‘ಧೈರ್ಯವಿದ್ದರೆ ಆರ್‌ಎಸ್‌ಎಸ್‌ ನಿಷೇಧಿಸಿ’; ಡಿಕೆಶಿ, ಪ್ರಿಯಾಂಕ್‌ಗೆ ವಿಜಯೇಂದ್ರ ಸವಾಲು

ಬೆಂಗಳೂರು: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ಧೈರ್ಯವಿದ್ದರೆ, ಸರ್ಕಾರದ ಅಧಿಕಾರವನ್ನು ಹಿಂಬಾಗಿಲಿನಿಂದ ಬಳಸುವ ಬದಲು ಬಹಿರಂಗವಾಗಿ ಆರ್‌ಎಸ್‌ಎಸ್‌ ಅನ್ನು ನಿಷೇಧಿಸಲಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಸವಾಲು ಹಾಕಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಪ್ರತಿಕ್ರಿಯಿಸಿರುವ ವಿಜಯೇಂದ್ರ, 100 ವರ್ಷಕ್ಕೂ ಹೆಚ್ಚು ಇತಿಹಾಸ ಹೊಂದಿರುವ ಆರ್‌ಎಸ್‌ಎಸ್ ದೇಶ ಸೇವೆಯಲ್ಲಿ ತೊಡಗಿಸಿಕೊಂಡಿದೆ. ಇಂತಹ ತಂತ್ರಗಳ ಮೂಲಕ ಅದರ ಚಟುವಟಿಕೆಗಳನ್ನು ನಿರ್ಬಂಧಿಸಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ. ಸರ್ಕಾರಿ ಆವರಣ ಮತ್ತು ಸಾರ್ವಜನಿಕ ಆಸ್ತಿ ಬಳಕೆ ನಿಯಂತ್ರಣಕ್ಕೆ ಸಂಬಂಧಿಸಿದ ಪ್ರಸ್ತಾವಿತ ಮಸೂದೆ ಕುರಿತು ರಾಜ್ಯ ಸರ್ಕಾರ ಮತ್ತು ಬಿಜೆಪಿ ನಡುವೆ ವಾಕ್ಸಮರ ನಡೆಯುತ್ತಿರುವ ಬೆನ್ನಲ್ಲೇ ವಿಜಯೇಂದ್ರ ಅವರ ಈ ಹೇಳಿಕೆ ಹೊರಬಿದ್ದಿದೆ. ಇದೇ ವೇಳೆ ಸಚಿವ ಜಮೀರ್ ಅಹ್ಮದ್ ಖಾನ್ ಅವರು ರಾಷ್ಟ್ರಧ್ವಜಾರೋಹಣದಿಂದ ವಿನಾಯಿತಿ ಕೋರಿರುವ ವಿಚಾರವನ್ನೂ ವಿಜಯೇಂದ್ರ ಪ್ರಸ್ತಾಪಿಸಿದ್ದಾರೆ. ಆಗಸ್ಟ್ 15ರಂದು…

ಸರ್ಕಾರಿ ಆಸ್ತಿ ಬಳಕೆ ನಿಯಂತ್ರಣ ಮಸೂದೆ; ‘ಆರ್‌ಎಸ್‌ಎಸ್‌ ಉಲ್ಲೇಖವೇ ಇಲ್ಲ’ ಎಂದ ಪ್ರಿಯಾಂಕ್ ಖರ್ಗೆ

ಬೆಂಗಳೂರು: ಕರ್ನಾಟಕ ಸರ್ಕಾರಿ ಆವರಣ ಮತ್ತು ಸಾರ್ವಜನಿಕ ಆಸ್ತಿ ಬಳಕೆ ನಿಯಂತ್ರಣ ಮಸೂದೆ, 2026ಕ್ಕೆ ಸಂಬಂಧಿಸಿದಂತೆ ಬಿಜೆಪಿ ಮಾಡಿರುವ ಆರೋಪಗಳನ್ನು ಗೃಹ ಸಚಿವ ಪ್ರಿಯಾಂಕ್ ಖರ್ಗೆ ತಳ್ಳಿಹಾಕಿದ್ದಾರೆ. ಮಸೂದೆಯಲ್ಲಿ ಆರ್‌ಎಸ್‌ಎಸ್‌ ಹೆಸರೇ ಇಲ್ಲವಾಗಿದ್ದು, ಸಂಘಟನೆಯನ್ನು ಗುರಿಯಾಗಿಸಿಕೊಂಡು ಕಾನೂನು ರೂಪಿಸಲಾಗುತ್ತಿದೆ ಎಂಬ ಆರೋಪಕ್ಕೆ ಆಧಾರವೇನು ಎಂದು ಅವರು ಪ್ರಶ್ನಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಖರ್ಗೆ, “ಬಿಜೆಪಿಯವರು ಮಸೂದೆಯನ್ನು ಓದಿದ್ದಾರೆಯೇ? ಓದಿದ್ದರೆ ಅವರ ಆಕ್ಷೇಪಣೆ ಏನು ಎಂಬುದನ್ನು ತಿಳಿಸಲಿ. ಮಸೂದೆಯನ್ನು ಮಂಡಿಸಿ, ಚರ್ಚೆಗೆ ಅವಕಾಶ ನೀಡಲಿ” ಎಂದು ಹೇಳಿದರು. ಯಾವುದೇ ನಿರ್ದಿಷ್ಟ ಸಂಘಟನೆಯನ್ನು ಗುರಿಯಾಗಿಸಿಕೊಂಡು ಮಸೂದೆ ರೂಪಿಸಿಲ್ಲ ಎಂದು ಅವರು ಸ್ಪಷ್ಟಪಡಿಸಿದರು. ಪ್ರಸ್ತಾವಿತ ಕಾನೂನಿನಡಿ ಸರ್ಕಾರಿ ಭೂಮಿ, ಕಟ್ಟಡ, ರಸ್ತೆ, ಉದ್ಯಾನವನ, ಆಟದ ಮೈದಾನ, ಜಲಮೂಲ ಸೇರಿದಂತೆ ಸಾರ್ವಜನಿಕ ಆಸ್ತಿಗಳ ಅನಧಿಕೃತ ಬಳಕೆಯನ್ನು ನಿಯಂತ್ರಿಸಲು ಕ್ರಮ ಕೈಗೊಳ್ಳಲಾಗುತ್ತಿದೆ. ಮೊದಲ ಅಪರಾಧಕ್ಕೆ ಮೂರು ವರ್ಷಗಳವರೆಗೆ ಜೈಲು ಶಿಕ್ಷೆ ಅಥವಾ ₹5 ಲಕ್ಷದವರೆಗೆ…

ಹನೂರು : ಮಾನಸ ಶಿಕ್ಷಣ ಸಂಸ್ಥೆಗೆ 30ರ ಸಂಭ್ರಮ; ಆ.22 ರಂದು ಬೃಹತ್ ಉದ್ಯೋಗ ಮೇಳ

ಹನೂರು : ಮಾನಸ ಶಿಕ್ಷಣ ಸಂಸ್ಥೆಯು 30 ವರ್ಷಗಳನ್ನು ಯಶಸ್ವಿಯಾಗಿ ಪೂರೈಸುತ್ತಿರುವ ಹಿನ್ನಲೆಯಲ್ಲಿ ಮಾನಸ ಶಿಕ್ಷಣ ಸಂಸ್ಥೆ ಮತ್ತು ಮಾನಸ ಫೌಂಡೇಶನ್ ವತಿಯಿಂದ ಬೃಹತ್ ಉದ್ಯೋಗ ಮೇಳವನ್ನು ಆ.22 ರಂದು ಪಟ್ಟಣದ ಗೌರಿ ಶಂಕರ್ ಕಲ್ಯಾಣ ಮಂಟಪವನ್ನು ಆಯೋಜಿಸಲಾಗಿದೆ ಎಂದು ಕಾರ್ಯದರ್ಶಿಗಳಾದ ಡಾ ದತ್ತೇಶ್ ಕುಮಾರ್ ಅವರು ತಿಳಿಸಿದ್ದಾರೆ. ಹನೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾಹಿತಿ ಒದಗಿಸಿದ ಅವರು, ಕಳೆದ 2019ರಲ್ಲಿ ಪಟ್ಟಣದ ಅಂಬೇಡ್ಕರ್ ಭವನದಲ್ಲಿ ಆಯೋಜಿಸಿದ್ದ ಉದ್ಯೋಗ ಮೇಳದಲ್ಲಿ ಸುಮಾರು 84 ಕಂಪನಿಗಳು ಭಾಗವಹಿಸಿದ್ದವು 1800 ಆಕಾಂಕ್ಷಿಗಳು ಬಂದಿದ್ದರು 720 ಜನರಿಗೆ ಸ್ಥಳದಲ್ಲೇ ನೇಮಕಾತಿ ಪತ್ರ ನೀಡಲಾಗಿತ್ತು. ಪ್ರಸ್ತುತ ವರ್ಷದಲ್ಲಿಯೂ ಸಹ ಈ ಭಾಗದ ನಿರುದ್ಯೋಗ ವಿದ್ಯಾರ್ಥಿಗಳಿಗೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ಈ ಉದ್ಯೋಗ ಮೇಳವನ್ನು ಹಮ್ಮಿಕೊಳ್ಳಲಾಗಿದೆ. ತಾಲ್ಲೂಕಿನ ಯುವಕ ಯುವತಿಯರು ಹೆಚ್ಚಾಗಿ ಪಾಲ್ಗೊಂಡು ಇದರ ಸದ್ಬಳಕೆ ಮಾಡಿಕೊಳ್ಳಬೇಕು ಎಂದರು. ಅಲ್ಲದೇ ಮುಂದಿನ ದಿನಗಳಲ್ಲಿ ಕೊಳ್ಳೇಗಾಲ ಮತ್ತು ಹನೂರಿನಲ್ಲಿ…

ಕಾಂಗ್ರೆಸ್‌ಗೆ ಶಾಕ್: ಮಾಜಿ ಪಾಲಿಕೆ ಸದಸ್ಯರು ಸೇರಿ ಮೂವರು ಬಿಜೆಪಿ ಸೇರ್ಪಡೆ

ಬೆಂಗಳೂರು: ಕಾಂಗ್ರೆಸ್ ಪಕ್ಷದ ಮಾಜಿ ಮಹಾನಗರ ಪಾಲಿಕೆ ಸದಸ್ಯರಾದ ನಾರಾಯಣ್, ಸುರೇಶ್ ಹಾಗೂ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಪ್ರಮೋದ್ ಶ್ರೀನಿವಾಸ್ ಅವರು ಬಿಜೆಪಿ ಸೇರ್ಪಡೆಯಾಗಿದ್ದಾರೆ. ಮಲ್ಲೇಶ್ವರಂನ ಜಗನ್ನಾಥ ಭವನದಲ್ಲಿ ನಡೆದ ಸೇರ್ಪಡೆ ಕಾರ್ಯಕ್ರಮದಲ್ಲಿ ವಿಧಾನಸಭೆ ಪ್ರತಿಪಕ್ಷ ನಾಯಕ ಆರ್. ಅಶೋಕ್, ಸಂಸದ ತೇಜಸ್ವಿ ಸೂರ್ಯ, ಬಿಜೆಪಿ ಜಿಲ್ಲಾಧ್ಯಕ್ಷ ಹಾಗೂ ಶಾಸಕ ಸಿ.ಕೆ. ರಾಮಮೂರ್ತಿ, ಬೊಮ್ಮನಹಳ್ಳಿ ಶಾಸಕ ಸತೀಶ್ ರೆಡ್ಡಿ ಸೇರಿದಂತೆ ಬಿಜೆಪಿ ಮುಖಂಡರು ಪಕ್ಷದ ಧ್ವಜ ನೀಡಿ ಅವರನ್ನು ಬರಮಾಡಿಕೊಂಡರು. ಈ ವೇಳೆ ಮಾತನಾಡಿದ ಆರ್. ಅಶೋಕ್, ನಾವೆಲ್ಲರೂ ಒಂದೇ ಮನೆಯಲ್ಲಿ, ಒಂದೇ ಕುಟುಂಬದಂತೆ ಇದ್ದವರು. ರಾಜಕೀಯ ಕಾರಣಗಳಿಂದ ಪಕ್ಷದಿಂದ ಹೊರ ಹೋಗಿದ್ದವರು ಇದೀಗ ಮರಳಿ ಸ್ವಂತ ಮನೆಗೆ ಬಂದಿದ್ದಾರೆ ಎಂದು ಹೇಳಿದರು. ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮದ ನಡುವೆಯೇ ಕಾರ್ಯಕರ್ತರು ಮರಳಿ ಪಕ್ಷಕ್ಕೆ ಸೇರ್ಪಡೆಯಾಗಿರುವುದು ಮತ್ತಷ್ಟು ಸಂತಸ ತಂದಿದೆ. ಹಳೆಯ ವಿಚಾರಗಳನ್ನು ಮರೆತು ಎಲ್ಲರೂ…

ಹನೂರು: ವೀರಪ್ಪನ್’ನಿಂದ ಹುತಾತ್ಮರಾದ ಪೊಲೀಸರಿಗೆ ಶ್ರದ್ಧಾಂಜಲಿ

ಹನೂರು: ತಾಲ್ಲೂಕಿನಲ್ಲಿ ದಿನಾಂಕ 14.08.1992 ಮಿಣ್ಯ ದಾಳಿಯಲ್ಲಿ ವೀರಪ್ಪನ್ ನಿಂದ ಹುತಾತ್ಮರಾದ ಪೊಲೀಸ್ ಅಧಿಕಾರಿಗಳು, ಸಿಬ್ಬಂದಿಗಳಿಗೆ ಶ್ರದ್ಧಾಂಜಲಿ ಸಭೆಯನ್ನು ಮಾಡಲಾಯಿತು. ದಾಳಿಯಲ್ಲಿ ಹುತಾತ್ಮರಾದ ಪೊಲೀಸ್ ಅಧಿಕಾರಿಗಳಿಗೆ ರಾಮಾಪರ ವೃತ್ತ ನಿರೀಕ್ಷಕರಾದ ಚಿಕ್ಕರಂಗ ಶೆಟ್ಟಿ, ಸಬ್ ಇನ್ಸ್ಪೆಕ್ಟರ್ ಮಂಜುನಾಥ್ ಹಾಗೂ ಹುತಾತ್ಮ ಅಧಿಕಾರಿಗಳ ಸಂಬಂಧಿಕರು ಸ್ಮಾರಕ ಸ್ತಂಭಕ್ಕೆ ಪೂಜೆ ಸಲ್ಲಿಸಿ ಪುಷ್ಪರ್ಚನೆ ಮಾಡಿ ಶ್ರದ್ದಾಂಜಲಿ ಅರ್ಪಿಸಿದರು. ಈ ವೇಳೆ ವೃತ್ತ ನಿರೀಕ್ಷಕರಾದ ಚಿಕ್ಕರಂಗಶೆಟ್ಟಿ ಮಾತನಾಡಿ ಇತಿಹಾಸವನ್ನು ಮೆಲಕು ಹಾಕಿದರು. ಈ ದಿನ ಎಲ್ಲರಿಗೂ ನೋವುಂಟು ಮಾಡುವ ದಿನವಾಗಿದೆ. ವೀರಪ್ಪನ್ ಕಾರ್ಯಾಚರಣೆಯಲ್ಲಿ ಕಮಲ ನಾಯಕ್ ಎಂಬ ಗುಪ್ತ ಮಾಹಿತಿದಾರನ ಕುತಂತ್ರ ಮೋಸ ಮತ್ತು ನಂಬಿಕೆ ದ್ರೋಹದಿಂದ ಇಂತಹ ಯುವ ಪೊಲೀಸ್ ಪಡೆಗಳನ್ನು ಕಳೆದುಕೊಳ್ಳುವಂತಹ ಸ್ಥಿತಿ ನಿರ್ಮಾಣವಾಯಿತು. ಪೊಲೀಸ್ ಮಾಹಿತಿದಾರನಂತೆ ಕೆಲಸ ಮಾಡುತ್ತಿದ್ದು, ಒಳಗೆ ವೀರಪ್ಪನ್ ಸಹಚರನಾಗಿರುವುದು ಪೊಲೀಸರಿಗೆ ತಿಳಿದಿರಲಿಲ್ಲ . ವೀರಪ್ಪನ್ ಒಳಸಂಚಿನಂತೆ ಕಮಲ ನಾಯಕ್ ಕೆಂಪು ಬಟ್ಟೆ ಧರಿಸಿ…

ವಿಧಾನ ಪರಿಷತ್ ಸಭಾಪತಿಯಾಗಿ ಸಲೀಂ ಅಹ್ಮದ್ ಆಯ್ಕೆ

ಬೆಂಗಳೂರು: ಕರ್ನಾಟಕ ವಿಧಾನ ಪರಿಷತ್ತಿನ ನೂತನ ಸಭಾಪತಿಯಾಗಿ ಕಾಂಗ್ರೆಸ್‌ ಸದಸ್ಯ ಸಲೀಂ ಅಹ್ಮದ್ ಶುಕ್ರವಾರ ಆಯ್ಕೆಯಾಗಿದ್ದಾರೆ. ರಾಜ್ಯ ವಿಧಾನಮಂಡಲದ ಮುಂಗಾರು ಅಧಿವೇಶನದ ಎರಡನೇ ದಿನ ಸಭಾಪತಿ ಆಯ್ಕೆ ಪ್ರಕ್ರಿಯೆ ನಡೆಯಿತು. ಧ್ವನಿಮತದ ಮೂಲಕ ನಡೆದ ಚುನಾವಣೆಯಲ್ಲಿ ಸಲೀಂ ಅಹ್ಮದ್ ಪರವಾಗಿ 38 ಸದಸ್ಯರು ಬೆಂಬಲ ವ್ಯಕ್ತಪಡಿಸಿದರೆ, ಎನ್‌ಡಿಎ ಅಭ್ಯರ್ಥಿ ಹಾಗೂ ಬಿಜೆಪಿ ಸದಸ್ಯ ಪಿ.ಎಚ್. ಪೂಜಾರ್ ಪರವಾಗಿ 30 ಸದಸ್ಯರು ಬೆಂಬಲಿಸಿದರು. ಸಭಾಪತಿ ಬಸವರಾಜ ಹೊರಟ್ಟಿ ರಾಜೀನಾಮೆ ನೀಡಿದ ಹಿನ್ನೆಲೆಯಲ್ಲಿ ಸ್ಥಾನ ತೆರವಾಗಿತ್ತು. ಕಾಂಗ್ರೆಸ್‌ ಸಲೀಂ ಅಹ್ಮದ್ ಅವರನ್ನು ಅಭ್ಯರ್ಥಿಯನ್ನಾಗಿ ಕಣಕ್ಕಿಳಿಸಿದ್ದರೆ, ಬಿಜೆಪಿ-ಜೆಡಿಎಸ್‌ ಮೈತ್ರಿಕೂಟದಿಂದ ಪಿ.ಎಚ್. ಪೂಜಾರ್ ಸ್ಪರ್ಧಿಸಿದ್ದರು. 75 ಸದಸ್ಯ ಬಲದ ವಿಧಾನ ಪರಿಷತ್ತಿನಲ್ಲಿ ಕಾಂಗ್ರೆಸ್‌ 38, ಬಿಜೆಪಿ 25 ಹಾಗೂ ಜೆಡಿಎಸ್‌ ಆರು ಸದಸ್ಯರನ್ನು ಹೊಂದಿದೆ. ಒಬ್ಬರು ಸ್ವತಂತ್ರ ಸದಸ್ಯರಾಗಿದ್ದು, ಐದು ಸ್ಥಾನಗಳು ಸದ್ಯ ಖಾಲಿ ಇವೆ. ಸಭಾಪತಿ ಚುನಾವಣೆಗೆ ಒಟ್ಟು ಏಳು ಪ್ರಸ್ತಾವನೆಗಳು…

ಸ್ವಾತಂತ್ರ್ಯ ದಿನಾಚರಣೆ: ಕರ್ನಾಟಕದ 17 ಪೊಲೀಸ್ ಅಧಿಕಾರಿಗಳು, ಸಿಬ್ಬಂದಿಗೆ ರಾಷ್ಟ್ರಪತಿ ಪದಕ

ಬೆಂಗಳೂರು: ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಕೇಂದ್ರ ಗೃಹ ಸಚಿವಾಲಯವು ಕರ್ನಾಟಕ ಪೊಲೀಸ್ ಇಲಾಖೆಯ 17 ಅಧಿಕಾರಿಗಳು ಮತ್ತು ಸಿಬ್ಬಂದಿಗೆ ರಾಷ್ಟ್ರಪತಿ ಪದಕಗಳನ್ನು ಘೋಷಿಸಿದೆ. ಪೊಲೀಸ್ ಇಲಾಖೆಯಲ್ಲಿ ಶ್ಲಾಘನೀಯ ಸೇವೆ ಸಲ್ಲಿಸಿದ 16 ಅಧಿಕಾರಿಗಳು ಹಾಗೂ ಸಿಬ್ಬಂದಿಗೆ ‘ಶ್ಲಾಘನೀಯ ಸೇವಾ ಪದಕ’ ಲಭಿಸಿದೆ. ಪುರಸ್ಕೃತರಲ್ಲಿ ರೈಲ್ವೇಸ್ ಬೆಂಗಳೂರು ಎಸ್ಪಿ ಸಾರಾ ಫಾತಿಮಾ, ಕೆಎಸ್‌ಆರ್‌ಪಿ ಕಮಾಂಡೆಂಟ್ ಥಾಮಸ್ ಮ್ಯಾಥ್ಯೂ, ಆಗ್ನೇಯ ಸಂಚಾರ ವಿಭಾಗದ ಎಸಿಪಿ ಮಹಾದೇವ್, ರಾಯಚೂರು ಡಿಎಆರ್‌ನ ಡಿವೈಎಸ್ಪಿ ಪರಮಾನಂದ್ ಸೇರಿದಂತೆ ವಿವಿಧ ವಿಭಾಗಗಳ ಅಧಿಕಾರಿಗಳು ಹಾಗೂ ಸಿಬ್ಬಂದಿ ಇದ್ದಾರೆ. ಪೊಲೀಸ್ ತರಬೇತಿ ಶಾಲೆ ಮೈಸೂರು, ಬೆಳಗಾವಿಯ ಮಾಳಮಾರುತಿ ಪೊಲೀಸ್ ಠಾಣೆ, ಸಿಐಡಿ, ರಾಜಭವನ, ಕೆಪಿ ಅಗ್ರಹಾರ ಪೊಲೀಸ್ ಠಾಣೆ, ಕೆಎಸ್‌ಆರ್‌ಪಿ, ವಿಧಾನಸೌಧ ಭದ್ರತೆ, ಡಿಸಿಆರ್‌ಇ ಕೆಜಿಎಫ್, ತರೀಕೆರೆ ಹಾಗೂ ಹುಣಸೂರು ಠಾಣೆಗಳಲ್ಲಿ ಸೇವೆ ಸಲ್ಲಿಸುತ್ತಿರುವ ಅಧಿಕಾರಿಗಳು ಮತ್ತು ಸಿಬ್ಬಂದಿಗೂ ಪದಕ ಘೋಷಿಸಲಾಗಿದೆ. ಇದೇ ವೇಳೆ, ಪೊಲೀಸ್ ಇಲಾಖೆಯಲ್ಲಿ…

ಜೈಲಿನಲ್ಲಿ ಮೊಬೈಲ್ ಬಳಕೆ ಆರೋಪ; ಪ್ರಜ್ವಲ್ ರೇವಣ್ಣ ಸಾಮಾನ್ಯ ಸೆಲ್‌ಗೆ ಸ್ಥಳಾಂತರ

ಬೆಂಗಳೂರು: ಅತ್ಯಾಚಾರ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ವಿಐಪಿ ಸೆಲ್‌ನಿಂದ ಸಾಮಾನ್ಯ ಕೈದಿಗಳ ಸೆಲ್‌ಗೆ ಸ್ಥಳಾಂತರಿಸಲಾಗಿದೆ. ಜೈಲಿನೊಳಗಿಂದ ಮೊಬೈಲ್ ಫೋನ್‌ನಲ್ಲಿ ಮಾತನಾಡುತ್ತಿರುವುದಾಗಿ ಹೇಳಲಾದ 17 ಸೆಕೆಂಡುಗಳ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ಬೆನ್ನಲ್ಲೇ ಈ ಕ್ರಮ ಕೈಗೊಳ್ಳಲಾಗಿದೆ. ಇತ್ತೀಚೆಗೆ ಪರಪ್ಪನ ಅಗ್ರಹಾರ ಜೈಲಿನ ಮೇಲೆ ಸಿಸಿಬಿ ಪೊಲೀಸರು ನಡೆಸಿದ ದಾಳಿ ವೇಳೆ ಪ್ರಜ್ವಲ್ ಅವರ ಬ್ಯಾರಕ್‌ನಿಂದ ಮೊಬೈಲ್ ಫೋನ್, ಚಾರ್ಜರ್, ಪೆನ್‌ಡ್ರೈವ್ ಹಾಗೂ ಇತರ ವಸ್ತುಗಳು ಪತ್ತೆಯಾಗಿದ್ದವು ಎಂದು ಸುದ್ದಿಯಾಗಿವೆ. ಮೊಬೈಲ್‌ನಲ್ಲಿ ಹಲವು ಒಟಿಟಿ ಅಪ್ಲಿಕೇಶನ್‌ಗಳು ಕಂಡುಬಂದಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಜೈಲು ಇಲಾಖೆ ಡಿಜಿಪಿ ಅಲೋಕ್ ಕುಮಾರ್ ಮಾಹಿತಿ ನೀಡಿದ್ದು, ಪ್ರಜ್ವಲ್ ಅವರ ಬ್ಯಾರಕ್‌ನಿಂದ ಮೊಬೈಲ್ ಮತ್ತು ಚಾರ್ಜರ್ ವಶಪಡಿಸಿಕೊಳ್ಳಲಾಗಿದೆ ಎಂದು ಮಾಹಿತಿ ನೀಡಿದ್ದಾರೆ. ಇದೇ ವೇಳೆ, ಜೈಲಿನ ಕರ್ತವ್ಯದಲ್ಲಿದ್ದ ಸಹಾಯಕ…

ಹೆಬ್ಬಾಳ ಶಾರ್ಟ್ ಟನಲ್ ಯೋಜನೆಗೆ ತೇಜಸ್ವಿ ಸೂರ್ಯ ವಿರೋಧ; ವೈಜ್ಞಾನಿಕ ಅಧ್ಯಯನಕ್ಕೆ ಆಗ್ರಹ

ಬೆಂಗಳೂರು: ನಗರದ ಸಂಚಾರ ದಟ್ಟಣೆ ಕಡಿಮೆ ಮಾಡುವ ಉದ್ದೇಶದಿಂದ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ) ಕೈಗೆತ್ತಿಕೊಂಡಿರುವ ಹೆಬ್ಬಾಳ ಶಾರ್ಟ್ ಟನಲ್ ಯೋಜನೆ ಇದೀಗ ರಾಜಕೀಯ ಹಾಗೂ ಸಾರ್ವಜನಿಕ ಚರ್ಚೆಗೆ ಗ್ರಾಸವಾಗಿದೆ. ಸುಮಾರು ₹1,140 ಕೋಟಿ ಅಂದಾಜು ವೆಚ್ಚದ ಯೋಜನೆಯನ್ನು ವೈಜ್ಞಾನಿಕ ಮೌಲ್ಯಮಾಪನವಿಲ್ಲದೆ ಮುಂದುವರಿಸಬಾರದು ಎಂದು ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಪತ್ರ ಬರೆದಿದ್ದಾರೆ. ಹೆಬ್ಬಾಳ ಜಂಕ್ಷನ್‌ನಿಂದ ಕರ್ನಾಟಕ ಪಶುವೈದ್ಯಕೀಯ, ಪ್ರಾಣಿ ಮತ್ತು ಮೀನುಗಾರಿಕೆ ವಿಜ್ಞಾನ ವಿಶ್ವವಿದ್ಯಾಲಯ (KVAFSU) ಸಂಪರ್ಕಿಸುವ ಸುಮಾರು 2.2 ಕಿ.ಮೀ. ಉದ್ದದ ಕಿರು ಸುರಂಗ ಮಾರ್ಗವನ್ನು ನಿರ್ಮಿಸಲು ಯೋಜಿಸಲಾಗಿದೆ. ಯೋಜನೆಗಾಗಿ ಹೆಬ್ಬಾಳ ಕೆರೆಯ ಸುಮಾರು 3.45 ಎಕರೆ ಜಮೀನು ವರ್ಗಾವಣೆಯಾಗುತ್ತಿದೆ ಎಂದು ವರದಿಯಾಗಿದೆ. ಮೆಟ್ರೋ, ಉಪನಗರ ರೈಲು ಯೋಜನೆಗಳಿಗೆ ಸಂಘರ್ಷದ ಆತಂಕ ಹೆಬ್ಬಾಳ ಶಾರ್ಟ್ ಟನಲ್ ಯೋಜನೆಯು ಪ್ರಸ್ತಾವಿತ ಮೆಟ್ರೋ ರೆಡ್ ಲೈನ್…

ಕಾವೇರಿ ನೀರು ವಿವಾದ; ಕರ್ನಾಟಕ ಬಂದ್‌ಗೆ ನೈತಿಕ ಬೆಂಬಲ, ಹಲವೆಡೆ ಪ್ರತಿಭಟನೆ

ಬೆಂಗಳೂರು: ಕಾವೇರಿ ನೀರು ನಿಯಂತ್ರಣ ಸಮಿತಿ (CWRC) ತಮಿಳುನಾಡಿಗೆ ನೀರು ಹರಿಸುವಂತೆ ನೀಡಿರುವ ಆದೇಶವನ್ನು ವಿರೋಧಿಸಿ ಕನ್ನಡಪರ ಸಂಘಟನೆಗಳು ಗುರುವಾರ ಬೆಳಗ್ಗೆ 6ರಿಂದ ಸಂಜೆ 6ರವರೆಗೆ ಕರ್ನಾಟಕ ಬಂದ್‌ಗೆ ಕರೆ ನೀಡಿವೆ. ಆದರೆ ರಾಜ್ಯದ ಬಹುತೇಕ ಭಾಗಗಳಲ್ಲಿ ಬಂದ್‌ ಹಿನ್ನೆಲೆಯಲ್ಲಿ ಅಲ್ಲಲ್ಲಿ ಪ್ರತಿಭಟನೆಗಳು ನಡೆದಿವೆ. ಸಾರಿಗೆ ಹಾಗೂ ವಾಣಿಜ್ಯ ಚಟುವಟಿಕೆಗಳು ಎಂದಿನಂತೆ ಮುಂದುವರಿದಿದ್ದರಿಂದ ಜನ ಜೀವನದ ಮೇಲೆ ಬಂಧ್ ಪರಿಣಾಮ ಬೀರಿಲ್ಲ. ಬರ ಪರಿಸ್ಥಿತಿಯ ನಡುವೆಯೂ ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಆದೇಶಿಸಿರುವುದಕ್ಕೆ ರಾಜ್ಯಾದ್ಯಂತ ಆಕ್ರೋಶ ವ್ಯಕ್ತವಾಗಿದೆ. ಇದನ್ನು ಖಂಡಿಸಿ ಕನ್ನಡ ಒಕ್ಕೂಟದ ಅಧ್ಯಕ್ಷ ವಾಟಾಳ್ ನಾಗರಾಜ್ ಬಂದ್‌ಗೆ ಕರೆ ನೀಡಿದ್ದರು. ರೈತ ಸಂಘಟನೆಗಳು ಬಂದ್‌ಗೆ ಬೆಂಬಲ ನೀಡಿದ್ದರೆ, ಹಲವು ಸಂಘಟನೆಗಳು ನೈತಿಕ ಬೆಂಬಲ ಘೋಷಿಸಿವೆ. ಬೆಂಗಳೂರು, ಮೈಸೂರು, ರಾಮನಗರ, ಹಾಸನ ಸೇರಿದಂತೆ ಕಾವೇರಿ ಜಲಾನಯನ ಪ್ರದೇಶದ ಜಿಲ್ಲೆಗಳಲ್ಲಿ ವಿವಿಧ ಕನ್ನಡಪರ ಸಂಘಟನೆಗಳು ಪ್ರತಿಭಟನೆ ನಡೆಸಿದವು. ಆದರೆ…