ಬೆಂಗಳೂರು: ‘ಕೆಪಿಎಸ್ – ಮ್ಯಾಗ್ನೆಟ್ ಶಾಲಾ ಯೋಜನೆ ರದ್ದು ಪಡಿಸಿ, ಬಿಸಿಯೂಟ ಕಾರ್ಮಿಕರು ಹಾಗೂ ಬಡ ಜನತೆಯ ಮಕ್ಕಳ ಭವಿಷ್ಯವನ್ನು ರಕ್ಷಿಸಿ’ ಎಂದು ಕೈಗೊಂಡಿರುವ ರಾಜ್ಯ ಮಟ್ಟದ ಪ್ರತಿಭಟನೆಗೆ ಭಾರೀ ಬೆಂಬಲ ವ್ಯಕ್ತವಾಗಿದೆ. ಕರ್ನಾಟಕ ರಾಜ್ಯ ಸಂಯುಕ್ತ ಅಕ್ಷರ ದಾಸೋಹ ಕಾರ್ಮಿಕರ ಸಂಘ (AIUTUC) ನೇತೃತ್ವದಲ್ಲಿ 10.4.2026 ರಂದು ರಾಜ್ಯ ಮಟ್ಟದ ಪ್ರತಿಭಟನೆ ಹಮ್ಮಿಕೊಂಡಿದೆ. ರಾಜ್ಯದ ಲಕ್ಷಾಂತರ ಬಿಸಿಯೂಟ ಕಾರ್ಮಿಕರ ಮತ್ತು ಗ್ರಾಮೀಣ ವಿದ್ಯಾರ್ಥಿಗಳ ಭವಿಷ್ಯದ ಹಿತದೃಷ್ಟಿಯಿಂದ ಸರ್ಕಾರವು ಜಾರಿಗೆ ತರಲು ಉದ್ದೇಶಿಸಿರುವ ‘ಕೆಪಿಎಸ್ ಮ್ಯಾಗ್ನೆಟ್’ ಯೋಜನೆಯಡಿ ಸರ್ಕಾರಿ ಶಾಲೆಗಳನ್ನು ವಿಲೀನಗೊಳಿಸುತ್ತಿರುವುದು ಅತ್ಯಂತ ಆತಂಕಕಾರಿ ವಿಷಯವಾಗಿದೆ. ಶಿಕ್ಷಣ ಹಕ್ಕು ಕಾಯ್ದೆಯಡಿ ಪ್ರತಿ ಮಗುವಿಗೆ ಹತ್ತಿರದಲ್ಲೇ ಶಿಕ್ಷಣ ಸಿಗಬೇಕೆಂಬ ನಿಯಮವಿದ್ದರೂ, ಶಾಲೆಗಳ ವಿಲೀನದಿಂದ ಬಡ ರೈತ ಕಾರ್ಮಿಕರ ಮಕ್ಕಳ ಶಿಕ್ಷಣದ ಹಕ್ಕು ಮೊಟಕುಗೊಳ್ಳುತ್ತದೆ. ಕಳೆದ 25 ವರ್ಷಗಳಿಂದ ಅಲ್ಪ ಗೌರವಧನಕ್ಕೆ ಹಗಲಿರುಳು ಶ್ರಮಿಸುತ್ತಿರುವ ಸಾವಿರಾರು ಬಿಸಿಯೂಟ ಕಾರ್ಮಿಕರು ಶಾಲೆಗಳ…
Category: ವಿಶೇಷ
ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ.86 ಉತ್ತೀರ್ಣ, ದಾಖಲೆ ಸಾಧನೆ
ಬೆಂಗಳೂರು: 2025-26 ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟವಾಗಿದ್ದು, ಈ ಬಾರಿ ವಿದ್ಯಾರ್ಥಿಗಳು ದಾಖಲೆ ಮಟ್ಟದಲ್ಲಿ ಸಾಧನೆ ಮಾಡಿದ್ದಾರೆ. ಒಟ್ಟು ಶೇ.86ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, ಕಳೆದ ವರ್ಷದಿಗಿಂತ ಗಮನಾರ್ಹ ಏರಿಕೆ ಕಂಡಿದೆ. ರಾಜ್ಯಾದ್ಯಂತ 7,10,363 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿ ಮಾಡಿಕೊಂಡಿದ್ದು, ಈ ಪೈಕಿ ಸುಮಾರು 6.10 ಲಕ್ಷ ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ. ಕಳೆದ ವರ್ಷ ಶೇ.73.45ರಷ್ಟು ವಿದ್ಯಾರ್ಥಿಗಳು ಮಾತ್ರ ಉತ್ತೀರ್ಣರಾಗಿದ್ದರು. ವಾಣಿಜ್ಯ ವಿಭಾಗದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಆಳ್ವಾಸ್ ಕಾಲೇಜಿನ ವಿದ್ಯಾರ್ಥಿನಿ ದಿಶಾ 600ಕ್ಕೆ 600 ಅಂಕಗಳನ್ನು ಪಡೆದು ರಾಜ್ಯದಲ್ಲೇ ಪ್ರಥಮ ಸ್ಥಾನ ಪಡೆದುಕೊಂಡು ವಿಶೇಷ ಸಾಧನೆ ಮಾಡಿದ್ದಾರೆ. ಈ ವರ್ಷದ ಪರೀಕ್ಷೆಗಳು ಫೆಬ್ರವರಿ 28ರಿಂದ ಮಾರ್ಚ್ 12ರವರೆಗೆ ರಾಜ್ಯದ 1217 ಕೇಂದ್ರಗಳಲ್ಲಿ ನಡೆದಿದ್ದು, 5174 ಕಾಲೇಜುಗಳ ವಿದ್ಯಾರ್ಥಿಗಳು ಭಾಗವಹಿಸಿದ್ದರು. ಸೈನ್ಸ್ ವಿಭಾಗದಲ್ಲಿ 2.92 ಲಕ್ಷ, ವಾಣಿಜ್ಯದಲ್ಲಿ 2.11 ಲಕ್ಷ ಮತ್ತು ಕಲಾ ವಿಭಾಗದಲ್ಲಿ 1.42 ಲಕ್ಷ…
ಮಲ್ಲಿಕಾರ್ಜುನ ಖರ್ಗೆ ಸಮಚಿತ್ತ ರಾಜಕಾರಣಿ: ಸಚಿವ ಡಾ.ಶರಣಪ್ರಕಾಶ ಪಾಟೀಲ
ಕಲಬುರಗಿ: ಎಐಸಿಸಿ ಅಧ್ಯಕ್ಷರೂ, ದೇಶದ ಅನುಭವಿ ಹಿರಿಯ ರಾಜಕಾರಣಿಗಳಾದ ಮಲ್ಲಿಕಾರ್ಜುನ ಖರ್ಗೆ ಅವರಾಗಲಿ, ಪ್ರಿಯಾಂಕ್ ಖರ್ಗೆ ಅವರಾಗಲಿ ಅಪರಾಧ ಕೆಲಸ ಮಾಡಿಲ್ಲ, ಸಮಾಜವನ್ನು ಕಟ್ಟುವ ಕೆಲಸ ಮಾಡಿದ್ದಾರೆ. ಹೊರತು ಒಡೆಯುವ ಕೆಲಸ ಎಂದೂ ಮಾಡಿಲ್ಲ ಎಂದು ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಜೀವನೋಪಾಯ ಮತ್ತು ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಶರಣಪ್ರಕಾಶ್ ಆರ್. ಪಾಟೀಲ್ ಹೇಳಿದ್ದಾರೆ. ಕಲಬರಗಿ ನಗರದ ತಮ್ಮ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಲ್ಲಿಕಾರ್ಜುನ ಖರ್ಗೆ ಅವರು ಇಲ್ಲಿಯವರೆಗೂ ವೈಯಕ್ತಿಕವಾಗಿ ಯಾರನ್ನೂ ಟೀಕೆ ಮಾಡಿಲ್ಲ, ಸಂಘಟನೆ ಬಗ್ಗೆ ಹೇಳಿದ್ದಾರೆ ಎಂದರು. ವಿಷ ಸರ್ಪವನ್ನು ಹೊಡಿಬೇಕು ಎಂದರೆ ಸೈದ್ದಾಂತಿಕವಾಗಿ ಸಂಘಟನೆಯ ಸಿದ್ಧಾಂತವನ್ನು ವಿರೋಧಿಸಬೇಕನ್ನುವ ಅರ್ಥವಿದೆ. ಯಾರನ್ನು ಯಾರೂ ಸಹ ಹೊಡೆಯುವ ಹಕ್ಕಿಲ್ಲ, ಸಮಾಜಕ್ಕೆ ಮಾರಕವಾದ ಸಿದ್ಧಾಂತಗಳನ್ನು ಸೂಕ್ಷ್ಮವಾಗಿ ಗ್ರಹಿಸಿ ಹೊಡೆದಾಗಬೇಕೆನ್ನುವ ಅರ್ಥದಲ್ಲಿ ಖರ್ಗೆ ಅವರು ಹೇಳಿದ್ದಾರೆ ಎಂದು ಸ್ಪಷ್ಟಪಡಿಸಿದರು. ಮಲ್ಲಿಕಾರ್ಜುನ ಖರ್ಗೆ ಅವರು ಸಾರ್ವಜನಿಕ ಜೀವನದಲ್ಲಿ…
ಬಾಗಲಕೋಟೆ: ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಗೆಲ್ಲಿಸಲು ಸಂಘ ಸಂಸ್ಥೆಗಳ ಮೊರೆ ಹೋದ ಸಿಎಂ
ಬಾಗಲಕೋಟೆ: ಬಡವರಿಗೆ ಶಕ್ತಿ ತುಂಬುವ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಉಮೇಶ್ ಮೇಟಿಯವರನ್ನು ಜನರು ಭಾರಿ ಬಹುಮತದೊಂದಿಗೆ ಗೆಲ್ಲಿಸಬೇಕು ಎಂದು ಸಿಎಂ ಸಿದ್ದರಾಮಯ್ಯ ಅವರು ಮನವಿ ಮಾಡಿದ್ದಾರೆ. ಬಾಗಲಕೋಟೆಯ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಅಂಗವಾಗಿ ಆಯೋಜಿಸಿದ್ದ ವಿವಿಧ ಸಂಘ ಸಂಸ್ಥೆಗಳ ಮುಖಂಡರ ಸಭೆಯಲ್ಲಿ ಮಾತನಾಡಿದ ಸಿದ್ದರಾಮಯ್ಯ, ಬಾಗಲಕೋಟೆಯ ಜನಪ್ರತಿನಿಧಿಯಾಗಿ ನಿಷ್ಠೆಯಿಂದ ಸೇವೆ ಸಲ್ಲಿಸಿದ ಹೆಚ್.ವೈ. ಮೇಟಿಯವರು ಅಕಾಲಿಕ ನಿಧನರಾದ ಕಾರಣದಿಂದ ಅವರ ಪುತ್ರ ಉಮೇಶ್ ಮೇಟಿಯವರನ್ನು ಕಾಂಗ್ರೆಸ್ ಅಭ್ಯರ್ಥಿಯಾಗಿ ಆಯ್ಕೆ ಮಾಡಲಾಗಿದೆ. ಉಮೇಶ್ ಅವರನ್ನು ಜನರು ಬಹುಮತದೊಂದಿಗೆ ಆರಿಸಿ ಕಳುಹಿಸಬೇಕು ಎಂದು ಮನವಿ ಮಾಡಿದರು. ‘ನಮ್ಮ ಸರ್ಕಾರ ಮಹಿಳೆಯರು, ದಲಿತರು, ಹಿಂದುಳಿದವರು, ಅಲ್ಪಸಂಖ್ಯಾತರು ಸೇರಿದಂತೆ ಶೋಷಿತ ವರ್ಗಗಳ ಏಳಿಗೆಗೆ ಶ್ರಮಿಸುತ್ತಿದೆ. ತಳಸಮುದಾಯದವರಿಗೆ ಆರ್ಥಿಕ ಮತ್ತು ಸಾಮಾಜಿಕ ಬಲ ತುಂಬಲು ಹಲವು ಯೋಜನೆಗಳನ್ನು ಜಾರಿಗೊಳಿಸಿದ್ದೇವೆ. ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ಮೂರು ವರ್ಷಗಳಿಂದ ಎಲ್ಲಾ ಗ್ಯಾರಂಟಿಗಳನ್ನು ಸಮರ್ಪಕವಾಗಿ ಜಾರಿ ಮಾಡಿದೆ.…
Vedanta PU College; ಇಲ್ಲಿ NEET, JEE, CET ಕೋಚಿಂಗ್’ಗೆ ಹೆಚ್ಚಿನ ಆದ್ಯತೆ
Vedanta PU College has announced the commencement of admissions for the 2026–27 academic year, with Foundation & Conceptual classes set to begin from April 6. ಮಂಗಳೂರು: ಮಂಗಳೂರಿನ ನೀರುಮಾರ್ಗ ಸಮೀಪ ಇರುವ ವೇದಾಂತ ಪಿಯು ಕಾಲೇಜು 2026-27ನೇ ಶೈಕ್ಷಣಿಕ ವರ್ಷದ ಪರಿಕಲ್ಪನೆ ಮತ್ತು ಅಡಿಪಾಯ (Foundation & Conceptual classes) ತರಗತಿಗಳನ್ನು ಏಪ್ರಿಲ್ 6ರಿಂದ ಆರಂಭಿಸಲಾಗುತ್ತಿದೆ ಎಂದು ಕಾಲೇಜು ಪ್ರಕಟಿಸಿದೆ. ಪಿಯುಸಿ ಶಿಕ್ಷಣದ ಜೊತೆಗೆ NEET, JEE, CET ಸೇರಿದಂತೆ ಉನ್ನತ ಪ್ರವೇಶ ಪರೀಕ್ಷೆಗಳ ತರಬೇತಿಗೆ ಹೆಚ್ಚಿನ ಆದ್ಯತೆ ನೀಡುತ್ತಿರುವುದು ಈ ಕಾಲೇಜಿನ ವಿಶೇಷವಾಗಿದೆ. ಸಾಮಾನ್ಯವಾಗಿ ಲಕ್ಷಾಂತರ ಶುಲ್ಕ ವಸೂಲಿ ಮಾಡುವ ಕೋಚಿಂಗ್ ವ್ಯವಸ್ಥೆಗೆ ಪರ್ಯಾಯವಾಗಿ, ಪಿಯು ಶಿಕ್ಷಣದ ಜೊತೆಯಲ್ಲೇ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿಯನ್ನು ಒದಗಿಸಲಾಗುತ್ತಿದೆ. ಇತ್ತೀಚೆಗೆ ಬೆಂಗಳೂರು, ಬೆಳಗಾವಿ ಸೇರಿದಂತೆ ರಾಜ್ಯದ ವಿವಿಧೆಡೆ ಪ್ರವೇಶ ಪರೀಕ್ಷೆ…
ಏಪ್ರಿಲ್ 6ರವರೆಗೆ ರಾಜ್ಯದ 18 ಜಿಲ್ಲೆಗಳಲ್ಲಿ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ
ಬೆಂಗಳೂರು: ರಾಜ್ಯದ ಹಲವು ಭಾಗಗಳಲ್ಲಿ ಮಳೆಯ ಚಟುವಟಿಕೆ ಹೆಚ್ಚಾಗಲಿದ್ದು, ಏಪ್ರಿಲ್ 6ರವರೆಗೆ ಬೆಂಗಳೂರು ಸೇರಿದಂತೆ 18 ಜಿಲ್ಲೆಗಳಲ್ಲಿ ಗುಡುಗು, ಸಿಡಿಲು ಹಾಗೂ ಬಲವಾದ ಗಾಳಿಯೊಂದಿಗೆ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ ಕರ್ನಾಟಕದ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದ್ದು, ಏಪ್ರಿಲ್ 6ರವರೆಗೆ ದಕ್ಷಿಣ ಒಳನಾಡು, ಮಲೆನಾಡು ಹಾಗೂ ಉತ್ತರ ಕನ್ನಡ ಭಾಗಗಳಲ್ಲಿ ಗುಡುಗು ಸಹಿತ ಮಳೆಯಾಗುವ ನಿರೀಕ್ಷೆಯಿದೆ. ಶನಿವಾರ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಕೆಲವೆಡೆ ಹಗುರ ಮಳೆಯಾಗುವ ಸಾಧ್ಯತೆಯೂ ಇದೆ. ಉತ್ತರ ಒಳನಾಡಿನ ಬೀದರ್, ಕಲಬುರಗಿ, ಯಾದಗಿರಿ ಮತ್ತು ರಾಯಚೂರು ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ. ದಕ್ಷಿಣ ಒಳನಾಡಿನ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ತುಮಕೂರು, ಕೋಲಾರ, ಚಿಕ್ಕಬಳ್ಳಾಪುರ, ರಾಮನಗರ, ಚಾಮರಾಜನಗರ, ಚಿತ್ರದುರ್ಗ, ಬಳ್ಳಾರಿ ಮತ್ತು ವಿಜಯನಗರ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಕೂಡ ಗುಡುಗು-ಸಿಡಿಲಿನೊಂದಿಗೆ…
ಬಂಟ್ವಾಳ ಸಮೀಪದ ಬೊರಿಮಾರ್ ಚರ್ಚ್‌ನಲ್ಲಿ ವಿಶಿಷ್ಟ ರೀತಿ ಪವಿತ್ರ ಗುಡ್ ಫ್ರೈಡೇ
ಮಂಗಳೂರು: ನಾಡಿನೆಲ್ಲೆಡೆ ಶುಭ ಶುಕ್ರವಾರ (ಗುಡ್ ಪ್ರೈಡೇ) ಆಚರಣೆ ಗಮನಸೆಳೆಯಿತು. ಜಗತ್ತಿಗೆ ಶಾಂತಿ-ಸಹಬಾಳ್ವೆಯ ಬದುಕಿನ ಮಾರ್ಗವನ್ನು ತೋರಿಸಿಕೊಟ್ಟಿರುವ ಭಾಗಾವಾನ್ ಎಸು ಕ್ರಿಸ್ತನ ಪ್ರಾರ್ಥನಾ ಕಲಾಪಗಳಲ್ಲಿ ಕೋಟ್ಯಂತರ ಜನರು ಭಾಗಿಯಾದರು. ಇತ್ತ ದಕ್ಷಿಣಕನ್ನಡ ಜಿಲ್ಲೆ ಬಂಟ್ವಾಳ ಸಮೀಪದ ಬೊರಿಮಾರ್‌ನ ಸಂತ ಜೋಸೆಫ್ ಚರ್ಚ್‌ನಲ್ಲೂ ಪವಿತ್ರ ಗುಡ್ ಫ್ರೈಡೇ ಪ್ರಯುಕ್ತ ಭಕ್ತಿಪ್ರಧಾನ ವಿಶೇಷ ಕಾರ್ಯಕ್ರಮಗಳು ನೆರವೇರಿದವು. ಪ್ರಭು ಯೇಸು ಕ್ರಿಸ್ತರ ಪಾರ್ಥಿವ ಶರೀರದ ಮೆರವಣಿಗೆ ಹಾಗೂ ಜಗತ್ತಿನ ಶಾಂತಿಗಾಗಿ ಮೊಂಬತ್ತಿ ಹಿಡಿದು ಮೌನ ಮೆರವಣಿಗೆ ನಡೆಸಲಾಯಿತು. ಭಕ್ತರು ಮೊಂಬತ್ತಿಗಳನ್ನು ಹಿಡಿದು ಶಾಂತಿಯ ಸಂಕೇತವಾಗಿ ಮೆರವಣಿಗೆಯಲ್ಲಿ ಸಾಗಿ, ಪ್ರಭು ಯೇಸು ಕ್ರಿಸ್ತರ ತ್ಯಾಗ, ಪ್ರೀತಿ ಮತ್ತು ಮಾನವೀಯ ಮೌಲ್ಯಗಳನ್ನು ಸಾರಿದರು. ಈ ವೇಳೆ ಚರ್ಚ್ ಪರಿಸರದಲ್ಲಿ ನಡೆದ ಕೈಂಕರ್ಯದಲ್ಲಿ ವಿವಿಧ ಧರ್ಮೀಯರು ಭಾಗವಹಿಸಿ ಭಗವಂತನ ಕೃಪೆಗೆ ಪಾತ್ರರಾದರು. ಏನಿದು ಗುಡ್ ಫ್ರೈಡೇ ಆಚರಣೆ? ಯೇಸುವಿನ ಸ್ಮರಣೆ ಮೂಲಕ ಶುಭ ಶುಕ್ರವಾರ ಆಚರಿಸಲಾಗುತ್ತದೆ.…
ಬೆಂಗಳೂರು ವಿವಿ: ರಾಚಮಾನಹಳ್ಳಿಯ ಸಂಶೋಧನಾರ್ಥಿ ಪಿ.ಶಶಿ ಕುಮಾರ್ ಗೆ ಡಾಕ್ಟರೇಟ್
ಬೆಂಗಳೂರು: ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲೂಕಿನ ರಾಚಮಾನಹಳ್ಳಿಯ ಪಿ. ಶಶಿಕುಮಾರ್ ರವರಿಗೆ ಪಿಎಚ್.ಡಿ ಪದವಿ ಲಭಿಸಿದೆ. ಬೆಂಗಳೂರು ವಿಶ್ವವಿದ್ಯಾಲಯ ಸಂವಹನ ವಿಭಾಗದ ಪ್ರಾಧ್ಯಾಪಕರಾದ ಪ್ರೊ. ಎನ್. ಸಂಜೀವ್ ರಾಜ್ ರವರ ಮಾರ್ಗದರ್ಶನದಲ್ಲಿ ಪಿ. ಶಶಿಕುಮಾರ್ ಮಂಡಿಸಿದ “ಸಿನೆಮ್ಯಾಟಿಕ್ ಕಾನ್‌ಟ್ರಿಬ್ಯೂಷನ್ಸ್ ಆಫ್ ಡಾ. ಗಿರೀಶ್ ಕಾರ್ನಾಡ್: ಅನ್ ಅನಾಲಿಟಿಕಲ್ ಸ್ಟಡಿ” ಎಂಬ ಸಂಶೋಧನಾ ಮಹಾಪ್ರಬಂಧಕ್ಕೆ ಡಾಕ್ಟರೇಟ್ ಪದವಿ ಪ್ರದಾನ ಮಾಡಲಾಗಿದೆ ಎಂದು ಬೆಂಗಳೂರು ವಿಶ್ವವಿದ್ಯಾಲಯವು ಪ್ರಕಟಣೆಯಲ್ಲಿ ತಿಳಿಸಿದೆ.
ಸಿದ್ದರಾಮಯ್ಯ ಅವರ ‘ಬೀದಿ ಹೋರಿಗಳು’ ಎಂಬ ಹೇಳಿಕೆಗೆ ಬಿಜೆಪಿ ಆಕ್ರೋಶ
ದಾವಣಗೆರೆ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಿಜೆಪಿ ನಾಯಕರನ್ನು ‘ಬೀದಿ ಹೋರಿಗಳು’ ಎಂದು ಹೋಲಿಸಿದ ಹೇಳಿಕೆಗೆ ತೀವ್ರ ಆಕ್ರೋಶ ವ್ಯಕ್ತವಾಗಿದ್ದು, ಬಿಜೆಪಿ ಹಿರಿಯ ನಾಯಕ ಬಿ. ಶ್ರೀರಾಮುಲು ಕಿಡಿಕಾರಿದ್ದಾರೆ. ದಾವಣಗೆರೆಯಲ್ಲಿ ಮಾತನಾಡಿದ ಶ್ರೀರಾಮುಲು, “ಬಿಜೆಪಿ ನಾಯಕರು ಹೋರಿಗಳಾದರೆ, ಕಾಂಗ್ರೆಸ್ ನಾಯಕರು ಇಲಿಗಳಂತಿದ್ದಾರೆ” ಎಂದು ತಿರುಗೇಟು ನೀಡಿದರು. ಸಿದ್ದರಾಮಯ್ಯ ಸುತ್ತ ಜನರ ವಿಶ್ವಾಸ ಕಳೆದುಕೊಂಡವರೇ ಇದ್ದಾರೆ ಎಂದು ಅವರು ಆರೋಪಿಸಿದರು. ಉಪಚುನಾವಣೆಯ ಭಯದಿಂದ ಕಾಂಗ್ರೆಸ್ ಈ ರೀತಿಯ ಹೇಳಿಕೆಗಳನ್ನು ಮಾಡುತ್ತಿದೆ ಎಂದು ಟೀಕಿಸಿದ ಅವರು, ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಖಚಿತ ಎಂದರು. ಸರ್ಕಾರದ ವಿರುದ್ಧ ಭ್ರಷ್ಟಾಚಾರದ ಆರೋಪ ಮಾಡಿರುವ ಶ್ರೀರಾಮುಲು, ವಾಲ್ಮೀಕಿ ಅಭಿವೃದ್ಧಿ ನಿಗಮ ಸೇರಿದಂತೆ ಹಲವು ನಿಗಮಗಳಲ್ಲಿ ದೊಡ್ಡ ಮಟ್ಟದ ಅವ್ಯವಹಾರ ನಡೆದಿದೆ ಎಂದು ಹೇಳಿದರು. ಸರ್ಕಾರದ ಸಚಿವರು ರಾಜ್ಯದ ಖಜಾನೆಯನ್ನು ಲೂಟಿ ಮಾಡುತ್ತಿದ್ದಾರೆ ಎಂದು ಅವರು ದೂರಿದರು. ಖಾತರಿ ಯೋಜನೆಗಳ ಕುರಿತು…
ಮಧ್ಯಪ್ರಾಚ್ಯದ ಬಿಕ್ಕಟ್ಟಿನ ಹಿನ್ನಲೆ: ಮುಂಗಾರು ಹಂಗಾಮಿಗೆ ರಸಗೊಬ್ಬರ ನಿರ್ವಹಣೆಗೆ ಸಚಿವರ ಸೂತ್ರ
ಬೆಂಗಳೂರು: 2026ರ ಮುಂಗಾರು ಹಂಗಾಮಿನ ರಸಗೊಬ್ಬರಗಳ ಸಮರ್ಪಕ ಪೂರೈಕೆ ಮತ್ತು ಪರಿಣಾಮಕಾರಿ ನಿರ್ವಹಣೆಗೆ ಕೃಷಿ ಇಲಾಖೆಯು ಕ್ರಮಗಳನ್ನು ಜಾರಿಗೊಳಿಸಿದೆ. ಮಧ್ಯಪ್ರಾಚ್ಯ ಪ್ರದೇಶದ ಅಸ್ಥಿರತೆ ಹಿನ್ನಲೆ ಗೊಬ್ಬರ ಉತ್ಪಾದನೆಗೆ ಅಗತ್ಯವಿರುವ ಕಚ್ಚಾ ವಸ್ತುಗಳ ಆಮದು ವ್ಯತ್ಯಯವಾಗುವ ಸಾಧ್ಯತೆ ಕಂಡುಬಂದಿದ್ದು,ರಾಜ್ಯದಲ್ಲಿ ಗೊಬ್ಬರ ಪೂರೈಕೆಗೆ ಅಡ್ಡಿಯಾಗುವ ಆತಂಕ ವ್ಯಕ್ತವಾಗಿದೆ. ಈ ಹಿನ್ನಲೆ ಕೃಷಿ ಸಚಿವ ಎನ್.ಚಲುವರಾಯಸ್ವಾಮಿಯವರ ಉಸ್ತುವಾರಿಯಲ್ಲಿ ಕೃಷಿ ಇಲಾಖೆ ಬಹುಮುಖ ಕ್ರಮಗಳನ್ನು ಅನುಷ್ಠಾನಗೊಳಿಸಿದೆ. ಕೇಂದ್ರ ಸರ್ಕಾರವು ರಾಜ್ಯಕ್ಕೆ ಒಟ್ಟು 30.05 ಲಕ್ಷ ಮೆಟ್ರಿಕ್ ಟನ್ ವಿವಿಧ ಗೊಬ್ಬರಗಳನ್ನು ಹಂಚಿಕೆ ಮಾಡಿದ್ದು, ಏಪ್ರಿಲ್ 1ರ ವೇಳೆಗೆ 11.42 ಲಕ್ಷ ಮೆಟ್ರಿಕ್ ಟನ್ ಸಂಗ್ರಹ ಲಭ್ಯವಿದೆ. ರಾಜ್ಯವು ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳಿ (KSCMF) ಮತ್ತು ಕರ್ನಾಟಕ ರಾಜ್ಯ ಬೀಜ ನಿಗಮ(KSSC) ಮುಖಾಂತರ ಕಾಪು ದಾಸ್ತಾನು ವ್ಯವಸ್ಥೆಯನ್ನು ಬಲಪಡಿಸಿದೆ. ಪ್ರಸ್ತುತ 28224 ಮೆಟ್ರಿಕ್ ಟನ್ ಗೊಬ್ಬರ ಕಾಪು ದಾಸ್ತಾನಿನಲ್ಲಿ ಲಭ್ಯವಿದ್ದು, ಯೂರಿಯಾ…
