ಇವಿ ಚಾರ್ಜಿಂಗ್ ಜಾಲ ನಿರ್ಮಾಣಕ್ಕೆ ಕೇಂದ್ರ ಬದ್ಧ: ಕುಮಾರಸ್ವಾಮಿ

ಬೆಂಗಳೂರು: ದೇಶದಲ್ಲಿ ಸ್ವಚ್ಛ ಚಲನಶೀಲತೆಯನ್ನು ಉತ್ತೇಜಿಸಲು ಆಧುನಿಕ ಹಾಗೂ ವಿಶ್ವಾಸಾರ್ಹ ಇವಿ ಚಾರ್ಜಿಂಗ್ ವ್ಯವಸ್ಥೆ ನಿರ್ಮಿಸಲು ಕೇಂದ್ರ ಸರ್ಕಾರ ಬದ್ಧವಾಗಿದೆ ಎಂದು ಕೇಂದ್ರ ಭಾರೀ ಕೈಗಾರಿಕೆ ಮತ್ತು ಉಕ್ಕು ಸಚಿವ ಎಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ಬೆಂಗಳೂರಿನಲ್ಲಿ ನಡೆದ “ಪಿಎಂ ಇ-ಡ್ರೈವ್ ಯೋಜನೆಯಡಿಯಲ್ಲಿ ರಾಷ್ಟ್ರವ್ಯಾಪಿ ಇವಿ ಚಾರ್ಜಿಂಗ್ ಮೂಲಸೌಕರ್ಯ” ಕುರಿತ ರಾಷ್ಟ್ರೀಯ ಸಮ್ಮೇಳನದಲ್ಲಿ ಮಾತನಾಡಿದ ಅವರು, ಪಿಎಂ ಇ-ಡ್ರೈವ್ ಯೋಜನೆ ನಗರ ಹಾಗೂ ಗ್ರಾಮೀಣ ಭಾಗಗಳಲ್ಲಿ ವಿದ್ಯುತ್ ವಾಹನ ಬಳಕೆಯನ್ನು ಸುಲಭ ಮತ್ತು ಕೈಗೆಟುಕುವಂತೆ ಮಾಡುವ ಸರ್ಕಾರದ ಸಂಕಲ್ಪದ ಭಾಗವಾಗಿದೆ ಎಂದರು. ಕರ್ನಾಟಕದಲ್ಲಿ ₹123.26 ಕೋಟಿ ವೆಚ್ಚದಲ್ಲಿ 1,243 ಇವಿ ಚಾರ್ಜರ್‌ಗಳನ್ನು ಸ್ಥಾಪಿಸುವ ಪ್ರಸ್ತಾವನೆಗೆ ಅನುಮೋದನೆ ನೀಡಲಾಗಿದೆ ಎಂದು ಅವರು ತಿಳಿಸಿದರು. ಇಲ್ಲಿಯವರೆಗೆ ವಿವಿಧ ರಾಜ್ಯಗಳು ಹಾಗೂ ಸಾರ್ವಜನಿಕ ವಲಯದ ಸಂಸ್ಥೆಗಳಲ್ಲಿ 4,874 ಇವಿ ಚಾರ್ಜರ್‌ಗಳ ಸ್ಥಾಪನೆಗಾಗಿ ₹503.86 ಕೋಟಿ ಮೌಲ್ಯದ ಯೋಜನೆಗಳಿಗೆ ಕೇಂದ್ರ ಅನುಮೋದನೆ ನೀಡಿದೆ. ಕರ್ನಾಟಕ,…

KSRTC ನೌಕರರಿಗೆ ಗುಡ್ ನ್ಯೂಸ್; ನಾಲ್ಕೂ ನಿಗಮಗಳ ಸಿಬ್ಬಂದಿ ವೇತನ 12.5% ಪರಿಷ್ಕರಣೆ: ಸರ್ಕಾರ ಆದೇಶ

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಸೇರಿದಂತೆ ನಾಲ್ಕು ರಸ್ತೆ ಸಾರಿಗೆ ನಿಗಮಗಳ ನೌಕರರು ಹಾಗೂ ಅಧಿಕಾರಿಗಳಿಗೆ 12.5 ಶೇಕಡಾ ವೇತನ ಪರಿಷ್ಕರಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಈ ಪರಿಷ್ಕರಣೆ 2025ರ ಏಪ್ರಿಲ್ 1ರಿಂದ ಜಾರಿಗೆ ಬರಲಿದೆ. ವೇತನ ಪರಿಷ್ಕರಣೆಯಿಂದ ನಾಲ್ಕು ಸಾರಿಗೆ ನಿಗಮಗಳಿಗೆ ಪ್ರತಿ ತಿಂಗಳು ಸುಮಾರು ₹72.80 ಕೋಟಿ ಹಾಗೂ ವರ್ಷಕ್ಕೆ ₹873.64 ಕೋಟಿ ಹೆಚ್ಚುವರಿ ವೆಚ್ಚವಾಗಲಿದೆ ಎಂದು ಸಾರಿಗೆ ಇಲಾಖೆ ಮೂಲಗಳು ತಿಳಿಸಿವೆ. ರಾಜ್ಯದ ನಾಲ್ಕು ಸಾರಿಗೆ ಸಂಸ್ಥೆಗಳ ಸುಮಾರು 1.05 ಲಕ್ಷ ಸಿಬ್ಬಂದಿಗೆ ಈ ವೇತನ ಪರಿಷ್ಕರಣೆಯ ಲಾಭ ದೊರೆಯಲಿದೆ. ಈಗಾಗಲೇ 2023ರ ಮಾರ್ಚ್ ವೇತನ ಪರಿಷ್ಕರಣೆಗೆ ಸಂಬಂಧಿಸಿದ 26 ತಿಂಗಳ ಹಿಂಬಾಕಿ ಮೊತ್ತ ₹1271.92 ಕೋಟಿಗಳ ಪೈಕಿ ಮೊದಲ ಕಂತಿನ ₹450 ಕೋಟಿಯನ್ನು ಸರ್ಕಾರ ಬಿಡುಗಡೆ ಮಾಡಿದ್ದು, ನೌಕರರ ಖಾತೆಗಳಿಗೆ ಜಮಾ ಮಾಡಲಾಗಿದೆ. ಇದಲ್ಲದೆ, 2025ರ…

ನೀಟ್‌ ಪರೀಕ್ಷೆ ರದ್ದು ಕೇಂದ್ರ ಸರ್ಕಾರದ ಬಹುದೊಡ್ಡ ಹಗರಣ: ಡಾ. ಶರಣಪ್ರಕಾಶ ಪಾಟೀಲ್‌

ಬೆಂಗಳೂರು: ನೀಟ್‌ ಪರೀಕ್ಷೆ ರದ್ದು ಮಾಡಿರುವುದು ಕೇಂದ್ರ ಸರ್ಕಾರದ ಬಹುದೊಡ್ಡ ಹಗರಣವಾಗಿದ್ದು, ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ ಚೆಲ್ಲಾಟವಾಡಿದಂತಾಗಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣಪ್ರಕಾಶ ಪಾಟೀಲ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೇ 3ರಂದು ನಡೆದಿದ್ದ ನೀಟ್‌ ಪರೀಕ್ಷೆಯ ಪ್ರಶ್ನೆಪತ್ರಿಕೆ ಸೋರಿಕೆಯಾದ ಹಿನ್ನೆಲೆಯಲ್ಲಿ ಪರೀಕ್ಷೆ ರದ್ದುಪಡಿಸಿರುವುದನ್ನು ತೀವ್ರವಾಗಿ ಖಂಡಿಸಿದರು. “ಕಳೆದ ನಾಲ್ಕೈದು ವರ್ಷಗಳಿಂದ ನೀಟ್‌ನಲ್ಲಿ ಒಂದಲ್ಲ ಒಂದು ಅಕ್ರಮ, ಗೊಂದಲಗಳು ನಡೆಯುತ್ತಲೇ ಇವೆ. ಇದಕ್ಕೆ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವೇ ನೇರ ಹೊಣೆ” ಎಂದು ಕಿಡಿಕಾರಿದರು. ಈ ಕುರಿತು ಕೇಂದ್ರ ಸರ್ಕಾರ ಹಾಗೂ ಸಂಬಂಧಪಟ್ಟ ಸಚಿವಾಲಯಕ್ಕೆ ಈಗಾಗಲೇ ಹಲವು ಬಾರಿ ಮನವರಿಕೆ ಮಾಡಿಕೊಟ್ಟಿದ್ದರೂ ಯಾವುದೇ ಕ್ರಮ ಕೈಗೊಂಡಿಲ್ಲ. ಪರಿಣಾಮ ಮತ್ತೊಮ್ಮೆ ಭಾರೀ ಪ್ರಮಾದ ಸಂಭವಿಸಿದೆ ಎಂದು ಹೇಳಿದರು. ತಪ್ಪಿತಸ್ಥರನ್ನು ಕಾನೂನಿನ ಮುಂದೆ ನಿಲ್ಲಿಸಿ ಕಠಿಣ ಶಿಕ್ಷೆ ನೀಡಬೇಕು. ಇದು ಕೇಂದ್ರ ಸರ್ಕಾರದ…

ಡಿಜಿಲಾಕರ್ ಏಕೀಕರಣ: ಕರ್ನಾಟಕ ಸೇರಿ ಐದು ರಾಜ್ಯಗಳಿಗೆ ರಾಷ್ಟ್ರೀಯ ಪ್ರಶಸ್ತಿ

ನವದೆಹಲಿ: ಡಿಜಿಲಾಕರ್ ಏಕೀಕರಣ ಮತ್ತು ಡಿಜಿಟಲ್ ಆಡಳಿತ ಕ್ಷೇತ್ರದಲ್ಲಿ ಅತ್ಯುತ್ತಮ ಸಾಧನೆಗಾಗಿ ಗುಜರಾತ್, ಕರ್ನಾಟಕ, ಕೇರಳ, ನಾಗಾಲ್ಯಾಂಡ್ ಮತ್ತು ರಾಜಸ್ಥಾನ ರಾಜ್ಯಗಳಿಗೆ ರಾಷ್ಟ್ರೀಯ ಇ-ಆಡಳಿತ ವಿಭಾಗ (NeGD) ಪ್ರಶಸ್ತಿ ನೀಡಿ ಸನ್ಮಾನಿಸಿದೆ. ಮೇ 11ರಂದು ನಡೆದ “ರಾಜ್ಯ ದತ್ತಾಂಶಕ್ಕಾಗಿ ಸೈಬರ್ ಭದ್ರತಾ ಚೌಕಟ್ಟು ಬಲಪಡಿಸುವ” ರಾಷ್ಟ್ರೀಯ ಕಾರ್ಯಾಗಾರದಲ್ಲಿ ಈ ಪ್ರಶಸ್ತಿಗಳನ್ನು ಪ್ರದಾನ ಮಾಡಲಾಯಿತು. ಡಿಜಿಟಲ್ ಆಡಳಿತ ವಿಭಾಗದ ಜಂಟಿ ಕಾರ್ಯದರ್ಶಿ ಹಾಗೂ NeGD ಅಧ್ಯಕ್ಷ-ಸಿಇಒ ನಂದ ಕುಮಾರಮ್ ಪ್ರಶಸ್ತಿ ವಿತರಿಸಿದರು. ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯದ ಪ್ರಕಾರ, ವಿವಿಧ ಸರ್ಕಾರಿ ಸೇವೆಗಳೊಂದಿಗೆ ಡಿಜಿಲಾಕರ್ ಯಶಸ್ವಿಯಾಗಿ ಸಂಯೋಜಿಸಿ, ನಾಗರಿಕರಿಗೆ ದಾಖಲೆಗಳನ್ನು ಡಿಜಿಟಲ್ ರೂಪದಲ್ಲಿ ಸುಲಭವಾಗಿ ಲಭ್ಯವಾಗುವಂತೆ ಮಾಡಿದಕ್ಕಾಗಿ ರಾಜ್ಯಗಳನ್ನು ಗುರುತಿಸಲಾಗಿದೆ. ಕರ್ನಾಟಕದಲ್ಲಿ ಶೇಕಡಾ 73ರಷ್ಟು ಸರ್ಕಾರಿ ಇ-ಸೇವೆಗಳನ್ನು ಡಿಜಿಲಾಕರ್‌ಗೆ ಜೋಡಿಸಲಾಗಿದ್ದು, 2.7 ಕೋಟಿಗೂ ಹೆಚ್ಚು ಬಳಕೆದಾರರು ನೋಂದಾಯಿಸಿಕೊಂಡಿದ್ದಾರೆ. ರಾಜ್ಯದ ಎಲ್ಲಾ ಐದು ಡಿಸ್ಕಾಂಗಳನ್ನು ಸಂಯೋಜಿಸಿ ಸುಮಾರು 3…

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳ ಬಗ್ಗೆ ಗೆಜೆಟ್ ಅಧಿಸೂಚನೆ ಹೊರಡಿಸದಂತೆ ಕೇಂದ್ರಕ್ಕೆ ಆಂಧ್ರ ಆಗ್ರಹ

ಅಮರಾವತಿ: ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಿಸುವ ಪ್ರಸ್ತಾವನೆ ಕುರಿತಂತೆ ಸುಪ್ರೀಂ ಕೋರ್ಟ್ ಅಂತಿಮ ತೀರ್ಪು ಪ್ರಕಟವಾಗುವವರೆಗೆ ಯಾವುದೇ ಗೆಜೆಟ್ ಅಧಿಸೂಚನೆ ಹೊರಡಿಸಬಾರದು ಎಂದು ಆಂಧ್ರಪ್ರದೇಶ ಮುಖ್ಯಮಂತ್ರಿ ಎನ್. ಚಂದ್ರಬಾಬು ನಾಯ್ಡು ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ. ಸೋಮವಾರ ನವದೆಹಲಿಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಹಾಗೂ ಕೇಂದ್ರ ಜಲಶಕ್ತಿ ಸಚಿವ ಸಿ.ಆರ್. ಪಾಟೀಲ್ ಅವರನ್ನು ಪ್ರತ್ಯೇಕವಾಗಿ ಭೇಟಿ ಮಾಡಿದ ನಾಯ್ಡು, ಆಂಧ್ರಪ್ರದೇಶದ ವಿವಿಧ ಯೋಜನೆಗಳಿಗೆ ಹೆಚ್ಚುವರಿ ಕೇಂದ್ರ ಸಹಾಯ ನೀಡುವಂತೆ ಮನವಿ ಮಾಡಿದರು. ಆಲಮಟ್ಟಿ ಯೋಜನೆ ವಿಚಾರದಲ್ಲಿ ಬಲ ಹಾಗೂ ಎಡ ಕಾಲುವೆಗಳ ಸಾಮರ್ಥ್ಯವನ್ನು 17,500 ಕ್ಯೂಸೆಕ್‌ಗಳಿಗೆ ಹೆಚ್ಚಿಸಿರುವುದಾಗಿ ತಿಳಿಸಿದ ಅವರು, ಅದರ ಅನುಗುಣವಾಗಿ ವೆಚ್ಚ ಮರುಪಾವತಿ ಮಾಡುವಂತೆ ಕೋರಿದರು. ಜೊತೆಗೆ, ರಾಯಲಸೀಮಾ ಹಾಗೂ ದಕ್ಷಿಣ ಕರಾವಳಿ ಪ್ರದೇಶಗಳಿಗೆ ನೀರು ಪೂರೈಸುವ ಪೋಲವರಂ–ಬಣಕಚೆರ್ಲಾ ಲಿಂಕ್ ಯೋಜನೆಗೆ ಅನುಮೋದನೆ ನೀಡುವಂತೆ ಮನವಿ ಮಾಡಿದರು. ರಾಜ್ಯದ 297 ಜಲಮೂಲಗಳ ಪುನಶ್ಚೇತನ…

ಕರ್ನಾಟಕ ಅಂಡರ್-15 ಫುಟ್ಬಾಲ್ ತಂಡಕ್ಕೆ ಸುಳ್ಯದ ಸಿ.ಎಸ್.ಸ್ಕಂದ ಆಯ್ಕೆ

ಮಂಗಳೂರು: ಸುಳ್ಯ ಮೂಲದ ಸ್ಕಂದ ಸಿ.ಎಸ್ ಕರ್ನಾಟಕ 7A ಸೈಡ್ ಅಂಡರ್-15 ಫುಟ್ಬಾಲ್ ತಂಡಕ್ಕೆ ಆಯ್ಕೆಯಾಗಿದ್ದಾರೆ. ಮೇ 14ರಿಂದ ಗೋವಾದಲ್ಲಿ ನಡೆಯಲಿರುವ ಸಬ್-ಜ್ಯೂನಿಯರ್ ನ್ಯಾಷನಲ್ ಟೂರ್ನಮೆಂಟ್‌ನಲ್ಲಿ ಅವರು ಕರ್ನಾಟಕ ಪರವಾಗಿ ಆಡಲಿದ್ದಾರೆ. ಸ್ಕಂದ ಸದ್ಯ ಬೆಂಗಳೂರಿನಲ್ಲಿ 9ನೇ ತರಗತಿಯಲ್ಲಿ ಓದುತ್ತಿದ್ದಾರೆ. ಇಂಜಿನಿಯರ್ ಆಗಿರುವ ಎಣ್ಮೂರಿನ ತೇಜಸ್ವಿನಿ ಕೆ.ಎನ್ ಮತ್ತು ದಂಬೆ ರವಿಶಂಕರ ಶಾಸ್ತ್ರಿ ದಂಪತಿಗಳ ಪುತ್ರ. ನಿವೃತ್ತ ಅಧ್ಯಾಪಕರಾದ ಕೀರಿಕ್ಕಾಡು ನಾರಾಯಣ ಭಟ್ ಹಾಗೂ ನಿವೃತ್ತ ಮುಖ್ಯೋಪಾಧ್ಯಾಯಿನಿ ಗಾಯತ್ರಿ ಎ.ಆರ್ ಅವರ ಮೊಮ್ಮಗ. ಸ್ಕಂದನ ಆಯ್ಕೆಯಿಂದ ಕುಟುಂಬ ಹಾಗೂ ಸ್ಥಳೀಯ ಕ್ರೀಡಾಭಿಮಾನಿಗಳು ಹರ್ಷ ವ್ಯಕ್ತಪಡಿಸಿದ್ದಾರೆ.

ಮಲೆ ಮಹದೇಶ್ವರ ಬೆಟ್ಟದಲ್ಲಿ ಚಿರತೆ ದಾಳಿ; 10 ವರ್ಷದ ಬಾಲಕ ದುರ್ಮರಣ

ಹನೂರು: ಮಲೆ ಮಹದೇಶ್ವರ ಬೆಟ್ಟ ಸಮೀಪದ ನಾಗಮಲೆಗೆ ತೆರಳುತ್ತಿದ್ದ ವೇಳೆ ಚಿರತೆ ದಾಳಿಗೆ ಒಳಗಾದ 10 ವರ್ಷದ ಬಾಲಕ ಮೃತಪಟ್ಟಿರುವ ದುರ್ಘಟನೆ ಭಾನುವಾರ ಬೆಳಿಗ್ಗೆ ನಡೆದಿದೆ. ಬೆಂಗಳೂರು ಮೂಲದ ಹರ್ಷಿತ್ (10) ಮೃತ ಬಾಲಕ ಎಂದು ಗುರುತಿಸಲಾಗಿದೆ. ಕುಟುಂಬದವರೊಂದಿಗೆ ಮಲೆ ಮಹದೇಶ್ವರ ಬೆಟ್ಟಕ್ಕೆ ದೇವರ ದರ್ಶನಕ್ಕೆ ಬಂದಿದ್ದ ಹರ್ಷಿತ್, ಭಾನುವಾರ ಬೆಳಿಗ್ಗೆ ನಾಗಮಲೆಗೆ ತೆರಳುತ್ತಿದ್ದ ವೇಳೆ ಏಕಾಏಕಿ ಚಿರತೆ ದಾಳಿ ನಡೆಸಿದೆ. ಬಾಲಕನನ್ನು ಎಳೆದೊಯ್ದ ಚಿರತೆಯಿಂದಾಗಿ ಸ್ಥಳದಲ್ಲಿ ಆತಂಕದ ವಾತಾವರಣ ನಿರ್ಮಾಣವಾಯಿತು. ಘಟನೆಯ ಬಳಿಕ ಸ್ಥಳೀಯರು ಹಾಗೂ ಕುಟುಂಬಸ್ಥರು ಬಾಲಕನಿಗಾಗಿ ಹುಡುಕಾಟ ನಡೆಸಿದ್ದು, ಸುಮಾರು ಅರ್ಧ ಗಂಟೆಯ ನಂತರ ಹರ್ಷಿತ್‌ನ ಮೃತದೇಹ ಪತ್ತೆಯಾಗಿದೆ. ಬಾಲಕನ ಕತ್ತು ಸೇರಿದಂತೆ ದೇಹದ ಹಲವೆಡೆ ಗಂಭೀರ ಗಾಯಗಳಾಗಿರುವುದಾಗಿ ತಿಳಿದು ಬಂದಿದೆ. ವಿಷಯ ತಿಳಿಯುತ್ತಿದ್ದಂತೆಯೇ ಅರಣ್ಯ ಇಲಾಖೆ ಸಿಬ್ಬಂದಿ ಹಾಗೂ ವಾಚರ್‌ಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹಿರಿಯ ಅಧಿಕಾರಿಗಳಿಗೆ ಮಾಹಿತಿ…

ರಾಜ್ಯ ಸಚಿವ ಡಿ. ಸುಧಾಕರ್ ನಿಧನ; ರಾಜಕೀಯ ವಲಯದಲ್ಲಿ ಶೋಕ

ಬೆಂಗಳೂರು: ಕರ್ನಾಟಕದ ಯೋಜನೆ ಮತ್ತು ಸಾಂಖ್ಯಿಕ ಸಚಿವ ಡಿ. ಸುಧಾಕರ್ ಅವರು ಭಾನುವಾರ ಮುಂಜಾನೆ ಬೆಂಗಳೂರಿನ KIMS Hospital ನಲ್ಲಿ ನಿಧನರಾಗಿದ್ದಾರೆ. 65 ವರ್ಷ ವಯಸ್ಸಿನ ಅವರು, ಕಳೆದ ಒಂದು ತಿಂಗಳಿನಿಂದ ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಕೊನೆಯುಸಿರೆಳೆದಿದ್ದಾರೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ. ಮೊದಲು ಮೊಣಕಾಲು ಶಸ್ತ್ರಚಿಕಿತ್ಸೆಗಾಗಿ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ಡಿ. ಸುಧಾಕರ್ ಅವರಿಗೆ ಬಳಿಕ ಶ್ವಾಸಕೋಶದ ಸೋಂಕು ಕಾಣಿಸಿಕೊಂಡಿತ್ತು. ನಂತರ ಅವರನ್ನು ಎಲೆಕ್ಟ್ರಾನಿಕ್ ಸಿಟಿಯಲ್ಲಿರುವ ಕಿಮ್ಸ್ ಆಸ್ಪತ್ರೆಗೆ ಸ್ಥಳಾಂತರಿಸಲಾಗಿತ್ತು. ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು ಭಾನುವಾರ ಬೆಳಗ್ಗೆ ಮೃತಪಟ್ಟಿದ್ದಾರೆ. ಚಿತ್ರದುರ್ಗ ಜಿಲ್ಲೆಯ ಪ್ರಭಾವಿ ರಾಜಕೀಯ ನಾಯಕರಾಗಿದ್ದ ಡಿ. ಸುಧಾಕರ್ ನಾಲ್ಕು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದರು. ರಾಜ್ಯ ರಾಜಕೀಯದಲ್ಲಿ ಚತುರ ತಂತ್ರಗಾರರಾಗಿ ಗುರುತಿಸಿಕೊಂಡಿದ್ದರು. ಸಚಿವರ ನಿಧನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಹಲವು ಸಚಿವರು, ರಾಜಕೀಯ ಮುಖಂಡರು ಮತ್ತು ಗಣ್ಯರು ಸಂತಾಪ…

ಬೆಂಗಳೂರು ಸಹಿತ ರಾಜ್ಯದ ಹಲವೆಡೆ ಮಳೆ ಸಾಧ್ಯತೆ; ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಭಾನುವಾರ ಸಾಧಾರಣ ಮಳೆಯಾಗುವ ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಕರಾವಳಿ ಹಾಗೂ ಉತ್ತರ ಒಳನಾಡಿನ ತಲಾ ಎರಡು ಜಿಲ್ಲೆಗಳು ಮತ್ತು ದಕ್ಷಿಣ ಒಳನಾಡಿನ ಐದು ಜಿಲ್ಲೆಗಳಲ್ಲಿ ವರುಣನ ಸಿಂಚನದ ನಿರೀಕ್ಷೆ ವ್ಯಕ್ತವಾಗಿದೆ. ಅದನ್ನು ಹೊರತುಪಡಿಸಿ ಉಳಿದ ಭಾಗಗಳಲ್ಲಿ ಒಣ ಹವೆ ಮುಂದುವರಿಯಲಿದೆ. ಉತ್ತರ ಕರ್ನಾಟಕದ ಅನೇಕ ಕಡೆಗಳಲ್ಲಿ ತೀವ್ರ ಬಿಸಿಲಿನ ವಾತಾವರಣ ಮುಂದುವರಿಯುವ ಸಾಧ್ಯತೆ ಇದ್ದರೆ, ಬೆಂಗಳೂರು ನಗರದಲ್ಲಿ ಮಳೆಯ ಸಾಧ್ಯತೆಯಿದೆ. ಕರಾವಳಿ ಭಾಗದ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಮಳೆಯ ಸಂಭವವಿದೆ. ಉತ್ತರ ಒಳನಾಡಿನ ಗದಗ ಹಾಗೂ ಹಾವೇರಿ ಜಿಲ್ಲೆಗಳಲ್ಲಿ ಸಣ್ಣ ಪ್ರಮಾಣದಲ್ಲಿ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಒಳನಾಡಿನ ಚಾಮರಾಜನಗರ, ಚಿಕ್ಕಮಗಳೂರು, ಕೊಡಗು, ಮೈಸೂರು ಮತ್ತು ರಾಮನಗರ ಜಿಲ್ಲೆಗಳಲ್ಲಿ ಕೂಡ ಸಾಧಾರಣ ಮಳೆಯ ನಿರೀಕ್ಷೆ ಇದೆ.

ಕುಣಿಗಲ್ ಬಳಿ ಭೀಕರ ರಸ್ತೆ ಅಪಘಾತ: ವಿವಾಹ ವಾರ್ಷಿಕೋತ್ಸವದ ದಿನವೇ ನಾಲ್ವರು ದುರ್ಮರಣ

ತುಮಕೂರು: ಕುಣಿಗಲ್ ತಾಲೂಕಿನ ಹೊನ್ನೇನಹಳ್ಳಿ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿ, ಕಾರಿನಲ್ಲಿದ್ದ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಗೊಬ್ಬರ ತುಂಬಿದ್ದ ಲಾರಿಗೆ ಆಲ್ಟೋ ಕಾರು ಡಿಕ್ಕಿ ಹೊಡೆದ ಪರಿಣಾಮ ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದು, ಅಪಘಾತದ ತೀವ್ರತೆಗೆ ಕಾರಿನಲ್ಲಿದ್ದ ಪ್ರಯಾಣಿಕರು ಸಾವನ್ನಪ್ಪಿದ್ದಾರೆ. ಮೃತರನ್ನು ಸ್ವರ್ಣಸಂದ್ರ ನಿವಾಸಿಗಳಾದ ಕುಮಾರ ನರಸಿಂಹಸ್ವಾಮಿ, ಅವರ ಪತ್ನಿ ಗಾಯತ್ರಿ (60), ಸಹೋದರಿ ಗಾಯತ್ರಿ (55) ಹಾಗೂ ಮತ್ತೋರ್ವ ಪುರುಷ ಎಂದು ಗುರುತಿಸಲಾಗಿದೆ. ಕುಮಾರ ನರಸಿಂಹಸ್ವಾಮಿ ಅವರು ನಿನ್ನೆ ಕುಟುಂಬದವರೊಂದಿಗೆ ತುಮಕೂರಿಗೆ ಬಂದಿದ್ದರು. ಇಂದು ತಮ್ಮ ವಿವಾಹ ವಾರ್ಷಿಕೋತ್ಸವದ ಹಿನ್ನೆಲೆಯಲ್ಲಿ ದೇವರಾಯನದುರ್ಗಕ್ಕೆ ತೆರಳಿ ದೇವರ ದರ್ಶನ ಪಡೆದು ಊರಿಗೆ ಹಿಂದಿರುಗುವ ವೇಳೆ ಈ ದುರಂತ ಸಂಭವಿಸಿದೆ. ಅಪಘಾತದ ಬಗ್ಗೆ ಸ್ಥಳೀಯ ಪೊಲೀಸರು ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.