ಹಿಂದೂ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿಗೆ ನ್ಯಾಯಾಂಗ ಬಂಧನ

ಉಡುಪಿ: ಧರ್ಮಸ್ಥಳ ವಿಚಾರದಲ್ಲಿ ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ್ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದಆರೋಪದಲ್ಲಿ ಬಂಧನಕ್ಕೊಳಗಾಗಿರುವ ಹಿಂದೂ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ನ್ಯಾಯಾಲಯ ನ್ಯಾಯಾಂಗ ಬಂಧನಕ್ಕೊಳಪಡಿಸಿ ಆದೇಶಿಸಿದೆ. ಬ್ರಹ್ಮಾವರ ಪೊಲೀಸರು ಗುರುವಾರ ಮಹೇಶ್ ಶೆಟ್ಟಿ ತಿಮರೋಡಿಯನ್ನು ಬಂಧಿಸಿದ್ದರು. ಗುರುವಾರ ಬೆಳಗ್ಗೆ ಉಜಿರೆಯ ನಿವಾಸದಲ್ಲಿ ಮಹೇಶ್ ಶೆಟ್ಟಿಯನ್ನು ವಶಕ್ಕೆ ಪಡೆದು ಬ್ರಹ್ಮಾವರ ಠಾಣೆಗೆ ಕರೆದೊಯ್ದ ಪೊಲೀಸರು ಬ್ರಹ್ಮಾವರದಲಿರುವ ನ್ಯಾಯಾಲಯಕ್ಕೆ ಹಾಜರು ಪಡಿಸಿದರು. ವಿಚಾರಣೆ ನಡೆಸಿದ ನ್ಯಾಯಾಲಯ ಮಹೇಶ್ ಶೆಟ್ಟಿಯನ್ನು 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ. ಇದೇ ಸಂದರ್ಭದಲ್ಲಿ ಮಹೇಶ್‌ ಶೆಟ್ಟಿ ಪರ ವಕೀಲರು ಜಾಮೀನು ಅರ್ಜಿ ಸಲ್ಲಿಸಿದ್ದು ಈ ಸಂಬಂಧ ಅಗಸ್ಟ್ 23ರಂದು ನಡೆಯಲಿದೆ.

ಮೈಕ್ರೋ ಫೈನಾನ್ಸ್ ದೌರ್ಜನ್ಯಕ್ಕೆ ಬಲಿಯಾದ ಕುಟುಂಬಗಳಿಗೆ 5 ಲಕ್ಷ ಪರಿಹಾರ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಮೈಕ್ರೋ ಫೈನಾನ್ಸ್ ಸಂಸ್ಥೆಗಳ ಕಾಟದಿಂದ ಆತ್ಮಹತ್ಯೆಗೆ ಶರಣಾದವರ ಕುಟುಂಬಗಳಿಗೆ ಮಾನವೀಯ ನೆಲೆಯಲ್ಲಿ ತಲಾ ₹5 ಲಕ್ಷ ಪರಿಹಾರ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ವಿಧಾನಮಂಡಲ ಅಧಿವೇಶನದಲ್ಲಿ ಮಾಹಿತಿ ಹಂಚಿಕೊಂಡ ಸಿಎಂ, “ಮೈಕ್ರೋ ಫೈನಾನ್ಸ್‌ಗಳ ಹಾವಳಿ ತಡೆಗಟ್ಟಲು ಸರ್ಕಾರ ಈಗಾಗಲೇ ಕಠಿಣ ಕಾನೂನು ಜಾರಿಗೆ ತಂದಿದೆ. ಅದರ ಬಳಿಕ ಇಂತಹ ದೌರ್ಜನ್ಯ ಪ್ರಕರಣಗಳು ಹಾಗೂ ಆತ್ಮಹತ್ಯೆಗಳ ಪ್ರಮಾಣವು ಗಣನೀಯವಾಗಿ ಇಳಿಕೆಯಾಗಿದೆ” ಎಂದು ಹೇಳಿದರು. ಮೈಕ್ರೋ ಫೈನಾನ್ಸಿಯರ್ ಗಳ ಕಾಟದಿಂದ ಮೃತಪಟ್ಟ, ಆತ್ಮಹತ್ಯೆ ಮಾಡಿಕೊಂಡ ಕುಟುಂಬಗಳಿಗೆ ಮಾನವೀಯ ನೆಲೆಯಲ್ಲಿ ತಲಾ 5 ಲಕ್ಷ ರೂಪಾಯಿ ಪರಿಹಾರ ಕೊಡಲಾಗುವುದು. ಮೈಕ್ರೋ ಫೈನಾನ್ಸ್‌ಗಳ ಹಾವಳಿ ತಡೆಗಟ್ಟಲು ನಾವು ಕಠಿಣ ಕಾನೂನನ್ನು ಜಾರಿ ಮಾಡಿದ ನಂತರದಿಂದ ದೌರ್ಜನ್ಯ ಪ್ರಕರಣಗಳು ಹಾಗೂ ಆತ್ಮಹತ್ಯೆಗಳು ಗಣನೀಯ ಪ್ರಮಾಣದಲ್ಲಿ ಇಳಿಕೆಯಾಗಿವೆ ಎಂಬುದನ್ನು… pic.twitter.com/x5mq0ph80D — Siddaramaiah (@siddaramaiah) August 21, 2025

ಮಣ್ಣಿನ ಗಣಪನೆ ಪೂಜಿಸಿ, ವಿಸರ್ಜಿಸಿರಿ : ಸಚಿವ ಖಂಡ್ರೆ

ಬೆಂಗಳೂರು: ಸಾರ್ವಜನಿಕ ಗಣೇಶೋತ್ಸವಗಳಲ್ಲಿ ಪ್ಲಾಸ್ಟರ್ ಆಫ್ ಪ್ಯಾರಿಸ್ (ಪಿಓಪಿ) ಗಣಪ ಮೂರ್ತಿ ಬಳಕೆಗೆ ಅವಕಾಶ ನೀಡಲಾಗುವುದಿಲ್ಲ. ಪೆಂಡಾಲ್‌ಗೆ ಅನುಮತಿ ನೀಡುವ ಮುನ್ನ ಸಮಿತಿಗಳಿಂದ ಪಿಓಪಿ ಗಣಪ ಮೂರ್ತಿ ಬಳಸುವುದಿಲ್ಲವೆಂದು ಮುಚ್ಚಳಿಕೆ ಪಡೆದುಕೊಳ್ಳುವಂತೆ ಸ್ಥಳೀಯ ಸಂಸ್ಥೆಗಳಿಗೆ ಸೂಚಿಸಲಾಗಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ. ಖಂಡ್ರೆ ಹೇಳಿದ್ದಾರೆ. ವಿಕಾಸ ಸೌಧದಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, “ಶ್ರದ್ಧಾ ಭಕ್ತಿಯಿಂದ ಆಚರಿಸುವ ಹಬ್ಬವು ಪರಿಸರಕ್ಕೆ ಹಾಗೂ ಜಲಚರಗಳಿಗೆ ಮಾರಕವಾಗಬಾರದು. ಪಿಓಪಿ ಮೂರ್ತಿಗಳು ನೀರಲ್ಲಿ ಕರಗದೇ, ವಿಷಕಾರಿ ಅಂಶ ಸೇರಿಸುತ್ತವೆ. ಮಣ್ಣಿನ ಗಣಪ ಮೂರ್ತಿಗಳನ್ನೇ ಪೂಜಿಸಿ, ವಿಸರ್ಜಿಸಬೇಕು” ಎಂದು ಮನವಿ ಮಾಡಿದರು. ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಶೇ.90ರಷ್ಟು ಮಣ್ಣಿನ ಗಣಪ ಮೂರ್ತಿಗಳ ಪೂಜೆ ನಡೆಯುತ್ತಿದೆ. “ಅಲ್ಲಿ ಸಾಧ್ಯವಾಗುತ್ತಿರುವುದು ಉಳಿದ ಜಿಲ್ಲೆಗಳಲ್ಲಿ ಏಕೆ ಸಾಧ್ಯವಾಗಬಾರದು? ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ, ಜಿಲ್ಲಾಡಳಿತ ಹಾಗೂ…

ಕಾವೇರಿ ಪ್ರವಾಹ ಎಚ್ಚರಿಕೆ: ತಮಿಳುನಾಡಿನ 11 ಜಿಲ್ಲೆಗಳಿಗೆ ಮುನ್ನೆಚ್ಚರಿಕೆ ಸೂಚನೆ

ಚೆನ್ನೈ: ಕರ್ನಾಟಕದಲ್ಲಿ ಮುಂದುವರಿದಿರುವ ಭಾರೀ ಮಳೆಯಿಂದ ಅಣೆಕಟ್ಟೆಗಳು ವೇಗವಾಗಿ ತುಂಬುತ್ತಿದ್ದು, ಕಾವೇರಿ ನದಿಯಲ್ಲೂ ನೀರಿನ ಹರಿವು ಹೆಚ್ಚಾಗಿದೆ. ಕೃಷ್ಣರಾಜ ಸಾಗರ (ಕೆಆರ್‌ಎಸ್) ಹಾಗೂ ಕಬಿನಿ ಅಣೆಕಟ್ಟುಗಳಿಂದ ಒಟ್ಟಾಗಿ 95,000 ಕ್ಯೂಸೆಕ್‌ ನೀರನ್ನು ಬಿಡುಗಡೆ ಮಾಡಲಾಗಿದ್ದು, ಇದರ ಪರಿಣಾಮವಾಗಿ ತಮಿಳುನಾಡಿನ ಮೆಟ್ಟೂರು ಜಲಾಶಯಕ್ಕೆ ಭಾರೀ ಒಳಹರಿವು ದಾಖಲಾಗಿದೆ. ಮೆಟ್ಟೂರು ಅಣೆಕಟ್ಟು ಶೀಘ್ರದಲ್ಲೇ ಅದರ ಪೂರ್ಣ ಸಾಮರ್ಥ್ಯವಾದ 120 ಅಡಿಗಳನ್ನು ತಲುಪುವ ನಿರೀಕ್ಷೆಯಿದ್ದು, ಬಳಿಕ ಹೆಚ್ಚುವರಿ ನೀರನ್ನು ಕಾವೇರಿ ನದಿಗೆ ಬಿಡಲಾಗುವುದು. ಈ ಹಿನ್ನೆಲೆಯಲ್ಲಿ ತಮಿಳುನಾಡಿನ ಜಲಸಂಪನ್ಮೂಲ ಇಲಾಖೆ ಕಾವೇರಿ ತೀರದ ಸೇಲಂ, ಈರೋಡ್, ನಾಮಕ್ಕಲ್, ಕರೂರ್, ಅರಿಯಲೂರು, ತಿರುಚಿ, ತಂಜಾವೂರು, ತಿರುವರೂರು, ಮೈಲಾಡುತುರೈ, ನಾಗಪಟ್ಟಣಂ ಹಾಗೂ ಕಡಲೂರು ಜಿಲ್ಲೆಗಳ ತಗ್ಗು ಪ್ರದೇಶಗಳಿಗೆ ಪ್ರವಾಹ ಎಚ್ಚರಿಕೆ ನೀಡಿದೆ. ಸ್ಥಳೀಯ ನಿವಾಸಿಗಳು ಸುರಕ್ಷಿತ ಪ್ರದೇಶಗಳಿಗೆ ತೆರಳಿ ಜೀವ ಮತ್ತು ಆಸ್ತಿ ರಕ್ಷಿಸಿಕೊಳ್ಳುವಂತೆ ಜಿಲ್ಲಾಡಳಿತಗಳು ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲು ಸೂಚನೆ ನೀಡಿದ್ದಾರೆ.

ರಾಜ್ಯದಲ್ಲಿ ಮಳೆ ಬಿರುಸುಗೊಳ್ಳಲಿದೆ: ಹಲವು ಜಿಲ್ಲೆಗಳಿಗೆ ಎಚ್ಚರಿಕೆ

ಬೆಂಗಳೂರು: ಆಗಸ್ಟ್‌ 24ರವರೆಗೆ ರಾಜ್ಯಾದ್ಯಂತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ವಿಶೇಷವಾಗಿ ಆಗಸ್ಟ್‌ 19ರಂದು (ಮಂಗಳವಾರ) ಉತ್ತರ ಒಳನಾಡು, ದಕ್ಷಿಣ ಒಳನಾಡು ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ನಿರೀಕ್ಷೆಯಿದ್ದು, ಆರೆಂಜ್‌ ಅಲರ್ಟ್‌ ಘೋಷಿಸಲಾಗಿದೆ. ಮುಂಜಾಗ್ರತಾ ಕ್ರಮವಾಗಿ ಧಾರವಾಡ, ಚಿಕ್ಕಮಗಳೂರು, ಬೆಳಗಾವಿ ಹಾಗೂ ಕೊಡಗು ಜಿಲ್ಲೆಗಳಲ್ಲಿ ಮಂಗಳವಾರ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಉಡುಪಿ, ಉತ್ತರ ಕನ್ನಡ, ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆಗಳಿಗೆ ರೆಡ್‌ ಅಲರ್ಟ್‌ ನೀಡಲಾಗಿದೆ. ದಕ್ಷಿಣ ಕನ್ನಡ, ಬೆಳಗಾವಿ, ಬೀದರ್‌, ಕಲಬುರಗಿ, ವಿಜಯಪುರ, ಹಾಸನ ಹಾಗೂ ಕೊಡಗು ಜಿಲ್ಲೆಗಳಿಗೆ ಆರೆಂಜ್‌ ಅಲರ್ಟ್‌ ಜಾರಿಯಲ್ಲಿದೆ. ಬಾಗಲಕೋಟ, ಯಾದಗಿರಿ, ಬಳ್ಳಾರಿ ಮತ್ತು ದಾವಣಗೆರೆ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ನೀಡಲಾಗಿದೆ.

ಬೆಳಗಾವಿ ಬಾಣಂತಿಯರ ಸಾವು ಪ್ರಕರಣ ಕುರಿತು ಪರಿಶೀಲನೆ: ಪರಿಷತ್‌ನಲ್ಲಿ ಸಚಿವರ ಮಾಹಿತಿ

ಬೆಂಗಳೂರು: ಬೆಳಗಾವಿ ವೈದ್ಯಕೀಯ ವಿಜ್ಞಾನ ಸಂಸ್ಥೆಯ ಆಸ್ಪತ್ರೆಯಲ್ಲಿ ಸಂಭವಿಸಿರುವ ಬಾಣಂತಿಯರು ಮತ್ತು ಶಿಶುಗಳ ಸಾವು ವಿಚಾರದ ಕುರಿತು ಸಮಗ್ರವಾಗಿ ಪರಿಶೀಲನೆ ನಡೆಸಲಾಗುವುದು ಎಂದು ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಜೀವನೋಪಾಯ ಮತ್ತು ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಶರಣಪ್ರಕಾಶ್ ಆರ್‌. ಪಾಟೀಲ್ ತಿಳಿಸಿದ್ದಾರೆ. ವಿಧಾನಪರಿಷತ್‌ನ ಸೋಮವಾರದ ಕಲಾಪದಲ್ಲಿ ಸದಸ್ಯರಾದ ಎನ್‌.ನಾಗರಾಜ್‌ ಅವರ ಗಮನ ಸೆಳೆಯುವ ಸೂಚನೆಗೆ ಉತ್ತರ ನೀಡಿರುವ ಸಚಿವರು, ಬೆಳಗಾವಿ ಪ್ರಕರಣದ ಕುರಿತು ಅಧಿಕಾರಿಗಳೊಂದಿಗೆ ಚರ್ಚಿಸಲಾಗಿದ್ದು, ಸಮಗ್ರ ವರದಿ ಸಲ್ಲಿಸಲು ತಿಳಿಸಿದ್ದೇನೆ ಎಂದರು. ನಮ್ಮ ರಾಜ್ಯದಲ್ಲಿ ಬಾಣಂತಿಯರು/ಶಿಶುಗಳ ಮರಣ ಪ್ರಮಾಣ 7.97 ಆವರೇಜ್ ಇದೆ. ಬೆಳಗಾವಿಯಲ್ಲಿ 7.72 ರಷ್ಟು ಇದೆ. ಇದನ್ನು ನಾನು ಸಮರ್ಥನೆ ಮಾಡುತ್ತಿಲ್ಲ. ಈ ಕುರಿತು ಮಾಹಿತಿ ನೀಡುತ್ತೇನೆ ಎಂದರು. ಬೆಳಗಾವಿ ಬಿಮ್ಸ್ ಗೆ ತುಂಬಾ ದೂರದ ಊರು, ಗ್ರಾಮಗಳಿಂದ ಜನರು ಬರುತ್ತಾರೆ. ಹೈ ರಿಸ್ಕ್ ಪ್ರೆಗ್ನೆನ್ಸಿಸ್ ಕೂಡ ಇರುತ್ತದೆ. ಈ ಮರಣಗಳಿಗೆ…

ಹೃದಯಾಘಾತ ಬಗ್ಗೆ ಜನತೆ ಅನಗತ್ಯವಾಗಿ ಗೊಂದಲಕ್ಕೆ ಒಳಗಾಗಬಾರದು: ಡಾ.ಶರಣ್ ಪ್ರಕಾಶ್ ಪಾಟೀಲ್

ಬೆಂಗಳೂರು:ರಾಜ್ಯದಲ್ಲಿ ಹೆಚ್ಚುತ್ತಿರುವ ಹೃದಯಾಘಾತಗಳಿಗೆ ಜನತೆ ಅನಗತ್ಯವಾಗಿ ಗೊಂದಲಕ್ಕೆ ಒಳಗಾಗಬಾರದು. ವ್ಯಾಯಾಮ, ಪ್ರಾಣಾಯಾಮ, ಆಹಾರಪದ್ಧತಿ ಹಾಗೂ ಜೀವನ ಶೈಲಿಯನ್ನು ಬದಲಾವಣೆ ಮಾಡಿದರೆ ಯಾವುದೇ ಸಮಸ್ಯೆ ಬರುವುದಿಲ್ಲ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ್ ಪಾಟೀಲ್ ಜನತೆಗೆ ಧೈರ್ಯ ತುಂಬಿದ್ದಾರೆ. ವಿಧಾನ ಪರಿಷತ್ ನಲ್ಲಿ ಸೋಮವಾರ ಕಾಂಗ್ರೆಸ್ ಸದಸ್ಯ ದಿನೇಶ್ ಗೂಳಿಗೌಡ ಅವರ ಪ್ರಶ್ನೆ ಉತ್ತರಿಸಿದ ಅವರು, ಇತ್ತೀಚೆಗೆ ಹೃದಯಾಘಾತ, ಪ್ರಕರಣಗಳ ಸಂಖ್ಯೆ ಹೆಚ್ಚಳದ ಆತಂಕ ಎಲ್ಲರಲ್ಲೂ ಮನೆ ಮಾಡಿದೆ. ಜಯದೇವ ಆಸ್ಪತ್ರೆಯಲ್ಲಿ ಜನರು ಪ್ರತಿನಿತ್ಯ ಬಂದು ಹೃದಯ ತಪಾಸಣೆ ಮಾಡಿಸಿಕೊಳ್ಳುತ್ತಿದ್ದಾರೆ. ಇದರ ಪ್ರಮಾಣ ಶೇ.25ರಷ್ಟು ಏರಿಕೆಯಾಗಿದೆ ಎಂದು ಪಾಟೀಲ್ ಮಾಹಿತಿ ನೀಡಿದರು. ವಿಶೇಷವಾಗಿ ಹಾಸನ ಜಿಲ್ಲೆಯಲ್ಲಿ ಹೃದಯಘಾತಗಳ ಸಂಖ್ಯೆ ಹೆಚ್ಚಳವಾಗಿದೆ ಎಂಬ ಆತಂಕ ಜನರಲ್ಲಿ ಮೂಡಿದೆ. ಇದು ತಪ್ಪು ಗ್ರಹಿಕೆ. ವಾಸ್ತವವಾಗಿ ಹಿಂದಿನ ವರ್ಷಗಳಿಗೆ ಹೋಲಿಸಿದರೆ ಸರಾಸರಿ ಪ್ರಮಾಣದಲ್ಲಿ ಯಾವುದೇ ವ್ಯತ್ಯಾಸವಾಗಿಲ್ಲ. ಶೇ.5ರಿಂದ 6ರಷ್ಟು ಪ್ರಕರಣಗಳು ಹೃದಯಾಘಾತಕ್ಕೆ ಸಂಬಂಧಿಸಿದವು.…

ಧರ್ಮಸ್ಥಳಕ್ಕೆ ಬಿಜೆಪಿ ನಾಯಕರ ಭೇಟಿ; ಸುಳ್ಳು ಪ್ರಚಾರ ಬಗ್ಗೆ ಸಿಎಂ ಕ್ಷಮೆಯಾಚನೆಗೆ ಆಗ್ರಹ

ಮಂಗಳೂರು: ಹಾಸನ ಜಿಲ್ಲೆಯ ಧರ್ಮಸ್ಥಳದಲ್ಲಿ ನಡೆದಿರುವ ಸಾಮೂಹಿಕ ಸಮಾಧಿ ಪ್ರಕರಣ ಆಧರಿಸಿ ಸಾಮಾಜಿಕ ಮಾಧ್ಯಮಗಳಲ್ಲಿ ನಡೆಯುತ್ತಿರುವ ಅಪಪ್ರಚಾರವನ್ನು ಖಂಡಿಸಿ, ರಾಜ್ಯ ಬಿಜೆಪಿ ನಾಯಕರು ಭಾನುವಾರ ಧರ್ಮಸ್ಥಳಕ್ಕೆ ಭೇಟಿ ನೀಡಿದರು. ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ನೇತೃತ್ವದ ನಿಯೋಗವು ಮಂಜುನಾಥ ಸ್ವಾಮಿಗೆ ದರ್ಶನ ನೀಡಿ, ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ಅವರನ್ನು ಭೇಟಿಯಾಗಿ ಸಮಾಲೋಚನೆ ನಡೆಸಿತು. ನಿಯೋಗದಲ್ಲಿ ಶಾಸಕರು, ಸಂಸದರು, ವಿಧಾನ ಪರಿಷತ್ ಸದಸ್ಯರು ಹಾಗೂ ಪಕ್ಷದ ಪ್ರಮುಖ ನಾಯಕರು ಸೇರಿದ್ದರು. “ಭಕ್ತರ ಭಾವನೆಗಳಿಗೆ ಧಕ್ಕೆ, ಸಿಎಂ ಕ್ಷಮೆಯಾಚನೆ ಬೇಕು” ಸಾಮೂಹಿಕ ಸಮಾಧಿ ವಿಚಾರದ ಕುರಿತು ಸರ್ಕಾರದ ನಿಶ್ಕ್ರಿಯತೆ ಹಾಗೂ ಮೌನವನ್ನು ಟೀಕಿಸಿದ ವಿಜಯೇಂದ್ರ, “ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೋಟ್ಯಂತರ ಭಕ್ತರ ಧಾರ್ಮಿಕ ಭಾವನೆಗಳಿಗೆ ನೋವುಂಟುಮಾಡಿರುವ ಸುಳ್ಳು ಪ್ರಚಾರವನ್ನು ತಡೆಯುವಲ್ಲಿ ವಿಫಲರಾಗಿದ್ದಾರೆ. ಅವರು ಜನರ ಕ್ಷಮೆಯಾಚಿಸಬೇಕು” ಎಂದು ಹೇಳಿದರು. ವಿಜಯೇಂದ್ರ ಅವರು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ…

‘ಖಾಸಗಿ ವಾಹನಗಳಿಗೆ ಫಾಸ್ಟ್‌ಟ್ಯಾಗ್ ಆಧಾರಿತ ವಾರ್ಷಿಕ ಟೋಲ್ ಪಾಸ್’ ವ್ಯವಸ್ಥೆ ಆರಂಭ: ವಾರ್ಷಿಕ ಪಾಸ್‌ನ ಬೆಲೆ ಕೇವಲ….

ನವದೆಹಲಿ: 79 ನೇ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಕೇಂದ್ರ ಸರ್ಕಾರವು ಶುಕ್ರವಾರ ಖಾಸಗಿ ವಾಹನಗಳಿಗೆ ಫಾಸ್ಟ್‌ಟ್ಯಾಗ್ ಆಧಾರಿತ ವಾರ್ಷಿಕ ಟೋಲ್ ಪಾಸ್ ಅನ್ನು ಪರಿಚಯಿಸಿದೆ. ವಾರ್ಷಿಕ ಪಾಸ್‌ನ ಬೆಲೆ 3,000 ರೂ. ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಮತ್ತು ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯ ನಡೆಸುವ ಟೋಲ್ ಪ್ಲಾಜಾಗಳಲ್ಲಿ ಕಾರುಗಳು, ಜೀಪ್‌ಗಳು ಮತ್ತು ವ್ಯಾನ್‌ಗಳು ಈ ಸೌಲಭ್ಯವನ್ನು ಬಳಸಬಹುದು. ಪಾಸ್ ಸಕ್ರಿಯಗೊಳಿಸಿದ ದಿನಾಂಕದಿಂದ ಒಂದು ವರ್ಷ ಅಥವಾ 200 ಟೋಲ್ ಟ್ರಿಪ್‌ಗಳಿಗೆ, ಯಾವುದು ಮೊದಲು ಸಂಭವಿಸುತ್ತದೆಯೋ ಅದು ಮಾನ್ಯವಾಗಿರುತ್ತದೆ. ಮಿತಿಯನ್ನು ತಲುಪಿದಾಗ, ಫಾಸ್ಟ್‌ಟ್ಯಾಗ್ ಸ್ವಯಂಚಾಲಿತವಾಗಿ ಪ್ರಮಾಣಿತ ಪೇ-ಪರ್-ಟ್ರಿಪ್ ಮೋಡ್‌ಗೆ ಬದಲಾಗುತ್ತದೆ. ಪಾಯಿಂಟ್-ಆಧಾರಿತ ಟೋಲ್ ಪ್ಲಾಜಾಗಳಿಗೆ, ಪ್ರತಿ ಒನ್-ವೇ ಕ್ರಾಸಿಂಗ್ ಅನ್ನು ಒಂದು ಟ್ರಿಪ್ ಆಗಿ ಎಣಿಕೆ ಮಾಡಲಾಗುತ್ತದೆ ಮತ್ತು ರಿಟರ್ನ್ ಅನ್ನು ಎರಡು ಎಂದು ಎಣಿಕೆ ಮಾಡಲಾಗುತ್ತದೆ. ಮುಚ್ಚಿದ ಅಥವಾ ಟಿಕೆಟ್ ಮಾಡಿದ ವ್ಯವಸ್ಥೆಗಳಲ್ಲಿ, ಸಂಪೂರ್ಣ…

ಜಾಗತಿಕ ಶಿಕ್ಷಣ: ವಿದೇಶದಲ್ಲಿ ವ್ಯಾಸಂಗ ಮಾಡುವವರಿಗೆ ಮಾಹಿತಿ ನೀಡಲು ವಿಶೇಷ ಮೇಳ

ಬೆಂಗಳೂರು: ವಿದೇಶ ವ್ಯಾಸಂಗ ಶ್ರೀಮಂತರಿಗೆ ಮಾತ್ರವಲ್ಲ ಈಗ ಎಲ್ಲರಿಗೂ ಕೈಗೆಟುಕಲಿದೆ. ವಿದೇಶದಲ್ಲಿ ಅಧ್ಯಯನ ಮಾಡಬೇಕೆಂಬ ಕನಸು ಕಂಡಿರುವವರಿಗೆ ಅದು ನನಸಾಗುವ ಕಾಲ ಬಂದಿದೆ. ಆರ್ಥಿಕವಾಗಿ ದುರ್ಬಲವಾಗಿರುವ, ಮಧ್ಯಮವರ್ಗದ ಹಿನ್ನೆಲೆಯ ವಿದ್ಯಾರ್ಥಿಗಳು ಸಹ ಈಗ ವಿದೇಶದಲ್ಲಿ ಉನ್ನತ ಶಿಕ್ಷಣವನ್ನು ಯಾವುದೇ ತೊಂದರೆಯಿಲ್ಲದೇ ಪಡೆಯಬಹುದಾಗಿದೆ. ಕೌಶಲ್ಯ ಅಭಿವೃದ್ಧಿ ಇಲಾಖೆ ಅಡಿಯ ಕರ್ನಾಟಕ ವೃತ್ತಿಪರ ತರಬೇತಿ ಮತ್ತು ಕೌಶಲ್ಯ ಅಭಿವೃದ್ಧಿ ನಿಗಮ (ಕೆವಿಟಿಎಸ್‌ಡಿಸಿ) ಆಗಸ್ಟ್ 17 ರ ಭಾನುವಾರ ಹೋಟೆಲ್ ಲಲಿತ್ ಅಶೋಕ್‌ನಲ್ಲಿ ಅಂತಾರಾಷ್ಟ್ರೀಯ ವಿದೇಶದಲ್ಲಿ ಅಧ್ಯಯನ ಮೇಳ – 2025 ಅನ್ನು ಆಯೋಜಿಸಿದೆ. ಈ ವಿಶೇಷ ಕಾರ್ಯಕ್ರಮದಲ್ಲಿ 50 ಕ್ಕೂ ಹೆಚ್ಚು ಪ್ರಮುಖ ಜಾಗತಿಕ ವಿಶ್ವವಿದ್ಯಾಲಯಗಳು ಭಾಗವಹಿಸುವ ನಿರೀಕ್ಷೆ ಇದೆ. ಈ ಸಂಸ್ಥೆಗಳು ವಿಶ್ವದ ಟಾಪ್ 500 ರಲ್ಲಿ ಸ್ಥಾನ ಪಡೆದಿವೆ. ಈ ಕುರಿತು ಮಾಹಿತಿ ಹಂಚಿಕೊಂಡಿರುವ ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಜೀವನೋಪಾಯ ಮತ್ತು ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವರಾದ…