ಕರ್ನಾಟಕ ವಿಧಾನ ಪರಿಷತ್‌ ಗೆ ನಾಲ್ವರ ಹೆಸರು ಅಂತಿಮ..

ಬೆಂಗಳೂರು: ಕರ್ನಾಟಕ ವಿಧಾನ ಪರಿಷತ್‌ನಲ್ಲಿ ಖಾಲಿ ಇರುವ ನಾಲ್ಕು ಸ್ಥಾನಗಳಿಗೆ ಕಾಂಗ್ರೆಸ್ ನಾಯಕರ ಹೆಸರುಗಳನ್ನು ಹೈಕಮಾಂಡ್ ಅಂತಿಮಗೊಳಿಸಿದೆ ಎನ್ನಲಾಗಿದೆ. ಈ ಹಿಂದೆ ಅಂತಿಮಗೊಳಿಸಲಾಗಿದ್ದ ಪಟ್ಟಿಯಿಂದ ಇಬ್ಬರನ್ನು ಕೈಬಿಟ್ಟು ಹೊಸಬರನ್ನು ಸೇರ್ಪಡೆ ಮಾಡಲಾಗಿದೆ. 2008 ರಲ್ಲಿ ಹುಬ್ಬಳ್ಳಿ ಪೂರ್ವ ಮೀಸಲು ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿ ಸೋಲನ್ನನುಭವಿಸಿದ್ದ ಎಪ್.ಎಚ್.ಜಕ್ಕಪ್ಪನವರಿಗೆ ಈ ಬಾರಿ ಮೇಲ್ಮನವಿ ಪ್ರವೇಶಿಸುವ ಅವಕಾಶ ಸಿಕ್ಕಿದೆ. ಅವರ ಜೊತೆಗೆ ಆರತಿ ಕೃಷ್ಣ, ಕೆಪಿಸಿಸಿ ಮಾಧ್ಯಮ ವಿಭಾಗದ ಮುಖ್ಯಸ್ಥ ರಮೇಶ್ ಬಾಬು ಹಾಗೂ ಪತ್ರಕರ್ತ ಶಿವಕುಮಾರ್ ಅವರನ್ನು ನಾಮ ನಿರ್ದೇಶನ ಮಾಡಲು ಕಾಂಗ್ರೆಸ್ ಹೈಕಮ್ಯಾಂಡ್ ಒಪ್ಪಿಗೆ ನೀಡಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

ಮೈಸೂರು ದಸರಾ: ಬಾನು ಮುಷ್ತಾಕ್ ಅವರಿಂದ ಉದ್ಘಾಟಿಸುವುದಕ್ಕೆ ರಾಜಮನೆತನದ ಆಕ್ಷೇಪ

ಬೆಂಗಳೂರು: ವಿಶ್ವವಿಖ್ಯಾತ ಮೈಸೂರು ದಸರಾ ಉದ್ಘಾಟನೆಗೆ ಪ್ರತಿಷ್ಠಿತ ಬೂಕರ್ ಪ್ರಶಸ್ತಿ ವಿಜೇತ ಸಾಹಿತಿ ಬಾನು ಮುಷ್ತಾಕ್ ಅವರನ್ನು ರಾಜ್ಯ ಸರ್ಕಾರ ಆಯ್ಕೆ ಮಾಡಿರುವ ವಿಚಾರ ಇದೀಗ ರಾಜಕೀಯ ವಾಕ್ಸಮರಕ್ಕೆ ಕಾರಣವಾಗಿದೆ. ಆಡಳಿತರೂಢ ಕಾಂಗ್ರೆಸ್ ನಾಯಕರ ನಡೆಗೆ ಪ್ರತಿಪಕ್ಷ ಬಿಜೆಪಿ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಇದೇ ವೇಳೆ, ಮೈಸೂರು ರಾಜಮನೆತನ ಕೂಡಾ ದಸರಾ ಉದ್ಘಾಟನೆಗೆ ಸಾಹಿತಿ ಬಾನು ಮುಷ್ತಾಕ್ ಅವರನ್ನು ಆಯ್ಕೆ ಮಾಡಿರುವ ಬಗ್ಗೆ ಬೇಸರ ವ್ಯಕ್ತಪಡಿಸಿದೆ. ಸರ್ಕಾರದ ನಡೆಯನ್ನು ರಾಜವಂಶಸ್ಥರೂ ಆದ ಮೈಸೂರು ಸಂಸದ ಯಧುವೀರ್ ಬಲವಾಗಿ ವಿರೋಧಿಸಿದ್ದಾರೆ. ‘ಭಾನು ಮುಷ್ತಾಕ್ ಅವರು ಕನ್ನಡ ಸಾಹಿತ್ಯ ಲೋಕದ ವಿಶಿಷ್ಟ ಬರಹಗಾರ್ತಿ ಮತ್ತು ಅಂತರಾಷ್ಟ್ರೀಯ ಬೂಕರ್ ಪ್ರಶಸ್ತಿಯನ್ನು ಗೆದ್ದ ಮೊದಲ ಕನ್ನಡ ಲೇಖಕಿಯಾಗಿ, ಕನ್ನಡ ಸಾಹಿತ್ಯ ಲೋಕಕ್ಕೆ ಅಪಾರ ಹೆಮ್ಮೆಯನ್ನು ತಂದಿದ್ದಾರೆ ನಿಜ ಆದರೆ ಈ ಹಿಂದೆ ಕನ್ನಡ ತಾಯಿ ಭುವನೇಶ್ವರಿಯ ಬಗ್ಗೆ ಅವರು ಕೆಲವು ಹೇಳಿಕೆಗಳನ್ನು ನೀಡಿರುವುದು…

60 ದಿನಗಳಲ್ಲಿ ಆರೋಪಪಟ್ಟಿ ಸಲ್ಲಿಕೆ ಕಡ್ಡಾಯ: ಸಿಎಂ ಎಚ್ಚರಿಕೆ

ಬೆಂಗಳೂರು: ಪರಿಶಿಷ್ಟ ಜಾತಿ–ಪಂಗಡಗಳ ಮೇಲೆ ನಡೆಯುತ್ತಿರುವ ದೌರ್ಜನ್ಯ ಪ್ರಕರಣಗಳಲ್ಲಿ ತನಿಖೆ ವಿಳಂಬವಾಗುತ್ತಿರುವುದರ ಬಗ್ಗೆ ಮುಖ್ಯಮಂತ್ರಿ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. 60 ದಿನಗಳ ಒಳಗೆ ಆರೋಪಪಟ್ಟಿ ಸಲ್ಲಿಸಬೇಕೆಂಬ ನಿಯಮ ಇದ್ದರೂ, ಕಳೆದ ಆರು ತಿಂಗಳಲ್ಲಿ ಕೇವಲ ಶೇಕಡಾ 84 ಪ್ರಕರಣಗಳಲ್ಲಿ ಮಾತ್ರ ನಿಯಮ ಪಾಲನೆಗೊಂಡಿರುವುದನ್ನು ಅವರು ಆಕ್ಷೇಪಿಸಿದರು. ಸೋಮವಾರ ನಡೆದ ಪರಿಶಿಷ್ಟ ಜಾತಿ/ಪಂಗಡಗಳ ರಾಜ್ಯ ಮಟ್ಟದ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸಭೆಯಲ್ಲಿ ಮಾತನಾಡಿದ ಅವರು, “ಪ್ರತಿ ಪ್ರಕರಣದಲ್ಲೂ 60 ದಿನಗಳಲ್ಲಿ ಆರೋಪಪಟ್ಟಿ ಸಲ್ಲಿಸಲೇಬೇಕು. ಪೊಲೀಸರು ಯಾವ ನೆಪಕ್ಕೂ ಜಾಗ ಬಿಡುವುದಿಲ್ಲ. ನ್ಯಾಯಾಲಯದಲ್ಲಿ ತಡೆ ಆದೇಶ ಇದ್ದರೆ ಅದನ್ನು ಕೂಡಲೇ ತೆರವುಗೊಳಿಸಿ ಪ್ರಕರಣ ಮುಂದುವರಿಸಬೇಕು” ಎಂದು ಅಧಿಕಾರಿಗಳಿಗೆ ಎಚ್ಚರಿಸಿದರು. ಸಭೆಯ ಮುಖ್ಯಾಂಶಗಳು: ರಾಜ್ಯದಲ್ಲಿ ದೌರ್ಜನ್ಯ ಪ್ರಕರಣಗಳ ತ್ವರಿತ ವಿಚಾರಣೆಗೆ 11 ವಿಶೇಷ ನ್ಯಾಯಾಲಯಗಳನ್ನು ಸ್ಥಾಪಿಸಲಾಗಿದೆ. ಶಿಕ್ಷೆಯ ಪ್ರಮಾಣ ಈಗ ಕೇವಲ ಶೇಕಡಾ 10ರಷ್ಟಿದೆ; ಇದು ಹೆಚ್ಚಾಗಬೇಕೆಂದು ಸಿಎಂ ಸೂಚನೆ.…

ಮತ್ತೆ ಚುನಾವಣೆಗೆ ನಿಲ್ಲಲ್ಲ: ವಿ.ಸೋಮಣ್ಣ

ತುಮಕೂರು: ಮುಂದಿನ ಚುನಾವಣೆಗಳಲ್ಲಿ ತಾವು ಸ್ಪರ್ಧಿಸುವ ಪ್ರಶ್ನೆಯೇ ಇಲ್ಲ ಎಂದು ಕೇಂದ್ರ ಸಚಿವ ವಿ.ಸೋಮಣ್ಣ ಸ್ಪಷ್ಟಪಡಿಸಿದ್ದಾರೆ. “ಮತ್ತೆ ಚುನಾವಣೆಗೆ ನಿಲ್ಲಬೇಕು ಎಂದು ದೇವರೇ ಬಂದು ಹೇಳಿದರೂ ನಾನು ಕೇಳುವುದಿಲ್ಲ” ಎಂದು ಶನಿವಾರ ಅವರು ತುಮಕೂರಿನಲ್ಲಿ ಸ್ಪಷ್ಟವಾಗಿ ಹೇಳಿದ್ದಾರೆ. ಇದೇ ಸಂದರ್ಭದಲ್ಲಿ ತುಮಕೂರು-ಬೆಂಗಳೂರು ನಾಲ್ಕು ಪಥದ ರೈಲು ಮಾರ್ಗಕ್ಕೆ ಸಂಬಂಧಿಸಿದ ಸಮೀಕ್ಷೆ ಪೂರ್ಣಗೊಂಡಿದ್ದು, ಡಿಪಿಆರ್ ತಯಾರಿಕೆ ಪ್ರಕ್ರಿಯೆ ಆರಂಭವಾಗಿದೆ ಎಂದರು. ಎನ್‌ಹೆಚ್‌-4ರ ತಿಮ್ಮರಾಜನಹಳ್ಳಿ ಅಭಿವೃದ್ಧಿ ಕಾರ್ಯಗಳ ಬಗ್ಗೆ ಕೆಐಡಿಬಿ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿರುವುದಾಗಿ ಅವರು ತಿಳಿಸಿದ್ದಾರೆ.

ಕೊಲ್ಲೂರು ಭಕ್ತರಿಗೆ ಅನುಕೂಲ; ಮೂಕಾಂಬಿಕಾ ರಸ್ತೆ ಬೈಂದೂರಿನಲ್ಲಿ ಸೂಪರ್ ಫಾಸ್ಟ್ ಎಕ್ಸ್‌ಪ್ರೆಸ್ ನಿಲುಗಡೆ

ಬೆಂಗಳೂರು: ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಿಯ ದರ್ಶನಕ್ಕೆ ತೆರಳುವ ಭಕ್ತರ ಸೌಲಭ್ಯಕ್ಕಾಗಿ ಸೂಪರ್ ಫಾಸ್ಟ್ ಎಕ್ಸ್‌ಪ್ರೆಸ್‌ ರೈಲಿಗೆ (ರೈಲು ಸಂಖ್ಯೆ 10215/10216) ಬೈಂದೂರಿನ ಮೂಕಾಂಬಿಕಾ ರೋಡ್‌ನಲ್ಲಿ ನೂತನ ನಿಲ್ದಾಣ ಒದಗಿಸಲಾಗಿದೆ. ಗೋವಾದ ಮಡಗಾಂವ್‌ನಿಂದ ಕೇರಳದ ಎರ್ನಾಕುಲಂವರೆಗೆ ಸಂಚರಿಸುವ ಈ ರೈಲು ಇದೀಗ ಬೈಂದೂರಿನಲ್ಲಿ ನಿಲುಗಡೆ ಮಾಡಲಿದೆ. ಈ ಕುರಿತಂತೆ ಮಹತ್ವದ ಆದೇಶ ಹೊರಬಿದ್ದಿದ್ದು, ಶೀಘ್ರದಲ್ಲೇ ಜಾರಿಗೆ ಬರಲಿದೆ ಎಂದು ಕೇಂದ್ರ ರೈಲ್ವೆ ಸಚಿವ ವಿ.ಸೋಮಣ್ಣ ತಿಳಿಸಿದ್ದಾರೆ. “ಆ ಭಾಗದ ಪ್ರಯಾಣಿಕರು, ವಿಶೇಷವಾಗಿ ಮೂಕಾಂಬಿಕಾ ದೇವಾಲಯದ ಭಕ್ತಾದಿಗಳು ಇದರಿಂದ ಪ್ರಯೋಜನ ಪಡೆಯಲಿದ್ದಾರೆ. ಜನತೆಗೆ ರೈಲು ಸೇವೆ ಹೆಚ್ಚು ಅನುಕೂಲವಾಗಲಿದೆ” ಎಂದು ಸೋಮಣ್ಣ ಹೇಳಿದರು.

“ಮಂಗಳೂರಿಗೆ ಹೈಕೋರ್ಟ್ ಪೀಠ ಬರಲಿ, ಜೊತೆಗೆ ಜಿಲ್ಲಾ ಕೋರ್ಟುಗಳಿಗೂ ರಿಟ್ ಅಧಿಕಾರ ಸಿಗಲಿ..”

ಮಂಗಳೂರು: ಕರಾವಳಿ ಕರ್ನಾಟಕಕ್ಕೆ ಪ್ರತ್ಯೇಕ ಹೈಕೋರ್ಟ್ ಪೀಠ ಬೇಕೆಂಬ ಕೂಗು ಮತ್ತೆ ಕೇಳಿಬಂದಿದೆ. ಇದರ ಜೊತೆಯಲ್ಲೇ, ರಿಟ್ ಅಧಿಕಾರ (writ powers) ಸಂಬಂಧದ ಪ್ರಕರಣಗಳನ್ನು ಜಿಲ್ಲಾ ನ್ಯಾಯಾಲಯಗಳಲ್ಲಿ ನಡೆಸಲು ಅನುಕೂಲವಾಗುವಂತೆ ಕಾನೂನಿಗೆ ತಿದ್ದುಪಡಿ ತರುವಂತೆಯೂ ಮಂಗಳೂರಿನ ವಕೀಲರ ಸಮೂಹ ಒತ್ತಾಯಿಸಿದೆ. ವಕೀಲರ ಈ ಆಗ್ರಹ ದೇಶದ ನ್ಯಾಯಾಂಗ ವ್ಯವಸ್ಥೆಯಲ್ಲಿ ಸಂಚಲನ ಸೃಷ್ಟಿಸಿದೆ. ಈ ಸಂಬಂಧ ಮಂಗಳೂರಿನಲ್ಲಿ ಮಾಜಿ ಸರ್ಕಾರಿ ಅಭಿಯೋಜಕ ಮನೋರಾಜ್ ರಾಜೀವ್ ಅವರು ವಕೀಲರಾದ ಶಿಶಿರ್ ಭಂಡಾರಿ, ರೋಶನಿ ಸೊರಬ್, ನಂದಿನಿ ಅಖಿಲ್ ಸಹಿತ ಕರಾವಳಿಯ ಕಾನೂನು ತಜ್ಞರ ಉಪಸ್ಥಿತಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಯ ಅಗತ್ಯದ ಬಗ್ಗೆ ಗಮನಸೆಳೆದರು. ಹಲವು ವರ್ಷಗಳಿಂದ ಈ ಬಗ್ಗೆ ಆಗ್ರಹಿಸುತ್ತಾ ಬರಲಾಗಿದೆ. ಅದು ಈಡೇರಬೇಕಿದೆ. ಈ ಬಗ್ಗೆ ಸರ್ಕಾರ ಸೂಕ್ತ ಕ್ರಮ ಕೈಗೊಳ್ಳಬೇಕಿದೆ ಎಂದು ಕರಾವಳಿಯ ಹಿರಿಯ ನ್ಯಾಯವಾದಿ ಮನೋರಾಜ್ ರಾಜೀವ್ ಒತ್ತಾಯಿಸಿದರು. ಅದರ ಜೊತೆಗೆ,…

ಕಾಂಗ್ರೆಸ್ ಶಾಸಕನಿಗೆ ಬೆಟ್ಟಿಂಗ್ ನಂಟು; ಇಡಿ ದಾಳಿ ವೇಳೆ ಸಂಗತಿ ಬಯಲು

ಬೆಂಗಳೂರು: ಚಿತ್ರದುರ್ಗ ನಗರದ ಕಾಂಗ್ರೆಸ್ ಶಾಸಕ ಕೆ.ಸಿ. ವೀರೇಂದ್ರ ವಿರುದ್ಧ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ ಭಾರೀ ದಾಳಿಯಲ್ಲಿ ಅಕ್ರಮ ಆನ್‌ಲೈನ್–ಆಫ್‌ಲೈನ್ ಬೆಟ್ಟಿಂಗ್ ಜಾಲ ಬಯಲಾಗಿದೆ. ಕರ್ನಾಟಕ, ಗೋವಾ, ಮಹಾರಾಷ್ಟ್ರ ಮತ್ತು ರಾಜಸ್ಥಾನ ಸೇರಿ 30ಕ್ಕೂ ಹೆಚ್ಚು ಸ್ಥಳಗಳಲ್ಲಿ ಇಡಿ ಶೋಧ ಕಾರ್ಯಾಚರಣೆ ನಡೆಸಿದೆ. ಇಡಿ ಪ್ರಕಟಣೆಯ ಪ್ರಕಾರ, ಚಿತ್ರದುರ್ಗ ಜಿಲ್ಲೆಯಲ್ಲಿ ಆರು, ಬೆಂಗಳೂರಿನಲ್ಲಿ 10, ಹುಬ್ಬಳ್ಳಿಯಲ್ಲಿ ಒಂದು, ಮುಂಬೈನಲ್ಲಿ ಎರಡು, ಜೋಧ್‌ಪುರದಲ್ಲಿ ಮೂರು ಹಾಗೂ ಗೋವಾದಲ್ಲಿ ಎಂಟು ಆವರಣಗಳ ಮೇಲೆ ದಾಳಿ ನಡೆದಿದೆ. ಗೋವಾದ ಐದು ಕ್ಯಾಸಿನೊಗಳು — ಪಪ್ಪೀಸ್ ಕ್ಯಾಸಿನೊ ಗೋಲ್ಡ್, ಓಷನ್ ರಿವರ್ಸ್ ಕ್ಯಾಸಿನೊ, ಪಪ್ಪೀಸ್ ಕ್ಯಾಸಿನೊ ಪ್ರೈಡ್, ಓಷನ್ 7 ಕ್ಯಾಸಿನೊ ಮತ್ತು ಬಿಗ್ ಡ್ಯಾಡಿ ಕ್ಯಾಸಿನೊ — ಕೂಡಾ ಶೋಧಕ್ಕೆ ಒಳಪಟ್ಟಿವೆ. ಆನ್‌ಲೈನ್ ಸೈಟ್‌ಗಳ ಮೂಲಕ ಬೆಟ್ಟಿಂಗ್ ತನಿಖೆಯಲ್ಲಿ ಶಾಸಕರೇ King567, Raja567, Puppy’s003 ಮತ್ತು Rathna Gaming ಎಂಬ…

ರಾಜ್ಯದಲ್ಲಿ ಮಸಾಜ್, ಸ್ಪಾ ನಿಯಂತ್ರಣಕ್ಕೆ ಸೂಕ್ತ ಕಾಯ್ದೆ ಜಾರಿಗೆ ವಕೀಲರ ಆಗ್ರಹ

ಮಂಗಳೂರು: ರಾಜ್ಯದಲ್ಲಿ ಮಸಾಜ್ ಹಾಗೂ ಸ್ಪಾ ಹೆಸರಿನಲ್ಲಿ ನಡೆಯುವ ಅಕ್ರಮಗಳನ್ನು ತಡೆಯಲು ಸೂಕ್ತ ಕಾನೂನು ರೂಪಿಸಬೇಕೆಂಬ ಆಗ್ರಹ ಹೆಚ್ಚಿದೆ. ಕೇರಳದಲ್ಲಿ ಅಸ್ತಿತ್ವದಲ್ಲಿರುವಂತೆಯೇ ಕರ್ನಾಟಕದಲ್ಲೂ ಸೂಕ್ತ ಕಾಯ್ದೆ ಜಾರಿಗೆ ತರಬೇಕೆಂದು ವಕೀಲರ ಸಮೂಹ ಆಗ್ರಹಿಸಿದೆ. ರಾಜ್ಯದಲ್ಲಿ Spa ಕೇಂದ್ರಗಳ ಮೇಲೆ ಪೊಲೀಸರು ಆಗಾಗ್ಗೆ ದಾಳಿ ನಡೆಸುತ್ತಿರುವ ಸನ್ನಿವೇಶಗಳು ಮರುಕಳಿಸುತ್ತಿವೆ. ಮಸಾಜ್ ಹಾಗೂ ಸ್ಪಾ ಇತ್ಯಾದಿಗಳಿಗೆ ಸಂಬಂಧಿಸಿದಂತೆ ಕಾನೂನೇ ಇಲ್ಲದಿರುವಾಗ ಅಕ್ರಮ ಎಂಬ ವ್ಯಾಖ್ಯಾನವೂ ಇರುವುದಿಲ್ಲ. ಇಂತಹ ಸನ್ನಿವೇಶದಲ್ಲಿ ಪೊಲೀಸರು ಮಸಾಜ್ ಹಾಗೂ ಸ್ಪಾ ವಿರುದ್ಧ ಕೈಗೊಳ್ಳುವ ಕಾರ್ಯಾಚರಣೆಗಳೂ ಅನೈತಿಕವಾಗುತ್ತದೆ ಎಂಬುದು ಕಾನೂನು ತಜ್ಞರ ಅಭಿಪ್ರಾಯ. ಈ ವಿಚಾರದಲ್ಲಿ ರಾಜ್ಯದ ನ್ಯಾಯಾಂಗ ಕ್ಷೇತ್ರದ ಪರಿಣಿತರು ಇಟ್ಟಿರುವ ಹೆಜ್ಜೆ ಗಮನಸೆಳೆದಿದೆ. ಈ ಸಂಬಂಧ ಮಾಜಿ ಸರ್ಕಾರಿ ಅಭಿಯೋಜಕರೂ ಆದ ಮನೋರಾಜ್ ರಾಜೀವ್ ನೇತೃತ್ವದಲ್ಲಿ ಮಂಗಳೂರಿನ ವಕೀಲರ ತಂಡವು ರಾಜ್ಯ ಸರ್ಕಾರ ಹಾಗೂ ಪ್ರತಿಪಕ್ಷ ನಾಯಕರಿಗೆ ಮನವಿ ಸಲ್ಲಿಸಿ, ಮಸಾಜ್ ಹಾಗೂ ಸ್ಪಾ…

ಬಿಬಿಎಂಪಿ ಚುನಾವಣೆ ನಡೆಸಲು ಸರ್ಕಾರ ಸಿದ್ಧತೆ

ಬೆಂಗಳೂರು: ಬೆಂಗಳೂರು ನಗರ ಪಾಲಿಕೆ (ಬಿಬಿಎಂಪಿ) ಚುನಾವಣೆ ನಡೆಸಲು ಸರ್ಕಾರ ಸಿದ್ಧತೆ ಆರಂಭಿಸಿದ್ದು, ಈ ಕುರಿತು ರಾಜ್ಯ ಚುನಾವಣಾ ಆಯೋಗಕ್ಕೆ ಅಧಿಕೃತ ಪತ್ರ ಬರೆದಿರುವುದಾಗಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ವಿಧಾನ ಪರಿಷತ್ತಿನಲ್ಲಿ ಗುರುವಾರ ಮಾಹಿತಿ ನೀಡಿದರು. ವಿಧಾನ ಪರಿಷತ್ತಿನಲ್ಲಿ ಜೆಡಿಎಸ್ ಸದಸ್ಯ ಟಿ.ಎನ್. ಜವರಾಯಿ ಗೌಡ ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, “ಗ್ರೇಟರ್ ಬೆಂಗಳೂರು ಪ್ರಾಧಿಕಾರ ಕಾಯ್ದೆ (ಜಿಬಿಎ) ಮೇ 15ರಿಂದ ಜಾರಿಗೆ ಬಂತು. ಜುಲೈ 19ರಂದು ಐದು ನಿಗಮಗಳನ್ನು ರಚಿಸಲಾಗಿದೆ. ಆಕ್ಷೇಪಣೆ ಸಲ್ಲಿಸಲು ಆಗಸ್ಟ್ 18ರವರೆಗೆ ಅವಕಾಶ ನೀಡಿದ್ದೇವೆ. ಕೆಲವು ಪ್ರದೇಶಗಳನ್ನು ಸೇರಿಸಲಾಗಿದ್ದು, ಇನ್ನೂ ಕೆಲವು ಪ್ರದೇಶಗಳನ್ನು ನಂತರ ಸೇರಿಸಲಾಗುವುದು. ವಾರ್ಡ್‌ಗಳ ವಿಂಗಡಣೆ ನವೆಂಬರ್ 1ರೊಳಗೆ ಪೂರ್ಣಗೊಳ್ಳಲಿದೆ. ಇದರ ಜವಾಬ್ದಾರಿ ಬಿಬಿಎಂಪಿ ಆಯುಕ್ತರ ನೇತೃತ್ವದ ವಿಶೇಷ ತಂಡಕ್ಕೆ ನೀಡಲಾಗಿದೆ. ಈ ಸಂಬಂಧ ನಾವು ನ್ಯಾಯಾಲಯಕ್ಕೂ ಅಫಿಡವಿಟ್ ಸಲ್ಲಿಸಿದ್ದೇವೆ” ಎಂದರು. ಸದಸ್ಯರೊಬ್ಬರು ತಕ್ಷಣ ಚುನಾವಣೆ ನಡೆಸಬೇಕು ಎಂಬ ಅಭಿಪ್ರಾಯ…

ದಾವಣಗೆರೆಯಲ್ಲಿ ಸುಸ್ಥಿರ ಭತ್ತದ ಕೃಷಿ ಯೋಜನೆಗೆ ಪ್ರಾಯೋಗಿಕ ಚಾಲನೆ.

ಬೆಂಗಳೂರು: ಕೃಷಿ ಸೇವೆಗಳು ರೈತರಿಗೆ ಇನ್ನಷ್ಟು ಸುಲಭವಾಗಿ ದತ್ತಾಂಶ ಆಧಾರಿತವಾಗಿ ಮತ್ತು ಅವಶ್ಯಕತೆಗೆ ತಕ್ಕಂತೆ ಲಭ್ಯವಾಗಲು ಕೃಷಿ ಇಲಾಖೆಯು ಮಹತ್ವದ ಹೆಜ್ಜೆ ಇಟ್ಟಿದೆ. “ರೈತ ಕರೆ ಕೇಂದ್ರ” ಉನ್ನತೀಕರಣದ ಮಹತ್ವದ ಒಡಂಬಡಿಕೆಗೆ ವಿಕಾಸಸೌಧ ಕಚೇರಿಯಲ್ಲಿ ಇಂದು ಕೃಷಿ ಸಚಿವ ಎನ್. ಚಲುವರಾಯಸ್ವಾಮಿಯವರು ಸಹಿ ಹಾಕಿದರು. ಸಚಿವ ಚಲುವರಾಯಸ್ವಾಮಿಯವರು ಕೃಷಿ ಇಲಾಖೆಯ ಅಧಿಕಾರ ವಹಿಸಿಕೊಂಡ ನಂತರ ರೈತರ ಅಭಿವೃದ್ಧಿ ರೈತ ಪರ ಕೆಲಸಕ್ಕೆ ಒತ್ತು ನೀಡಿದ್ದು, ಈಗಾಗಲೇ ರೈತ ಕರೆ ಕೇಂದ್ರಕ್ಕೆ ಆಧುನಿಕ ತಂತ್ರಜ್ಞಾನದ ಸ್ಫರ್ಶ ನೀಡಿರುವ ಸಚಿವರು, ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ (BEL) ಸಂಸ್ಥೆಯೊಂದಿಗೆ ಒಡಂಬಡಿಕೆ ಮಾಡಿಕೊಂಡರು.  ಒಡಂಬಡಿಕೆ ನಂತರ ಮಾತನಾಡಿದ ಸಚಿವರು, ಬೆಳೆ ಮಾಹಿತಿ, ಹವಾಮಾನ ಮಾಹಿತಿ, FRUITS ದತ್ತಾಂಶ, ರಾಜ್ಯ ಹಾಗೂ ಕೇಂದ್ರ ಸರ್ಕಾರದ ಯೋಜನೆಗಳು ಸೇರಿದಂತೆ ಪ್ರಮುಖ ಕೃಷಿ ಮಾಹಿತಿಗಳನ್ನ ಸಮಗ್ರಗೊಳಿಸಿ, ವಿಶ್ಲೇಷಿಸಿ, ರೈತರಿಗೆ ನಿಖರ ಮತ್ತು ತಂತ್ರಜ್ಞಾನ ಆಧಾರಿತ ಸಲಹಾ ಸೇವೆಗಳನ್ನ ಒದಗಿಸಲು…