ಬೆಂಗಳೂರು: ಕಾಂಗ್ರೆಸ್‌ನವರು ಹಲವಾರು ವರ್ಷಗಳ ಕಾಲ ದಲಿತರನ್ನು ತುಳಿದುಕೊಂಡೇ ಬಂದಿದ್ದಾರೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಹೇಳಿದ್ದಾರೆ. ವಿಧಾನಸೌಧದ ಡಾ.ಬಿ.ಆರ್.ಅಂಬೇಡ್ಕರ್ ಪ್ರತಿಮೆ ಬಳಿ ‘ಭೀಮ ಹೆಜ್ಜೆ 100 ರ ಸಂಭ್ರಮ’ ಕಾರ್ಯಕ್ರಮದ ಉದ್ಘಾಟನೆಯಲ್ಲಿ ಅವರು ಪಾಲ್ಗೊಂಡು ಮಾತನಾಡಿದರು. ದಲಿತರ ಬಗ್ಗೆ ಮಾತಾಡುವಾಗಲೆಲ್ಲ ಅವರು ತುಳಿತಕ್ಕೆ ಒಳಗಾದವರು ಎಂದು ಹೇಳುತ್ತೇವೆ. ಆದರೆ ಈ ರೀತಿ ತುಳಿದವರು ಯಾರು ಎಂದು ಪ್ರಶ್ನೆ ಮಾಡಿದರೆ, ಕಾಂಗ್ರೆಸ್‌ನವರೇ ಎಂಬ ಉತ್ತರ ಸಿಗುತ್ತದೆ. ಇಷ್ಟು ವರ್ಷಶೋಷಿತರನ್ನು ಕಾಂಗ್ರೆಸ್‌ನವರೇ ತುಳಿದಿದ್ದಾರೆ. ಸ್ವಾತಂತ್ರ್ಯ ಬಂದು 75 ವರ್ಷ ಕಳೆದರೂ ಕಾಂಗ್ರೆಸ್‌ನ ಕಳ್ಳರು ದಲಿತರನ್ನು ಉದ್ಧಾರ ಮಾಡಲಿಲ್ಲ ಎಂದರು. ಬಾಬಾ ಸಾಹೇಬ್ ಅಂಬೇಡ್ಕರ್‌ರ ಹೆಸರನ್ನು ಕಾಂಗ್ರೆಸ್‌ನವರು ದುರುಪಯೋಗ ಮಾಡಿಕೊಂಡರು. ನರೇಂದ್ರ ಮೋದಿ ಪ್ರಧಾನಿಯಾದ ಬಳಿ ಅಂಬೇಡ್ಕರರ ಜೀವನದ ಪ್ರಮುಖ ಸ್ಥಳಗಳನ್ನು ಪಂಚತೀರ್ಥವೆಂದು ಯಾತ್ರಾ ಸ್ಥಳವಾಗಿಸಿದರು. ಕಾಂಗ್ರೆಸ್ ನಾಯಕರು ತಾವು ದಲಿತರ ಪರ ಎಂದು ಹೇಳುತ್ತಾರೆ. ಆದರೆ ದಲಿತರಿಗೆ ಮೋಸ…
Category: ರಾಜ್ಯ
ಶಹಪುರ ಬಳಿ ಭೀಕರ ಅಪಘಾತ: ಒಂದೇ ಕುಟುಂಬದ ನಾಲ್ವರ ದುರ್ಮರಣ
ಯಾದಗಿರಿ: ಶಹಾಪುರ ಬಳಿ ಸಾರಿಗೆ ಬಸ್ ಮತ್ತು ಬುಲೆರೊ ನಡುವೆ ಡಿಕ್ಕಿಯಾಗಿ ಸಂಭವಿಸಿದ ಭೀಕರ ಅಪಘಾತದಲ್ಲಿ ನಾಲ್ವರು ಸಾವನ್ನಪ್ಪಿದ್ದಾರೆ. ಯಾದಗಿರಿ ಜಿಲ್ಲೆ ಶಹಾಪುರ ತಾಲೂಕಿನ ಮದ್ದರಕಿ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಗುರುವಾರ ರಾತ್ರಿ ಈ ಅಪಘಾತ ಸಂಭವಿಸಿದೆ. ಮೃತರನ್ನು 50 ವರ್ಷದ ಸೋಮವ್ವ, 55 ವರ್ಷದ ತಂಗಮ್ಮ, 30 ವರ್ಷದ ಶರಣಪ್ಪ, 19 ವರ್ಷದ ಸುನೀತಾ ಎಂದು ಗುರುತಿಸಲಾಗಿದೆ. ಕಲಬುರಗಿಯ ಘತ್ತರಗಿ ಭಾಗ್ಯವಂತಿ ದೇವಸ್ಥಾನಕ್ಕೆ ಧಾರ್ಮಿಕ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಕುಟುಂಬ ಸಮೇತರಾಗಿ ತೆರಳುತ್ತಿದ್ದಾಗ ಇವರಿದ್ದ ವಾಹನ ಮಾರ್ಗ ಮಧ್ಯೆ ಅಫಘಾತಕ್ಕೀಡಾಗಿದೆ. ಯಾದಗಿರಿ ತಾಲೂಕಿನ ಭೀಮರಾಯನಗುಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಅಪಘಾತ ಸಂಭವಿಸಿದ್ದು, ಸುದ್ದಿ ತಿಳಿದು ಸ್ಥಳಕ್ಕೆ ಧಾವಿಸಿದ ಪೊಲೀಸರು ಪರಿಶೀಲನೆ ನಡೆಸಿದ್ದಾರೆ.
‘ಕಾಂಗ್ರೆಸ್ ಸರ್ಕಾರ ಬಡವರ ವಿರೋಧಿ’ ಎಂದ ಬಿಜೆಪಿ; ಕರಾವಳಿಯಲ್ಲಿ ಜನಾಕ್ರೋಶ ಯಾತ್ರೆ
ಉಡುಪಿ: ಬೆಲೆ ಏರಿಕೆ ವಿರುದ್ಧ ಬಿಜೆಪಿ ನಡೆಸುತ್ತಿರುವ ಜನಾಕ್ರೋಶ ಯಾತ್ರೆಯು ಬಿಜೆಪಿಯ ಶಕ್ಸ್ಟಿಪ್ರದರ್ಶನಕ್ಕೆ ಸಾಕ್ಷಿಯಾಗುತ್ತಿದೆ. ಉಡುಪಿಯಲ್ಲಿ ಗುರುವಾರ ನಡೆದ ಪ್ರತಿಭಟನೆಯಲ್ಲಿ ಸಾವಿರಾರು ಮಂದಿ ಪಾಲ್ಗೊಂಡಿದ್ದರು. ಬಿಜೆಪಿ ರಾಜ್ಯಾಧ್ಯಕ್ಷರಾದ ಶ್ರೀ @BYVijayendra ರವರ ನೇತೃತ್ವದಲ್ಲಿ ಇಂದು ಬೆಳಿಗ್ಗೆ ಉಡುಪಿ ನಗರದಲ್ಲಿ, ಭ್ರಷ್ಟ ಕಾಂಗ್ರೆಸ್ ಸರಕಾರದ ವಿರುದ್ಧ ನಡೆದ ಜನಾಕ್ರೋಶ ಯಾತ್ರೆಯ ವಿಡಿಯೋ… ಇಂದಿನ ಬೃಹತ್ #ಜನಾಕ್ರೋಶಯಾತ್ರೆ ಯಲ್ಲಿ ಸಹಸ್ರ ಸಹಸ್ರ ಸಂಖ್ಯೆಯಲ್ಲಿ ನಮ್ಮೊಂದಿಗೆ ಭಾಗವಹಿಸಿ, ನಮಗೆ ಬೆಂಬಲ ನೀಡಿ, ಭ್ರಷ್ಟ ಕಾಂಗ್ರೆಸ್ ಸರ್ಕಾರದ… pic.twitter.com/zdJhZBp8s1 — Yashpal Anand Suvarna (@YashpalBJP) April 10, 2025 ಪ್ರತಿಭಟನಾಕಾರರನ್ನು ಉದ್ದೇಶಿಸಿ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ‘ ರಾಜ್ಯದ ಕಾಂಗ್ರೆಸ್ ಸರ್ಕಾರವು ಬಡವರ ವಿರೋಧಿ’ ಎಂದರು. ಭ್ರಷ್ಟ ಹಾಗೂ ಜನವಿರೋಧಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಜನಾಕ್ರೋಶ ಯಾತ್ರೆ ನಡೆಸಲಾಲಾಗುತ್ತಿದೆ. ಬೆಲೆ ಏರಿಕೆಯ ಬರೆ ಎಳೆದು ನಿತ್ಯವೂ ಬಡವರನ್ನು ಹಿಂಡುತ್ತಿರುವ ಭ್ರಷ್ಟ…
ಮತ್ತಷ್ಟು ‘ಶಕ್ತಿ’: KSRTCಗೆ ಶೀಘ್ರವೇ 2,000 ಬಸ್ ಖರೀದಿ, ಸಚಿವ ರಾಮಲಿಂಗ ರೆಡ್ಡಿ ಘೋಷಣೆ
ಬೆಂಗಳೂರು: ರಾಜ್ಯಸರ್ಕಾರದ ‘ಶಕ್ತಿ’ ಗ್ಯಾರೆಂಟಿ ಯೋಜನೆ ಮಹಿಳೆಯರ ಪಾಲಿಗೆ ವರದಾನವಾಗಿದೆ. ಇದೀಗ ಈ ‘ಗ್ಯಾರೆಂಟಿ’ ಯೋಜನೆಯನ್ನು ಮತ್ತಷ್ಟು ವರದಾನವಾಗಿಸುವ ನಿಟ್ಟಿನಲ್ಲಿ KSRTC ಮಹತ್ವದ ಹೆಜ್ಜೆ ಇಟ್ಟಿದೆ. ಶಕ್ತಿ ಯೋಜನೆಯ ಫಲಾನುಭವಿ ಮಹಿಳೆಯರಿಗೆ ಗುಡ್ ನ್ಯೂಸ್ ನೀಡಿರುವ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ, ಶೀಘ್ರವೇ 2,000 ಬಸ್ ಗಳನ್ನು ಖರೀದಿ ಮಾಡಲಾಗುತ್ತದೆ ಎಂದು ತಿಳಿಸಿದ್ದಾರೆ. ಸಾರಿಗೆ ಸೌಲಭ್ಯ ಹೆಚ್ಚಿಸಲು ಹೊಸದಾಗಿ 2 ಸಾವಿರ ಬಸ್‌ಗಳನ್ನು ಖರೀದಿ ಮಾಡಲಾಗುತ್ತಿದೆ. ಶಕ್ತಿ ಯೋಜನೆಯ ಪರಿಣಾಮ ಸರ್ಕಾರಿ ಬಸ್‌ಗಳಲ್ಲಿ ಮಹಿಳೆಯರ ಸಂಚಾರ ಹೆಚ್ಚಾಗಿದೆ. ಹೀಗಾಗಿ ಪ್ರಯಾಣಿಕರ ದಟ್ಟಣೆ ಕಡಿಮೆ ಮಾಡಲು ಶೀಘ್ರವೇ ಬಸ್‌ಗಳ ಖರೀದಿಗೆ ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವರು ಮಾಹಿತಿ ಹಂಚಿಕೊಂಡಿದ್ದಾರೆ. ಸಾರಿಗೆ ಸೌಲಭ್ಯ ಹೆಚ್ಚಿಸಲು ಹೊಸದಾಗಿ 2 ಸಾವಿರ ಬಸ್‌ಗಳನ್ನು ಖರೀದಿ ಮಾಡಲಾಗುತ್ತಿದೆ. ಶಕ್ತಿ ಯೋಜನೆಯ ಪರಿಣಾಮ ಸರ್ಕಾರಿ ಬಸ್‌ಗಳಲ್ಲಿ ಮಹಿಳೆಯರ ಸಂಚಾರ ಹೆಚ್ಚಾಗಿದೆ. ಹೀಗಾಗಿ ಪ್ರಯಾಣಿಕರ ದಟ್ಟಣೆ ಕಡಿಮೆ…
ಬಿಜೆಪಿಗೆ ಕಾಂಗ್ರೆಸ್ ಎದಿರೇಟು; ಏಪ್ರಿಲ್ 17ರಂದು ಕೇಂದ್ರದ ಬೆಲೆ ಏರಿಕೆ ವಿರುದ್ಧ ಹೋರಾಟ
ಬೆಂಗಳೂರು: ರಾಜ್ಯ ಸರ್ಕಾರದ ವಿರುದ್ಧ ಪ್ರತಿಪಕ್ಷ ಬಿಜೆಪಿ ಬೆಲೆ ಏರಿಕೆ ಪ್ರತಿಭಟನೆ ನಡೆಸಿದರೆ, ಮತ್ತೊಂದೆಡೆ ಕೇಂದ್ರ ಸರ್ಕಾರದ ಬೆಲೆ ಏರಿಕೆ ನೀತಿ ಖಂಡಿಸಿ ರಾಜ್ಯವ್ಯಾಪಿ ಹೋರಾಟ ನಡೆಸಲು ಕಾಂಗ್ರೆಸ್ ಮುಂದಾಗಿದೆ. ಕೇಂದ್ರ ಸರ್ಕಾರದ ಬೆಲೆ ಏರಿಕೆ ಖಂಡಿಸಿ ರಾಜ್ಯ ಕಾಂಗ್ರೆಸ್ ನಾಯಕರು ಸಿಡಿದೆದ್ದಿದ್ದಾರೆ. ಏಪ್ರಿಲ್ 17ರಂದು ಮುಖ್ಯಮಂತ್ರಿ ಸಿದ್ಧರಾಮಯ್ಯ, ಡಿಸಿಎಂ ಡಿ.ಕೆ ಶಿವಕುಮಾರ್ ನೇತೃತ್ವದಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಲು ಕಾಂಗ್ರೆಸ್ ತಯಾರಿ ನಡೆಸಿದೆ. ಬೆಂಗಳೂರಿನಲ್ಲಿ ಈ ಕುರಿತು ಸುದ್ದಿಗಾರರಿಗೆ ವಿವರ ಒದಗಿಸಿದ ಡಿಸಿಎಂ ಡಿ.ಕೆ ಶಿವಕುಮಾರ್, ಈ ತಿಂಗಳ 17 ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ವತಿಯಿಂದ ಪ್ರತಿಭಟನೆ ನಡೆಸಲಾಗುತ್ತದೆ ಎಂದು ತಿಳಿಸಿದರು.
ಕೋಲಾರದಲ್ಲಿ ಮೂವರು ಜಲಸಮಾಧಿ
ಕೋಲಾರ: ಚಿನ್ನದ ನಾಡು ಕೋಲಾರದಲ್ಲಿ ಹೃದಯ ವಿದ್ರಾವಕ ಘಟನೆ ನಡೆದಿದೆ. ಕೋಲಾರ ಜಿಲ್ಲೆ ಕೆಜಿಎಫ್ ಬಳಿ ಕೆರೆಯಲ್ಲಿ ಈಜಲು ತೆರಳಿದ್ದಂತ ಮೂವರು ಜಲಸಮಾಧಿಯಾಗಿದ್ದಾರೆ. ಕೋಲಾರ ಜಿಲ್ಲೆಯ ಕೆಜಿಎಫ್ ನ ಬೂಡದಮಿಟ್ಟೆ ಕೆರೆಗೆ ಈಜಲೆಂದು ತಂದೆ-ಮಗ ಹಾಗೂ ಸ್ನೇಹಿತರ ಪುತ್ರ ತೆರಳಿದ್ದರು. ಆದರೆ ನೀರಿನಲ್ಲಿ ಒಬ್ಬರನ್ನೊಬ್ಬರು ರಕ್ಷಿಸಲು ಹೋಗಿ ಮುಳುಗಿ ಮೃತಪಟ್ಟಿದ್ದಾರೆ ಎನ್ನಲಾಗಿದೆ. 40 ವರ್ಷದ ರಮೇಶ್, ಅವರ ಪುತ್ರ 12 ವರ್ಷದ ಅಗಸ್ತ್ಯ ಮತ್ತು 15 ವರ್ಷದ ಶರಣ್ ಎಂಬವರು ಸಾವನ್ನಪ್ಪಿದ್ದಾರೆ. ಬೇತಮಂಗಲ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಸುದ್ದಿ ತಿಳಿದು ಸ್ಥಳಕ್ಕೆ ಧಾವಿಸಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶಾಂತರಾಜು ಪರಿಶೀಲನೆ ನಡೆಸಿದರು.
ಬೆಲೆಬಾಳುವ ವಸ್ತುಗಳನ್ನು ಮನೆಯಲ್ಲಿಡಬೇಡಿ.. ಪ್ರವಾಸ ತೆರಳುವಾಗ ಎಚ್ಚರವಹಿಸಿ.. ಪೊಲೀಸರ ಸೂಚನೆ..
ಬೆಂಗಳೂರು: ಬೇಸಗೆ ರಜೆಯ ಸಂದರ್ಭದಲ್ಲಿ ದೂರದ ಊರಿಲಿಗಳಿಗೆ ಪ್ರವಾಸ ತೆರಳುವ ಸಂದರ್ಭದಲ್ಲಿ ಎಚ್ಚರ ವಹಿಸುವಂತೆ ಪೊಲೀಸರು ಸಾರ್ವಜನಿಕರಿಗೆ ಸಲಹೆ ನೀಡಿದ್ದಾರೆ. ಈ ಸಂಬಂಧ ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್ ನೀಡಿರುವ ಹೇಳಿಕೆ ಗಮನಸೆಳೆದಿದೆ. ಬೆಂಗಳೂರು ನಗರದಲ್ಲಿ ಇತ್ತೀಚೆಗೆ ಕಳ್ಳತನ ಪ್ರಕರಣಗಳು ಮರುಕಳಿಸುತ್ತಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರ ಎಚ್ಚರ ಅಗತ್ಯ ಎಂದವರು ಪ್ರತಿಪಾದಿಸಿದ್ದಾರೆ ದೂರದ ವೂರುಗಳಿಗೆ ಪ್ರವಾಸ ತೆರಳಿಲುವ ಸಂದರ್ಭದಲ್ಲಿ ಮನೆಗೆ ಬೀಗ ಹಾಕಿದರೂ ಹೆಚ್ಚಿನ ಎಚ್ಚರಿಕೆ ಕ್ರಮಗಳನ್ನು ವಹಿಸಬೇಕಿದೆ ಎಂದು ದಯಾನಂದ್ ಸೂಚನೆ ನೀಡಿದ್ದಾರೆ. ಪ್ರವಾಸ ತೆರಳುವ ಬೆಳೆಬಾಳುವ ವಸ್ತುಗಳನ್ನು ಬ್ಯಾಂಕಿನಲ್ಲಿ ಅಥವಾ ಲಾಕರ್‌ಗಳಲ್ಲಿ ಇಡುವುದು ಸೂಕ್ತ. ಜೊತೆಗೆ ಹೆಚ್ಚು ದಿನ ಪ್ರವಾಸ ಹೋಗುವುದಿದ್ದರೆ ಪೊಲೀಸರಿಗೆ ಮಾಹಿತಿ ನೀಡಿದಲ್ಲಿ ಪೊಲೀಸರು ಗಸ್ತು ಹೆಚ್ಚಿಸುವುದಲ್ಲದೆ, ಕಣ್ಗಾವಲು ಹಾಕಲಾಗುವುದು ಎಂದು ಹೇಳಿದ್ದಾರೆ. ಸಿಸಿಟಿವಿ ಕ್ಯಾಮೆರಾ ಅಳವಡಿಸಿಕೊಳ್ಳಬೇಕು, ಬೀಗದ ಕೀಯನ್ನು ಮನೆ ಪಕ್ಕದಲ್ಲಿ ಇಟ್ಟು ಹೋಗುವ ಅಭ್ಯಾಸ ಬೇಡ ಎಂದವರು ಹೇಳಿದ್ದಾರೆ.
ಹಲವು ಜಿಲ್ಲೆಗಳಲ್ಲಿ ಏಪ್ರಿಲ್ 13ರಿಂದ ಮತ್ತೆ ಮಳೆ ಸಾಧ್ಯತೆ
ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಏಪ್ರಿಲ್ 13ರ ನಂತರ ಮತ್ತೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಚಿಕ್ಕಮಗಳೂರು, ದಾವಣಗೆರೆ, ಹಾಸನ, ಕೊಡಗು, ಶಿವಮೊಗ್ಗ ಜಿಲ್ಲೆಗಳಲ್ಲಿ ಮಳೆಯಾಗಲಿದೆ. ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಕೋಲಾರ, ಚಿಕ್ಕಬಳ್ಳಾಪುರ, ರಾಮನಗರ, ಮೈಸೂರು, ಚಾಮರಾಜನಗರ ಜಿಲ್ಲೆಗಳಲ್ಲೂ ಮಳೆಯಾಗುವ ಸಾಧ್ಯತೆಗಳಿವೆ. ಧಾರವಾಡ, ಗದಗ, ಹಾವೇರಿ, ಬಾಗಲಕೋಟೆ, ಬೆಳಗಾವಿ, ಕೊಪ್ಪಳ, ವಿಜಯಪುರ, ಕಲಬುರಗಿ ಯಾದಗಿರಿ, ರಾಯಚೂರು, ಬೀದರ್ನಲ್ಲಿ ಕೂಡ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕೇಂದ್ರ ಬಿಜೆಪಿ ಸರ್ಕಾರದ ಬೆಲೆ ಏರಿಕೆ ನೀತಿ ಖಂಡಿಸಿ ಯುವ ಕಾಂಗ್ರೆಸ್ ಪ್ರತಿಭಟನೆ
ಬೆಂಗಳೂರು: ಫೀಡಂಪಾರ್ಕ್ ನಲ್ಲಿ ಕೇಂದ್ರ ಬಿಜೆಪಿ ಸರ್ಕಾರ ಪೆಟ್ರೋಲ್, ಡಿಸೇಲ್, ಎಲ್.ಪಿ.ಜಿ.ಗ್ಯಾಸ್ ಬೆಲೆ ಏರಿಕೆ ಖಂಡಿಸಿ ಯುವ ಕಾಂಗ್ರೆಸ್ ರಾಜ್ಯಾಧ್ಯಕ್ಷ ಹೆಚ್.ಎಸ್.ಮಂಜುನಾಥ್ ಗೌಡರವರ ನೇತೃತ್ವದಲ್ಲಿ ವಿನೂತನವಾಗಿ ಎತ್ತಿನಗಾಡಿ ಮೂಲಕ ಬೃಹತ್ ಪ್ರತಿಭಟನೆ ನಡೆಯಿತು. ಯುವ ಕಾಂಗ್ರೆಸ್ ನೂರಾರು ಕಾರ್ಯಕರ್ತರು ಪಾಲ್ಗೊಂಡಿದ್ದರು. ಹೆಚ್.ಎಸ್.ಮಂಜುನಾಥ್ ಗೌಡ ಮಾತನಾಡಿ , ಕೇಂದ್ರ ಬಿಜೆಪಿ ಸರ್ಕಾರ ದೇಶದ 140ಜನರ ಹೊಟ್ಟೆಯ ಮೇಲೆ ಬರೆ ಏಳೆದಿದ್ದಾರೆ, ಪೆಟ್ರೋಲ್, ಡಿಸೇಲ್ ಮತ್ತು ಎಲ್.ಪಿಜಿ.ಗ್ಯಾಸ್ ಬೆಲೆ ಏರಿಕೆಯಿಂದ ಬಡ ಮತ್ತು ಮಧ್ಯಮ ವರ್ಗದವರು ಜೀವನ ಸಂಕಷ್ಟಕ್ಕೆ ತಳ್ಳಿದ್ದಾರೆ ಎಂದು ಆಕ್ರೋಶ ಹೊರಹಾಕಿದರು. ರಾಜ್ಯ ಯುವ ಕಾಂಗ್ರೆಸ್ ಉಪಾಧ್ಯಕ್ಷೆ ದಿವ್ಯಾ, ಬೆಂಗಳೂರು ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗೌಡ, ಕೇಂದ್ರ ಜಿಲ್ಲಾ ಯುವ ಕಾಂಗ್ರೆಸ್ ರಂಜೀತ್, ದಕ್ಷ್ಮಿಣ ಜಿಲ್ಲಾ ಮೌನೀಶ್ ರೆಡ್ಡಿ, ರಾಜ್ಯ ಪ್ರದಾನ ಕಾರ್ಯದರ್ಶಿಗಳಾದ ಚೇತನ್ ಕುಮಾರ್, ಶಂಶಾಕ್ ಗೌಡ ರವರು ವಿಧಾನಸಭಾ ಕ್ಷೇತ್ರ ಮತ್ತು…
‘ನಿರಾಶೆ, ಆತಂಕಕ್ಕೆ ಒಳಗಾಗಿ ದುಡುಕಿನ ನಿರ್ಧಾರ ಬೇಡ’: ಸಿಎಂ ಕಿವಿಮಾತು
ಬೆಂಗಳೂರು: ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ಸಿಎಂ ಅಭಿನಂದನೆ ಸಲ್ಲಿಸಿದ್ದಾರೆ. ಪರಿಶ್ರಮ ಮತ್ತು ನಿರಂತರ ಅಭ್ಯಾಸ ನಿಮ್ಮನ್ನು ಯಶಸ್ಸನ್ನು ಇನ್ನಷ್ಟು ಎತ್ತರಕ್ಕೆ ಕೊಂಡೊಯ್ಯಲಿ ಎಂದು ಸಿಎಂ ಸಿದ್ದರಾಮಯ್ಯ ಅಭಿನಂಧಿಸಿದ್ದಾರೆ. ಪರೀಕ್ಷೆಯಲ್ಲಿ ಅನುತ್ತೀರ್ಣರಾದ ಮಕ್ಕಳು ನಿರಾಶೆ, ಆತಂಕಕ್ಕೆ ಒಳಗಾಗಿ ದುಡುಕಿನ ನಿರ್ಧಾರ ತೆಗೆದುಕೊಳ್ಳುವುದು ಬೇಡ. ಬದುಕು ದೊಡ್ಡದು, ಮತ್ತೆ ಪರೀಕ್ಷೆ ಎದುರಿಸಿ ಹೆಚ್ಚಿನ ಅಂಕದ ಜೊತೆಗೆ ಪಾಸಾಗುವ ಅವಕಾಶ ಖಂಡಿತಾ ಸಿಗಲಿದೆ ಎಂದೂ ಕಿವಿಮಾತು ಹೇಳಿದ್ದಾರೆ. ಹತಾಶೆಯ ಕೈಗೆ ಬುದ್ದಿ ಕೊಡದೆ ಸಂಯಮದಿಂದ ವರ್ತಿಸಿ ಎಂದವರು ಸಲಹೆ ಮಾಡಿದ್ದಾರೆ. ವಿವಿಧ ವಿಭಾಗಗಳಲ್ಲಿ Rank ಪಡೆದಿರುವ ಎಲ್.ಆರ್.ಸಂಜನಾ ಬಾಯಿ, ಅಮೂಲ್ಯ ಕಾಮತ್, ದೀಕ್ಷಾ.ಆರ್ ಹಾಗೂ ದೀಪಶ್ರೀ ಈ ನಾಲ್ವರು ಹೆಣ್ಣುಮಕ್ಕಳಿಗೆ ಹೃದಯಪೂರ್ವಕ ಅಭಿನಂದನೆಗಳು. ನಿಮ್ಮ ಸಾಧನೆ ಇತರರಿಗೆ ಸ್ಪೂರ್ತಿಯಾಗಲಿ ಎಂದು ಸಿಎಂ ಸಾಮಾಜಿಕ ಮಾಧ್ಯಮದಲ್ಲಿ ಬರೆದುಕೊಂಡಿದ್ದಾರೆ. ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣರಾದ ಎಲ್ಲಾ ವಿದ್ಯಾರ್ಥಿಗಳಿಗೆ ಅಭಿನಂದನೆಗಳು. ಪರಿಶ್ರಮ ಮತ್ತು…