ಪಂಚಾಯತ್‌ಗಳ ಅವಧಿ ಮುಗಿಯುವ ಮುನ್ನ ಅನುದಾನ ಬಿಡುಗಡೆ ಮಾಡಲಿ: ಕೇಂದ್ರಕ್ಕೆ ಪ್ರಿಯಾಂಕ್ ಖರ್ಗೆ ಮನವಿ

ಬೆಂಗಳೂರು: ಪಂಚಾಯತಿ ಮಟ್ಟದ ಆಡಳಿತವನ್ನು ಉಳಿಸಿಕೊಳ್ಳಲು ಹಾಗೂ ಅವುಗಳ ಅವಧಿ ಮುಗಿಯುವ ಮೊದಲೇ ನಿರ್ಣಾಯಕ ಯೋಜನೆಗಳನ್ನು ಪೂರ್ಣಗೊಳಿಸಲು ಕೇಂದ್ರ ಸರ್ಕಾರವು ಸಕಾಲಕ್ಕೆ ಅನುದಾನಗಳನ್ನು ಬಿಡುಗಡೆ ಮಾಡುವುದು ಅತ್ಯಗತ್ಯವಾಗಿದೆ. ಎಂದು ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. ಗ್ರಾಮ ಪಂಚಾಯತಿಗಳ ಪ್ರಸ್ತುತ ಅವಧಿ 2026ರ ಜನವರಿ-ಫೆಬ್ರವರಿ ತಿಂಗಳಿನಲ್ಲಿ ಮುಕ್ತಾಯಗೊಳ್ಳಲಿದ್ದು, ಅನುದಾನದ ಕೊರತೆಯಿಂದಾಗಿ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲು ಸಾಧ್ಯವಾಗುತ್ತಿಲ್ಲ. ಕರ್ನಾಟಕವು ಗ್ರಾಮೀಣ ವಿಕೇಂದ್ರೀಕರಣದಲ್ಲಿ ನಿರಂತರವಾಗಿ ಮುಂಚೂಣಿಯಲ್ಲಿದೆ ಮತ್ತು ಪಂಚಾಯತಿ ಮಟ್ಟದ ಆಡಳಿತವನ್ನು ಉಳಿಸಿಕೊಳ್ಳಲು ಹಾಗೂ ಅವುಗಳ ಅವಧಿ ಮುಗಿಯುವ ಮೊದಲೇ ನಿರ್ಣಾಯಕ ಯೋಜನೆಗಳನ್ನು ಪೂರ್ಣಗೊಳಿಸಲು ಕೇಂದ್ರ ಸರ್ಕಾರವು ಸಕಾಲಕ್ಕೆ ಅನುದಾನಗಳನ್ನು ಬಿಡುಗಡೆ ಮಾಡುವುದು ಅತ್ಯಗತ್ಯವಾಗಿದೆ ಎಂದಿದ್ದಾರೆ. ಈ ಕುರಿತು ಕರ್ನಾಟಕದ ಗ್ರಾಮ ಪಂಚಾಯತಿಗಳಿಗೆ ಕೇಂದ್ರ ಸರ್ಕಾರದಿಂದ ಬಾಕಿ ಇರುವ 15ನೇ ಹಣಕಾಸು ಆಯೋಗದ ಅನುದಾನವನ್ನು ತಕ್ಷಣ ಬಿಡುಗಡೆ ಮಾಡಲು ಗಮನಹರಿಸಬೇಕೆಂದು ಕೇಂದ್ರ ಪಂಚಾಯತ್ ರಾಜ್ ಸಚಿವರಾದ ರಾಜೀವ್ ರಂಜನ್ ಸಿಂಗ್…

ಮಂಗಳೂರಿನ ವೆನ್ಲಾಕ್, ಧಾರವಾಡ, ನೆಲಮಂಗಲ ಸಾರ್ವಜನಿಕ ಆಸ್ಪತ್ರೆಗಳಲ್ಲಿಸುಧಾರಿತ ಆಹಾರ ಪದ್ಧತಿ ಜಾರಿಗೆ

ಬೆಂಗಳೂರು: ಸರ್ಕಾರಿ ಆಸ್ಪತ್ರೆಗಳ ರೋಗಿಗಳಿಗೆ ಪೌಷ್ಟಿಕ, ಗುಣಮಟ್ಟದ ಆಹಾರ ಪೂರೈಕೆಗೆ ನಮ್ಮ ಆದ್ಯತೆ ಎಂದು ಅರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ. ನಮ್ಮ ಸರ್ಕಾರದ ಪ್ರಮುಖ ಆಶಯವಾದ ‘ಸಶಕ್ತ ಮತ್ತು ಆರೋಗ್ಯವಂತ ಕರ್ನಾಟಕ’ ನಿರ್ಮಾಣದ ನಿಟ್ಟಿನಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ಮತ್ತೊಂದು ಮಹತ್ವದ ಹೆಜ್ಜೆ ಇರಿಸಿದೆ ಎಂದಿರುವ ಅವರು, ರಾಜ್ಯದ ಪ್ರಮುಖ ಸರ್ಕಾರಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿರುವ ರೋಗಿಗಳಿಗೆ ಅತ್ಯುತ್ತಮ ದರ್ಜೆಯ ಆಹಾರವನ್ನು ಒದಗಿಸುವ ಉದ್ದೇಶದಿಂದ ಇಸ್ಕಾನ್ (ISKCON) ಸಂಸ್ಥೆಯ ಮೂಲಕ ಪೌಷ್ಟಿಕ ಆಹಾರ ಪೂರೈಸಲು ಅಧಿಕೃತ ಆದೇಶ ಹೊರಡಿಸಲಾಗಿದೆ ಎಂದು ತಿಳಿಸಿದ್ದಾರೆ. ಈ ಕುರಿತಂತೆ ಅವರು ಮಾಧ್ಯಮದಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. ಮಂಗಳೂರಿನ ವೆನ್ಲಾಕ್ ಜಿಲ್ಲಾ ಆಸ್ಪತ್ರೆ, ಧಾರವಾಡ ಜಿಲ್ಲಾ ಆಸ್ಪತ್ರೆ ಹಾಗೂ ಬೆಂಗಳೂರಿನ ಯಲಹಂಕ, ಕೆ.ಆರ್. ಪುರ ಮತ್ತು ನೆಲಮಂಗಲ ಸಾರ್ವಜನಿಕ ಆಸ್ಪತ್ರೆಗಳಲ್ಲಿ ಈ ಸುಧಾರಿತ ಆಹಾರ ಪದ್ಧತಿಯನ್ನು ಜಾರಿಗೆ ತರಲಾಗುತ್ತಿದೆ. ರೋಗಿಗಳ…

ಮಹಿಳಾ K.A.S ಅಧಿಕಾರಿಗೆ ಬೆದರಿಕೆ ಪ್ರಕರಣ: ಕಾಂಗ್ರೆಸ್ ನಾಯಕ ರಾಜೀವ್ ಗೌಡ ಬಂಧನ

ಬೆಂಗಳೂರು: K.A.S ಅಧಿಕಾರಿಗೆ ನಿಂದಿಸಿ, ಬೆದರಿಕೆ ಹಾಕಿದ ಆರೋಪದ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಕಾಂಗ್ರೆಸ್ ನಾಯಕ ರಾಜೀವ್ ಗೌಡ ಅವರನ್ನು ಪೊಲೀಸರು ಕೊನೆಗೂ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಶಿಡ್ಲಘಟ್ಟದ ಪೌರಾಯುಕ್ತೆ ಅಮೃತಾ ಗೌಡ ಅವರಿಗೆ ಬೆದರಿಕೆ ಹಾಕಿದ ಆರೋಪದ ಹಿನ್ನೆಲೆಯಲ್ಲಿ ಈ ಪ್ರಕರಣ ದಾಖಲಾಗಿತ್ತು. ಪ್ರಕರಣ ದಾಖಲಾಗಿದ ಬಳಿಕ ಕಳೆದ 14 ದಿನಗಳಿಂದ ರಾಜೀವ್ ಗೌಡ ಪರಾರಿಯಾಗಿದ್ದು, ಪೊಲೀಸರು ವಿವಿಧ ರಾಜ್ಯಗಳಲ್ಲಿ ಶೋಧ ಕಾರ್ಯಾಚರಣೆ ನಡೆಸುತ್ತಿದ್ದರು. ಈ ನಡುವೆ ಅವರು ಕೇರಳ ಗಡಿಯ ಸಮೀಪದಲ್ಲಿ ಇರುವುದಾಗಿ ಖಚಿತ ಮಾಹಿತಿ ಲಭ್ಯವಾದ ಹಿನ್ನೆಲೆಯಲ್ಲಿ ಪೊಲೀಸರು ಕಾರ್ಯಾಚರಣೆ ನಡೆಸಿ ಅವರನ್ನು ಬಂಧಿಸಿದ್ದಾರೆ. ಮಂಗಳೂರಿನ ಉದ್ಯಮಿಯೊಬ್ಬರು ರಾಜೀವ್ ಗೌಡ ಅವರಿಗೆ ಆಶ್ರಯ ನೀಡಿದ್ದರು ಎನ್ನಲಾಗಿದೆ. ಉದ್ಯಮಿಯ ಕಾರಿನಲ್ಲೇ ಅವರು ಸಂಚರಿಸುತ್ತಿದ್ದರು ಎನ್ನಲಾಗಿದ್ದು, ಈ ಅಂಶವನ್ನೂ ಪೊಲೀಸರು ತನಿಖೆಯ ಭಾಗವಾಗಿಸಿಕೊಂಡಿದ್ದಾರೆ. ಸೋಮವಾರ (ಜನವರಿ 26) ಮಂಗಳೂರಿನಿಂದ ಕೇರಳಕ್ಕೆ ತೆರಳುತ್ತಿದ್ದ ವೇಳೆ ರಾಜೀವ್ ಗೌಡ ಅವರನ್ನು ಬಂಧಿಸಲಾಗಿದೆ…

ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಸರ್ಕಾರದ ಮಧ್ಯಪ್ರವೇಶ ಇಲ್ಲ; ಸಿಎಂ ಪ್ರತಿಕ್ರಿಯೆ

ಮೈಸೂರು: ದಾವೋಸ್ ನಲ್ಲಿ ನಡೆಯುತ್ತಿರುವ ವರ್ಲ್ಡ್ ಎಕನಾಮಿಕ್ ಫೋರಂ ನಲ್ಲಿ ಉಪಮುಖ್ಯಮಂತ್ರಿಗಳು ಹಾಗೂ ಕೈಗಾರಿಕಾ ಸಚಿವರು ಪಾಲ್ಗೊಂಡಿದ್ದು, ಕರ್ನಾಟಕದಲ್ಲಿ ಹೂಡಿಕೆಗೆ ಉತ್ತಮ ವಾತಾವರಣವಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ಮೈಸೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ನಮ್ಮಲ್ಲಿ ಕೌಶಲ್ಯವಿರುವ ಮಾನವ ಸಂಪನ್ಮೂಲದ ಲಭ್ಯತೆಯಿದೆ. ಇದಕ್ಕೆ ತರಬೇತಿಯೂ ನೀಡಲಾಗುತ್ತಿದೆ, ತರಬೇತಿ ಪಡೆವರಿಗೆ ನೂರರಷ್ಟು ಕೆಲಸ ದೊರೆಯುತ್ತದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ವಿಧಾನ ಮಂಡಲದ ಅಧಿವೇಶನದಲ್ಲಿ ರಾಜ್ಯಪಾಲರ ಭಾಷಣಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರು ರಾಷ್ಟ್ರಪತಿಗಳಿಗೆ ತಿಳಿಸಿದ್ದಾರೆ. ರಾಜ್ಯಪಾಲರು ಜಂಟಿ ಅಧಿವೇಶನ ಉದ್ದೇಶಿಸಿ ಮಾತನಾಡಬೇಕೆಂದು ಸಂವಿಧಾನದ 176 ಮತ್ತು 163 ಪರಿಚ್ಛೇದದಲ್ಲಿ ಸ್ಪಷ್ಟವಾಗಿ ಹೇಳಿದೆ. ಸರ್ಕಾರ ಕೊಟ್ಟಿರುವ ಭಾಷಣವನ್ನು ಅವರು ಓದಲೇಬೇಕು. ನಾವು ಬರೆದುಕೊಟ್ಟಿರುವುದನ್ನು ಅವರು ಬದಲಾಯಿಸುವ ಸಾಧ್ಯತೆ ಇರುತ್ತದೆ ಎಂದರು. ಗಣರಾಜ್ಯೋತ್ಸವದ ಪರೇಡ್ ನಲ್ಲಿ ಕರ್ನಾಟಕದ ಸ್ತಬ್ಧಚಿತ್ರಕ್ಕೆ ಪತ್ರ ವ್ಯವಹಾರವೆಲ್ಲಾ ಆಗಿದ್ದರೂ, ಕೇಂದ್ರ ಸರ್ಕಾರ ಆಯ್ಕೆ ಮಾಡಿಲ್ಲ ಎನ್ನುವುದು ದುರದೃಷ್ಟಕರ…

ಪಿಎಸ್‌ಐ ನೇಮಕಾತಿ ಅಕ್ರಮದ ಪ್ರತಿಧ್ವನಿ;: EDಯಿಂದ 1.53 ಕೋ.ರೂ. ಮೌಲ್ಯದ ಆಸ್ತಿ ಮುಟ್ಟುಗೋಲು

ಬೆಂಗಳೂರು: ಪೊಲೀಸ್ ಸಬ್‌ ಇನ್ಸ್‌ಪೆಕ್ಟರ್ (ಪಿಎಸ್‌ಐ) ನೇಮಕಾತಿ ಹಗರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ED) 1.53 ಕೋಟಿ ರೂ. ಮೌಲ್ಯದ ಸ್ಥಿರ ಆಸ್ತಿಗಳನ್ನು ತಾತ್ಕಾಲಿಕವಾಗಿ ಮುಟ್ಟುಗೋಲು ಹಾಕಿಕೊಂಡಿದೆ. 2002ರ ಹಣ ಅಕ್ರಮ ವರ್ಗಾವಣೆ ತಡೆ ಕಾಯ್ದೆ (ಪಿಎಂಎಲ್‌ಎ) ಅಡಿಯಲ್ಲಿ ಬೆಂಗಳೂರು ವಲಯ ಕಚೇರಿ ಈ ಕ್ರಮ ಕೈಗೊಂಡಿದೆ ಎಂದು ಇಡಿ ಶನಿವಾರ ಪ್ರಕಟಣೆಯಲ್ಲಿ ತಿಳಿಸಿದೆ. ಮುಟ್ಟುಗೋಲು ಹಾಕಿಕೊಂಡ ಆಸ್ತಿಗಳಲ್ಲಿ ಮಾಜಿ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ (ನೇಮಕಾತಿ) ಅಮೃತ್ ಪಾಲ್ ಹಾಗೂ ಮುಖ್ಯ ಕಾನ್‌ಸ್ಟೆಬಲ್ ಶ್ರೀಧರ್ ಹೆಚ್ ಅವರಿಗೆ ಸೇರಿದ ವಸತಿ ಆಸ್ತಿಗಳು ಸೇರಿವೆ. 2021–22ರ ಅವಧಿಯಲ್ಲಿ ನಡೆದ ಪಿಎಸ್‌ಐ ನೇಮಕಾತಿ ಪ್ರಕ್ರಿಯೆಯಲ್ಲಿ ಅಕ್ರಮ ನಡೆದಿದೆ ಎಂಬ ಆರೋಪಗಳ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ಕರ್ನಾಟಕ ಪೊಲೀಸ್ ನೇಮಕಾತಿ ಕೋಶವು 545 ಪಿಎಸ್‌ಐ ಹುದ್ದೆಗಳ ಭರ್ತಿಗೆ ಪರೀಕ್ಷೆ ನಡೆಸಿ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟಿಸಿದ್ದರೂ, ಬಳಿಕ ಪರೀಕ್ಷಾ ಪ್ರಕ್ರಿಯೆಯಲ್ಲಿ…

‘ಸರ್ಕಾರದ ಬೊಕ್ಕಸ ಖಾಲಿ ಎಂದು ಬಿಜೆಪಿ ಸುಳ್ಳು ಹಂಚುತ್ತಾ ತಿರುಗುತ್ತಿದೆ’: ಸಿದ್ದರಾಮಯ್ಯ ಕಿಡಿ

ಹುಬ್ಬಳ್ಳಿ: ಕೊಳೆಗೇರಿ ಜನರೂ ಮುಖ್ಯವಾಹಿನಿಗೆ ಬರಬೇಕು. ಇದಕ್ಕಾಗಿ ಇಷ್ಟು ಬೃಹತ್ ಪ್ರಮಾಣದಲ್ಲಿ ಮನೆ ವಿತರಣೆ ಮಾಡುತ್ತಿದ್ದೇವೆ. ನಮ್ಮ ಗ್ಯಾರಂಟಿ ಯೋಜನೆಗಳು ಇರುವುದೇ ಬಡವರನ್ನು ಮುಖ್ಯವಾಹಿನಿಗೆ ತರಲು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಹುಬ್ಬಳ್ಳಿಯಲ್ಲಿ ಅರ್ಹ ಫಲಾನುಭವಿಗಳಿಗೆ ನೂತನ ಮನೆಯ ಹಕ್ಕುಪತ್ರ ವಿತರಣಾ ಸಮಾರಂಭದಲ್ಲಿ ಮಾತನಾಡಿದ ಸಿಎಂ, ‘ನಾನು ಮೊದಲ ಬಾರಿ ಮುಖ್ಯಮಂತ್ರಿ ಆಗಿದ್ದಾಗ ನಮ್ಮ ಕಾಂಗ್ರೆಸ್ ಸರ್ಕಾರ 14,58,000 ಮನೆಗಳನ್ನು ಕಟ್ಟಿ ವಸತಿ ಕ್ರಾಂತಿ ಮಾಡಿದ್ದೆವು. ಎರಡನೇ ಬಾರಿ ಮುಖ್ಯಮಂತ್ರಿ ಆದ ಬಳಿಕ 2024 ರಲ್ಲಿ 36,789 ಮನೆಗಳನ್ನು ಮೊದಲನೇ ಹಂತದಲ್ಲಿ ವಿತರಿಸಿದ್ದ ನಮ್ಮ ಸರ್ಕಾರವು, ಈಗ ಎರಡನೇ ಹಂತದಲ್ಲಿ 45 ಸಾವಿರ ಮನೆಗಳನ್ನು ಹಂಚುತ್ತಿದೆ’ ಎಂದರು. ನಾವು ಹೇಳಿದ್ದನ್ನೆಲ್ಲಾ ಮಾಡಿ ನುಡಿದಂತೆ ನಡೆದಿದ್ದೇವೆ. ಅವರು ಹೇಳಿದ್ದನ್ನು ಮಾಡದೆ ನಮ್ಮ ಬಗ್ಗೆ ಸುಳ್ಳು ಹೇಳಿಕೊಂಡು ತಿರುಗುತ್ತಿದ್ದಾರೆ. ವಿದೇಶದಿಂದ ಕಪ್ಪು ಹಣ ತಂದು ಎಲ್ಲರ ಖಾತೆಗೆ 15 ಲಕ್ಷ…

ರಾಜ್ಯದಲ್ಲೂ ಭಾಷಾ ಮಸೂದೆ ಜಾರಿಗೆ ಕಸರತ್ತು? ಎಲ್ಲಾ ಶಾಸಕರಿಗೆ CRF ನೀಡಿರುವ ಪ್ರಸ್ತಾವನೆ ಹೀಗಿದೆ.

ಬೆಂಗಳೂರು: ನರೇಗಾ (MGNREGA) ಹೆಸರು ಬದಲಾವಣೆ ವಿಚಾರದಲ್ಲಿ ಮೋದಿ ಸರ್ಕಾರದ ವಿರುದ್ಧ ಸಮರ ಸಾರಿರುವ ಕರ್ನಾಟಕದಲ್ಲಿರುವ ಕಾಂಗ್ರೆಸ್ ಸರ್ಕಾರ, ಇದೀಗ ಕನ್ನಡ ಭಾಷಾ ವಿಚಾರದಲ್ಲೂ ಕಾನೂನು ಜಾರಿ ಸಂಬಂಧ ತೆರೆಮರೆಯಲ್ಲಿ ಕಸರತ್ತು ನಡೆಸುತ್ತಿದೆ. ಈ ಸಂಬಂಧ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಲ್ಲಿ ಪರಿಶೀಲನೆ ನಡೆದಿದ್ದು, ಒಂದೊಮ್ಮೆ ಕನ್ನಡ ಸಂಬಂಧದ ಕಾನೂನು ಜಾರಿಗೆ ಬಂದರೆ, ಕೇರಳದ ಭಾಷಾ ಮಸೂದೆಗೆ ಪರ್ಯಾಯ ಕ್ರಮ ಎಂಬಂತಾಗಬಹುದು, ಜೊತೆಗೆ ಹಿಂದಿ ಏರಿಕೆಯ ವಿವಾದಕ್ಕೂ ತೆರೆ ಬೀಳುವ ಸಾಧ್ಯತೆಗಳಿವೆ. ಹಿಂದಿ ಭಾಷಾ ಏರಿಕೆ ವಿಚಾರದಲ್ಲಿ ದಕ್ಷಿಣ ಭಾರತದ ರಾಜ್ಯಗಳ ನಿಲುವು ಒಂದೇ ರೀತಿ ಇದ್ದು, ಎಲ್ಲಾ ರಾಜಕೀಯ ಪಕ್ಷಗಳೂ ಮಾತೃ ಭಾಷೆಯ ಬಗ್ಗೆ ಪ್ರತಿಪಾದಿಸುತ್ತಿವೆ. ಇದಕ್ಕೆ ಪರ್ಯಾಯ ಎಂಬಂತೆ ಮಾನವ ಹಕ್ಕುಗಳ ಹೋರಾಟದಲ್ಲಿ ಮುಂಚೂಣಿಯಲ್ಲಿರುವ ‘ಸಿಟಿಜನ್ ರೈಟ್ಸ್ ಫೌಂಡೇಷನ್ (CRF)’ ಕಾರ್ಯದರ್ಶಿ ಜಯಪ್ರಕಾಶ್ ಅವರು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳಿಗೆ 2025ರ ಏಪ್ರಿಲ್ ಹಾಗೂ…

ಸ್ಥಳೀಯರಿಗೆ ಜಾಗತಿಕ ವೃತ್ತಿ ಅವಕಾಶ ಒದಗಿಸಲು ಆಸ್ಟ್ರೇಲಿಯ ಜೊತೆ ಜಿಟಿಸಿಸಿ ಒಪ್ಪಂದ

ಬೆಂಗಳೂರು: ಕೌಶಲ್ಯ ತರಬೇತಿ ಪಡೆದಿರುವ ಕರ್ನಾಟಕದ ಪ್ರತಿಭಾನ್ವಿತರಿಗೆ ಜಾಗತಿಕ ಮಟ್ಟದಲ್ಲಿ ಉದ್ಯೋಗ ಅವಕಾಶಗಳನ್ನು ಒದಗಿಸುವ ನಿಟ್ಟಿನಲ್ಲಿ ಸರ್ಕಾರಿ ಉಪಕರಣ ಮತ್ತು ತರಬೇತಿ ಕೇಂದ್ರ (ಜಿಟಿಟಿಸಿ) ಈಗ ಆಸ್ಟ್ರೇಲಿಯಾದ ಜೊತೆ ಒಪ್ಪಂದಕ್ಕೆ ಸಹಿ ಹಾಕಿದೆ. ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಜೀವನೋಪಾಯ ಸಚಿವ ಡಾ. ಶರಣಪ್ರಕಾಶ ಆರ್. ಪಾಟೀಲ್ ಸಮ್ಮುಖದಲ್ಲಿ ಜಿಟಿಟಿಸಿ ವ್ಯವಸ್ಥಾಪಕ ನಿರ್ದೇಶಕ ಸಿದ್ದಲಿಂಗಪ್ಪ ಪೂಜಾರಿ ಮತ್ತು ವರ್ಕ್‌ ಇನಿಶಿಯೇಟಿವ್ಸ್‌ನ ಸ್ಥಾಪಕ ಮತ್ತು ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಕ್ರಿಸ್ ಕಾರ್ಮನ್ ಗುರುವಾರ ವಿಕಾಸಸೌಧದಲ್ಲಿ ಒಪ್ಪಂದಕ್ಕೆ ಸಹಿ ಹಾಕಿದರು. ಆಸ್ಟ್ರೇಲಿಯಾದಲ್ಲಿ ಕೌಶಲ್ಯಭರಿತ ಉದ್ಯೋಗಿಗಳ ಕೊರತೆಯನ್ನು ನೀಗಿಸಲು ಮತ್ತು ಕರ್ನಾಟಕದ ಕೌಶಲ್ಯಪೂರ್ಣ ಕಾರ್ಯಪಡೆಗೆ ಜಾಗತಿಕ ವೃತ್ತಿ ಮಾರ್ಗ ಸೃಷ್ಟಿಸಲು ಈ ಕ್ರಮ ಕೈಗೊಳ್ಳಲಾಗಿದೆ. ಕರ್ನಾಟಕದ ವೃತ್ತಿಪರರು, ವ್ಯಾಪಾರಿಗಳು ಮತ್ತು ಸಮುದಾಯ ಕಾರ್ಯಕರ್ತರನ್ನು ಆಸ್ಟ್ರೇಲಿಯಾದ ಉದ್ಯೋಗದಾತರು ಸಂಪರ್ಕಸಲಿದ್ದಾರೆ. ನಿರ್ಮಾಣ, ಆರೋಗ್ಯ ರಕ್ಷಣೆ, ಉತ್ಪಾದನೆ ಮತ್ತು ತಂತ್ರಜ್ಞಾನದಂತಹ ಕ್ಷೇತ್ರಗಳಲ್ಲಿ ಅವಕಾಶಗಳು ಸಿಗಲಿದೆ. ಈ ಪಾಲುದಾರಿಕೆಯಡಿ…

ಉಡುಪಿ ಪರ್ಯಾಯ ಮಹೋತ್ಸವದಲ್ಲಿ ಸಾಂಸ್ಕೃತಿಕ ದಾಖಲೆ; ಒಂದೇ ವೇದಿಕೆಯಲ್ಲಿ 40ಕ್ಕೂ ಹೆಚ್ಚು ಗಾಯಕರ ಸಂಗೀತ ರಸದೌತಣ

ಉಡುಪಿ: ಆಧ್ಯಾತ್ಮಿಕ ಪರಂಪರೆಯಲ್ಲಿ ದೇವರ ನಾಡು ಎಂದೇ ಪ್ರಸಿದ್ಧಿಯಾಗಿರುವ ಉಡುಪಿ ಪರ್ಯಾಯ ಮಹೋತ್ಸವ ದೇಶದ ಗಮನಸೆಳೆಯಿತು. ಶಿರೂರು ಪರ್ಯಾಯ 2026ರ ಶುಭ ಸಂದರ್ಭದಲ್ಲಿ ನಡೆದ ಸಾಂಸ್ಕೃತಿಕ ವೈಭವವು ಈ ಮಹಾಕೈಂಕರ್ಯಕ್ಕೆ ಆಕರ್ಷಣೆ ತುಂಬಿತು. ಶ್ರೀ ದುರ್ಗಾ ಮ್ಯೂಸಿಕ್ ಮೀಟ್ ತಂಡ ಆಯೋಜಿಸಿದ ವಿಶಿಷ್ಟ ಸಂಗೀತ ರಸಮಂಜರಿ ಕಾರ್ಯಕ್ರಮ ಪರ್ಯಾಯ ಇತಿಹಾಸದಲ್ಲೇ ವಿಶಿಷ್ಟ ಎನಿಸಿತು. ಉಡುಪಿ ಪರ್ಯಾಯದ ಇತಿಹಾಸದಲ್ಲೇ ಮೊದಲ ಬಾರಿಗೆ 40ಕ್ಕೂ ಹೆಚ್ಚು ಹವ್ಯಾಸಿ ಗಾಯಕರನ್ನು ಒಂದೇ ವೇದಿಕೆಯಲ್ಲಿ ಕರೆತರಲಾಗಿತ್ತು, 70ಕ್ಕೂ ಹೆಚ್ಚು ಹಾಡುಗಳು ಸಂಗೀತಾಸಕ್ತರ ಮನಸೂರೆಗೊಳಿಸಿತು. ಒಂದೇ ವೇದಿಕೆಯಲ್ಲಿ ಇಷ್ಟು ಸಂಖ್ಯೆಯ ಗಾಯಕರ ಸಮ್ಮಿಲನವು ಸಂಸ್ಕೃತಿಕ ವೈಭವಕ್ಕೆ ಸಾಕ್ಷಿಯಾಯಿತು. ಶ್ರೀಕೃಷ್ಣನ ನಾಡಿನಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಹೊಸ ಪ್ರತಿಭೆಗಳು ತಮ್ಮ ಗಾಯನ ಸಾಮರ್ಥ್ಯವನ್ನು ಪ್ರದರ್ಶಿಸಿದ್ದು ವಿಶೇಷ. ಪ್ರಸಾದ್ ನೇತ್ರಾಲಯ, ಯುನೈಟೆಡ್ ರೆಡಿಮಿಕ್ಸ್ ಕಾಂಕ್ರೀಟ್ ಕಂಪನಿ ಹಾಗೂ ಯೋಶಿಕಾ ಕನ್ಸಕ್ಷನ್ ಮತ್ತು ಫ್ಯಾಬ್ರಿಕೇಶನ್ಸ್ ಸಂಸ್ಥೆಗಳ ಪ್ರಾಯೋಜಕತ್ವದಲ್ಲಿ ನಡೆದ…

ಉಡುಪಿ ಪರ್ಯಾಯ ಮಹೋತ್ಸವದಲ್ಲಿ ಕೇಸರಿ ಧ್ವಜ ನಿಶಾನೆ ತೋರಿದ ಡಿಸಿ ಅಮಾನತಿಗೆ ಕಾಂಗ್ರೆಸ್ ನಾಯಕರ ಆಗ್ರಹ

ಉಡುಪಿ: ಉಡುಪಿ ಪರ್ಯಾಯ ಮಹೋತ್ಸವದಲ್ಲಿ ಕೇಸರಿ ಧ್ವಜ ನಿಶಾನೆ ತೋರಿದ ಜಿಲ್ಲಾಧಿಕಾರಿಯನ್ನು ಅಮಾನತುಗೊಳಿಸುವಂತೆ ಕಾಂಗ್ರೆಸ್ ನಾಯಕರು ಸರ್ಕಾರಕ್ಕೆ ಮನವಿ ಸಲ್ಲಿಸಿದ್ದಾರೆ. ಕಾಂಗ್ರೆಸ್ ನಾಯಕರ ಈ ನಡೆಯನ್ನು ಬಿಜೆಪಿ ಕಟುವಾಗಿ ಟೀಕಿಸಿದೆ. ನೂರಾರು ವರ್ಷಗಳ ಇತಿಹಾಸವಿರುವ ಉಡುಪಿ ಪರ್ಯಾಯ ಮಹೋತ್ಸವದ ವೇಳೆ ಜಿಲ್ಲಾಧಿಕಾರಿಗಳು ನಗರಸಭೆಯ ಆಡಳಿತಾಧಿಕಾರಿಯಾಗಿ ಹಿಂದೂ ಸಂಪ್ರದಾಯದಂತೆ ಕೇಸರಿ ಧ್ವಜ ನಿಶಾನೆ ತೋರುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದ್ದಕ್ಕೆ ಜಿಲ್ಲಾಧಿಕಾರಿಗಳನ್ನು ಅಮಾನತುಗೊಳಿಸುವಂತೆ ಉಡುಪಿ ಕಾಂಗ್ರೆಸ್ ಪಕ್ಷವು ಸರ್ಕಾರಕ್ಕೆ ಮನವಿ ಮಾಡಿಕೊಂಡಿರುವುದು ಕಾಂಗ್ರೆಸ್ಸಿನ ಹಿಂದೂ ವಿರೋಧಿ ನೀತಿಗೆ ಹಿಡಿದ ಕೈಗನ್ನಡಿಯಾಗಿದೆ ಎಂದು ಬಿಜೆಪಿ ಆರೋಪಿಸಿದೆ. ಕಾಂಗ್ರೆಸ್‌ ಪಕ್ಷವು ತನ್ನ ಓಲೈಕೆ ರಾಜಕಾರಣಕ್ಕಾಗಿ ಬಹುಸಂಖ್ಯಾತ ಹಿಂದೂಗಳ ಪ್ರತಿ ಆಚರಣೆಗಳಿಗೆ ನಿರಂತರ ಅಡ್ಡಗಾಲು ಹಾಕುತ್ತಿದೆ ಎಂದು ಬಿಜೆಪಿ ಆರೋಪ ಮಾಡಿದೆ. ಉಡುಪಿ ಜಿಲ್ಲಾ ಕಾಂಗ್ರೆಸ್ ನಾಯಕರು ಸಿಎಂಗೆ ಬರೆದಿದ್ದಾರೆ ಎನ್ನಲಾದ ಪತ್ರದ ಪ್ರತಿಯನ್ನು ಸಾಮಾಜಿಕ ಮಾಧ್ಯಮ X ನಲ್ಲಿ ಹಂಚಿಕೊಂಡಿರುವ ಬಿಜೆಪಿ,…