ತುಳುನಾಡು ಮೂಲದ ಬಾಲಿವುಡ್ ನಟ ಸುನೀಲ್ ಶೆಟ್ಟಿ ಇದೀಗ ಮತ್ತೆ ಸುದ್ದಿಯಲ್ಲಿದ್ದಾರೆ. ಮಂಗಳೂರು ಮೂಲದ ಅವರು ತುಳು ಭಾಷೆಯ ಸಿನಿಮಾದಲ್ಲಿ ನಟಿಸಲಿದ್ದಾರೆ. ರೂಪೇಶ್ ಶೆಟ್ಟಿ ಜೊತೆ ಸಿನಿಮಾವೊಂದರಲ್ಲಿ ಕೈ ಜೋಡಿಸಿದ್ದಾರೆ. ರೂಪೇಶ್ ಶೆಟ್ಟಿ ಅವರು ಇತ್ತೀಚೆಗೆ ‘ಜೈ’ ಹೆಸರಿನ ಸಿನಿಮಾ ಘೋಷಣೆ ಮಾಡಿದ್ದಾರೆ. ರೂಪೇಶ್ ಶೆಟ್ಟಿ ಅವರೇ ನಿರ್ದೇಶನ ಮಾಡುತ್ತಿರುವ ಈ ಸಿನಿಮಾದಲ್ಲಿ ಬಾಲಿವುಡ್ ನಟ ಸುನೀಲ್ ಶೆಟ್ಟಿ ನಟಿಸಲಿದ್ದಾರೆ. ಈ ಬಗ್ಗೆ ರೂಪೇಶ್ ಶೆಟ್ಟಿ ಅವರು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿರುವ ಮಾಹಿತಿ ಗಮನಸೆಳೆದಿದೆ. View this post on Instagram A post shared by All About Mangaluru (@all_about_mangaluru)
Category: ರಾಜ್ಯ
ಲಕ್ಷ್ಮಿ ಹೆಬ್ಬಾಳ್ಕರ್ ಪ್ರಯಾಣಿಸುತ್ತಿದ್ದ ಕಾರು ಅಪಘಾತ; ಸಚಿವೆ ಮತ್ತು ಸಹೋದರ ಆಸ್ಪತ್ರೆಗೆ ದಾಖಲು
ಬೆಳಗಾವಿ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಪ್ರಯಾಣಿಸುತ್ತಿದ್ದ ಕಾರು ಅಪಘಾತಕ್ಕೀಡಾಗಿ ಸಚಿವೆ ಹಾಗೂ ಅವರ ಸಹೋದರ ಆಸ್ಪತ್ರೆಗೆ ದಾಖಲಾಗಿದ್ದಾರೆ. ಬೆಳಗಾವಿ ಜಿಲ್ಲೆ ಅಂಬಡಗಟ್ಟಿಯ ಸಮೀಪ ಕಾರು ಅಪಘಾತಕ್ಕೀಡಾಗಿದೆ. ಸಿಎಲ್ ಪಿ ಸಭೆ ಮುಗಿಸಿ ಸೋಮವಾರ ತಡರಾತ್ರಿ ಬೆಂಗಳೂರಿನಿಂದ ಬೆಳಗಾವಿಗೆ ಕಾರಿನಲ್ಲಿ ಹೊರಟ್ಟಿದ್ದ ಲಕ್ಷ್ಮೀ ಹೆಬ್ಬಾಳಕರ್ ಅಂಬಡಗಟ್ಟಿ ಗ್ರಾಮದ ಬಳಿ ಅವರಿದ್ದ ಕಾರಿಗೆ ನಾಯಿ ಅಡ್ಡಬಂದಿದೆ. ಅದನ್ನು ತಪ್ಪಿಸಲು ಹೋಗಿ ಕಾರು ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಕಾರು ಡಿಕ್ಕಿಯಾಗಿದೆ. ಡಿಕ್ಕಿಯ ರಭಸಕ್ಕೆ ಕಾರಿನ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದೆ. ಬೆಳಗಾವಿ ಜಿಲ್ಲೆ ಕಿತ್ತೂರು ತಾಲೂಕಿನ ಅಂಬಡಗಟ್ಟಿ ಸಮೀಪ ಸಂಭವಿಸಿದ ಈ ಅಪಘಾತದಲ್ಲಿ ಕಾರಿನಲ್ಲಿದ್ದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಮತ್ತು ಅವರ ಸೋದರ, ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಗಾಯಗೊಂಡಿದ್ದು, ಅವರು ಬೆಳಗಾವಿಯ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ನಾಡಿನಾದ್ಯಂತ ಮಕರ ಸಂಕ್ರಾಂತಿ ವೈಭವ; ದೇವಕಾಲಯಗಳಲ್ಲಿ ವಿಶೇಷ ಕೈಂಕರ್ಯ
ಬೆಂಗಳೂರು: ನಾಡಿನಾದ್ಯಂತ ಮಕರ ಸಂಕ್ರಾಂತಿ ಹಬ್ಬದ ಸಂಭ್ರಮ ಮನೆ ಮಾಡಿದೆ. ಉತ್ತರಾಯಣ ಪರ್ವಕಾಲವನ್ನು ಸ್ವಾಗತಿಸುವ ಕೈಂಕರ್ಯ ಎಲ್ಲೆಡೆ ಸಾಗಿದೆ. ಎಲ್ಲೆಲ್ಲೂ ದೇವಾಲಯಗಳಲ್ಲಿ ವಿಶೇಷ ಪೂಜೆ ನೆರವೇರುತ್ತಿದೆ. ಅದರಲ್ಲೂ ಅಯ್ಯಪ್ಪ ದೇಗುಲಗಳಲ್ಲಿ ಮಕರ ಸಂಕ್ರಾಂತಿಯನ್ನು ವಿಶೇಷ ವೈಭವ ರೀತಿಯಲ್ಲಿ ಅಕ್ಕಿಗರಿಸಲಾಗುತ್ತಿದೆ. ಬೆಂಗಳೂರಿನ ಗವಿಪುರದಲ್ಲಿರುವ ಗವಿಗಂಗಾಧರ ದೇವಸ್ಥಾನದಲ್ಲಿ ವಿಶೇಷ ಪೂಜೆಗಳು ನೆರವೇರುತ್ತಿದ್ದು ಇಂದು ಸೂರ್ಯ ರಶ್ಮಿ ಶಿವಲಿಂಗವನ್ನು ಸ್ಪರ್ಶಿಸುವ ವಿಸ್ಮಯಕ್ಕೆ ಸಾಕ್ಷಿಯಾಗಲಿದೆ. ವಿವಿಧ ದೇವಾಲಯಗಳಲ್ಲಿ ವಿಶೇಷ ಪೂಜೆ ಅಭೀಷೇಕ, ನೆರವೇರಿದ್ದು, ದೇಗುಲಗಳು ಭಕ್ತಸಮೂಹದಿಂದ ತುಂಬಿವೆ.
ಕಾಂಗ್ರೆಸ್: ತಳಮಟ್ಟದಲ್ಲಿ ಹೆಚ್ಚು ಪದಾಧಿಕಾರಿಗಳ ನೇಮಿಸಲು ನಿರ್ಧಾರ
ಬೆಂಗಳೂರು: ರಾಜ್ಯದಲ್ಲಿ 100 ಗಾಂಧಿ ಭಾರತ ಕಚೇರಿಗಳನ್ನು ನಿರ್ಮಿಸಲು ತೀರ್ಮಾನಿಸಲಾಗಿದೆ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೆವಾಲ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ರಣದೀಪ್ ಸಿಂಗ್ ಸುರ್ಜೆವಾಲ, ಈ ತಿಂಗಳ 21ರಂದು ಬೆಳಗಾವಿಯಲ್ಲಿ ಜೈ ಬಾಪು, ಜೈ ಭೀಮ್, ಜೈ ಸಂವಿಧಾನ ಸಮಾವೇಶವನ್ನು ಹಮ್ಮಿಕೊಂಡಿದ್ದೇವೆ. ಇದರ ಜತೆಗೆ ಕೆಪಿಸಿಸಿ ಅಧ್ಯಕ್ಷರು, ಸಿಎಂ ಸೇರಿ ಚರ್ಚೆ ಮಾಡಿ ರಾಜ್ಯದಲ್ಲಿ 100 ಗಾಂಧಿ ಭಾರತ ಕಚೇರಿಗಳನ್ನು ನಿರ್ಮಿಸಲು ತೀರ್ಮಾನಿಸಿದ್ದಾರೆ. ಮುಂದಿನ ತಿಂಗಳು ಫೆಬ್ರವರಿ ತಿಂಗಳಲ್ಲಿ ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರು ಬೆಂಗಳೂರಿನಲ್ಲಿ ಒಟ್ಟಿಗೆ ಈ ಎಲ್ಲಾ ಕಚೇರಿಗಳ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ ಎಂದು ತಿಳಿಸಿದರು. ಈಗಾಗಲೇ 74 ಕಚೇರಿಗಳ ನಿರ್ಮಾಣದ ಜಾಗ ಗುರುತಿಸಲಾಗಿದ್ದು, ಉಳಿದ ಕಚೇರಿಗಳ ನಿರ್ಮಾಣದ ಬಗ್ಗೆ ಪಕ್ಷ ಶೀಘ್ರ ತೀರ್ಮಾನ ಮಾಡಲಿದೆ ಎಂದವರು ವಿವರಿಸಿದರು. ಇನ್ನು ಈ ವರ್ಷ ಪಕ್ಷದ ಸಂಘಟನೆಗೆ ಆದ್ಯತೆ ನೀಡಲಾಗಿದ್ದು,…
ಜೈ ಬಾಪು, ಜೈ ಭೀಮ್, ಜೈ ಸಂವಿಧಾನ ಸಮಾವೇಶಕ್ಕೆ ಸಿದ್ಧತೆ ; ಪಕ್ಷ ಸಂಘಟನೆ ಬಗ್ಗೆ ಡಿಕೆಶಿ ಚರ್ಚೆ
ಬೆಂಗಳೂರು: ಸಂಘಟನೆಗಾಗಿ ನಮ್ಮ ಪಕ್ಷ ಹಾಗೂ ಸರ್ಕಾರ ಇಡೀ ದಿನ ಮುಡಿಪಾಗಿಟ್ಟು ಸಭೆ ನಡೆಸಲಾಗಿದೆ. ಈ ವರ್ಷ ಪಕ್ಷ ಸಂಘಟನೆಗೆ ಆದ್ಯತೆ ನೀಡುವುದು ಹಾಗೂ ಜೈ ಬಾಪು, ಜೈ ಭೀಮ್, ಜೈ ಸಂವಿಧಾನ ಸಮಾವೇಶದ ಸಿದ್ಧತೆ ಬಗ್ಗೆ ಚರ್ಚೆ ಮಾಡಲಾಗಿದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ಭಾರತ ಜೋಡೋ ಭವನದಲ್ಲಿ ಪಕ್ಷದ ಶಾಸಕರು, ಸಚಿವರು, ಬ್ಲಾಕ್ ಹಾಗೂ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರು, ಪದಾಧಿಕಾರಿಗಳ ಸಭೆ ಬಳಿಕ ಕಾಂಗ್ರೆಸ್ ಕಚೇರಿಯಲ್ಲಿ ಕೆಪಿಸಿಸಿ ಅಧ್ಯಕ್ಷರೂ ಆದ ಡಿ.ಕೆ. ಶಿವಕುಮಾರ್ ಹಾಗೂ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೆವಾಲ ಅವರು ಸೋಮವಾರ ಮಾಧ್ಯಮಗೋಷ್ಠಿ ನಡೆಸಿ ಮಾಹಿತಿ ನೀಡಿದರು. ಈ ವೇಳೆ ಮಾತನಾಡಿದ ಶಿವಕುಮಾರ್, “ಬೆಳಗ್ಗೆ 12 ಗಂಟೆಗೆ ಶಾಸಕರು, ಮಂತ್ರಿಗಳು, ಪದಾಧಿಕಾರಿಗಳು, ಜಿಲ್ಲಾಧ್ಯಕ್ಷರು, ಪ್ರಮುಖ ಘಟಕಗಳ ಅಧ್ಯಕ್ಷರು, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸಭೆ ಮಾಡಿದ್ದೇವೆ. ಗಾಂಧಿ ಭಾರತದ ಕಾರ್ಯಕ್ರಮ…
ಹಸುಗಳ ಕೆಚ್ಚಲು ಕೊಯ್ದ ಘಟನೆಯ ಹಿಂದೆ ಇರುವವರನ್ನು ಪೊಲೀಸರು ಪತ್ತೆ ಮಾಡಲಿ: ಆರ್.ಅಶೋಕ ಆಗ್ರಹ
ಬೆಂಗಳೂರು: ಚಾಮರಾಜಪೇಟೆಯಲ್ಲಿ ಹಸುಗಳ ಕೆಚ್ಚಲು ಕೊಯ್ದ ಘಟನೆಯ ಹಿಂದೆ ಇರುವವರನ್ನು ರಾಜ್ಯ ಸರ್ಕಾರ ಪತ್ತೆ ಮಾಡಬೇಕೇ ಹೊರತು ಒಬ್ಬ ವ್ಯಕ್ತಿಯನ್ನು ಕಾಟಾಚಾರಕ್ಕೆ ಬಂಧಿಸುವುದಲ್ಲ. ಪೊಲೀಸರು ಇದರ ಹಿಂದಿರುವವರನ್ನು ಹುಡುಕಲಿ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಆಗ್ರಹಿಸಿದ್ದಾರೆ. ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಂಗಳೂರಿನ ಚಾಮರಾಜಪೇಟೆಯಲ್ಲಿ ಹಿಂದೂಗಳಿಗೆ ಘಾಸಿಯಾಗುವ ಘಟನೆ ನಡೆದಿದೆ. ಸಂಕ್ರಾಂತಿ ಹಬ್ಬದ ಸಮಯದಲ್ಲೇ ಹಸುಗಳ ಕೆಚ್ಚಲು ಕೊಯ್ದಿದ್ದು, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ವಹಿಸಬೇಕೆಂದು ಸರ್ಕಾರಕ್ಕೆ ಆಗ್ರಹಿಸಿದ್ದೆ. ಈಗ ಕಾಟಾಚಾರಕ್ಕಾಗಿ ಒಬ್ಬನನ್ನು ಬಂಧಿಸಿದ್ದು, ಈತ ಬಿಹಾರದಿಂದ ಬಂದವನು ಎನ್ನಲಾಗಿದೆ. ಆದರೆ ಈತ ಇದೇ ಊರಿನಲ್ಲಿ ಹತ್ತು ವರ್ಷಗಳಿಂದ ನೆಲೆಸಿದ್ದು, ಆತನ ಅಣ್ಣನಿಗೆ ಫ್ಯಾಕ್ಟರಿ ಕೂಡ ಇದೆ. ಪೊಲೀಸರು ಈತನನ್ನು ವಿಚಾರಣೆ ಮಾಡಿ, ಇದರ ಹಿಂದೆ ಯಾರಿದ್ದಾರೆ ಎಂದು ಪತ್ತೆ ಮಾಡಬೇಕಿತ್ತು ಎಂದರು. ಈ ಘಟನೆಯಲ್ಲಿ ಯಾರ ಕೈವಾಡವಿದೆ ಎಂದು ತನಿಖೆ ಮಾಡಬೇಕಿತ್ತು. ಇಲ್ಲಿ ಪಶು ಆಸ್ಪತ್ರೆಯ…
‘ಅನುದಾನ ಹಂಚಿಕೆಯಲ್ಲಿ ರಾಜ್ಯಕ್ಕೆ ಅನ್ಯಾಯ; ಸೂಕ್ತ ಸಮಯದಲ್ಲಿ ಉತ್ತರ ನೀಡುತ್ತೇವೆ’
ಬೆಂಗಳೂರು: ಅನುದಾನ ಹಂಚಿಕೆಯಲ್ಲಿ ರಾಜ್ಯಕ್ಕೆ ಅನ್ಯಾಯವಾಗಿದೆ. ಈ ವಿಚಾರವಾಗಿ ನಾವು ಒಂದು ತೀರ್ಮಾನಕ್ಕೆ ಬರುತ್ತೇವೆ ಎಂದು ಉಪಮುಖ್ಯಮಂತ್ರಿ ಡಿ.ಕ್ರ.ಶಿವಕುಮಾರ್ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಾ ಕೇಂದ್ರದಿಂದ ರಾಜ್ಯಕ್ಕೆ ಅನುದಾನ ಹಂಚಿಕೆಯಲ್ಲಿ ಅನ್ಯಾಯವಾಗುತ್ತಿರುವ ಬಗ್ಗೆ ಪ್ರತಿಕ್ರಿಯಿಸಿದರು. ಈ ವಿಚಾರವನ್ನು ನಾವು ಕೂಲಂಕುಶವಾಗಿ ಪರಿಶೀಲಿಸುತ್ತಿದ್ದು, ನಮ್ಮ ರಾಜ್ಯಕ್ಕೆ ಅನ್ಯಾಯವಾಗಿದೆ. ಈ ವಿಚಾರವಾಗಿ ನಾವು ಒಂದು ತೀರ್ಮಾನಕ್ಕೆ ಬರುತ್ತೇವೆ ಎಂದರು ತಿಳಿಸಿದರು. ವಿವಾದಾತ್ಮಕ ಹೇಳಿಕೆ ನೀಡುತ್ತಿರುವ ನಾಯಕರ ವಿರುದ್ಧ ಕ್ರಮ ಕೈಗೊಳ್ಳುವ ಕುರಿತು ಮುಖ್ಯಮಂತ್ರಿಗಳು ಹಾಗೂ ರಾಜ್ಯದ ಉಸ್ತುವಾರಿಗಳು ನೋಡಿಕೊಳ್ಳುತ್ತಾರೆ ಎಂದು ಡಿಕೆಶಿ ತಿಳಿಸಿದರು. ಸಚಿವರ ಕಾರ್ಯಗಳ ಬಗ್ಗೆ ವರದಿ ಸಲ್ಲಿಕೆ ಬಗ್ಗೆ ಮಾಹಿತಿ ಹಂಚಿಕೊಂಡ ಅವರು, ಸಚಿವರ ಕಾರ್ಯಗಳ ವಿಚಾರವಾಗಿ ಮುಖ್ಯಮಂತ್ರಿಗಳು ಹೈಕಮಾಂಡ್ ಗೆ ವರದಿ ಸಲ್ಲಿಸಿದ್ದಾರೆ. ಈ ವರದಿಯನ್ನು ಎಐಸಿಸಿ ಪರಿಶೀಲನೆ ನಡೆಸಲಿದೆ ಎಂದು ತಿಳಿಸಿದರು.
ಅಲಯನ್ಸ್ ವಿವಿ: ‘ವಿಕಸಿತ ಭಾರತದಲ್ಲಿ ಮಹಿಳೆಯರ ಪಾತ್ರ’.. ಹೀಗೊಂದು ಮಾತು-ಮಂಥನ
ಬೆಂಗಳೂರು: ಸದಾ ಒಂದಿಲ್ಲೊಂದು ಪ್ರಯೋಗಶೀಲ ಅಧ್ಯಯನದಿಂದ ಸುದ್ದಿಯ ಕೇಂದ್ರಬಿಂದುವಾಗುತ್ತಿರುವ ಬೆಂಗಳೂರಿನ ‘ಅಲಯನ್ಸ್ ವಿಶ್ವವಿದ್ಯಾಲಯ’ದಲ್ಲಿ ನಡೆದ ‘ವಿಕಸಿತ ಭಾರತದಲ್ಲಿ ಮಹಿಳೆಯರ ಪಾತ್ರ”ವಿಚಾರ ಸಂಕಿರಣ ಅರ್ಥಪೂರ್ಣ ಕಾರ್ಯಕ್ರಮವಾಗಿ ಗಮನಸೆಳೆಯಿತು. ಅಲಯನ್ಸ್ ಮಹಿಳಾ ಸಬಲೀಕರಣ ಕೇಂದ್ರದ ವತಿಯಿಂದ ಶನಿವಾರ ನಡೆದ ವಿಚಾರ ಸಂಕಿರಣ ಕಾರ್ಯಕ್ರಮವನ್ನು ಪದ್ಮಶ್ರೀ ಪ್ರಶಸ್ತಿ ಪುರಸ್ಕೃತೆ ಮಾಲತಿ ಕೃಷ್ಣಮೂರ್ತಿ ಹೊಳ್ಳ, ನಟಿ ಮೇಘನಾ ಗಾಂವ್ಕರ್ ಉದ್ಘಾಟಿಸಿದರು. ಚಿಂತನಶೀಲ ಯುವಜನ ಸಮೂಹವನ್ನುದ್ದೇಶಿಸಿ ಮಾತನಾಡಿದ ಮಾಲತಿ ಕೃಷ್ಣಮೂರ್ತಿ ಹೊಳ್ಳ, ಮುಂದಿನ ಗುರಿಯೊಂದಿಗೆ ಇಂದಿನ ಕನಸುಗಳನ್ನು ನನಸು ಮಾಡಬೇಕಾದ ಜವಬ್ದಾರಿ ಮಹಿಳೆಯರ ಮೇಲಿದೆ. ಈ ಮೂಲಕ ಸಮ ಸಮಾಜದ ನಿರ್ಮಾಣಕ್ಕೆ ಮಹಿಳೆಯರು ಕೊಡುಗೆ ನೀಡಬೇಕು. ನೂನ್ಯತೆಗಳನ್ನು ಎದುರಿಸಿದಾಗ ಮಾತ್ರ ಯಶಸ್ಸು ಗಳಿಸಲು ಸಾಧ್ಯ. ತಮಗೆ ದೇಹದಲ್ಲಿ ವಿಕಲತೆಯಿರಬಹುದು ಆದರೆ ಆತ್ಮವಿಶ್ವಾಸ, ಗುರಿ ಸಾಧಿಸುವ ಛಲ, ಕನಸುಗಳಲ್ಲಿ ಯಾವುಏ ನ್ಯೂನತೆಯಿಲ್ಲ. ಇದರಿಂದಾಗಿ ಕ್ರೀಡಾ ಕ್ಷೇತ್ರದಲ್ಲಿ ಸಾಧನೆ ಮಾಡಲು ಸಾಧ್ಯವಾಯಿತು. ವಿಲೇಚೇರ್ ನನಗೆ ಸಿಂಹಾಸನದಂತಾಗಿದೆ. ಹಾಗಾಗಿ…
ಕುಂಬಳೆ: ಗಂಟಲಲ್ಲಿ ಪಿಸ್ತಾದ ಸಿಪ್ಪೆ ಸಿಲುಕಿ ಮಗು ಸಾವು
ಕಾಸರಗೋಡು: ಮಗುವೊಂದು ತನ್ನ ಗಂಟಲಲ್ಲಿ ಪಿಸ್ತಾದ ಸಿಪ್ಪೆ ಸಿಲುಕಿದ್ದರಿಂದ ಸಾವನ್ನಪಿರುವ ಘಟನೆ ಕಾಸರಗೋಡು ಜಿಲ್ಲೆಯ ಕುಂಬಳೆ ಬಳಿ ನಡೆದಿದೆ. ಕುಂಬಳೆ ಭಾಸ್ಕರ ನಗರ ನಿವಾಸಿ ಅನ್ವರ್ ಎಂಬವರ ಪುತ್ರ ಅನಸ್ ಮೃತಪಟ್ಟ ಬಾಲಕ. ಈ ಎರಡು ವರ್ಷದ ಬಾಲಕ ಶನಿವಾರ ಪಿಸ್ತಾವನ್ನು ತಿನ್ನುತ್ತಿದ್ದಾಗ ಅದರ ಸಿಪ್ಪೆ ಗಂಟಲಲ್ಲಿ ಸಿಲುಕಿಡೇ ಎನ್ನಲಾಗಿದೆ. ಮನೆಯವರು ಸಿಪ್ಪೆಯ ಒಂದು ತುಂಡನ್ನು ಹೊರ ತೆಗೆದು ಮಗುವನ್ನು ಸ್ಥಳೀಯ ಆಸ್ಪತ್ರೆಗೆ ಕರೆದೊಯ್ದಿದ್ದರು. ವೈದ್ಯರ ತಪಾಸಣೆ ವೇಳೆ ಮಗುವಿನ ಗಂಟಲಲ್ಲಿ ಯಾವುದೇ ವಸ್ತುಗಳು ಸಿಲುಕಿರುವುದು ಕಂಡುಬರಲಿಲ್ಲ. ಹಾಗಾಗಿ ಮನೆಗೆ ಕರೆದುಕೊಂಡು ಬರಲಾಗಿತ್ತು. ಆದರೆ, ಭಾನುವಾರ ಬೆಳಿಗ್ಗೆ ಬಾಲಕನಿಗೆ ಉಸಿರಾಟದ ತೊಂದರೆ ಕಾಣಿಸಿಕೊಂಡಿತು. ಕೂಡಲೇ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಚಿಕಿತ್ಸೆ ಫಲಕೊಡಲಿಲ್ಲ. ಮಗುವಿನ ತಂದೆ ಅನ್ವರ್ ವಿದೇಶದಲ್ಲಿದ್ದು, ಇತ್ತೀಚೆಗಷ್ಟೇ ರಜೆಯಲ್ಲಿ ಊರಿಗೆ ಬಂದಿದ್ದು, ರಜೆ ಮುಗಿಸಿ ಕೆಲ ದಿನಗಳ ಹಿಂದೆಷ್ಟೇ ವಿದೇಶಕ್ಕೆ ಮರಳಿದ್ದರು.
ಈ ಬಾರಿ ಚುನಾವಣಾ ಮೂಲಕ ಜೆಡಿಎಸ್ ರಾಜ್ಯಾಧ್ಯಕ್ಷರ ಆಯ್ಕೆ
ಬೆಂಗಳೂರು: ಜಾತ್ಯತೀತ ಜನತಾ ದಳ (ಜೆಡಿಎಸ್) ರಾಜ್ಯಾಧ್ಯಕ್ಷರ ಆಯ್ಕೆಯನ್ನು ಮುಂದಿನ ಎಪ್ರಿಲ್ ತಿಂಗಳ ಒಳಗೆ ಚುನಾವಣೆ ಮೂಲಕ ನಡೆಸಲಾಗುತ್ತದೆ ಎಂದು ಪಕ್ಷದ ರಾಜ್ಯಅಧ್ಯಕ್ಷ ಹೆಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ. ಕೇಂದ್ರ ಸಚಿವರೂ ಆದ ಕುಮಾರಸ್ವಾಮಿ, ಪಕ್ಷದ ಪ್ರಧಾನ ಕಚೇರಿ ಜೆ.ಪಿ.ಭವನದಲ್ಲಿ ಚುನಾಯಿತ ಪ್ರತಿನಿಧಿಗಳು, ಮುಖಂಡರ ಸಭೆ ನಡೆಸಿದರು. ಈ ಸಭೆಯಲ್ಲಿ ಪಕ್ಷದ ರಾಜ್ಯಾಧ್ಯಕ್ಷರ ಆಯ್ಕೆಯನ್ನು ಎಪ್ರಿಲ್ ತಿಂಗಳ ಒಳಗೆ ಚುನಾವಣೆ ಮೂಲಕ ನಡೆಸುವ ನಿರ್ಧಾರವನ್ನು ಕೈಗೊಳ್ಳಲಾಯಿತು. ಸಭೆಯ ನಂತರ ಈ ಕುರಿತಂತೆ ಎಚ್.ಡಿ. ಕುಮಾರಸ್ವಾಮಿ ಅವರು ಮಾಧ್ಯಮಗಳಿಗೆ ಮಾಹಿತಿ ನೀಡಿದರು. ರಾಜ್ಯ ಘಟಕದ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ ಮೂಲಕ ಆಯ್ಕೆ ಮಾಡುವ ತೀರ್ಮಾನ ಆಗಿದೆ. ಆದರೆ ಯಾರನ್ನು ಆಯ್ಕೆ ಮಾಡಬೇಕು ಎಂಬ ಬಗ್ಗೆ ಚರ್ಚೆ ನಡೆದಿಲ್ಲ ಎಂದು ಅವರು ತಿಳಿಸಿದರು. ಜೆಡಿಎಸ್ ಯುವ ಘಟಕದ ಅಧ್ಯಕ್ಷರಾಗಿರುವ ನಿಖಿಲ್ ಕುಮಾರಸ್ವಾಮಿಯವರನ್ನು ಜೆಡಿಎಸ್ ರಾಜ್ಯಾಧ್ಯಕ್ಷರನ್ನಾಗಿ ಆಯ್ಕೆ ಮಾಡುವ ಸಾಧ್ಯತೆಗಳ ಬಗ್ಗೆ ಚರ್ಚೆ ನಡೆದಿದೆ.…