ಬೆಂಗಳೂರು: ರಾಜ್ಯದಿಂದ ವೈಷ್ಣೋದೇವಿ ಯಾತ್ರೆಗೆ ತೆರಳುವ ಆಸ್ತಿಕರಿಗೆ ರಾಜ್ಯ ಸರ್ಕಾರ ಬಂಪರ್ ನೆರವು ಪ್ರಕಟಿಸಿದೆ. ವೈಷ್ಟೋದೇವಿಗೆ ಭೇಟಿ ನೀಡುವ ಯಾತ್ರಾರ್ಥಿಗಳಿಗೆ ಸಹಾಯ ಧನವನ್ನು ಸರ್ಕಾರ ಘೋಷಿಸಿದೆ. ಸಾರಿಗೆ ಹಾಗೂ ಮುಜರಾಯಿ ಸಚಿವರ ಅಧ್ಯಕ್ಷತೆಯಲ್ಲಿ ನಡೆದ ಕರ್ನಾಟಕ ರಾಜ್ಯ ಧಾರ್ಮಿಕ ಪರಿಷತ್ತಿನಲ್ಲಿ ವೈಷ್ಟೋದೇವಿಗೆ ಭೇಟಿ ನೀಡುವ ಯಾತ್ರಾರ್ಥಿಗಳಿಗೆ ಸಹಾಯ ಧನ ನೀಡುವ ತೀರ್ಮಾನವನ್ನು ಪ್ರಕಟಿಸಾಲಗಿದೆ. 13-11-2024 ರಂದು ಮುಜರಾಯಿ ಸಚಿವರ ಅಧ್ಯಕ್ಷತೆಯಲ್ಲಿ ನಡೆದ ಕರ್ನಾಟಕ ರಾಜ್ಯ ಧಾರ್ಮಿಕ ಪರಿಷತ್ತಿನಲ್ಲಿ ಹಲವು ಮಹತ್ವದ ನಿರ್ಣಯಗಳನ್ನು ಕೈಗೊಳ್ಳಲಾಗಿದೆ. ವೈಷ್ಟೋದೇವಿಗೆ ಭೇಟಿ ನೀಡುವ ಕರ್ನಾಟಕ ರಾಜ್ಯದ ಯಾತ್ರಾರ್ಥಿಗಳಿಗೆ ತಲಾ ರೂ.5000 ಸಹಾಯ ಧನ ನೀಡಲು ತೀರ್ಮಾನಿಸಲಾಯಿತು. ಸರ್ಕಾರದ ಬಹುಮಹಡಿಗಳ ಕಟ್ಟಡದ ಎದುರು ಇರುವ ಮುಜರಾಯಿ ಇಲಾಖೆಗೆ ಸೇರಿದ 3/4 ಎಕರೆ ಜಾಗದಲ್ಲಿ ರೂ. 10 ಕೋಟಿ ವೆಚ್ಚದಲ್ಲಿ ಧಾರ್ಮಿಕ ಸೌಧ ನಿರ್ಮಿಸಲು ತೀರ್ಮಾನಿಸಲಾಯಿತು. 120 ವರುಷಗಳ ಹಳೆಯದಾದ ಮೈಸೂರಿನ ಸಂಸ್ಕೃತ ಮಹಾರಾಜ ಕಾಲೇಜಿನ…
Category: ಆದ್ಯಾತ್ಮ
ಹಾಸನನಾಂಬ ದೇವಿ ಜಾತ್ರೆಗೆ ತೆರೆ; ಲಕ್ಷಾಂತರ ಭಕ್ತರಿಗೆ ಒಲಿದ ದೇವಿ ದರ್ಶನ
ಹಾಸನ: ಹಾಸನದ ಅಧಿದೇವತೆ ಹಾಸನನಾಂಬ ದೇವಿ ಜಾತ್ರೆಗೆ ತೆರೆಬಿದ್ದಿದೆ. ಈ ಮೂಲಕ ವರ್ಷಕ್ಕೊಮ್ಮೆ ನಡೆಯುವ ದೇವಿದರ್ಶನವೂ ಅಂತ್ಯವಾಗಿದೆ. ಹಾಸನಾಂಬ ದೇವಸ್ಥಾನದ ಗರ್ಭಗುಡಿ ಬಾಗಿಲನ್ನು ಭಾನುವಾರ ಮುಚ್ಚಲಾಗುತ್ತದೆ. ಹಾಸನಾನೆಂಬ ದೇವಾಲಯದ ಗರ್ಭಗುಡಿಯನ್ನು ವರ್ಷಕ್ಕೊಮ್ಮೆ ತೆರೆಯಲಾಗುತ್ತದೆ. ಹಾಗಾಗಿ ವಾರ್ಷಿಕ ಜಾತ್ರೆವೈಭವ ಸಾಕ್ಷೀಕರಿಸಲು ಲಕ್ಷಾಂತರ ಜನರು ಹಾಸನಕ್ಕೆ ಆಗಮಿಸಿದ್ದರು. ಮಹೋತ್ಸವದ ಅಂತಿಮ ದಿನವಾದ ಇಂದು ಹಸನಾನೆಂಬ ದೇವಾಲಯದ ಆವರಣ ಭಕ್ತಸಾಗರದಿಂದ ತುಂಬಿತ್ತು. ಅಕ್ಟೋಬರ್ 24 ರಂದು ಹಾಸನಾಂಬೆ ದೇವಿ ಗರ್ಭಗುಡಿ ಬಾಗಿಲು ತೆರೆಯಲಾಗಿತ್ತು. ಅಕ್ಟೋಬರ್ 25 ರಿಂದ ನವೆಂಬರ್ 03 ನಸುಕಿನ ಜಾವ 6 ಗಂಟೆಯವರೆಗೆ ದೇವಿ ದರ್ಶನಕ್ಕೆ ಅವಕಾಶ ಮಾಡಿಕೊಡಲಾಗಿತ್ತು. ಕಳೆದ ೯ ದಿನಗಳಲ್ಲಿ ಸುಮಾರು 20 ಲಕ್ಷ ಭಕ್ತರು ದೇವಿ ದರ್ಶನ ಪಡೆದು ಪುನೀತರಾಗಿದ್ದಾರೆ. ಇದೇ ವೇಳೆ ಈ ಬಾರಿ ಹಾಸನಾಂಬ ದೇಗುಲಕ್ಕೆ 9 ಕೋಟಿ ರೂಪಾಯಿಗೂ ಹೆಚ್ಚು ಆದಾಯ ಹರಿದು ಬಂದಿದೆ ಎಂದು ಮೂಲಗಳು ತಿಳಿಸಿವೆ.
ತಲಕಾವೇರಿಯಲ್ಲಿ ‘ತೀರ್ಥೋದ್ಭವ’; ‘ತೀರ್ಥಸ್ವರೂಪಿಣಿ’ ದರ್ಶನದ ಅನನ್ಯ ಕ್ಷಣ ಕಣ್ತುಂಬಿಕೊಂಡ ಭಕ್ತ ಸಮೂಹ
ಮಡಿಕೇರಿ: ಜೀವನದಿ ಕಾವೇರಿಯ ಉಗಮ ಸ್ಥಾನ ತಲಕಾವೇರಿಯಲ್ಲಿ ಇಂದು ತೀರ್ಥೋದ್ಭವವಾಗಿದೆ. ಕೊಡಗು ಜಿಲ್ಲೆಯ ಭಾಗಮಂಡಲ ಸಮೀಪ ತಲಕಾವೇರಿ ಕ್ಷೇತ್ರ ಈ ಕ್ಷಣಕ್ಕೆ ಸಾಕ್ಷಿಯಾಯಿತು. ಬೆಳಗ್ಗೆ 7 ಗಂಟೆ 40 ನಿಮಿಷಕ್ಕೆ ತುಲಾ ಲಗ್ನದಲ್ಲಿ ತುಲಾ ಸಂಕ್ರಮಣದ ಪವಿತ್ರ ಕಾಲದಲ್ಲಿ ‘ಬ್ರಹ್ಮಕುಂಡಿಕೆ’ಯು ಕಾವೇರಿ ಮಾತೆಯು ತೀರ್ಥಸ್ವರೂಪಿಣಿಯಾಗಿ ದರ್ಶನ ನೀಡಿದ ಅನನ್ಯ ಸನ್ನಿವೇಶವನ್ನು ಅಪಾರ ಸಂಖ್ಯೆಯ ಭಕ್ತರು ಕಣ್ತುಂಬಿಕೊಂಡರು. ತೀರ್ಥೋದ್ಭವ ಸಂದರ್ಭದಲ್ಲಿ ಬ್ರಹ್ಮಕುಂಡಿಕೆಯಲ್ಲಿ ವಿಶೇಷ ಪೂಜಾ ಕೈಂಕರ್ಯಗಳು ನೆರವೇರಿದವು. ಕೊಡಗಿನ ಮಹಿಳೆಯರು ಸಾಂಪ್ರದಾಯಿಕ ಉಡುಗೆಯಲ್ಲಿ ಆರತಿ ಬೆಳಗಿ ಕಾವೇರಿ ಮಾತೆಯನ್ನು ಸ್ವಾಗತಿಸಿದ ಕ್ಷಣವೂ ಗಮನಸೆಳೆಯಿತು. ಕೊಡಗು ಜಿಲ್ಲೆಯ ಬ್ರಹ್ಮಗಿರಿ ತಪ್ಪಲಿನ ತಲಕಾವೇರಿ ಕ್ಷೇತ್ರದಲ್ಲಿ ಕಾವೇರಿ ತೀರ್ಥೋದ್ಭವ ಸಾವಿರಾರು ಭಕ್ತರ ಭಾವೋದ್ವೇಗದ ನಡುವೆ ನಡುರಾತ್ರಿ 12 ಗಂಟೆ 57 ನಿಮಿಷಕ್ಕೆ ನಿಗಧಿತ ಮುಹೂರ್ತಕ್ಕಿಂತ ಎರಡು ನಿಮಿಷ ಮುನ್ನವೇ ನೆರವೇರಿತು. VC: @mysuruonline pic.twitter.com/RM3UUFEKb3 — Prathap Simha (@mepratap) October 18,…
ರಾಜ್ಯದ ಅತಿ ಎತ್ತರದ 63 ಅಡಿ ಶ್ರೀರಾಮಾಂಜನೇಯ ಮೂರ್ತಿ ಅ 23ರಂದು ಲೋಕರ್ಪಣೆ
ಬೆಂಗಳೂರು; ರಾಜಾಜಿನಗರದ ಶ್ರೀರಾಮಮಂದಿರದಲ್ಲಿ ಶ್ರೀರಾಮ ಸೇವಾ ಮಂಡಳಿಯಿಂದ ಕರ್ನಾಟಕದ ಅತಿ ಎತ್ತರದ 63 ಅಡಿ ಉದ್ದದ ಶ್ರೀರಾಮಾಂಜನೇಯ ಪ್ರತಿಮೆಯ ಚರ ಪ್ರತಿಷ್ಠಾಪನಾ ಮಹೋತ್ಸವ ಕಾರ್ಯಕ್ರಮ ಅ. 21 ರಿಂದ ಮೂರು ದಿನಗಳ ಕಾಲ ಅದ್ದೂರಿಯಾಗಿ ನೆರವೇರಲಿದೆ. 23 ರಂದು ವಿಧ್ಯುಕ್ತವಾಗಿ ಮೂರ್ತಿ ಪ್ರತಿಷ್ಠಾಪಿಸಲಾಗುತ್ತಿದೆ. ಮಾಧ್ಯಮಗೋಷ್ಟಿಯಲ್ಲಿ, ಮಾಗಡಿ ಕೆಂಪೇಗೌಡ ಅಭಿವೃದ್ದಿ ಸಮಿತಿ ಅಧ್ಯಕ್ಷರಾದ ಡಾ||ಹೆಚ್.ಎಂ.ಕೃಷ್ಣಮೂರ್ತಿ, ಶ್ರೀರಾಮ ಸೇವಾ ಮಂಡಳಿ ಅಧ್ಯಕ್ಷ ಕೆ.ಎಸ್.ಶ್ರೀಧರ್ , ಮಾಜಿ ಬಿಬಿಎಂಪಿ ಸದಸ್ಯ ಮೋಹನ್ ಕುಮಾರ್ ಈ ಕುರಿತು ಮಾಹಿತಿ ನೀಡಿದರು. ರಾಜ್ಯದ ಪ್ರಮುಖ ಧಾರ್ಮಿಕ ಮುಖಂಡರು, ಧರ್ಮಗುರುಗಳು, ರಾಜಕೀಯ ನೇತರಾರರ ಸಮ್ಮುಖದಲ್ಲಿ, ಭಕ್ತರ ಅಮಿತೋತ್ಸಾಹದ ನಡುವೆ ಮೂರ್ತಿ ಪ್ರತಿಷ್ಠಾಪನೆ ನೆರವೇರಲಿದೆ ಎಂದರು. 21 ರಂದು ಸಂಜೆ ಗಣಪತಿಪೂಜೆ , ವಿದ್ವಜ್ಜನ ಪ್ರಾರ್ಥನೆ, ದೇವತಾ ಪ್ರಾರ್ಥನೆ, ಕಳಸ ಪ್ರತಿಷ್ಟಾಪನೆ ಕಾರ್ಯ ಶುಭಾರಂಭವಾಗಲಿದೆ. 22 ರಂದು ಬೆಳಗ್ಗೆ 63ಅಡಿಯ ಶ್ರೀರಾಮಾಂಜನೇಯ ಚರಪ್ರತಿಷ್ಟಾನದ ಪೂಜೆ, ಹೋಮ ಸಂಕಲ್ಪವನ್ನು…
ಮಂಗಳೂರು ಶಾರದಾ ವೈಭವ; ಅದ್ಧೂರಿ ಮಹೋತ್ಸವ ಹೀಗಿದೆ
ಮಂಗಳೂರು: ಮಂಗಳೂರು ರಥಬೀದಿಯಲ್ಲಿ ಮತ್ತೊಮ್ಮೆ ಗತವೈಭವ ಮರುಕಳಿಸಿದಂತಿದೆ. ಅದ್ಧೂರಿ ಶಾರದಾ ಮಹೋತ್ಸವ ಆರಂಭವಾಗಿದ್ದು, ಸಾಂಪ್ರದಾಯಿಕ ಕೈಂಕರ್ಯ ಮೂಲಕ ಚಾಲನೆ ದೊರೆತಿದೆ. ಮಂಗಳೂರು ಶ್ರೀ ವೆಂಕಟರಮಣ ದೇವಾಲಯ ಆಚಾರ್ಯ ಮಠ ವಠಾರದ 102ನೇ ಶ್ರೀ ಶಾರದಾ ಮಹೋತ್ಸವ ಕಾರ್ಯಕ್ರಮ ಆಕ್ಟೋಬರ್ 8ರಿಂದ ಆರಂಭಗೊಂಡು 14ವರೆಗೆ ಅತ್ಯಂತ ವೈಭವಯುತವಾಗಿ ನಡೆಯಲಿದೆ. 2 ವರ್ಷದ ಹಿಂದೆಯಷ್ಟೇ ನೂರನೇ ವರ್ಷದ ಶಾರದಾ ಮಹೋತ್ಸವವನ್ನು ಶ್ರೀ ಶಾರದಾ ಮಹೋತ್ಸವ ಸಮಿತಿ ಅತ್ಯಂತ ವೈಭವಪೂರ್ಣವಾಗಿ ನಡೆಸಿತ್ತು. ಅದೇ ರೀತಿ ಸಂಭ್ರಮದಿಂದ ಈ ಮಹೋತ್ಸವನ್ನು ಶ್ರಧ್ಧ ಭಕ್ತಿಯಿಂದ ನಡೆಸಿಕೊಂಡು ಬರಲಾಗುತ್ತಿದೆ. ಆಕ್ಟೋಬರ್ 8ರಂದು ರಾತ್ರಿ ಶ್ರೀ ಶಾರದಾ ಮಾತೆಯ ವಿಗ್ರಹವನ್ನು ರಾಜಾಂಗಣದಿಂದ ಶ್ರೀ ಉಮಾಮಹೇಶ್ವರಿ ದೇವಳ ರಸ್ತೆ , ರಾಮಮಂದಿರ , ನಂದಾ ದೀಪ ರಸ್ತೆ, ಹೂಮಾರುಕಟ್ಟೆ ರಸ್ತೆ , ರಥಬೀದಿಯಾಗಿ ಉತ್ಸವಸ್ಥಾನಕ್ಕೆ ತರಲಾಯಿತು . ಅಕ್ಟೋಬರ್ 9ರಂದು ಬೆಳಗ್ಗೆ 7 ಗಂಟೆಗೆ ಪ್ರತಿಷ್ಠಾಪನೆಯು ವೈದಿಕ ವಿಧಿ…
ವಾರಣಾಸಿ; ಕಾಶಿಗೆ ಇನ್ನು ಕನ್ನಡಿಗರ ಯಾತ್ರೆ ಮತ್ತಷ್ಟು ಸುಗಮ; ಕರ್ನಾಟಕ ಭವನ ಛತ್ರ 5 ಕೋ.ರೂ.ವೆಚ್ಚದಲ್ಲಿ ನವೀಕರಣ; ವ್ಯವಸ್ಥೆ ಪರಿಶೀಲಿಸಿದ ಸಚಿವ ರಾಮಲಿಂಗ ರೆಡ್ಡಿ
ವಾರಣಾಸಿ: ಪ್ರಧಾನ ಮಂತ್ರಿ ನರೇಂದ್ರ ಮೋದಿ ಪ್ರತಿನಿಧಿಸುವ ಲೋಕಸಭಾ ಕ್ಷೇತ್ರ ಉತ್ತರ ಪ್ರದೇಶ ರಾಜ್ಯದ ವಾರಣಾಸಿಯ ಹನುಮಾನ್ ಘಾಟ್‌ನಲ್ಲಿ ಕರ್ನಾಟಕದ ಆಸ್ತಿಕರಿಗೆ ಸಕಲ ಸೌಲಭ್ಯ ಕಲ್ಪಿಸುವತ್ತ ರಾಜ್ಯದ ಮುಜರಾಯಿ ಸಚಿವ ರಾಮಲಿಂಗ ರೆಡ್ಡಿ ಕ್ರಮ ಕೈಗೊಂಡಿದ್ದಾರೆ. ಇಂದು ಅವರು ವಾರಣಾಸಿಗೆ ನೀಡದ ಭೇಟಿ ಗಮನಸೆಳೆಯಿತು. ವಾರಣಾಸಿಯ ಹನುಮಾನ್ ಘಾಟ್‌ನಲ್ಲಿ ಕರ್ನಾಟಕ ಭವನ ಛತ್ರಕ್ಕೆ ಇಂದು ಸಾರಿಗೆ ಮತ್ತು ಮಂಜುರಾಯಿ ಸಚಿವರಾದ ರಾಮಲಿಂಗ ರೆಡ್ಡಿ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು, ಕರ್ನಾಟಕ ಭವನ ಛತ್ರ 1927 ನಿರ್ಮಿಸಿದ್ದು, ಇದೇ ವೇಳೆ ಕರ್ನಾಟಕ ಭವನದ ಛತ್ರ, ಕೊಠಡಿಗಳನ್ನು ಅಭಿವೃದ್ಧಿ ಪಡಿಸಲು ನಿಶ್ಚಯಿಸಿದ್ದು, ಕೆಲವೇ ದಿನಗಳಲ್ಲಿ ಕೆಲಸ ಪ್ರಾರಂಭವಾಗಿ ಎಲ್ಲ ಸುಸಜ್ಜಿತವಾಗಿ ಅಭಿವೃದ್ಧಿಯಾಗಲಿದೆ, ಎಂದು ಸಚಿವರು ಮಾಹಿತಿ ನೀಡಿದರು. ಕಾಶಿಯ ಕರ್ನಾಟಕ ಭವನ ಛತ್ರ: ಕಾಶಿಯಲ್ಲಿ ರೂ.5 ಕೋಟಿ ವೆಚ್ಚದಲ್ಲಿ ಕರ್ನಾಟಕ ಭವನ ನವೀಕರಣ ಕಾರ್ಯ- ಸಾರಿಗೆ-ಮುಜರಾಯಿ ಸಚಿವ ರಾಮಲಿಂಗಾ…
VIDEO: ಭಾರತಾಂಬೆಯಾಗಿ ಗಮನಸೆಳೆದ ಕಟೀಲೇಶ್ವರಿ; ತ್ರಿವರ್ಣ ವಸ್ತ್ರಾಲಂಕಾರದಿಂದ ಭಕ್ತರ ಗಮನಸೆಳೆದ ಕಟೀಲು ಕ್ಷೇತ್ರದ ದೇವಿ
ಮಂಗಳೂರು: ಎಲ್ಲೆಲ್ಲೂ ಸ್ವಾತಂತ್ರ್ಯೋತ್ಸವ ಸಂಭ್ರಮ ಆವರಿಸಿದೆ. ನಾಡಿಲೆಲ್ಲೆಡೆ ತ್ರಿವರ್ಣ ಧ್ವಜ ರಾರಾಜಿಸಿಸುತ್ತಿದ್ದು, ಕಟೀಲು ಕ್ಷೇತ್ರದಲ್ಲಿ ನೆಲೆಸಿರುವ ಜಗನ್ಮಾತೆ ಕೂಡಾ ಇಂದು ಭಾರತಾಂಬೆ ಸ್ವರೂಪಿಣಿಯಾಗಿ ಗಮನಸೆಳೆದಿದ್ದಾಳೆ. ಜಗದಾಂಬೆ ಶ್ರೀ ಕಟೀಲೇಶ್ವರಿಯು ಸ್ವಾತಂತ್ರ್ಯ ದಿನವಾದ ಇಂದು ಭಾರತಾಂಭೆಯಾಗಿ ಗಮನಸೆಳೆದದ್ದು ವಿಶೇಷ. ಕಳೆದ ವರ್ಷದಂತೆಯೇ ಈ ವರ್ಷವೂ ಸ್ವಾತಂತ್ರ್ಯೋತ್ಸವ ದಿನದಂದು ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಿ ವಿಗ್ರಹಕ್ಕೆ ರಾಷ್ಟ್ರಧ್ವಜವನ್ನು ಹೋಲುವ ಬಣ್ಣದ ವಸ್ತ್ರಾಲಂಕಾರ ಮಾಡಲಾಗಿದೆ. ಈ ಅಲಂಕಾರ ಭಕ್ತರ ಕುತೂಹಲದ ಕೇಂದ್ರಬಿಂದುವಾಗಿದೆ. ಕರಾವಳಿಯ ಪುಣ್ಯಕ್ಷೇತ್ರ ಕಟೀಲಿನಲ್ಲಿ ದೇಶಭಕ್ತಿಯ ಮಹಾ ಹಬ್ಬವನ್ನು ಆಚರಿಸಲಾಯಿತು. ಹಿಂದೂ ಧಾರ್ಮಿಕ ಹಬ್ಬಗಳಂದು ವಿಶೇಷ ಕೈಂಕರ್ಯಗಳಿಂದ ಭಕ್ತರನ್ನು ಕೈಬೀಸಿ ಕರೆಯುವ ಈ ಕ್ಷೇತ್ರದಲ್ಲಿ ಸ್ವಾತಂತ್ರ್ಯ ದಿನವಾದ ಇಂದು ಈ ರೀತಿಯ ಆಕರ್ಷಣೆ ಭಕ್ತ ಸಮೂಹದ ಮೆಚ್ಚುಗೆಗೂ ಪಾತ್ರವಾಗಿದೆ.
ಕಟೀಲು ದೇವಾಲಯದಲ್ಲಿ ‘ನಾಗರಪಂಚಮಿ’ ವೈಭವ
ತಾಯಿ ಚಾಮುಂಡೇಶ್ವರಿಗೆ 5 ವರ್ಷಗಳ ಗೃಹಲಕ್ಷ್ಮಿ ಯೋಜನೆಯ ಹಣ ಜಮಾ
ಮೈಸೂರು: ರಾಜ್ಯ ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷಿ ಗೃಹ ಲಕ್ಷ್ಮಿ ಯೋಜನೆಯ ಭರ್ತಿ ಐದು ವರ್ಷಗಳ ಕಂತನ್ನು ಶಾಸಕ ದಿನೇಶ್ ಗೂಳಿಗೌಡ ಅವರು ತಾಯಿ ಚಾಮುಂಡೇಶ್ವರಿಗೆ ಸಮರ್ಪಿಸಿದ್ದಾರೆ. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಪರವಾಗಿ ಶಾಸಕ ದಿನೇಶ್ ಗೂಳಿಗೌಡ ಅವರು ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ತೆರಳಿ ನಾಡದೇವತೆ ಚಾಮುಂಡೇಶ್ವರಿ ದೇವಿ ದರ್ಶನ ಪಡೆದು ಹಣವನ್ನು ಅರ್ಪಿಸುವ ಮೂಲಕ ಸರ್ಕಾರದ ಹರಕೆ ತೀರಿಸಿದರು. ಪ್ರತಿ ತಿಂಗಳಿಗೆ 2 ಸಾವಿರ ರೂ.ನಂತೆ 59 ತಿಂಗಳ ಕಂತಿನ ಹಣ ಒಟ್ಟು 1.18 ಲಕ್ಷ ರೂ.ಗಳನ್ನು ಸಚಿವೆ ಹೆಬ್ಬಾಳ್ಕರ್ ವೈಯಕ್ತಿಕವಾಗಿ ನೀಡಿದ್ದಾರೆ. ಈ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಿರುವ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ವಿಧಾನಸಭಾ ಚುನಾವಣೆಗೂ ಪೂರ್ವ ಮೇ 9 ರಂದು ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್, ಕೆ.ಜೆ.ಜಾರ್ಜ್, ದಿನೇಶ್ ಗೂಳಿಗೌಡ ಹಾಗೂ ಇತರ ಕಾಂಗ್ರೆಸ್ ನಾಯಕರು ಚಾಮುಂಡಿ ದೇವಿ ಸನ್ನಿಧಿಯಲ್ಲಿ…
ನಾಡಿನ ಅಧಿದೇವತೆ ಚಾಮುಂಡೇಶ್ವರಿಗೂ ‘ಗೃಹಲಕ್ಷ್ಮೀ’ ಯೋಜನೆಯ 2000 ರೂ
ಬೆಂಗಳೂರು: ನಾಡಿನ ಅಧಿದೇವರೆ ಚಾಮುಂಡೇಶ್ವರಿಗೂ ‘ಗೃಹಲಕ್ಷ್ಮೀ’ ಯೋಜನೆಯ 2000 ರೂ ನೀಡಲಾಗುತ್ತೆ. ಈ ಕುರಿತು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗೆ ಸೂಚನೆ ನೀಡಿದ್ದಾರೆ. ಏನೇ ಕಾರ್ಯಕ್ರಮ ನಡೆಯುವುದಿದ್ದರೂ ಆರಂಭದಲ್ಲಿ ದೇವರಿಗೆ ಹರಕೆ ಸಮರ್ಪಣೆಯು ಅನಾದಿ ಕಾಲದಿಂದಲೂ ಆಸ್ತಿಕರು ಅನುಸರಿಸಿಕೊಂಡು ಬಂದಿರುವ ಸಂಪ್ರದಾಯ. ಅದರಂತೆ, ಮಹತ್ವಾಕಾಂಕ್ಷೆಯ ಗ್ಯಾರೆಂಟಿ ಯೋಜನೆಗಳಲ್ಲೊಂದಾದ ‘ಗೃಹಲಕ್ಷ್ಮಿ’ ಯೋಜನೆ ಸುಸೂತ್ರ ಜಾರಿಯ ಸಂಬಂಧ ನಾಡಿನ ಅಧಿದೇವತೆ ಚಾಮುಂಡೇಶ್ವರಿಗೆ ಹರಿಕೆ ಸಲ್ಲಿಸುವಂತೆ ಕೆಪಿಸಿಸಿ ಮಾಧ್ಯಮ ವಿಭಾಗದ ಉಪಾಧ್ಯಕ್ಷರೂ ಆದ ಶಾಸಕ ದಿನೇಶ್ ಗೂಳಿಗೌಡ ಅವರು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ ಸಲಹೆ ನೀಡಿದ್ದರು. ಕೆಪಿಸಿಸಿ ಅಧ್ಯಕ್ಷರೂ ಆದ ಡಿ.ಕೆ.ಶಿವಕುಮಾರ್ ಅವರಿಗೆ ಪತ್ರ ಬರೆದು ಗೃಹಲಕ್ಷ್ಮಿ ಗ್ಯಾರಂಟಿ ಯೋಜನೆಯ ಹಣವನ್ನು ಫಲಾನುಭವಿಗಳ ಖಾತೆಗೆ ಜಮೆ ಮಾಡುವ ಮುನ್ನ ನಾಡದೇವತೆ ಶ್ರೀ ಚಾಮುಂಡೇಶ್ವರಿ ದೇವಿಗೆ ಎರಡು ಸಾವಿರ ರೂಪಾಯಿಗಳನ್ನು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ…