ಬೆಂಗಳೂರು: ನೀಟ್ ಪರೀಕ್ಷೆ ರದ್ದು ಮಾಡಿರುವುದು ಕೇಂದ್ರ ಸರ್ಕಾರದ ಬಹುದೊಡ್ಡ ಹಗರಣವಾಗಿದ್ದು, ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ ಚೆಲ್ಲಾಟವಾಡಿದಂತಾಗಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣಪ್ರಕಾಶ ಪಾಟೀಲ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೇ 3ರಂದು ನಡೆದಿದ್ದ ನೀಟ್ ಪರೀಕ್ಷೆಯ ಪ್ರಶ್ನೆಪತ್ರಿಕೆ ಸೋರಿಕೆಯಾದ ಹಿನ್ನೆಲೆಯಲ್ಲಿ ಪರೀಕ್ಷೆ ರದ್ದುಪಡಿಸಿರುವುದನ್ನು ತೀವ್ರವಾಗಿ ಖಂಡಿಸಿದರು. “ಕಳೆದ ನಾಲ್ಕೈದು ವರ್ಷಗಳಿಂದ ನೀಟ್‌ನಲ್ಲಿ ಒಂದಲ್ಲ ಒಂದು ಅಕ್ರಮ, ಗೊಂದಲಗಳು ನಡೆಯುತ್ತಲೇ ಇವೆ. ಇದಕ್ಕೆ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವೇ ನೇರ ಹೊಣೆ” ಎಂದು ಕಿಡಿಕಾರಿದರು. ಈ ಕುರಿತು ಕೇಂದ್ರ ಸರ್ಕಾರ ಹಾಗೂ ಸಂಬಂಧಪಟ್ಟ ಸಚಿವಾಲಯಕ್ಕೆ ಈಗಾಗಲೇ ಹಲವು ಬಾರಿ ಮನವರಿಕೆ ಮಾಡಿಕೊಟ್ಟಿದ್ದರೂ ಯಾವುದೇ ಕ್ರಮ ಕೈಗೊಂಡಿಲ್ಲ. ಪರಿಣಾಮ ಮತ್ತೊಮ್ಮೆ ಭಾರೀ ಪ್ರಮಾದ ಸಂಭವಿಸಿದೆ ಎಂದು ಹೇಳಿದರು. ತಪ್ಪಿತಸ್ಥರನ್ನು ಕಾನೂನಿನ ಮುಂದೆ ನಿಲ್ಲಿಸಿ ಕಠಿಣ ಶಿಕ್ಷೆ ನೀಡಬೇಕು. ಇದು ಕೇಂದ್ರ ಸರ್ಕಾರದ…
Category: ವಿದೇಶ
ರಾಜ್ಯ ಸಚಿವ ಡಿ. ಸುಧಾಕರ್ ನಿಧನ; ರಾಜಕೀಯ ವಲಯದಲ್ಲಿ ಶೋಕ
ಬೆಂಗಳೂರು: ಕರ್ನಾಟಕದ ಯೋಜನೆ ಮತ್ತು ಸಾಂಖ್ಯಿಕ ಸಚಿವ ಡಿ. ಸುಧಾಕರ್ ಅವರು ಭಾನುವಾರ ಮುಂಜಾನೆ ಬೆಂಗಳೂರಿನ KIMS Hospital ನಲ್ಲಿ ನಿಧನರಾಗಿದ್ದಾರೆ. 65 ವರ್ಷ ವಯಸ್ಸಿನ ಅವರು, ಕಳೆದ ಒಂದು ತಿಂಗಳಿನಿಂದ ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಕೊನೆಯುಸಿರೆಳೆದಿದ್ದಾರೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ. ಮೊದಲು ಮೊಣಕಾಲು ಶಸ್ತ್ರಚಿಕಿತ್ಸೆಗಾಗಿ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ಡಿ. ಸುಧಾಕರ್ ಅವರಿಗೆ ಬಳಿಕ ಶ್ವಾಸಕೋಶದ ಸೋಂಕು ಕಾಣಿಸಿಕೊಂಡಿತ್ತು. ನಂತರ ಅವರನ್ನು ಎಲೆಕ್ಟ್ರಾನಿಕ್ ಸಿಟಿಯಲ್ಲಿರುವ ಕಿಮ್ಸ್ ಆಸ್ಪತ್ರೆಗೆ ಸ್ಥಳಾಂತರಿಸಲಾಗಿತ್ತು. ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು ಭಾನುವಾರ ಬೆಳಗ್ಗೆ ಮೃತಪಟ್ಟಿದ್ದಾರೆ. ಚಿತ್ರದುರ್ಗ ಜಿಲ್ಲೆಯ ಪ್ರಭಾವಿ ರಾಜಕೀಯ ನಾಯಕರಾಗಿದ್ದ ಡಿ. ಸುಧಾಕರ್ ನಾಲ್ಕು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದರು. ರಾಜ್ಯ ರಾಜಕೀಯದಲ್ಲಿ ಚತುರ ತಂತ್ರಗಾರರಾಗಿ ಗುರುತಿಸಿಕೊಂಡಿದ್ದರು. ಸಚಿವರ ನಿಧನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಹಲವು ಸಚಿವರು, ರಾಜಕೀಯ ಮುಖಂಡರು ಮತ್ತು ಗಣ್ಯರು ಸಂತಾಪ…
ಬೆಂಗಳೂರು ಸಹಿತ ರಾಜ್ಯದ ಹಲವೆಡೆ ಮಳೆ ಸಾಧ್ಯತೆ; ಹವಾಮಾನ ಇಲಾಖೆ ಮುನ್ಸೂಚನೆ
ಬೆಂಗಳೂರು: ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಭಾನುವಾರ ಸಾಧಾರಣ ಮಳೆಯಾಗುವ ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಕರಾವಳಿ ಹಾಗೂ ಉತ್ತರ ಒಳನಾಡಿನ ತಲಾ ಎರಡು ಜಿಲ್ಲೆಗಳು ಮತ್ತು ದಕ್ಷಿಣ ಒಳನಾಡಿನ ಐದು ಜಿಲ್ಲೆಗಳಲ್ಲಿ ವರುಣನ ಸಿಂಚನದ ನಿರೀಕ್ಷೆ ವ್ಯಕ್ತವಾಗಿದೆ. ಅದನ್ನು ಹೊರತುಪಡಿಸಿ ಉಳಿದ ಭಾಗಗಳಲ್ಲಿ ಒಣ ಹವೆ ಮುಂದುವರಿಯಲಿದೆ. ಉತ್ತರ ಕರ್ನಾಟಕದ ಅನೇಕ ಕಡೆಗಳಲ್ಲಿ ತೀವ್ರ ಬಿಸಿಲಿನ ವಾತಾವರಣ ಮುಂದುವರಿಯುವ ಸಾಧ್ಯತೆ ಇದ್ದರೆ, ಬೆಂಗಳೂರು ನಗರದಲ್ಲಿ ಮಳೆಯ ಸಾಧ್ಯತೆಯಿದೆ. ಕರಾವಳಿ ಭಾಗದ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಮಳೆಯ ಸಂಭವವಿದೆ. ಉತ್ತರ ಒಳನಾಡಿನ ಗದಗ ಹಾಗೂ ಹಾವೇರಿ ಜಿಲ್ಲೆಗಳಲ್ಲಿ ಸಣ್ಣ ಪ್ರಮಾಣದಲ್ಲಿ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಒಳನಾಡಿನ ಚಾಮರಾಜನಗರ, ಚಿಕ್ಕಮಗಳೂರು, ಕೊಡಗು, ಮೈಸೂರು ಮತ್ತು ರಾಮನಗರ ಜಿಲ್ಲೆಗಳಲ್ಲಿ ಕೂಡ ಸಾಧಾರಣ ಮಳೆಯ ನಿರೀಕ್ಷೆ ಇದೆ.
ಕುಣಿಗಲ್ ಬಳಿ ಭೀಕರ ರಸ್ತೆ ಅಪಘಾತ: ವಿವಾಹ ವಾರ್ಷಿಕೋತ್ಸವದ ದಿನವೇ ನಾಲ್ವರು ದುರ್ಮರಣ
ತುಮಕೂರು: ಕುಣಿಗಲ್ ತಾಲೂಕಿನ ಹೊನ್ನೇನಹಳ್ಳಿ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿ, ಕಾರಿನಲ್ಲಿದ್ದ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಗೊಬ್ಬರ ತುಂಬಿದ್ದ ಲಾರಿಗೆ ಆಲ್ಟೋ ಕಾರು ಡಿಕ್ಕಿ ಹೊಡೆದ ಪರಿಣಾಮ ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದು, ಅಪಘಾತದ ತೀವ್ರತೆಗೆ ಕಾರಿನಲ್ಲಿದ್ದ ಪ್ರಯಾಣಿಕರು ಸಾವನ್ನಪ್ಪಿದ್ದಾರೆ. ಮೃತರನ್ನು ಸ್ವರ್ಣಸಂದ್ರ ನಿವಾಸಿಗಳಾದ ಕುಮಾರ ನರಸಿಂಹಸ್ವಾಮಿ, ಅವರ ಪತ್ನಿ ಗಾಯತ್ರಿ (60), ಸಹೋದರಿ ಗಾಯತ್ರಿ (55) ಹಾಗೂ ಮತ್ತೋರ್ವ ಪುರುಷ ಎಂದು ಗುರುತಿಸಲಾಗಿದೆ. ಕುಮಾರ ನರಸಿಂಹಸ್ವಾಮಿ ಅವರು ನಿನ್ನೆ ಕುಟುಂಬದವರೊಂದಿಗೆ ತುಮಕೂರಿಗೆ ಬಂದಿದ್ದರು. ಇಂದು ತಮ್ಮ ವಿವಾಹ ವಾರ್ಷಿಕೋತ್ಸವದ ಹಿನ್ನೆಲೆಯಲ್ಲಿ ದೇವರಾಯನದುರ್ಗಕ್ಕೆ ತೆರಳಿ ದೇವರ ದರ್ಶನ ಪಡೆದು ಊರಿಗೆ ಹಿಂದಿರುಗುವ ವೇಳೆ ಈ ದುರಂತ ಸಂಭವಿಸಿದೆ. ಅಪಘಾತದ ಬಗ್ಗೆ ಸ್ಥಳೀಯ ಪೊಲೀಸರು ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.
ಬೆಂಗಳೂರು ಉತ್ತರ ಪಾಲಿಕೆ ಕಚೇರಿ; ಸ್ಥಳ ಪರಿಶೀಲನೆ ನಂತರ ತೀರ್ಮಾನ;
ಬೆಂಗಳೂರು: ಬೆಂಗಳೂರು ಉತ್ತರ ಪಾಲಿಕೆಯ ಹೊಸ ಕಚೇರಿ ನಿರ್ಮಾಣ ಮಾಡಬೇಕು ಎಂದು ಮೂರು- ನಾಲ್ಕು ಸ್ಥಳಗಳ ಪ್ರಸ್ತಾವನೆಯಿದೆ. ಸ್ಥಳ ಪರಿಶೀಲನೆ ಮಾಡಿ ನಿರ್ಧಾರ ಮಾಡಬೇಕಿದೆ. ಇದರ ಬಗ್ಗೆ ಮಂತ್ರಿಗಳು, ಶಾಸಕರು ತಮ್ಮದೇ ಆದ ಅಭಿಪ್ರಾಯ ನೀಡಿದ್ದಾರೆ. ಸ್ಥಳ ಪರಿಶೀಲನೆ ನಂತರ ತೀರ್ಮಾನ ಮಾಡಲಾಗುವುದು ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಿಕೆವಿಕೆಯಲ್ಲಿ ನಿರ್ಮಾಣ ಮಾಡಲಾಗುವುದೇ ಎಂದಾಗ, “ಇಲ್ಲ, ಸದ್ಯಕ್ಕೆ ಆ ಆಲೋಚನೆ ಇಲ್ಲ. ಈ ಬಗ್ಗೆ ಪರಿಶೀಲನೆ ಮಾಡುತ್ತೇವೆ” ಎಂದು ಉತ್ತರಿಸಿದರು. ಸತೀಶ್ ಜಾರಕಿಹೊಳಿ, ಲಕ್ಷ್ಮೀ ಹೆಬ್ಬಾಳ್ಕರ್ ಅವರು ಭೇಟಿ ಮಾಡಿದ್ದರ ಬಗ್ಗೆ ಪ್ರತಿಕ್ರಿಯಿಸಿದ ಡಿಕೆಶಿ, “ಬೆಳಗಾವಿ ಜಿಲ್ಲೆಯ ಒಂದಷ್ಟು ನೀರಾವರಿ ಯೋಜನೆಗಳನ್ನು ಚರ್ಚೆ ನಡೆಸಲು ಭೇಟಿ ಮಾಡಿದ್ದರು”ಎಂದರು.
ವಿಕಲಚೇತನರಿಗೆ ಸಮಗ್ರ ಉದ್ಯೋಗ, ಕೌಶಲ್ಯ ವೇದಿಕೆ ಕಲ್ಪಿಸುವ “ಆದಿದ್ವಾರ” ಅಪ್ಲಿಕೇಶನ್ ಬಿಡುಗಡೆ
ಬೆಂಗಳೂರು: ವಿಕಲಚೇತನರಿಗೆ ಉದ್ಯೋಗ ಅವಕಾಶ ಮತ್ತು ಕೌಶಲ್ಯಾಭಿವೃದ್ಧಿಗೆ ಆದ್ಯತೆ ನೀಡಲು ಅವಕಾಶ ಒದಗಿಸುವ “ಆದಿದ್ವಾರ” ಅಪ್ಲಿಕೇಶನ್ ಅನ್ನು ಬಿಡುಗಡೆ ಮಾಡಲಾಗಿದೆ. ಅಸಿಸ್ಟೆಕ್ ಫೌಂಡೇಶನ್ (ಎಟಿಎಫ್) ಸಹಯೋಗದೊಂದಿಗೆ ವಿಕಾಸಸೌಧದಲ್ಲಿ ನಡೆದ ಸಮಾರಂಭದಲ್ಲಿ ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಜೀವನೋಪಾಯ ಮತ್ತು ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಶರಣಪ್ರಕಾಶ ಆರ್. ಪಾಟೀಲ್ ಅವರು ಅಪ್ಲಿಕೇಷನ್ ಬಿಡುಗಡೆ ಮಾಡಿದರು. ನಂತರ ಮಾತನಾಡಿದ ಸಚಿವರು, ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಅಂಗವಿಕಲರಿಗೆ (ಪಿಡಬ್ಲ್ಯೂಡಿಗಳು) ವಿಶೇಷ ಉದ್ಯೋಗ ಮೇಳವನ್ನು ಆಗಸ್ಟ್ 2026 ರಲ್ಲಿ ನಡೆಸಲಾಗುವುದು ಎಂದು ಘೋಷಿಸಿದರು. “ವಿಕಲಚೇತನರು ಯಾರಿಗೂ ಕಡಿಮೆ ಇಲ್ಲ. ಅವರಿಗೆ ವಿಶೇಷ ಪ್ರತಿಭೆ ಇರುತ್ತದೆ. ಕಾರ್ಪೊರೇಟ್ ಸಂಸ್ಥೆಗಳು ನೇಮಕಾತಿಯ ಸಮಯದಲ್ಲಿ ಅವರಿಗೆ ಸಮಾನ ಅವಕಾಶ ಮತ್ತು ಚಿಕಿತ್ಸೆಯನ್ನು ನೀಡಬೇಕು” ಎಂದು ಡಾ. ಪಾಟೀಲ್ ಹೇಳಿದರು. ಆದಿದ್ವಾರ ವೇದಿಕೆಯು ಉದ್ಯೋಗಾವಕಾಶಗಳು, ಇಂಟರ್ನ್‌ಶಿಪ್‌ಗಳು, ಕೌಶಲ್ಯ ಮತ್ತು ಕೌಶಲ್ಯಾಭಿವೃದ್ಧಿ ಕಾರ್ಯಕ್ರಮಗಳಿಗೆ ವೇದಿಕೆ ಕಲ್ಪಿಸುತ್ತದೆ. ಉದ್ಯೋಗದಾತರು ಸಮಗ್ರ…
ತಮಿಳುನಾಡಿನಲ್ಲಿ ಟಿವಿಕೆ ಸರ್ಕಾರ ರಚನೆ ಹಕ್ಕು ತಡೆಯುವ ರಾಜ್ಯಪಾಲರ ನಡೆ ಸರಿಯಲ್ಲ: ಡಿ.ಕೆ. ಶಿವಕುಮಾರ್
ಬೆಂಗಳೂರು: ವಿಜಯ್ ಅವರಿಗೆ ಸರ್ಕಾರ ರಚನೆ ಮಾಡಿ ಬಹುಮತ ಸಾಬೀತುಪಡಿಸುವುದನ್ನು ತಡೆಯಲು ತಮಿಳುನಾಡಿನ ಗೌರವಾನ್ವಿತ ರಾಜ್ಯಪಾಲರಿಗೆ ಯಾವುದೇ ರೀತಿಯ ಅಧಿಕಾರವಿಲ್ಲ. ರಾಜ್ಯಪಾಲರ ನಡೆ ಸರಿಯಲ್ಲ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ವಿಧಾನಸೌಧದಲ್ಲಿ ಪ್ರತಿಕ್ರಿಯಿಸಿರುವ ಶಿವಕುಮಾರ್, ಟಿವಿಕೆ ಪಕ್ಷಕ್ಕೆ ತಮಿಳುನಾಡು ರಾಜ್ಯಪಾಲರು ಬಹುಮತ ಸಾಬೀತಿಗೆ ಅವಕಾಶ ನೀಡದೇ ಇರುವ ಬಗ್ಗೆ ಕೇಳಿದಾಗ, “ರಾಜ್ಯಪಾಲರು ಸರ್ಕಾರ ರಚನೆಗೆ ಅವಕಾಶ ನೀಡಬೇಕು. ಕರ್ನಾಟಕದಲ್ಲಿ ಯಡಿಯೂರಪ್ಪ ಅವರಿಗೆ ರಾಜ್ಯಪಾಲರು ಅನುಮತಿ ನೀಡಿದ್ದರು. ಹೆಚ್ಚು ಸ್ಥಾನ ಗಳಿಸಿದ ಪಕ್ಷಗಳಿಗೆ ಸರ್ಕಾರ ರಚಿಸಲು ಈ ಹಿಂದೆಯೂ ಅನುಮತಿ ನೀಡಲಾಗಿತ್ತು. ರಾಷ್ಟ್ರಪತಿಗಳಾಗಿದ್ದ ನಾರಾಯಣನ್, ಅಬ್ದುಲ್ ಕಲಾಂ ಅವರೂ ಈ ರೀತಿ ಮಾಡಿದ್ದರು. ವಾಜಪೇಯಿ ಅವರಿಗೂ ಸಹ ಇದೇ ರೀತಿ ಸರ್ಕಾರ ರಚಿಸಲು ಅನುಮತಿ ನೀಡಿ ಸದನದಲ್ಲಿ ಬಹುಮತ ಸಾಬೀತಿಗೆ ಅವಕಾಶ ನೀಡಲಾಗಿತ್ತು. ಆದರೆ ಈಗ ಟಿವಿಕೆಗೆ ಅವಕಾಶ ನೀಡದಿರುವುದು ತಪ್ಪು” ಎಂದರು. “ಮೊದಲು ಬಹುಮತ ಸಾಬೀತಿಗೆ…
ಮತ್ತೆ ಶಾಸಕರಾಗಿ ಡಿ.ಎನ್. ಜೀವರಾಜ್ ಪಯಣ ಶುರು
ಬೆಂಗಳೂರು: ಅಂಚೆ ಮತಗಳ ಮರುಎಣಿಕೆಯಲ್ಲಿ ರೋಚಕ ಗೆಲುವು ಸಾಧಿಸಿದ್ದ ಬಿಜೆಪಿ ನಾಯಕ ಡಿ.ಎನ್. ಜೀವರಾಜ್ (D. N. Jeevaraj) ಅವರು ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಬುಧವಾರ ಮಧ್ಯಾಹ್ನ ವಿಧಾನಸೌಧದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಭಾಧ್ಯಕ್ಷ ಯು.ಟಿ. ಖಾದರ್ (U.T. Khader) ಅವರು ಪ್ರಮಾಣ ವಚನ ಬೋಧಿಸಿದರು. ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್. ಅಶೋಕ್ (R. Ashoka) ಹಾಗೂ ವಿಧಾನ ಪರಿಷತ್ತಿನ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ (Chalavadi Narayanaswamy) ಉಪಸ್ಥಿತರಿದ್ದರು.
ಶೃಂಗೇರಿ ವಿಧಾನಸಭಾ ಕ್ಷೇತ್ರದ ಫಲಿತಾಂಶದ ಪ್ರತಿಧ್ವನಿ; ಕಾಂಗ್ರೆಸ್’ನಿಂದ ಕಾನೂನು ಸಮರ ಘೋಷಣೆ
ಮೈಸೂರು: ಶೃಂಗೇರಿ ವಿಧಾನಸಭಾ ಕ್ಷೇತ್ರದ ಫಲಿತಾಂಶವನ್ನು ನ್ಯಾಯಾಲಯದಲ್ಲಿ ಪ್ರಶ್ನಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಮೈಸೂರಿನ ಮೈಸೂರು ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರುಎಣಿಕೆಯಲ್ಲಿ ಬಿಜೆಪಿ ಕ್ರಿಮಿನಲ್ ಪಿತೂರಿಯಲ್ಲಿ ತೊಡಗಿದೆ ಎಂದು ಆರೋಪಿಸಿದರು. ರಾಜೇಗೌಡ ಅವರ ಪರವಾಗಿ ಬಿದ್ದಿದ್ದ 255 ಸಿಂಧು ಮತಗಳನ್ನು ಅಮಾನ್ಯಗೊಳಿಸಲಾಗಿದೆ. ಮತ ಎಣಿಕೆಯ ಸಮಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರದಲ್ಲಿತ್ತು. ಬಿಜೆಪಿ ಸದಸ್ಯರು ತಮ್ಮ ಸಿಬ್ಬಂದಿಯ ಮೂಲಕ ಮತಪತ್ರಗಳನ್ನು ತಿರುಚಿರುವುದು ಕ್ರಿಮಿನಲ್ ಪಿತೂರಿಯ ಭಾಗವಾಗಿದೆ. ಆದ್ದರಿಂದ ಶೃಂಗೇರಿ ಕ್ಷೇತ್ರದ ಫಲಿತಾಂಶವನ್ನು ನ್ಯಾಯಾಲಯದಲ್ಲಿ ಪ್ರಶ್ನಿಸಲಾಗುವುದು ಎಂದು ಹೇಳಿದರು. ಇದೇ ವೇಳೆ ರೈಲ್ವೆ ಇಲಾಖೆಯ ನೇಮಕಾತಿ ವಿಚಾರವಾಗಿ ಮಾತನಾಡಿದ ಸಿದ್ದರಾಮಯ್ಯ, ಕೇಂದ್ರ ಸರ್ಕಾರ ನಡೆಸುವ ಪರೀಕ್ಷೆಗಳಲ್ಲಿ ಕನ್ನಡಿಗರನ್ನು ಕಡೆಗಣಿಸಲಾಗುತ್ತಿದೆ ಎಂದು ಆರೋಪಿಸಿದರು. ರೈಲ್ವೆ ಇಲಾಖೆಯ ಹುದ್ದೆಗಳಿಗೆ ಕನ್ನಡಿಗರನ್ನು ಬದಿಗಿಡಲಾಗುತ್ತಿದ್ದು, ಇದು ಕನ್ನಡಿಗರ ಬಗ್ಗೆ ಕೇಂದ್ರ ಸರ್ಕಾರದ ನಿಲುವನ್ನು ತೋರಿಸುತ್ತದೆ ಎಂದು…
ಬಾಗಲಕೋಟೆ, ದಾವಣಗೆರೆಯಲ್ಲಿ ಕಾಂಗ್ರೆಸ್ ಗೆಲುವು ಕನ್ನಡ ಸ್ವಾಭಿಮಾನಕ್ಕೆ ಸಂದ ಜಯ: ಸುರ್ಜೇವಾಲ
ಬೆಂಗಳೂರು: ಕರ್ನಾಟಕದ ಹೈವೋಲ್ಟೇಜ್ ಕದನ ಎಂದೇ ಬಿಂಬಿತವಾಗಿದ್ದ ಬಾಗಲಕೋಟೆ ಮತ್ತು ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಭರ್ಜರಿ ಜಯ ದಾಖಲಿಸಿದ್ದಾರೆ. ಈ ಮೂಲಕ ರಾಜ್ಯದಲ್ಲಿ ಆಡಳಿತಾರೂಢ ಕಾಂಗ್ರೆಸ್ ತನ್ನ ಪಾರುಪತ್ಯವನ್ನು ಮೆರೆದಿದೆ. ಈ ಗೆಲುವನ್ನು ಎಐಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಅವರು “ಕನ್ನಡ ಸ್ವಾಭಿಮಾನಕ್ಕೆ ಸಂದ ಜಯ” ಎಂದು ಬಣ್ಣಿಸಿದ್ದಾರೆ. ಬಾಗಲಕೋಟೆಯಲ್ಲಿ ಉಮೇಶ್ ಮೇಟಿ ಹಾಗೂ ದಾವಣಗೆರೆ ದಕ್ಷಿಣದಲ್ಲಿ ಸಮರ್ಥ್ ಶಾಮನೂರು ಅವರು ಬಿಜೆಪಿಯನ್ನು ಮಣಿಸಿ ವಿಜಯಮಾಲೆ ಧರಿಸಿದ್ದಾರೆ. ಈ ಫಲಿತಾಂಶವು ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳಿಗೆ ಜನತೆ ನೀಡಿದ ಸಮ್ಮತಿಯಾಗಿದೆ. ಹೀಗಾಗಿ ಇದು ಕಾಂಗ್ರೆಸ್ ಗ್ಯಾರಂಟಿಗಳ ಜಯ, ಪ್ರತಿಯೊಬ್ಬ ಕನ್ನಡಿಗನ ಜಯ, ಕನ್ನಡ ಸ್ವಾಭಿಮಾನಕ್ಕೆ ಸಂದ ಜಯ, ಕಾಂಗ್ರೆಸ್ ಕಾರ್ಯಕರ್ತರ ಜಯ ಎಂದು ಬಣ್ಣಿಸಿದ್ದಾರೆ. ಅಲ್ಲದೆ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು…
