ಬೆಂಗಳೂರು: ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ಮತ್ತು ಎಸ್ಕಾಂಗಳ ಅಧಿಕಾರಿ/ನೌಕರರಿಗೆ 2024-25 ನೇ ಹಣಕಾಸು ವರ್ಷಕ್ಕೆ ಬೋನಸ್/ಅನುಗ್ರಹ ಪೂರ್ವಕವನ್ನು ಮಂಜೂರು ಮಾಡುವ ಬಗ್ಗೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಇಂಧನ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಗಳು ಕರ್ನಾಟಕ ವಿದ್ಯುತ್ ಪ್ರಸರಣ ನಿಗಮದ ವ್ಯವಸ್ಥಾಪಕ ನಿರ್ದೇಶಕರಿಗೆ ನಿರ್ದೇಶನ ನೀಡಿ, ಆರ್ಥಿಕ ಇಲಾಖೆ ಟಿಪ್ಪಣಿ ಸಂಖ್ಯೆ:ಆಇ 339 ವೆಚ್ಚ-1/2025 2:26.08.2025 ವಿಷಯಕ್ಕೆ ಸಂಬಂಧಿಸಿದಂತೆ, ಉಲ್ಲೇಖಿತ (1)ರ ಪ್ರಸ್ತಾವನೆಯನ್ನು ಪರಿಗಣಿಸಿ ,ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ ಮತ್ತು ಎಸ್ಕಾಂಗಳ ನೌಕರರಿಗೆ 2024-25ನೇ ಆರ್ಥಿಕ ವರ್ಷಕ್ಕೆ ಕನಿಷ್ಟ ತಲಾ ರೂ.7,000/- ರಂತೆ ಅನುಗ್ರಹ ಭತ್ಯೆಯನ್ನು (Ex-gratia) ನೀಡಬೇಕೆಂದು ಸೂಚಿಸಿದ್ದಾರೆ. ಹಾಗೂ ಇದಕ್ಕೆ ತಗಲುವ ವೆಚ್ಚವನ್ನು ನಿಗಮಗಳ ಆಂತರಿಕ ಸಂಪನ್ಮೂಲಗಳಿಂದ ಭರಿಸುವ ಷರತ್ತಿಗೊಳಪಟ್ಟು ಉಲ್ಲೇಖಿತ (2)ರ ಟಿಪ್ಪಣಿಯಲ್ಲಿ ಆರ್ಥಿಕ ಇಲಾಖೆಯ ಸಹಮತಿ ನೀಡಲಾಗಿದೆ ಎಂದು ಇಂಧನ ಇಲಾಖೆಯ ಅಧೀನ ಕಾರ್ಯದರ್ಶಿ ವಿನೋದ್ ಕುಮಾರ್…
Category: ವಿದೇಶ
ಕರ್ನಾಟಕ ವಿಧಾನ ಪರಿಷತ್ ಗೆ ನಾಲ್ವರ ಹೆಸರು ಅಂತಿಮ..
ಬೆಂಗಳೂರು: ಕರ್ನಾಟಕ ವಿಧಾನ ಪರಿಷತ್‌ನಲ್ಲಿ ಖಾಲಿ ಇರುವ ನಾಲ್ಕು ಸ್ಥಾನಗಳಿಗೆ ಕಾಂಗ್ರೆಸ್ ನಾಯಕರ ಹೆಸರುಗಳನ್ನು ಹೈಕಮಾಂಡ್ ಅಂತಿಮಗೊಳಿಸಿದೆ ಎನ್ನಲಾಗಿದೆ. ಈ ಹಿಂದೆ ಅಂತಿಮಗೊಳಿಸಲಾಗಿದ್ದ ಪಟ್ಟಿಯಿಂದ ಇಬ್ಬರನ್ನು ಕೈಬಿಟ್ಟು ಹೊಸಬರನ್ನು ಸೇರ್ಪಡೆ ಮಾಡಲಾಗಿದೆ. 2008 ರಲ್ಲಿ ಹುಬ್ಬಳ್ಳಿ ಪೂರ್ವ ಮೀಸಲು ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿ ಸೋಲನ್ನನುಭವಿಸಿದ್ದ ಎಪ್.ಎಚ್.ಜಕ್ಕಪ್ಪನವರಿಗೆ ಈ ಬಾರಿ ಮೇಲ್ಮನವಿ ಪ್ರವೇಶಿಸುವ ಅವಕಾಶ ಸಿಕ್ಕಿದೆ. ಅವರ ಜೊತೆಗೆ ಆರತಿ ಕೃಷ್ಣ, ಕೆಪಿಸಿಸಿ ಮಾಧ್ಯಮ ವಿಭಾಗದ ಮುಖ್ಯಸ್ಥ ರಮೇಶ್ ಬಾಬು ಹಾಗೂ ಪತ್ರಕರ್ತ ಶಿವಕುಮಾರ್ ಅವರನ್ನು ನಾಮ ನಿರ್ದೇಶನ ಮಾಡಲು ಕಾಂಗ್ರೆಸ್ ಹೈಕಮ್ಯಾಂಡ್ ಒಪ್ಪಿಗೆ ನೀಡಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.
ಮೈಸೂರು ದಸರಾ: ಬಾನು ಮುಷ್ತಾಕ್ ಅವರಿಂದ ಉದ್ಘಾಟಿಸುವುದಕ್ಕೆ ರಾಜಮನೆತನದ ಆಕ್ಷೇಪ
ಬೆಂಗಳೂರು: ವಿಶ್ವವಿಖ್ಯಾತ ಮೈಸೂರು ದಸರಾ ಉದ್ಘಾಟನೆಗೆ ಪ್ರತಿಷ್ಠಿತ ಬೂಕರ್ ಪ್ರಶಸ್ತಿ ವಿಜೇತ ಸಾಹಿತಿ ಬಾನು ಮುಷ್ತಾಕ್ ಅವರನ್ನು ರಾಜ್ಯ ಸರ್ಕಾರ ಆಯ್ಕೆ ಮಾಡಿರುವ ವಿಚಾರ ಇದೀಗ ರಾಜಕೀಯ ವಾಕ್ಸಮರಕ್ಕೆ ಕಾರಣವಾಗಿದೆ. ಆಡಳಿತರೂಢ ಕಾಂಗ್ರೆಸ್ ನಾಯಕರ ನಡೆಗೆ ಪ್ರತಿಪಕ್ಷ ಬಿಜೆಪಿ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಇದೇ ವೇಳೆ, ಮೈಸೂರು ರಾಜಮನೆತನ ಕೂಡಾ ದಸರಾ ಉದ್ಘಾಟನೆಗೆ ಸಾಹಿತಿ ಬಾನು ಮುಷ್ತಾಕ್ ಅವರನ್ನು ಆಯ್ಕೆ ಮಾಡಿರುವ ಬಗ್ಗೆ ಬೇಸರ ವ್ಯಕ್ತಪಡಿಸಿದೆ. ಸರ್ಕಾರದ ನಡೆಯನ್ನು ರಾಜವಂಶಸ್ಥರೂ ಆದ ಮೈಸೂರು ಸಂಸದ ಯಧುವೀರ್ ಬಲವಾಗಿ ವಿರೋಧಿಸಿದ್ದಾರೆ. ‘ಭಾನು ಮುಷ್ತಾಕ್ ಅವರು ಕನ್ನಡ ಸಾಹಿತ್ಯ ಲೋಕದ ವಿಶಿಷ್ಟ ಬರಹಗಾರ್ತಿ ಮತ್ತು ಅಂತರಾಷ್ಟ್ರೀಯ ಬೂಕರ್ ಪ್ರಶಸ್ತಿಯನ್ನು ಗೆದ್ದ ಮೊದಲ ಕನ್ನಡ ಲೇಖಕಿಯಾಗಿ, ಕನ್ನಡ ಸಾಹಿತ್ಯ ಲೋಕಕ್ಕೆ ಅಪಾರ ಹೆಮ್ಮೆಯನ್ನು ತಂದಿದ್ದಾರೆ ನಿಜ ಆದರೆ ಈ ಹಿಂದೆ ಕನ್ನಡ ತಾಯಿ ಭುವನೇಶ್ವರಿಯ ಬಗ್ಗೆ ಅವರು ಕೆಲವು ಹೇಳಿಕೆಗಳನ್ನು ನೀಡಿರುವುದು…
60 ದಿನಗಳಲ್ಲಿ ಆರೋಪಪಟ್ಟಿ ಸಲ್ಲಿಕೆ ಕಡ್ಡಾಯ: ಸಿಎಂ ಎಚ್ಚರಿಕೆ
ಬೆಂಗಳೂರು: ಪರಿಶಿಷ್ಟ ಜಾತಿ–ಪಂಗಡಗಳ ಮೇಲೆ ನಡೆಯುತ್ತಿರುವ ದೌರ್ಜನ್ಯ ಪ್ರಕರಣಗಳಲ್ಲಿ ತನಿಖೆ ವಿಳಂಬವಾಗುತ್ತಿರುವುದರ ಬಗ್ಗೆ ಮುಖ್ಯಮಂತ್ರಿ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. 60 ದಿನಗಳ ಒಳಗೆ ಆರೋಪಪಟ್ಟಿ ಸಲ್ಲಿಸಬೇಕೆಂಬ ನಿಯಮ ಇದ್ದರೂ, ಕಳೆದ ಆರು ತಿಂಗಳಲ್ಲಿ ಕೇವಲ ಶೇಕಡಾ 84 ಪ್ರಕರಣಗಳಲ್ಲಿ ಮಾತ್ರ ನಿಯಮ ಪಾಲನೆಗೊಂಡಿರುವುದನ್ನು ಅವರು ಆಕ್ಷೇಪಿಸಿದರು. ಸೋಮವಾರ ನಡೆದ ಪರಿಶಿಷ್ಟ ಜಾತಿ/ಪಂಗಡಗಳ ರಾಜ್ಯ ಮಟ್ಟದ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸಭೆಯಲ್ಲಿ ಮಾತನಾಡಿದ ಅವರು, “ಪ್ರತಿ ಪ್ರಕರಣದಲ್ಲೂ 60 ದಿನಗಳಲ್ಲಿ ಆರೋಪಪಟ್ಟಿ ಸಲ್ಲಿಸಲೇಬೇಕು. ಪೊಲೀಸರು ಯಾವ ನೆಪಕ್ಕೂ ಜಾಗ ಬಿಡುವುದಿಲ್ಲ. ನ್ಯಾಯಾಲಯದಲ್ಲಿ ತಡೆ ಆದೇಶ ಇದ್ದರೆ ಅದನ್ನು ಕೂಡಲೇ ತೆರವುಗೊಳಿಸಿ ಪ್ರಕರಣ ಮುಂದುವರಿಸಬೇಕು” ಎಂದು ಅಧಿಕಾರಿಗಳಿಗೆ ಎಚ್ಚರಿಸಿದರು. ಸಭೆಯ ಮುಖ್ಯಾಂಶಗಳು: ರಾಜ್ಯದಲ್ಲಿ ದೌರ್ಜನ್ಯ ಪ್ರಕರಣಗಳ ತ್ವರಿತ ವಿಚಾರಣೆಗೆ 11 ವಿಶೇಷ ನ್ಯಾಯಾಲಯಗಳನ್ನು ಸ್ಥಾಪಿಸಲಾಗಿದೆ. ಶಿಕ್ಷೆಯ ಪ್ರಮಾಣ ಈಗ ಕೇವಲ ಶೇಕಡಾ 10ರಷ್ಟಿದೆ; ಇದು ಹೆಚ್ಚಾಗಬೇಕೆಂದು ಸಿಎಂ ಸೂಚನೆ.…
ಕೊಲ್ಲೂರು ಭಕ್ತರಿಗೆ ಅನುಕೂಲ; ಮೂಕಾಂಬಿಕಾ ರಸ್ತೆ ಬೈಂದೂರಿನಲ್ಲಿ ಸೂಪರ್ ಫಾಸ್ಟ್ ಎಕ್ಸ್‌ಪ್ರೆಸ್ ನಿಲುಗಡೆ
ಬೆಂಗಳೂರು: ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಿಯ ದರ್ಶನಕ್ಕೆ ತೆರಳುವ ಭಕ್ತರ ಸೌಲಭ್ಯಕ್ಕಾಗಿ ಸೂಪರ್ ಫಾಸ್ಟ್ ಎಕ್ಸ್‌ಪ್ರೆಸ್ ರೈಲಿಗೆ (ರೈಲು ಸಂಖ್ಯೆ 10215/10216) ಬೈಂದೂರಿನ ಮೂಕಾಂಬಿಕಾ ರೋಡ್‌ನಲ್ಲಿ ನೂತನ ನಿಲ್ದಾಣ ಒದಗಿಸಲಾಗಿದೆ. ಗೋವಾದ ಮಡಗಾಂವ್‌ನಿಂದ ಕೇರಳದ ಎರ್ನಾಕುಲಂವರೆಗೆ ಸಂಚರಿಸುವ ಈ ರೈಲು ಇದೀಗ ಬೈಂದೂರಿನಲ್ಲಿ ನಿಲುಗಡೆ ಮಾಡಲಿದೆ. ಈ ಕುರಿತಂತೆ ಮಹತ್ವದ ಆದೇಶ ಹೊರಬಿದ್ದಿದ್ದು, ಶೀಘ್ರದಲ್ಲೇ ಜಾರಿಗೆ ಬರಲಿದೆ ಎಂದು ಕೇಂದ್ರ ರೈಲ್ವೆ ಸಚಿವ ವಿ.ಸೋಮಣ್ಣ ತಿಳಿಸಿದ್ದಾರೆ. “ಆ ಭಾಗದ ಪ್ರಯಾಣಿಕರು, ವಿಶೇಷವಾಗಿ ಮೂಕಾಂಬಿಕಾ ದೇವಾಲಯದ ಭಕ್ತಾದಿಗಳು ಇದರಿಂದ ಪ್ರಯೋಜನ ಪಡೆಯಲಿದ್ದಾರೆ. ಜನತೆಗೆ ರೈಲು ಸೇವೆ ಹೆಚ್ಚು ಅನುಕೂಲವಾಗಲಿದೆ” ಎಂದು ಸೋಮಣ್ಣ ಹೇಳಿದರು.
“ಮಂಗಳೂರಿಗೆ ಹೈಕೋರ್ಟ್ ಪೀಠ ಬರಲಿ, ಜೊತೆಗೆ ಜಿಲ್ಲಾ ಕೋರ್ಟುಗಳಿಗೂ ರಿಟ್ ಅಧಿಕಾರ ಸಿಗಲಿ..”
ಮಂಗಳೂರು: ಕರಾವಳಿ ಕರ್ನಾಟಕಕ್ಕೆ ಪ್ರತ್ಯೇಕ ಹೈಕೋರ್ಟ್ ಪೀಠ ಬೇಕೆಂಬ ಕೂಗು ಮತ್ತೆ ಕೇಳಿಬಂದಿದೆ. ಇದರ ಜೊತೆಯಲ್ಲೇ, ರಿಟ್ ಅಧಿಕಾರ (writ powers) ಸಂಬಂಧದ ಪ್ರಕರಣಗಳನ್ನು ಜಿಲ್ಲಾ ನ್ಯಾಯಾಲಯಗಳಲ್ಲಿ ನಡೆಸಲು ಅನುಕೂಲವಾಗುವಂತೆ ಕಾನೂನಿಗೆ ತಿದ್ದುಪಡಿ ತರುವಂತೆಯೂ ಮಂಗಳೂರಿನ ವಕೀಲರ ಸಮೂಹ ಒತ್ತಾಯಿಸಿದೆ. ವಕೀಲರ ಈ ಆಗ್ರಹ ದೇಶದ ನ್ಯಾಯಾಂಗ ವ್ಯವಸ್ಥೆಯಲ್ಲಿ ಸಂಚಲನ ಸೃಷ್ಟಿಸಿದೆ. ಈ ಸಂಬಂಧ ಮಂಗಳೂರಿನಲ್ಲಿ ಮಾಜಿ ಸರ್ಕಾರಿ ಅಭಿಯೋಜಕ ಮನೋರಾಜ್ ರಾಜೀವ್ ಅವರು ವಕೀಲರಾದ ಶಿಶಿರ್ ಭಂಡಾರಿ, ರೋಶನಿ ಸೊರಬ್, ನಂದಿನಿ ಅಖಿಲ್ ಸಹಿತ ಕರಾವಳಿಯ ಕಾನೂನು ತಜ್ಞರ ಉಪಸ್ಥಿತಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಯ ಅಗತ್ಯದ ಬಗ್ಗೆ ಗಮನಸೆಳೆದರು. ಹಲವು ವರ್ಷಗಳಿಂದ ಈ ಬಗ್ಗೆ ಆಗ್ರಹಿಸುತ್ತಾ ಬರಲಾಗಿದೆ. ಅದು ಈಡೇರಬೇಕಿದೆ. ಈ ಬಗ್ಗೆ ಸರ್ಕಾರ ಸೂಕ್ತ ಕ್ರಮ ಕೈಗೊಳ್ಳಬೇಕಿದೆ ಎಂದು ಕರಾವಳಿಯ ಹಿರಿಯ ನ್ಯಾಯವಾದಿ ಮನೋರಾಜ್ ರಾಜೀವ್ ಒತ್ತಾಯಿಸಿದರು. ಅದರ ಜೊತೆಗೆ,…
ಬಿಬಿಎಂಪಿ ಚುನಾವಣೆ ನಡೆಸಲು ಸರ್ಕಾರ ಸಿದ್ಧತೆ
ಬೆಂಗಳೂರು: ಬೆಂಗಳೂರು ನಗರ ಪಾಲಿಕೆ (ಬಿಬಿಎಂಪಿ) ಚುನಾವಣೆ ನಡೆಸಲು ಸರ್ಕಾರ ಸಿದ್ಧತೆ ಆರಂಭಿಸಿದ್ದು, ಈ ಕುರಿತು ರಾಜ್ಯ ಚುನಾವಣಾ ಆಯೋಗಕ್ಕೆ ಅಧಿಕೃತ ಪತ್ರ ಬರೆದಿರುವುದಾಗಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ವಿಧಾನ ಪರಿಷತ್ತಿನಲ್ಲಿ ಗುರುವಾರ ಮಾಹಿತಿ ನೀಡಿದರು. ವಿಧಾನ ಪರಿಷತ್ತಿನಲ್ಲಿ ಜೆಡಿಎಸ್ ಸದಸ್ಯ ಟಿ.ಎನ್. ಜವರಾಯಿ ಗೌಡ ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, “ಗ್ರೇಟರ್ ಬೆಂಗಳೂರು ಪ್ರಾಧಿಕಾರ ಕಾಯ್ದೆ (ಜಿಬಿಎ) ಮೇ 15ರಿಂದ ಜಾರಿಗೆ ಬಂತು. ಜುಲೈ 19ರಂದು ಐದು ನಿಗಮಗಳನ್ನು ರಚಿಸಲಾಗಿದೆ. ಆಕ್ಷೇಪಣೆ ಸಲ್ಲಿಸಲು ಆಗಸ್ಟ್ 18ರವರೆಗೆ ಅವಕಾಶ ನೀಡಿದ್ದೇವೆ. ಕೆಲವು ಪ್ರದೇಶಗಳನ್ನು ಸೇರಿಸಲಾಗಿದ್ದು, ಇನ್ನೂ ಕೆಲವು ಪ್ರದೇಶಗಳನ್ನು ನಂತರ ಸೇರಿಸಲಾಗುವುದು. ವಾರ್ಡ್‌ಗಳ ವಿಂಗಡಣೆ ನವೆಂಬರ್ 1ರೊಳಗೆ ಪೂರ್ಣಗೊಳ್ಳಲಿದೆ. ಇದರ ಜವಾಬ್ದಾರಿ ಬಿಬಿಎಂಪಿ ಆಯುಕ್ತರ ನೇತೃತ್ವದ ವಿಶೇಷ ತಂಡಕ್ಕೆ ನೀಡಲಾಗಿದೆ. ಈ ಸಂಬಂಧ ನಾವು ನ್ಯಾಯಾಲಯಕ್ಕೂ ಅಫಿಡವಿಟ್ ಸಲ್ಲಿಸಿದ್ದೇವೆ” ಎಂದರು. ಸದಸ್ಯರೊಬ್ಬರು ತಕ್ಷಣ ಚುನಾವಣೆ ನಡೆಸಬೇಕು ಎಂಬ ಅಭಿಪ್ರಾಯ…
ದಾವಣಗೆರೆಯಲ್ಲಿ ಸುಸ್ಥಿರ ಭತ್ತದ ಕೃಷಿ ಯೋಜನೆಗೆ ಪ್ರಾಯೋಗಿಕ ಚಾಲನೆ.
ಬೆಂಗಳೂರು: ಕೃಷಿ ಸೇವೆಗಳು ರೈತರಿಗೆ ಇನ್ನಷ್ಟು ಸುಲಭವಾಗಿ ದತ್ತಾಂಶ ಆಧಾರಿತವಾಗಿ ಮತ್ತು ಅವಶ್ಯಕತೆಗೆ ತಕ್ಕಂತೆ ಲಭ್ಯವಾಗಲು ಕೃಷಿ ಇಲಾಖೆಯು ಮಹತ್ವದ ಹೆಜ್ಜೆ ಇಟ್ಟಿದೆ. “ರೈತ ಕರೆ ಕೇಂದ್ರ” ಉನ್ನತೀಕರಣದ ಮಹತ್ವದ ಒಡಂಬಡಿಕೆಗೆ ವಿಕಾಸಸೌಧ ಕಚೇರಿಯಲ್ಲಿ ಇಂದು ಕೃಷಿ ಸಚಿವ ಎನ್. ಚಲುವರಾಯಸ್ವಾಮಿಯವರು ಸಹಿ ಹಾಕಿದರು. ಸಚಿವ ಚಲುವರಾಯಸ್ವಾಮಿಯವರು ಕೃಷಿ ಇಲಾಖೆಯ ಅಧಿಕಾರ ವಹಿಸಿಕೊಂಡ ನಂತರ ರೈತರ ಅಭಿವೃದ್ಧಿ ರೈತ ಪರ ಕೆಲಸಕ್ಕೆ ಒತ್ತು ನೀಡಿದ್ದು, ಈಗಾಗಲೇ ರೈತ ಕರೆ ಕೇಂದ್ರಕ್ಕೆ ಆಧುನಿಕ ತಂತ್ರಜ್ಞಾನದ ಸ್ಫರ್ಶ ನೀಡಿರುವ ಸಚಿವರು, ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ (BEL) ಸಂಸ್ಥೆಯೊಂದಿಗೆ ಒಡಂಬಡಿಕೆ ಮಾಡಿಕೊಂಡರು. ಒಡಂಬಡಿಕೆ ನಂತರ ಮಾತನಾಡಿದ ಸಚಿವರು, ಬೆಳೆ ಮಾಹಿತಿ, ಹವಾಮಾನ ಮಾಹಿತಿ, FRUITS ದತ್ತಾಂಶ, ರಾಜ್ಯ ಹಾಗೂ ಕೇಂದ್ರ ಸರ್ಕಾರದ ಯೋಜನೆಗಳು ಸೇರಿದಂತೆ ಪ್ರಮುಖ ಕೃಷಿ ಮಾಹಿತಿಗಳನ್ನ ಸಮಗ್ರಗೊಳಿಸಿ, ವಿಶ್ಲೇಷಿಸಿ, ರೈತರಿಗೆ ನಿಖರ ಮತ್ತು ತಂತ್ರಜ್ಞಾನ ಆಧಾರಿತ ಸಲಹಾ ಸೇವೆಗಳನ್ನ ಒದಗಿಸಲು…
ತುಂಗಭದ್ರಾ ಜಲಾಶಯಕ್ಕೆ ಹೊಸ ಗೇಟ್‌ಗಳನ್ನು ಅಳವಡಿಸಲು ಸರ್ಕಾರ ಟೆಂಡರ್
ಬೆಂಗಳೂರು: ತುಂಗಭದ್ರಾ ಜಲಾಶಯದಲ್ಲಿ 39 ಹೊಸ ಗೇಟ್‌ಗಳನ್ನು ಅಳವಡಿಸಲು ಸರ್ಕಾರ ಟೆಂಡರ್ ಕರೆಯಲಾಗಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮಾಹಿತಿ ನೀಡಿದರು. ಈಗಾಗಲೇ 6 ಗೇಟ್‌ಗಳ ಅಳವಡಿಕೆ ಕಾಮಗಾರಿ ನಡೆಯುತ್ತಿದೆ ಎಂದು ತಿಳಿಸಿದರು. ವಿಧಾನಸಭಾ ಅಧಿವೇಶನದಲ್ಲಿ ನಿಯಮ 69ರಡಿ ಪ್ರಸ್ತಾಪವಾದ ತುಂಗಭದ್ರಾ ಜಲಾಶಯದ ಸಮಸ್ಯೆಗಳ ಕುರಿತ ಚರ್ಚೆಗೆ ಪ್ರತಿಕ್ರಿಯಿಸಿದ ಅವರು, “ಜಲಾಶಯ ಬೋರ್ಡ್ 1633 ಅಡಿ ಬದಲಿಗೆ 1626 ಅಡಿ ಮಟ್ಟದಲ್ಲಿ ನೀರು ಸಂಗ್ರಹಿಸಲು ಸೂಚಿಸಿದೆ. ತಾಂತ್ರಿಕ ತೊಂದರೆಯಿಂದಾಗಿ ಈ ಬಾರಿ ರೈತರಿಗೆ ಎರಡನೇ ಬೆಳೆಗೆ ನೀರು ನೀಡಲು ಸಾಧ್ಯವಾಗುವುದಿಲ್ಲ” ಎಂದರು. ರೈತರ ಹಿತವನ್ನು ಕಾಪಾಡುವ ಬದ್ಧತೆಯನ್ನು ಸರ್ಕಾರ ಪುನರುಚ್ಚರಿಸಿದ ಡಿ.ಕೆ.ಶಿವಕುಮಾರ್, ಕುಡಿಯುವ ನೀರು ಹಾಗೂ ಕೈಗಾರಿಕೆಗಳಿಗೆ ನೀರಿನ ಪೂರೈಕೆಗೆ ಆದ್ಯತೆ ನೀಡಲಾಗುವುದಾಗಿ ತಿಳಿಸಿದರು. ಜೊತೆಗೆ, ದುರಸ್ತಿ ಕಾಮಗಾರಿಗಳು ಹಾಗೂ ಸಿಬ್ಬಂದಿ ಕೊರತೆ ನಿವಾರಣೆಗೆ ತಕ್ಷಣ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.
ಟ್ರಾಫಿಕ್ ನಿಯಮ ಉಲ್ಲಂಘನೆ ಪ್ರಕರಣ; ಟ್ರಾಫಿಕ್ ದಂಡ ಪಾವತಿಗೆ ಶೇ.50 ರಿಯಾಯಿತಿ
ಬೆಂಗಳೂರು: ರಾಜ್ಯ ಸರ್ಕಾರವು ಟ್ರಾಫಿಕ್ ನಿಯಮ ಉಲ್ಲಂಘನೆ ಪ್ರಕರಣಗಳಲ್ಲಿ ಬಾಕಿ ಉಳಿದ ದಂಡ ಪಾವತಿಗೆ ಮತ್ತೊಮ್ಮೆ ಶೇ.50ರಷ್ಟು ರಿಯಾಯಿತಿ ನೀಡುವಂತೆ ಆದೇಶ ಹೊರಡಿಸಿದೆ. ಆಗಸ್ಟ್ 23ರಿಂದ ಸೆಪ್ಟೆಂಬರ್ 12ರವರೆಗೆ ದಂಡ ಪಾವತಿಸಲು ಅವಕಾಶ ಕಲ್ಪಿಸಲಾಗಿದೆ. ಸಾರಿಗೆ ಇಲಾಖೆಯ ಅಧೀನ ಕಾರ್ಯದರ್ಶಿ ಪುಷ್ಪ ವಿ.ಎಸ್ ಅವರು ಈ ಕುರಿತಂತೆ ಅಧಿಕೃತ ಆದೇಶ ಹೊರಡಿಸಿದ್ದಾರೆ. 2023ರ ಫೆಬ್ರವರಿ 11ರೊಳಗೆ ಸಂಚಾರಿ ಇ-ಚಲನ್‌ನಲ್ಲಿ ದಾಖಲಾಗಿರುವ ಪ್ರಕರಣಗಳಿಗೆ ಮಾತ್ರ ಈ ಸಡಿಲಿಕೆ ಅನ್ವಯವಾಗಲಿದೆ. ಅನೇಕ ವರ್ಷಗಳಿಂದ ದಂಡ ಪಾವತಿಸದೇ ಬಾಕಿ ಉಳಿಸಿಕೊಂಡವರಿಗೆ ಈ ಅವಕಾಶ ದೊರಕಲಿದೆ. 2023ರ ಫೆಬ್ರವರಿ 12ರ ನಂತರ ದಾಖಲಾಗಿರುವ ಪ್ರಕರಣಗಳಿಗೆ ಮುಂದಿನ ವರ್ಷ ಇದೇ ರೀತಿಯ ರಿಯಾಯಿತಿ ನೀಡುವ ಸಾಧ್ಯತೆಗಳಿವೆ ಎಂದು ತಿಳಿಸಲಾಗಿದೆ. ಸಂಚಾರಿ ಇ- ಚಲನ್ ನಲ್ಲಿ ದಾಖಲಾಗಿರುವ ದಂಡ ಪ್ರಕರಣಗಳ, ಮೊತ್ತದಲ್ಲಿ ಶೇಕಡ 50 ರಷ್ಟು ರಿಯಾಯಿತಿ ನೀಡಿ ಆದೇಶ. ಪೊಲೀಸ್ ಇಲಾಖೆಯ ಸಂಚಾರಿ ಇ…
