ಬೆಂಗಳೂರು: ಮೈಕ್ರೋ ಫೈನಾನ್ಸ್ ಸಂಸ್ಥೆಗಳ ಕಾಟದಿಂದ ಆತ್ಮಹತ್ಯೆಗೆ ಶರಣಾದವರ ಕುಟುಂಬಗಳಿಗೆ ಮಾನವೀಯ ನೆಲೆಯಲ್ಲಿ ತಲಾ ₹5 ಲಕ್ಷ ಪರಿಹಾರ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ವಿಧಾನಮಂಡಲ ಅಧಿವೇಶನದಲ್ಲಿ ಮಾಹಿತಿ ಹಂಚಿಕೊಂಡ ಸಿಎಂ, “ಮೈಕ್ರೋ ಫೈನಾನ್ಸ್‌ಗಳ ಹಾವಳಿ ತಡೆಗಟ್ಟಲು ಸರ್ಕಾರ ಈಗಾಗಲೇ ಕಠಿಣ ಕಾನೂನು ಜಾರಿಗೆ ತಂದಿದೆ. ಅದರ ಬಳಿಕ ಇಂತಹ ದೌರ್ಜನ್ಯ ಪ್ರಕರಣಗಳು ಹಾಗೂ ಆತ್ಮಹತ್ಯೆಗಳ ಪ್ರಮಾಣವು ಗಣನೀಯವಾಗಿ ಇಳಿಕೆಯಾಗಿದೆ” ಎಂದು ಹೇಳಿದರು. ಮೈಕ್ರೋ ಫೈನಾನ್ಸಿಯರ್ ಗಳ ಕಾಟದಿಂದ ಮೃತಪಟ್ಟ, ಆತ್ಮಹತ್ಯೆ ಮಾಡಿಕೊಂಡ ಕುಟುಂಬಗಳಿಗೆ ಮಾನವೀಯ ನೆಲೆಯಲ್ಲಿ ತಲಾ 5 ಲಕ್ಷ ರೂಪಾಯಿ ಪರಿಹಾರ ಕೊಡಲಾಗುವುದು. ಮೈಕ್ರೋ ಫೈನಾನ್ಸ್‌ಗಳ ಹಾವಳಿ ತಡೆಗಟ್ಟಲು ನಾವು ಕಠಿಣ ಕಾನೂನನ್ನು ಜಾರಿ ಮಾಡಿದ ನಂತರದಿಂದ ದೌರ್ಜನ್ಯ ಪ್ರಕರಣಗಳು ಹಾಗೂ ಆತ್ಮಹತ್ಯೆಗಳು ಗಣನೀಯ ಪ್ರಮಾಣದಲ್ಲಿ ಇಳಿಕೆಯಾಗಿವೆ ಎಂಬುದನ್ನು… pic.twitter.com/x5mq0ph80D — Siddaramaiah (@siddaramaiah) August 21, 2025
Category: ವಿದೇಶ
ಮಣ್ಣಿನ ಗಣಪನೆ ಪೂಜಿಸಿ, ವಿಸರ್ಜಿಸಿರಿ : ಸಚಿವ ಖಂಡ್ರೆ
ಬೆಂಗಳೂರು: ಸಾರ್ವಜನಿಕ ಗಣೇಶೋತ್ಸವಗಳಲ್ಲಿ ಪ್ಲಾಸ್ಟರ್ ಆಫ್ ಪ್ಯಾರಿಸ್ (ಪಿಓಪಿ) ಗಣಪ ಮೂರ್ತಿ ಬಳಕೆಗೆ ಅವಕಾಶ ನೀಡಲಾಗುವುದಿಲ್ಲ. ಪೆಂಡಾಲ್‌ಗೆ ಅನುಮತಿ ನೀಡುವ ಮುನ್ನ ಸಮಿತಿಗಳಿಂದ ಪಿಓಪಿ ಗಣಪ ಮೂರ್ತಿ ಬಳಸುವುದಿಲ್ಲವೆಂದು ಮುಚ್ಚಳಿಕೆ ಪಡೆದುಕೊಳ್ಳುವಂತೆ ಸ್ಥಳೀಯ ಸಂಸ್ಥೆಗಳಿಗೆ ಸೂಚಿಸಲಾಗಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ. ಖಂಡ್ರೆ ಹೇಳಿದ್ದಾರೆ. ವಿಕಾಸ ಸೌಧದಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, “ಶ್ರದ್ಧಾ ಭಕ್ತಿಯಿಂದ ಆಚರಿಸುವ ಹಬ್ಬವು ಪರಿಸರಕ್ಕೆ ಹಾಗೂ ಜಲಚರಗಳಿಗೆ ಮಾರಕವಾಗಬಾರದು. ಪಿಓಪಿ ಮೂರ್ತಿಗಳು ನೀರಲ್ಲಿ ಕರಗದೇ, ವಿಷಕಾರಿ ಅಂಶ ಸೇರಿಸುತ್ತವೆ. ಮಣ್ಣಿನ ಗಣಪ ಮೂರ್ತಿಗಳನ್ನೇ ಪೂಜಿಸಿ, ವಿಸರ್ಜಿಸಬೇಕು” ಎಂದು ಮನವಿ ಮಾಡಿದರು. ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಶೇ.90ರಷ್ಟು ಮಣ್ಣಿನ ಗಣಪ ಮೂರ್ತಿಗಳ ಪೂಜೆ ನಡೆಯುತ್ತಿದೆ. “ಅಲ್ಲಿ ಸಾಧ್ಯವಾಗುತ್ತಿರುವುದು ಉಳಿದ ಜಿಲ್ಲೆಗಳಲ್ಲಿ ಏಕೆ ಸಾಧ್ಯವಾಗಬಾರದು? ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ, ಜಿಲ್ಲಾಡಳಿತ ಹಾಗೂ…
ರಾಜ್ಯದಲ್ಲಿ ಮಳೆ ಬಿರುಸುಗೊಳ್ಳಲಿದೆ: ಹಲವು ಜಿಲ್ಲೆಗಳಿಗೆ ಎಚ್ಚರಿಕೆ
ಬೆಂಗಳೂರು: ಆಗಸ್ಟ್ 24ರವರೆಗೆ ರಾಜ್ಯಾದ್ಯಂತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ವಿಶೇಷವಾಗಿ ಆಗಸ್ಟ್ 19ರಂದು (ಮಂಗಳವಾರ) ಉತ್ತರ ಒಳನಾಡು, ದಕ್ಷಿಣ ಒಳನಾಡು ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ನಿರೀಕ್ಷೆಯಿದ್ದು, ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಮುಂಜಾಗ್ರತಾ ಕ್ರಮವಾಗಿ ಧಾರವಾಡ, ಚಿಕ್ಕಮಗಳೂರು, ಬೆಳಗಾವಿ ಹಾಗೂ ಕೊಡಗು ಜಿಲ್ಲೆಗಳಲ್ಲಿ ಮಂಗಳವಾರ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಉಡುಪಿ, ಉತ್ತರ ಕನ್ನಡ, ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆಗಳಿಗೆ ರೆಡ್ ಅಲರ್ಟ್ ನೀಡಲಾಗಿದೆ. ದಕ್ಷಿಣ ಕನ್ನಡ, ಬೆಳಗಾವಿ, ಬೀದರ್, ಕಲಬುರಗಿ, ವಿಜಯಪುರ, ಹಾಸನ ಹಾಗೂ ಕೊಡಗು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಜಾರಿಯಲ್ಲಿದೆ. ಬಾಗಲಕೋಟ, ಯಾದಗಿರಿ, ಬಳ್ಳಾರಿ ಮತ್ತು ದಾವಣಗೆರೆ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ.
ಬೆಳಗಾವಿ ಬಾಣಂತಿಯರ ಸಾವು ಪ್ರಕರಣ ಕುರಿತು ಪರಿಶೀಲನೆ: ಪರಿಷತ್‌ನಲ್ಲಿ ಸಚಿವರ ಮಾಹಿತಿ
ಬೆಂಗಳೂರು: ಬೆಳಗಾವಿ ವೈದ್ಯಕೀಯ ವಿಜ್ಞಾನ ಸಂಸ್ಥೆಯ ಆಸ್ಪತ್ರೆಯಲ್ಲಿ ಸಂಭವಿಸಿರುವ ಬಾಣಂತಿಯರು ಮತ್ತು ಶಿಶುಗಳ ಸಾವು ವಿಚಾರದ ಕುರಿತು ಸಮಗ್ರವಾಗಿ ಪರಿಶೀಲನೆ ನಡೆಸಲಾಗುವುದು ಎಂದು ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಜೀವನೋಪಾಯ ಮತ್ತು ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಶರಣಪ್ರಕಾಶ್ ಆರ್. ಪಾಟೀಲ್ ತಿಳಿಸಿದ್ದಾರೆ. ವಿಧಾನಪರಿಷತ್‌ನ ಸೋಮವಾರದ ಕಲಾಪದಲ್ಲಿ ಸದಸ್ಯರಾದ ಎನ್.ನಾಗರಾಜ್ ಅವರ ಗಮನ ಸೆಳೆಯುವ ಸೂಚನೆಗೆ ಉತ್ತರ ನೀಡಿರುವ ಸಚಿವರು, ಬೆಳಗಾವಿ ಪ್ರಕರಣದ ಕುರಿತು ಅಧಿಕಾರಿಗಳೊಂದಿಗೆ ಚರ್ಚಿಸಲಾಗಿದ್ದು, ಸಮಗ್ರ ವರದಿ ಸಲ್ಲಿಸಲು ತಿಳಿಸಿದ್ದೇನೆ ಎಂದರು. ನಮ್ಮ ರಾಜ್ಯದಲ್ಲಿ ಬಾಣಂತಿಯರು/ಶಿಶುಗಳ ಮರಣ ಪ್ರಮಾಣ 7.97 ಆವರೇಜ್ ಇದೆ. ಬೆಳಗಾವಿಯಲ್ಲಿ 7.72 ರಷ್ಟು ಇದೆ. ಇದನ್ನು ನಾನು ಸಮರ್ಥನೆ ಮಾಡುತ್ತಿಲ್ಲ. ಈ ಕುರಿತು ಮಾಹಿತಿ ನೀಡುತ್ತೇನೆ ಎಂದರು. ಬೆಳಗಾವಿ ಬಿಮ್ಸ್ ಗೆ ತುಂಬಾ ದೂರದ ಊರು, ಗ್ರಾಮಗಳಿಂದ ಜನರು ಬರುತ್ತಾರೆ. ಹೈ ರಿಸ್ಕ್ ಪ್ರೆಗ್ನೆನ್ಸಿಸ್ ಕೂಡ ಇರುತ್ತದೆ. ಈ ಮರಣಗಳಿಗೆ…
ಹೃದಯಾಘಾತ ಬಗ್ಗೆ ಜನತೆ ಅನಗತ್ಯವಾಗಿ ಗೊಂದಲಕ್ಕೆ ಒಳಗಾಗಬಾರದು: ಡಾ.ಶರಣ್ ಪ್ರಕಾಶ್ ಪಾಟೀಲ್
ಬೆಂಗಳೂರು:ರಾಜ್ಯದಲ್ಲಿ ಹೆಚ್ಚುತ್ತಿರುವ ಹೃದಯಾಘಾತಗಳಿಗೆ ಜನತೆ ಅನಗತ್ಯವಾಗಿ ಗೊಂದಲಕ್ಕೆ ಒಳಗಾಗಬಾರದು. ವ್ಯಾಯಾಮ, ಪ್ರಾಣಾಯಾಮ, ಆಹಾರಪದ್ಧತಿ ಹಾಗೂ ಜೀವನ ಶೈಲಿಯನ್ನು ಬದಲಾವಣೆ ಮಾಡಿದರೆ ಯಾವುದೇ ಸಮಸ್ಯೆ ಬರುವುದಿಲ್ಲ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ್ ಪಾಟೀಲ್ ಜನತೆಗೆ ಧೈರ್ಯ ತುಂಬಿದ್ದಾರೆ. ವಿಧಾನ ಪರಿಷತ್ ನಲ್ಲಿ ಸೋಮವಾರ ಕಾಂಗ್ರೆಸ್ ಸದಸ್ಯ ದಿನೇಶ್ ಗೂಳಿಗೌಡ ಅವರ ಪ್ರಶ್ನೆ ಉತ್ತರಿಸಿದ ಅವರು, ಇತ್ತೀಚೆಗೆ ಹೃದಯಾಘಾತ, ಪ್ರಕರಣಗಳ ಸಂಖ್ಯೆ ಹೆಚ್ಚಳದ ಆತಂಕ ಎಲ್ಲರಲ್ಲೂ ಮನೆ ಮಾಡಿದೆ. ಜಯದೇವ ಆಸ್ಪತ್ರೆಯಲ್ಲಿ ಜನರು ಪ್ರತಿನಿತ್ಯ ಬಂದು ಹೃದಯ ತಪಾಸಣೆ ಮಾಡಿಸಿಕೊಳ್ಳುತ್ತಿದ್ದಾರೆ. ಇದರ ಪ್ರಮಾಣ ಶೇ.25ರಷ್ಟು ಏರಿಕೆಯಾಗಿದೆ ಎಂದು ಪಾಟೀಲ್ ಮಾಹಿತಿ ನೀಡಿದರು. ವಿಶೇಷವಾಗಿ ಹಾಸನ ಜಿಲ್ಲೆಯಲ್ಲಿ ಹೃದಯಘಾತಗಳ ಸಂಖ್ಯೆ ಹೆಚ್ಚಳವಾಗಿದೆ ಎಂಬ ಆತಂಕ ಜನರಲ್ಲಿ ಮೂಡಿದೆ. ಇದು ತಪ್ಪು ಗ್ರಹಿಕೆ. ವಾಸ್ತವವಾಗಿ ಹಿಂದಿನ ವರ್ಷಗಳಿಗೆ ಹೋಲಿಸಿದರೆ ಸರಾಸರಿ ಪ್ರಮಾಣದಲ್ಲಿ ಯಾವುದೇ ವ್ಯತ್ಯಾಸವಾಗಿಲ್ಲ. ಶೇ.5ರಿಂದ 6ರಷ್ಟು ಪ್ರಕರಣಗಳು ಹೃದಯಾಘಾತಕ್ಕೆ ಸಂಬಂಧಿಸಿದವು.…
ಧರ್ಮಸ್ಥಳಕ್ಕೆ ಬಿಜೆಪಿ ನಾಯಕರ ಭೇಟಿ; ಸುಳ್ಳು ಪ್ರಚಾರ ಬಗ್ಗೆ ಸಿಎಂ ಕ್ಷಮೆಯಾಚನೆಗೆ ಆಗ್ರಹ
ಮಂಗಳೂರು: ಹಾಸನ ಜಿಲ್ಲೆಯ ಧರ್ಮಸ್ಥಳದಲ್ಲಿ ನಡೆದಿರುವ ಸಾಮೂಹಿಕ ಸಮಾಧಿ ಪ್ರಕರಣ ಆಧರಿಸಿ ಸಾಮಾಜಿಕ ಮಾಧ್ಯಮಗಳಲ್ಲಿ ನಡೆಯುತ್ತಿರುವ ಅಪಪ್ರಚಾರವನ್ನು ಖಂಡಿಸಿ, ರಾಜ್ಯ ಬಿಜೆಪಿ ನಾಯಕರು ಭಾನುವಾರ ಧರ್ಮಸ್ಥಳಕ್ಕೆ ಭೇಟಿ ನೀಡಿದರು. ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ನೇತೃತ್ವದ ನಿಯೋಗವು ಮಂಜುನಾಥ ಸ್ವಾಮಿಗೆ ದರ್ಶನ ನೀಡಿ, ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ಅವರನ್ನು ಭೇಟಿಯಾಗಿ ಸಮಾಲೋಚನೆ ನಡೆಸಿತು. ನಿಯೋಗದಲ್ಲಿ ಶಾಸಕರು, ಸಂಸದರು, ವಿಧಾನ ಪರಿಷತ್ ಸದಸ್ಯರು ಹಾಗೂ ಪಕ್ಷದ ಪ್ರಮುಖ ನಾಯಕರು ಸೇರಿದ್ದರು. “ಭಕ್ತರ ಭಾವನೆಗಳಿಗೆ ಧಕ್ಕೆ, ಸಿಎಂ ಕ್ಷಮೆಯಾಚನೆ ಬೇಕು” ಸಾಮೂಹಿಕ ಸಮಾಧಿ ವಿಚಾರದ ಕುರಿತು ಸರ್ಕಾರದ ನಿಶ್ಕ್ರಿಯತೆ ಹಾಗೂ ಮೌನವನ್ನು ಟೀಕಿಸಿದ ವಿಜಯೇಂದ್ರ, “ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೋಟ್ಯಂತರ ಭಕ್ತರ ಧಾರ್ಮಿಕ ಭಾವನೆಗಳಿಗೆ ನೋವುಂಟುಮಾಡಿರುವ ಸುಳ್ಳು ಪ್ರಚಾರವನ್ನು ತಡೆಯುವಲ್ಲಿ ವಿಫಲರಾಗಿದ್ದಾರೆ. ಅವರು ಜನರ ಕ್ಷಮೆಯಾಚಿಸಬೇಕು” ಎಂದು ಹೇಳಿದರು. ವಿಜಯೇಂದ್ರ ಅವರು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ…
ಜಾಗತಿಕ ಶಿಕ್ಷಣ: ವಿದೇಶದಲ್ಲಿ ವ್ಯಾಸಂಗ ಮಾಡುವವರಿಗೆ ಮಾಹಿತಿ ನೀಡಲು ವಿಶೇಷ ಮೇಳ
ಬೆಂಗಳೂರು: ವಿದೇಶ ವ್ಯಾಸಂಗ ಶ್ರೀಮಂತರಿಗೆ ಮಾತ್ರವಲ್ಲ ಈಗ ಎಲ್ಲರಿಗೂ ಕೈಗೆಟುಕಲಿದೆ. ವಿದೇಶದಲ್ಲಿ ಅಧ್ಯಯನ ಮಾಡಬೇಕೆಂಬ ಕನಸು ಕಂಡಿರುವವರಿಗೆ ಅದು ನನಸಾಗುವ ಕಾಲ ಬಂದಿದೆ. ಆರ್ಥಿಕವಾಗಿ ದುರ್ಬಲವಾಗಿರುವ, ಮಧ್ಯಮವರ್ಗದ ಹಿನ್ನೆಲೆಯ ವಿದ್ಯಾರ್ಥಿಗಳು ಸಹ ಈಗ ವಿದೇಶದಲ್ಲಿ ಉನ್ನತ ಶಿಕ್ಷಣವನ್ನು ಯಾವುದೇ ತೊಂದರೆಯಿಲ್ಲದೇ ಪಡೆಯಬಹುದಾಗಿದೆ. ಕೌಶಲ್ಯ ಅಭಿವೃದ್ಧಿ ಇಲಾಖೆ ಅಡಿಯ ಕರ್ನಾಟಕ ವೃತ್ತಿಪರ ತರಬೇತಿ ಮತ್ತು ಕೌಶಲ್ಯ ಅಭಿವೃದ್ಧಿ ನಿಗಮ (ಕೆವಿಟಿಎಸ್‌ಡಿಸಿ) ಆಗಸ್ಟ್ 17 ರ ಭಾನುವಾರ ಹೋಟೆಲ್ ಲಲಿತ್ ಅಶೋಕ್‌ನಲ್ಲಿ ಅಂತಾರಾಷ್ಟ್ರೀಯ ವಿದೇಶದಲ್ಲಿ ಅಧ್ಯಯನ ಮೇಳ – 2025 ಅನ್ನು ಆಯೋಜಿಸಿದೆ. ಈ ವಿಶೇಷ ಕಾರ್ಯಕ್ರಮದಲ್ಲಿ 50 ಕ್ಕೂ ಹೆಚ್ಚು ಪ್ರಮುಖ ಜಾಗತಿಕ ವಿಶ್ವವಿದ್ಯಾಲಯಗಳು ಭಾಗವಹಿಸುವ ನಿರೀಕ್ಷೆ ಇದೆ. ಈ ಸಂಸ್ಥೆಗಳು ವಿಶ್ವದ ಟಾಪ್ 500 ರಲ್ಲಿ ಸ್ಥಾನ ಪಡೆದಿವೆ. ಈ ಕುರಿತು ಮಾಹಿತಿ ಹಂಚಿಕೊಂಡಿರುವ ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಜೀವನೋಪಾಯ ಮತ್ತು ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವರಾದ…
ಸೆಪ್ಟೆಂಬರ್‌ನಲ್ಲಿ ಚಿಕ್ಕಮಗಳೂರು ವೈದ್ಯಕೀಯ ಕಾಲೇಜು ಲೋಕಾರ್ಪಣೆ
ಬೆಂಗಳೂರು: ಚಿಕ್ಕಮಗಳೂರು ಜಿಲ್ಲೆಯ ನಾಗರಿಕರ ಬಹುದಿನಗಳ ಕನಸಾದ ವೈದ್ಯಕೀಯ ಕಾಲೇಜು ಮುಂದಿನ ತಿಂಗಳು ಲೋಕಾರ್ಪಣೆಯಾಗಲಿದೆ ಎಂದು ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಜೀವನೋಪಾಯ ಮತ್ತು ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಶರಣ ಪ್ರಕಾಶ್ ಆರ್. ಪಾಟೀಲ್ ತಿಳಿಸಿದ್ದಾರೆ. ವಿಧಾನಸಭೆ ಕಲಾಪದಲ್ಲಿ ಸಚಿವರು ಈ ಮಾಹಿತಿ ನೀಡಿದರು. 433.94 ಕೋಟಿ ರೂ. ವೆಚ್ಚದಲ್ಲಿ ಈ ವೈದ್ಯಕೀಯ ಕಾಲೇಜು ನಿರ್ಮಾಣ ಮಾಡುವ ಮಂಜೂರಾತಿ ನೀಡಿ ಕಾಮಗಾರಿ ಆರಂಭಿಸಲಾಗಿತ್ತು. ಅದೀಗ ಶೇಕಡ 95ರಷ್ಟು ಪೂರ್ಣಗೊಂಡಿದ್ದು, ಉಳಿದ ಸಣ್ಣಪುಟ ಕೆಲಸಗಳು ಮುಂದಿನ ಕೆಲವೇ ದಿನಗಳಲ್ಲಿ ಮುಗಿಯಲಿದೆ ಎಂದರು. ಸೆಪ್ಟೆಂಬರ್ ಕೊನೆಯ ವಾರದಲ್ಲಿ ಈ ವೈದ್ಯಕೀಯ ಕಾಲೇಜಿನ ಲೋಕಾರ್ಪಣೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಈಗಾಗಲೇ ನೀಡಿರುವ ಉತ್ತರದಲ್ಲಿ ಸ್ಪಷ್ಟಪಡಿಸಿದ್ದೇನೆ ಎಂದು ಸಚಿವರು ತಿಳಿಸಿದರು. ಈಗಾಗಲೇ ಸ್ಥಳೀಯ ಶಾಸಕರೊಂದಿಗೆ ಎರಡು ಮೂರು ಬಾರಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದೇನೆ. ಬಾಕಿ ಉಳಿದಿರುವ ಕೆಲಸ ಪೂರ್ಣಗೊಳಿಸಲು ಸಂಬಂಧಪಟ್ಟವರಿಗೆ…
ಕರ್ನಾಟಕ ಆಶಾ ಕಾರ್ಯಕರ್ತೆಯರ ಹೋರಾಟ.. 3 ದಿನವೂ ಶಕ್ತಿ ಪ್ರದರ್ಶನ
ಬೆಂಗಳೂರು: ಮುಖ್ಯಮಂತ್ರಿಗಳ ಜನವರಿ ಜಾರಿಗಾಗಿ ಒತ್ತಾಯಿಸಿ ಕರ್ನಾಟಕದ ಆಶಾ ಕಾರ್ಯಕರ್ತೆಯರು ಆಗಸ್ಟ್ 12 ರಿಂದ 14 ರವರೆಗೆ ಮೂರು ದಿನಗಳ, ಅಹೋರಾತ್ರಿ, ಜಿಲ್ಲಾ ಮಟ್ಟದ ಪ್ರತಿಭಟನೆ ನಡೆಸಿದ್ದಾರೆ. ಕೇಂದ್ರದ ಪ್ರೋತ್ಸಾಹ ಧನ ಸೇರಿದಂತೆ ಕನಿಷ್ಠ ₹10,000 ಮಾಸಿಕ ಗೌರವಧನ ಮತ್ತು ಅಂಗನವಾಡಿ ಮತ್ತು ಬಿಸಿಯೂಟ ಕಾರ್ಯಕರ್ತೆಯರಿಗೆ ಅನುಗುಣವಾಗಿ ₹1,000 ವೇತನ ಹೆಚ್ಚಳ ಮಾಡಬೇಕೆಂದು ಆಶಾ ಕಾರ್ಯಕರ್ತೆಯರು ಆಗ್ರಹಿಸಿದ್ದಾರೆ. ಗ್ರಾಮೀಣ ಮತ್ತು ಕೊಳೆಗೇರಿ ಆರೋಗ್ಯ ಸೇವೆಗೆ ಮೊದಲ ಸಂಪರ್ಕ ಬಿಂದುವಾಗಿದ್ದ ಆಶಾ ಕಾರ್ಯಕರ್ತರು, ಭರವಸೆಗಳ ಹೊರತಾಗಿಯೂ ನಿರಾಶೆಗೊಂಡಿದ್ದಾರೆ ಎಂದು ಹೇಳುತ್ತಾರೆ. ಜನವರಿಯಲ್ಲಿ ಬೆಂಗಳೂರಿನಲ್ಲಿ 40,000 ಸದಸ್ಯರು ಪ್ರತಿಭಟನೆ ನಡೆಸಿದರು, ನಂತರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಏಪ್ರಿಲ್ 2025 ರಿಂದ ಪರಿಷ್ಕೃತ ಗೌರವಧನ, ಹೆಚ್ಚುವರಿ ಕೆಲಸಕ್ಕೆ ಹೆಚ್ಚುವರಿ ಪ್ರೋತ್ಸಾಹ ಧನ ಮತ್ತು ಕೊರತೆಗಳ ಪಾವತಿಗೆ ಭರವಸೆ ನೀಡಿದ್ದರು ಎಂದು ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತರ ಸಂಘ ನೆನಪಿಸಿಕೊಂಡಿದೆ. ಆದಾಗ್ಯೂ,…
ಸಿನಿ ನಟ ದರ್ಶನ್, ಪವಿತ್ರಾ ಗೌಡ ಜಾಮೀನು ರದ್ದು: ಸುಪ್ರೀಂ ಕೋರ್ಟ್ ತೀರ್ಪು
ನವದೆಹಲಿ: ಚಿತ್ರದುರ್ಗ ಮೂಲದ ರೇಣುಕಸ್ವಾಮಿ ಹತ್ಯೆ ಪ್ರಕರಣದಲ್ಲಿ ಆರೋಪಿಗಳಾದ ಚಾಲೆಂಜಿಂಗ್ ಸ್ಟಾರ್ ದರ್ಶನ್ ತೂಗುದೀಪ, ಪವಿತ್ರಾ ಗೌಡ ಸೇರಿದಂತೆ 7 ಮಂದಿ ಮತ್ತೆ ಜೈಲುಪಾಲು. ಹೈಕೋರ್ಟ್ ನೀಡಿದ್ದ ಜಾಮೀನು ಆದೇಶವನ್ನು ಸುಪ್ರೀಂ ಕೋರ್ಟ್ ಗುರುವಾರ ರದ್ದುಪಡಿಸಿದೆ. ನ್ಯಾಯಮೂರ್ತಿ ಜೆ.ಬಿ. ಪಾರ್ದಿವಾಲಾ ಮತ್ತು ನ್ಯಾಯಮೂರ್ತಿ ಆರ್. ಮಹಾದೇವನ್ ನೇತೃತ್ವದ ಪೀಠವು, “ಆರೋಪಿ ಎಷ್ಟೇ ಪ್ರಭಾವಿ ಇದ್ದರೂ ಕಾನೂನಿಗಿಂತ ಮೇಲಲ್ಲ” ಎಂದು ಸ್ಪಷ್ಟ ಸಂದೇಶ ನೀಡಿದೆ. 2023ರ ಜೂನ್ 9ರಂದು ಚರಂಡಿಯಲ್ಲಿ ಪತ್ತೆಯಾದ 33 ವರ್ಷದ ರೇಣುಕಸ್ವಾಮಿ ಶವಪತ್ತೆಯಾಗಿತ್ತು. ಈ ಪ್ರಕರಣದಲ್ಲಿ, ನಟ ದರ್ಶನ್ ಅವರನ್ನು ಜೂನ್ 11ರಂದು ಬಂಧಿಸಲಾಗಿತ್ತು. ಪವಿತ್ರಾ ಗೌಡರನ್ನು ಮೊದಲ ಹಾಗೂ ದರ್ಶನ್ ಅವರನ್ನು ಎರಡನೇ ಆರೋಪಿಗಳೆಂದು ಪೊಲೀಸರು ಚಾರ್ಜ್‌ಶೀಟ್ ಸಲ್ಲಿಸಿದ್ದರು. ಮೊದಲು ಸೆಷನ್ಸ್ ಕೋರ್ಟ್ ಜಾಮೀನು ನಿರಾಕರಿಸಿದರೂ, ಹೈಕೋರ್ಟ್ ಅನುಮೋದಿಸಿತ್ತು. ಸರ್ಕಾರ ಆ ನಿರ್ಧಾರವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ಗೆ ಮೊರೆ ಹೋಗಿತ್ತು. ಅದೇ ವೇಳೆ,…
