ನಟ ದರ್ಶನ್ ಅಭಿನಯದ ‘ಡೆವಿಲ್’ ಚಿತ್ರದ ಟೀಸರ್ ಬಿಡುಗಡೆಗೆ ದಿನಾಂಕ ನಿಗದಿಯಾಗಿದೆ. ಫೆಬ್ರವರಿ 16ರಂದು ನಟ ದರ್ಶನ್ ರ ಹುಟ್ಟುಹಬ್ಬವಿದ್ದು ಅಂದೇ ಡೆವಿಲ್ ಚಿತ್ರದ ಟೀಸರ್ ಬಿಡುಗಡೆ ಮಾಡುವುದಾಗಿ ಚಿತ್ರತಂಡ ಪ್ರಕಟಿಸಿದೆ. ಈ ಕುರಿತಂತೆ ಸಂಗೀತ ನಿರ್ದೇಶಕ ಅಜನೀಶ್ ಲೋಕನಾಥ್ ಅವರು ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. ‘ನಮ್ಮ ಹೊಸ ಪ್ರಯತ್ನದ ಹಾರಿವು ಶೀಘ್ರದಲ್ಲೇ ನಿಮ್ಮ ಮುಂದೆ!’ ಎಂದು ಅವರು ಹಾಕಿರುವ ಪೋಸ್ಟ್ ಗಮನಸೆಳೆದಿದೆ.
Category: ರಾಜ್ಯ
ಏರೋ ಇಂಡಿಯಾ ನವ ಭಾರತದ ಶಕ್ತಿ, ಸ್ವಾವಲಂಬನೆಯನ್ನು ಪ್ರದರ್ಶಿಸುವ ವೇದಿಕೆ: ರಾಜನಾಥ್ ಸಿಂಗ್
ಬೆಂಗಳೂರು: ಏರೋ ಇಂಡಿಯಾ ನಮ್ಮ ಯುವಕರಿಗೆ ಸ್ಫೂರ್ತಿಯ ಮೂಲವಾಗಿ ಕಾರ್ಯನಿರ್ವಹಿಸುವುದರ ಜೊತೆಗೆ, ವೈಜ್ಞಾನಿಕ ಮನೋಧರ್ಮ ಮತ್ತು ನಾವೀನ್ಯತೆಯ ಮನೋಭಾವವನ್ನು ಬೆಳೆಸುವುದರ ಜೊತೆಗೆ ಸರ್ಕಾರದ ಬಲವಾದ ಮತ್ತು ಸ್ವಾವಲಂಬಿ ಭಾರತದ ದೃಷ್ಟಿಕೋನವನ್ನು ಮುಂದಕ್ಕೆ ಕೊಂಡೊಯ್ಯುತ್ತದೆ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹೇಳಿದ್ದಾರೆ. ಏರೋ ಇಂಡಿಯಾದ 15 ನೇ ಆವೃತ್ತಿಯ ಮುನ್ನಾದಿನ, ಭಾನುವಾರ ಬೆಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್, ಏರೋ ಇಂಡಿಯಾ ನವ ಭಾರತದ ಶಕ್ತಿ, ಸ್ಥಿತಿಸ್ಥಾಪಕತ್ವ ಮತ್ತು ಸ್ವಾವಲಂಬನೆಯನ್ನು ಪ್ರದರ್ಶಿಸುವ ವೇದಿಕೆಯಾಗಿದೆ. ಇದು ಭಾರತದ ರಕ್ಷಣಾ ಸನ್ನದ್ಧತೆಗೆ ನಿರ್ಣಾಯಕ ಮಾತ್ರವಲ್ಲ, ನಮ್ಮ ರಾಷ್ಟ್ರದ ಭವಿಷ್ಯವನ್ನು ರೂಪಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ. ಇದು ನಮ್ಮ ರಕ್ಷಣಾ ಸಾಮರ್ಥ್ಯಗಳನ್ನು ಪ್ರದರ್ಶಿಸುತ್ತದೆ ಮತ್ತು ಜಾಗತಿಕ ಪಾಲುದಾರಿಕೆಗಳನ್ನು ರೂಪಿಸುತ್ತದೆ. ಎಂದರು. ಆರ್ಡನೆನ್ಸ್ ಫ್ಯಾಕ್ಟರಿ ಮಂಡಳಿಯ ಕಾರ್ಪೊರೇಟೀಕರಣದ ನಂತರ, ಹೊಸದಾಗಿ ರೂಪುಗೊಂಡ ಕಂಪನಿಗಳು ರಕ್ಷಣಾ ಉತ್ಪಾದನೆಯಲ್ಲಿ ಅಸಾಧಾರಣವಾಗಿ ಉತ್ತಮವಾಗಿ ಕಾರ್ಯನಿರ್ವಹಿಸಲು…
ಸನಾತನ ಬಗ್ಗೆ ಸಕಾರಾತ್ಮಕ ನಿಲುವು; ಮಹಾಕುಂಭ ಮೇಳದಲ್ಲಿಪವಿತ್ರ ಸ್ನಾನ ಮಾಡಿದ ಡಿಕೆಶಿ
ಪ್ರಯಾಗ್‌ರಾಜ್: ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ನಡೆಯುತ್ತಿರುವ ಮಹಾಕುಂಭ ಮೇಳದಲ್ಲಿ ಸಿಕ್ಕಿಂ ಮುಖ್ಯಮಂತ್ರಿ ಪ್ರೇಮ್ ಸಿಂಗ್ ತಮಾಂಗ್ ಮತ್ತು ಕರ್ನಾಟಕ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಭಾನುವಾರ ತ್ರಿವೇಣಿ ಸಂಗಮದಲ್ಲಿ ಪವಿತ್ರ ಸ್ನಾನ ಮಾಡಿದರು. ಜನವರಿ 13 ರಂದು ಪ್ರಾರಂಭವಾಗಿ ಫೆಬ್ರವರಿ 26 ರವರೆಗೆ ನಡೆಯಲಿರುವ ಈ ಧಾರ್ಮಿಕ ಕಾರ್ಯಕ್ರಮವು ಈಗಾಗಲೇ ದೇಶಾದ್ಯಂತ ಮತ್ತು ಅದರಾಚೆಗಿನ ಲಕ್ಷಾಂತರ ಭಕ್ತರನ್ನು ಆಕರ್ಷಿಸಿದೆ.ಈ ಇಬ್ಬರೂ ನಾಯಕರು ತಮ್ಮನ್ನು ಆಹ್ವಾನಿಸಿದ್ದಕ್ಕಾಗಿ ಉತ್ತರ ಪ್ರದೇಶ ಸರ್ಕಾರಕ್ಕೆ ಕೃತಜ್ಞತೆ ಸಲ್ಲಿಸಿದರು ಮತ್ತು ಭವ್ಯವಾದ ಆಧ್ಯಾತ್ಮಿಕ ಸಭೆಗಾಗಿ ಮಾಡಿದ ವ್ಯವಸ್ಥೆಗಳನ್ನು ಶ್ಲಾಘಿಸಿದರು. ತಮ್ಮ ಈ ಅಪೂರ್ವ ಕ್ಷಣ ಬಗ್ಗೆ ಅನುಭವ ಹಂಚಿಕೊಂಡ ಡಿ.ಕೆ.ಶಿವಕುಮಾರ್, ‘ಇದು ಒಬ್ಬರ ಜೀವನದಲ್ಲಿ ಒಂದು ಐತಿಹಾಸಿಕ ಕ್ಷಣ. ಇಲ್ಲಿ ನೆರೆದಿರುವ ಕೋಟ್ಯಂತರ ಭಕ್ತರಿಗೆ ವ್ಯವಸ್ಥೆಗಳನ್ನು ನಿರ್ವಹಿಸುವಲ್ಲಿ ಸಂಘಟಕರು ಅದ್ಭುತ ಕೆಲಸ ಮಾಡಿದ್ದಾರೆ. ನನ್ನ ಕುಟುಂಬ ಮತ್ತು ನಾನು ಪವಿತ್ರ ಸ್ನಾನ ಮಾಡಿದ್ದಕ್ಕೆ ತುಂಬಾ ಸಂತೋಷವಾಗಿದೆ’…
ಡಾಲಿ -ಧನ್ಯತಾ ಜೋಡಿ ಬಗ್ಗೆ ಸುಂದರ ವೀಡಿಯೋ; ಮದುವೆಗೆ ಆಹ್ವಾನ..
ಡಾಲಿ ಧನಂಜಯ್ ಅವರು ಫೆಬ್ರವರಿ 16 ರಂದು ಮೈಸೂರಿನಲ್ಲಿ ವೈದ್ಯೆ ಧನ್ಯತಾ ಅವರನ್ನು ಮದುವೆಯಾಗುತ್ತಿದ್ದಾರೆ. ಮದುವೆಗೆ ಅಭಿಮಾನಿ ಬಳಗವನ್ನು ಆಹ್ವಾನಿಸಿರುವ ಅವರು ಸುಂದರ ವೀಡಿಯೊವನ್ನು ಹಂಚಿಕೊಂಡಿದ್ದಾರೆ. ಧನಂಜಯ್-ಧನ್ಯತಾ ಜೋಡಿ ನಿಶ್ಚಿತಾರ್ಥ ಮಾಡಿಕೊಂಡಿದ್ದು ಆ ಸನ್ನಿವೇಶದ ವಿಡಿಯೋವನ್ನು ದಾಳಿ ಅವರು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಈ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಸಕತ್ತಾಗಿ ವೈರಲ್ ಆಗುತ್ತಿದೆ.
ದೆಹಲಿ ಫಲಿತಾಂಶ: ಜನರಿಂದ ಆಪ್ ಪಕ್ಷ ತಿರಸ್ಕಾರ, ಒಡೆದು ಚೂರಾದ ಇಂಡಿ ಒಕ್ಕೂಟ?
ಬೆಂಗಳೂರು: ಭ್ರಷ್ಟಾಚಾರದಲ್ಲಿ ಮುಳುಗಿದ್ದ ಅರವಿಂದ ಕೇಜ್ರಿವಾಲ್ ನೇತೃತ್ವದ ಆಪ್ ಪಕ್ಷವನ್ನು ನವದೆಹಲಿಯ ಜನರು ತಿರಸ್ಕಾರ ಮಾಡಿದ್ದಾರೆ. ಇದು ಪ್ರಧಾನಿ ನರೇಂದ್ರ ಮೋದಿಯವರ ಆಡಳಿತಕ್ಕೆ ಸಿಕ್ಕಿರುವ ಗೆಲುವು ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೆಹಲಿಯ ಆಪ್ ಸರ್ಕಾರ ಕಳೆದ ಹತ್ತು ವರ್ಷಗಳಲ್ಲಿ ಭ್ರಷ್ಟಾಚಾರದಲ್ಲಿ ಮುಳುಗಿತ್ತು. ಅರವಿಂದ ಕೇಜ್ರಿವಾಲ್ ಆರಂಭದಲ್ಲಿ ಸರಳವಾದ ಕಾರಿನಲ್ಲಿ ಸಂಚರಿಸುತ್ತಿದ್ದರು. ಈಗ ದೊಡ್ಡ ಅರಮನೆ ಕಟ್ಟಿಕೊಂಡಿದ್ದು, ಐಷಾರಾಮಿ ಕಾರಿನಲ್ಲಿ ಸಂಚರಿಸುತ್ತಿದ್ದಾರೆ. ಅವರ ಆಡಳಿತವನ್ನು ನೋಡಿ ಜನರು ಬೇಸತ್ತಿದ್ದಾರೆ. ಯಮುನಾ ನದಿಯ ಬಗ್ಗೆ ಅವರು ಆಡಿದ ಮಾತು ಜನರಲ್ಲಿ ಬೇಸರ ತಂದಿದೆ. ಜನರು ಪ್ರತಿ ದಿನ ಕುಡಿಯುವ ನೀರಿನ ಬಗ್ಗೆ ಆಪಾದನೆ ಮಾಡಿದ್ದರು ಎಂದರು. ಯಮುನಾ ನದಿಯನ್ನು ಸರ್ಕಾರ ಸ್ವಚ್ಛವಾಗಿ ಇಡಬೇಕಿತ್ತು. ಅದನ್ನು ಬಿಟ್ಟು ನದಿಯ ಮೇಲೆಯೇ ಆಪಾದನೆ ಮಾಡಿದ್ದರು. ಜೈಲಿಗೆ ಹೋದರೂ ರಾಜೀನಾಮೆ ನೀಡದೆ ಅಲ್ಲಿಯೇ ಕುಳಿತು ಕಡತಕ್ಕೆ ಸಹಿ…
‘ನಮ್ಮ ಮೆಟ್ರೋ’ ಪ್ರಯಾಣ ದರ ಏರಿಕೆ; ಪರಿಷ್ಕೃತ ದರ ಫೆ.9 ರಿಂದ ಜಾರಿಗೆ
ಬೆಂಗಳೂರು: ನಮ್ಮ ಮೆಟ್ರೋ ರೈಲು ಪ್ರಯಾಣ ದರ ಏರಿಕೆಯಾಗಿಡೇ. ಈ ಸಂಬಂಧ BMRCL ಅಧಿಕೃತ ಪ್ರಕಟಣೆ ಹೊರಡಿಸಿದೆ. 8 ವರ್ಷಗಳ ಬಳಿಕ ನಮ್ಮ ಮೆಟ್ರೋ ರೈಲು ಪ್ರಯಾಣ ದರ ಏರಿಕೆಯಾಗಿದೆ ಎನ್ನಲಾಗುತ್ತಿದ್ದು, ಪರಿಷ್ಕೃತ ದರ ಫೆ.9 ರಿಂದ ಜಾರಿಗೆ ಬರಲಿದೆ. ಪ್ರಯಾಣ ದರ ಶೇ.46 ರಷ್ಟು ಏರಿಕೆ ಮಾಡಲಾಗಿದ್ದು 10 ರೂಪಾಯಿಯಿಂದ 90 ರೂಪಾಯಿ ವರೆಗೆ ಇರಲಿದೆ ಎಂದು ಅಧಿಕಾರಿಗಳು ಹೇಳಿದ್ದರು.
ಬೆಂಗಳೂರು ವಿವಿ: ನಾರಾಯಣಸ್ವಾಮಿ ಬಿ.ವಿ. ಅವರಿಗೆ ಪಿಎಚ್.ಡಿ ಪ್ರದಾನ
ಬೆಂಗಳೂರು: ಬೆಂಗಳೂರು ವಿಶ್ವವಿದ್ಯಾಲಯದ ಗ್ರಂಥಾಲಯ ಮತ್ತು ಮಾಹಿತಿ ವಿಜ್ಞಾನ ವಿಭಾಗದ ಸಂಶೋಧನಾ ವಿದ್ಯಾರ್ಥಿಯಾಗಿರುವ ನಾರಾಯಣಸ್ವಾಮಿ ಬಿ.ವಿ. ಅವರಿಗೆ ಪಿಎಚ್.ಡಿ ಪ್ರದಾನ ಮಾಡಲಾಗಿದೆ. ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕಿನ ದೊಡ್ಡ ಬೊಮ್ಮನಹಳ್ಳಿ ಗ್ರಾಮದ ರೈತಾಪಿ ಕುಟುಂಬಕ್ಕೆ ಸೇರಿದ ಅಕ್ಕಯಮ್ಮ ಮತ್ತು ವೆಂಕಟೇಶಪ್ಪ ರವರ ಪುತ್ರರಾದ ನಾರಾಯಣಸ್ವಾಮಿ ಬಿ.ವಿ.ರವರು ಪ್ರಸ್ತುತ ಬೆಂಗಳೂರು ವಿವಿಯಲ್ಲಿ ತಾತ್ಕಾಲಿಕ ಸಹಾಯಕ ಗ್ರಂಥಪಾಲಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಬೆಂಗಳೂರು ವಿಶ್ವವಿದ್ಯಾಲಯದ ಗ್ರಂಥಾಲಯ ಮತ್ತು ಮಾಹಿತಿ ವಿಜ್ಞಾನ ವಿಭಾಗದ ಸಂಶೋಧನಾ ವಿದ್ಯಾರ್ಥಿಯಾಗಿರುವ ನಾರಾಯಣಸ್ವಾಮಿ ಬಿ.ವಿ. ರವರು ಗ್ರಂಥಾಲಯ ಮತ್ತು ಮಾಹಿತಿ ವಿಜ್ಞಾನ ವಿಭಾಗದ ಹಿರಿಯ ಪ್ರಾಧ್ಯಾಪಕರಾದ ಪ್ರೊ.ರಮೇಶ್ ರವರ ಮಾರ್ಗದರ್ಶನದಲ್ಲಿ ಮಂಡಿಸಿದ “ಅವೇರ್ನೆಸ್ ಅಂಡ್ ಯುಟಿಲೈಜೇಷನ್ ಆಫ್ ಐಸಿಟಿ ಇನಿಶಿಯೇಟಿವ್ ಆಫ್ ಮಿನಿಸ್ಟ್ರಿ ಆಫ್ ಎಜುಕೇಶನ್, ಗವರ್ನಮೆಂಟ್ ಆಫ್ ಇಂಡಿಯಾ ಬೈ ದ ಯೂನಿವರ್ಸಿಟಿ ಲೈಬ್ರರೀಸ್ ಇನ್ ಕರ್ನಾಟಕ ಸ್ಟೇಟ್, ಆನ್ ಯೂಸರ್ ಅಸೆಸ್ಮೆಂಟ್ ಸ್ಟಡಿ” ಎಂಬ ಸಂಶೋಧನಾ…
ರಚಿತಾ, ರಕ್ಷಿತಾ, ಧನ್ನೀರ್ ಗೆ ಧನ್ಯವಾದ ಹೇಳಿದ ದರ್ಶನ್
ಕರ್ನಾಟಕವನ್ನು ಸಾಲಗಾರರ ರಾಜ್ಯ ಮಾಡಲು ಹೊರಟಿತೇ ಕಾಂಗ್ರೆಸ್ ಸರ್ಕಾರ?
ಬೆಂಗಳೂರು: ಮುಡಾ ಹಗರಣ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಕಾನೂನು ಹೋರಾಟ ಮುಂದುವರಿಸುತ್ತೇವೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಹೇಳಿದ್ದಾರೆ. ಮಲ್ಲೇಶ್ವರದ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಲೋಕಾಯುಕ್ತ ಮತ್ತು ಇಡಿ ತನಿಖೆ ನಡೆಯುತ್ತಿದ್ದು, ಸದ್ಯಕ್ಕೆ ಸಿದ್ದರಾಮಯ್ಯನವರಿಗೂ ಸ್ವಲ್ಪ ರಿಲೀಫ್ ಸಿಕ್ಕಿದೆ. ಅಲ್ಲದೇ ಲೂಟಿಯಾಗಿರುವ ರಾಜ್ಯದ ಜನತೆಯ ದುಡ್ಡು ಮತ್ತೆ ಖಜಾನೆಗೆ ವಾಪಸ್ ಬರುತ್ತದೆ ಎಂಬ ವಿಶ್ವಾಸ ಇದೆ. ಹೈಕೋರ್ಟ್ ಆದೇಶವನ್ನು ನಾವು ಒಪ್ಪಲೇಬೇಕಾಗುತ್ತದೆ. ಸಿದ್ದರಾಮಯ್ಯ ವಿಚಾರದಲ್ಲಿ ಕಾನೂನು ಹೋರಾಟ ಮುಂದುವರಿಸುತ್ತೇವೆ ಎಂದು ತಿಳಿಸಿದರು. ಕಾಂಗ್ರೆಸ್ ಆಡಳಿತದ 20 ತಿಂಗಳಲ್ಲಿ ಯಾವುದೇ ಅಭಿವೃದ್ಧಿ ಕಾರ್ಯ ನಡೆದಿಲ್ಲ. ಇದನ್ನು ಕಾಂಗ್ರೆಸ್ ಶಾಸಕರೇ ಒಪ್ಪಿಕೊಂಡಿದ್ದಾರೆ. ರಾಜ್ಯ ಸುಭದ್ರವಾಗಿರಬೇಕಾದರೆ ಕಾನೂನು ಸುವ್ಯವಸ್ಥೆ ಸರಿಯಾಗಿರಬೇಕು. ಆದರೆ ರಾಜ್ಯದಲ್ಲಿ ಬ್ಯಾಂಕ್ ದರೋಡೆಗಳು, ಗೋವುಗಳ ಕೆಚ್ಚಲು ಕೊಯ್ಯುವುದು, ಹೊಟ್ಟೆ ಸೀಳುವುದು, ಅತ್ಯಾಚಾರ ಪ್ರಕರಣ ಹೆಚ್ಚಾಗುತ್ತಿವೆ. ಕಾನೂನು ಸುವವ್ಯಸ್ಥೆ ಹದಗೆಟ್ಟು ಹೋಗಿದೆ. ಬೆಳಗಾವಿಯಲ್ಲಿ ಅಷ್ಟು ದೊಡ್ಡ…
ಮುಡಾ ಹಗರಣ ; ಹೈಕೋರ್ಟ್ ಆದೇಶ ಪ್ರಶ್ನಿಸಿ ಸುಪ್ರೀಂಗೆ ಸ್ನೇಹಮಯಿ ಮೊರೆ
ಧಾರವಾಡ: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ -ಮುಡಾ ಹಗರಣ ಕುರಿತಂತೆ ತನಿಖೆಯನ್ನು ಸಿಬಿಐಗೆ ನೀಡಲು ನಿರಾಕರಿಸಿ ಹೈಕೋರ್ಟ್ ಆದೇಶಿಸಿದೆ. ಮುಡಾ ನಿವೇಶನ ಅಕ್ರಮ ಕುರಿತಂತೆ ದೂರು ನೀಡಿದ್ದ ಸ್ನೇಹಮಯಿ ಕೃಷ್ಣ ಅವರು ಲೋಕಾಯುಕ್ತ ತನಿಖೆಯಲ್ಲಿ ವಿಶ್ವಾಸ ಇಲ್ಲಾವಾಗಿದ್ದು, ಸಿಬಿಐ ತನಿಖೆಗೆ ಆದೇಶ ಕೋರಿ ಹೈಕೋರ್ಟಿಗೆ ಅರ್ಜಿ ಸಲ್ಲಿಸಿದ್ದರು. ಅರ್ಜಿ ಕುರಿತಂತೆ ವಿಚಾರಣೆ ನಡೆಸಿದ್ದ ಹೈಕೋರ್ಟ್ ಇಂದು ತೀರ್ಪು ಪ್ರಕಟಿಸಿದೆ. ತೀರ್ಪು ಕುರಿತಂತೆ ಪ್ರತಿಕ್ರಿಯಿಸಿರುವ ದೂರುದಾರ ಸ್ನೇಹಮಯಿ ಕೃಷ್ಣ, ತಾವು ಕಾನೂನು ಹೋರಾಟ ಮುಂದುವರಿಸುವುದಾಗಿ ತಿಳಿಸಿದ್ದಾರೆ. ಲೋಕಾಯುಕ್ತ ತನಿಖೆ ಬಗ್ಗೆ ನಮಗೆ ನಂಬಿಕೆ ಇಲ್ಲ ಎಂದು ಪುನರುಚ್ಚರಿಸಿರುವ ಅವರು, ಹೈಕೋರ್ಟ್ ಆದೇಶ ಪ್ರಶ್ನಿಸಿ ಸುಪ್ರೀಂಕೋರ್ಟ್ಗೆ ಮೇಲ್ಮನವಿ ಸಲ್ಲಿಸುವುದಾಗಿ ತಿಳಿಸಿದ್ದಾರೆ.