ನವದೆಹಲಿ: ರಾಷ್ಟ್ರ ರಾಜಧಾನಿ ಸುತ್ತಮುತ್ತ ಇಂದು ಬೆಳಿಗ್ಗೆ ಭೂಕಂಪನದ ಅನುಭವವಾಗಿದೆ. ದೆಹಲಿ-ಎನ್ಸಿಆರ್ನಲ್ಲಿ ಲಘು ಕಂಪನವಾಗಿದ್ದು, ಕಂಪನದ ಪ್ರಮಾಣವು 4.0 ತೀವ್ರತೆಯಷ್ಟಿತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಸೋಮವಾರ ನಸುಕಿನ ಜಾವ ದೆಹಲಿ, ನೋಯ್ಡಾ, ಗಾಜಿಯಾಬಾದ್ ಮತ್ತು ಗುರುಗ್ರಾಮ ಸೇರಿದಂತೆ ಹಲವು ಪ್ರದೇಶಗಳಲ್ಲಿ ಭೂಕಂಪನದ ಅನುಭವವಾಗಿದೆ. ಸೋಮವಾರ ಬೆಳಗ್ಗೆ 5.36 ಸುಮಾರಿಗೆ ಭೂಮಿ ಕಂಪಿಸಿದ್ದು ನಿದ್ದೆಯಲ್ಲಿದ್ದವರೂ ಎಚ್ಚರಗೊಂಡು ಏಕಾಏಕಿ ಮನೆಗಳಿಂದ ಹೊರಗೆ ಓಡಿ ಬಂದಿದ್ದಾರೆ.
Category: ದೇಶ-ವಿದೇಶ
ಭಾರೀ ನಿರೀಕ್ಷೆ ಹುಟ್ಟಿಸಿದ ‘ದಿ ಡೆವಿಲ್’ ಟೀಸರ್
ನಟ ದರ್ಶನ್ ಜನ್ಮದಿನದ ಸಂಭ್ರಮದ ನಡುವೆಯೇ ಅವರ ಹೊಸ ಸಿನಿಮಾ ‘ದಿ ಡೆವಿಲ್’ ಟೀಸರ್ ರಿಲೀಸ್ ಆಗಿದೆ. ಮಿಲನ ಪ್ರಕಾಶ್ ಅವರು ನಿರ್ದೇಶನ ಮಾಡುತ್ತಿರುವ ಈ ಸಿನಿಮಾದ ಟೀಸರ್ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದು ಅಭಿಮಾನಿಗಳ ಮೆಚ್ಚುಗೆಗೆ ಪಾತ್ರವಾಗಿದೆ. ‘ಕಾಟೇರ’ ಸಿನಿಮಾದ ಬಿಗ್ ಸಕ್ಸಸ್ ನಂತರ ದರ್ಶನ್ ಶುರು ಮಾಡಿದ ಸಿನಿಮಾ ‘ದಿ ಡೆವಿಲ್’ ಭಾರೀ ನಿರೀಕ್ಷೆಯನ್ನು ಹುಟ್ಟುಹಾಕಿದೆ. ಆದರೆ, ದರ್ಶನ್ ಅವರು ಕೊಲೆ ಪ್ರಕರಣದಲ್ಲಿ ಆರೋಪಿ ಆಗಿ ಜೈಲು ಸೇರಿದ್ದರು. ಹಾಗಾಗಿ ಹಲವು ತಿಂಗಳ ಕಾಲ ‘ದಿ ಡೆವಿಲ್’ ಚಿತ್ರೀಕರಣಕ್ಕೆ ಬ್ರೇಕ್ ಬಿದ್ದಿತ್ತು. ಇದೀಗ ಟೀಸರ್ ಬಿಡುಗಡೆಯಾಗಿದ್ದು ಅಭಿಮಾನಿಗಳು ಖುಷಿಪಟ್ಟಿದ್ದಾರೆ.
ಒಂದು ಧರ್ಮಕ್ಕಷ್ಟೇ ಸೀಮಿತವಿಲ್ಲದೆ ಇಡೀ ಸಮಾಜಕ್ಕಾಗಿ RSS ಕೆಲಸ ಮಾಡುತ್ತಿದೆ: ಸರಸಂಘಚಾಲಕ್
ಕೋಲ್ಕತ್ತಾ: ಕೇವಲ ಒಂದು ಧರ್ಮಕ್ಕಷ್ಟೇ ಸೀಮಿತವಿಲ್ಲದೆ ಇಡೀ ಸಮಾಜಕ್ಕಾಗಿ ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS ಸಂಘಟನಾ ಕೆಲಸ ಮಾಡುತ್ತಿದೆ ಎಂದು ಸರಸಂಘಚಾಲಕ್ ಮೋಹನ್ ಭಾಗವತ್ ಹೇಳಿದ್ದಾರೆ. ಒಗ್ಗಟ್ಟಿನ ಹಿಂದೂ ಸಮಾಜಕ್ಕಾಗಿ ಸಂಘಟನೆಯನ್ನು ರಚಿಸುವುದು ಸಂಘದ ಮುಖ್ಯ ಉದ್ದೇಶವಾಗಿದೆ ಎಂದವರು ತಿಳಿಸಿದ್ದಾರೆ. ಪಶ್ಚಿಮ ಬಂಗಾಳದ ಪಶ್ಚಿಮ ಬುರ್ದ್ವಾನ್ ಜಿಲ್ಲೆಯ ಬುರ್ದ್ವಾನ್ನಲ್ಲಿ ನಡೆದ ಬೃಹತ್ ಸಮಾವೇಶದಲ್ಲಿ ಮಾತನಾಡಿದ ಅವರು, ಹಿಂದೂ ಸಮಾಜದ ಏಕತೆಗೆ ಏಕೆ ಒತ್ತು ನೀಡಲಾಗುತ್ತದೆ ಎಂದರು. ಭಾರತವು ಕೇವಲ ಭೌಗೋಳಿಕವಲ್ಲ, ಅದರ ಗಾತ್ರವು ಕಾಲಾನಂತರದಲ್ಲಿ ಬದಲಾಗುತ್ತದೆ. ಭಾರತವು ತನ್ನದೇ ಆದ ಸ್ವಭಾವವನ್ನು ಹೊಂದಿದೆ. ಆ ಸ್ವಭಾವದೊಂದಿಗೆ ಬದುಕಲು ಸಾಧ್ಯವಿಲ್ಲ ಎಂದು ಭಾವಿಸಿದವರು ತಮ್ಮದೇ ಆದ ದೇಶವನ್ನು ಮಾಡಿಕೊಂಡರು. ದೇಶದಿಂದ ಬೇರ್ಪಡದವರು ಭಾರತದ ಸ್ವಭಾವವನ್ನು ಬಯಸಿದ್ದರು ಎಂದು ಭಾಗವತ್ ಹೇಳಿದರು. ಹಿಂದೂಗಳು ಪ್ರಪಂಚದ ವೈವಿಧ್ಯತೆಯನ್ನು ಸ್ವೀಕರಿಸುವ ಮೂಲಕ ವರ್ಷಗಳಿಂದ ಮುಂದುವರೆದಿದ್ದಾರೆ ಎಂದ ಅವರು, ಈ ಮೂಲಕ ಒಗ್ಗಟ್ಟು ಪ್ರದರ್ಶಿಸುತ್ತಿದ್ದಾರೆ…
ರೈಲು ನಿಲ್ದಾಣದಲ್ಲಿನ ಕಾಲ್ತುಳಿತ: ರೈಲ್ವೆ ಸಚಿವರ ರಾಜೀನಾಮೆಗೆ ಕಾಂಗ್ರೆಸ್ ಆಗ್ರಹ
ನವದೆಹಲಿ: ರಾಷ್ಟ್ರ ರಾಜಧಾನಿಯ ರೈಲು ನಿಲ್ದಾಣದಲ್ಲಿನ ಕಾಲ್ತುಳಿತ ಘಟನೆಯ ನೈತಿಕ ಹೊಣೆ ಹೊತ್ತು ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ರಾಜೀನಾಮೆ ನೀಡಬೇಕು ಎಂದು ಕಾಂಗ್ರೆಸ್ ಒತ್ತಾಯಿಸಿದೆ. ಶನಿವಾರ ರಾತ್ರಿ ಸಂಭವಿಸಿದ ಕಾಲ್ತುಳಿತದಲ್ಲಿ 18 ಮಂದಿ ಸಾವನ್ನಪ್ಪಿದ್ದಾರೆ. ಈ ಘಟನೆ ಬಗ್ಗೆ ಕಳವಳ ವ್ಯಕ್ತಪಡಿಸಿರುವ ಕಾಂಗ್ರೆಸ್ ವಕ್ತಾರೆ ಸುಪ್ರಿಯಾ ಅವರು ಶ್ರಿನಾಟೆ, ವೈಷ್ಣವ್ ರಾಜೀನಾಮೆಗೆ ಆಗ್ರಹಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸರಿಯಾದ ವ್ಯವಸ್ಥೆ ಇಲ್ಲದಿರುವುದರಿಂದಾಗಿ ಈ ದುರ್ಘಟನೆ ಸಂಭವಿಸಿದೆ ಎಂದು ಆರೋಪಿಸಿದರು. ಈ ಘಟನೆಯ ನೈತಿಕ ಹೊಣೆ ಹೊತ್ತು ವೈಷ್ಣವ್ ರಾಜೀನಾಮೆ ನೀಡದಿದ್ದರೆ, ರೈಲು ನಿಲ್ದಾಣದಲ್ಲಿ ದುರಾವಸ್ಥೆಯಿಂದಾಗಿ ಅವರನ್ನು ಸಚಿವ ಸ್ಥಾನದಿಂದ ವಜಾಗೊಳಿಸಬೇಕು ಎಂದು ಆಗ್ರಹಿಸಿದರು.
ನವದೆಹಲಿ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: 18 ಪ್ರಯಾಣಿಕರ ಸಾವು
ನವದೆಹಲಿ: ರಾಷ್ಟ್ರ ರಾಜಧಾನಿ ನವದೆಹಲಿ ರೈಲು ನಿಲ್ದಾಣದಲ್ಲಿ ಶನಿವಾರ ಸಂಭವಿಸಿದ ಕಾಲ್ತುಳಿತದಲ್ಲಿ 18 ಪ್ರಯಾಣಿಕರು ಮೃತಪಟ್ಟಿದ್ದಾರೆ. ನವದೆಹಲಿ ರೈಲು ನಿಲ್ದಾಣದಿಂದ ಪ್ರಯಾಗ್ರಾಜ್ ಮಹಾ ಕುಂಭಮೇಳಕ್ಕೆ ತೆರಳಲು ವಿವಿಧ ರಾಜ್ಯಗಳಿಂದ ಬಂದಿದ್ದ ನೂರಾರು ಪ್ರಯಾಣಿಕರು ಜಮಾಯಿಸಿದ್ದರು. ವಿಶೇಷ ರೈಲಿನ್ನು ಹತ್ತುವಾಗ ನೂಕುನುಗ್ಗಲು ಸಂಭವಿಸಿ, ಕಾಲ್ತುಳಿತವಾಗಿದೆ ಎನ್ನಲಾಗಿದೆ. ಶನಿವಾರ ರಾತ್ರಿ 10 ಗಂಟೆ ಸುಮಾರಿಗೆ ಈ ಘಟನೆ ಸಂಭವಿಸಿದೆ ಎನ್ನಲಾಗಿದ್ದು, 10ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.
‘ಐಫೋನ್ ಎಸ್ಇ 4’ ಬಗ್ಗೆ ಎಲ್ಲರಿಗೂ ಕುತೂಹಲ
ಆಪಲ್ ತನ್ನ ವರ್ಷದ ಮೊದಲ ಪ್ರಮುಖ ಉತ್ಪನ್ನ ಬಿಡುಗಡೆಗೆ ಸಜ್ಜಾಗಿದ್ದು, ಫೆಬ್ರವರಿ 19 ಬುಧವಾರದಂದು ಬಿಡುಗಡೆಯಾಗಲಿದೆ. ಸಿಇಒ ಟಿಮ್ ಕುಕ್ ಅವರು ‘ಎಕ್ಸ್’ನಲ್ಲಿ ಪೋಸ್ಟ್ ಮಾಡುವ ಮೂಲಕ ‘ಐಫೋನ್ ಎಸ್ಇ 4’ ದಿನಾಂಕವನ್ನು ದೃಢಪಡಿಸಿದ್ದಾರೆ. ‘ಕುಟುಂಬದ ಹೊಸ ಸದಸ್ಯರನ್ನು ಭೇಟಿಯಾಗಲು ಸಿದ್ಧರಾಗಿ’ ಎಂಬ ಸಂದೇಶದೊಂದಿಗೆ ಅವರು ಮುಂಬರುವ ಸರಣಿ ಬಗ್ಗೆ ಕುತೂಹಲಕಾರಿ ಸಂಗತಿಯನ್ನು ತೆರೆದಿಟ್ಟಿದ್ದಾರೆ. ಜೊತೆಗೆ ಅನಿಮೇಟೆಡ್ ಆಪಲ್ ಲೋಗೋ ಕೂಡ ಇದೆ. ಆಪಲ್ ಅಧಿಕೃತವಾಗಿ ಏನನ್ನು ಸಂಗ್ರಹಿಸಿದೆ ಎಂಬುದನ್ನು ಬಹಿರಂಗಪಡಿಸಿಲ್ಲವಾದರೂ, ಮ್ಯಾಕ್ಬುಕ್ ಏರ್, ಐಪ್ಯಾಡ್ ಮತ್ತು ಬಹುಶಃ ವಿಷನ್ ಪ್ರೊ ಹೆಡ್ಸೆಟ್ಗೆ ನವೀಕರಣಗಳ ಜೊತೆಗೆ ಬಹುನಿರೀಕ್ಷಿತ ಐಫೋನ್ ಎಸ್ಇ 4 ಮೇಲೆ ಸ್ಪಾಟ್ಲೈಟ್ ಇರುತ್ತದೆ ಎಂದು ಹೇಳಲಾಗುತ್ತಿದೆ. ಆದರೆ ಹೊಸ ‘iPhone SE 4’ ಹೇಗಿದೆ ಎಂಬ ಬಗ್ಗೆ ಎಲ್ಲರಲ್ಲೂ ಕುತೂಹಲ ಇದೆ. ಇದೇ ಸಂದರ್ಭದಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಬಗೆಬಗೆಯ ವೀಡಿಯೊಗಳು ಹರಿದಾಡುತ್ತಿವೆ. ಆದರೆ ಹೊಸ…
ಹೊಸ ಚರಿತ್ರೆ ಬರೆದ ಮಹಾಕುಂಭಮೇಳ: ಈವರೆಗೂ 50 ಕೋಟಿಗೂ ಹೆಚ್ಚು ಮಂದಿ ಪುಣ್ಯಸ್ನಾನ
ಪ್ರಯಾಗರಾಜ್: ಹಿಂದೂಗಳ ಪವಿತ್ರ ಆಚರಣೆಯಾಗಿ ಹೆಗ್ಗುರುತಾಗಿರುವ ಉತ್ತರ ಪ್ರದೇಶದ ಪ್ರಯಾಗರಾಜ್ ಮಹಾಕುಂಭ ಮೇಳದಲ್ಲಿ 50 ಕೋಟಿಗೂ ಹೆಚ್ಚು ಭಕ್ತರು ಪುಣ್ಯಸ್ನಾನ ಮಾಡಿದ್ದಾರೆ. ಇದು ಜಾಗತಿಕ ದಾಖಲೆಯಾಗಿದೆ. ಈ ಕುರಿತಂತೆ ಮಾಹಿತಿ ಹಂಚಿಕೊಂಡಿರುವ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ಜನವರಿ 13ರಂದು ಪ್ರಾರಂಭವಾಗಿರುವ ಮಹಾಕುಂಭ ಮೇಳವು ಫೆಬ್ರವರಿ 26ರವರೆಗೆ ನಡೆಯಲಿದೆ. ಹಿಂದೂಗಳು ಪವಿತ್ರವೆಂದು ಪರಿಗಣಿಸುವ ಗಂಗಾ, ಯಮುನಾ ಮತ್ತು ಸರಸ್ವತಿ ನದಿಗಳ ಸಂಗಮವಾದ ತ್ರಿವೇಣಿ ಸಂಗಮದ ದಡದಲ್ಲಿ ಮಹಾಕುಂಭ ನಡೆಯುತ್ತಿದೆ.ಈ ಮಹಾಕುಂಭಮೇಳದ ಸಂದರ್ಭದಲ್ಲಿ ಈವರೆಗೆ 50 ಕೋಟಿಗೂ ಹೆಚ್ಚು ಭಕ್ತರು ತ್ರಿವೇಣಿ ಸಂಗಮದಲ್ಲಿ ಪವಿತ್ರ ಸ್ನಾನ ಮಾಡಿದ್ದಾರೆ ಎಂದು ಹೇಳಿದ್ದಾರೆ.
ಮಹಾಕುಂಭ ಮೇಳಕ್ಕೆ ತೆರಳಿದ್ದವಾರ ವಾಹನ ಅಪಘಾತ; 10 ಮಂದಿ ಸಾವು
ಪ್ರಯಾಗರಾಜ್: ಮಹಾಕುಂಭ ಮೇಳಕ್ಕೆ ತೆರಳಿದ್ದ ಆಸ್ತಿಕರ ಗುಂಪು ಭೀಕರ ಅಪಘಾತದಲ್ಲಿ ಸಾವನ್ನಪ್ಪಿರುವ ಘಟನೆ ಉತ್ತರ ಪ್ರದೇಶದ ಪ್ರಯಾಗರಾಜ್ ಸಮೀಪ ಸಂಭವಿಸಿದೆ. ಮೇಜಾ ಪೊಲೀಸ್ ಠಾಣೆ ಪ್ರದೇಶದಲ್ಲಿ ಶುಕ್ರವಾರ ತಡರಾತ್ರಿ ಹೆದ್ದಾರಿಯಲ್ಲಿ ಬಸ್ ಮತ್ತು ಲೆರೊ ಕಾರು ನಡುವೆ ಡಿಕ್ಕಿ ಸಂಭವಿಸಿದೆ. ಬೊಲೆರೊ ಕಾರಿನಲ್ಲಿ ಮಹಾಕುಂಭ ಮೇಳಕ್ಕೆ ಪ್ರಯಾಣಿಸುತ್ತಿದ್ದ ಹತ್ತು ಜನರು ಈ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಮೃತರು ಛತ್ತೀಸ್ಗಢ ರಾಜ್ಯದ ಕೊರ್ಬಾ ಜಿಲ್ಲೆಯವರೆಂದು ಹೇಳಲಾಗುತ್ತಿದೆ. ಈ ಅಪಘಾತದಲ್ಲಿ ಬಸ್ನಲ್ಲಿದ್ದ 19 ಮಂದಿಗೆ ಗಾಯಗಳಾಗಿದ್ದು ಆಸ್ರತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
‘ಲವ್ ಜಿಹಾದ್’ಗೆ ಮಹಾ ಬ್ರೇಕ್..! ಡಿಜಿಪಿ ನೇತೃತ್ವದಲ್ಲಿ 7 ಸದಸ್ಯರ ಸಮಿತಿ ರಚನೆ
ಮುಂಬೈ: ಮಹಾರಾಷ್ಟ್ರ ಸರ್ಕಾರವು ‘ಲವ್ ಜಿಹಾದ್’ಗೆ ಕಡಿವಾಣ ಹಾಕುವ ಸಂಬಂಧ ಮಹತ್ವದ ಹೆಜ್ಜೆ ಇಟ್ಟಿದೆ. ಈ ಸಂಬಂಧ ಕಾನೂನಾನಾತ್ಮಕ ನಿರ್ಧಾರ ಕೈಗೊಳ್ಳಲು ಅಧ್ಯಯನ ಸಮಿತಿಯನ್ನು ರಚಿಸಿದೆ. ಚುನಾಯಿತ ಪ್ರತಿನಿಧಿಗಳು ಮತ್ತು ವಿವಿಧ ಸಂಘಟನೆಗಳ ಬೇಡಿಕೆಯ ಮೇರೆಗೆ, ಮಹಾರಾಷ್ಟ್ರ ಸರ್ಕಾರವು ‘ಲವ್ ಜಿಹಾದ್’ (ಅಂತರ್ಧರ್ಮ ಸಂಬಂಧಗಳಿಗೆ ಸೌಮ್ಯೋಕ್ತಿ) ಮತ್ತು ವಂಚನೆಯ ಮೂಲಕ ಬಲವಂತದ ಮತಾಂತರ ಅಥವಾ ಮತಾಂತರ ತಡೆಯುವ ಸಂಬಂಧ ಕಾನೂನು ನಿಬಂಧನೆಗಳನ್ನು ಅಧ್ಯಯನ ಮಾಡಲು ರಾಜ್ಯ ಪೊಲೀಸ್ ಮಹಾನಿರ್ದೇಶಕರ ನೇತೃತ್ವದಲ್ಲಿ ಏಳು ಸದಸ್ಯರ ಸಮಿತಿಯನ್ನು ರಚಿಸಿದೆ. ಕರ್ನಾಟಕ, ಗುಜರಾತ್ ಮತ್ತು ಮಧ್ಯಪ್ರದೇಶ ಸೇರಿದಂತೆ ಇತರ ರಾಜ್ಯಗಳ ಮಾದರಿಯಲ್ಲಿ ರಾಜ್ಯದಲ್ಲಿ ಶಾಸನವನ್ನು ಜಾರಿಗೆ ತರುವ ಬಗ್ಗೆಯೂ ಸಮಿತಿಯು ಶಿಫಾರಸು ಮಾಡುವ ನಿರೀಕ್ಷೆಯಿದೆ. ಸಮಿತಿಯು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಅಲ್ಪಸಂಖ್ಯಾತರ ಅಭಿವೃದ್ಧಿ, ಕಾನೂನು ಮತ್ತು ನ್ಯಾಯಾಂಗ, ಸಾಮಾಜಿಕ ನ್ಯಾಯ ಮತ್ತು ವಿಶೇಷ ನೆರವು ಮತ್ತು ಗೃಹ ಇಲಾಖೆಗಳ ಕಾರ್ಯದರ್ಶಿಗಳನ್ನು…
AICCಉಸ್ತುವಾರಿಗಳ ಬದಲಾವಣೆ: ಬಿ.ಕೆ. ಹರಿಪ್ರಸಾದ್’ಗೆ ಮಹತ್ವದ ಹೊಣೆ
ನವದೆಹಲಿ: ಪ್ರದೇಶ ಕಾಂಗ್ರೆಸ್ ಘಟಕಗಳಿಗೆ ಹೊಸ ಅಧ್ಯಕ್ಷರನ್ನು ನೇಮಕ ಮಾಡುವ ಪ್ರಕ್ರಿಯೆ ಆರಂಭವಾಗಿದ್ದು, ಹಲವು ರಾಜ್ಯಗಳಿಗೆ ಹೊಸಬರನ್ನು ಎಐಸಿಸಿ ನೇಮಕ ಮಾಡಿದೆ. ಇದೇ ವೇಳೆ, ಪ್ರದೇಶ ಕಾಂಗ್ರೆಸ್ ಉಸ್ತುವಾರಿಗಳನ್ನು ನೇಮಕ ಮಾಡಲಾಗಿದೆ. ಕರ್ನಾಟಕದ ನಾಯಕ ಬಿ.ಕೆ. ಹರಿಪ್ರಸಾದ್ ಅವರನ್ನು ಹರಿಯಾಣಕ್ಕೆ ಉಸ್ತುವಾರಿಯಾಗಿ ನೇಮಕ ಮಾಡಲಾಗಿದೆ. ತಮಿಳುನಾಡು ಮತ್ತು ಪುದುಚೇರಿಗೆ ಗಿರಿ ಚೋಡಂಕರ್ ಅವರನ್ನು ಉಸ್ತುವಾರಿಯಾಗಿ ನೇಮಿಸಲಾಗಿದೆ. ಶುಕ್ರವಾರ ನಡೆದ ಪ್ರಮುಖ ಪುನರ್ರಚನೆಯಲ್ಲಿ 11 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಹೊಸ ಪ್ರಧಾನ ಕಾರ್ಯದರ್ಶಿಗಳು ಮತ್ತು ಉಸ್ತುವಾರಿಗಳನ್ನು AICC ನೇಮಿಸಿದೆ. ಛತ್ತೀಸ್ಗಢದ ಮಾಜಿ ಮುಖ್ಯಮಂತ್ರಿ ಭೂಪೇಶ್ ಬಾಘೇಲ್ ಅವರನ್ನು ಪಂಜಾಬ್ಗೆ ಉಸ್ತುವಾರಿ ಪ್ರಧಾನ ಕಾರ್ಯದರ್ಶಿಯಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನೇಮಕ ಮಾಡಿದ್ದಾರೆ. ಮಧ್ಯಪ್ರದೇಶಕ್ಕೆ ವರ್ಗಾವಣೆಗೊಂಡಿರುವ ಹರೀಶ್ ಚೌಧರಿ ಅವರ ಬದಲಿಗೆ ಬಘೇಲ್ ನೇಮಕಗೊಂಡಿದ್ದಾರೆ. ಕರ್ನಾಟಕದ ರಾಜ್ಯಸಭಾ ಸದಸ್ಯ ಸೈಯದ್ ನಾಸೀರ್ ಹುಸೇನ್ ಅವರನ್ನು ಜಮ್ಮು ಮತ್ತು ಕಾಶ್ಮೀರ…