ನವದೆಹಲಿ: ದೇಶಾದ್ಯಂತ ಸ್ವಾತಂತ್ರ್ಯ ದಿನವನ್ನು ದೇಶಭಕ್ತಿಯ ಪ್ರತೀಕವೆಂಬಂತೆ ಆಚರಿಸಲಾಗುತ್ತಿದೆ. ಬೆಳಿಗ್ಗೆಯೇ ಎಲ್ಲೆಡೆ ರಾಷ್ಟ್ರಧ್ವಜಾರೋಹಣ ನೆರವೇರಿದೆ. 78ನೇ ಸ್ವಾತಂತ್ರ್ಯ ದಿನಾಚರಣೆ ದೇಶಪ್ರೇಮದ ಮಹಾಹಬ್ಬವಾಗಿ ಅದ್ಧೂರಿಯಾಗಿ ನಡೆದಿದೆ. ಇದೇ ವೇಳೆ, ದೆಹಲಿಯ ಐತಿಹಾಸಿಕ ಕೆಂಪುಕೋಟೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ರಾಷ್ಟ್ರಧ್ವಜರೋಹಣ ಮಾಡಿದರು. ಈ ಸಂದರ್ಭದಲ್ಲಿ ರಾಷ್ಟ್ರವನ್ನುದ್ದೇಶಿಸಿ ಮಾತನಾಡದ ಪ್ರಧಾನಿ ಮೋದಿ, ‘2047ರ ವೇಳೆಗೆ ವಿಕಸಿತ ಭಾರತ’ ನಮ್ಮ ಗುರಿಯಾಗಿದೆ ಎಂದರು. ವಿಕಸಿತ ಭಾರತ ಮೂಲಕ ದೇಶದ 140 ಕೋಟಿ ಜನರಿಂದ ಹೊಸ ಭಾರತ ನಿರ್ಮಾಣವಾಗಲಿದೆ’ ಎಂದು ವಿಶ್ವಾಸ ವ್ಯಕ್ತಪಡಿಸಿದರು. ರಾಷ್ಟ್ರದ ನಿರ್ಮಾಣಕ್ಕಾಗಿ ಹಲವರು ಪ್ರಾಣತ್ಯಾಗ ಮಾಡಿದ್ದಾರೆ. ಅವರಿಗೆ ಹೃದಯಪೂರ್ವಕ ನಮನ ಎಂದ ಅವರು, ಭಾರತದ ಸ್ವಾತಂತ್ರ್ಯ ಸೇನಾನಿಗಳಿಗೂ, ರಾಷ್ಟ್ರದ ರಕ್ಷಣೆಗೆ ಯೋಗದಾನ ನೀಡಿದವರಿಗೂ ನನ್ನ ನಮನಗಳು ಎಂದು ಹೇಳಿದರು. ನೈಸರ್ಗಿಕ ವಿಕೋಪಗಳ ಬಗ್ಗೆ ಕಳವಳ ವ್ಯಕ್ತಪಡಿಸಿದ ಮೋದಿ, ಅನೇಕ ಜನರು ಇದರಿಂದ ತಮ್ಮ ಕುಟುಂಬಗಳನ್ನು, ಆಸ್ತಿಗಳನ್ನು ಕಳೆದುಕೊಂಡಿದ್ದಾರೆ. ಸರ್ಕಾರ…
Category: Others
ವಯನಾಡ್ ಭೂಕುಸಿತದಲ್ಲಿ ಮೃತರ ಸಂಖ್ಯೆ 315ಕ್ಕೆ ಏರಿಕೆ
ವಯನಾಡ್: ಕೇರಳದ ವಯನಾಡು ಜಿಲ್ಲೆಯಲ್ಲಿ ಸಂಭವಿಸಿದ ಭೂಕುಸಿತದಲ್ಲಿ ಮೃತಪಟ್ಟವರ ಸಂಖ್ಯೆ 315ಕ್ಕೂ ಹೆಚ್ಚಾಗಿದೆ ಎಂದು ಮೂಲಗಳು ತಿಳಿಸಿವೆ. ಭಾರೀ ಮಳೆಯ ಸಂದರ್ಭದಲ್ಲಿ ವಯನಾಡ್‌ನಲ್ಲಿ ಭೂ ಕುಸಿತ ಸಂಭವಿಸಿದೆ. ಅನೇಕ ಮನೆಗಳು ನೆಲಸಮವಾಗಿದ್ದು, ನೂರಾರು ಕುಟುಂಬಗಳು ನೆಲೆ ಕಳೆದುಕೊಂಡಿವೆ. ಮುಂಡಕ್ಕೈ, ಚೂರಲ್ಮಾಲಾ, ಅಟ್ಟಮಾಲ ಮತ್ತು ನೂಲ್ಪುಳ ಗ್ರಾಮಗಳು ಭೂಕುಸಿತದಿಂದ ಹಾನಿಗೊಳಗಾದ ಪ್ರದೇಶಗಳಾಗಿವೆ. ಭಾನುವಾರದಿಂದೀಚೆಗೆ ನಿರಂತರ ರಕ್ಷಣಾ ಕಾರ್ಯಾಚರಣೆ ಸಾಗಿದ್ದು, ಮೃತದೇಹಗಳು ಪತ್ತೆಯಾಗುತ್ತಲೇ ಇವೆ. ಅಧಿಕಾರಿಗಳ ಪ್ರಕಾರ ಈವರೆಗೂ ಸಾವನ್ನಪ್ಪಿದವರ ಸಂಖ್ಯೆ 315 ದಾಟಿದೆ. 200ಕ್ಕೂ ಹೆಚ್ಚು ಮಂದಿ ನಾಪತ್ತೆಯಾಗಿದ್ದು ಮೃತದೇಹಗಳಿಗಾಗಿ ಹುಡುಕಾಟ ಸಾಗಿದೆ. ಸಾವಿರಕ್ಕೂ ಹೆಚ್ಚು ಮಂದಿಯನ್ನು ರಕ್ಷಿಸಿ ಸುರಕ್ಷಿತ ಪ್ರದೇಶಗಳಿಗೆ ಸ್ಥಳಾಂತರಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ವಯನಾಡ್ ಜಿಲ್ಲೆಯ ಮೆಪ್ಪಾಡಿ ಬಳಿಯ ಗುಡ್ಡಗಾಡು ಪ್ರದೇಶಕ್ಕೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಈ ಭಾರೀ ಭೂಕುಸಿತ ಸಂಭವಿಸಿದ್ದು, ಪೊಲೀಸರು, ಅಗ್ನಿಶಾಮಕ ಸಿಬ್ಬಂದಿ ರಕ್ಷಣಾ ಕಾರ್ಯಾಚರಣೆಯನ್ಬು ಮುಂದುವರಿಸಿದ್ದಾರೆ.
ಶಿಮ್ಲಾದಲ್ಲಿ ಮೇಘ ಸ್ಫೋಟ; ದಿಢೀರ್ ಪ್ರವಾಹದಿಂದ 20ಕ್ಕೂ ಹೆಚ್ಚು ಮಂದಿ ನಾಪತ್ತೆ
ಶಿಮ್ಲಾ: ಭಾರೀ ಮಳೆಯಿಂದಾಗಿ ದೇಶದ ಹಲವೆಡೆ ಸರಣಿ ದುರ್ಘಟನೆಗಳು ಸಂಭವಿಸುತ್ತಿವೆ. ಬುಧವಾರ ರಾಷ್ಟ್ರ ರಾಜಧಾನಿ ದೆಹಲಿ ಸೇರಿದಂತೆ ಉತ್ತರ ಭಾರತದ ಹಲವು ರಾಜ್ಯಗಳಲ್ಲಿ ಭಾರೀ ಮಳೆಯಾಗಿದ್ದು ಅಪಾರ ಪ್ರಮಾಣದ ಹಾನಿಯಾಗಿವೆ. ಜೊತೆಗೆ ಪ್ರಾಣ ಹಾನಿ ಬಗ್ಗೆಯೂ ವರದಿಯಾಗಿವೆ. ಅತ್ತ ಹಿಮಾಚಲ ಪ್ರದೇಶದ ಶಿಮ್ಲಾದಲ್ಲಿ ಕೂಡ ಮೇಘಸ್ಫೋಟ ತಲ್ಲಣ ಸೃಷ್ಟಿಸಿದೆ. ದಿಡೀರ್ ಉಂಟಾದ ಪ್ರವಾಹದಿಂದಾಗಿ ಸುಮಾರು 20 ಮಂದಿ ನಾಪತ್ತೆಯಾಗಿದ್ದಾರೆ ಎನ್ನಲಾಗಿದೆ. ಶಿಮ್ಲಾದಿಂದ ಸುಮಾರು 100 ಕಿಲೋ ಮೀಟರ್ ದೂರದಲ್ಲಿರುವ ರಾಂಪುರದ ಜಕ್ರಿಯಲ್ಲಿ ದಿಢೀರ್ ಪ್ರವಾಹದಿಂದ ಅವಾಂತರ ಸೃಷ್ಟಿಯಾಗಿದ್ದು, ಪೊಲೀಸ್, ಅಗ್ನಿಶಾಮಕ ದಳ, ಎನ್‌ಡಿಆರ್‌ಎಫ್ ತಂಡಗಳು ರಕ್ಷಣಾ ಕಾರ್ಯಾಚರಣೆ ಕೈಗೊಂಡಿದೆ.
