ಬೆಂಗಳೂರು: ದೆಹಲಿಯಲ್ಲಿ ವಿದ್ಯಾರ್ಥಿಗಳ ಮೇಲಿನ ಪೊಲೀಸ್ ಕ್ರಮವನ್ನು ಖಂಡಿಸಿ ಪ್ರಧಾನಿ ನಿವಾಸದ ಬಳಿ ಪ್ರತಿಭಟನೆ ನಡೆಸುತ್ತಿದ್ದ ವಿರೋಧ ಪಕ್ಷದ ನಾಯಕರನ್ನು ಬಂಧಿಸಿರುವ ಕ್ರಮವನ್ನು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ತೀವ್ರವಾಗಿ ಖಂಡಿಸಿದ್ದಾರೆ. ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪ್ರತಿಕ್ರಿಯಿಸಿರುವ ಅವರು, ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ, ಅಖಿಲೇಶ್ ಯಾದವ್ ಸೇರಿದಂತೆ ಇತರ ನಾಯಕರ ಬಂಧನ ಹಾಗೂ ಪ್ರತಿಭಟನಾಕಾರರ ವಿರುದ್ಧದ ಪೊಲೀಸ್ ಕ್ರಮ ಪ್ರಜಾಪ್ರಭುತ್ವದ ಮೌಲ್ಯಗಳಿಗೆ ವಿರುದ್ಧವಾಗಿದೆ ಎಂದು ಆರೋಪಿಸಿದ್ದಾರೆ. ವಿದ್ಯಾರ್ಥಿಗಳ ಮೇಲಿನ ಲಾಠಿಚಾರ್ಜ್‌ಗೆ ಉತ್ತರವಾಗಿ ಕೇಂದ್ರ ಸರ್ಕಾರ ಇದೀಗ ಚುನಾಯಿತ ಪ್ರತಿನಿಧಿಗಳ ವಿರುದ್ಧವೂ ಪೊಲೀಸ್ ಬಲ ಬಳಸುತ್ತಿದೆ. ಇದು ಆತ್ಮವಿಶ್ವಾಸದ ಸರ್ಕಾರದ ನಡೆ ಅಲ್ಲ, ವಿದ್ಯಾರ್ಥಿಗಳ ಪ್ರಶ್ನೆಗಳಿಗೆ ಹೆದರುವ ಸರ್ಕಾರದ ಪ್ರತಿಕ್ರಿಯೆಯಾಗಿದೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ. ಪರೀಕ್ಷಾ ಅಕ್ರಮ, ನಿರುದ್ಯೋಗ ಹಾಗೂ ಅನ್ಯಾಯದ ವಿರುದ್ಧ ರಾಹುಲ್ ಗಾಂಧಿ ನಿರಂತರವಾಗಿ ವಿದ್ಯಾರ್ಥಿಗಳ ಪರವಾಗಿ ಧ್ವನಿ ಎತ್ತಿದ್ದಾರೆ.…
Category: ರಾಜ್ಯ
ರಾಹುಲ್ ಗಾಂಧಿ ಬಂಧನ ಖಂಡನೀಯ; ಪೊಲೀಸ್ ಬಲಪ್ರಯೋಗಕ್ಕೆ ನಾಯಕರ ಆಕ್ರೋಶ
ಬೆಂಗಳೂರು: ದೆಹಲಿಯಲ್ಲಿ ಪ್ರಧಾನಮಂತ್ರಿ ನಿವಾಸದ ಮುಂದೆ ನಮ್ಮ ನಾಯಕರಾದ ಶ್ರೀ ರಾಹುಲ್ ಗಾಂಧಿ ಅವರ ನೇತೃತ್ವದಲ್ಲಿ ಶಾಂತಿಯುತವಾಗಿ ನಡೆಯುತ್ತಿದ್ದ ಧರಣಿಯನ್ನು ಹತ್ತಿಕ್ಕಿ, ರಾಹುಲ್ ಗಾಂಧಿ ಅವರನ್ನು ಅಕ್ರಮವಾಗಿ ಬಂಧಿಸಿರುವ ಕೇಂದ್ರ ಬಿಜೆಪಿ ಸರ್ಕಾರದ ಸರ್ವಾಧಿಕಾರಿ ಧೋರಣೆಯನ್ನು ತೀವ್ರವಾಗಿ ಖಂಡಿಸುತ್ತೇನೆ ಎಂದು ಮಾಜಿ ಸಚಿವ ಎನ್. ಚಲುವರಾಯಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದು ಪ್ರಜಾಪ್ರಭುತ್ವದ ಕಗ್ಗೊಲೆಯಾಗಿದೆ. ದೇಶದ ಜನರ ಸಮಸ್ಯೆಗಳ ಪರ ಧ್ವನಿ ಎತ್ತಿದರೆ, ಭ್ರಷ್ಟಾಚಾರದ ವಿರುದ್ಧ ಪ್ರಶ್ನೆ ಮಾಡಿದರೆ ಬಂಧನವೇ? ಇದು ಯಾವ ನ್ಯಾಯ? ಕೇಂದ್ರ ಸರ್ಕಾರ ವಿರೋಧ ಪಕ್ಷಗಳ ಧ್ವನಿಯನ್ನು ಅಡಗಿಸಲು ಪೊಲೀಸ್ ಬಲವನ್ನು ದುರುಪಯೋಗ ಮಾಡಿಕೊಳ್ಳುತ್ತಿದೆ. “ರಾಹುಲ್ ಗಾಂಧಿ ಅವರು ಈ ದೇಶದ ಬಡವರು, ರೈತರು, ನಿರುದ್ಯೋಗಿ ಯುವಕರ ಪರ ನಿರಂತರ ಹೋರಾಟ ಮಾಡುತ್ತಿದ್ದಾರೆ. ಅವರ ಹೋರಾಟಕ್ಕೆ ಹೆದರಿ ಕೇಂದ್ರ ಸರ್ಕಾರ ಈ ರೀತಿ ದಮನಕಾರಿ ನೀತಿ ಅನುಸರಿಸುತ್ತಿದೆ. ಆದರೆ ರಾಹುಲ್ ಗಾಂಧಿ ಅವರು ಜೈಲು,…
ಶಿವಾಜಿನಗರದಲ್ಲಿ ಅಧಿಕಾರಿಗಳ ಮೇಲಿನ ಹಲ್ಲೆಗೆ ಬಿಜೆಪಿ ಖಂಡನೆ; ಹಲ್ಲೆಕೋರರ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹ
ಬೆಂಗಳೂರು: ಶಿವಾಜಿನಗರದಲ್ಲಿ ಫುಟ್‌ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ವೇಳೆ ಜಿಬಿಎ (GBA) ಅಧಿಕಾರಿಯ ಮೇಲೆ ನಡೆದ ಹಲ್ಲೆಯನ್ನು ವಿಧಾನಸಭೆ ಪ್ರತಿಪಕ್ಷ ನಾಯಕ ಆರ್. ಅಶೋಕ್ ತೀವ್ರವಾಗಿ ಖಂಡಿಸಿದ್ದಾರೆ. ಕರ್ತವ್ಯ ನಿರ್ವಹಿಸುತ್ತಿದ್ದ ಸರ್ಕಾರಿ ಅಧಿಕಾರಿಯ ಮೇಲೆಯೇ ದಾಳಿ ನಡೆಯುತ್ತಿರುವುದು ರಾಜ್ಯದ ಕಾನೂನು ಸುವ್ಯವಸ್ಥೆ ಹದಗೆಟ್ಟಿರುವುದಕ್ಕೆ ಸಾಕ್ಷಿಯಾಗಿದೆ ಎಂದು ಅವರು ಆರೋಪಿಸಿದ್ದಾರೆ. ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಘಟನೆಯ ವಿಡಿಯೊ ಹಂಚಿಕೊಂಡಿರುವ ಅಶೋಕ್, ಇತರ ಪ್ರದೇಶಗಳಲ್ಲಿ ಒತ್ತುವರಿ ತೆರವು ವೇಳೆ ಸಕ್ರಿಯರಾಗಿರುವ ಬೆಂಗಳೂರು ಅಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ಅವರು ಈ ಘಟನೆಯ ಬಗ್ಗೆ ಮೌನವಾಗಿರುವುದೇಕೆ ಎಂದು ಪ್ರಶ್ನಿಸಿದ್ದಾರೆ. ಅಧಿಕಾರಿಗಳ ಬೆನ್ನಿಗೆ ನಿಲ್ಲುವುದು ಸರ್ಕಾರದ ಜವಾಬ್ದಾರಿಯಾಗಿದೆ ಎಂದು ಹೇಳಿದ್ದಾರೆ. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನೂ ಉಲ್ಲೇಖಿಸಿರುವ ಅಶೋಕ್, ಕರ್ತವ್ಯ ನಿರ್ವಹಿಸುತ್ತಿರುವ ಅಧಿಕಾರಿಗಳ ಮೇಲೆ ಮಾರಣಾಂತಿಕ ಹಲ್ಲೆ ನಡೆದರೂ ಸರ್ಕಾರ ಮೌನ ವಹಿಸಿರುವುದು ಸರಿಯಲ್ಲ ಎಂದು ಟೀಕಿಸಿದ್ದಾರೆ. ಶಿವಾಜಿನಗರದಲ್ಲಿ ಒತ್ತುವರಿ ತೆರವು ಮಾಡಲು…
‘ವಿದ್ಯಾರ್ಥಿಗಳ ಹೆಸರಿನಲ್ಲಿ ರಾಹುಲ್ ಗಾಂಧಿ ರಾಜಕೀಯ’: ವಿಜಯೇಂದ್ರ ಆರೋಪ
ಬೆಂಗಳೂರು: ನೀಟ್ ಹಗರಣ ಮತ್ತು ವಿದ್ಯಾರ್ಥಿಗಳ ಪ್ರತಿಭಟನೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನಡೆಸುತ್ತಿರುವ ಪ್ರತಿಭಟನೆಗಳನ್ನು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ತೀವ್ರವಾಗಿ ಟೀಕಿಸಿದ್ದಾರೆ. ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪ್ರತಿಕ್ರಿಯಿಸಿರುವ ವಿಜಯೇಂದ್ರ, ಅಧಿಕಾರದಲ್ಲಿದ್ದಾಗ ವಿದ್ಯಾರ್ಥಿಗಳು ಮತ್ತು ಯುವಕರ ಸಮಸ್ಯೆಗಳನ್ನು ನಿರ್ಲಕ್ಷಿಸಿದ್ದ ಕಾಂಗ್ರೆಸ್, ಈಗ ಅವರ ಬಗ್ಗೆ ಕಾಳಜಿ ತೋರಿಸುತ್ತಿರುವುದು ಕಪಟ ಎಂದು ಆರೋಪಿಸಿದ್ದಾರೆ. ರಾಹುಲ್ ಗಾಂಧಿ ಇತ್ತೀಚಿನ ದಿನಗಳಲ್ಲಿ ವಿದೇಶ ಪ್ರವಾಸದಲ್ಲಿದ್ದು, ಹಿಂಸಾಚಾರ ಭುಗಿಲೆದ್ದ ಬಳಿಕವೇ ಮರಳಿ ಪ್ರತಿಭಟನೆಗೆ ಮುಂದಾಗಿರುವುದು ಹಲವು ಪ್ರಶ್ನೆಗಳನ್ನು ಹುಟ್ಟುಹಾಕಿದೆ ಎಂದು ಅವರು ಹೇಳಿದ್ದಾರೆ. ನಿರುದ್ಯೋಗದ ಬಗ್ಗೆ ಕಾಂಗ್ರೆಸ್ ಟೀಕಿಸುವುದು ಸೂಕ್ತವಲ್ಲ. ಯುಪಿಎ ಆಡಳಿತದ ಅವಧಿಯಲ್ಲೂ ನಿರುದ್ಯೋಗ ದೊಡ್ಡ ಸಮಸ್ಯೆಯಾಗಿತ್ತು. ಕಾಂಗ್ರೆಸ್ ಆಡಳಿತದ ಕರ್ನಾಟಕದಲ್ಲಿಯೂ ಉದ್ಯೋಗ ಸೃಷ್ಟಿಗೆ ಆದ್ಯತೆ ನೀಡಲಾಗಿಲ್ಲ ಎಂದು ವಿಜಯೇಂದ್ರ ಆರೋಪಿಸಿದ್ದಾರೆ. ವಿದ್ಯಾರ್ಥಿಗಳ ಪ್ರತಿಭಟನೆಗಳ ದುರುಪಯೋಗಕ್ಕೆ ಕೆಲವು ವಿದೇಶಿ ಶಕ್ತಿಗಳು ಪ್ರಯತ್ನಿಸುತ್ತಿರುವ ಬಗ್ಗೆ ಆತಂಕ ವ್ಯಕ್ತವಾಗುತ್ತಿರುವ ಸಂದರ್ಭದಲ್ಲಿ, ರಾಹುಲ್…
ವಿದ್ಯಾರ್ಥಿಗಳ ಮೇಲೆ ಲಾಠಿಚಾರ್ಜ್: ಕೇಂದ್ರದ ನಡೆಗೆ ಸಿದ್ದರಾಮಯ್ಯ ಆಕ್ಷೇಪ
ಬೆಂಗಳೂರು: ದೆಹಲಿಯಲ್ಲಿ ನೀಟ್ ಪರೀಕ್ಷೆ ಹಗರಣ ವಿರೋಧಿಸಿ ಪ್ರತಿಭಟನೆ ನಡೆಸುತ್ತಿದ್ದ ವಿದ್ಯಾರ್ಥಿಗಳ ಮೇಲೆ ನಡೆದಿರುವ ಲಾಠಿಚಾರ್ಜ್‌ನ್ನು ಖಂಡಿಸಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೇಂದ್ರ ಸರ್ಕಾರದ ಕ್ರಮವನ್ನು ತೀವ್ರವಾಗಿ ಟೀಕಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಶಾಂತಿಯುತ ಪ್ರತಿಭಟನೆಯನ್ನು ಬಲಪ್ರಯೋಗದ ಮೂಲಕ ಹತ್ತಿಕ್ಕಲು ಯತ್ನಿಸುತ್ತಿದ್ದು, ದೇಶದಲ್ಲಿ ಅಘೋಷಿತ ತುರ್ತು ಪರಿಸ್ಥಿತಿಯಂತಹ ವಾತಾವರಣ ನಿರ್ಮಾಣವಾಗಿದೆ ಎಂದು ಆರೋಪಿಸಿದ್ದಾರೆ. ಈ ಕುರಿತು ಪ್ರಕಟಣೆ ನೀಡಿರುವ ಅವರು, ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ನೂರಾರು ವಿದ್ಯಾರ್ಥಿಗಳು ಪೊಲೀಸರ ಲಾಠಿಚಾರ್ಜ್‌ನಿಂದ ಗಾಯಗೊಂಡಿದ್ದಾರೆ ಎಂದು ಹೇಳಿದ್ದಾರೆ. ಕೇವಲ ದೆಹಲಿಯಲ್ಲಿ ಮಾತ್ರವಲ್ಲ, ಕರ್ನಾಟಕ ಸೇರಿದಂತೆ ದೇಶದ ವಿವಿಧ ಭಾಗಗಳಲ್ಲಿ ಕೇಂದ್ರ ಸರ್ಕಾರದ ಶಿಕ್ಷಣ ಹಾಗೂ ಯುವಜನ ವಿರೋಧಿ ನೀತಿಗಳ ವಿರುದ್ಧ ವಿದ್ಯಾರ್ಥಿಗಳು ಮತ್ತು ಯುವಕರು ಪ್ರತಿಭಟನೆ ನಡೆಸುತ್ತಿದ್ದಾರೆ ಎಂದು ತಿಳಿಸಿದ್ದಾರೆ. ನೀಟ್ ಪರೀಕ್ಷೆ ಹಗರಣ ಹಾಗೂ ಶಿಕ್ಷಣ ವ್ಯವಸ್ಥೆಯಲ್ಲಿನ ಅಕ್ರಮಗಳ ವಿರುದ್ಧ ದೇಶಾದ್ಯಂತ ಆಕ್ರೋಶ ವ್ಯಕ್ತವಾಗುತ್ತಿದೆ. ಶಿಕ್ಷಣ ಸಚಿವ…
‘ಜಕ್ಕೂರು ಫ್ಲೈಯಿಂಗ್ ಸ್ಕೂಲ್ ಮತ್ತೆ ಹಾರಲಿದೆ; ಸತ್ಯ ಗೆದ್ದಿದೆ’ : ಆರ್. ಅಶೋಕ್
ಬೆಂಗಳೂರು: ಜಕ್ಕೂರು ಸರ್ಕಾರಿ ಫ್ಲೈಯಿಂಗ್ ಟ್ರೈನಿಂಗ್ ಸ್ಕೂಲ್ (GFTS)ಗೆ ಡಿಜಿಸಿಎ (DGCA) 2026ರಿಂದ 2031ರವರೆಗೆ ಐದು ವರ್ಷಗಳ ಪರವಾನಗಿಯನ್ನು ನವೀಕರಿಸಿರುವುದನ್ನು ಸ್ವಾಗತಿಸಿದ ವಿಧಾನಸಭೆ ಪ್ರತಿಪಕ್ಷ ನಾಯಕ ಆರ್. ಅಶೋಕ್, ಇದನ್ನು “ಸತ್ಯದ ಗೆಲುವು” ಎಂದು ಬಣ್ಣಿಸಿದ್ದಾರೆ. ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪ್ರತಿಕ್ರಿಯಿಸಿರುವ ಅವರು, ಜಕ್ಕೂರು ಫ್ಲೈಯಿಂಗ್ ಸ್ಕೂಲ್ ಅನ್ನು ಸ್ಥಳಾಂತರಿಸುವ ಮೂಲಕ ಅಮೂಲ್ಯ ಸಾರ್ವಜನಿಕ ಭೂಮಿಯನ್ನು ರಿಯಲ್ ಎಸ್ಟೇಟ್ ಹಿತಾಸಕ್ತಿಗಳಿಗೆ ಒಪ್ಪಿಸುವ ಪ್ರಯತ್ನ ನಡೆದಿತ್ತು ಎಂದು ಆರೋಪಿಸಿದರು. ಈ ವಿಚಾರವನ್ನು ಬಿಜೆಪಿ ಮೊದಲಿನಿಂದಲೇ ವಿಧಾನಸಭೆಯಲ್ಲಿ ದಾಖಲೆಗಳೊಂದಿಗೆ ಪ್ರಸ್ತಾಪಿಸಿತ್ತು ಎಂದು ಹೇಳಿದ್ದಾರೆ. ನಮ್ಮ ಎಚ್ಚರ…. ನಮ್ಮ ಹೋರಾಟ, ನಮ್ಮ ಧ್ವನಿ…. ಇಂದು ಸತ್ಯ ಗೆದ್ದಿದೆ! ಜಕ್ಕೂರು ಫ್ಲೈಯಿಂಗ್ ಸ್ಕೂಲ್ ಮತ್ತೆ ಹಾರಲಿದೆ! ✈️ ಮೈಸೂರು ರಾಜಮನೆತನ ನಾಡಿಗೆ ದಾನವಾಗಿ ನೀಡಿದ ಅಮೂಲ್ಯ ಭೂಮಿಯಲ್ಲಿ ನಿರ್ಮಾಣಗೊಂಡಿರುವ ದೇಶದ ಅತ್ಯಂತ ಹಳೆಯ ಹಾರಾಟ ತರಬೇತಿ ಸಂಸ್ಥೆಗಳಲ್ಲಿ ಒಂದಾದ ಜಕ್ಕೂರು ಸರ್ಕಾರಿ ಫ್ಲೈಯಿಂಗ್…
ರಾಜ್ಯದ ಹಲವೆಡೆ ಇನ್ನೆರಡು ದಿನ ಮಳೆ; ಕರಾವಳಿ, ಒಳನಾಡಿನಲ್ಲಿ ಗಾಳಿ ಸಹಿತ ಮಳೆಯ ಮುನ್ಸೂಚನೆ
ಬೆಂಗಳೂರು: ಕರ್ನಾಟಕದ ಹಲವು ಭಾಗಗಳಲ್ಲಿ ಮುಂದಿನ ಎರಡು ದಿನ ಮಳೆಯ ವಾತಾವರಣ ಮುಂದುವರಿಯಲಿದ್ದು, ಕರಾವಳಿ, ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಸಾಧಾರಣದಿಂದ ಮಧ್ಯಮ ಪ್ರಮಾಣದ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ತಿಳಿಸಿದೆ. ಜುಲೈ 22ರವರೆಗೂ ಇದೇ ರೀತಿಯ ಹವಾಮಾನ ಮುಂದುವರಿಯಲಿದ್ದು, ಕರಾವಳಿ ಜಿಲ್ಲೆಗಳ ಬಹುತೇಕ ಕಡೆ ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮಳೆಯಾಗುವ ನಿರೀಕ್ಷೆಯಿದೆ. ದಕ್ಷಿಣ ಒಳನಾಡಿನ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು, ಹಾಸನ, ಮೈಸೂರು, ಮಂಡ್ಯ, ರಾಮನಗರ, ತುಮಕೂರು, ವಿಜಯನಗರ, ದಾವಣಗೆರೆ, ಚಿತ್ರದುರ್ಗ, ಬಳ್ಳಾರಿ, ಕೋಲಾರ, ಚಿಕ್ಕಬಳ್ಳಾಪುರ ಹಾಗೂ ಚಾಮರಾಜನಗರ ಜಿಲ್ಲೆಗಳಲ್ಲಿ ಸಾಧಾರಣ ಮಳೆಯೊಂದಿಗೆ ಗಂಟೆಗೆ 30-40 ಕಿ.ಮೀ. ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದೆ. ಕರಾವಳಿಯ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಬಹುತೇಕ ಕಡೆ ಸಾಧಾರಣ ಮಳೆಯಾಗಲಿದೆ. ಉತ್ತರ…
ರಾಜ್ಯದ 178 ತಾಲೂಕುಗಳಲ್ಲಿ ಮಳೆ ಕೊರತೆ; 20 ತಾಲೂಕುಗಳಲ್ಲಿ ಬಹುತೇಕ ಮಳೆಯಾಗಿಲ್ಲ
ಬೆಂಗಳೂರು: ರಾಜ್ಯದಲ್ಲಿ ತೀವ್ರ ಮಳೆ ಕೊರತೆ ಉಂಟಾಗಿದ್ದು, 178 ತಾಲೂಕುಗಳು ಮಳೆ ಕೊರತೆ ಎದುರಿಸುತ್ತಿವೆ. 158 ತಾಲೂಕುಗಳಲ್ಲಿ ಸಾಧಾರಣ ಮಳೆಯಾಗಿದ್ದು, 20 ತಾಲೂಕುಗಳಲ್ಲಿ ಬಹುತೇಕ ಮಳೆಯಾಗಿಲ್ಲ. ವಿಜಯನಗರ ಜಿಲ್ಲೆಯಲ್ಲಿ ಪರಿಸ್ಥಿತಿ ಗಂಭೀರವಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ವಿಧಾನಸೌಧದಲ್ಲಿ ಬರ ಪರಿಸ್ಥಿತಿ ಕುರಿತು ಅಧಿಕಾರಿಗಳು ಮತ್ತು ಸಚಿವರೊಂದಿಗೆ ಸಭೆ ನಡೆಸಿದ ಬಳಿಕ ಮಾತನಾಡಿದ ಅವರು, ರಾಜ್ಯದ ಜಲಾಶಯಗಳಲ್ಲಿ ಕೇವಲ 40% ನೀರು ಸಂಗ್ರಹವಿದ್ದು, ಸದ್ಯಕ್ಕೆ ಅದನ್ನು ಕುಡಿಯುವ ನೀರಿನ ಉದ್ದೇಶಕ್ಕೆ ಮಾತ್ರ ಬಳಸಲು ನಿರ್ಧರಿಸಲಾಗಿದೆ ಎಂದು ಹೇಳಿದರು. ಅಣೆಕಟ್ಟುಗಳಿಗೆ ಸಮರ್ಪಕ ನೀರು ಬಂದ ಬಳಿಕವೇ ನೀರು ಬಿಡುಗಡೆ ಕುರಿತು ತೀರ್ಮಾನ ಕೈಗೊಳ್ಳಲಾಗುವುದು ಎಂದರು. ರಾಜ್ಯದಲ್ಲಿ ಜಲವಿದ್ಯುತ್ ಉತ್ಪಾದನೆ 23%ಕ್ಕೆ ಕುಸಿದಿದೆ. 3,817 ಸಣ್ಣ ನೀರಾವರಿ ಕೆರೆಗಳ ಪೈಕಿ 3,235 ಕೆರೆಗಳಲ್ಲಿ ಹಾಗೂ 32,504 ಜಿಲ್ಲಾ ಪಂಚಾಯಿತಿ ಕೆರೆಗಳ ಪೈಕಿ 27,450 ಕೆರೆಗಳಲ್ಲಿ ಶೇ.50ಕ್ಕಿಂತ ಕಡಿಮೆ ನೀರಿದೆ…
ಭ್ರಷ್ಟಾಚಾರದ ತಾಣಗಳಾಗಿ ಮಾರ್ಪಟ್ಟ ಸರ್ಕಾರಿ ಆಸ್ಪತ್ರೆಗಳು..! ಏನಿದು ಖದರ್ ಸಾಹೇಬ್ರೇ?
ಬೆಂಗಳೂರು: ಬಡವರಿಗೆ ಆಶಾಕಿರಣವಾಗಬೇಕಿದ್ದ ಸರ್ಕಾರಿ ಆಸ್ಪತ್ರೆಗಳು ಕಾಂಗ್ರೆಸ್ ಸರ್ಕಾರದ ದುರಾಡಳಿತದ ನಡುವೆ ಭ್ರಷ್ಟಾಚಾರದ ತಾಣಗಳಾಗಿ ಮಾರ್ಪಟ್ಟಿವೆ ಎಂದು ಬಿಜೆಪಿ ಆರೋಪಿಸಿದೆ. ಈ ಕುರಿತಂತೆ ಸಾಮಾಜಿಕ ಜಾಲತಾಣದಲ್ಲಿ ಪ್ರತಿಪಕ್ಷ ಬಿಜೆಪಿ ಹಾಕಿರುವ ಪೋಸ್ಟ್ ಗಮನಸೆಳೆದಿದೆ. ಅಫ್ಜಲ್‌ಪುರ ಸರ್ಕಾರಿ ಆಸ್ಪತ್ರೆಯಲ್ಲಿ, ರೋಗಿಗಳಿಗೆ ನೀಡುವ ಹಾಲು, ಮೊಟ್ಟೆ ಮತ್ತು ಊಟದ ಹೆಸರಿನಲ್ಲಿ ಲಕ್ಷಾಂತರ ರೂಪಾಯಿಗಳ ನಕಲಿ ಬಿಲ್‌ಗಳನ್ನು ಸೃಷ್ಟಿಸಲಾಗಿದೆ ಮತ್ತು ಲೂಟಿ ಮಾಡಲಾಗಿದೆ ಎಂದು ಬಿಜೆಪಿ ದೂರಿದೆ. ಆರೋಗ್ಯ ಸಚಿವ ಯು.ಟಿ.ಖಾದರ್ ಅವರ ಇಲಾಖೆಯಲ್ಲಿ ಬಡ ರೋಗಿಗಳಿಗೆ ಆಹಾರ ಪೂರೈಕೆಯಲ್ಲಿ ಭ್ರಷ್ಟಾಚಾರ ಹೆಚ್ಚುತ್ತಿದೆ ಎಂದು ಬಿಜೆಪಿ ಗಮನಸೆಳೆದಿದೆ. ಇದೇ ವೇಳೆ, ‘ತಾವು ಇನ್ನೂ ಏಕೆ ಮೌನವಾಗಿದ್ದೀರಿ? ಆಸ್ಪತ್ರೆಗಳಲ್ಲಿ ರೋಗಿಗಳ ಆಹಾರಕ್ಕೂ ಭದ್ರತೆ ಇಲ್ಲವೇ? ಲೂಟಿಕೋರರ ವಿರುದ್ಧ ತಕ್ಷಣ ಕ್ರಮ ಕೈಗೊಳ್ಳಿ’ ಎಂದು ಬಿಜೆಪಿ ಪಕ್ಷವು ಯು.ಟಿ.ಖಾದರ್ ಅವರನ್ನು ತರಾಟೆಗೆ ತೆಗೆದುಕೊಂಡಿದೆ. ಬಡವರ ಪಾಲಿನ ಆಶಾಕಿರಣವಾಗಬೇಕಿದ್ದ ಸರ್ಕಾರಿ ಆಸ್ಪತ್ರೆಗಳು ಲೂಟಿಕೋರ @INCKarnataka ಸರ್ಕಾರದ…
ರೌಡಿ ಅಡ್ಡೆಗಳ ಮೇಲೆ ರಾತ್ರೋ ರಾತ್ರಿ ಖಾಕಿ ದಾಳಿ; ನೂರಕ್ಕೂ ಹೆಚ್ಚು ಆಸಾಮಿಗಳ ಮನೆಗಳಿಗೆ ಲಗ್ಗೆ
ಬೆಂಗಳೂರು: ಸಾರ್ವಜನಿಕರ ನಿದ್ದೆಗೆಡಿಸುತ್ತಿರುವ ಪುಂಡರ ಹಾವಳಿ ನಿಯಂತ್ರಿಸಲು ಬೆಂಗಳೂರು ವೈಟ್ ಫೀಲ್ಡ್ ಉಪವಿಭಾಗದ ಪೊಲೀಸರು ಕ್ಷಿಪ್ರ ಕಾರ್ಯಾಚರಣೆಗಿಳಿದಿದ್ದಾರೆ. ಶುಕ್ರವಾರ ತಡರಾತ್ರಿಯಿಂದ ಶನಿವಾರ ಬೆಳಗ್ಗಿನವರೆಗೂ ಬೆಂಗಳೂರಿನ ವೈಟ್ ಫೀಲ್ಡ್ ಉಪವಿಭಾಗದ ವಿವಿಧ ಠಾಣಾ ವ್ಯಾಪ್ತಿಗಳಲ್ಲಿ ನಡೆಸಿದ ಕಾರ್ಯಾಚರಣೆಯಲ್ಲಿ ಪೊಲೀಸರು ರೌಡಿ ಹಿನ್ನೆಲೆಯ 80ಕ್ಕೂ ಹೆಚ್ಚು ಮಂದಿಯನ್ನು ನಿದ್ದೆಯಿಂದ ಎಬ್ಬಿಸಿ ಕೊಟ್ಟ ಎಚ್ಚರಿಕೆ ಭೂಗತ ಲೋಕದಲ್ಲಿ ಸಂಚಲನ ಸೃಷ್ಟಿಸಿದೆ. ವೈಟ್ ಫೀಲ್ಡ್ ಉಪವಿಭಾಗದ ಸಹಾಯಕ ಪೊಲೀಸ್ ಆಯುಕ್ತರಾದ ರೀನಾ ಸುವರ್ಣ ನೇತೃತ್ವದಲ್ಲಿ ಈ ಕಾರ್ಯಾಚರಣೆ ನಡೆದಿದೆ. ಶುಕ್ರವಾರ (17.07.2026) ರಂದು ರಾತ್ರಿ 11-00 ಗಂಟೆಯಿಂದ ಬೆಳಗಿನ ಜಾವ 4-00 ಗಂಟೆಯ ವರೆಗೂ ಪೊಲೀಸ್ ಕಾರ್ಯಾಚರಣೆ ನಡೆದಿದೆ. ವೈಟ್ ಫೀಲ್ಡ್ ಉಪವಿಭಾಗದ ಅಧಿಕಾರಿ ಸಿಬ್ಬಂದಿ ಈ ವಿಶೇಷ ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದು, 80 ರೌಡಿ ಆಸಾಮಿಗಳು, 25 ಜನ ಎಂಒಬಿ ಆಸಾಮಿಗಳು, 29 ಟ್ರಬಲ್ ಮಾಂಗರ್ಸ್ ಗಳ ಅಡ್ಡೆಯನ್ನು ಪತ್ತೆ ಮಾಡಿ ಪರಿಶೀಲನೆ…
