ಚೆನ್ನೈ: ಸೂಪರ್‌ಸ್ಟಾರ್ ರಜನಿಕಾಂತ್ ಅಭಿನಯದ ಬಹುನಿರೀಕ್ಷಿತ ‘ಜೈಲರ್ 2’ ಚಿತ್ರೀಕರಣ ಡಿಸೆಂಬರ್‌ನಲ್ಲಿ ಮಹತ್ತರ ಹಂತ ಪ್ರವೇಶಿಸಲಿದೆ. ಮಲಯಾಳಂ ಸೂಪರ್‌ಸ್ಟಾರ್ ಮೋಹನ್ ಲಾಲ್ ಚಿತ್ರ ತಂಡಕ್ಕೆ ಸೇರಲಿದ್ದಾರೆ ಎಂಬ ಸುದ್ದಿ ಉದ್ಯಮ ವಲಯದಲ್ಲಿ ಜೋರಾಗಿ ಕೇಳಿಬರುತ್ತಿದೆ. ಮೂಲಗಳ ಪ್ರಕಾರ, ಡಿಸೆಂಬರ್ 2ರ ಸುಮ್ಮಾರಿಗೆ ಮೋಹನ್ ಲಾಲ್ ಕೆಲ ದಿನಗಳ ಕಾಲ ಚಿತ್ರೀಕರಣದಲ್ಲಿ ಪಾಲ್ಗೊಳ್ಳಲಿದ್ದಾರೆ. ನಂತರ ಅವರು ಮಲಯಾಳಂ ಚಿತ್ರಗಳ ಚಿತ್ರೀಕರಣಕ್ಕಾಗಿ ಮರಳಿದ್ದು, ಡಿಸೆಂಬರ್ 21 ರಿಂದ 24ರ ನಡುವೆ ಮತ್ತೆ ‘ಜೈಲರ್ 2’ ತಂಡಕ್ಕೆ ಸೇರುವ ಸಾಧ್ಯತೆ ಇದೆ. ದಿನಾಂಕ ಬಗ್ಗೆ ಅಧಿಕೃತ ಘೋಷಣೆ ಇನ್ನೂ ಬಂದಿಲ್ಲ. ಈ ನಡುವೆ, ಗೋವಾದಲ್ಲಿ ವಿಜಯ್ ಸೇತುಪತಿ ಅವರ ಭಾಗಗಳ ಚಿತ್ರೀಕರಣ ನಡೆಯುತ್ತಿದೆ ಎಂಬ ಮಾಹಿತಿ ಲಭ್ಯವಾಗಿದೆ. ಆದರೆ ಅವರ ತಾರಾಗಣ ಸೇರ್ಪಡೆ ಬಗ್ಗೆ ಅಧಿಕೃತ ದೃಢೀಕರಣವಿಲ್ಲ. ಇದೇ ವೇಳೆ, ಈ ವರ್ಷದ ಆರಂಭದಲ್ಲಿ ರಜನಿಕಾಂತ್ ಸ್ವತಃ ‘ಜೈಲರ್ 2’ ಕೆಲಸ…
Category: ದೇಶ-ವಿದೇಶ
‘ನಮ್ಮ ವೈಯಕ್ತಿಕ ಮತ್ತು ಪ್ರಜಾಪ್ರಭುತ್ವ ಹಕ್ಕುಗಳು ಯಾವ ಪರಿಸ್ಥಿತಿಯಲ್ಲೂ ರಕ್ಷಿತರಾಗಬೇಕು’: ರಾಷ್ಟ್ರಪತಿ ಮುರ್ಮು
ನವದೆಹಲಿ: ಭಾರತದ ಸಂವಿಧಾನವು ಪ್ರತಿಯೊಬ್ಬ ನಾಗರಿಕನ ವೈಯಕ್ತಿಕ ಹಾಗೂ ಪ್ರಜಾಪ್ರಭುತ್ವ ಹಕ್ಕುಗಳನ್ನು ಶಾಶ್ವತವಾಗಿ ರಕ್ಷಿಸುವ ರಾಷ್ಟ್ರದ ಕನಸನ್ನು ಹೊತ್ತಿದೆ ಎಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಬುಧವಾರ ಹೇಳಿದರು. 75ನೇ ಸಂವಿಧಾನ ದಿನದ ಅಂಗವಾಗಿ ಸಂಸತ್ತಿನ ಸಂವಿಧಾನ ಸದನದಲ್ಲಿ ನಡೆದ ವಿಶೇಷ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಕಾರ್ಯಕ್ರಮಕ್ಕೆ ಉಪಾಧ್ಯಕ್ಷ ಸಿ.ಪಿ. ರಾಧಾಕೃಷ್ಣನ್, ಲೋಕಸಭಾ ಸ್ಪೀಕರ್ ಓಂ ಬಿರ್ಲಾ, ಪ್ರಧಾನಿ ನರೇಂದ್ರ ಮೋದಿ, ರಾಜ್ಯಸಭಾ ಪ್ರತಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ, ಲೋಕಸಭಾ ಸದಸ್ಯ ರಾಹುಲ್ ಗಾಂಧಿ ಸೇರಿದಂತೆ ಹಲವಾರು ಗಣ್ಯರು ಹಾಜರಿದ್ದರು. ಸಂವಿಧಾನ ರಚನೆಯ ಐತಿಹಾಸಿಕ ಕ್ಷಣವನ್ನು ನೆನಪಿಸಿಕೊಂಡ ರಾಷ್ಟ್ರಪತಿ ಮುರ್ಮು, “1949ರ ನವೆಂಬರ್ 26ರಂದು ಸಂವಿಧಾನ ಭವನದ ಸೆಂಟ್ರಲ್ ಹಾಲ್‌ನಲ್ಲಿ ಸಂವಿಧಾನ ಸಭೆ ಭಾರತದ ಸಂವಿಧಾನ ರಚನೆ ಕಾರ್ಯವನ್ನು ಪೂರ್ಣಗೊಳಿಸಿತು. ಇದೇ ದಿನ ದೇಶವು ನಮ್ಮ ಸಂವಿಧಾನವನ್ನು ಅಂಗೀಕರಿಸಿತು. ಸಂವಿಧಾನದ ಪ್ರಮುಖ ವಾಸ್ತುಶಿಲ್ಪಿಗಳಲ್ಲಿ ಡಾ.ಬಿ.ಆರ್. ಅಂಬೇಡ್ಕರ್ ಅವರು ಉಲ್ಲೇಖನೀಯ…
ಅಯೋಧ್ಯೆ ರಾಮ ಮಂದಿರದಲ್ಲಿ ವಿಶೇಷ ‘ಧರ್ಮಧ್ವಜ’;
ಅಯೋಧ್ಯೆ/ನವದೆಹಲಿ: ಐತಿಹಾಸಿಕ ರಾಮ ಜನ್ಮಭೂಮಿ ದೇವಾಲಯದಲ್ಲಿ ಮಂಗಳವಾರ ನಡೆದ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ, ವಿಶೇಷವಾಗಿ ವಿನ್ಯಾಸಗೊಳಿಸಲಾದ ‘ಧರ್ಮಧ್ವಜ’ವನ್ನು ಹಾರಿಸಿದರು. ರಾಷ್ಟ್ರ ಸ್ವಯಂಸೇವಕ ಸಂಘದ ಮುಖ್ಯಸ್ಥ ಮೋಹನ್ ಭಾಗವತ್ ಈ ಸಂದರ್ಭದಲ್ಲಿ ಪ್ರಧಾನಿ ಜೊತೆಗಿದ್ದರು. “आज हम सबके लिए सार्थकता का दिन है। इसके लिए जितने लोगों ने प्राण न्योछावर किए, उनकी आत्मा तृप्त हुई होगी। आज मंदिर का ध्वजारोहण हो गया। मंदिर की शास्त्रीय प्रक्रिया पूर्ण हो गई। राम राज्य का ध्वज, जो कभी अयोध्या में फहराता था, जो पूरी दुनिया में अपने आलोक से समृद्धि प्रदान करता… pic.twitter.com/WqLQMJjM43 — RSS (@RSSorg) November 25, 2025 ಮಧ್ಯಾಹ್ನ 12 ಗಂಟೆಯ…
ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿ ಸೂರ್ಯಕಾಂತ್ ಪ್ರಮಾಣ ವಚನ
ನವದೆಹಲಿ: ದೇಶದ 53ನೇ ಮುಖ್ಯ ನ್ಯಾಯಮೂರ್ತಿಯಾಗಿ ನ್ಯಾಯಮೂರ್ತಿ ಸೂರ್ಯಕಾಂತ್ ಅವರು ಸೋಮವಾರ ಪ್ರಮಾಣವಚನ ಸ್ವೀಕರಿಸಿದರು. ರಾಷ್ಟ್ರಪತಿ ಭವನದಲ್ಲಿ ನಡೆದ ಪ್ರಮಾಣವಚನ ಸಮಾರಂಭದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅವರಿಗೆ ಪ್ರಮಾಣವಚನ ಬೋಧಿಸಿದರು. ಸೂರ್ಯಕಾಂತ್ ಅವರು ಹಿಂದಿಯಲ್ಲಿ ದೇವರ ಹೆಸರಿನಿಂದ ಪ್ರಮಾಣವಚನ ಪಠಿಸಿದರು. ಸಮಾರಂಭದಲ್ಲಿಉಪರಾಷ್ಟ್ರಪತಿ ಸಿ.ಪಿ ರಾಧಾಕೃಷ್ಣನ್, ಪ್ರಧಾನ ಮಂತ್ರಿ ನರೇಂದ್ರ ಮೋದಿ, ಸಚಿವರು, ಸುಪ್ರೀಂ ಕೋರ್ಟ್ ನ್ಯಾಯಾಧೀಶರು ಹಾಗೂ ಭೂತಾನ್, ಕೀನ್ಯಾ, ಮಲೇಷ್ಯಾ, ಬ್ರೆಜಿಲ್, ಮಾರಿಷಸ್, ನೇಪಾಳ ಮತ್ತು ಶ್ರೀಲಂಕಾದ ಮುಖ್ಯ ನ್ಯಾಯಮೂರ್ತಿಗಳು ಹಾಜರಿದ್ದರು. ಹರಿಯಾಣ ಮುಖ್ಯಮಂತ್ರಿ ನೈಬ್ ಸಿಂಗ್ ಸೈನಿ ಕೂಡ ಸಮಾರಂಭಕ್ಕೆ ಹಾಜರಾಗಿದ್ದರು. ನ್ಯಾಯಮೂರ್ತಿ ಸೂರ್ಯಕಾಂತ್ ಅವರ ಅಧಿಕಾರಾವಧಿ ಸುಮಾರು 14 ತಿಂಗಳು. ಅವರು ಫೆಬ್ರವರಿ 9, 2027 ರಂದು ನಿವೃತ್ತಿಗೊಳ್ಳಲಿದ್ದಾರೆ. ಇತ್ತೀಚೆಗೆ ಸಿಜೆಐ ಪೀಠವನ್ನು ಖಾಲಿ ಮಾಡಿರುವ ಭೂಷಣ್ ಆರ್. ಗವಾಯಿ ಅವರು ಅಕ್ಟೋಬರ್ 30ರಂದು ತಮ್ಮ ಉತ್ತರಾಧಿಕಾರಿಯಾಗಿ ಸೂರ್ಯಕಾಂತ್ ಅವರನ್ನು ಶಿಫಾರಸು…
ಅಮಿತ್ ಶಾ ಭೇಟಿಯಾದ ಬಿ.ವೈ.ವಿಜಯೇಂದ್ರ;
ನವದೆಹಲಿ: ಬಿಹಾರ ವಿಧಾನಸಭಾ ಚುನಾವಣೆಯಲ್ಲಿ NDA ಪ್ರಚಂಡ ಗೆಲುವು ಸಾಧಿಸಿರುವ ಹಿನ್ನೆಲೆಯಲ್ಲಿ ರಾಷ್ಟ್ರೀಯ ಬಿಜೆಪಿಯನ್ನು ಪಕ್ಷದ ಕರ್ನಾಟಕ ಪ್ರದೇಶ ಘಟಕ ಅಭಿನಂಧಿಸಿದೆ. ಕೇಂದ್ರ ಗೃಹ ಮತ್ತು ಸಹಕಾರ ಸಚಿವರಾದ ಅಮಿತ್ ಷಾ ಅವರನ್ನು ಅವರನ್ನು ಭೇಟಿ ಮಾಡಿದ ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಅಭಿನಂಧಿಸಿದರು. ಈ ಕುರಿತಂತೆ ಮಾಹಿತಿ ಹಂಚಿಕೊಂಡಿರುವ ವಿಜಯೇಂದ್ರ, ರಾಷ್ಟ್ರ ರಾಜಕಾರಣಕ್ಕೆ ಸ್ಪಷ್ಟ ದಿಕ್ಸೂಚಿ ಎಂದು ವಿಶ್ಲೇಷಿಸಲಾಗಿದ್ದ ಬಿಹಾರ ಚುನಾವಣೆಯನ್ನು ಅತ್ಯಂತ ಸಮರ್ಥವಾಗಿ ನಿಭಾಯಿಸಿ, NDA ಮಿತ್ರಕೂಟ ಐತಿಹಾಸಿಕ ದಿಗ್ವಿಜಯ ಸಾಧಿಸುವಲ್ಲಿ ಮಹತ್ವದ ಪಾತ್ರವಹಿಸಿ ಚುನಾವಣಾ ನೈಪುಣ್ಯತೆ ಮೆರೆದ ಮಾನ್ಯ ಅಮಿತ್ ಶಾ ಜಿ ಅವರು ಬಿಜೆಪಿಗೆ ಕಾರ್ಯಕರ್ತರಿಗೆ ಪ್ರೇರಣಾಶೀಲ ನಾಯಕರಾಗಿದ್ದಾರೆ ಎಂದು ಬಣ್ಣಿಸಿದ್ದಾರೆ. ಇಂದಿನ ಅವರ ಭೇಟಿಯ ಸಂದರ್ಭದಲ್ಲಿ ಕರ್ನಾಟಕದ ರಾಜಕಾರಣದ ಪ್ರಸ್ತುತ ವಿದ್ಯಮಾನಗಳ ಮಾಹಿತಿ ನೀಡಲಾಯಿತು.ಪಕ್ಷ ಸಂಘಟನೆ ಇನ್ನಷ್ಟು ಚುರುಕುಗೊಳಿಸುವ ನಿಟ್ಟಿನಲ್ಲಿ ಅಗತ್ಯ ಮಾರ್ಗದರ್ಶನ ಪಡೆಯಲಾಯಿತು ಎಂದವರು ತಿಳಿಸಿದ್ದಾರೆ.
ಕದನ ವಿರಾಮ ಉಲ್ಲಂಘನೆಗೆ ಇಸ್ರೇಲ್ ಎದಿರೇಟು; ವೈಮಾನಿಕ ದಾಳಿ, 20ಕ್ಕೂ ಹೆಚ್ಚು ಮಂದಿ ಸಾವು
ಗಾಜಾ: ಕದನ ವಿರಾಮ ಉಲ್ಲಂಘನೆಯಿಂದಾಗಿ ಪಶಿಮ ದಂಡೆ ಮತ್ತೊಮ್ಮೆ ಪ್ರಕ್ಷುಬ್ಧಗೊಂಡಿದೆ. ಉತ್ತರ ಮತ್ತು ಮಧ್ಯ ಗಾಜಾದಾದ್ಯಂತ ಇಸ್ರೇಲ್ ನಡೆಸಿದ ಡ್ರೋನ್, ಕ್ಷಿಪಣಿ ದಾಳಿಯಲ್ಲಿ ಕನಿಷ್ಠ 24 ಪ್ಯಾಲೆಸ್ಟೀನಿಯನ್ನರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿವೆ. ಇಸ್ರೇಲ್ ವೈಮಾನಿಕ ದಾಳಿಯಲ್ಲಿ ಭಾರೀ ಮಾರಣಹೋಮವೇ ನಡೆದಿದ್ದು ಜೊತೆಗೆ ಮಕ್ಕಳು ಸೇರಿದಂತೆ 54 ಜನರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಕಳೆದ, ಅಕ್ಟೋಬರ್ ನಲ್ಲಿ ಅಮೆರಿಕ ಮಧ್ಯಸ್ಥಿಕೆಯಲ್ಲಿ ಇಸ್ರೇಲ್ ಮತ್ತು ಹಮಾಸ್ ನಡುವೆ ಕದನ ವಿರಾಮ ಜಾರಿಗೆ ಬಂದಿತ್ತು. ಆದರೆ ಭಯೋತ್ಪಾದಕ” ದಾಳಿಯ ಪರಿಣಾಮವಾಗಿ ತಾನು ವೈಮಾನಿಕ ದಾಳಿ ಮಾಡಬೇಕಾಯಿತು ಎಂದು ಇಸ್ರೇಲ್ ಮಿಲಿಟರಿ ಹೇಳಿದೆ.
ತೇಜಸ್ ಯುದ್ಧವಿಮಾನ ಪತನ; ದುಬೈ ಏರೋ ಶೋ ವೇಳೆ ದುರಂತ
ದುಬೈ: ವಿಶ್ವದ ಗಮನ ಸೆಳೆದಿರುವ ದುಬೈ ಏರೋ ಶೋ ಕಾರ್ಯಕ್ರಮದಲ್ಲಿ ಭಾರತೀಯ ತೇಜಸ್ ಯುದ್ಧ ವಿಮಾನ ದುರಂತಕ್ಕೆ ಗುರಿಯಾಗಿದೆ. ಅಲ್ ಮಕ್ತೌಮ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಶುಕ್ರವಾರ ಮಧ್ಯಾಹ್ನ ಪ್ರದರ್ಶನ ಹಾರಾಟ ನಡೆಸುತ್ತಿದ್ದ ತೇಜಸ್, ತಕ್ಷಣವೇ ಬೆಂಕಿಗಾಹುತಿಯಾಗಿ ನೆಲಕ್ಕೆ ಅಪ್ಪಳಿಸಿದೆ. ಸ್ಫೋಟದ ನಂತರ ಸ್ಥಳದೆಲ್ಲೆ ದಟ್ಟವಾದ ಕಪ್ಪು ಹೊಗೆ ಆವರಿಸಿತು. आज एक दर्दनाक क्षण हमारे बहादुर पायलट की शहादत के साथ हमारे सामने आया, जब दुबई एयर शो के दौरान हमारी अपनी तकनीक, हमारी उड़ान संभावना, यानी #Tejas विमान जो देश की शक्ति व समर्पण का प्रतीक है जो #DubaiAirShow में इस प्रकार धराशाही हो गया जैसे ये हकीकत नहीं किसी फ़िल्म का scene……
ದೇಶದಲ್ಲಿ ಕಳೆದ 10 ವರ್ಷಗಳಲ್ಲಿ ಆಹಾರಧಾನ್ಯ ಉತ್ಪಾದನೆಯಲ್ಲಿ ಹೆಚ್ಚಳ
ನವದೆಹಲಿ: ದೇಶದಲ್ಲಿ ಕಳೆದ 10 ವರ್ಷಗಳಲ್ಲಿ ಆಹಾರಧಾನ್ಯ ಉತ್ಪಾದನೆ ಗಣನೀಯವಾಗಿ ಹೆಚ್ಚಿದ್ದು, 2015–16ರ 251.54 ಮಿಲಿಯನ್ ಟನ್‌ನಿಂದ 2024–25ರಲ್ಲಿ 357.73 ಮಿಲಿಯನ್ ಟನ್ ಗಳನ್ನು ತಲುಪಲಿದೆ ಎಂದು ಸರ್ಕಾರದ ಅಂಕಿಅಂಶಗಳು ತಿಳಿಸಿವೆ. ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರು, ಅಕ್ಕಿ ಉತ್ಪಾದನೆ 1,501.84 ಲಕ್ಷ ಟನ್ ಆಗಿ ದಾಖಲೆ ಮಟ್ಟ ತಲುಪಿದೆ ಎಂದು ತಿಳಿಸಿದರು. ಇದು ಕಳೆದ ಸಾಲಿನ 1,378.25 ಲಕ್ಷ ಟನ್‌ಗಿಂತ 123.59 ಲಕ್ಷ ಟನ್ ಹೆಚ್ಚಳ. ಗೋಧಿ ಉತ್ಪಾದನೆಯು 46.53 ಲಕ್ಷ ಟನ್‌ಗಳ ಏರಿಕೆ ಕಾಣಿಸಿ, ಹೆಸರುಕಾಳು 42.44 ಲಕ್ಷ ಟನ್, ಸೋಯಾಬೀನ್ 152.68 ಲಕ್ಷ ಟನ್, ನೆಲಗಡಲೆ 119.42 ಲಕ್ಷ ಟನ್ ಮಟ್ಟ ತಲುಪಿದೆಯೆಂದು ಹೇಳಿದರು. ಮೆಕ್ಕೆಜೋಳ ಉತ್ಪಾದನೆ 434.09 ಲಕ್ಷ ಟನ್ ಮತ್ತು ‘ಶ್ರೀಅನ್ನ’ (ರಾಗಿ) 185.92 ಲಕ್ಷ ಟನ್ ಅಂದಾಜಿಸಲಾಗಿದೆ. ಇದು ಕಳೆದ ವರ್ಷಕ್ಕಿಂತ ಎರಡೂ ಹಬ್ಬಿನ…
ಭಾರತದ ಹಲವೆಡೆ 200 ಸ್ಫೋಟಗಳ ಸಂಚು : ಜೆಇಎಂ ಸಂಚು ಬಹಿರಂಗ
ನವದೆಹಲಿ: ದೆಹಲಿಯ ಕೆಂಪುಕೋಟೆ ಬಳಿ ನವೆಂಬರ್ 10ರಂದು ನಡೆದ ಸ್ಫೋಟ ಪ್ರಕರಣವು ದೊಡ್ಡ ಉಗ್ರಸಂಚಿನ ಸುಳಿವನ್ನೂ ನೀಡಿದೆ. ಜೈಶ್-ಎ-ಮೊಹಮ್ಮದ್ (ಜೆಇಎಂ) ಸಂಘಟನೆ ನಂಟು ತನಿಖೆಯಿಂದ ದೃಢಪಟ್ಟಿದೆ. ಬಂಧಿತರಿಗೆ ಬಾಂಬ್ ತಯಾರಿಕೆ ಬಗ್ಗೆ ಮಾರ್ಗದರ್ಶನ ನೀಡಿದ್ದು, ಜೆಇಎಂ ಕಾರ್ಯಕರ್ತ ಹಂಜುಲ್ಲಾ ಎನ್ನುವುದು ತನಿಖಾಧಿಕಾರಿಗಳ ನಿರ್ಧಾರ. ತನಿಖೆಯಿಂದ ಹೊರಬಂದಿರುವ ಮತ್ತೊಂದು ಗಂಭೀರ ಮಾಹಿತಿ ಎಂದರೆ — ಆರೋಪಿಗಳು ದೆಹಲಿ, ಗುರುಗ್ರಾಮ್, ಫರಿದಾಬಾದ್ ಸೇರಿದಂತೆ ಉತ್ತರ ಭಾರತದ ಅನೇಕ ಪ್ರದೇಶಗಳಲ್ಲಿ ಏಕಕಾಲದಲ್ಲಿ 200 ಸ್ಫೋಟಗಳನ್ನು ನಡೆಸಲು ಸಂಚು ರೂಪಿಸಿದ್ದರು. ಈ ಉದ್ದೇಶಕ್ಕಾಗಿ, ಫರಿದಾಬಾದ್ ಉಗ್ರಮಾಡ್ಯೂಲ್‌ಗೆ ಪಾಕಿಸ್ತಾನ ಮೂಲದ ಐಎಸ್‌ಐ ಸಂಪರ್ಕ ಹೊಂದಿರುವ ಜೆಇಎಂ ಕಾರ್ಯಕರ್ತರಿಗೆ ತರಬೇತಿ ನೀಡುತ್ತಿದ್ದನೆಂದು ತಿಳಿದುಬಂದಿದೆ. ಮುಖ್ಯ ಆರೋಪಿ ಮೌಲ್ವಿ ಇರಾನ್ ಅಹ್ಮದ್ ಗೆ ಹಂಜುಲ್ಲಾ ನೇರ ಸಂಪರ್ಕ ಹೊಂದಿದ್ದನು. ಜಮ್ಮು-ಕಾಶ್ಮೀರದಲ್ಲಿ ಕಂಡುಬಂದಿದ್ದ ಜೆಇಎಂ ಪೋಸ್ಟರ್‌ಗಳಲ್ಲಿ “ಕಮಾಂಡರ್ ಹಂಜುಲ್ಲಾ ಭಾಯಿ” ಎಂಬ ಹೆಸರು ಗಮನಸೆಳೆದಿದ್ದು, ಅದರಿಂದಲೇ ತನಿಖೆ ವಿಸ್ತರಿಸಿ,…
ಬಿಹಾರ: 10ನೇ ಬಾರಿಗೆ ಸಿಎಂ ಆಗಿ ನಿತೀಶ್ ಕುಮಾರ್ ಪ್ರಮಾಣವಚನ
ಪಾಟ್ನಾ: ಬಿಹಾರದಲ್ಲಿ ನೂತನ ಸರ್ಕಾರ ಅಸ್ತಿತ್ವಕ್ಕೆ ಬಂದಿದೆ. ನಿತೀಶ್ ಕುಮಾರ್ ಅವರು 10ನೇ ಬಾರಿಗೆ ಸಿಎಂ ಆಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ. #Bihar:জেডি (ইউ) প্রধান নীতীশ কুমার আজ পাটনার গান্ধী ময়দানে দশমবারের মতো বিহারের মুখ্যমন্ত্রী হিসেবে শপথ নিলেন; অনুষ্ঠানে উপস্থিত ছিলেন প্রধানমন্ত্রী @narendramodiসহ এনডিএ নেতারা। #BiharElections2025 @DDNewslive pic.twitter.com/ZVGtLNoECS — DD News Tripura (@ddnewsagartala) November 20, 2025 ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಎನ್‌ಡಿಎ ಮೈತ್ರಿಕೂಟದ ಭರ್ಜರಿ ಗೆಲುವಿನ ನಂತರ, ಜೆಡಿಯು ಮುಖ್ಯಸ್ಥ ನಿತೀಶ್ ಕುಮಾರ್ ಅವರು ಗುರುವಾರ ದಾಖಲೆಯ 10ನೇ ಬಾರಿಗೆ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದರು. ಗುರುವಾರ ಬೆಳಗ್ಗೆ 11.30ಕ್ಕೆ ಪಾಟ್ನಾದ ಗಾಂಧಿ ಮೈದಾನದಲ್ಲಿ ನಡೆದ ಸಮಾರಂಭದಲ್ಲಿ ಅವರು ಪ್ರಮಾಣವಚನ ಸ್ವೀಕರಿಸಿದರು. ಇದೇ ವೇಳೆ, ಸಾಮ್ರಾಟ್ ಚೌಧರಿ ಮತ್ತು ವಿಜಯ್ ಕುಮಾರ್ ಸಿನ್ಹಾ ಅವರು ಉಪ…
