ಸ್ವಾಮೀಜಿ ಮೇಲೆ ಕೇಸ್; ಸಮಾಜದ ಸ್ವಾಸ್ಥ್ಯವನ್ನು ಹಾಳು ಮಾಡುವ ನೀಚ ರಾಜಕಾರಣ ಎಂದ ವಿಜಯೇಂದ್ರ

ಬೆಂಗಳೂರು: ಸ್ವಾಮೀಜಿ ಮೇಲೆ ಕೇಸ್ ಹಾಕುವ ಮೂಲಕ ಸಮಾಜದ ಸ್ವಾಸ್ಥ್ಯವನ್ನು ಹಾಳು ಮಾಡುವ ನೀಚ ರಾಜಕಾರಣಕ್ಕೆ ಕಾಂಗ್ರೆಸ್ ಮುಂದಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಆಕ್ರೋಶ ಹೊರಹಾಕಿದ್ದಾರೆ. ಸಾಮಾಜಿಕ ಜಾಲತಾಣ ‘X’ನಲ್ಲಿ ಪೋಸ್ಟ್ ಹಾಕಿರುವ ವಿಜಯೇಂದ್ರ, ವಿಶ್ವ ಒಕ್ಕಲಿಗ ಮಹಾ ಸಂಸ್ಥಾನ ಮಠದ ಚಂದ್ರಶೇಖರನಾಥ ಸ್ವಾಮೀಜಿಗಳು ತಮ್ಮ ಹೇಳಿಕೆಯ ಕುರಿತಂತೆ ಸೌಹಾರ್ದತೆಯನ್ನು ಪುಷ್ಠೀಕರಿಸಿ ಸೂಕ್ತ ಸ್ಪಷ್ಟನೆ ನೀಡಿ ವಿವಾದಕ್ಕೆ ಇತಿಶ್ರೀ ಹಾಡುವ ಪ್ರಾಮಾಣಿಕ ಪ್ರಯತ್ನ ಮಾಡಿದ್ದಾರೆ. ಈ ಪ್ರಕರಣವನ್ನು ಇಷ್ಟಕ್ಕೇ ಕೈ ಬಿಡಬಹುದಾಗಿದ್ದ ಕಾಂಗ್ರೆಸ್ ಸರ್ಕಾರ ಸ್ವಾಮೀಜಿಗಳ ವಿರುದ್ಧ ದೂರು ದಾಖಲಾಗುವಂತೆ ನೋಡಿಕೊಂಡು ಅವರನ್ನು ವಿಚಾರಣೆಗಾಗಿ ಪೊಲೀಸ್ ಠಾಣೆಗೆ ಕರೆಯುವ ಮೂಲಕ ಸಮಾಜದ ಸ್ವಾಸ್ಥ್ಯವನ್ನು ಹಾಳು ಮಾಡುವ ನೀಚ ರಾಜಕಾರಣ ಮಾಡಲು ಹೊರಟಿದೆ ಎಂದು ಆರೋಪಿಸಿದ್ದಾರೆ. ದೇಶದ್ರೋಹಿಗಳು, ಸಮಾಜ ಘಾತುಕ ಶಕ್ತಿಗಳ ವಿರುದ್ಧದ ಪ್ರಕರಣಗಳನ್ನು ಹಿಂಪಡೆಯುತ್ತಿರುವ ಕಾಂಗ್ರೆಸ್ ಸರ್ಕಾರಕ್ಕೆ ಒಬ್ಬ ಸಜ್ಜನಿಕೆಯ ಸಂತರೆಂದು ಕರೆಸಿಕೊಂಡಿರುವ ಹಿರಿಯ…

ನಾಯಿಯನ್ನು ಓಡಿಸುವ ಆತುರದಲ್ಲಿ 3ನೇ ಅಂತಸ್ತಿನಿಂದ ಬಿದ್ದು ಯುವಕ ಸಾವು

ಹೈದರಾಬಾದ್: ಬರ್ತ್ ಡೇ ಪಾರ್ಟಿ ಮಾಡಲು ಖಾಸಗಿ ಹೊಟೆಲ್ ಗೆ ಆಗಮಿಸಿದ್ದ ವ್ಯಕ್ತಿಯೋರ್ವ ನಾಯಿಯನ್ನು ಓಡಿಸುವ ಆತುರದಲ್ಲಿ ತಾನೇ 3ನೇ ಅಂತಸ್ತಿನಿಂದ ಕೆಳಗೆ ಬಿದ್ದು ಸಾವನ್ನಪ್ಪಿರುವ ಘಟನೆ ಹೈದರಾಬಾದ್ ನಲ್ಲಿ ನಡೆದಿದೆ. ಹೈದರಾಬಾದ್ ನ ಚಂದಾನಗರದಲ್ಲಿ ಈ ಘಟನೆ ನಡೆದಿದ್ದು ಈ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಮೃತ ವ್ಯಕ್ತಿಯನ್ನು ಉದಯ್ ಕುಮಾರ್ ಎಂದು ಗುರುತಿಸಲಾಗಿದೆ. ಏರೆ ಬಗ್ಗೆ ಪ್ರಕರಣ ದಾಖಲಿಸಿರುವ ಚಂದಾನಗರ ಪೊಲೀಸ್ ಠಾಣೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ತಲಕಾವೇರಿಯಲ್ಲಿ ‘ತೀರ್ಥೋದ್ಭವ’; ‘ತೀರ್ಥಸ್ವರೂಪಿಣಿ’ ದರ್ಶನದ ಅನನ್ಯ ಕ್ಷಣ ಕಣ್ತುಂಬಿಕೊಂಡ ಭಕ್ತ ಸಮೂಹ

ಮಡಿಕೇರಿ: ಜೀವನದಿ ಕಾವೇರಿಯ ಉಗಮ ಸ್ಥಾನ ತಲಕಾವೇರಿಯಲ್ಲಿ ಇಂದು ತೀರ್ಥೋದ್ಭವವಾಗಿದೆ. ಕೊಡಗು ಜಿಲ್ಲೆಯ ಭಾಗಮಂಡಲ ಸಮೀಪ ತಲಕಾವೇರಿ ಕ್ಷೇತ್ರ ಈ ಕ್ಷಣಕ್ಕೆ ಸಾಕ್ಷಿಯಾಯಿತು. ಬೆಳಗ್ಗೆ 7 ಗಂಟೆ 40 ನಿಮಿಷಕ್ಕೆ ತುಲಾ ಲಗ್ನದಲ್ಲಿ ತುಲಾ ಸಂಕ್ರಮಣದ ಪವಿತ್ರ ಕಾಲದಲ್ಲಿ ‘ಬ್ರಹ್ಮಕುಂಡಿಕೆ’ಯು ಕಾವೇರಿ ಮಾತೆಯು ತೀರ್ಥಸ್ವರೂಪಿಣಿಯಾಗಿ ದರ್ಶನ ನೀಡಿದ ಅನನ್ಯ ಸನ್ನಿವೇಶವನ್ನು ಅಪಾರ ಸಂಖ್ಯೆಯ ಭಕ್ತರು ಕಣ್ತುಂಬಿಕೊಂಡರು. ತೀರ್ಥೋದ್ಭವ ಸಂದರ್ಭದಲ್ಲಿ ಬ್ರಹ್ಮಕುಂಡಿಕೆಯಲ್ಲಿ ವಿಶೇಷ ಪೂಜಾ ಕೈಂಕರ್ಯಗಳು ನೆರವೇರಿದವು. ಕೊಡಗಿನ ಮಹಿಳೆಯರು ಸಾಂಪ್ರದಾಯಿಕ ಉಡುಗೆಯಲ್ಲಿ ಆರತಿ ಬೆಳಗಿ ಕಾವೇರಿ ಮಾತೆಯನ್ನು ಸ್ವಾಗತಿಸಿದ ಕ್ಷಣವೂ ಗಮನಸೆಳೆಯಿತು. ಕೊಡಗು ಜಿಲ್ಲೆಯ ಬ್ರಹ್ಮಗಿರಿ ತಪ್ಪಲಿನ ತಲಕಾವೇರಿ ಕ್ಷೇತ್ರದಲ್ಲಿ ಕಾವೇರಿ ತೀರ್ಥೋದ್ಭವ ಸಾವಿರಾರು ಭಕ್ತರ ಭಾವೋದ್ವೇಗದ ನಡುವೆ ನಡುರಾತ್ರಿ 12 ಗಂಟೆ 57 ನಿಮಿಷಕ್ಕೆ ನಿಗಧಿತ ಮುಹೂರ್ತಕ್ಕಿಂತ ಎರಡು ನಿಮಿಷ ಮುನ್ನವೇ ನೆರವೇರಿತು. VC: @mysuruonline pic.twitter.com/RM3UUFEKb3 — Prathap Simha (@mepratap) October 18,…

ಜಮ್ಮು ಕಾಶ್ಮೀರ: ನೂತನ ಸಿಎಂ ಆಗಿ ಒಮರ್ ಅಬ್ದುಲ್ಲಾ

ಶ್ರೀನಗರ: ಕಣಿವೆ ರಾಜ್ಯ ಜಮ್ಮು-ಕಾಶ್ಮೀರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಮತ್ತು ನ್ಯಾಷನಲ್ ಕಾನ್ಪರೆನ್ಸ್ ಮೈತ್ರಿಕೂಟ ಗೆದ್ದು ಬೀಗಿದೆ. 90 ವಿಧಾನಸಭಾ ಕ್ಷೇತ್ರಗಳ ಪೈಕಿ ಸರ್ಕಾರ ರಚನೆ 46 ಸ್ಥಾನಗಳ ಅಗತ್ಯ ಇದ್ದು ಅದರಂತೆ ಕಾಂಗ್ರೆಸ್ ಮತ್ತು ನ್ಯಾಷನಲ್ ಕಾನ್ಪರೆನ್ಸ್ ಮೈತ್ರಿಕೂಟ 48 ಸ್ಥಾನಗಳಲ್ಲಿ ಗೆದ್ದು ಸ್ಪಷ್ಟ ಬಹುಮತ ಗಳಿಸುವ ಮೂಲಕ ಆಡಳಿತ ಚುಕ್ಕಾಣಿ ಹಿಡಿಯಲು ಮುಂದಾಗಿದೆ. ಇದೇ ವೇಳೆ, ಜಮ್ಮು ಕಾಶ್ಮೀರದ ನೂತನ ಮುಖ್ಯಮಂತ್ರಿ ಅಭ್ಯರ್ಥಿಯ ಹೆಸರನ್ನು ನ್ಯಾಷನಲ್ ಕಾನ್ಫರೆನ್ಸ್ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರು ಘೋಷಣೆ ಮಾಡಿದ್ದಾರೆ. ತನ್ನ ಮಗ ಒಮರ್ ಅಬ್ದುಲ್ಲಾ ಜಮ್ಮು ಮತ್ತು ಕಾಶ್ಮೀರದ ಮುಂದಿನ ಮುಖ್ಯಮಂತ್ರಿಯಾಗಲಿದ್ದಾರೆ ಎಂದು ಅವರು ಪ್ರಕಟಿಸಿದ್ದಾರೆ.

ಜಮ್ಮು ಕಾಶ್ಮೀರದಲ್ಲಿ ಕಾಂಗ್ರೆಸ್ -ನ್ಯಾಷನಲ್ ಕಾನ್ಪರೆನ್ಸ್ ಮೈತ್ರಿಕೂಟ ಜಯಭೇರಿ

ಶ್ರೀನಗರ: ಕಣಿವೆ ರಾಜ್ಯ ಜಮ್ಮು-ಕಾಶ್ಮೀರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಮತ್ತು ನ್ಯಾಷನಲ್ ಕಾನ್ಪರೆನ್ಸ್ ಮೈತ್ರಿಕೂಟ ಗೆದ್ದು ಬೀಗಿದೆ. ವಿಧಾನಸಭಾ ಚುನಾವಣೆಯ ಮತಗಳ ಎಣಿಕೆ ಮಂಗಳವಾರ ನಡೆದಿದ್ದು, ಕಾಂಗ್ರೆಸ್ ಮತ್ತು ನ್ಯಾಷನಲ್ ಕಾನ್ಪರೆನ್ಸ್ ಮೈತ್ರಿಕೂಟ ಬಹುಮತ ಗಳಿಸಿದೆ. 90 ವಿಧಾನಸಭಾ ಕ್ಷೇತ್ರಗಳ ಪೈಕಿ ಸರ್ಕಾರ ರಚನೆ 46 ಸ್ಥಾನಗಳ ಅಗತ್ಯ ಇದ್ದು ಅದರಂತೆ ಕಾಂಗ್ರೆಸ್ ಮತ್ತು ನ್ಯಾಷನಲ್ ಕಾನ್ಪರೆನ್ಸ್ ಮೈತ್ರಿಕೂಟ 48 ಸ್ಥಾನಗಳಲ್ಲಿ ಗೆದ್ದು ಸ್ಪಷ್ಟ ಬಹುಮತ ಗಳಿಸುವ ಮೂಲಕ ಆಡಳಿತ ಚುಕ್ಕಾಣಿ ಹಿಡಿಯಲು ಮುಂದಾಗಿದೆ.

ಲಂಡನ್‌ನ ಲ್ಯಾಂಬೆತ್ ಬಸವೇಶ್ವರ ಪ್ರತಿಮೆಗೆ ನಟಿ ಪೂಜಾಗಾಂಧಿ ದಂಪತಿ ಗೌರವ; ಮುಂಗಾರು ಮಳೆ ಬೆಡಗಿಗೆ ಸಾಗರೋತ್ತರ ಕನ್ನಡಿಗರ ಸನ್ಮಾನ

ಲಂಡನ್: ಸ್ಯಾಂಡಲ್‌ವುಡ್ ನಟಿ ಪೂಜಾ ಗಾಂಧಿ ಮತ್ತು ವಿಜಯ ಘೋರ್ಪಡೆ ದಂಪತಿ ಲಂಡನ್‌ನಲ್ಲಿ ಶ್ರೀ ಬಸವೇಶ್ವರ ವಿಗ್ರಹ ಸ್ಥಳಕ್ಕೆ ಭೇಟಿ ಕನ್ನಡಿಗರ ಜೊತೆ ಸಮಾಲೋಚನೆ ನಡೆಸಿ ಗಮನಸೆಳೆದರು. ಬ್ರಿಟಿಷ್ ಇಂಡಿಯನ್ ಮತ್ತು ಕನ್ನಡ ಸಮುದಾಯದ ಸದಸ್ಯರು ಕೂಡ ಈ ಸಂದರ್ಭದಲ್ಲಿ ಭಾಗವಹಿಸಿದ್ದರು. ಲ್ಯಾಂಬೆತ್ ಬಸವೇಶ್ವರ ಫೌಂಡೇಶನ್ ಮತ್ತು ಯುಕೆ ಮೂಲದ ಬಸವ ಸಮಿತಿ ಸಂಯುಕ್ತವಾಗಿ ಆಯೋಜಿಸಿ ಕಾರ್ಯಕ್ರಮದಲ್ಲಿ ನಟಿ ಪೂಜಾ ಗಾಂಧಿ ದಂಪತಿ ಭಾಗವಹಿಸಿದರು. UK ಕನ್ನಡ ಬಳಗ ಮತ್ತು ಕನ್ನಡಿಗರು UK ಸಂಸ್ಥೆಗಳೂ ಈ ಕಾರ್ಯಕ್ರಮದಲ್ಲಿ ಮಹತ್ವದ ಸಹಭಾಗಿಗಳಾಗಿದ್ದವು. ಲ್ಯಾಂಬೆತ್‌ನ ಮಾಜಿ ಮೇಯರ್ ಡಾ. ನೀರಜ್ ಪಾಟೀಲ್ ಅವರು ಪೂಜಾ ಗಾಂಧಿ ದಂಪತಿಯನ್ನು ಅಭಿನಂದಿಸಿದರು. ‘ಕನ್ನಡಿಗರು UK’ ಅಧ್ಯಕ್ಷ ಗಣಪತಿ ಭಟ್, ಯುಕೆ ಮೂಲದ ಬಸವ ಸಮಿತಿಯ ಕಾರ್ಯಕಾರಿ ಸಮಿತಿಯ ಸದಸ್ಯರು ಅಭಿಜಿತ್ ಸಲೀಮತ್, ಮಿರ್ಗಿ ರಂಗನಾಥ್ ಮತ್ತು ಶರಣ್ ಭೇಮಳ್ಳಿ ಈ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.…

ಮಧ್ಯಪ್ರಾಚ್ಯ ಸಂಘರ್ಷ; ಇರಾನ್ ಕ್ಷಿಪಣಿ ದಾಳಿಗೆ ಇಸ್ರೇಲ್ ಪ್ರತೀಕಾರ, ಲೆಬನಾನ್ ಮೇಲೆ ಬಾಂಬ್

ಗಾಜಾ: ಮಧ್ಯಪ್ರಾಚ್ಯವೂ ರಾಷ್ಟ್ರಗಳ ನಡುವಿನ ಸಮರ ಉಗ್ರ ಸ್ವರೂಪ ತಾಳಿದ್ದು, ಹಿಜ್ಬುಲ್ಲಾ ಬಂಡುಕೋರರನ್ನು ಗುರಿಯಾಗಿಸಿ ಲೆಬನಾನ್ ಮೇಲೆ ಇಸ್ರೇಲ್ ಸೇನೆ ಕಾರ್ಯಾಚರಣೆಯನ್ನು ತೀವ್ರಗೊಳಿಸಿದೆ. ತನ್ನ ಮಿಲಿಟರಿ ಪದೇ ಲೆಬನಾನ್ ಮೇಲೆ ನಡೆಸಿದ ದಾಳಿ ವೇಳೆ 8 ಯೋಧರು ಮೃತಪಟ್ಟಿದ್ದಾರೆ ಎಂದು ಇಸ್ರೇಲ್ ಹೇಳಿದೆ. ಕಳೆದ ವಾರ ಹಿಜ್ಬುಲ್ಲಾ ಮುಖ್ಯಸ್ಥ ಹಸನ್ ನಸ್ರಲ್ಲಾ ಅವರನ್ನು ಇಸ್ರೇಲ್ ಪದೇ ದಾಳಿ ಮಾಡಿ ಹತ್ಯೆ ಮಾಡಿತ್ತು. ಇದಕ್ಕೆ ಪ್ರತೀಕಾರವಾಗಿ ಇರಾನ್ ವಾಯುಪಡೆಯು ಇಸ್ರೇಲ್ ಮೇಲೆ ಕ್ಷಿಪಣಿ ದಾಳಿ ನಡೆಸಿದೆ. ಮಂಗಳವಾರ ನಡೆದ ಇರಾನ್‌ನ ಕ್ಷಿಪಣಿ ದಾಳಿಗೆ ಪ್ರತೀಕಾರ ತೀರಿಸಿಕೊಳ್ಳಲು ಇಸ್ರೇಲ್ ಭರ್ಜರಿ ಕಾರ್ಯಾಚರಣೆ ಕೈಗೊಂಡಿದೆ. ಎರಡು ಪ್ರತ್ಯೇಕ ದಾಳಿಗಳಲ್ಲಿ ಏಳು ಸೈನಿಕರು ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.

ಭೀಕರ ಪ್ರವಾಹಕ್ಕೆ ಹಿಮಾಲಯ ರಾಷ್ಟ್ರ ತತ್ತರ; ನೂರಕ್ಕೂ ಹೆಚ್ಚು ಮಂದಿ ಬಲಿ

ಕಠ್ಮಂಡು: ಭೀಕರ ಪ್ರವಾಹಕ್ಕೆ ಹಿಮಾಲಯ ರಾಷ್ಟ್ರ ನೇಪಾಳ ತತ್ತರಿಸಿದೆ. ನಿರಂತರ ಮಳೆಯಿಂದಾಗಿ ಪ್ರವಾಹ ಉಲ್ಬಣಗೊಂಡಿದ್ದು ನೂರಕ್ಕೂ ಹೆಚ್ಚು ಮಂದಿ ಬಲಿಯಾಗಿದ್ದಾರೆ. ಮಳೆಯಿಂದಾಗಿ ಸಂಭವಿಸಿದ ವಿವಿಧ ಪ್ರಕರಣಗಳಲ್ಲಿ ಸಾವನ್ನಪ್ಪಿದವರ ಸಂಖ್ಯೆ 112ಕ್ಕೆ ಏರಿಕೆಯಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪ್ರವಾಹದಿಂದಾಗಿ ಹಲವು ಪ್ರದೇಶಗಳು ಜಲಾವೃತಗೊಂಡಿವೆ. ನೂರಾರು ಕುಟುಂಬಗಳು ನೆಲೆ ಕಳೆದುಕೊಂಡಿವೆ. ಅಸಂಖ್ಯ ಮಂದಿ ನಾಪತ್ತೆಯಾಗಿದ್ದಾರೆ. 3,000 ಕ್ಕೂ ಹೆಚ್ಚು ಜನರನ್ನು ರಕ್ಷಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಸೆಪ್ಟೆಂಬರ್ 21ರಿಂದ ಕ್ವಾಡ್ ನಾಯಕರ ಶೃಂಗಸಭೆ; ಮೋದಿ ಅಮೆರಿಕ ಪ್ರವಾಸ ನಿಗದಿ

ನವದೆಹಲಿ: ಡೆಲವೇರ್‌ನ ವಿಲ್ಮಿಂಗ್ಟನ್‌ನಲ್ಲಿ ಸೆಪ್ಟೆಂಬರ್ 21ರಂದು ಕ್ವಾಡ್ ನಾಯಕರ ಶೃಂಗಸಭೆ ನಡೆಯಲಿದ್ದು ಪ್ರಧಾನಿ ನರೇಂದ್ರ ಮೋದಿ ಅವರು ಭಾಗವಹಿಸಲಿದ್ದಾರೆ. ಕ್ವಾಡ್‌ ನಾಯಕರ ಈ ನಾಲ್ಕನೇ ಶೃಂಗಸಭೆಯಲ್ಲಿ ಭಾಗವಹಿಸಲು ಪ್ರಧಾನಿ ನರೇಂದ್ರ ಮೋದಿ ಸೆಪ್ಟೆಂಬರ್21 ರಿಂದ 23ರವರೆಗೆ ಅಮೆರಿಕಕ್ಕೆ ಭೇಟಿ ನೀಡಲಿದ್ದಾರೆ. ಈ ಕುರಿತಂತೆ ಮಾಹಿತಿ ಹಂಚಿಕೊಂಡಿರುವ ವಿದೇಶಾಂಗ ವ್ಯವಹಾರಗಳ ಸಚಿವಾಲಯ ಮೋದಿ ಪ್ರವಾಸ ಬಗ್ಗೆ ತಿಳಿಸಿದೆ, ಅಮೆರಿಕ ಅಧ್ಯಕ್ಷ ಜೋ ಬೈಡನ್ ಅವರ ಸ್ವಗ್ರಾಮದಲ್ಲಿ ಈ ಸಭೆ ಆಯೋಜಿತವಾಗಿದೆ. ಈ ಕ್ವಾಡ್ ಶೃಂಗಸಭೆಯಲ್ಲಿ ಆಸ್ಟ್ರೇಲಿಯಾ ಪ್ರಧಾನಿ ಆಂಥೋನಿ ಅಲ್ಬನೀಸ್, ಜಪಾನ್‌ ಪ್ರಧಾನಿ ಫ್ಯೂಮಿಯೊ ಕಿಶಿಡಾ ಸಹಿತ ಸದಸ್ಯ ರಾಷ್ಟ್ರಗಳ ಪ್ರತಿನಿಧಿಗಳು ಭಾಗವಹಿಸಲಿದ್ದಾರೆ.

ಅಮೆರಿಕ ಮಾಜಿ ಅಧ್ಯಕ್ಷ ಡೊನಾಲ್ಡ್​ ಟ್ರಂಪ್​ ಮೇಲೆ ಮತ್ತೆ ಗುಂಡಿನ ದಾಳಿ

ವಾಷಿಂಗ್ಟನ್: ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್​ ಟ್ರಂಪ್​ ಮೇಲೆ ಮತ್ತೆ ಗುಂಡಿನ ದಾಳಿ ನಡೆದಿದೆ. ಅಮೆರಿಕದ ಫ್ಲೋರಿಡಾದ ಗಾಲ್ಫ್​ ಕೋರ್ಸ್​ ಬಳಿ ಈ ಘಟನೆ ನಡೆದಿದ್ದು ಡೊನಾಲ್ಡ್ ಟ್ರಂಪ್ ಸುರಕ್ಷಿತವಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಫ್ಲೋರಿಡಾದ ವೆಸ್ಟ್ ಪಾಮ್ ಬೀಚ್‌ನಲ್ಲಿರುವ ಟ್ರಂಪ್ ಗಾಲ್ಫ್ ಕೋರ್ಸ್‌ನಲ್ಲಿ ರಿಪಬ್ಲಿಕನ್ ಪಕ್ಷದ ಅಧ್ಯಕ್ಷೀಯ ಅಭ್ಯರ್ಥಿ ಡೊನಾಲ್ಡ್ ಟ್ರಂಪ್ ಮೇಲೆ ದಾಳಿ ನಡೆದಿದೆ. ಈ ಬಗ್ಗೆ ಮಾಹಿತಿ ಹಂಚಿಕೊಂಡಿರುವ ಟ್ರಂಪ್ ಪುತ್ರ ಟ್ರಂಪ್ ಜೂನಿಯರ್ ತಿಳಿಸಿದ್ದಾರೆ. ಭಾನುವಾರ ಫ್ಲೋರಿಡಾದ ಟ್ರಂಪ್ ಇಂಟರ್ನ್ಯಾಷನಲ್ ಗಾಲ್ಫ್ ಕೋರ್ಸ್ ಬಳಿ, ಟ್ರಂಪ್‌ಗೆ ಬಹಳ ಹತ್ತಿರದಲ್ಲಿ ಬುಲೆಟ್‌ಗಳನ್ನು ಹಾರಿಸಲಾಗಿದೆ ಎಂಬುದನ್ನು ಖಚಿತಪಡಿಸಿರುವ ಎಫ್‌ಬಿಐ ಅಧಿಕಾರಿಗಳು, ಟ್ರಂಪ್ ಕೊಲೆಗೆ ಯತ್ನಿಸಿದ ವ್ಯಕ್ತಿಯನ್ನು ಸೆರೆಹಿಡಿದಿದ್ದಾರೆ. ಡೊನಾಲ್ಡ್ ಟ್ರಂಪ್ ಅವರಿಗೆ ಯಾವುದೇ ಅಪಾಯವಾಗಿಲ್ಲ, ಅವರು ಸಂಪೂರ್ಣ ಸೇಫ್ ಆಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.