ನಿರಾತಂಕವಾಗಿ ಪೂರ್ಣಗೊಂಡ ಚಾರ್ ಧಾಮ್ ಹೆಲಿಕಾಪ್ಟರ್ ಸೇವೆಗಳ ಮೊದಲ ಹಂತ

ನವದೆಹಲಿ: ಚಾರ್ ಧಾಮ್ ಯಾತ್ರೆ–2026ರ ಮೊದಲ ಹಂತದ ಹೆಲಿಕಾಪ್ಟರ್ ಸೇವೆಗಳು ಜೂನ್ 26ರಂದು ಯಾವುದೇ ಅವಘಡಗಳಿಲ್ಲದೆ ಯಶಸ್ವಿಯಾಗಿ ಪೂರ್ಣಗೊಂಡಿವೆ ಎಂದು ಕೇಂದ್ರ ನಾಗರಿಕ ವಿಮಾನಯಾನ ಸಚಿವಾಲಯ ತಿಳಿಸಿದೆ. ಏಪ್ರಿಲ್‌ನಲ್ಲಿ ಆರಂಭವಾದ ಯಾತ್ರಾ ಅವಧಿಯಲ್ಲಿ ಪ್ರತಿದಿನ ಸರಾಸರಿ 400 ಹೆಲಿಕಾಪ್ಟರ್ ಸಂಚಾರಗಳು ನಡೆದಿದ್ದು, ಒಟ್ಟು 12,032 ಶಟಲ್ ಹಾರಾಟಗಳ ಮೂಲಕ 67,064 ಯಾತ್ರಿಕರನ್ನು ಸಾಗಿಸಲಾಗಿದೆ. ಇದಲ್ಲದೆ, 2,065 ಚಾರ್ಟರ್ ಹಾರಾಟಗಳ ಮೂಲಕ ಮತ್ತಷ್ಟು 11,715 ಭಕ್ತರಿಗೆ ಸೇವೆ ಒದಗಿಸಲಾಗಿದೆ. ಕೇಂದ್ರ ನಾಗರಿಕ ವಿಮಾನಯಾನ ಸಚಿವ ರಾಮ್ ಮೋಹನ್ ನಾಯ್ಡು ಅವರ ನೇತೃತ್ವದಲ್ಲಿ, ಡಿಜಿಸಿಎ, ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರ (AAI), ಉತ್ತರಾಖಂಡ ನಾಗರಿಕ ವಿಮಾನಯಾನ ಅಭಿವೃದ್ಧಿ ಪ್ರಾಧಿಕಾರ (UCADA) ಹಾಗೂ ರಾಜ್ಯ ಸರ್ಕಾರದ ಸಹಯೋಗದೊಂದಿಗೆ ಯಾತ್ರೆಗೆ ಮುನ್ನ ವ್ಯಾಪಕ ಸಿದ್ಧತೆಗಳನ್ನು ಕೈಗೊಳ್ಳಲಾಗಿತ್ತು. ಹಿಮಾಲಯದ ದುರ್ಗಮ ಭೂಪ್ರದೇಶ ಮತ್ತು ಅನಿಶ್ಚಿತ ಹವಾಮಾನವನ್ನು ಗಮನದಲ್ಲಿಟ್ಟುಕೊಂಡು ವಾಯು ಸಂಚಾರ ನಿರ್ವಹಣೆ, ಹವಾಮಾನ ಮೇಲ್ವಿಚಾರಣೆ…

ರಾಜ್ಯದ ಆರೋಗ್ಯ ಇಲಾಖೆ ಐಸಿಯುನಲ್ಲಿದೆ: ಕಾಂಗ್ರೆಸ್ ಸರ್ಕಾರದ ವಿರುದ್ಧ ಆರ್. ಅಶೋಕ್ ವಾಗ್ದಾಳಿ

ಬೆಂಗಳೂರು: ಗ್ಯಾರಂಟಿ ಯೋಜನೆಗಳ ಹೆಸರಲ್ಲಿ ರಾಜ್ಯದ ಖಜಾನೆಯನ್ನು ಖಾಲಿ ಮಾಡಿ, ಆರೋಗ್ಯ ಇಲಾಖೆಯನ್ನು ಸಂಕಷ್ಟದ ಪರಿಸ್ಥಿತಿಗೆ ತಳ್ಳಿರುವುದೇ ಕಾಂಗ್ರೆಸ್ ಸರ್ಕಾರದ ಸಾಧನೆ ಎಂದು ವಿಧಾನಸಭೆ ಪ್ರತಿಪಕ್ಷ ನಾಯಕ ಆರ್. ಅಶೋಕ್ ಟೀಕಿಸಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣ ‘ಎಕ್ಸ್‌’ನಲ್ಲಿ ಪೋಸ್ಟ್ ಮಾಡಿರುವ ಅವರು, ರಾಜ್ಯ ಆರೋಗ್ಯ ಇಲಾಖೆಯಲ್ಲಿ 35,196 ಹುದ್ದೆಗಳು ಖಾಲಿ ಇದ್ದು, ತಕ್ಷಣವೇ ಅವುಗಳನ್ನು ಭರ್ತಿ ಮಾಡಬೇಕು ಎಂದು ಆಗ್ರಹಿಸಿದ್ದಾರೆ. ಜೊತೆಗೆ ‘ನಮ್ಮ ಕ್ಲಿನಿಕ್’ ಸಿಬ್ಬಂದಿಗೆ ಬಾಕಿ ಇರುವ ವೇತನವನ್ನು ಕೂಡಲೇ ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸಿದ್ದಾರೆ. ಸರ್ಕಾರ ಬದಲಾಗಿದ್ದರೂ, ಆರೋಗ್ಯ ಇಲಾಖೆಯ ಪರಿಸ್ಥಿತಿ ಮಾತ್ರ ಬದಲಾಗಿಲ್ಲ ಎಂದು ಆರೋಪಿಸಿರುವ ಅಶೋಕ್, “ಮುಖ್ಯಮಂತ್ರಿಗಳು ಬದಲಾದರು, ಆರೋಗ್ಯ ಸಚಿವರು ಬದಲಾದರು. ಆದರೆ ಕಾಂಗ್ರೆಸ್ ಸರ್ಕಾರದ ನಿರ್ಲಕ್ಷ್ಯ, ಅಸಮರ್ಥತೆ ಮತ್ತು ಜನವಿರೋಧಿ ಆಡಳಿತ ಮಾತ್ರ ಬದಲಾಗಿಲ್ಲ. ಇಂದು ಆರೋಗ್ಯ ಇಲಾಖೆಯೇ ಐಸಿಯುನಲ್ಲಿರುವಂತಾಗಿದೆ” ಎಂದು ವಾಗ್ದಾಳಿ ನಡೆಸಿದ್ದಾರೆ. ರಾಜ್ಯದ ಸರ್ಕಾರಿ…

ಮುತ್ತತ್ತಿ ದುರಂತ ಬೆನ್ನಲ್ಲೇ ಎಚ್ಚೆತ್ತ ಸರ್ಕಾರ: ಕಾವೇರಿ ನದಿಯಲ್ಲಿ ಬ್ಯಾರಿಕೇಡ್ ಅಳವಡಿಕೆಗೆ ಸಚಿವರ ಸೂಚನೆ

ಬೆಂಗಳೂರು: ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಮುತ್ತತ್ತಿಯಲ್ಲಿ ಒಂದೇ ಕುಟುಂಬದ ಐವರು ಕಾವೇರಿ ನದಿಯಲ್ಲಿ ಮುಳುಗಿ ಸಾವನ್ನಪ್ಪಿದ ದುರ್ಘಟನೆಗೆ ಜಲಸಂಪನ್ಮೂಲ ಸಚಿವ ರಾಮಲಿಂಗಾರೆಡ್ಡಿ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಇಂತಹ ಘಟನೆಗಳು ಮರುಕಳಿಸದಂತೆ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಮಂಡ್ಯ ಜಿಲ್ಲಾಡಳಿತಕ್ಕೆ ನಿರ್ದೇಶನ ನೀಡಿದ್ದಾರೆ. ಈ ಸಂಬಂಧ ಮಂಡ್ಯ ಜಿಲ್ಲಾಧಿಕಾರಿಗೆ ಸೂಚನೆ ನೀಡಿರುವ ಸಚಿವರು, ಕಾವೇರಿ ನದಿಯಲ್ಲಿ ಸಾರ್ವಜನಿಕರ ಸುರಕ್ಷತೆಗಾಗಿ ‘ಸೇಫ್ ಜೋನ್’ ಬ್ಯಾರಿಕೇಡ್‌ಗಳನ್ನು ಅಳವಡಿಸಬೇಕು ಎಂದು ತಿಳಿಸಿದ್ದಾರೆ. ಜೊತೆಗೆ ಅಪಾಯಕಾರಿ ಪ್ರದೇಶಗಳಲ್ಲಿ ಜಾಗೃತಿ ಫಲಕಗಳನ್ನು ಅಳವಡಿಸಿ, ಪ್ರವಾಸಿಗರಿಗೆ ಮಾರ್ಗದರ್ಶನ ನೀಡಲು ಗೈಡ್‌ಗಳನ್ನು ನಿಯೋಜಿಸುವಂತೆ ಸೂಚಿಸಿದ್ದಾರೆ. ನದಿಯಲ್ಲಿ ನಿಗದಿತ ಸುರಕ್ಷಿತ ಸ್ಥಳಗಳನ್ನು ಹೊರತುಪಡಿಸಿ ಬೇರೆಡೆ ಈಜುವುದನ್ನು ಕಟ್ಟುನಿಟ್ಟಾಗಿ ನಿಷೇಧಿಸಬೇಕು ಎಂದು ಸಚಿವರು ಅಧಿಕಾರಿಗಳಿಗೆ ಆದೇಶಿಸಿದ್ದಾರೆ. ಮುತ್ತತ್ತಿಯಲ್ಲಿ ಇತ್ತೀಚೆಗೆ ಸಂಭವಿಸಿದ ದುರಂತದಲ್ಲಿ ಒಂದೇ ಕುಟುಂಬದ ಐವರು ಕಾವೇರಿ ನದಿಯಲ್ಲಿ ಮುಳುಗಿ ಸಾವನ್ನಪ್ಪಿದ್ದರು. ಈ ಘಟನೆ ರಾಜ್ಯಾದ್ಯಂತ ಆಘಾತ ಮೂಡಿಸಿದ್ದು, ಪ್ರವಾಸಿ…

ಕೊಪ್ಪಳದಲ್ಲಿ ಭೀಕರ ರಸ್ತೆ ಅಪಘಾತ; ಮೂವರು ಸಾವು, ಆರು ಮಂದಿಗೆ ಗಾಯ

ಕೊಪ್ಪಳ: ಜಿಲ್ಲೆಯ ಕುಕನೂರು ತಾಲೂಕಿನ ಭಾನಾಪೂರ ಬಳಿ ರಾಷ್ಟ್ರೀಯ ಹೆದ್ದಾರಿ 63ರಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮೂವರು ಮೃತಪಟ್ಟಿದ್ದು, ಆರು ಮಂದಿ ಗಾಯಗೊಂಡಿದ್ದಾರೆ. ಶನಿವಾರ ಮುಂಜಾನೆ ಈ ಘಟನೆ ನಡೆದಿದ್ದು, ಹಾವೇರಿ ಜಿಲ್ಲೆಯ ರಟ್ಟಿಹಳ್ಳಿ ತಾಲೂಕಿನ ಕಬ್ಬಾರ್ ಗ್ರಾಮದ ನಿವಾಸಿಗಳು ಓಮಿನಿ ವಾಹನದಲ್ಲಿ ಮಂತ್ರಾಲಯಕ್ಕೆ ತೆರಳುತ್ತಿದ್ದರು. ಈ ವೇಳೆ ಪಕ್ಕದ ರಸ್ತೆಯಲ್ಲಿ ಸಂಚರಿಸುತ್ತಿದ್ದ ಅಶೋಕ್ ಲೇಲ್ಯಾಂಡ್ ವಾಹನ ನಿಯಂತ್ರಣ ತಪ್ಪಿ ಓಮಿನಿ ಕಾರಿಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಓಮಿನಿ ವಾಹನದಲ್ಲಿದ್ದ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತರನ್ನು ರಮೇಶ್ ಬಳ್ಳಾರಿ (45), ಕೆಂಚಮ್ಮ ಬಾಳೆಕಾಯಿ (35) ಹಾಗೂ ಅಮೃತಾ (25) ಎಂದು ಗುರುತಿಸಲಾಗಿದೆ. ಅಪಘಾತದಲ್ಲಿ ಗಾಯಗೊಂಡ ಆರು ಮಂದಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ವಿಷಯ ತಿಳಿದ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಮುಂದಿನ ಕ್ರಮ ಕೈಗೊಂಡಿದ್ದಾರೆ.

2024ರಿಂದ 21 ಬಾರಿ ಕೈಕೊಟ್ಟ ನಮ್ಮ ಮೆಟ್ರೋ; ಬಿಎಂಆರ್‌ಸಿಎಲ್‌ಗೆ ತೇಜಸ್ವಿ ಸೂರ್ಯ ತರಾಟೆ

ಬೆಂಗಳೂರು: ನಗರದ ಸಾರ್ವಜನಿಕ ಸಾರಿಗೆಯ ಪ್ರಮುಖ ಆಧಾರವಾಗಿರುವ ನಮ್ಮ ಮೆಟ್ರೋ ಮತ್ತೊಮ್ಮೆ ತಾಂತ್ರಿಕ ದೋಷದಿಂದಾಗಿ ಪ್ರಯಾಣಿಕರ ಆಕ್ರೋಶಕ್ಕೆ ಗುರಿಯಾಗಿದೆ. ಕಳೆದ ಮೂರು ವರ್ಷಗಳಲ್ಲಿ ಸರಣಿ ಅಡಚಣೆಗಳು ವರದಿಯಾಗಿದ್ದು, 2024ರಿಂದ 2026ರ ಜೂನ್ 26ರವರೆಗೆ ಒಟ್ಟು 21 ಬಾರಿ ತಾಂತ್ರಿಕ ಸಮಸ್ಯೆಗಳು ಉಂಟಾಗಿವೆ ಎಂಬ ಮಾಹಿತಿ ಬಹಿರಂಗವಾಗಿದೆ. ಈ ಹಿನ್ನೆಲೆಯಲ್ಲಿ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯ ಅವರು ಸಾಮಾಜಿಕ ಜಾಲತಾಣ ‘ಎಕ್ಸ್‌’ನಲ್ಲಿ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದು, ಬೆಂಗಳೂರು ಮೆಟ್ರೋ ರೈಲು ನಿಗಮ (ಬಿಎಂಆರ್‌ಸಿಎಲ್) ಆಡಳಿತ ಮಂಡಳಿಯು ಸಾರ್ವಜನಿಕರಿಗೆ ಉತ್ತರ ನೀಡಬೇಕಾಗಿದೆ ಎಂದು ಆಗ್ರಹಿಸಿದ್ದಾರೆ. ಮೆಟ್ರೋದಲ್ಲಿ ಮರುಮರು ಸಂಭವಿಸುತ್ತಿರುವ ತಾಂತ್ರಿಕ ವೈಫಲ್ಯಗಳನ್ನು ಗಂಭೀರವಾಗಿ ಪರಿಗಣಿಸಿರುವ ತೇಜಸ್ವಿ ಸೂರ್ಯ, ರೈಲ್ವೆ ಸುರಕ್ಷತಾ ಆಯುಕ್ತರಿಗೆ (ದಕ್ಷಿಣ ವಲಯ) ಹಾಗೂ ರಾಜ್ಯದ ನಗರಾಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ಅವರಿಗೆ ಪತ್ರ ಬರೆದಿದ್ದಾರೆ. “ಬಿಎಂಆರ್‌ಸಿಎಲ್ ದೇಶದಲ್ಲೇ ಅತ್ಯಧಿಕ ಮೆಟ್ರೋ ಪ್ರಯಾಣ ದರಗಳನ್ನು…

ಡಿಕೆಶಿ ಜೊತೆ ಯಾವುದೇ ರಾಜಕೀಯ, ವ್ಯಾವಹಾರಿಕ ಸಂಬಂಧ ಇಲ್ಲ: ವಿಜಯೇಂದ್ರ ಸ್ಪಷ್ಟನೆ

ಮಂಗಳೂರು: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರೊಂದಿಗೆ ತಮಗೆ ಯಾವುದೇ ರಾಜಕೀಯ ಅಥವಾ ವ್ಯಾವಹಾರಿಕ ಸಂಬಂಧ ಇಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಸ್ಪಷ್ಟಪಡಿಸಿದ್ದಾರೆ. ಅಲ್ಲದೆ, ಪಕ್ಷದ ಹಿರಿಯ ನಾಯಕರ ಸಲಹೆಯಂತೆ ಧರ್ಮಸ್ಥಳದಲ್ಲಿ ಆಣೆ-ಪ್ರಮಾಣ ಮಾಡುವ ನಿರ್ಧಾರದಿಂದ ಹಿಂದೆ ಸರಿದಿರುವುದಾಗಿ ತಿಳಿಸಿದ್ದಾರೆ. ಧರ್ಮಸ್ಥಳಕ್ಕೆ ಭೇಟಿ ನೀಡಿದ ವಿಜಯೇಂದ್ರ ಅವರು ವಿವಿಧ ಕೈಂಕರ್ಯಗಳಲ್ಲಿ ಭಾಗವಹಿಸಿದರು. ಈ ವೇಳೆ ಅವರೊಂದಿಗೆ ಒಬ್ಬ ಸಂಸದ, ಎಂಟು ಶಾಸಕರು ಹಾಗೂ ಇಬ್ಬರು ವಿಧಾನ ಪರಿಷತ್ ಸದಸ್ಯರು ಉಪಸ್ಥಿತರಿದ್ದರು. ಬಳಿಕ ಧರ್ಮಸ್ಥಳ ಕ್ಷೇತ್ರದ ವಸತಿಗೃಹದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತಮ್ಮ ವಿರುದ್ಧ ನಡೆಯುತ್ತಿರುವ ಅಪಪ್ರಚಾರಗಳಿಗೆ ಶ್ರೀ ಮಂಜುನಾಥ ಸ್ವಾಮಿಯ ಸನ್ನಿಧಿಯಲ್ಲಿ ಪೂರ್ಣವಿರಾಮ ಇಟ್ಟಿರುವುದಾಗಿ ಹೇಳಿದರು. “ವಿಧಾನ ಪರಿಷತ್ ಚುನಾವಣೆಯ ಅಡ್ಡ ಮತದಾನದ ವಿಚಾರ ನನಗೆ ಮಾತ್ರವಲ್ಲ, ಲಕ್ಷಾಂತರ ಬಿಜೆಪಿ ಕಾರ್ಯಕರ್ತರಿಗೂ ತೀವ್ರ ನೋವು ಮತ್ತು ಆಘಾತ ಉಂಟುಮಾಡಿದೆ. ನಾನು ಭಾವನಾತ್ಮಕ ವ್ಯಕ್ತಿಯಾಗಿರುವ ಕಾರಣ ಸತ್ಯಾಸತ್ಯತೆ…

ಬಿಡದಿ ಟೌನ್‌ಶಿಪ್‌ ವಿವಾದ: ಬೈರಮಂಗಲಕ್ಕೆ ಬಂದು ರೈತರ ಅಹವಾಲು ಆಲಿಸಿ; ಸಿಎಂಗೆ ಕುಮಾರಸ್ವಾಮಿ ಮತ್ತೆ ಆಹ್ವಾನ

ಬೆಂಗಳೂರು: ಪ್ರಸ್ತಾವಿತ ಬಿಡದಿ ಟೌನ್‌ಶಿಪ್ ಯೋಜನೆಗೆ ಸಂಬಂಧಿಸಿದಂತೆ ರೈತರ ಆತಂಕಗಳನ್ನು ಆಲಿಸಲು ಬೈರಮಂಗಲಕ್ಕೆ ಬರುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಮತ್ತೊಮ್ಮೆ ಆಹ್ವಾನ ನೀಡಿದ್ದಾರೆ. ಈ ಕುರಿತು ಅವರು ಮುಖ್ಯಮಂತ್ರಿ ಅವರಿಗೆ ಪತ್ರ ಬರೆದಿರುವುದಲ್ಲದೆ, ಅದರ ವಿವರವನ್ನು ಸಾಮಾಜಿಕ ಜಾಲತಾಣ ‘ಎಕ್ಸ್‌’ನಲ್ಲಿ ಹಂಚಿಕೊಂಡಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಪ್ರಕಟಿಸಿರುವ ಸಂದೇಶದಲ್ಲಿ, ಬಿಡದಿ ಟೌನ್‌ಶಿಪ್ ಯೋಜನೆಯಿಂದ ಭೂಮಿ ಕಳೆದುಕೊಳ್ಳುವ ಆತಂಕದಲ್ಲಿರುವ ರೈತರ ಕಳವಳಗಳನ್ನು ನೇರವಾಗಿ ಆಲಿಸುವ ಉದ್ದೇಶದಿಂದ ಮುಖ್ಯಮಂತ್ರಿಗಳನ್ನು ಮತ್ತೊಮ್ಮೆ ಬೈರಮಂಗಲಕ್ಕೆ ಆಹ್ವಾನಿಸಿದ್ದೇನೆ ಎಂದು ಕುಮಾರಸ್ವಾಮಿ ತಿಳಿಸಿದ್ದಾರೆ. ಈ ಸಂಬಂಧ ಮುಖ್ಯಮಂತ್ರಿಗಳಿಗೆ ಎರಡನೇ ಬಾರಿ ಪತ್ರ ಬರೆದಿರುವುದಾಗಿ ಹೇಳಿರುವ ಅವರು, “ಈ ಹಿಂದೆ ತಿಳಿಸಿದಂತೆ ಜೂನ್ 27, 2026ರಂದು ನಾನು ಬೈರಮಂಗಲದಲ್ಲಿ ರೈತರು ಹಾಗೂ ಇತರ ಬಾಧಿತ ಪಾಲುದಾರರೊಂದಿಗೆ ಸಂವಾದ ನಡೆಸಲು ಲಭ್ಯವಿರುತ್ತೇನೆ. ಮುಖ್ಯಮಂತ್ರಿಗಳು ಸಹ ಸಕಾರಾತ್ಮಕ ಮನೋಭಾವದಿಂದ ಸ್ಪಂದಿಸಿ, ಜನರ ಸಮಸ್ಯೆಗಳನ್ನು ಅವರಿರುವ ಸ್ಥಳದಲ್ಲೇ…

‘ಗೃಹಲಕ್ಷ್ಮಿ ಯೋಜನೆ’ ಅಕ್ರಮಗಳಲ್ಲಿ ಅನುಷ್ಠಾನ ಸಮಿತಿಯ ಸದಸ್ಯರೇ ಸರದಾರರು ಎಂದ ಅಶೋಕ್

ಬೆಂಗಳೂರು: ಗೃಹಲಕ್ಷ್ಮಿ ಯೋಜನೆಯಲ್ಲಿ ಅಕ್ರಮಗಳ ಕುರಿತಂತೆ ರಾಜ್ಯ ಸರ್ಕಾರವನ್ನು ತೆಗೆದುಕೊಂಡಿರುವ ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್.ಅಶೋಕ್, ಅಕ್ರಮದಲ್ಲಿ ಅನುಷ್ಠಾನ ಸಮಿತಿಯ ಸದಸ್ಯರೇ ಸರದಾರರು ಎಂದು ಆರೋಪಿಸಿದ್ದಾರೆ. ಗೃಹಲಕ್ಷ್ಮಿ ಯೋಜನೆಯಲ್ಲಿ ಅಕ್ರಮಗಳು ನಡೆದಿದ್ದು, ಸಾವಿರಾರು ವಂಚನೆ ಖಾತೆಗಳಿಗೆ ಕೋಟ್ಯಂತರ ರೂಪಾಯಿಗಳನ್ನು ವಿತರಿಸಲಾಗಿದೆ. ಖಾತರಿ ಅನುಷ್ಠಾನ ಸಮಿತಿಗೆ 150 ಕೋಟಿ ಖರ್ಚು ಮಾಡುವುದು ಅರ್ಥಹೀನ. ಇದರ ಜೊತೆಗೆ, ಖಾತರಿಗಳಿಗಾಗಿ ಅರ್ಜಿಗಳನ್ನು ಮರುಸಲ್ಲಿಸುವ ನಾಟಕ ಪ್ರಾರಂಭವಾಗಿದೆ. ಒಟ್ಟಾರೆಯಾಗಿ, ಕಾಂಗ್ರೆಸ್ ಖಾತರಿಗಳಲ್ಲಿ ಅವ್ಯವಸ್ಥೆ ಇದೆ ಎಂದವರು ವಾಗ್ದಾಳಿ ನಡೆಸಿದ್ದಾರೆ. ಗೃಹಲಕ್ಷ್ಮಿ ಯೋಜನೆಯಲ್ಲಿ ಅಕ್ರಮಗಳಾಗಿವೆ, ಸಾವಿರಾರು ಅಕ್ರಮ ಖಾತೆಗಳಿಗೆ ಕೋಟ್ಯಂತರ ರೂಪಾಯಿ ಹಣ ಪಾವತಿಸಲಾಗಿದೆ. ಗ್ಯಾರಂಟಿ ಅನುಷ್ಠಾನ ಸಮಿತಿಗೆ 150 ಕೋಟಿ ಖರ್ಚು ಮಾಡುತ್ತಿರುವುದು ನಿರರ್ಥಕ. ಇದರ ಮೇಲೆ ಗ್ಯಾರಂಟಿಗಳಿಗೆ ಮರು ಅರ್ಜಿ ಸಲ್ಲಿಸುವ ನಾಟಕ ಆರಂಭಿಸಿದೆ. ಒಟ್ಟಾರೆಯಾಗಿ ಕಾಂಗ್ರೆಸ್ ಗ್ಯಾರಂಟಿಗಳಲ್ಲಿ ಗೋಲ್‌ಮಾಲ್‌ ಆಗುತ್ತಿದೆ.… pic.twitter.com/jm6lj4CnU9 — R. Ashoka (@RAshokaBJP) June 25,…

ಸೆಪ್ಟೆಂಬರ್ 18-19ರಂದು ರಾಜ್ಯ ಮಟ್ಟದ ಕಾಫಿ ಬೆಳೆಗಾರರ ಬೃಹತ್ ಸಮಾವೇಶ

ಚಿಕ್ಕಮಗಳೂರು: ಕಾಫಿ ಬೆಳೆಗಾರರ ಸಂಘ ಹಾಗೂ ಟೆಂಡರ್ ಟುಡೆ ಗ್ರೂಪ್ ಸಹಯೋಗದಲ್ಲಿ ಸೆಪ್ಟೆಂಬರ್ 18 ಮತ್ತು 19ರಂದು ಚಿಕ್ಕಮಗಳೂರಿನ ಒಕ್ಕಲಿಗರ ಸಮುದಾಯ ಭವನದಲ್ಲಿ ರಾಜ್ಯ ಮಟ್ಟದ ಕಾಫಿ ಬೆಳೆಗಾರರ ಬೃಹತ್ ತಾಂತ್ರಿಕ ಸಮಾವೇಶ ಮತ್ತು ವಿಚಾರ ಸಂಕಿರಣ ಆಯೋಜಿಸಲಾಗಿದೆ. ಈ ಕುರಿತು ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದ ಟೆಂಡರ್ ಟುಡೆ ಗ್ರೂಪ್ ಅಧ್ಯಕ್ಷ ಶ್ರೀಹರಿ ಎನ್. ಗೌರಿಪುರ, ಸಮಾವೇಶದಲ್ಲಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಭಾಗವಹಿಸಲಿದ್ದು, 80ಕ್ಕೂ ಹೆಚ್ಚು ಕಂಪನಿಗಳು ತಮ್ಮ ಉತ್ಪನ್ನಗಳು ಮತ್ತು ತಾಂತ್ರಿಕ ಆವಿಷ್ಕಾರಗಳನ್ನು ಪ್ರದರ್ಶಿಸಲಿವೆ ಎಂದು ತಿಳಿಸಿದರು. ಕಾಫಿ ಬೆಳೆಗಾರರಿಗೆ ಉಪಯುಕ್ತವಾಗುವ ನೂತನ ತಂತ್ರಜ್ಞಾನ, ಯಂತ್ರೋಪಕರಣಗಳು ಹಾಗೂ ಆಧುನಿಕ ಕೃಷಿ ವಿಧಾನಗಳ ಕುರಿತು ಪ್ರಾತ್ಯಕ್ಷಿಕೆಗಳನ್ನು ಆಯೋಜಿಸಲಾಗುವುದು. ಇತ್ತೀಚಿನ ದಿನಗಳಲ್ಲಿ ಕಾಫಿ ತೋಟಗಳಲ್ಲಿ ಎದುರಾಗುತ್ತಿರುವ ಕಾರ್ಮಿಕರ ಕೊರತೆಗೆ ಪರಿಹಾರವಾಗುವ ಯಂತ್ರೋಪಕರಣಗಳ ಪ್ರದರ್ಶನವೂ ಸಮಾವೇಶದ ಪ್ರಮುಖ ಆಕರ್ಷಣೆಯಾಗಿರಲಿದೆ ಎಂದು ಹೇಳಿದರು. ಮಡಿಕೇರಿ, ಚಿಕ್ಕಮಗಳೂರು ಹಾಗೂ ಹಾಸನ ಜಿಲ್ಲೆಯ…

ಫೋಟೋ ತೆಗೆಯುವ ವೇಳೆ ಕಾವೇರಿ ಪಾಲಾದ ಒಂದೇ ಕುಟುಂಬದ ಐವರು

ಮಂಡ್ಯ: ಫೋಟೋ ತೆಗೆಯುವ ವೇಳೆ ಸಂಭವಿಸಿದ ದುರಂತದಲ್ಲಿ ಒಂದೇ ಕುಟುಂಬದ ಐವರು ಕಾವೇರಿ ನದಿಯಲ್ಲಿ ಮುಳುಗಿ ಮೃತಪಟ್ಟ ಘಟನೆ ಮಂಡ್ಯ ಜಿಲ್ಲೆಯ ಮುತ್ತತ್ತಿ ಸಮೀಪ ನಡೆದಿದೆ. ಮಳವಳ್ಳಿ ತಾಲ್ಲೂಕಿನ ಮುತ್ತುರಾಯ ಸ್ವಾಮಿ ದೇವಾಲಯಕ್ಕೆ ಕುಟುಂಬ ಸದಸ್ಯರು ಭೇಟಿ ನೀಡಿದ್ದರು. ದೇವಾಲಯ ದರ್ಶನದ ಬಳಿಕ ಕಾವೇರಿ ನದಿ ತೀರದಲ್ಲಿ ನಿಂತು ಫೋಟೋ ತೆಗೆಯುವ ಸಂದರ್ಭದಲ್ಲಿ ಅಜಾಗರೂಕತೆಯಿಂದ ನೀರಿನಲ್ಲಿ ಕಾಲು ಜಾರಿ ಬಿದ್ದಿದ್ದಾರೆ ಎನ್ನಲಾಗಿದೆ. ಮೃತರನ್ನು ಚನ್ನಪಟ್ಟಣ ಮೂಲದ ವಿಜಯಮ್ಮ, ಚೈತ್ರ, ಶ್ವೇತಾ, ಪ್ರಿಯಾಂಕ ಹಾಗೂ ಮಹೇಶ್ ಎಂದು ಗುರುತಿಸಲಾಗಿದೆ. ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಅಗ್ನಿಶಾಮಕ ದಳ ಹಾಗೂ ಸ್ಥಳೀಯ ರಕ್ಷಣಾ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಶೋಧ ಕಾರ್ಯಾಚರಣೆ ನಡೆಸಿದರು. ಬಳಿಕ ಐವರ ಮೃತದೇಹಗಳನ್ನು ನದಿಯಿಂದ ಹೊರತೆಗೆದಿದ್ದಾರೆ. ಘಟನೆಯಿಂದ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದ್ದು, ಮುತ್ತತ್ತಿ ಪ್ರದೇಶದಲ್ಲಿ ಶೋಕದ ವಾತಾವರಣ ನಿರ್ಮಾಣವಾಗಿದೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಘಟನೆಯ ಕುರಿತು ತನಿಖೆ…