೇ ಅತಿ ದುಬಾರಿ ಮೆಟ್ರೋ ಆಗಿದೆ. ಡೆಲ್ಲಿ ಮೆಟ್ರೋ ದರ ಏರಿಕೆ ಗರಿಷ್ಠ ₹4ಕ್ಕೆ ಮಿತವಾಗಿದ್ದರೆ, ಬೆಂಗಳೂರಿನಲ್ಲಿ ಪ್ರತಿ ಪ್ರಯಾಣಕ್ಕೂ ಅತಿಯಾದ ಭಾರವಾಗಿದೆ” ಎಂದು ಅವರು ಹೋಲಿಕೆ ಮಾಡಿದ್ದಾರೆ. 25 ಕಿ.ಮೀ. ಗಿಂತ ಹೆಚ್ಚು ದೂರ ಕೆಲಸಕ್ಕೆ ಪ್ರಯಾಣಿಸುವವರು ಪ್ರತಿ ಸಾರಿ ₹90 ಪಾವತಿಸಬೇಕಾಗುತ್ತದೆ. ಮೊದಲ ಮತ್ತು ಕೊನೆಯ ಮೈಲಿ ಸಂಪರ್ಕ ವೆಚ್ಚ ಸೇರಿ ಇದು ಸಾರ್ವಜನಿಕ ಸಾರಿಗೆಗೆ ನಿರುತ್ಸಾಹ ಉಂಟುಮಾಡಿ…

ಸೆಪ್ಟೆಂಬರ್ 28ರಿಂದ ‘ಬಿಗ್ ಬಾಸ್ ಕನ್ನಡ ಸೀಸನ್ 12’; ಕಿಚ್ಚನ ಗರಡಿ ಸೇರುವ ಸ್ಪರ್ಧಿಗಳ ಬಗ್ಗೆ ಕುತೂಹಲ

ಬೆಂಗಳೂರು: ಕಿರುತೆರೆಯ ಜನಪ್ರಿಯ ರಿಯಾಲಿಟಿ ಶೋ ‘ಬಿಗ್ ಬಾಸ್ ಕನ್ನಡ’ ಅಭಿಮಾನಿಗಳಿಗೆ ಖುಷಿಯ ಸುದ್ದಿ. ಈಗಾಗಲೇ 11 ಸೀಸನ್‌ಗಳನ್ನು ಯಶಸ್ವಿಯಾಗಿ ಮುಗಿಸಿರುವ ಈ ಶೋ, ಶೀಘ್ರದಲ್ಲೇ 12ನೇ ಸೀಸನ್ ಪ್ರೇಕ್ಷಕರ ಮುಂದೆ ಬರಲಿದೆ. ಸೆಪ್ಟೆಂಬರ್ 28, ಭಾನುವಾರದಂದು ಗ್ರ್ಯಾಂಡ್ ಓಪನಿಂಗ್ ನಡೆಯಲಿದ್ದು, ಈ ಬಾರಿ ಬಿಗ್ ಬಾಸ್ ಮನೆ ಪ್ರವೇಶಿಸುವ ಸ್ಪರ್ಧಿಗಳು ಯಾರು ಎಂಬ ಕುತೂಹಲ ಉಂಟಾಗಿದೆ. View this post on Instagram A post shared by Colors Kannada Official (@colorskannadaofficial) ಕಿಚ್ಚ ಸುದೀಪ್ ಅವರು ನಿರೂಪಣೆಗೆ ಸಜ್ಜಾಗಿದ್ದು, ಶೋವನ್ನು ‘ಕಲರ್ಸ್ ಕನ್ನಡ’ ವಾಹಿನಿಯಲ್ಲಿ ಪ್ರಸಾರ ಮಾಡಲಾಗುತ್ತಿದೆ. ಸುದೀಪ್ ಅವರ ಹುಟ್ಟುಹಬ್ಬದ ಪ್ರಯುಕ್ತ ಪ್ರೋಮೋ ಬಿಡುಗಡೆ ಆಗಿದ್ದು, ಅಭಿಮಾನಿಗಳಲ್ಲಿ ಕುತೂಹಲ ಹೆಚ್ಚಿಸಿದೆ. ಪ್ರೋಮೋದಲ್ಲಿ – “ರಿಯಾಲಿಟಿ ಶೋಗಳ ಬಾಸ್, ರಿಯಲ್ ಎಂಟರ್‌ಟೈನ್‌ಮೆಂಟ್‌ಗೆ ಒಂದೇ ಅಡ್ರೆಸ್. ಬಿಗ್ ಬಾಸ್ ಕನ್ನಡ ಸೀಸನ್ 12 ಗ್ರ್ಯಾಂಡ್…

ಗ್ರೇಟರ್ ಬೆಂಗಳೂರು ಅಥಾರಿಟಿ; ಐದು ಪಾಲಿಕೆಗಳ ವ್ಯಾಪ್ತಿಗಳಿಗೆ ವಿಧಾನಸಭಾ ಕ್ಷೇತ್ರಗಳ ಹಂಚಿಕೆ

ರಾಜಧಾನಿ ಬೆಂಗಳೂರಿನ ಆಡಳಿತಾತ್ಮಕ ವ್ಯವಸ್ಥೆಯಲ್ಲಿ ದೊಡ್ಡ ಬದಲಾವಣೆ ಜಾರಿಯಾಗಿದೆ. ರಾಜ್ಯ ಸರ್ಕಾರ ಬುಧವಾರದಿಂದಲೇ ಗ್ರೇಟರ್ ಬೆಂಗಳೂರು ಅಥಾರಿಟಿ (ಜಿಬಿಎ) ಜಾರಿಗೆ ಬರುವಂತೆ ಅಂತಿಮ ಅಧಿಸೂಚನೆ ಹೊರಡಿಸಿದೆ. ಇದರೊಂದಿಗೆ, ಇನ್ನು ಮುಂದೆ ಬಿಬಿಎಂಪಿ ಬದಲು ಜಿಬಿಎ ನಗರದ ಆಡಳಿತವನ್ನು ನೋಡಿಕೊಳ್ಳಲಿದೆ. ಜಿಬಿಎ ಅಡಿಯಲ್ಲಿ . ಪೂರ್ವ, ಪಶ್ಚಿಮ, ಉತ್ತರ, ದಕ್ಷಿಣ ಹಾಗೂ ಕೇಂದ್ರ ಹೆಸರುಗಳಲ್ಲಿ ಐದು ಹೊಸ ನಗರ ಪಾಲಿಕೆಗಳು ಕಾರ್ಯನಿರ್ವಹಿಸಲಿವೆ. ಪ್ರಸ್ತುತ ಬಿಬಿಎಂಪಿಯ 198 ವಾರ್ಡ್‌ಗಳನ್ನು ಈ ಐದು ಪಾಲಿಕೆಗಳ ನಡುವೆ ಹಂಚಿಕೆ ಮಾಡಲಾಗಿದೆ. ಪ್ರತಿಯೊಂದು ಪಾಲಿಕೆಗೆ ಎರಡು ವಲಯಗಳಂತೆ ಒಟ್ಟು 10 ವಲಯಗಳನ್ನು ರಚಿಸಲಾಗಿದೆ. ‘ಜಿಬಿಎ’ಗೆ ಸಿಎಂ ಸಿದ್ದರಾಮಯ್ಯ ಜಿಬಿಎ ಅಧ್ಯಕ್ಷರಾಗಿದ್ದು, ಡಿಸಿಎಂ ಡಿ.ಕೆ. ಶಿವಕುಮಾರ್ ಉಪಾಧ್ಯಕ್ಷರಾಗಿದ್ದಾರೆ. ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್, ಬೆಂಗಳೂರಿನ ಮೂವರು ಸಂಸದರು, ಹಾಗೂ ನಗರದ ಶಾಸಕರನ್ನು ಒಳಗೊಂಡಂತೆ 73 ಪದನಿಮಿತ್ತ ಸದಸ್ಯರನ್ನು ನೇಮಿಸಲಾಗಿದೆ. ಪಾಲಿಕೆ ವ್ಯಾಪ್ತಿಯ ವಿಧಾನಸಭಾ ಕ್ಷೇತ್ರಗಳು: ಬೆಂಗಳೂರು…