ಸೆಪ್ಟೆಂಬರ್ 21ರಿಂದ ಕ್ವಾಡ್ ನಾಯಕರ ಶೃಂಗಸಭೆ; ಮೋದಿ ಅಮೆರಿಕ ಪ್ರವಾಸ ನಿಗದಿ

ನವದೆಹಲಿ: ಡೆಲವೇರ್‌ನ ವಿಲ್ಮಿಂಗ್ಟನ್‌ನಲ್ಲಿ ಸೆಪ್ಟೆಂಬರ್ 21ರಂದು ಕ್ವಾಡ್ ನಾಯಕರ ಶೃಂಗಸಭೆ ನಡೆಯಲಿದ್ದು ಪ್ರಧಾನಿ ನರೇಂದ್ರ ಮೋದಿ ಅವರು ಭಾಗವಹಿಸಲಿದ್ದಾರೆ. ಕ್ವಾಡ್‌ ನಾಯಕರ ಈ ನಾಲ್ಕನೇ ಶೃಂಗಸಭೆಯಲ್ಲಿ ಭಾಗವಹಿಸಲು ಪ್ರಧಾನಿ ನರೇಂದ್ರ ಮೋದಿ ಸೆಪ್ಟೆಂಬರ್21 ರಿಂದ 23ರವರೆಗೆ ಅಮೆರಿಕಕ್ಕೆ ಭೇಟಿ ನೀಡಲಿದ್ದಾರೆ. ಈ ಕುರಿತಂತೆ ಮಾಹಿತಿ ಹಂಚಿಕೊಂಡಿರುವ ವಿದೇಶಾಂಗ ವ್ಯವಹಾರಗಳ ಸಚಿವಾಲಯ ಮೋದಿ ಪ್ರವಾಸ ಬಗ್ಗೆ ತಿಳಿಸಿದೆ, ಅಮೆರಿಕ ಅಧ್ಯಕ್ಷ ಜೋ ಬೈಡನ್ ಅವರ ಸ್ವಗ್ರಾಮದಲ್ಲಿ ಈ ಸಭೆ ಆಯೋಜಿತವಾಗಿದೆ. ಈ ಕ್ವಾಡ್ ಶೃಂಗಸಭೆಯಲ್ಲಿ ಆಸ್ಟ್ರೇಲಿಯಾ ಪ್ರಧಾನಿ ಆಂಥೋನಿ ಅಲ್ಬನೀಸ್, ಜಪಾನ್‌ ಪ್ರಧಾನಿ ಫ್ಯೂಮಿಯೊ ಕಿಶಿಡಾ ಸಹಿತ ಸದಸ್ಯ ರಾಷ್ಟ್ರಗಳ ಪ್ರತಿನಿಧಿಗಳು ಭಾಗವಹಿಸಲಿದ್ದಾರೆ.

ಅಮೆರಿಕ ಮಾಜಿ ಅಧ್ಯಕ್ಷ ಡೊನಾಲ್ಡ್​ ಟ್ರಂಪ್​ ಮೇಲೆ ಮತ್ತೆ ಗುಂಡಿನ ದಾಳಿ

ವಾಷಿಂಗ್ಟನ್: ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್​ ಟ್ರಂಪ್​ ಮೇಲೆ ಮತ್ತೆ ಗುಂಡಿನ ದಾಳಿ ನಡೆದಿದೆ. ಅಮೆರಿಕದ ಫ್ಲೋರಿಡಾದ ಗಾಲ್ಫ್​ ಕೋರ್ಸ್​ ಬಳಿ ಈ ಘಟನೆ ನಡೆದಿದ್ದು ಡೊನಾಲ್ಡ್ ಟ್ರಂಪ್ ಸುರಕ್ಷಿತವಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಫ್ಲೋರಿಡಾದ ವೆಸ್ಟ್ ಪಾಮ್ ಬೀಚ್‌ನಲ್ಲಿರುವ ಟ್ರಂಪ್ ಗಾಲ್ಫ್ ಕೋರ್ಸ್‌ನಲ್ಲಿ ರಿಪಬ್ಲಿಕನ್ ಪಕ್ಷದ ಅಧ್ಯಕ್ಷೀಯ ಅಭ್ಯರ್ಥಿ ಡೊನಾಲ್ಡ್ ಟ್ರಂಪ್ ಮೇಲೆ ದಾಳಿ ನಡೆದಿದೆ. ಈ ಬಗ್ಗೆ ಮಾಹಿತಿ ಹಂಚಿಕೊಂಡಿರುವ ಟ್ರಂಪ್ ಪುತ್ರ ಟ್ರಂಪ್ ಜೂನಿಯರ್ ತಿಳಿಸಿದ್ದಾರೆ. ಭಾನುವಾರ ಫ್ಲೋರಿಡಾದ ಟ್ರಂಪ್ ಇಂಟರ್ನ್ಯಾಷನಲ್ ಗಾಲ್ಫ್ ಕೋರ್ಸ್ ಬಳಿ, ಟ್ರಂಪ್‌ಗೆ ಬಹಳ ಹತ್ತಿರದಲ್ಲಿ ಬುಲೆಟ್‌ಗಳನ್ನು ಹಾರಿಸಲಾಗಿದೆ ಎಂಬುದನ್ನು ಖಚಿತಪಡಿಸಿರುವ ಎಫ್‌ಬಿಐ ಅಧಿಕಾರಿಗಳು, ಟ್ರಂಪ್ ಕೊಲೆಗೆ ಯತ್ನಿಸಿದ ವ್ಯಕ್ತಿಯನ್ನು ಸೆರೆಹಿಡಿದಿದ್ದಾರೆ. ಡೊನಾಲ್ಡ್ ಟ್ರಂಪ್ ಅವರಿಗೆ ಯಾವುದೇ ಅಪಾಯವಾಗಿಲ್ಲ, ಅವರು ಸಂಪೂರ್ಣ ಸೇಫ್ ಆಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ವಿಕಸಿತ್ ಭಾರತ: 140 ಕೋಟಿ ಜನರಿಂದ ಹೊಸ ಭಾರತ ನಿರ್ಮಾಣವಾಗಲಿದೆ’ ಎಂದ ಮೋದಿ

ನವದೆಹಲಿ: ದೇಶಾದ್ಯಂತ ಸ್ವಾತಂತ್ರ್ಯ ದಿನವನ್ನು ದೇಶಭಕ್ತಿಯ ಪ್ರತೀಕವೆಂಬಂತೆ ಆಚರಿಸಲಾಗುತ್ತಿದೆ. ಬೆಳಿಗ್ಗೆಯೇ ಎಲ್ಲೆಡೆ ರಾಷ್ಟ್ರಧ್ವಜಾರೋಹಣ ನೆರವೇರಿದೆ. 78ನೇ ಸ್ವಾತಂತ್ರ್ಯ ದಿನಾಚರಣೆ ದೇಶಪ್ರೇಮದ ಮಹಾಹಬ್ಬವಾಗಿ ಅದ್ಧೂರಿಯಾಗಿ ನಡೆದಿದೆ. ಇದೇ ವೇಳೆ, ದೆಹಲಿಯ ಐತಿಹಾಸಿಕ ಕೆಂಪುಕೋಟೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ರಾಷ್ಟ್ರಧ್ವಜರೋಹಣ ಮಾಡಿದರು. ಈ ಸಂದರ್ಭದಲ್ಲಿ ರಾಷ್ಟ್ರವನ್ನುದ್ದೇಶಿಸಿ ಮಾತನಾಡದ ಪ್ರಧಾನಿ ಮೋದಿ, ‘2047ರ ವೇಳೆಗೆ ವಿಕಸಿತ ಭಾರತ’ ನಮ್ಮ ಗುರಿಯಾಗಿದೆ ಎಂದರು. ವಿಕಸಿತ ಭಾರತ ಮೂಲಕ ದೇಶದ 140 ಕೋಟಿ ಜನರಿಂದ ಹೊಸ ಭಾರತ ನಿರ್ಮಾಣವಾಗಲಿದೆ’ ಎಂದು ವಿಶ್ವಾಸ ವ್ಯಕ್ತಪಡಿಸಿದರು. ರಾಷ್ಟ್ರದ ನಿರ್ಮಾಣಕ್ಕಾಗಿ ಹಲವರು ಪ್ರಾಣತ್ಯಾಗ ಮಾಡಿದ್ದಾರೆ. ಅವರಿಗೆ ಹೃದಯಪೂರ್ವಕ ನಮನ ಎಂದ ಅವರು, ಭಾರತದ ಸ್ವಾತಂತ್ರ್ಯ ಸೇನಾನಿಗಳಿಗೂ, ರಾಷ್ಟ್ರದ ರಕ್ಷಣೆಗೆ ಯೋಗದಾನ ನೀಡಿದವರಿಗೂ ನನ್ನ ನಮನಗಳು ಎಂದು ಹೇಳಿದರು. ನೈಸರ್ಗಿಕ ವಿಕೋಪಗಳ ಬಗ್ಗೆ ಕಳವಳ ವ್ಯಕ್ತಪಡಿಸಿದ ಮೋದಿ, ಅನೇಕ ಜನರು ಇದರಿಂದ ತಮ್ಮ ಕುಟುಂಬಗಳನ್ನು, ಆಸ್ತಿಗಳನ್ನು ಕಳೆದುಕೊಂಡಿದ್ದಾರೆ. ಸರ್ಕಾರ…

ವಯನಾಡ್ ಭೂಕುಸಿತದಲ್ಲಿ ಮೃತರ ಸಂಖ್ಯೆ 315ಕ್ಕೆ ಏರಿಕೆ

ವಯನಾಡ್: ಕೇರಳದ ವಯನಾಡು ಜಿಲ್ಲೆಯಲ್ಲಿ ಸಂಭವಿಸಿದ ಭೂಕುಸಿತದಲ್ಲಿ ಮೃತಪಟ್ಟವರ ಸಂಖ್ಯೆ 315ಕ್ಕೂ ಹೆಚ್ಚಾಗಿದೆ ಎಂದು ಮೂಲಗಳು ತಿಳಿಸಿವೆ. ಭಾರೀ ಮಳೆಯ ಸಂದರ್ಭದಲ್ಲಿ ವಯನಾಡ್‌ನಲ್ಲಿ ಭೂ ಕುಸಿತ ಸಂಭವಿಸಿದೆ. ಅನೇಕ ಮನೆಗಳು ನೆಲಸಮವಾಗಿದ್ದು, ನೂರಾರು ಕುಟುಂಬಗಳು ನೆಲೆ ಕಳೆದುಕೊಂಡಿವೆ. ಮುಂಡಕ್ಕೈ, ಚೂರಲ್ಮಾಲಾ, ಅಟ್ಟಮಾಲ ಮತ್ತು ನೂಲ್ಪುಳ ಗ್ರಾಮಗಳು ಭೂಕುಸಿತದಿಂದ ಹಾನಿಗೊಳಗಾದ ಪ್ರದೇಶಗಳಾಗಿವೆ. ಭಾನುವಾರದಿಂದೀಚೆಗೆ ನಿರಂತರ ರಕ್ಷಣಾ ಕಾರ್ಯಾಚರಣೆ ಸಾಗಿದ್ದು, ಮೃತದೇಹಗಳು ಪತ್ತೆಯಾಗುತ್ತಲೇ ಇವೆ. ಅಧಿಕಾರಿಗಳ ಪ್ರಕಾರ ಈವರೆಗೂ ಸಾವನ್ನಪ್ಪಿದವರ ಸಂಖ್ಯೆ 315 ದಾಟಿದೆ. 200ಕ್ಕೂ ಹೆಚ್ಚು‌ ಮಂದಿ‌ ನಾಪತ್ತೆಯಾಗಿದ್ದು ಮೃತದೇಹಗಳಿಗಾಗಿ ಹುಡುಕಾಟ ಸಾಗಿದೆ. ಸಾವಿರಕ್ಕೂ ಹೆಚ್ಚು ಮಂದಿಯನ್ನು ರಕ್ಷಿಸಿ ಸುರಕ್ಷಿತ ಪ್ರದೇಶಗಳಿಗೆ ಸ್ಥಳಾಂತರಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ವಯನಾಡ್ ಜಿಲ್ಲೆಯ ಮೆಪ್ಪಾಡಿ ಬಳಿಯ ಗುಡ್ಡಗಾಡು ಪ್ರದೇಶಕ್ಕೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಈ ಭಾರೀ ಭೂಕುಸಿತ ಸಂಭವಿಸಿದ್ದು, ಪೊಲೀಸರು, ಅಗ್ನಿಶಾಮಕ ಸಿಬ್ಬಂದಿ ರಕ್ಷಣಾ ಕಾರ್ಯಾಚರಣೆಯನ್ಬು ಮುಂದುವರಿಸಿದ್ದಾರೆ.‌

ಶಿಮ್ಲಾದಲ್ಲಿ ಮೇಘ ಸ್ಫೋಟ; ದಿಢೀರ್ ಪ್ರವಾಹದಿಂದ 20ಕ್ಕೂ ಹೆಚ್ಚು ಮಂದಿ ನಾಪತ್ತೆ

ಶಿಮ್ಲಾ: ಭಾರೀ ಮಳೆಯಿಂದಾಗಿ ದೇಶದ ಹಲವೆಡೆ ಸರಣಿ ದುರ್ಘಟನೆಗಳು ಸಂಭವಿಸುತ್ತಿವೆ. ಬುಧವಾರ ರಾಷ್ಟ್ರ ರಾಜಧಾನಿ ದೆಹಲಿ ಸೇರಿದಂತೆ ಉತ್ತರ ಭಾರತದ ಹಲವು ರಾಜ್ಯಗಳಲ್ಲಿ ಭಾರೀ ಮಳೆಯಾಗಿದ್ದು ಅಪಾರ ಪ್ರಮಾಣದ ಹಾನಿಯಾಗಿವೆ. ಜೊತೆಗೆ ಪ್ರಾಣ ಹಾನಿ ಬಗ್ಗೆಯೂ ವರದಿಯಾಗಿವೆ. ಅತ್ತ ಹಿಮಾಚಲ ಪ್ರದೇಶದ ಶಿಮ್ಲಾದಲ್ಲಿ ಕೂಡ ಮೇಘಸ್ಫೋಟ ತಲ್ಲಣ ಸೃಷ್ಟಿಸಿದೆ. ದಿಡೀರ್ ಉಂಟಾದ ಪ್ರವಾಹದಿಂದಾಗಿ ಸುಮಾರು 20 ಮಂದಿ ನಾಪತ್ತೆಯಾಗಿದ್ದಾರೆ ಎನ್ನಲಾಗಿದೆ. ಶಿಮ್ಲಾದಿಂದ ಸುಮಾರು 100 ಕಿಲೋ ಮೀಟರ್ ದೂರದಲ್ಲಿರುವ ರಾಂಪುರದ ಜಕ್ರಿಯಲ್ಲಿ ದಿಢೀರ್ ಪ್ರವಾಹದಿಂದ ಅವಾಂತರ ಸೃಷ್ಟಿಯಾಗಿದ್ದು, ಪೊಲೀಸ್, ಅಗ್ನಿಶಾಮಕ ದಳ, ಎನ್‌ಡಿ‌ಆರ್‌ಎಫ್ ತಂಡಗಳು ರಕ್ಷಣಾ ಕಾರ್ಯಾಚರಣೆ ಕೈಗೊಂಡಿದೆ.