ರಾಯಚೂರು ಬಳಿ ಭೀಕರ ಅಪಘಾತ; ಐವರು ದುರ್ಮರಣ

ರಾಯಚೂರು: ಸಿಂಧನೂರು ತಾಲೂಕಿನ ಕನ್ನಾರಿ ಕ್ರಾಸ್ ಬಳಿ ಲಾರಿ ಹಾಗೂ ಎರಡು ಗೂಡ್ಸ್ ವಾಹನಗಳ ನಡುವೆ ಸರಣಿ ಅಪಘಾತ ಸಂಭವಿಸಿದೆ. ಮಂಗಳವಾರ ಸಂಜೆ ಸಂಭವಿಸಿದ ಈ ಅಪಘಾತದಲ್ಲಿ ಐವರು ಮೃತಪಟ್ಟಿದ್ದಾರೆ. ಕುರಿ ಸಾಗಿಸುತ್ತಿದ್ದ ಬೊಲೆರೊ ಪಿಕಪ್ ವಾಹನ ಹಾಗೂ ಟಾಟಾ ಏಸ್ ಗೆ ನಡುವೆ ಡಿಕ್ಕಿ ಸಂಭವಿಸಿದೆ. ಈ ಭೀಕರ ಸರಣಿ ಅಪಘಾತದಲ್ಲಿ ಐವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಇಬ್ಬರು ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಾಗಿದ್ದಾರೆ.

ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷರಾಗಿ ಅರಣ್ಯ ಸಚಿವ ಈಶ್ವರ ಬಿ ಖಂಡ್ರೆ ಆಯ್ಕೆ

ಬೆಂಗಳೂರು: ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷರಾಗಿ ಅರಣ್ಯ ಸಚಿವ ಈಶ್ವರ ಬಿ ಖಂಡ್ರೆ ಆಯ್ಕೆಯಾಗಿದ್ದಾರೆ. ಮಾಜಿ ಸಚಿವ ಶಾಮನೂರು ಶಿವಶಂಕರಪ್ಪ ಅವರ ನಿಧನದಿಂದ ತೆರವಾಗಿದ್ದ ಸ್ಥಾನಕ್ಕೆ ವೀರಶೈವ ಲಿಂಗಾಯತ ಮಹಾಸಭಾದ ಮಹಾ ಪ್ರಧಾನ ಕಾರ್ಯದರ್ಶಿಯಾಗಿರುವ ಈಶ್ವರ ಬಿ ಖಂಡ್ರೆ ಅವರನ್ನು ಆಯ್ಕೆ ಮಾಡಲಾಗಿದೆ. ಮಂಗಳವಾರ ಬೆಂಗಳೂರಿನಲ್ಲಿ ನಡೆದ ಸಭಾದ ಕಾರ್ಯಕಾರಿಣಿ ಸಭೆಯಲ್ಲಿ ಈ ಬಗ್ಗೆ ನಿರ್ಣಯ ಕೈಗೊಳ್ಳಲಾಯಿತು ಎಂದು ಸಭಾದ ರಾಜ್ಯಾಧ್ಯಕ್ಷ ಶಂಕರ ಎಂ ಬಿದರಿ ಅವರು ತಿಳಿಸಿದ್ದಾರೆ.

‘ನಾನು ಜೆಡಿಎಸ್‌ನಲ್ಲಿಯೇ ಇದ್ದೇನೆ. ಎಲ್ಲಿಯೂ ಹೋಗುವುದಿಲ್ಲ’: ಜಿ.ಟಿ. ದೇವೇಗೌಡ

ಮೈಸೂರು: ರಾಜ್ಯ ಕಾಂಗ್ರೆಸ್‌ನಲ್ಲಿ ದಿನಕ್ಕೊಂದು ರಾಜಕೀಯ ಬೆಳವಣಿಗೆ ನಡೆಯುತ್ತಿರುವ ನಡುವೆ, ಜೆಡಿಎಸ್‌ನಲ್ಲೂ ಚರ್ಚೆಗಳು ತೀವ್ರಗೊಂಡಿವೆ. ಈ ಹಿನ್ನೆಲೆಯಲ್ಲಿ ಚಾಮುಂಡೇಶ್ವರಿ ಕ್ಷೇತ್ರದ ಶಾಸಕ ಜಿ.ಟಿ. ದೇವೇಗೌಡ ಅವರು ತಮ್ಮ ಪಕ್ಷ ನಿಷ್ಠೆಯನ್ನು ಸ್ಪಷ್ಟಪಡಿಸಿದ್ದು, “ನಾನು ಜೆಡಿಎಸ್‌ನಲ್ಲಿಯೇ ಇದ್ದೇನೆ. ಎಲ್ಲಿಯೂ ಹೋಗುವುದಿಲ್ಲ. ಮುಂದಿನ ಚುನಾವಣೆಯಲ್ಲೂ ಜೆಡಿಎಸ್‌ನಿಂದಲೇ ಸ್ಪರ್ಧಿಸುತ್ತೇನೆ” ಎಂದು ಹೇಳಿದ್ದಾರೆ. ನಾನು ಯಾವುದೇ ನಾಯಕರಿಗೂ ದ್ರೋಹ ಮಾಡಿಲ್ಲ ಎಂದು ಸ್ಪಷ್ಟಪಡಿಸಿದ ಅವರು, ಐದು ಬಾರಿ ಶಾಸಕನಾಗಿ ಆಯ್ಕೆಯಾಗಿದ್ದೇನೆ. ಇದರಲ್ಲಿ ಎರಡು ಬಾರಿ ಹುಣಸೂರು ಕ್ಷೇತ್ರದಿಂದ ಹಾಗೂ ಮೂರು ಬಾರಿ ಚಾಮುಂಡೇಶ್ವರಿ ಕ್ಷೇತ್ರದಿಂದ ಗೆಲುವು ಸಾಧಿಸಿದ್ದೇನೆ. ಜೆಡಿಎಸ್ ಪಕ್ಷದ ಸಂಘಟನೆಗಾಗಿ ಅನೇಕ ಕಾರ್ಯಕ್ರಮಗಳನ್ನು ನಡೆಸಿದ್ದು, ಈಗಲೂ ಪಕ್ಷದಿಂದ ದೂರ ಉಳಿದಿಲ್ಲ ಎಂದು ಹೇಳಿದರು. ಯಾರನ್ನೂ ಟೀಕಿಸದೆ, ಕ್ಷೇತ್ರದ ಅಭಿವೃದ್ಧಿ ಕೆಲಸಗಳಲ್ಲಿಯೇ ತೊಡಗಿಸಿಕೊಂಡಿದ್ದೇನೆ. ಜೆಡಿಎಸ್ ಪಕ್ಷವನ್ನು ಕಟ್ಟುವಲ್ಲಿ ನಾನು ವಹಿಸಿದ ಪಾತ್ರದ ಬಗ್ಗೆ ಹಿರಿಯ ನಾಯಕ ಹೆಚ್.ಡಿ. ದೇವೇಗೌಡ ಹಾಗೂ ಮಾಜಿ ಮುಖ್ಯಮಂತ್ರಿ…

ಎಐಸಿಐಸಿ ಹೋರಾಟಕ್ಕೆ ರಾಜ್ಯದ ಸಾಥ್.. ಮಂಗಳೂರಿನಲ್ಲಿ ಮೊದಲ ಲೀಗಲ್ ಬ್ಯಾಂಕ್ ಅಸ್ತಿತ್ವಕ್ಕೆ

ಮಂಗಳೂರು: ಪ್ರದೇಶ ಕಾಂಗ್ರೆಸ್ ಪಕ್ಷ ಇದೀಗ ಹೊಸ ಮನ್ವಂತರಕ್ಕೆ ಮುನ್ನುಡಿ ಬರೆದಿದೆ. ಕೇಂದ್ರದ ವಿರುದ್ಧ ‘ಓಟ್ ಚೋರಿ’ ಅಭಿಯಾನವನ್ನು ಬಿರುಸುಗೊಳಿಸಿರುವ ಕಾಂಗ್ರೆಸ್ ಪಕ್ಷ ಇದೀಗ ತನ್ನ ಈ ಹೋರಾಟವನ್ನು ಚುರುಕುಗೊಳಿಸಲು ‘ಲೀಗಲ್ ಬ್ಯಾಂಕ್’ ಅಸ್ತಿತ್ವಕ್ಕೆ ತಂದಿದೆ. ಲೋಕಸಭೆಯ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಅವರ ಪರಿಕಲ್ಪನೆಯಂತೆ ಕರ್ನಾಟಕದಲ್ಲಿ ‘ಲೀಗಲ್ ಬ್ಯಾಂಕ್’ ಅಸ್ತಿತ್ವಕ್ಕೆ ಬಂದಿದೆ. ಪಕ್ಷ ಸಂಘಟನೆಗೆ ಕಾನೂನು ಶಕ್ತಿ ತುಂಬುವ ಉದ್ದೇಶದಿಂದ ಈ ವ್ಯವಸ್ಥೆಯನ್ನು ಆರಂಭಿಸಲಾಗಿದ್ದು, ದಕ್ಷಿಣ ಭಾರತದಲ್ಲೇ ಮೊದಲೆಂಬಂತೆ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಘಟಕ ಈ ‘ಲೀಗಲ್ ಬ್ಯಾಂಕ್’ ಸ್ಥಾಪಿಸಿ ಗಮನಸೆಳೆದಿದೆ. ಸುಮಾರು 250 ವಕೀಲರ ತಂಡ ಈ ‘ಲೀಗಲ್ ಬ್ಯಾಂಕ್’ ನಲ್ಲಿ ಕೈಜೋಡಿಸಿರುವುದು ವಿಶೇಷ. ಕೇಂದ್ರದ ವಿರುದ್ಧ ಪರಿಣಾಮಕಾರಿ ಹೋರಾಟ ನಡೆಸಲು ಅನುಕೂಲವಾಗುವಂತೆ ಎಲ್ಲಾ ಪ್ರಾದೇಶಿಕ ಸಮಿತಿಗಳು (PCC) ಹಾಗೂ ಜಿಲ್ಲಾ ಸಮಿತಿ (PCC), ಪ್ರತೀ ವಿಧಾನಸಭಾ ಕ್ಷೇತ್ರಗಳಲ್ಲಿ ‘ಲೀಗಲ್ ಬ್ಯಾಂಕ್’ ಸ್ಥಾಪಿಸಬೇಕೆಂಬುದು…

ಬೆಳೆ ವಿಮೆ ಯೋಜನೆ ಅನುಷ್ಠಾನದಲ್ಲಿ ರಾಜ್ಯಕ್ಕೆ ದ್ವೀತಿಯ ಸ್ಥಾನ

ಬೆಂಗಳೂರು: 2024-25 ನೇ ಸಾಲಿನ ಮುಂಗಾರು ಹಾಗೂ ಹಿಂಗಾರು ಬೆಳೆಗಳಿಗೆ ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆಯನ್ನು (#PMFBY) ಪರಿಣಾಮಕಾರಿಯಾಗಿ ಅನುಷ್ಠಾನ ಮಾಡುವಲ್ಲಿ, ದೊಡ್ಡ ರಾಜ್ಯಗಳ ಪಟ್ಟಿಯಲ್ಲಿ ಕರ್ನಾಟಕ ದ್ವೀತಿಯ ಸ್ಥಾನ ಪಡೆದಿರುವುದು ಹೆಮ್ಮೆಯ ಸಂಗತಿಯಾಗಿದೆ. ಬೆಳೆ ವಿಮೆ ಅನುಷ್ಠಾನ ಮಾಡುವಲ್ಲಿ ವಿವಿಧ ಆಯಾಮಗಳ ಪರಿಣಾಮಕಾರಿ ಅನುಷ್ಠಾನ ಹಾಗೂ ನೂತನ ತಂತ್ರಜ್ಞಾನಗಳ ಅಳವಡಿಕೆಯ ಮೂಲಕ ದ್ವಿತೀಯ ಸ್ಥಾನದ ಪಡೆಯುವ ಮೂಲಕ ರಾಜ್ಯ ಕೃಷಿ ಇಲಾಖೆಯ ಹಿರಿಮೆ ಹೆಚ್ಚಿಸಿದೆ.. ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಬಿಮಾ (ವಿಮಾ) ಯೋಜನೆಯನ್ನು ರಾಜ್ಯದಾದ್ಯಂತ ಪರಿಣಾಮಕಾರಿಯಾಗಿ ಜಾರಿಗೆ ತಂದು ರೈತರನ್ನು ಅನಿಶ್ಚಿತ ನಷ್ಟದಿಂದ ಪಾರು ಮಾಡುವ ದಿಶೆಯಲ್ಲಿ ನಮ್ಮ ಕೃಷಿ ಇಲಾಖೆ ಹಾಗೂ ಸ್ಥಳೀಯ ಕೃಷಿ ಅಧಿಕಾರಿಗಳು ನಿರಂತರವಾಗಿ ಶ್ರಮಿಸುತ್ತಿದ್ದಾರೆ. ಕೃಷಿ ಸಚಿವ ಎನ್.ಚಲುವರಾಯಸ್ವಾಮಿಯವರ ನೇತೃತ್ವ ಹಾಗೂ ವಿಶೇಷ ಕಾಳಜಿಯಿಂದ ರಾಜ್ಯ ಕೃಷಿ ಇಲಾಖೆ ಮಹತ್ವದ ಸಾಧನೆ ಮಾಡಿದ್ದು, ಕೇಂದ್ರ ಸರ್ಕಾರ, ರಾಜ್ಯ…

ಬಿಜೆಪಿ ನಾಯಕರಿಗೆ ಪ್ರಜಾಪ್ರಭುತ್ವದಲ್ಲಿ ನಂಬಿಕೆಯಿಲ್ಲ: ಸಿದ್ದರಾಮಯ್ಯ

ಮೈಸೂರು: ಬಿಜೆಪಿ ನಾಯಕರಿಗೆ ಪ್ರಜಾಪ್ರಭುತ್ವದಲ್ಲಿ ನಂಬಿಕೆಯಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಟೀಕಿಸಿದ್ದಾರೆ. ಮೈಸೂರು ವಿಮಾನ ನಿಲ್ದಾಣದಲ್ಲಿ ಮಾಧ್ಯಮ ಪ್ರತಿನಿಧಿಗಳ ಜೆಫ್ಟ್ ಮಾತನಾಡಿದ ಸಿದ್ದರಾಮಯ್ಯ, ಹಿಂದೆ ಬಿಜೆಪಿ ಅವರು ಅಧಿಕಾರದಲ್ಲಿದ್ದಾಗ ಯಾವುದಾದರೂ ಒಂದು ಪ್ರಕರಣವನ್ನಾದರೂ ಸಿಬಿಐ ತನಿಖೆಗೆ ಕೊಟ್ಟಿದ್ದರೆ ಈಗ ನಮ್ಮನ್ನು ಕೇಳಬಹುದಿತ್ತು. ನಾವು ಅಧಿಕಾರದಲ್ಲಿದ್ದಾಗ ಸುಮಾರು ಏಳೆಂಟು ಪ್ರಕರಣಗಳನ್ನು ಸಿಬಿಐಗೆ ವಹಿಸಿದ್ದೆವು ಎಂದರು. ಶ್ರೀರಾಮುಲು, ಜನಾರ್ಧನ ರೆಡ್ಡಿಯವರು ಕಾಂಗ್ರೆಸ್ ನಾಯಕರ ಬಗ್ಗೆ ತುಚ್ಛವಾಗಿ ಮಾತನಾಡುತ್ತಾರೆ. ಬಿಜೆಪಿಯವರಿಗೆ ಸಂಸ್ಕೃತಿ ಇಲ್ಲ ಎನ್ನುವುದು ಇದರಿಂದ ಸ್ಪಷ್ಟವಾಗಿ ಗೊತ್ತಾಗುತ್ತದೆ. ಜನಾರ್ಧನ ರೆಡ್ಡಿಗೆ ಬಳ್ಳಾರಿಗೆ ಬರಬಾರದೆಂದು ಏಕೆ ಹೇಳಿದ್ದರು? ರಿಪಬ್ಲಿಕ್ ಆಫ್ ಬಳ್ಳಾರಿ ಎಂದು ವರ್ತಿಸಿದವರು ಯಾರು? ಲೋಕಾಯುಕ್ತರಾಗಿದ್ದ ನ್ಯಾಯಮೂರ್ತಿ ಸಂತೋಷ್ ಹೆಗಡೆ ಅವರು ಈ ಬಗ್ಗೆ ವರದಿ ಕೊಟ್ಟಿದ್ದರು ಎಂದು ನೆನಪಿಸಿದರು. ಲೋಕಸಭಾ ಚುನಾವಣೆ ಪ್ರಚಾರಕ್ಕೆ ಹೋದಾಗ ಬಳ್ಳಾರಿಯಲ್ಲಿ ನಮಗೆ ಸಾರ್ವಜನಿಕ ಸಭೆ ನಡೆಸಲು ಎಲ್ಲೂ ಸ್ಥಳವನ್ನು ನೀಡಲಿಲ್ಲ. ಕೊನೆಗೆ ಕುರುಬರ…

ಧಾರ್ಮಿಕ ಜೊತೆಗೆ ಜ್ಞಾನ, ಅನ್ನದಾಸೋಹಕ್ಕೂ ಸುತ್ತೂರು ಮಠ ಮಹತ್ವ ನೀಡಿದೆ: ಸಿಎಂ

ಮೈಸೂರು: ಸುತ್ತೂರು ಜಾತ್ರಾ ಮಹೋತ್ಸವ ಅನೇಕ ವರ್ಷಗಳಿಂದ ನಡೆದುಕೊಂಡು ಬರುತ್ತಿದೆ. ಒಂದು ಸಾವಿರ ವರ್ಷಗಳಿಗೂ ಹೆಚ್ಚು ಇತಿಹಾಸವಿರುವ ಸುತ್ತೂರು ಮಠ ಶಿಕ್ಷಣಕ್ಕೆ ಮೊದಲಿನಿಂದಲೂ ಹೆಚ್ಚು ಒತ್ತು ಕೊಡುತ್ತಾ ಬಂದಿದೆ. ಧಾರ್ಮಿಕವಾಗಿ ತೊಡಗಿಸಿಕೊಂಡಿರುವ ಜೊತೆಗೆ ಜ್ಞಾನ ಮತ್ತು ಅನ್ನದಾಸೋಹಕ್ಕೆ ಮಹತ್ವ ನೀಡಿದೆ ಎಂದು ಸಿಎಂ ಸಿದ್ದರಾಮಯ್ಯ ಬಣ್ಣಿಸಿದ್ದಾರೆ. ಜಗದ್ಗುರು ಶ್ರೀ ಶಿವರಾತ್ರಿಶ್ವರ ಶಿವಯೋಗೀಗಳವರ ಸುತ್ತೂರು ಜಾತ್ರಾ ಮಹೋತ್ಸವ ಅಂಗವಾಗಿ ಆಯೋಜಿಸಿದ್ದ ಕೃಷಿ ವಿಚಾರಸಂಕಿರಣದ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಅವರು, ಶಿಕ್ಷಣದಿಂದ ಮಾತ್ರ ಸ್ವಾಭಿಮಾನ ಬೆಳೆಯಲು ಸಾಧ್ಯವಾಗುವುದರಿಂದ ಶಿಕ್ಷಣವೇ ಬಹಳ ಮುಖ್ಯ. ನೂರಕ್ಕೆ ಶೇ.75% ಜನ ಶಿಕ್ಷಣ ಸಂಸ್ಕೃತಿಯಿಂದ ವಂಚಿತರಾಗಿದ್ದರು. ಅದನ್ನು ಮನಗಂಡ ಮಠ ಗ್ರಾಮೀಣ ಪ್ರದೇಶದಲ್ಲಿ ಶಿಕ್ಷಣ ಸಂಸ್ಥೆಗಳನ್ನು ತೆರೆದಿದೆ ಎಂದರು. ದಯೆಯೇ ಧರ್ಮದ ಮೂಲವಯ್ಯ, ದಯೆಯಿಲ್ಲದ ಧರ್ಮ ಯಾವುದಯ್ಯ ಎಂದು ಬಸವಣ್ಣ ಧರ್ಮದ ಕುರಿತು ವ್ಯಾಖ್ಯಾನ ಮಾಡಿದ್ದಾರೆ. ಎಲ್ಲ ಧರ್ಮಕ್ಕಿಂತ ಮಾನವ ಧರ್ಮ ಮೇಲು ಎಂದು ಅರ್ಥ…

ಪೊಳಲಿ ಘಟನೆ ಬೆನ್ನಲ್ಲೇ ಇದೀಗ ಅರಕಲಗೂಡು ಸರದಿ, ವೃದ್ಧ ದಂಪತಿ ಮೇಲೆ ಫೈನಾನ್ಸ್ ಕಂಪನಿಯ ಕ್ರೌರ್ಯ

ಹಾಸನ: ಇತ್ತೀಚಿಗೆ ದಕ್ಷಿಣ ಕನ್ನಡ ಜಿಲ್ಲೆ ಪೊಳಲಿಯ ಸಹಕಾರ ಸಂಘದ ಅಧಿಕಾರಿಗಳು ಬಲವಂತದ ಸಾಲ ವಸೂಲಾತಿಗೆ ಯತ್ನಿಸಿ ವೃದ್ದೆಗೆ ಕಿರುಕುಳ ನೀಡಿದ್ದ ಬಗ್ಗೆ FIR ದಾಖಲಾಗಿತ್ತು. ಆ ಘಟನೆ ಬೆನ್ನಲ್ಲೇ ಇದೀಗ ಹಾಸನ ಜಿಲ್ಲೆಯಲ್ಲೂ ಖಾಸಗಿ ಫೈನಾನ್ಸ್​​ಗಳ ಹಾವಳಿ ಬಗ್ಗೆ ವರದಿಯಾಗಿದೆ. ಖಾಸಗಿ ಫೈನಾನ್ಸ್​​ ಕಡೆಯವರು ಮನೆಗೆ ಬೀಗ ಜಡಿದ ಪರಿಣಾಮ ವೃದ್ಧ ದಂಪತಿ ಬೀದಿಗೆ ಬಿದ್ದಿರುವ ಘಟನೆ ಹಾಸನ ಜಿಲ್ಲೆ ಕೊರಟಕೆರೆ ಗ್ರಾಮದಲ್ಲಿ ನಡೆದಿದೆ ಎಂಬ ವರದಿ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಸಾಲ ತೀರಿಸಿಲ್ಲ ಎಂಬಕರಣ ನೀಡಿ ಖಾಸಗಿ ಫೈನಾನ್ಸ್ ಕಡೆಯವರೆನ್ನಲಾದ ಗುಂಪು ಅರಕಲಗೂಡು ತಾಲೂಕಿನ ಕೊರಟಕೆರೆಯ ವೃದ್ಧ ದಂಪತಿಗಳಾದ ಸಣ್ಣಯ್ಯ (80) ಮತ್ತು ಜಯಮ್ಮ (75) ಎಂಬವರನ್ನು ಮನೆಯಿಂದ ಹೊರಹಾಕಿದ್ದಾರೆ ಎನ್ನಲಾಗಿದೆ. ಮಗನ ಕ್ಯಾನ್ಸರ್ ಚಿಕಿತ್ಸೆಗಾಗಿ ಖಾಸಗಿ ಫೈನಾನ್ಸ್’ನಿಂದ 2 ಲಕ್ಷ ರೂಪಾಯಿ ಸಾಲವನ್ನು ಪಡೆಯಲಾಗಿತ್ತು ಎನ್ನಲಾಗಿದೆ. ಸಲ ಮರುಪಾವತಿಸದ ಹಿನ್ನೆಲೆ ಕಾನೂನು ಕ್ರಮ…

SNA–SPARSH ಪಾವತಿ ವಿಳಂಬಕ್ಕೆ ತಾಂತ್ರಿಕ ಕಾರಣ; ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಸ್ಪಷ್ಟನೆ

ಬೆಂಗಳೂರು: ಕೇಂದ್ರ ಸರ್ಕಾರ 2025–26ರ ಹಣಕಾಸು ವರ್ಷದ ಮಧ್ಯದಲ್ಲಿ ಜಾರಿಗೆ ತಂದ SNA–SPARSH ಪಾವತಿ ವ್ಯವಸ್ಥೆ ನವೀಕರಣದ ಹಿನ್ನೆಲೆಯಲ್ಲಿ, ರಾಷ್ಟ್ರೀಯ ಆರೋಗ್ಯ ಮಿಷನ್‌ (NHM) ಸಿಬ್ಬಂದಿಗೆ ಎರಡು ತಿಂಗಳ ಕಾಲ ವೇತನ ಪಾವತಿ ವಿಳಂಬವಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಸ್ಪಷ್ಟಪಡಿಸಿದ್ದಾರೆ. ಹೊಸ ವ್ಯವಸ್ಥೆ ಜಾರಿಗೆ ಬಂದ ನಂತರ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಪಾವತಿ ಪ್ರಕ್ರಿಯೆ ಮತ್ತು ತಾಂತ್ರಿಕ ವ್ಯವಸ್ಥೆಗಳಲ್ಲಿ ಬದಲಾವಣೆ ಹಾಗೂ ಮರುಹೊಂದಾಣಿಕೆ ಅಗತ್ಯವಾಯಿತು. ಈ ವ್ಯವಸ್ಥೆಯಡಿಯಲ್ಲಿ ಕೇಂದ್ರ ಸರ್ಕಾರದ ಅನುದಾನ ಬಂದ ನಂತರವೇ ರಾಜ್ಯ ಸರ್ಕಾರದಿಂದ ವೇತನ ಪಾವತಿ ಪ್ರಕ್ರಿಯೆ ನಡೆಸಲು ಸಾಧ್ಯವಾಗುತ್ತಿತ್ತು. ಇದರಿಂದ ಪಾವತಿಯಲ್ಲಿ ಅಡಚಣೆ ಉಂಟಾಯಿತು ಎಂದು ಅವರು ತಿಳಿಸಿದ್ದಾರೆ. ವೇತನ ಪಾವತಿಗಾಗಿ ಕೇಂದ್ರ ಸರ್ಕಾರವು ಜನವರಿ 8, 2026ರಂದು ₹175.75 ಕೋಟಿ ಅನುದಾನ ಬಿಡುಗಡೆ ಮಾಡಿದ್ದು, ಈ ಮೊತ್ತವನ್ನು ಇದೀಗ ಹಂತ ಹಂತವಾಗಿ ಜಿಲ್ಲೆಗಳಿಗೆ ವರ್ಗಾಯಿಸಲಾಗುತ್ತಿದೆ ಎಂದು…

ಸಿಎಂ ತವರಲ್ಲೇ ಸರ್ಕಾರಿ ಮಹಿಳಾ ಅಧಿಕಾರಿಯ ಮೇಲೆ ಹಲ್ಲೆ..

ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್‌ ಆಡಳಿತಕ್ಕೆ ಬಂದ ನಂತರ ಸರ್ಕಾರಿ ಅಧಿಕಾರಿಗಳ ಮೇಲೆ ಹಲ್ಲೆ, ಕೊಲೆ ಬೆದರಿಕೆ ಸಾಮಾನ್ಯ ಎಂಬಂತಾಗಿದೆ ಎಂದು ಬಿಜೆಪಿ ದೂರಿದೆ. ಶಿಡ್ಲಘಟ್ಟದಲ್ಲಿ ಮಹಿಳಾ ಅಧಿಕಾರಿಯ ಮೇಲೆ ಕಾಂಗ್ರೆಸ್‌ ನಾಯಕನ ದಬ್ಬಾಳಿಕೆ ನಡೆದ ಎರಡೇ ದಿನದಲ್ಲಿ ಸಿಎಂ ಸಿದ್ದರಾಮಯ್ಯ ಅವರ ತವರು ಕ್ಷೇತ್ರವಾದ ವರುಣಾದಲ್ಲಿ ಸರ್ಕಾರಿ ಅಧಿಕಾರಿಯ ಮೇಲೆ ಹಲ್ಲೆ, ಕೊಲೆ ಬೆದರಿಕೆ ನಡೆದಿದೆ ಎಂದು ಬಿಜೆಪಿ ದೂರಿದೆ. ಘಟನೆಯ ವೀಡಿಯೊವನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿರುವ ಬಿಜೆಪಿ, ‘ಜಮೀನು ಪರಿಶೀಲನೆಗೆ ತೆರಳಿದ್ದ ಗ್ರಾಮ ಆಡಳಿತಾಧಿಕಾರಿ ಭವ್ಯಾ ಮತ್ತು ಗ್ರಾಮ ಸಹಾಯಕ ನವೀನ್ ಕುಮಾರ್ ಅವರಿಗೆ ಅವಾಚ್ಯ ಶಬ್ಧಗಳಿಂದ ನಿಂದಿಸಿ, ಕೊಲೆ ಬೆದರಿಕೆ ಹಾಕಿರುವ ಘಟನೆ ನಡೆದಿದೆ. ಸಿದ್ದರಾಮಯ್ಯ ಅವರ ತವರು ಜಿಲ್ಲೆಯಲ್ಲೇ ಮಹಿಳಾ ಅಧಿಕಾರಿಗೆ ರಕ್ಷಣೆ ಇಲ್ಲವೆಂದರೆ, ರಾಜ್ಯದ ಉಳಿದೆಡೆ ಸಾಮಾನ್ಯ ಮಹಿಳೆಯರ ಗತಿಯೇನು? ಇದೇನಾ ನಿಮ್ಮ ಮಹಿಳಾ ರಕ್ಷಕ ಆಡಳಿತ? ಎಂದು ಸಿದ್ದರಾಮಯ್ಯ ಸರ್ಕಾರವನ್ನು…