ನಟ ಚೇತನ್ ದೂರು: ನಿರ್ಮಾಪಕ ಸಾ.ರಾ. ಗೋವಿಂದು ವಿರುದ್ಧ ಬೆದರಿಕೆ ಆರೋಪ

ಬೆಂಗಳೂರು: ನಟ ಹಾಗೂ ಕಾರ್ಯಕರ್ತೆ ಚೇತನ್ ಅಹಿಂಸಾ ಅವರು ನಿರ್ಮಾಪಕ ಹಾಗೂ ರಾಜ್‌ಕುಮಾರ್ ಅಭಿಮಾನಿಗಳ ಸಂಘದ ಮಾಜಿ ಅಧ್ಯಕ್ಷ ಸಾ ರಾ ಗೋವಿಂದು ವಿರುದ್ಧ ಪೊಲೀಸ್ ದೂರು ದಾಖಲಿಸಿದ್ದಾರೆ. ಅವಾಚ್ಯ ಶಬ್ದಗಳಿಂದ ನಿಂದಿಸಿ ಬೆದರಿಕೆ ಹಾಕಿದರೆಂದು ಆರೋಪಿಸಿದ್ದಾರೆ. ಕನ್ನಡದ ದಂತಕಥೆ ಡಾ. ರಾಜ್‌ಕುಮಾರ್ ಅವರಿಗೆ ಕರ್ನಾಟಕ ಸರ್ಕಾರ ಮಂಜೂರು ಮಾಡಿದ 2.5 ಎಕರೆ ಭೂಮಿ ವಿಚಾರವನ್ನು ಪ್ರಶ್ನಿಸಿದ್ದ ಹಿನ್ನೆಲೆಯಲ್ಲಿ ಈ ವಿವಾದ ಉದ್ಭವಿಸಿದೆ ಎಂದು ತಿಳಿದುಬಂದಿದೆ. ಈ ಕುರಿತು ಅಸಮಾಧಾನ ವ್ಯಕ್ತಪಡಿಸಿದ ಗೋವಿಂದು, ಚೇತನ್ ನಿವಾಸದ ಬಳಿ ಬೆದರಿಕೆ ಹಾಕಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಚೇತನ್ ತಮ್ಮ ಹೇಳಿಕೆ ಕುರಿತು ಕ್ಷಮೆಯಾಚಿಸಿದ್ದರೂ, ಘಟನೆ ಬಗ್ಗೆ ಕಾನೂನು ಕ್ರಮಕ್ಕೆ ಮುಂದಾಗಿದ್ದಾರೆ. ಅವರು ಮತ್ತು ವಿವಿಧ ಜನಪರ ಸಂಘಟನೆಗಳ ಸದಸ್ಯರು ಶೇಷಾದ್ರಿಪುರಂ ಪೊಲೀಸ್ ಠಾಣೆ ಯಲ್ಲಿ ದೂರು ಸಲ್ಲಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಚೇತನ್, “ಏಪ್ರಿಲ್ 25ರಂದು ನಾವು ಅವರ ಮನೆಗೆ…

‘ಲವ್ ಮಾಕ್ಟೇಲ್ 3’ OTTಗೆ: ಮೇ 8ರಿಂದ ಸ್ಟ್ರೀಮಿಂಗ್

ಸ್ಯಾಂಡಲ್‌ವುಡ್ ನಟ-ನಿರ್ದೇಶಕ ಡಾರ್ಲಿಂಗ್ ಕೃಷ್ಣ ಅವರ ‘ಲವ್ ಮಾಕ್ಟೇಲ್’ ಸರಣಿಯ ಮೂರನೇ ಭಾಗವಾದ Love Mocktail 3 ಈಗ OTTಗೆ ಬರುತ್ತಿದೆ. ‘ಕ್ರಿಸ್ಮಿ ಫಿಲ್ಮ್ಸ್’ ಬ್ಯಾನರ್ ಅಡಿಯಲ್ಲಿ ಡಾರ್ಲಿಂಗ್ ಕೃಷ್ಣ ಹಾಗೂ ಮಿಲನಾ ನಾಗರಾಜ್ ನಿರ್ಮಿಸಿರುವ ಈ ಸಿನಿಮಾ ಮಾರ್ಚ್ 19ರಂದು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಿ ಹಿಟ್ ಆಗಿದೆ. ಈ ಸಿನಿಮಾ, ಇದೀಗ ZEE5 ಮೂಲಕ ಮೇ 8ರಿಂದ ವೀಕ್ಷಣೆಗೆ ಲಭ್ಯವಾಗಲಿದೆ. ತಂದೆ-ಮಗಳ ಭಾವುಕ ಕಥೆ ‘ಲವ್ ಮಾಕ್ಟೇಲ್ 3’ ಸಿನಿಮಾದ ಮುಖ್ಯ ಆಕರ್ಷಣೆ ತಂದೆ-ಮಗಳ ಭಾವುಕ ಸಂಬಂಧ. ಆದಿತ್ಯ (ಡಾರ್ಲಿಂಗ್ ಕೃಷ್ಣ) ಮತ್ತು ನಿಧಿ (ಸಂವೃತಾ) ನಡುವಿನ ಬಾಂಧವ್ಯವನ್ನು ಮನಸೂರೆಗೊಳ್ಳುವ ರೀತಿಯಲ್ಲಿ ಚಿತ್ರಿಸಲಾಗಿದೆ. ದತ್ತು ಪಡೆದ ಮಗಳ ಜೊತೆಗಿನ ದಿನಚರಿ, ತುಂಟಾಟ, ಪ್ರೀತಿ ಹಾಗೂ ಕುಟುಂಬದ ಸನ್ನಿವೇಶಗಳು ಪ್ರೇಕ್ಷಕರ ಮನಸೆಳೆಯುತ್ತವೆ. ಚಿತ್ರದ ದ್ವಿತೀಯಾರ್ಧದಲ್ಲಿ ಭಾವುಕ ತಿರುವು ಮೂಡಿ ಬರುತ್ತದೆ. ಆದಿತ್ಯ ತನ್ನ ಮಗಳನ್ನು ಕಳೆದುಕೊಳ್ಳುತ್ತಾನೆಯೇ ಎಂಬ ಪ್ರಶ್ನೆ…

ಡಾಲಿ ಧನಂಜಯ್ ದಂಪತಿಗೆ ಗಂಡು ಮಗು; ಮನೆ ತುಂಬ ಸಂತಸ

ಬೆಂಗಳೂರು: ಸ್ಯಾಂಡಲ್‌ವುಡ್‌ನ ಜನಪ್ರಿಯ ನಟ ಡಾಲಿ ಧನಂಜಯ್ (Dolly Dhananjay) ಹಾಗೂ ವೈದ್ಯೆ ಧನ್ಯತಾ (Dhanyata) ದಂಪತಿಗೆ ಮೇ 2ರಂದು ಗಂಡು ಮಗು ಜನಿಸಿದ್ದು, ಕುಟುಂಬದಲ್ಲಿ ಸಂಭ್ರಮ ಮನೆಮಾಡಿದೆ. 2025ರ ಫೆಬ್ರವರಿ 16ರಂದು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದ ಈ ಜೋಡಿ, ಮದುವೆಯಾದ ಒಂದು ವರ್ಷದ ಸಂಭ್ರಮದ ಬೆನ್ನಲ್ಲೇ ಇದೀಗ ಮಗುವನ್ನು ಸ್ವಾಗತಿಸಿದೆ. ಗಂಡು ಮಗು ಜನಿಸಿದ ಸಂತಸದ ವಿಚಾರವನ್ನು ಡಾಲಿ ಧನಂಜಯ್ (Dolly Dhananjay) ತಮ್ಮ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಮಗುವಿನ ಪುಟ್ಟ ಕೈಗಳ ಫೋಟೋವನ್ನು ಪೋಸ್ಟ್ ಮಾಡುತ್ತಾ ತಾವು ತಂದೆಯಾದ ಸಂತಸವನ್ನು ವ್ಯಕ್ತಪಡಿಸಿದ್ದಾರೆ. ಈ ಸುದ್ದಿ ತಿಳಿದ ತಕ್ಷಣ ಅಭಿಮಾನಿಗಳು ಹಾಗೂ ಚಿತ್ರರಂಗದ ಗಣ್ಯರು ದಂಪತಿಗೆ ಶುಭಾಶಯಗಳ ಸುರಿಮಳೆಯನ್ನೇ ಹರಿಸುತ್ತಿದ್ದಾರೆ.

‘ಉತ್ತುಂಗದ ಅಭಿವೃದ್ಧಿಯಲ್ಲಿದ್ದವು ಎಂಬ ಭ್ರಮೆಯಿಂದ ಹೊರಬನ್ನಿ’; ಅಶೋಕ್’ಗೆ ರಾಮಲಿಂಗಾ ರೆಡ್ಡಿ ತರಾಟೆ

ಬೆಂಗಳೂರು: ‘ತಮ್ಮ ಅವಧಿಯಲ್ಲಿ ಸಾರಿಗೆ ಸಂಸ್ಥೆಗಳು ಉತ್ತುಂಗದ ಅಭಿವೃದ್ಧಿಯಲ್ಲಿದ್ದವು ಎಂಬ ಭ್ರಮೆಯಿಂದ ಹೊರಬನ್ನಿ’ ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಅವರು ಪ್ರತಿಪಕ್ಷ ನಾಯಕ ಆರ್. ಅಶೋಕ್ ಅವರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. . ಅಶೋಕ್ ಅವರು ಸಾಮಾಜಿಕ ಮಾಧ್ಯಮ X ನಲ್ಲಿ ಹಾಕಿರುವ ಪೋಸ್ಟಿಗೆ ತಮ್ಮದೇ ದಾಟಿಯಲ್ಲಿ ಪ್ರತಿಕ್ರಿಸಿರುವ ರಾಮಲಿಂಗ ರೆಡ್ಡಿ, ‘ತಾವು ಸಾರಿಗೆ ಮಂತ್ರಿಗಳಾಗಿದ್ದಾಗಲೇ ಮೊದಲ ಬಾರಿಗೆ ವೇತನ ಪರಿಷ್ಕರಣೆಗಾಗಿ ಮುಷ್ಕರ ಹೂಡುವ ಪದ್ಧತಿಗೆ ಅಡಿಪಾಯ ಹಾಕಿದ್ದು ತಾವು ಎಂಬುದು ತಿಳಿದಿದೆಯೇ? (ಮುಷ್ಕರದ ದಿನಾಂಕ: 13-09-2012 ಮತ್ತು 14-09-2012 )’ ಎಂದು ಪ್ರಶ್ನಿಸಿದ್ದಾರೆ. ‘ತಮ್ಮದೇ ಬಿ.ಜೆ.ಪಿ ಪಕ್ಷದ ಆಡಳಿತ ಅವಧಿಯಲ್ಲಿ ಸಾರಿಗೆ ಸಂಸ್ಥೆಗಳ‌ ಇತಿಹಾಸದಲ್ಲಿಯೇ ಮೊದಲ ಬಾರಿಗೆ 15 ದಿವಸಗಳ ಕಾಲ‌ ಮುಷ್ಕರ ಮಾಡಿಸಿರುವ ಕೀರ್ತಿ ನಿಮಗೆ ಸಲ್ಲಬೇಕು. ನಿಮ್ಮ ಅವಧಿಯಲ್ಲಿ ಎರಡೆರಡು ಬಾರಿ‌ ಮುಷ್ಕರ ನಡೆದದ್ದು ಮರೆತು‌ಬಿಟ್ಟೀರಾ? (ಮುಷ್ಕರದ ದಿನಾಂಕ: 11-12-2020 ರಿಂದ 14-12-2020…

ಶಿಥಿಲಾವಸ್ಥೆಯಲ್ಲಿರುವ ಆಸ್ಪತ್ರೆ ಕಟ್ಟಡಗಳು, ಕಾಂಪೌಂಡ್‌ಗಳ ಪರಿಶೀಲನೆಗೆ ಶರಣಪ್ರಕಾಶ ಪಾಟೀಲ್ ಆದೇಶ

ಬೆಂಗಳೂರು: ನಮ್ಮ ವೈದ್ಯಕೀಯ ಶಿಕ್ಷಣ ಇಲಾಖೆಯಡಿಯಲ್ಲಿ ಬರುವ ಎಲ್ಲ ಆಸ್ಪತ್ರೆಯ ಕಟ್ಟಡಗಳನ್ನು ಹಾಗೂ ಕಾಂಪೌಂಡ್‌ಗಳನ್ನು ಪರಿಶೀಲನೆ ನಡೆಸಿ ಅಧ್ಯಯನ ವರದಿ ನೀಡಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ವೈದ್ಯಕೀಯ ಶಿಕ್ಷಣ,ಕೌಶಲ್ಯಾಭಿವೃದ್ಧಿ, ಜೀವನೋಪಾಯ ಮತ್ತು ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಶರಣಪ್ರಕಾಶ ಆರ್. ಪಾಟೀಲ್ ತಿಳಿಸಿದ್ದಾರೆ. ಮಳೆಯಿಂದ ಬೌರಿಂಗ್‌ ಆಸ್ಪತ್ರೆ ಕಾಂಪೌಂಡ್‌ ಕುಸಿದು ಏಳು ಮಂದಿ ಮೃತಪಟ್ಟ ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಅಧಿಕಾರಿಗಳು, ವೈದ್ಯಾಧಿಕಾರಿಗಳಿಂದ ಮಾಹಿತಿ ಪಡೆದ ನಂತರ ಸಚಿವರು ಈ ಮಾಹಿತಿ ನೀಡಿದರು. ಬೌರಿಂಗ್‌ ಆಸ್ಪತ್ರೆಯ ದುರಂತದ ಕುರಿತು ಲೋಕೋಪಯೋಗಿ ಇಲಾಖೆಯ ಮುಖ್ಯ ಅಭಿಯಂತರರ ನೇತೃತ್ವದಲ್ಲಿ ತನಿಖೆ ನಡೆಸಲಾಗುತ್ತಿದೆ. ಈ ವರದಿ ಬಂದ ನಂತರ ಮುಂದಿನ ಕ್ರಮದ ಬಗ್ಗೆ ನಿರ್ಧಾರ ಕೈಗೊಳ್ಳಲಾಗುವುದು ಎಂದು ಡಾ. ಪಾಟೀಲ್‌ ತಿಳಿಸಿದರು. ಬೌರಿಂಗ್‌ ಆಸ್ಪತ್ರೆ, ವಿಕ್ಟೋರಿಯಾ ಆಸ್ಪತ್ರೆ ಸೇರಿದಂತೆ ರಾಜ್ಯದಲ್ಲಿರುವ ಎಲ್ಲ ಆಸ್ಪತ್ರೆ ಕಟ್ಟಡಗಳನ್ನು ಹಾಗೂ…

ಪೊಳಲಿ ಸಹಕಾರ ಸಂಘದ ಸಾಲ ವಿವಾದ ಬಗ್ಗೆ ಉನ್ನತ ಮಟ್ಟದ ತನಿಖೆ

ಬೆಂಗಳೂರು: ದಕ್ಷಿಣ ಕನ್ನಡ ಜಿಲ್ಲೆ ಪೊಳಲಿ ಸೇವಾ ಸಹಕಾರ ಸಂಘದಲ್ಲಿನ ಯಾರದ್ದೋ ಸಾಲಕ್ಕೆ ಇನ್ಯಾರದ್ದೂ ಆಸ್ತಿ ಹರಾಜು ಮಾಡಲು ಸಹಕಾರ ಇಲಾಖೆ ಆದೇಶಿಸಿರುವ ಪ್ರಕರಣ ಇದೀಗ ಭಾರೀ ವಿವಾದವನ್ನು ಹುಟ್ಟುಹಾಕಿದೆ. ಈ ಪ್ರಕರಣ ಬಗ್ಗೆ ಉನ್ನತ ಮಟ್ಟದ ತನಿಖೆಗೆ ಸರ್ಕಾರ ಪ್ರಕ್ರಿಯೆ ಆರಂಭಿಸಿದೆ. ಪೊಳಲಿ ಸಹಕಾರ ಸಂಘದಿಂದ ಸುರೇಂದ್ರ ಎಂಬಾತ ಸಾಲಪಡೆದು ಮರುಪಾವತಿಸಿಲ್ಲ. ಈ ಹಿನ್ನೆಲೆಯಲ್ಲಿ ಸಹಕಾರ ಸಂಘಗಳ ಸಹಾಯಕ ನಿಬಂಧಕರು ಸುರೇಂದ್ರನ ತಂದೆಯ ಹೆಸರಿನಲ್ಲಿದ್ದ, ಈಗ ಮಕ್ಕಳ ಮಾಲೀಕತ್ವದಲ್ಲಿರುವ ಆಸ್ತಿಯನ್ನು ಹರಾಜು ಮಾಡಲು ಸಹಕಾರ ಇಲಾಖೆ ಆದೇಶಿಸಿದೆ. ಈ ಪ್ರಕ್ರಿಯೆ ಕಾನೂನಿಗೆ ವಿರುದ್ಧವಾಗಿದೆ ಎಂದು ಸಿಟಿಜನ್ ರೈಟ್ಸ್ ಫೌಂಡೇಷನ್ (CRF) ರಾಜ್ಯ ಸರ್ಕಾರಕ್ಕೆ ವರದಿ ಮಾಡಿದೆ. ಈ ಬಗ್ಗೆ ತನ್ನದೇ ಆದ ರೀತಿಯಲ್ಲಿ ತನಿಖೆ ಕೈಗೊಂಡು ಸರ್ಕಾರಕ್ಕೆ ನೀಡಿರುವ CRF ಈ ಪ್ರಕರಣ ಬಗ್ಗೆ ಉನ್ನತ ಮಟ್ಟದ ತನಿಖೆ ನಡೆಸಬೇಕು ಎಂದು ಮುಖ್ಯಮಂತ್ರಿ ಹಾಗೂ ಸರ್ಕಾರದ…

ICSE, ISC ಫಲಿತಾಂಶ ಪ್ರಕಟ: ವಿದ್ಯಾರ್ಥಿಗಳಿಗೆ ಆನ್‌ಲೈನ್, SMS ಮೂಲಕ ಸಿಗಲಿದೆ ರಿಸಲ್ಟ್

ನವದೆಹಲಿ: Council for the Indian School Certificate Examinations (CISCE) ಇಂದು 10ನೇ ತರಗತಿ (ICSE) ಹಾಗೂ 12ನೇ ತರಗತಿ (ISC) ಪರೀಕ್ಷೆಗಳ ಫಲಿತಾಂಶವನ್ನು ಅಧಿಕೃತವಾಗಿ ಪ್ರಕಟಿಸಿದೆ. ಫಲಿತಾಂಶವನ್ನು CISCE ಅಧಿಕೃತ ವೆಬ್‌ಸೈಟ್‌ಗಳಲ್ಲಿ — cisce.org ಮತ್ತು results.cisce.org — ನಲ್ಲಿ ಪರಿಶೀಲಿಸಬಹುದು. ವಿದ್ಯಾರ್ಥಿಗಳು ತಮ್ಮ ಯುನಿಕ್ ಐಡಿ (Unique ID) ಮತ್ತು ಇಂಡೆಕ್ಸ್ ಸಂಖ್ಯೆ (Index Number) ಬಳಸಿ ಲಾಗಿನ್ ಆಗಿ ಅಂಕಗಳನ್ನು ನೋಡಬಹುದು. SMS ಮೂಲಕವೂ ಫಲಿತಾಂಶ ಪಡೆಯುವ ವ್ಯವಸ್ಥೆ ಇದೆ: ICSE ವಿದ್ಯಾರ್ಥಿಗಳು: ICSE Unique ID ಎಂದು ಟೈಪ್ ಮಾಡಿ 09248082883 ಗೆ ಕಳುಹಿಸಬೇಕು ISC ವಿದ್ಯಾರ್ಥಿಗಳು: ISC Unique ID ಎಂದು ಟೈಪ್ ಮಾಡಿ 09248082883 ಗೆ ಕಳುಹಿಸಬೇಕು ಫಲಿತಾಂಶದಿಂದ ತೃಪ್ತರಾಗದ ವಿದ್ಯಾರ್ಥಿಗಳಿಗೆ ಮರುಪರಿಶೀಲನೆಗೆ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ. ಮೇ 4ರವರೆಗೆ ಅಧಿಕೃತ ವೆಬ್‌ಸೈಟ್ ಮೂಲಕ ಅರ್ಜಿ…

ಸಿಎಂ ಬದಲಾವಣೆ ಇಲ್ಲ: ಡಿಕೆಶಿ ಬೆಂಬಲಿಗರಿಗೆ ಹೈಕಮಾಂಡ್ ಸಂದೇಶ?

ಬೆಂಗಳೂರು: ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಕುರಿತ ವದಂತಿಗಳಿಗೆ ಕೊನೆಗೂ ಹೈಕಮಾಂಡ್ ತೆರೆ ಎಳೆದಿದೆ. ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಪ್ರಶ್ನೆಯೇ ಇಲ್ಲ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸ್ಪಷ್ಟಪಡಿಸಿದ್ದಾರೆ. ಕಲಬುರಗಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಕುರಿತು ಗೊಂದಲಗಳಿರುವುದು ನಿಜ, ಆದರೆ ಅವು ಶೀಘ್ರದಲ್ಲೇ ಬಗೆಹರಿಯಲಿವೆ ಎಂದರು. “ನಾನು ಸಿಎಂ ಆಗಬೇಕು ಎಂದು ಕೆಲವರು ಹೇಳುತ್ತಾರೆ, ಮಾಧ್ಯಮವೂ ಈ ವಿಷಯವನ್ನು ಹೆಚ್ಚಾಗಿ ಚರ್ಚಿಸುತ್ತದೆ. ಆದರೆ ಕಾಂಗ್ರೆಸ್ ಪಕ್ಷದಲ್ಲಿ ಸಿದ್ಧಾಂತ ಮತ್ತು ದಶಕಗಳ ಸೇವೆ ಮುಖ್ಯ,” ಎಂದು ಹೇಳಿದರು. ಪ್ರಸ್ತುತ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಉತ್ತಮವಾಗಿ ಕೆಲಸ ಮಾಡುತ್ತಿದ್ದಾರೆ. ಹೀಗಾಗಿ ಈಗ ಸಿಎಂ ಬದಲಾವಣೆ ಕುರಿತು ಯಾವುದೇ ಚರ್ಚೆ ಇಲ್ಲ ಎಂದು ಖರ್ಗೆ ತಿಳಿಸಿದರು. ಒಂದು ವೇಳೆ ಭವಿಷ್ಯದಲ್ಲಿ ಅಂತಹ ಪರಿಸ್ಥಿತಿ ಎದುರಾದರೆ, ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ಅವರೊಂದಿಗೆ ಚರ್ಚಿಸಿ ತೀರ್ಮಾನ…

ಬೆಂಗಳೂರಿನಲ್ಲಿ ಮಳೆ ತಂದ ಅವಾಂತರ; ಸರಣಿ ಅವಘಡಗಳಲ್ಲಿ ಮೃತರ ಸಂಖ್ಯೆ 10ಕ್ಕೆ ಏರಿಕೆ

ಬೆಂಗಳೂರು: ಬುಧವಾರ ಸುರಿದ ಭಾರೀ ಮಳೆಯ ಪರಿಣಾಮವಾಗಿ ನಗರದಲ್ಲಿ ಸಂಭವಿಸಿದ ಸರಣಿ ಅವಘಡಗಳಲ್ಲಿ ಮೃತಪಟ್ಟವರ ಸಂಖ್ಯೆ 10ಕ್ಕೆ ಏರಿಕೆಯಾಗಿದೆ. ಚಾಮರಾಜಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮನೆಯ ಮೇಲ್ಚಾವಣಿ ಹಾಗೂ ಸಿಮೆಂಟ್ ಇಟ್ಟಿಗೆ ಬಿದ್ದ ಪರಿಣಾಮ ಮಂಜುನಾಥ್ ಮೃತಪಟ್ಟಿದ್ದಾರೆ. ಗಾಳಿ-ಮಳೆಯಿಂದ ಮನೆಯ ಶೀಟ್ ಕೆಳಗೆ ಬಿದ್ದಿದ್ದು, ಅದರ ಮೇಲಿಟ್ಟಿದ್ದ ಕಲ್ಲು ಮಲಗಿದ್ದ ಮಂಜುನಾಥ್ ಮೇಲೆ ಬಿದ್ದ ಪರಿಣಾಮ ಈ ದುರ್ಘಟನೆ ನಡೆದಿದೆ. ಮೃತದೇಹವನ್ನು ವಿಕ್ಟೋರಿಯಾ ಆಸ್ಪತ್ರೆ ಗೆ ಸ್ಥಳಾಂತರಿಸಲಾಗಿದೆ. ಇದರೊಂದಿಗೆ, ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಕುಸಿತ ಪ್ರಕರಣದಲ್ಲಿ ಮಗು ಸೇರಿ 7 ಮಂದಿ ಮೃತಪಟ್ಟಿದ್ದರು. ಮೃತಪಟ್ಟವರನ್ನು ಮೊಹಮ್ಮದ್ ಅಬ್ದುಲ್ (52), ಫಯಾಜ್ ಅಹ್ಮದ್ (39), ಮುಸಾವಿರ್ ಬೇಗಂ (6), ಸ್ಮಿತಾ (47), ಲತಾ (57), ನಸೀಮುಲ್ಲಾ (19) ಹಾಗೂ ಸಲಾವುದ್ದೀನ್ ಅನ್ಸಾರಿ (36) ಎಂದು ಗುರುತಿಸಲಾಗಿದೆ. ಇನ್ನೊಂದೆಡೆ, ಯಾರಬ್ ನಗರದಲ್ಲಿ ಮಳೆಯ ವೇಳೆ ವಿದ್ಯುತ್ ಶಾಕ್ ತಗುಲಿ ವಿದ್ಯಾರ್ಥಿ…

ಬೌರಿಂಗ್ ಆಸ್ಪತ್ರೆ ಆವರಣ ಕುಸಿತ: ಲೋಕಾಯುಕ್ತರಿಂದ ಸ್ವಯಂಪ್ರೇರಿತ ದೂರು, ಅಧಿಕಾರಿಗಳಿಗೆ ಸಂಕಷ್ಟ

ಬೆಂಗಳೂರು: ಏಪ್ರಿಲ್ 29ರಂದು ಸುರಿದ ಭೀಕರ ಆಲಿಕಲ್ಲು ಮಳೆ ಹಾಗೂ ಗಾಳಿ-ಮಳೆಯಿಂದ ರಕ್ಷಣೆ ಪಡೆಯಲು ಬೌರಿಂಗ್ ಆಸ್ಪತ್ರೆ ಹಳೆಯ ಕಾಂಪೌಂಡ್ ಗೋಡೆಯ ಬಳಿ ನಿಂತಿದ್ದ ಪಾದಚಾರಿಗಳು ಮತ್ತು ವ್ಯಾಪಾರಿಗಳ ಮೇಲೆ ಗೋಡೆ ಏಕಾಏಕಿ ಕುಸಿದುಬಿದ್ದ ದುರಂತದಲ್ಲಿ ಇಬ್ಬರು ಮಹಿಳೆಯರು ಮತ್ತು ಒಂದು ಪುಟ್ಟ ಮಗು ಸೇರಿ ಒಟ್ಟು ಏಳು ಮಂದಿ ಮೃತಪಟ್ಟಿದ್ದರು. ಮೃತರ ಕುಟುಂಬಗಳಿಗೆ ರಾಜ್ಯ ಸರ್ಕಾರ ₹5 ಲಕ್ಷ ಹಾಗೂ ಪ್ರಧಾನ ಮಂತ್ರಿ ಕಾರ್ಯಾಲಯದಿಂದ ₹2 ಲಕ್ಷ ಪರಿಹಾರ ಘೋಷಿಸಲಾಗಿದೆ. ಈ ದುರಂತವನ್ನು ಗಂಭೀರವಾಗಿ ಪರಿಗಣಿಸಿದ ಕರ್ನಾಟಕ ಲೋಕಾಯುಕ್ತರು, ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್. ಪಾಟೀಲ್ ಅವರು ಆಡಳಿತ ವ್ಯವಸ್ಥೆಯ ನಿರ್ಲಕ್ಷ್ಯದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ಈ ಪ್ರಕರಣದಲ್ಲಿ ಸ್ವಯಂಪ್ರೇರಿತವಾಗಿ ಪ್ರಕರಣ ದಾಖಲಿಸಿಕೊಳ್ಳಲು ನಿರ್ಧರಿಸಿದ್ದಾರೆ. ಸ್ಥಳ ಪರಿಶೀಲನೆಯ ಬಳಿಕ ಮಾತನಾಡಿದ ಅವರು, “ಕಾಂಪೌಂಡ್ ಗೋಡೆಯ ಅಡಿಪಾಯವೇ ದುರ್ಬಲವಾಗಿತ್ತು.…