ಕೇಂದ್ರದ ಜೊತೆ ಮಾತನಾಡಿ ರಾಜ್ಯಕ್ಕೆ ಗೊಬ್ಬರ ಕೊಡಿಸಿ; ಸಂಸದರಿಗೆ ಸಿಎಂ ಆಗ್ರಹ

ಮಂಡ್ಯ: ಮಂಡ್ಯ ಜಿಲ್ಲೆಯ ಮದ್ದೂರು ವಿಧಾನಸಭಾ ಕ್ಷೇತ್ರದಲ್ಲಿ ಒಂದೇ ದಿನ 1,146 ಕೋಟಿ ಮೊತ್ತದ ಅಭಿವೃದ್ಧಿ ಕಾರ್ಯಗಳಿಗೆ ಸಿಎಂ ಸಿದ್ದರಾಮಯ್ಯ ಸೋಮವಾರ ಚಾಲನೆ ನೀಡಿದ್ದಾರೆ. ಅಭಿವೃದ್ಧಿಗೆ ಹಣ ಇಲ್ಲ ಎಂದು ಸುಳ್ಳು ಎರಚುವ ಬಿಜೆಪಿಗೆ ಇದು ನಮ್ಮ ಸರ್ಕಾರದ ಸವಾಲು ಎಂದವರು ಹೇಳಿದ್ದಾರೆ. ಮದ್ದೂರು ವಿಧಾನಸಭಾ ಕ್ಷೇತ್ರದಲ್ಲಿ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ ಮತ್ತು ಉದ್ಘಾಟನೆ ನೆರವೇರಿಸಿ, ಫಲಾನುಭವಿಗಳಿಗೆ ಸವಲತ್ತುಗಳನ್ನು ವಿತರಿಸಿ ಮಾತನಾಡಿದ ಸಿಎಂ,. ಕಾವೇರಿ ಅಭಿವೃದ್ಧಿ ನಿಗಮ ಒಂದರಲ್ಲೇ ಎರಡು ವರ್ಷದಲ್ಲಿ 560 ಕೋಟಿ ರೂ. ಅಭಿವೃದ್ಧಿ ಕಾರ್ಯಗಳನ್ನು ಮಾಡಿದ್ದೇವೆ. ನಾಲ್ಕು ವರ್ಷ ಬಿಜೆಪಿ ಸರ್ಕಾರ ಮದ್ದೂರಿನಲ್ಲಿ ಏನು ಮಾಡಿದೆ ಎನ್ನುವುದನ್ನು ಜನತೆಗೆ ತೋರಿಸಿ ಎಂದುಹೇಳಿದ್ದಾರೆ. ಹಲವು ವರ್ಷಗಳಿಂದ ಬಾಕಿ ಉಳಿದಿದ್ದ ಮಂಡ್ಯ ಸಕ್ಕರೆ ಕಾರ್ಖಾನೆಯ ವಿದ್ಯುತ್ ಬಿಲ್ ಚುಕ್ತಾ ಮಾಡಿದ್ದು ನಾವು, ಕಾರ್ಖಾನೆಯ ಪುನಶ್ಚೇತನಕ್ಕೆ 52 ಕೋಟಿ ರೂಪಾಯಿ ಕೊಟ್ಟಿದ್ದು ನಾವು.‌ ಹಾಲು ಉತ್ಪಾದಕರ ಸಂಘದ…

ಆಗಸ್ಟ್ 12,13,14 ರಂದು ರಾಜ್ಯಾದ್ಯಂತ ಆಶಾ ಕಾರ್ಯಕರ್ತೆಯರ ಹೋರಾಟ

ಬೆಂಗಳೂರು: ಮಾತು ತಪ್ಪಿದ ಸಿಎಂ ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಮತ್ತೊಮ್ಮೆ ಪ್ರತಿಭಟನಾ ಅಖಾಡಲ್ಲೇ ಧುಮುಕಿರುವ ರಾಜ್ಯದ ಆಶಾ ಕಾರ್ಯಕರ್ತೆಯರು, ಆಗಸ್ಟ್ 12,13,14 ರಂದು ರಾಜ್ಯದ ಜಿಲ್ಲಾ ಕೇಂದ್ರಗಳಲ್ಲಿ ಧರಣಿ ನಡೆಸಲು ತಯಾರಿ ನಡೆಸಿದ್ದಾರೆ. ಕಳೆದ ವರ್ಷದಲ್ಲಿ ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ನೇತೃತ್ವದಲ್ಲಿ ಸತತ ಪ್ರತಿಭಟನೆ ನಡೆಸಿರುವ ಆಶಾ ಕಾರ್ಯಕರ್ತೆಯರು, ಬೆಂಗಳೂರಿನಲ್ಲೂ ಭಾರೀ ಹೋರಾಟ ನಡೆಸಿದ್ದರು. ಆ ಸಂದರ್ಭದಲ್ಲಿ ಆಶಾ ಕಾರ್ಯಕರ್ತರ ಬೇಡಿಕೆಗಳನ್ನು ಈಡೇರಿಸುವುದಾಗಿ ಸಿಎಂ ಸಿದ್ದರಾಮಯ್ಯ ಭರವಸೆ ನೀಡಿದ್ದರು. ಆದರೆ ನುಡಿದಂತೆ ನಡೆದಿಲ್ಲ. ಸರ್ಕಾರದ ನಿರ್ಲಕ್ಷ್ಯ ಖಂಡಿಸಿ ಇತ್ತೀಚಿಗೆ ರಾಜ್ಯದ ಹಲವೆಡೆ ಸರಣಿ ಪ್ರತಿಭಟನೆ ನಡೆಸಿದ್ದ ಆಶಾ ಕಾರ್ಯಾಕಾರ್ಯಕರ್ತೆಯರು ಇದೀಗ ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ನೇತೃತ್ವದಲ್ಲಿ ಆಗಸ್ಟ್ 12,13,14 ರಂದು ರಾಜ್ಯದ ಜಿಲ್ಲಾ ಕೇಂದ್ರಗಳಲ್ಲಿ ಧರಣಿ ನಡೆಸಲು ತಯಾರಿ ನಡೆಸಿದ್ದಾರೆ. ಆಶಾಗಳ ಬೇಡಿಕೆಗಳು: ಮುಖ್ಯಮಂತ್ರಿಗಳು ಘೋಷಿಸಿರುವ ರಾಜ್ಯದ ಗೌರವಧನ…

ಅಕ್ಟೋಬರ್‌ ವೇಳೆಗೆ ಸಿಎಂ ಬದಲಾವಣೆ ಖಚಿತ! ಅಶೋಕ್ ಭವಿಷ್ಯ

ಮೈಸೂರು: ಅಕ್ಟೋಬರ್‌ ವೇಳೆಗೆ ಸಿಎಂ ಬದಲಾವಣೆ ಖಚಿತ ಎಂದು ವಿಧಾನಪರಿಷತ್ ಪ್ರತಿಪಕ್ಷ ನಾಯಕ ಆರ್.ಅಶೋಕ್ ಭವಿಷ್ಯ ನುಡಿದಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡುತ್ತ ಪ್ರದೇಶ ಕಾಂಗ್ರೆಸ್ ನಾಯಕರ ಮುಸುಕಿನ ಗುದ್ದಾಟ ಬಗ್ಗೆ ಅಶೋಕ್ ತಮ್ಮದೇ ದಾಟಿಯಲ್ಲಿ ವಿಶ್ಲೇಷಿಸಿದರು. ಜೆಡಿಎಸ್‌ನಿಂದ ಬಂದ ಸಿದ್ದರಾಮಯ್ಯ ಮುಖ್ಯಮಂತ್ರಿಯಾದರು. ಆದರೆ ಕಾಂಗ್ರೆಸ್‌ನಲ್ಲೇ ಇದ್ದ ಮಲ್ಲಿಕಾರ್ಜುನ ಖರ್ಗೆ ಮುಖ್ಯಮಂತ್ರಿಯಾಗಲಿಲ್ಲ. ಆದ್ದರಿಂದಲೇ ಖರ್ಗೆ ಸಿಎಂ ಆಗದಿರುವ ಬಗ್ಗೆ ಹೇಳಿದ್ದಾರೆ. ಈಗಲಾದರೂ ನನ್ನನ್ನು ಸಿಎಂ ಮಾಡಿ ಋಣ ತೀರಿಸಿ ಎಂದು ಅವರು ಹೇಳಿದ್ದಾರೆ. ಸಚಿವ ರಾಜಣ್ಣ ಈಗಾಗಲೇ ಕ್ರಾಂತಿಯ ಬಗ್ಗೆ ಹೇಳಿದ್ದಾರೆ. ಖರ್ಗೆಯವರಯು ಸರಿಯಾದ ಸಮಯಕ್ಕೆ ಮಾವಿನ ಹಣ್ಣಿಗೆ ಕಲ್ಲು ಹೊಡೆದಿದ್ದಾರೆ. ಅಕ್ಟೋಬರ್‌ ವೇಳೆಗೆ ಸಿಎಂ ಬದಲಾವಣೆ ಖಚಿತ ಎಂದರು. ಎಸ್‌.ಎಂ.ಕೃಷ್ಣ ನಿಧನಾನಂತರ ಅವರ ಬಗ್ಗೆ ಮಲ್ಲಿಕಾರ್ಜುನ ಖರ್ಗೆ ಮಾತಾಡುತ್ತಿದ್ದಾರೆ. ಎಸ್‌.ಎಂ.ಕೃಷ್ಣ ಐಟಿ ಬಿಟಿಗೆ ನೀಡಿದ ಕೊಡುಗೆಯಿಂದಲೇ ಇಷ್ಟು ಆದಾಯ ರಾಜ್ಯಕ್ಕೆ ಬರುತ್ತಿದೆ. ನಾನು ಜ್ಯೋತಿಷ್ಯ ಹೇಳಲ್ಲ. ಆದರೆ ಖಚಿತವಾಗಿ…

ಡ್ರಗ್‌ ಮಾಫಿಯಾವು ಸಿಎಂ ಸಿದ್ದರಾಮಯ್ಯನವರ ಕೊಡುಗೆ? ಏನಿದು ಬಿಜೆಪಿ ಆರೋಪ?

ಮೈಸೂರು: ಮೈಸೂರಿನಲ್ಲಿ ಡ್ರಗ್‌ ಮಾಫಿಯಾ ತಲೆ ಎತ್ತಿರುವುದೇ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಕೊಡುಗೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಟೀಕಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯನವರ ತವರು ಜಿಲ್ಲೆ ಮೈಸೂರಿನಲ್ಲಿ ಡ್ರಗ್‌ ಮಾಫಿಯಾ ತಲೆ ಎತ್ತಿದೆ. ಇವರನ್ನು ಯತೀಂದ್ರ ನಾಲ್ವಡಿ ಕೃಷ್ಣರಾಜ ಒಡೆಯರ್‌ಗೆ ಹೋಲಿಸಿದ್ದಾರೆ. ಮೈಸೂರಿನಲ್ಲಿ ಮಾದಕ ವಸ್ತುಗಳ ಫ್ಯಾಕ್ಟರಿಯೇ ಇರುವಾಗ ಗೃಹ ಇಲಾಖೆ ಏನು ಮಾಡುತ್ತಿದೆ? ಎಂದು ಪ್ರಶ್ನಿಸಿದರು. ಸರ್ಕಾರ ಇದುವರೆಗೂ ಎಚ್ಚೆತ್ತುಕೊಂಡಿಲ್ಲ. ಇದಕ್ಕೆ ಮಾಲೀಕ ಯಾರು? ಜಮೀನು ಕೊಟ್ಟವರು ಯಾರು? ನೂರಾರು ಕೋಟಿಯ ದಂಧೆಗೆ ಅವಕಾಶ ನೀಡಿದವರು ಯಾರು? ಎಂದು ಪ್ರಶ್ನಿಸಿರುವ ಅಶೋಕ್, ಸರ್ಕಾರ ಈ ವಿಚಾರದಲ್ಲಿ ಮೈ ಮರೆತಿದೆ. ಇದೇ ಸಿದ್ದರಾಮಯ್ಯನವರ ಕೊಡುಗೆ ಎಂದರು.

ನಾಗಮಂಗಲಕ್ಕೆ 35.75 ಕೋಟಿ ವೆಚ್ಚದ ಶ್ರಮಿಕ ವಸತಿ ಶಾಲೆ ಮಂಜೂರು

ಮಂಡ್ಯ: ಮಂಡ್ಯ ಜಿಲ್ಲೆ ನಾಗಮಂಗಲ ತಾಲ್ಲೂಕಿಗೆ ನೂತನ ಶ್ರಮಿಕ ವಸತಿ ಶಾಲೆ ಮಂಜೂರಾಗಿದ್ದು ಒಂದು ವರ್ಷದೊಳಗೆ ಗುಣಮಟ್ಟದೊಂದಿಗೆ ಕಾಮಗಾರಿ ಪೂರ್ಣಗೊಳಿಸುವಂತೆ ಕೃಷಿ ಸಚಿವರಾದ ಎನ್.ಚಲುವರಾಯಸ್ವಾಮಿ ಸೂಚಿಸಿದ್ದಾರೆ. ನಾಗಮಂಗಲದ ಬೀರೇಶ್ವರ ಗ್ರಾಮದಲ್ಲಿ ಕಟ್ಟಡ ನಿರ್ಮಾಣವಾಗಲಿದ್ದು ಇದಕ್ಕಾಗಿ ರೂ.35.75 ಕೋಟಿ ರೂಪಾಯಿಗಳನ್ನು ಮಂಜೂರು ಮಾಡಲಾಗಿದೆ. ಇದರಲ್ಲಿ 31 ಕೋಟಿ ರೂ ವೆಚ್ಚದಲ್ಲಿ ಕಟ್ಟಡ 1 ಕೋಟಿ ವೆಚ್ಚದಲ್ಲಿ ಕಾಂಪೌಂಡ್ ನಿರ್ಮಾಣ, 3 ಕೋಟಿ ವೆಚ್ಚದಲ್ಲಿ ಪೀಠೋಪಕರಣ, 75 ಲಕ್ಷ ರೂ ವೆಚ್ಚದಲ್ಲಿ ಲ್ಯಾಬ್ ಉಪಕರಣಗಳ ಪೂರೈಕೆ ವ್ಯವಸ್ಥೆ ಮಾಡಲಾಗುವುದು ಎಂದವರು ತಿಳಿಸಿದ್ದಾರೆ. ಕಟ್ಟಡ ಕಾರ್ಮಿಕರ ಮಕ್ಕಳ ವಿದ್ಯಾಭ್ಯಾಸಕ್ಕೆ ಪ್ರೋತ್ಸಾಹ ನೀಡಲು ಕಟ್ಟಡ ಮತ್ತು ಇತರೇ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ವತಿಯಿಂದ ರಾಜ್ಯಾದ್ಯಂತ 31 ಜಿಲ್ಲೆಗಳಲ್ಲಿ ರೂ. 1125.25 ಕೋಟಿ ವಸತಿ ಶಾಲೆಗಳು ಪ್ರಾರಾಂಭವಾಗಲಿವೆ. 6ನೇ ತರಗತಿಯಿಂದ 12ನೇ ತರಗತಿವರೆಗೆ ವಸತಿ ಶಾಲೆಗಳನ್ನು ನಿರ್ಮಿಸಲು ರಾಜ್ಯ ಸರ್ಕಾರ ಈಗಾಗಲೇ ಆಡಳಿತಾತ್ಮಕ…

ಕಾಂಗ್ರೆಸ್ಸಿನ ‘ಭಾಗಿಧಾರಿ ಸಮಾವೇಶ’ ಬಗ್ಗೆ ವಿಜಯೇಂದ್ರ ಟೀಕೆ

ಬೆಂಗಳೂರು: ಆರೆಸ್ಸೆಸ್-ಬಿಜೆಪಿಯನ್ನು ವಿಷಕಾರಕ ಎಂದಿದ್ದ ಮಲ್ಲಿಕಾರ್ಜುನ ಖರ್ಗೆಯವರು ದೆಹಲಿಯಲ್ಲಿ ಶುಕ್ರವಾರ ನಡೆದ ‘ಭಾಗಿಧಾರಿ ಸಮಾವೇಶ’ದಲ್ಲಿ ನಿಂತು ಹಿಂದುಳಿದ ಸಮುದಾಯಗಳ ಬಗ್ಗೆ ಮೊಸಳೆ ಕಣ್ಣೀರು ಸುರಿಸಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. 1956 ರಲ್ಲಿ OBC ಸಮುದಾಯಗಳಿಗೆ ಮೀಸಲಾತಿ ನೀಡಲು ಶಿಫಾರಸು ಮಾಡಿದ್ದ ಕಾಕಾ ಕಾಲೇಲ್ಕರ್ ವರದಿಯನ್ನು ಹೊಸಕಿ ಹಾಕಿ ಹಿಂದುಳಿದವರ ಭವಿಷ್ಯಕ್ಕೆ ವಿಷ ಹಾಕಿದ್ದು ನಿಮ್ಮ ಪಂಡಿತ್ ಜವಾಹರ್ ಲಾಲ್ ನೆಹರು ಅವರು ಎಂಬುದನ್ನು ನೀವು ಮರೆತುಬಿಟ್ಟಿರಾ? ಎಂದು ವಿಜಯೇಂದ್ರ ಅವರು ಎಐಸಿಸಿ ಅಧ್ಯಕ್ಷರನ್ನು ಪ್ರಶ್ನಿಸಿದ್ದಾರೆ. ಕಾಂಗ್ರೆಸ್ ಪಕ್ಷದ 39 ವರ್ಷಗಳ ಅಧಿಕಾರಾವಧಿಯಲ್ಲಿ ದೇಶದಲ್ಲಿ ಹಿಂದುಳಿದವರಿಗೆ ಮೀಸಲಾತಿ ಏಕೆ ನೀಡಲಿಲ್ಲ? ಕರ್ನಾಟಕದಲ್ಲಿ ಹಿಂದುಳಿದವರ ಬದುಕಿಗೆ ಬೆಳಕಾಗಲು ಮೀಸಲಾತಿ ಜಾರಿಗೊಳಿಸಿದ ಡಿ. ದೇವರಾಜ ಅರಸರ ರಾಜಕೀಯ ಬದುಕಿಗೆ ನಿಮ್ಮ ಸಮ್ಮುಖದಲ್ಲೇ ವಿಷ ಹಾಕಿದ್ದು ನಿಮ್ಮ ಕಾಂಗ್ರೆಸ್ ನ ಅಂದಿನ ಅಧಿನಾಯಕಿ ಇಂದಿರಾ ಗಾಂಧಿ ಯವರು ಎಂಬುದನ್ನು…

ಮಂಡಳಿ–ನಿಗಮಗಳ ಅಧ್ಯಕ್ಷರ ಪಟ್ಟಿಗೆ ಅಂತಿಮ ರೂಪ: ಶೀಘ್ರವೇ ಹೆಸರು ಘೋಷಣೆ

ಬೆಂಗಳೂರು: ರಾಜ್ಯದ 29 ಮಂಡಳಿ ಮತ್ತು ನಿಗಮಗಳಿಗೆ ಅಧ್ಯಕ್ಷರ ಪಟ್ಟಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹಾಗೂ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲಾ ಗುರುವಾರ ಸಂಜೆ ಅಂತಿಮ ರೂಪ ನೀಡಿದ್ದಾರೆ. ಒಂದು ಅಥವಾ ಎರಡು ದಿನಗಳಲ್ಲಿ ಈ ಪಟ್ಟಿಯ ಅಧಿಕೃತ ಪ್ರಕಟಣೆ ಹೊರಬೀಳುವ ಸಾಧ್ಯತೆ ಇದೆ. ಈ ಕುರಿತು ಸುಳಿವು ನೀಡಿರುವ ಸಿಎಂ ಸಿದ್ದರಾಮಯ್ಯ, “ನಾನು ಮತ್ತು ಶಿವಕುಮಾರ್‌ ನಮ್ಮ ಶಿಫಾರಸುಗಳನ್ನು ನೀಡಿದ್ದಾರೆವು. ಹೈಕಮಾಂಡ್‌ ಅಂತಿಮ ತೀರ್ಮಾನ ಕೈಗೊಳ್ಳಲಿದೆ” ಎಂದು ಸ್ಪಷ್ಟಪಡಿಸಿದರು. ಆಗಸ್ಟ್ 11ರಂದು ನಡೆಯಲಿರುವ ವಿಧಾನಸಭೆಯ ಜಂಟಿ ಅಧಿವೇಶನಕ್ಕೂ ಮುನ್ನ ನಾಲ್ವರು ವಿಧಾನ ಪರಿಷತ್ ಸದಸ್ಯರ ನಾಮ ನಿರ್ದೇಶನವಾಗುತ್ತದೆಯೇ ಎಂಬ ಪ್ರಶ್ನೆಗೆ ಅವರು, “ಬಹುಶಃ ಆಗಬಹುದು” ಎಂದು ಪ್ರತಿಕ್ರಿಯಿಸಿದರು. ವಿಧಾನ ಪರಿಷತ್‌ನ ನಾಲ್ಕು ಸ್ಥಾನಗಳಿಗೆ ನಾಮನಿರ್ದೇಶನ ಪ್ರಕ್ರಿಯೆ ಮಧ್ಯೆ ಪತ್ರಕರ್ತ ದಿನೇಶ್ ಅಮೀನ್ ಮಟ್ಟು ಅವರ ಹೆಸರಿನ ಕುರಿತು ಹೈಕಮಾಂಡ್‌ ಮಟ್ಟದಲ್ಲಿ…

ಕಾಂಗ್ರೆಸ್ಸಿನ 9 ಲೋಕಸಭಾ ಸೀಟ್ ಗೆಲುವಿನಲ್ಲಿ ಯಾವುದೋ ಷಡ್ಯಂತ್ರ: ಸಿ.ಟಿ.ರವಿ ಆರೋಪ

ದೆಹಲಿ: ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷವು 9 ಲೋಕಸಭಾ ಸೀಟ್ ಗೆಲ್ಲುವಲ್ಲಿ ಯಾವುದೋ ಷಡ್ಯಂತ್ರ ನಡೆದಿದೆ ಎಂದು ಬಿಜೆಪಿ ನಿಕಟಪೂರ್ವ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಮತ್ತು ವಿಧಾನಪರಿಷತ್ ಸದಸ್ಯ ಸಿ.ಟಿ. ರವಿ ಅವರು ಆರೋಪಿಸಿದ್ದಾರೆ. ಇಲ್ಲಿನ ಕರ್ನಾಟಕ ಭವನದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಕಾಂಗ್ರೆಸ್ಸಿನ ಷಡ್ಯಂತ್ರ ಮೀರಿ ಎನ್‍ಡಿಎ 19 ಸೀಟ್ ಗೆದ್ದಿದ್ದು ಅದು ಪ್ರಜಾಪ್ರಭುತ್ವದ ಗೆಲುವು. ಇಲ್ಲದೇ ಇದ್ದರೆ, ಕಲಬುರ್ಗಿಯಲ್ಲಿ ಮಲ್ಲಿಕಾರ್ಜುನ ಖರ್ಗೆಯವರ ಅಳಿಯ ಗೆಲ್ಲಲು ಹೇಗೆ ಸಾಧ್ಯವಾಗುತ್ತಿತ್ತು ಎಂದು ಪ್ರಶ್ನೆಯನ್ನು ಮುಂದಿಟ್ಟರು. ಬೀದರ್, ರಾಯಚೂರು, ಕೊಪ್ಪಳ, ಬಳ್ಳಾರಿ, ಚಿಕ್ಕೋಡಿ, ದಾವಣಗೆರೆ, ಚಾಮರಾಜನಗರ, ಹಾಸನದಲ್ಲಿ ಕಾಂಗ್ರೆಸ್ ಗೆಲ್ಲಬೇಕಾದರೆ ಚುನಾವಣಾ ಅಕ್ರಮ ನಡೆಸಿಯೇ ಗೆದ್ದಿದ್ದಾರೆ ಅನಿಸುತ್ತದೆ. ಕಾಂಗ್ರೆಸ್ಸಿನವರೇ ಚುನಾವಣಾ ಅಕ್ರಮ ನಡೆಸಿದ್ದಾರೆಂಬ ಅನುಮಾನ ತಮ್ಮದು ಎಂದು ನುಡಿದರು. ಈ ಹಿನ್ನೆಲೆಯಲ್ಲಿ ಸಮಗ್ರ ತನಿಖೆ ಆಗಬೇಕೆಂದು ಒತ್ತಾಯಿಸಿದರು. ಮುಖ್ಯಮಂತ್ರಿ, ವಿಪಕ್ಷ ನಾಯಕ ರಾಹುಲ್ ಗಾಂಧಿ, ಮಲ್ಲಿಕಾರ್ಜುನ ಖರ್ಗೆಯವರು ಚುನಾವಣಾ…

ಶೋಭಾ ಕರಂದ್ಲಾಜೆ ನಿರ್ಲಕ್ಷ್ಯ ತೋರಿಕೆ: ರಾಜ್ಯದ ಹಿತಕ್ಕೆ ಧ್ವನಿ ಎತ್ತಲಿಲ್ಲ ಎಂದು ಕೆಪಿಸಿಸಿ ವಾಗ್ದಾಳಿ

ಬೆಂಗಳೂರು: ರಾಜ್ಯಕ್ಕೆ ಕೇಂದ್ರದಿಂದ ನಡೆಯುತ್ತಿರುವ ಅನ್ಯಾಯದ ವಿರುದ್ಧ ರಾಜ್ಯದ ಐವರು ಕೇಂದ್ರ ಸಚಿವರಲ್ಲಿ ಯಾರೊಬ್ಬರೂ ಧ್ವನಿ ಎತ್ತಿಲ್ಲ ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ಗುರುವಾರ ತೀವ್ರ ಟೀಕೆ ಮಾಡಿದೆ. ಈ ಹಿನ್ನೆಲೆಯಲ್ಲಿ ಕೇಂದ್ರ ಕಾರ್ಮಿಕ ಸಚಿವೆ ಶೋಭಾ ಕರಂದ್ಲಾಜೆ ವಿರುದ್ಧ ಕೆಪಿಸಿಸಿ ಮಾಧ್ಯಮ ವಿಭಾಗದ ಅಧ್ಯಕ್ಷ ರಮೇಶ್ ಬಾಬು ಕಿಡಿಕಾರಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ರಮೇಶ್ ಬಾಬು , ಕೇಂದ್ರ ಸರ್ಕಾರದಿಂದ ಕರ್ನಾಟಕ ರಾಜ್ಯಕ್ಕೆ ಅನ್ಯಾಯವಾಗುತ್ತಿದ್ದು, ರಾಜ್ಯದಿಂದ ಆಯ್ಕೆಯಾಗಿರುವ ಸಂಸದರು ಹಾಗೂ ಕೇಂದ್ರದ ಮಂತ್ರಿಗಳು ಇದರ ವಿರುದ್ಧ ಧ್ವನಿ ಎತ್ತಬೇಕಾಗಿತ್ತು. ಕರ್ನಾಟಕದಿಂದ ಐವರು ಕೇಂದ್ರ ಸಚಿವರಾಗಿದ್ದಾರೆ. ರಾಜ್ಯದ ವಿಚಾರ ಬಂದಾಗ ಇವರುಗಳು ಧ್ವನಿ ಎತ್ತುತ್ತಿಲ್ಲ. ಶೋಭಾ ಕರಂದ್ಲಾಜೆ ಅವರು ಕಾರ್ಮಿಕ ಹಾಗೂ ಸಣ್ಣ ಕೈಗಾರಿಕೆ ಎರಡು ಇಲಾಖೆಗಳಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಶೋಭಾ ಕರಂದ್ಲಾಜೆ ಅವರು ರಾಜ್ಯದಲ್ಲಿ ಧಾರ್ಮಿಕ ವಿಚಾರವಾಗಿ ಬೆಂಕಿ ಹಚ್ಚಲು ಸಿಕ್ಕ…

ಮೈಸೂರು ದಸರಾ: ಆ.4 ರಂದು ಗಜಪಯಣಕ್ಕೆ ಚಾಲನೆ

ಬೆಂಗಳೂರು: ಜಗದ್ವಿಖ್ಯಾತ ಮೈಸೂರು ದಸರಾ ಕಾರ್ಯಕ್ರಮಗಳಿಗೆ ತಯಾರಿ ನಡೆಯುತ್ತಿದೆ. ಈ ಬಾರಿಯ ದಸರಾ ಜಂಬೂಸವಾರಿಯಲ್ಲಿ ಅಭಿಮನ್ಯು ಮತ್ತೆ ಅಂಬಾರಿ ಹೊರುತ್ತಿದ್ದು, ಆಗಸ್ಟ್ 4ರಂದು ವೀರನಹೊಸಳ್ಳಿಯಿಂದ ಗಜಪಯಣಕ್ಕೆ ಶಾಸ್ತ್ರೋಕ್ತವಾಗಿ ಚಾಲನೆ ನೀಡಲಾಗುತ್ತದೆ ಎಂದು ಅರಣ್ಯ ಸಚಿವ ಈಶ್ವರ ಖಂಡ್ರೆ ತಿಳಿಸಿದ್ದಾರೆ. ಈ ಬಾರಿ ದಸರಾ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿರುವ 14 ಆನೆಗಳ ಪೈಕಿ ಮೊದಲ ಹಂತದಲ್ಲಿ ಆಯ್ಕೆಯಾದ 9 ಆನೆಗಳ ಪಟ್ಟಿಯನ್ನು ಇಂದು ಅವರು ಬಿಡುಗಡೆ ಮಾಡಿದರು. ಆ.4 ರಂದು ಗಜಪಯಣಕ್ಕೆ ಚಾಲನೆ! ಈ ಬಾರಿಯ ದಸರಾ ಜಂಬೂಸವಾರಿಯಲ್ಲಿ ಅಭಿಮನ್ಯು ಮತ್ತೆ ಅಂಬಾರಿ ಹೊರುತ್ತಿದ್ದು, ಆಗಸ್ಟ್ 4ರಂದು ವೀರನಹೊಸಳ್ಳಿಯಿಂದ ಗಜಪಯಣಕ್ಕೆ ಶಾಸ್ತ್ರೋಕ್ತವಾಗಿ ಚಾಲನೆ ನೀಡಲಾಗುತ್ತದೆ. ಈ ಬಾರಿ ದಸರಾ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿರುವ 14 ಆನೆಗಳ ಪೈಕಿ ಮೊದಲ ಹಂತದಲ್ಲಿ ಆಯ್ಕೆಯಾದ 9 ಆನೆಗಳ ಪಟ್ಟಿಯನ್ನು ಇಂದು ಬಿಡುಗಡೆ… pic.twitter.com/Y7FJMtqZqt — Eshwar Khandre (@eshwar_khandre) July 24, 2025 ಅಭಿಮನ್ಯು,…