ಧಾರವಾಡ: ವಿವಿಧ ಸರ್ಕಾರಿ ಇಲಾಖೆಗಳ ಖಾಲಿ ಹುದ್ದೆಗಳನ್ನ ತಕ್ಷಣ ಭರ್ತಿ ಮಾಡುವಂತೆ ಆಗ್ರಹಿಸಿ ನಗರದಲ್ಲಿ ಉದ್ಯೋಗಾಕಾಂಕ್ಷಿಗಳು ಬೀದಿಗಿಳಿದು ಉಗ್ರ ಪ್ರತಿಭಟನೆ ನಡೆಸಿದರು. ಈ ಸಂಬಂಧ ಭಾರತೀಯ ಜನತಾ ಪಕ್ಷ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ಆಯೋಜಿಸಲಾಗಿತ್ತು. ಪ್ರತಿಭಟನೆಯ ನಡುವೆ ಅಖಿಲ ಕರ್ನಾಟಕ ವಿದ್ಯಾರ್ಥಿ ಸಂಘಟನೆ ಸದಸ್ಯರೂ ಸೇರ್ಪಡೆಗೊಂಡು ಹೋರಾಟ ತೀವ್ರಗೊಳಿಸಿದರು. ಪ್ರತಿಭಟನಾಕಾರರು ಬ್ಯಾರಿಕೇಡ್‌ಗಳನ್ನು ತಳ್ಳಿ ಮುನ್ನುಗ್ಗಲು ಯತ್ನಿಸಿದ ಪರಿಣಾಮ, ಕೆಲಕಾಲ ಉದ್ವಿಗ್ನ ವಾತಾವರಣ ನಿರ್ಮಾಣವಾಯಿತು. ಈ ವೇಳೆ ಪೊಲೀಸರು ಹಾಗೂ ಪ್ರತಿಭಟನಾಕಾರರ ನಡುವೆ ತಳ್ಳಾಟ–ನೂಕಾಟ ನಡೆಯಿತು. ರಾಜ್ಯ ಸರ್ಕಾರವು ಖಾಲಿ ಹುದ್ದೆಗಳ ಭರ್ತಿಗೆ ತಕ್ಷಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ ಪ್ರತಿಭಟನಾಕಾರರು, ಯುವಜನರ ಅಸಮಾಧಾನವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಬೇಕು ಎಂದು ಹೇಳಿದರು. Massive protest in dharwad by job aspirants against the govt. The protestors took to the streets demanding that the…
Category: ರಾಜ್ಯ
‘ಶಾಸಕ ಚಂದ್ರು ಲಮಾಣಿ ವಿರುದ್ಧ ಷಡ್ಯಂತ್ರ ನಡೆದಿದೆ’; ಬೊಮ್ಮಾಯಿ
ಶಿರಹಟ್ಟಿ ಬಿಜೆಪಿ ಶಾಸಕ ಚಂದ್ರು ಲಮಾಣಿ ಅವರ ವಿರುದ್ಧ ಷಡ್ಯಂತ್ರ ನಡೆದಿದೆ ಸಿಎಂ ಬಸವರಾಜ ಬೊಮ್ಮಾಯಿ ಅರೆಒಪಿಸಿದ್ದಾರೆ. ಲಂಚ ಆರೋಪದಲ್ಲಿ ಶಾಸಕ ಚಂದ್ರು ಲಮಾಣಿ ಅವರನ್ನು ಲೋಕಾಯುಕ್ತ ಪೊಲೀಸರು ಬಂಧಿಸಿರುವ ಬಗ್ಗೆ ಪ್ರತಿಕ್ರಿಯಿಸಿರುವ ಬೊಮ್ಮಾಯಿ, ಒತ್ತಾಯಪೂರ್ವಕವಾಗಿ ಅವರಿಗೆ ಹಣ ನೀಡುವ ಪ್ರಯತ್ನ ನಡೆದಿದೆ. ಭ್ರಷ್ಟಾಚಾರ ನಿಗ್ರಹ ಕಾಯ್ದೆಯ ಪ್ರಕಾರ ಲಂಚ ನೀಡುವುದೂ ಹಾಗೂ ಲಂಚ ಸ್ವೀಕರಿಸಲು ಒತ್ತಾಯಿಸುವುದೂ ತಪ್ಪಾಗಿದೆ. ಆದ್ದರಿಂದ ಎಲ್ಲ ಆಯಾಮಗಳಲ್ಲಿ ಸಮಗ್ರ ಮತ್ತು ನಿಷ್ಪಕ್ಷಪಾತ ತನಿಖೆ ನಡೆಯಬೇಕೆಂದು ಒತ್ತಾಯಿಸಿದ್ದಾರೆ. ಶಾಸಕ ಚಂದ್ರು ಲಮಾಣಿ ಅವರ ಆಸ್ಪತ್ರೆಯಲ್ಲಿ ನಾನಾ ವರ್ಗದ ಜನರು ಭೇಟಿ ನೀಡುತ್ತಾರೆ. ಹೀಗಾಗಿ ಈ ಪ್ರಕರಣದ ಕುರಿತು ಇನ್ನೂ ಸ್ಪಷ್ಟತೆ ಇಲ್ಲ. ಲೋಕಾಯುಕ್ತರು ಪ್ರಕರಣ ದಾಖಲಿಸಿದ್ದಾರೆ. ತನಿಖೆಯ ಬಳಿಕ ಸತ್ಯಾಸತ್ಯತೆ ಬಹಿರಂಗವಾಗಲಿದೆ. ಒಬ್ಬ ಯುವ ವೈದ್ಯರು ಉತ್ತಮ ಸೇವೆ ಸಲ್ಲಿಸುತ್ತಿರುವ ಈ ಸಂದರ್ಭದಲ್ಲಿ, ಇಂತಹ ಕರಿ ನೆರಳು ಅವರ ಸೇವೆಗೆ ಅಡ್ಡಿಯಾಗಬಾರದು. ಲಂಚ…
‘ಕರ್ನಾಟಕ ಭಾರತ್ ಗೌರವ್’ ಕಾಫಿ ಟೇಬಲ್ ಪುಸ್ತಕ ಬಿಡುಗಡೆ
ನವದೆಹಲಿ: ಭಾರತೀಯ ರೈಲ್ವೆಯ ಸಾಂಸ್ಕೃತಿಕ ಮತ್ತು ಆಧ್ಯಾತ್ಮಿಕ ಪ್ರವಾಸೋದ್ಯಮ ಉಪಕ್ರಮವನ್ನು ಪರಿಚಯಿಸುವ “Karnataka Bharat Gaurav Train – Journey of a Thousand Shrines” ಎಂಬ ಕಾಫಿ ಟೇಬಲ್ ಪುಸ್ತಕವನ್ನು ಬಿಡುಗಡೆ ಮಾಡಲಾಗಿದೆ. ಈ ಪುಸ್ತಕವು ಕೇವಲ ರೈಲು ಸೇವೆಯ ದಾಖಲೆಯಲ್ಲ; ನಂಬಿಕೆ, ಸಂಸ್ಕೃತಿ, ಪರಂಪರೆ ಹಾಗೂ ಆಧುನಿಕ ರೈಲ್ವೆ ಮೂಲಸೌಕರ್ಯಗಳ ಸಮನ್ವಯದ ಹಿಂದೆ ಇರುವ ದೃಷ್ಟಿ ಮತ್ತು ಸಾಮೂಹಿಕ ಪ್ರಯತ್ನಗಳನ್ನು ಚಿತ್ರಿಸುತ್ತದೆ. ಐಆರ್‌ಟಿಎಸ್ (ನಿವೃತ್ತ) ಡಾ. ಅನುಪ್ ದಯಾನಂದ ಅವರ ಪರಿಕಲ್ಪನೆಯಲ್ಲಿ ಪುಸ್ತಕ ಮೂಡಿ ಬಂದಿದೆ. ಬಿಡುಗಡೆ ಕಾರ್ಯಕ್ರಮದಲ್ಲಿ ರೈಲ್ವೆಯ ಕಾರ್ಯಾಚರಣೆ ಮತ್ತು ವ್ಯವಹಾರ ಅಭಿವೃದ್ಧಿ ಸಮಿತಿಯ ಸದಸ್ಯ ಹರಿಶಂಕರ್ ವರ್ಮಾ, ಎನ್‌ಎಚ್‌ಎಂ ಹೆಚ್ಚುವರಿ ಸದಸ್ಯ ಕೆ.ಎಸ್. ಜೈನ್, ಭಾರತೀಯ ರೈಲ್ವೆ ಕ್ಯಾಟರಿಂಗ್ ಮತ್ತು ಪ್ರವಾಸೋದ್ಯಮ ನಿಗಮ (ಐಆರ್‌ಸಿಟಿಸಿ) ಸಿಎಂಡಿ ಎಸ್.ಕೆ. ಜೈನ್ ಹಾಗೂ ಪ್ರವಾಸೋದ್ಯಮ ನಿರ್ದೇಶಕ ರಾಹುಲ್ ಹಿಮಾಲಯನ್ ಉಪಸ್ಥಿತರಿದ್ದರು. ಭಾರತೀಯ ರೈಲ್ವೆ…
ಜೂನ್ ಮುನ್ನ ಪಂಚಾಯಿತಿ ಚುನಾವಣೆ: ಸಿಎಂ ಸಿದ್ದರಾಮಯ್ಯ
ಕಾರವಾರ: ಗ್ರಾಮ ಪಂಚಾಯಿತಿ, ತಾಲೂಕು ಪಂಚಾಯಿತಿ ಹಾಗೂ ಜಿಲ್ಲಾ ಪಂಚಾಯಿತಿಗಳ ಚುನಾವಣೆಗಳನ್ನು ಮುಂದಿನ ಜೂನ್ ತಿಂಗಳೊಳಗೆ ನಡೆಸಲಾಗುವುದು. ಈ ಬಗ್ಗೆ ಯಾವುದೇ ಗೊಂದಲ ಬೇಡ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಮಂಜಗುಣಿ–ಗಂಗಾವಳಿ ಸೇತುವೆ ಉದ್ಘಾಟನೆ ಬಳಿಕ ಅವರು ಮಾತನಾಡಿದರು. ಗೋಕರ್ಣವನ್ನು ಪಟ್ಟಣ ಪಂಚಾಯಿತಿಯಾಗಿ ಮೇಲ್ದರ್ಜೆಗೇರಿಸುವ ಬೇಡಿಕೆ ಇದ್ದು, ಚುನಾವಣೆಗಳ ಬಳಿಕ ಈ ಕುರಿತು ಕ್ರಮ ಕೈಗೊಳ್ಳಲಾಗುವುದು ಎಂದರು. ಹಾಲಕ್ಕಿ ಒಕ್ಕಲಿಗರನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸುವ ಪ್ರಸ್ತಾಪವನ್ನು ಕೇಂದ್ರ ಸರ್ಕಾರ ತಿರಸ್ಕರಿಸಿರುವುದರಿಂದ ಪುನಃ ಪ್ರಸ್ತಾವ ಸಲ್ಲಿಸಲು ಸರ್ಕಾರ ನಿರ್ಧರಿಸಿದೆ ಎಂದೂ ತಿಳಿಸಿದರು. ಈ ವೇಳೆ ಕಾರವಾರ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ 450 ಹಾಸಿಗೆಗಳ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಕಟ್ಟಡ ಸೇರಿದಂತೆ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿದರು. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಸಚಿವರು ಹಾಗೂ ಶಾಸಕರು ಸಮಾರಂಭದಲ್ಲಿ ಉಪಸ್ಥಿತರಿದ್ದರು.
‘ಟಾಕ್ಸಿಕ್’ ಹಾಡುಗಳ ಹಕ್ಕು ₹42 ಕೋಟಿ: ಇದು ‘ಧುರಂಧರ್ 2’ಗಿಂತ ಹೆಚ್ಚು
ಬೆಂಗಳೂರು: ನಟ ಯಶ್ ಅಭಿನಯದ ‘ಟಾಕ್ಸಿಕ್’ ಚಿತ್ರದ ಹಾಡುಗಳ ಹಕ್ಕು ಭಾರೀ ಮೊತ್ತಕ್ಕೆ ಮಾರಾಟವಾಗಿದ್ದು, ಚಿತ್ರತಂಡದಲ್ಲಿ ಸಂಭ್ರಮ ಮನೆ ಮಾಡಿದೆ. ಚಿತ್ರದ ಸಂಗೀತ ಹಕ್ಕುಗಳನ್ನು ಜೀ ಮ್ಯೂಸಿಕ್ ಕಂಪನಿ ₹42 ಕೋಟಿಗೆ ಖರೀದಿಸಿದೆ ಎಂದು ತಂಡ ಮಾಹಿತಿ ನೀಡಿದೆ. ಹೋಲಿಕೆಗೆ, ‘ಧುರಂಧರ್ 2’ ಚಿತ್ರದ ಹಾಡುಗಳ ಹಕ್ಕು ₹27 ಕೋಟಿಗೆ ಮಾರಾಟವಾಗಿತ್ತು. ಈ ಮೂಲಕ ‘ಟಾಕ್ಸಿಕ್’ ಚಿತ್ರಕ್ಕೆ ₹15 ಕೋಟಿ ಹೆಚ್ಚುವರಿ ಆದಾಯ ಲಭಿಸಿದೆ. ‘ಧುರಂಧರ್ 2’ ಚಿತ್ರದ ಮೊದಲ ಭಾಗದ ಹಾಡುಗಳು ಸೂಪರ್ ಹಿಟ್ ಆದ ಬಳಿಕವೂ ಕಡಿಮೆ ಮೊತ್ತಕ್ಕೆ ಹಕ್ಕು ಮಾರಾಟವಾಗಿದ್ದ ಹಿನ್ನೆಲೆ, ‘ಟಾಕ್ಸಿಕ್’ಗೆ ದೊರೆತ ಮೊತ್ತ ಗಮನ ಸೆಳೆದಿದೆ. ಸಂಗೀತದ ವಿಚಾರದಲ್ಲೂ ಚಿತ್ರ ವಿಶೇಷತೆ ಹೊಂದಿದೆ. ಬಾಲಿವುಡ್‌ನ ಖ್ಯಾತ ಸಂಗೀತ ನಿರ್ದೇಶಕ ವಿಶಾಲ್ ಮಿಶ್ರಾ ನಾಲ್ಕು ಹಾಡುಗಳಿಗೆ ಸಂಗೀತ ಸಂಯೋಜನೆ ಮಾಡಿದ್ದಾರೆ. ಮತ್ತೊಂದು ಹಾಡಿಗೆ ತನಿಷ್ಕ್ ಬಾಗ್ಜಿ ಅವರು ಅರ್ಸ್ಲಾನ್ ನಿಜಾಮಿ ಹಾಗೂ…
‘ಬೇರೆಯವರನ್ನು ದೂರುವ ಬಿಜೆಪಿಯವರೇ ಲಂಚದ ಆರೋಪದಲ್ಲಿ ಸಿಲುಕಿರುವುದು ನಾಚಿಕೆಗೇಡು’; ಸಿದ್ದರಾಮಯ್ಯ
ಬೆಂಗಳೂರು: ಶಿರಹಟ್ಟಿ ಬಿಜೆಪಿ ಶಾಸಕ ಚಂದ್ರು ಲಮಾಣಿಯವರು ಲಂಚದ ಆರೋಪದ ಮೇಲೆ ಲೋಕಾಯುಕ್ತರ ಬಳಿ ಸಿಕ್ಕಿಬಿದ್ದಿದ್ದಾರೆ. ಗುತ್ತಿಗೆದಾರರಿಂದ ಲಂಚ ಪಡೆಯುತ್ತಿದ್ದರೆಂಬ ಆರೋಪದಲ್ಲಿ ಲೋಕಾಯುಕ್ತ ಪೊಲೀಸರು ಶಾಸಕರನ್ನು ವಶಕ್ಕೆ ಪಡೆದಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಸಿಎಂ ಸಿದ್ದರಾಮಯ್ಯ, ಬಿಜೆಪಿಯವರು ಬೇರೆ ಪಕ್ಷದವರ ಮೇಲೆ ಲಂಚದ ಆರೋಪವನ್ನು ಸುಲಭವಾಗಿ ಮಾಡುತ್ತಿದ್ದರು. ಬೇರೆಯವರನ್ನು ದೂರುವ ಬಿಜೆಪಿಯವರೇ ಲಂಚದ ಆರೋಪದಲ್ಲಿ ಸಿಲುಕಿರುವುದು ನಾಚಿಕೆಗೇಡು ಎಂದಿದ್ದಾರೆ. ಲೋಕಾಯುಕ್ತರ ತನಿಖೆ ನಡೆದು ಪೂರ್ಣ ಸತ್ಯಾಸತ್ಯತೆ ಹೊರಬರಲಿ. ನಾವ್ಯಾರು ಅದಕ್ಕೆ ಅಡ್ಡಿಮಾಡಲ್ಲ ಎಂದವರು ತಿಳಿಸಿದ್ದಾರೆ. ಶಿರಹಟ್ಟಿ ಬಿಜೆಪಿ ಶಾಸಕ ಚಂದ್ರು ಲಮಾಣಿಯವರು ಲಂಚದ ಆರೋಪದ ಮೇಲೆ ಲೋಕಾಯುಕ್ತರ ಬಳಿ ಸಿಕ್ಕಿಬಿದ್ದಿದ್ದಾರೆ. ಬಿಜೆಪಿಯವರು ಬೇರೆ ಪಕ್ಷದವರ ಮೇಲೆ ಲಂಚದ ಆರೋಪವನ್ನು ಸುಲಭವಾಗಿ ಮಾಡುತ್ತಿದ್ದರು. ಬೇರೆಯವರನ್ನು ದೂರುವ ಬಿಜೆಪಿಯವರೇ ಲಂಚದ ಆರೋಪದಲ್ಲಿ ಸಿಲುಕಿರುವುದು ನಾಚಿಕೆಗೇಡು. ಲೋಕಾಯುಕ್ತರ ತನಿಖೆ ನಡೆದು ಪೂರ್ಣ ಸತ್ಯಾಸತ್ಯತೆ ಹೊರಬರಲಿ.… pic.twitter.com/9igAeHXMx3 — Siddaramaiah (@siddaramaiah) February…
ಹುಬ್ಬಳ್ಳಿ: ರಣಜಿ ಫೈನಲ್ ದಿನ ‘ಪೆವಿಲಿಯನ್’ಗೆ ಸುನಿಲ್ ಜೋಶಿ ಹೆಸರು
ಬೆಂಗಳೂರು : ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ (ಕೆಎಸ್‌ಸಿಎ) ರಾಜ್ಯ ಮತ್ತು ರಾಷ್ಟ್ರೀಯ ತಂಡಗಳಿಗೆ ನೀಡಿದ ಸೇವೆಯನ್ನು ಗುರುತಿಸಿ, ಭಾರತದ ಮಾಜಿ ಎಡಗೈ ಸ್ಪಿನ್ನರ್ ಸುನಿಲ್ ಜೋಶಿ ಅವರ ಹೆಸರನ್ನು ಹುಬ್ಬಳ್ಳಿಯ ರಾಜನಗರ ಮೈದಾನದ ಪೆವಿಲಿಯನ್ ಬ್ಲಾಕ್‌ಗೆ ಇಡುವುದಾಗಿ ಪ್ರಕಟಿಸಿದೆ. ರಣಜಿ ಟ್ರೋಫಿ ಫೈನಲ್ ಪಂದ್ಯದಲ್ಲಿ ಕರ್ನಾಟಕ ಮತ್ತು ಜಮ್ಮು–ಕಾಶ್ಮೀರ ತಂಡಗಳು ಮುಖಾಮುಖಿಯಾಗಲಿರುವ ಮೊದಲ ದಿನ ಮಧ್ಯಾಹ್ನ 12 ಗಂಟೆಗೆ ನಾಮಕರಣ ಸಮಾರಂಭ ನಡೆಯಲಿದೆ. ಉತ್ತರ ಕರ್ನಾಟಕದ ಗದಗ ಜಿಲ್ಲೆಯವರಾದ ಜೋಶಿ ಅವರು ಹುಬ್ಬಳ್ಳಿಯಲ್ಲಿ ತಮ್ಮ ಕ್ರಿಕೆಟ್ ಪಯಣವನ್ನು ರೂಪಿಸಿಕೊಂಡಿದ್ದು, ರಾಜ್ಯದ ಪ್ರಮುಖ ಕ್ರಿಕೆಟ್ ರಾಯಭಾರಿಗಳಲ್ಲಿ ಒಬ್ಬರಾಗಿದ್ದಾರೆ ಎಂದು ಕೆಎಸ್‌ಸಿಎ ತಿಳಿಸಿದೆ. “ಪೆವಿಲಿಯನ್‌ಗೆ ಅವರ ಹೆಸರಿಡುವುದು ಅವರ ಸಾಧನೆಗಳಿಗೆ ಶಾಶ್ವತ ಗೌರವ ಸಲ್ಲಿಸುವುದರ ಜೊತೆಗೆ, ಹುಬ್ಬಳ್ಳಿಯಲ್ಲಿ ಕ್ರಿಕೆಟ್ ಆಡುವ ಯುವಕರಿಗೆ ಸ್ಫೂರ್ತಿಯಾಗಲಿದೆ,” ಎಂದು ಸಂಸ್ಥೆ ಹೇಳಿಕೆಯಲ್ಲಿ ತಿಳಿಸಿದೆ. ಕಾರ್ಯಕ್ರಮದಲ್ಲಿ ಕೆಎಸ್‌ಸಿಎ ಅಧ್ಯಕ್ಷ ವೆಂಕಟೇಶ್ ಪ್ರಸಾದ್, ಕೇಂದ್ರ ಸಚಿವ…
CT, MRI ಸ್ಕ್ಯಾನಿಂಗ್ ಪರ್ಯಾಯ ವ್ಯವಸ್ಥೆ: ಸಚಿವ ದಿನೇಶ್ ಗುಂಡೂರಾವ್
ಬೆಂಗಳೂರು: ಸರ್ಕಾರದ ಹಣದ ಸರಿಯಾದ ಸದ್ಬಳಕೆ ಹಾಗೂ ಸಾರ್ವಜನಿಕರಿಗೆ ಯಾವುದೇ ತೊಂದರೆಯಾಗದಂತೆ ಗುಣಮಟ್ಟದ ಆರೋಗ್ಯ ಸೇವೆ ಒದಗಿಸುವುದು ನಮ್ಮ ಬದ್ಧತೆ. CT ಮತ್ತು MRI ಸ್ಕ್ಯಾನಿಂಗ್ ಸೇವೆ ಪಡೆಯಲು ಜನರಿಗೆ ಯಾವುದೇ ಅಡಚಣೆ ಆಗಬಾರದು ಎಂಬ ಉದ್ದೇಶದಿಂದ ಪರ್ಯಾಯ ವ್ಯವಸ್ಥೆಗಳನ್ನು ರೂಪಿಸಲಾಗಿದೆ ಎಂದು ಅರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ. CT ಮತ್ತು MRI ಸೇವೆ ನೀಡುತ್ತಿದ್ದ Krsnaa Diagnostics Ltd ಸಂಸ್ಥೆ ಸರಿಯಾದ ದಾಖಲೆ ಹಾಗೂ ದೃಢೀಕರಣ ಪದ್ಧತಿಗಳನ್ನು ಪಾಲಿಸದ ಹಿನ್ನೆಲೆಯಲ್ಲಿ, ನಮ್ಮ ಸರ್ಕಾರ ಸ್ಕ್ಯಾನಿಂಗ್ ಪ್ರಕ್ರಿಯೆಗೆ ವ್ಯವಸ್ಥಿತ ನಿಯಮಾವಳಿ ಮತ್ತು ಪರಿಶೀಲನಾ ಕ್ರಮಗಳನ್ನು ಆಗಸ್ಟ್ 30, 2024ರಂದು ಜಾರಿಗೆ ತಂದಿತು. ಇದರ ಪರಿಣಾಮವಾಗಿ 2024ರ ಏಪ್ರಿಲ್‌ನಿಂದ 2025ರ ಡಿಸೆಂಬರ್ ತನಕ ಅಗತ್ಯವಿರುವಷ್ಟೇ ಸಿಟಿ ಸ್ಕ್ಯಾನಿಂಗ್ ನಡೆಯಿತು. ಏಪ್ರಿಲ್ 2024 ರಿಂದ ಜುಲೈ 2024ರ ಅವಧಿಯಲ್ಲಿ ಒಟ್ಟು 98,311 ಸ್ಕ್ಯಾನಿಂಗ್ ನಡೆದು, ಅದಕ್ಕೆ 15.24 ಕೋಟಿ…
ಜಮಖಂಡಿ ಸಮೀಪ ಭೀಕರ ಅಪಘಾತ: ಎರಡು ವರ್ಷದ ಮಗು ಸೇರಿ ನಾಲ್ವರು ಸಾವು
ಬಾಗಲಕೋಟೆ: ಜಮಖಂಡಿ ಸಮೀಪ ಸಂಭವಿಸಿದ ಭೀಕರ ಅಪಘಾತದಲ್ಲಿ ಎರಡು ವರ್ಷದ ಮಗು ಸೇರಿದಂತೆ ನಾಲ್ವರು ದುರ್ಮರಣ ಹೊಂದಿದ್ದಾರೆ. ಬಾಗಲಕೋಟೆ ತಾಲೂಕಿನ ಕಟ್ಟೆಕೆರೆ ಸಮೀಪ ಶನಿವಾರ ಮುಂಜಾನೆ ಈ ಘಟನೆ ನಡೆದಿದೆ. ಮೃತರನ್ನು ಮನೀಷ್ ಪಾಂಡೆ (23), ಹಲಕಿ ಪಾಂಡೆ (2), ಲಕ್ಷ್ಮಿ ಚಿರಮಡಿ (27) ಹಾಗೂ ರೇಖಾ ಭೂಕೆ ಎಂದು ಗುರುತಿಸಲಾಗಿದೆ. ಮೃತರು ಮಹಾರಾಷ್ಟ್ರ ರಾಜ್ಯದ ಯುವತ್ಮಾಳ್ ಜಿಲ್ಲೆಯ ಬೂಸಾ ತಾಲ್ಲೂಕಿನ ಗುಪವಾಡಿ ಗ್ರಾಮದ ನಿವಾಸಿಗಳಾಗಿದ್ದು, ಕಬ್ಬಿನ ಕಟಾವು ಕೆಲಸಕ್ಕಾಗಿ ಜಮಖಂಡಿ ಭಾಗಕ್ಕೆ ಆಗಮಿಸಿದ್ದರು ಎಂದು ತಿಳಿದುಬಂದಿದೆ. ಕಬ್ಬಿನ ಕಟಾವು ಕಾರ್ಯಕ್ಕೆ ತೆರಳುತ್ತಿದ್ದ ಟ್ರ್ಯಾಕ್ಟರ್ ಟ್ರ್ಯಾಲಿ ಏಕಾಏಕಿ ಕಟ್ ಆಗಿ ಪಲ್ಟಿಯಾದ ಪರಿಣಾಮ ದುರ್ಘಟನೆ ಸಂಭವಿಸಿದೆ. ಮಧ್ಯರಾತ್ರಿ ಸುಮಾರು 2 ಗಂಟೆಯ ವೇಳೆಗೆ ಅಪಘಾತ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಘಟನೆಯ ಮಾಹಿತಿ ತಿಳಿದ ಕೂಡಲೇ ಸ್ಥಳಕ್ಕೆ ಧಾವಿಸಿದ ಪೊಲೀಸರು ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಮುಂದಿನ…
AI ಬಳಕೆಯಲ್ಲಿ ಕರ್ನಾಟಕ ಮುಂಚೂಣಿ: ವರ್ಷಕ್ಕೆ 5 ಲಕ್ಷ ಪದವೀಧರರಿಗೆ ತರಬೇತಿ ಗುರಿ
ನವದೆಹಲಿ: ಕೃತಕ ಬುದ್ಧಿಮತ್ತೆ (AI) ಮತ್ತು ಆಳವಾದ ತಂತ್ರಜ್ಞಾನ ಕ್ಷೇತ್ರದಲ್ಲಿ ಕರ್ನಾಟಕವು ರಾಷ್ಟ್ರೀಯ ಮಟ್ಟದಲ್ಲಿ ಮುಂಚೂಣಿಯಲ್ಲಿದ್ದು, ಜವಾಬ್ದಾರಿಯುತ AI ಬಳಕೆಯಲ್ಲಿ ಮಾದರಿ ರಾಜ್ಯವಾಗುವ ಗುರಿ ಹೊಂದಿದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ. ದೆಹಲಿಯಲ್ಲಿ ನಡೆದ AI ಶೃಂಗಸಭೆಯಲ್ಲಿ ಮಾತನಾಡಿದ ಐಟಿ–ಬಿಟಿ ಹಾಗೂ ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ, ಜಾಗತಿಕ ತಾಂತ್ರಿಕ ಅಡಚಣೆಗಳನ್ನು ಅವಕಾಶವನ್ನಾಗಿ ಬಳಸಿಕೊಳ್ಳಲು ಭಾರತಕ್ಕೆ, ವಿಶೇಷವಾಗಿ ಕರ್ನಾಟಕಕ್ಕೆ ಅಪಾರ ಸಾಮರ್ಥ್ಯವಿದೆ ಎಂದು ಹೇಳಿದರು. “ರಾಜ್ಯದಲ್ಲಿ ಕೌಶಲ್ಯ ಇನ್ಕ್ಯುಬೇಷನ್ ಹಾಗೂ ಸ್ಟಾರ್ಟ್‌ಅಪ್‌ಗಳಿಗೆ ಶ್ರೇಷ್ಠತಾ ಕೇಂದ್ರಗಳನ್ನು ಸ್ಥಾಪಿಸುವ ಕುರಿತು ಜಾಗತಿಕ ನಾಯಕರೊಂದಿಗೆ ಚರ್ಚೆ ನಡೆಯುತ್ತಿದೆ. ಇ-ಆಡಳಿತ ಕ್ಷೇತ್ರದಲ್ಲಿ ಜವಾಬ್ದಾರಿಯುತ AI ಬಳಕೆಯಲ್ಲಿ ಮುಂಚೂಣಿಯಲ್ಲಿರಲು ಸರ್ಕಾರ ಬದ್ಧವಾಗಿದೆ,” ಎಂದು ಅವರು ಹೇಳಿದರು. ಕರ್ನಾಟಕದಲ್ಲಿ ದೇಶದ ಅತಿದೊಡ್ಡ AI ಪ್ರತಿಭಾ ಸಂಪನ್ಮೂಲಗಳಲ್ಲೊಂದು ಲಭ್ಯವಿದೆ ಎಂದು ಅವರು ಗಮನಿಸಿದರು. ನಾವೀನ್ಯತೆಯಲ್ಲಿ ನೈತಿಕತೆ ಅವಶ್ಯಕವೆಂದು ಒತ್ತಿಹೇಳಿದ ಖರ್ಗೆ, “ಆವಿಷ್ಕಾರ ಅಥವಾ ಬೌದ್ಧಿಕ ಸ್ವತ್ತಿನ…
