ಕಾರವಾರ: ವಾಹನ ಚಲಿಸಲು ಇಂಧನ ಹಾಗೂ ನಿಯಂತ್ರಣ ಶಕ್ತಿ ಅಗತ್ಯವಿರುವಂತೆ, ದೇಹವೆಂಬ ವಾಹನ ಚಲಿಸಲು ಮನಸ್ಸು ಮತ್ತು ಓಜಸ್ಸು ಎಂಬ ಶಕ್ತಿಗಳು ಅಗತ್ಯ ಎಂದು ಶ್ರೀರಾಮಚಂದ್ರಾಪುರ ಮಠದ ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳು ಹೇಳಿದರು. ಗೋಕರ್ಣದ ಅಶೋಕೆಯ ಮೂಲಮಠದ ಪರಿಸರದಲ್ಲಿ ನಡೆಯುತ್ತಿರುವ ‘ಅನ್ನಬ್ರಹ್ಮ ಚಾತುರ್ಮಾಸ್ಯ’ದ ಧರ್ಮಸಭೆಯಲ್ಲಿ ಶನಿವಾರ ‘ಅನ್ನಂ ಬ್ರಹ್ಮ’ ಮಾಲಿಕೆಯ ಪ್ರವಚನ ನೀಡಿದ ಶ್ರೀಗಳು, ಮನಸ್ಸು ದೇಹದ ನಿಯಂತ್ರಣ ಶಕ್ತಿಯಾಗಿದ್ದು, ಅನ್ನದ ಸೂಕ್ಷ್ಮಾಂಶದಿಂದ ಮನಸ್ಸು ನಿರ್ಮಾಣವಾಗುತ್ತದೆ. ದೇಹದ ಶಕ್ತಿಯಾದ ಓಜಸ್ಸೂ ಆಹಾರದಿಂದಲೇ ಪೋಷಿಸಲ್ಪಡುತ್ತದೆ ಎಂದು ವಿವರಿಸಿದರು. ಆತ್ಮಸಾಧನೆಯ ಉದ್ದೇಶದಿಂದ ಕೈಗೊಳ್ಳುವ ಉಪವಾಸದಿಂದ ಓಜಸ್ಸು ವೃದ್ಧಿಸುವುದರಿಂದ ದೇಹಕ್ಕೆ ಹಾನಿಯಾಗುವುದಿಲ್ಲ. ಆತ್ಮಸಾಧನೆಯೊಂದಿಗೆ ಉಪವಾಸ ಕೈಗೊಂಡಾಗ ಊಟವಿಲ್ಲದೆಯೂ ಜೀವಿಸಲು ಸಾಧ್ಯ ಎಂದು ತಿಳಿಸಿದರು. ಹೃದಯದಲ್ಲಿರುವ ಓಜಸ್ಸು ಜೀವಿಯ ಅಳಿವು-ಉಳಿವಿಗೆ ಪ್ರಮುಖ ಕಾರಣವಾಗಿದೆ. ಮದ್ಯಪಾನ, ಅಸಮರ್ಪಕ ಆಹಾರ ಹಾಗೂ ಅತಿಯಾದ ವ್ಯಾಯಾಮದಿಂದ ಓಜಸ್ಸು ಕ್ಷೀಣಿಸುತ್ತದೆ. ಶುದ್ಧ ಗೋಘೃತ, ಗೋಕ್ಷೀರ,…
Category: ಆದ್ಯಾತ್ಮ
‘ಅನ್ನಬ್ರಹ್ಮ ಚಾತುರ್ಮಾಸ್ಯ’ದಲ್ಲಿ ಗಮನಸೆಳೆದ ಸ್ವರ್ಣಪಾದುಕಾ ಪೂಜೆ
ಕಾರವಾರ: ಗೋಕರ್ಣದ ಅಶೋಕೆಯ ಮೂಲಮಠದ ಪರಿಸರದಲ್ಲಿ ನಡೆಯುತ್ತಿರುವ ‘ಅನ್ನಬ್ರಹ್ಮ ಚಾತುರ್ಮಾಸ್ಯ’ದ ಧರ್ಮಸಭೆಯಲ್ಲಿ ಶುಕ್ರವಾರ ‘ಅನ್ನಂ ಬ್ರಹ್ಮ’ ಮಾಲಿಕೆಯಲ್ಲಿ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳು ಪ್ರವಚನ ಅನುಗ್ರಹಿಸಿದರು. ಆಹಾರವು ರೂಪ, ಗುಣ ಮತ್ತು ರುಚಿಯಲ್ಲಿ ವಿಭಿನ್ನವಾಗಿದ್ದರೂ ಸಿಹಿ, ಹುಳಿ, ಖಾರ ಸೇರಿದಂತೆ ಷಡ್ರಸಗಳಿಂದ ಕೂಡಿದ ಆಹಾರಗಳು ಜೀವಿಗೆ ಆನಂದ ನೀಡುವುದು ಅದರ ಸಾಮಾನ್ಯ ಗುಣವಾಗಿದೆ. ಅನ್ನದಿಂದ ಸರ್ವೇಂದ್ರಿಯಗಳಿಗೂ ಸಂತೋಷ ದೊರೆಯುತ್ತದೆ. ಹೀಗಾಗಿ ಅನ್ನವನ್ನು ದೇವರೆಂದು ಗೌರವಿಸುವ ಪರಂಪರೆ ನಮ್ಮಲ್ಲಿದೆ ಎಂದು ಶ್ರೀಗಳು ಹೇಳಿದರು. ಆಯುಷ್ಯ, ಶಕ್ತಿ, ವರ್ಣ, ಸ್ಮರಣೆ, ಸತ್ವ, ಓಜಸ್ಸು ಹಾಗೂ ಶೋಭೆಗೆ ಆಹಾರವೇ ಪ್ರಮುಖ ಕಾರಣ. ಹಸಿವು ಹೆಚ್ಚಾದಾಗ ಬುದ್ಧಿಯ ಕಾರ್ಯಕ್ಷಮತೆ ಕುಂಠಿತವಾಗುತ್ತದೆ. ಸೂಕ್ತ ಆಹಾರ ಸೇವನೆಯಿಂದ ಬುದ್ಧಿ ಮತ್ತೆ ಚುರುಕಾಗುತ್ತದೆ ಎಂದು ಅವರು ವಿವರಿಸಿದರು. ಆಯುರ್ವೇದದಲ್ಲಿ ಸಾವಿರಾರು ವರ್ಷಗಳ ಹಿಂದೆಯೇ ವಿವರಿಸಲಾದ ‘ಓಜಸ್ಸು’ ದೇಹದಲ್ಲಿರುವ ಅಮೃತದ್ರವದಂತಿದ್ದು, ರಸ, ರಕ್ತ ಸೇರಿದಂತೆ ಸಪ್ತಧಾತುಗಳ ಸಾರದಿಂದ ರೂಪುಗೊಳ್ಳುತ್ತದೆ.…
ಬೈಂದೂರು ಚಾತುರ್ಮಾಸ್ಯದಲ್ಲಿ ಸಾಮೂಹಿಕ ವರಮಹಾಲಕ್ಷ್ಮಿ ವ್ರತ, ರಕ್ಷಾಬಂಧನ ಆಚರಣೆ
ಬೈಂದೂರು: ಶಾಸಕ ಗುರುರಾಜ್ ಗಂಟಿಹೊಳೆ ಅವರ ಅಧ್ಯಕ್ಷತೆಯಲ್ಲಿ ನಡೆಯುತ್ತಿರುವ ಬೈಂದೂರು ಚಾತುರ್ಮಾಸ್ಯ ಕಾರ್ಯಕ್ರಮದಲ್ಲಿ ಸಾಮೂಹಿಕ ವರಮಹಾಲಕ್ಷ್ಮಿ ವ್ರತ ಹಾಗೂ ರಕ್ಷಾಬಂಧನವನ್ನು ಶ್ರದ್ಧಾ-ಭಕ್ತಿಯಿಂದ ಆಚರಿಸಲಾಯಿತು. ಶ್ರೀ ಶ್ರೀ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಗಳ ದಿವ್ಯ ಸಾನ್ನಿಧ್ಯ ಮತ್ತು ಆಶೀರ್ವಾದದೊಂದಿಗೆ ನಡೆದ ಕಾರ್ಯಕ್ರಮದಲ್ಲಿ ಒಂದು ಸಾವಿರಕ್ಕೂ ಅಧಿಕ ಮಹಿಳೆಯರು ಭಾಗವಹಿಸಿ ವರಮಹಾಲಕ್ಷ್ಮಿ ವ್ರತ ಆಚರಿಸಿದರು. ಮಹಿಳೆಯರಿಗೆ ಭಾಗಿನ ನೀಡಿ ಸಾಮೂಹಿಕವಾಗಿ ವ್ರತಾಚರಣೆ ನಡೆಸಲಾಯಿತು. ಸಂಪ್ರದಾಯ ಉಳಿಸುವ ವೇದಿಕೆಯಾಗಿ ಚಾತುರ್ಮಾಸ್ಯ ಆಧುನಿಕ ಜೀವನಶೈಲಿ ಮತ್ತು ಬದಲಾಗುತ್ತಿರುವ ಸಾಮಾಜಿಕ ಪರಿಸ್ಥಿತಿಯಲ್ಲಿ ಯುವಜನರಲ್ಲಿ ಸಾಂಪ್ರದಾಯಿಕ ಆಚರಣೆಗಳ ಅರಿವು ಕಡಿಮೆಯಾಗುತ್ತಿರುವ ಸಂದರ್ಭದಲ್ಲಿ, ಬೈಂದೂರು ಚಾತುರ್ಮಾಸ್ಯವು ಹಿಂದೂ ಸಂಸ್ಕೃತಿ ಮತ್ತು ಧಾರ್ಮಿಕ ಆಚರಣೆಗಳನ್ನು ಪರಿಚಯಿಸುವ ವೇದಿಕೆಯಾಗಿ ರೂಪುಗೊಳ್ಳುತ್ತಿದೆ ಎಂದು ಆಯೋಜಕರು ತಿಳಿಸಿದ್ದಾರೆ. ಸಾವಿರಾರು ಮಹಿಳೆಯರು ಸಾಮೂಹಿಕವಾಗಿ ವರಮಹಾಲಕ್ಷ್ಮಿ ವ್ರತ ಆಚರಿಸಿರುವುದು ಭಕ್ತಿಯ ವಾತಾವರಣವನ್ನು ಮತ್ತಷ್ಟು ಹೆಚ್ಚಿಸಿದೆ. ಇಂತಹ ಧಾರ್ಮಿಕ ಕಾರ್ಯಕ್ರಮಗಳು ಸನಾತನ ಸಂಸ್ಕೃತಿ ಮತ್ತು ಸಂಪ್ರದಾಯಗಳ ಬೇರನ್ನು…
ಬೆಂಗಳೂರಿನ ಶಿವಾಜಿನಗರದ ಸಂತ ಮರಿಯ ಬಸಿಲಿಕ ಚರ್ಚ್’ನಲ್ಲಿ ಆ.29ರಿಂದ ವಾರ್ಷಿಕ ಹಬ್ಬ, ಸೆ.8ರಂದು ಮಾತೆ ಮರಿಯಮ್ಮನ ಜನ್ಮದಿನಾಚರಣೆ
ಬೆಂಗಳೂರು: ಆರೋಗ್ಯ ಮಾತೆಯ ಪುಣ್ಯಕ್ಷೇತ್ರವೆಂದೇ ಪ್ರಸಿದ್ಧವಾಗಿರುವ ಶಿವಾಜಿನಗರದ ಸಂತ ಮರಿಯ ಬಸಿಲಿಕ ಪುಣ್ಯಕ್ಷೇತ್ರದ ವಾರ್ಷಿಕ ನೋವೇನಾ ಹಾಗೂ ಹಬ್ಬದ ಆಚರಣೆಗಳು ಆಗಸ್ಟ್ 29ರಿಂದ ಸೆಪ್ಟೆಂಬರ್ 8ರವರೆಗೆ ನಡೆಯಲಿವೆ. ಸೆಪ್ಟೆಂಬರ್ 8ರಂದು ಮಾತೆ ಮರಿಯಮ್ಮನವರ ಜನ್ಮದಿನವನ್ನು ಸಂಭ್ರಮದಿಂದ ಆಚರಿಸಲಾಗುವುದು. ಬೆಂಗಳೂರಿನ ಐತಿಹಾಸಿಕ ಕ್ರೈಸ್ತ ಧಾರ್ಮಿಕ ಪುಣ್ಯಕ್ಷೇತ್ರವಾಗಿರುವ ಸಂತ ಮರಿಯ ಬಸಿಲಿಕಕ್ಕೆ ಕರ್ನಾಟಕ ಮಾತ್ರವಲ್ಲದೆ ದೇಶ-ವಿದೇಶಗಳಿಂದ ಭಕ್ತರು ಆಗಮಿಸುತ್ತಾರೆ. ವಿವಿಧ ಧರ್ಮ ಹಾಗೂ ಸಮುದಾಯಗಳ ಭಕ್ತರೂ ಇಲ್ಲಿಗೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿ, ತಮ್ಮ ಹರಕೆಗಳನ್ನು ಅರ್ಪಿಸುತ್ತಾರೆ. ಹಬ್ಬದ ಅಂಗವಾಗಿ ಆಗಸ್ಟ್ 29ರಂದು ನವದಿನಗಳ ಕಾರ್ಯಕ್ರಮಕ್ಕೆ ಚಾಲನೆ ದೊರೆಯಲಿದೆ. ಪ್ರತಿದಿನ ಸಂಜೆ 5.30ಕ್ಕೆ ಧ್ವಜಾರೋಹಣ ನೆರವೇರಲಿದ್ದು, ಬಳಿಕ ಆಶೀರ್ವಚನ ಹಾಗೂ ಬಲಿಪೂಜೆ ನಡೆಯಲಿದೆ. ನವದಿನಗಳ ಅವಧಿಯಲ್ಲಿ ಬೆಳಗ್ಗೆ 5.30ರಿಂದ ರಾತ್ರಿ 9ರವರೆಗೆ ವಿವಿಧ ಭಾಷೆಗಳಲ್ಲಿ ಬಲಿಪೂಜೆಗಳನ್ನು ಅರ್ಪಿಸಲಾಗುತ್ತದೆ. ಸೆ.8ರಂದು ಅದ್ದೂರಿ ಆಚರಣೆ ಹಬ್ಬದ ದಿನವಾದ ಸೆಪ್ಟೆಂಬರ್ 8ರಂದು ರಸೆಲ್ ಮಾರ್ಕೆಟ್…
ಮಂಗಳೂರಿನ ಕುದ್ರೋಳಿಯಲ್ಲಿ ವರಮಹಾಲಕ್ಷ್ಮೀ ಪೂಜೆ ವೈಭವ; ಸಹಸ್ರಾರು ಮಹಿಳೆಯರಿಂದ ವಿಶೇಷ ಕೈಂಕರ್ಯ
ಮಂಗಳೂರು: ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಕ್ಷೇತ್ರಾಡಳಿತ ಸಮಿತಿ ವತಿಯಿಂದ ಶುಕ್ರವಾರ ಶ್ರೀ ವರಮಹಾಲಕ್ಷ್ಮೀ ಪೂಜೆಯನ್ನು ಶ್ರದ್ಧಾಭಕ್ತಿಯಿಂದ ನೆರವೇರಿಸಲಾಯಿತು. ಸಹಸ್ರಾರು ಮಹಿಳೆಯರು ಪೂಜೆಯಲ್ಲಿ ಪಾಲ್ಗೊಂಡು ದೇವಿಯ ದರ್ಶನ ಪಡೆದರು. ಕ್ಷೇತ್ರದಲ್ಲಿ ಬೆಳಗ್ಗೆ ಶ್ರೀ ಅನ್ನಪೂರ್ಣೇಶ್ವರಿ ದೇವಿಗೆ ವಿಶೇಷ ಅಭಿಷೇಕ ನೆರವೇರಿಸಲಾಯಿತು. ಬಳಿಕ ಶ್ರೀ ಗೋಕರ್ಣನಾಥ ಕಲ್ಯಾಣ ಮಂಟಪದಲ್ಲಿ ಕಲಶ ಪ್ರತಿಷ್ಠಾಪನೆ, ಲಲಿತಾ ಸಹಸ್ರನಾಮ ಪಠಣ, ಭಜನೆ ಹಾಗೂ ವರಮಹಾಲಕ್ಷ್ಮೀ ಪೂಜೆ ನಡೆಯಿತು. ಮಧ್ಯಾಹ್ನ ದೇವಿಗೆ ಮಹಾಪೂಜೆ ನೆರವೇರಿಸಿ ಭಕ್ತರಿಗೆ ಪ್ರಸಾದ ವಿತರಿಸಲಾಯಿತು. ವರಮಹಾಲಕ್ಷ್ಮೀ ಪೂಜೆಯಲ್ಲಿ ಪಾಲ್ಗೊಂಡ ಮಹಿಳೆಯರಿಗೆ ಕ್ಷೇತ್ರಾಡಳಿತ ಸಮಿತಿ ವತಿಯಿಂದ ಬಾಗಿನ ನೀಡಲಾಯಿತು. ಸುಮಾರು 10 ಸಾವಿರ ಮಂದಿ ಅನ್ನಪ್ರಸಾದ ಸ್ವೀಕರಿಸಿದರು. ಕಾರ್ಯಕ್ರಮದಲ್ಲಿ ಕ್ಷೇತ್ರಾಡಳಿತ ಸಮಿತಿ ಅಧ್ಯಕ್ಷ ಜೈರಾಜ್ ಎಚ್. ಸೋಮಸುಂದರಂ, ಕೋಶಾಧಿಕಾರಿ ಪದ್ಮರಾಜ್ ಆರ್. ಪೂಜಾರಿ, ಟ್ರಸ್ಟಿಗಳಾದ ಸಂತೋಷ್ ಜೆ. ಪೂಜಾರಿ, ಸಾಯಿರಾಮ್ ಎಚ್.ಎಸ್., ಕಿಶೋರ್ ದಂಡೆಕೇರಿ, ಕೃತೀನ್ ಧೀರಜ್ ಅಮೀನ್, ಅಭಿವೃದ್ಧಿ ಸಮಿತಿ…
2027ರ ಗೋದಾವರಿ ಪುಷ್ಕರಕ್ಕೆ 8-10 ಕೋಟಿ ಭಕ್ತರ ನಿರೀಕ್ಷೆ; ₹4,026 ಕೋಟಿ ಸಿದ್ಧತೆ
ಅಮರಾವತಿ: 2027ರಲ್ಲಿ ಆಂಧ್ರಪ್ರದೇಶದಲ್ಲಿ ನಡೆಯಲಿರುವ ಗೋದಾವರಿ ಪುಷ್ಕರಕ್ಕೆ ಸುಮಾರು 8ರಿಂದ 10 ಕೋಟಿ ಭಕ್ತರು ಆಗಮಿಸುವ ನಿರೀಕ್ಷೆಯಿದೆ ಎಂದು ಅಧಿಕಾರಿಗಳು ಮಂಗಳವಾರ ತಿಳಿಸಿದ್ದಾರೆ. ಜೂನ್ 26ರಂದು ಪುಷ್ಕರಂ ಆರಂಭವಾಗಲಿದ್ದು, ಭಕ್ತರಿಗೆ ಯಾವುದೇ ತೊಂದರೆಯಾಗದಂತೆ ಅಗತ್ಯ ವ್ಯವಸ್ಥೆಗಳನ್ನು ತ್ವರಿತವಾಗಿ ಪೂರ್ಣಗೊಳಿಸುವಂತೆ ಮುಖ್ಯಮಂತ್ರಿ ಎನ್. ಚಂದ್ರಬಾಬು ನಾಯ್ಡು ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಸಚಿವಾಲಯದಲ್ಲಿ ನಡೆದ ಸಭೆಯಲ್ಲಿ ಪುಷ್ಕರದ ಸಿದ್ಧತೆಗಳ ಕುರಿತು ಮುಖ್ಯಮಂತ್ರಿಗೆ ಮಾಹಿತಿ ನೀಡಲಾಗಿದ್ದು, ಒಟ್ಟು ₹4,026 ಕೋಟಿ ವೆಚ್ಚದ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗುತ್ತಿದೆ. 2015ರ ಮಹಾ ಪುಷ್ಕರದಲ್ಲಿ ಸುಮಾರು 4.86 ಕೋಟಿ ಭಕ್ತರು ಪವಿತ್ರ ಸ್ನಾನ ಮಾಡಿದ್ದರು. 2027ರಲ್ಲಿ ಪ್ರತಿದಿನ ಸುಮಾರು ಒಂದು ಕೋಟಿ ಭಕ್ತರು ಆಗಮಿಸುವ ಸಾಧ್ಯತೆ ಇರುವುದರಿಂದ ವ್ಯವಸ್ಥೆಗಳನ್ನು ಬಲಪಡಿಸಲಾಗುತ್ತಿದೆ. ಜನಸಂದಣಿ ನಿಯಂತ್ರಣಕ್ಕಾಗಿ AI ಆಧಾರಿತ ಜನಸಂದಣಿ ವಿಶ್ಲೇಷಣೆ, ಸಿಸಿಟಿವಿ, ಡ್ರೋನ್ ಕಣ್ಗಾವಲು, QR ಆಧಾರಿತ ವಾಹನ ಗುರುತಿಸುವಿಕೆ ಸೇರಿದಂತೆ ಸುಧಾರಿತ ತಂತ್ರಜ್ಞಾನ ಬಳಸಲಾಗುತ್ತದೆ. ಒಟ್ಟು 440 ಘಾಟ್‌ಗಳನ್ನು…
ಶ್ರಾವಣ ಸಂಭ್ರಮ; ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಕುಂಭಾಭಿಷೇಕ
ಚಾಮರಾಜನಗರ : ಶ್ರಾವಣ ಮಾಸ ಪ್ರಾರಂಭವಾದ ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಗುರುವಾರ ವಿಶೇಷ ಪೂಜಾ ಕೈಂಕರ್ಯಗಳು ಹಾಗೂ 108 ಕುಂಭಾಭಿಷೇಕ ಮಹೋತ್ಸವವು ಭಕ್ತಿ, ವೈಭವದಿಂದ ನೆರವೇರಿತು. ಸಾಲೂರು ಬೃಹನ್ಮಠದ ಪೀಠಾಧ್ಯಕ್ಷರಾದ ಪಟ್ಟದ ಡಾ. ಶ್ರೀ ಶ್ರೀ ಶಾಂತಮಲ್ಲಿಕಾರ್ಜುನ ಸ್ವಾಮೀಜಿಗಳ ನೇತೃತ್ವದಲ್ಲಿ ಹಾಗೂ ಬೇಡಗಂಪಣ ಅರ್ಚಕರ ವತಿಯಿಂದ ಶ್ರೀ ಮಲೆ ಮಹದೇಶ್ವರ ಸ್ವಾಮಿಗೆ ವಿವಿಧ ಧಾರ್ಮಿಕ ಪೂಜೆಗಳು ಜರುಗಿದವು. ಶ್ರಾವಣ ಮಾಸದ ಮೊದಲ ದಿನದ ಅಂಗವಾಗಿ ಮುಂಜಾನೆ 3.30ರಿಂದ ರುದ್ರಾಭಿಷೇಕ, ಬಿಲ್ವಾರ್ಚನೆ, ಗಣಪತಿ ಪೂಜೆ, ಪುಣ್ಯಾಹ, ನವಗ್ರಹ ಪೂಜೆ, ಅಷ್ಟದಿಕ್ಪಾಲಕರ ಪೂಜೆ, ಮಹಾಮೃತ್ಯುಂಜಯ ಹೋಮ ಸೇರಿದಂತೆ ವಿವಿಧ ಪೂಜಾ ಕೈಂಕರ್ಯಗಳು ನೆರವೇರಿದವು. 108 ಕುಂಭಗಳ ಮಹಾ ಕುಂಭಾಭಿಷೇಕ ನೆರವೇರಿತು. ಉಪವಾಸವಿದ್ದ ಬೇಡಗಂಪಣ ಸಮುದಾಯದ ಅರ್ಚಕರು ಶಿವ-ಪಾರ್ವತಿಯ ಉತ್ಸವ ಮೂರ್ತಿಯೊಂದಿಗೆ ಸತ್ತಿಗೆ, ಸೂರಿಪಾಸಿ, ಛತ್ರಿ, ಚಾಮರ, ನಂದಿಕಂಬ ಹಾಗೂ ಮಂಗಳವಾದ್ಯಗಳೊಂದಿಗೆ ದೇಗುಲದ ಸಮೀಪದ ಮಜ್ಜನ ಬಾವಿಗೆ…
ಸೆ.1ರಿಂದ ತಮಿಳುನಾಡಿನ ಪ್ರಮುಖ ದೇವಾಲಯಗಳಲ್ಲಿ ಮೊಬೈಲ್ ಫೋನ್ ನಿರ್ಬಂಧ
ಚೆನ್ನೈ: ದೇವಾಲಯಗಳ ಪಾವಿತ್ರ್ಯ ಕಾಪಾಡುವುದು ಹಾಗೂ ಅನಧಿಕೃತ ಛಾಯಾಗ್ರಹಣ ಮತ್ತು ವೀಡಿಯೊಗ್ರಫಿಗೆ ಕಡಿವಾಣ ಹಾಕುವ ಉದ್ದೇಶದಿಂದ ಸೆಪ್ಟೆಂಬರ್ 1ರಿಂದ ತಮಿಳುನಾಡಿನ ಪ್ರಮುಖ ದೇವಾಲಯಗಳಲ್ಲಿ ಮೊಬೈಲ್ ಫೋನ್ ಬಳಕೆಯನ್ನು ಸಂಪೂರ್ಣವಾಗಿ ನಿಷೇಧಿಸಲು ಹಿಂದೂ ಧಾರ್ಮಿಕ ಮತ್ತು ದತ್ತಿ (HR&CE) ಇಲಾಖೆ ನಿರ್ಧರಿಸಿದೆ. ದೇವಾಲಯಗಳಿಗೆ ಭೇಟಿ ನೀಡುವ ನಟರು, ರಾಜಕೀಯ ನಾಯಕರು ಹಾಗೂ ಇತರ ಗಣ್ಯರಿಗೆ ಸಂಬಂಧಿಸಿದ ನಿಯಮಗಳನ್ನೂ ಇಲಾಖೆ ಬಿಗಿಗೊಳಿಸಿದೆ. ಗಣ್ಯರ ಭೇಟಿಯಿಂದ ಸಾಮಾನ್ಯ ಭಕ್ತರಿಗೆ ತೊಂದರೆಯಾಗದಂತೆ ಹಾಗೂ ದರ್ಶನಕ್ಕೆ ಅಡ್ಡಿಯಾಗದಂತೆ ವ್ಯವಸ್ಥೆ ಮಾಡುವಂತೆ ದೇವಾಲಯ ಆಡಳಿತಗಳಿಗೆ ಸೂಚಿಸಲಾಗಿದೆ. ಗಣ್ಯರ ಭೇಟಿಯ ಕುರಿತು ಕನಿಷ್ಠ ಒಂದು ದಿನ ಮುಂಚಿತವಾಗಿ HR&CE ಆಯುಕ್ತರಿಗೆ ಮಾಹಿತಿ ನೀಡಬೇಕು. ಭೇಟಿಯ ದಿನಾಂಕ, ಸಮಯ ಹಾಗೂ ಅವರೊಂದಿಗೆ ಬರುವವರ ಸಂಖ್ಯೆಯ ವಿವರಗಳನ್ನು ನೀಡಬೇಕಿದೆ. ತುರ್ತು ಭೇಟಿಗಳ ಸಂದರ್ಭದಲ್ಲೂ ತಕ್ಷಣ ಇಲಾಖೆಗೆ ಮಾಹಿತಿ ನೀಡಿ ಅಗತ್ಯ ವ್ಯವಸ್ಥೆ ಕಲ್ಪಿಸಬೇಕು. ದೇವಾಲಯದ ಆವರಣದಲ್ಲಿ ಗಣ್ಯರ ಭೇಟಿಯ ವೇಳೆ…
‘ಎ’ ಮತ್ತು ‘ಬಿ’ ವರ್ಗದ ದೇವಸ್ಥಾನಗಳಿಗೆ ಭೂಮಿ ಖರೀದಿಸಿ: ಮುಜರಾಯಿ ಇಲಾಖೆಗೆ ಸಚಿವ ಡಾ.ಜಿ. ಪರಮೇಶ್ವರ್ ಸೂಚನೆ
ಬೆಂಗಳೂರು: ರಾಜ್ಯದ ‘ಎ’ ಹಾಗೂ ‘ಬಿ’ ವರ್ಗದ ದೇವಸ್ಥಾನಗಳ ಹೆಸರಿಗೆ ಭೂಮಿ ಖರೀದಿಸುವಂತೆ ಕಂದಾಯ ಹಾಗೂ ಮುಜರಾಯಿ ಸಚಿವ ಡಾ.ಜಿ. ಪರಮೇಶ್ವರ್ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ. ವಿಧಾನಸೌಧದಲ್ಲಿ ಶುಕ್ರವಾರ ನಡೆದ ರಾಜ್ಯ ಧಾರ್ಮಿಕ ಪರಿಷತ್ ಸಭೆಯಲ್ಲಿ ದೇವಸ್ಥಾನಗಳ ಅಭಿವೃದ್ಧಿ, ಆಸ್ತಿ ಸಂರಕ್ಷಣೆ ಹಾಗೂ ಭಕ್ತರಿಗೆ ಮೂಲಸೌಕರ್ಯ ಕಲ್ಪಿಸುವ ಕುರಿತು ಅವರು ಹಲವು ಮಹತ್ವದ ಸೂಚನೆಗಳನ್ನು ನೀಡಿದರು. ದೇವಸ್ಥಾನಗಳಲ್ಲಿ ಸಾಕಷ್ಟು ನಿಧಿ ಲಭ್ಯವಿದ್ದು, ಅಭಿವೃದ್ಧಿ ಕಾಮಗಾರಿಗಳ ಜೊತೆಗೆ ಶಾಶ್ವತ ಆಸ್ತಿಯಾಗಿ ಉಳಿಯುವಂತೆ ದೇವಸ್ಥಾನದ ಹೆಸರಿಗೆ ಭೂಮಿ ಖರೀದಿಸಬೇಕು ಎಂದು ಸಚಿವರು ಸೂಚಿಸಿದರು. ಇದರಿಂದ ಭವಿಷ್ಯದಲ್ಲಿ ಮೂಲಸೌಕರ್ಯ ಅಭಿವೃದ್ಧಿ ಸೇರಿದಂತೆ ವಿವಿಧ ಕಾರ್ಯಗಳಿಗೆ ಅನುಕೂಲವಾಗಲಿದೆ ಎಂದರು. ಹುಂಡಿ ಹಣದ ದುರುಪಯೋಗ ತಡೆಗಟ್ಟಲು ಎಲ್ಲಾ ದೇವಸ್ಥಾನಗಳ ಹುಂಡಿಗಳ ಮೇಲೆ ಸಿಸಿಟಿವಿ ಅಳವಡಿಸುವಂತೆ ಮುಖ್ಯಮಂತ್ರಿ ಈಗಾಗಲೇ ಸೂಚನೆ ನೀಡಿದ್ದು, ಈ ಕಾರ್ಯವನ್ನು ಆಗಸ್ಟ್ ಅಂತ್ಯದೊಳಗೆ ಪೂರ್ಣಗೊಳಿಸಬೇಕು ಎಂದು ಕಟ್ಟುನಿಟ್ಟಿನ ನಿರ್ದೇಶನ ನೀಡಿದರು. ರಾಜ್ಯದ…
ಮಲೆ ಮಹದೇಶ್ವರ ಬೆಟ್ಟ ಹುಂಡಿಯಲ್ಲಿ ₹3.37 ಕೋಟಿ ಕಾಣಿಕೆ; 41 ದಿನಗಳಲ್ಲಿ 58 ಗ್ರಾಂ ಚಿನ್ನ, 1.25 ಕೆಜಿ ಬೆಳ್ಳಿ ಅರ್ಪಣೆ
ಹನೂರು: ಪುರಾಣ ಪ್ರಸಿದ್ಧ ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟ ದೇವಸ್ಥಾನದ ಹುಂಡಿ ಹಣ ಎಣಿಕೆ ಬುಧವಾರ ಪೂರ್ಣಗೊಂಡಿದ್ದು, ಕಳೆದ 41 ದಿನಗಳ ಅವಧಿಯಲ್ಲಿ ₹3,37,06,956 ನಗದು ಕಾಣಿಕೆ ಸಂಗ್ರಹವಾಗಿದೆ. ಜೊತೆಗೆ 58 ಗ್ರಾಂ ಚಿನ್ನ ಹಾಗೂ 1 ಕೆಜಿ 250 ಗ್ರಾಂ ಬೆಳ್ಳಿ ವಸ್ತುಗಳನ್ನು ಭಕ್ತರು ಹುಂಡಿಗೆ ಸಮರ್ಪಿಸಿದ್ದಾರೆ. ಮಲೆ ಮಹದೇಶ್ವರ ಬೆಟ್ಟದ ಬಸ್ ನಿಲ್ದಾಣದ ಬಳಿಯಿರುವ ವಾಣಿಜ್ಯ ಸಂಕೀರ್ಣದಲ್ಲಿ ಪ್ರಾಧಿಕಾರದ ಕಾರ್ಯದರ್ಶಿ ಜಿ. ಪುರುಷೋತ್ತಮ್ ಹಾಗೂ ಸಾಲೂರು ಬೃಹನ್ ಮಠದ ಅಧ್ಯಕ್ಷ ಶ್ರೀ ಶಾಂತ ಮಲ್ಲಿಕಾರ್ಜುನ ಸ್ವಾಮೀಜಿ ಅವರ ಸಮ್ಮುಖದಲ್ಲಿ ಮಂಗಳವಾರ ಹುಂಡಿಗಳನ್ನು ತೆರೆಯಲಾಯಿತು. ಬಳಿಕ ಸಿಸಿ ಕ್ಯಾಮೆರಾ ನಿಗಾದಲ್ಲಿ ಹಣ ಎಣಿಕೆ ಕಾರ್ಯ ಆರಂಭಗೊಂಡು ಬುಧವಾರ ಸಂಜೆ ಪೂರ್ಣಗೊಂಡಿತು. ಸರ್ಕಾರಿ ರಜೆಗಳು, ಅಮಾವಾಸ್ಯೆ ವಿಶೇಷ ಪೂಜೆ, ಜಾತ್ರಾ ಮಹೋತ್ಸವ ಹಾಗೂ ರಾಜ್ಯ ಸರ್ಕಾರದ ಶಕ್ತಿ ಯೋಜನೆ ಜಾರಿಯಾದ ಬಳಿಕ ಮಹಿಳಾ ಭಕ್ತರ ಸಂಖ್ಯೆಯಲ್ಲಿ…
