ಸ್ನೇಹಿತರ ಕಣ್ಣೆದುರೇ ಮೂವರು ಯುವಕರು ನೀರುಪಾಲು

ಹಾಸನ: ಪ್ರವಾಸಕ್ಕೆ ತೆರಳಿದ್ದ ಬೆಂಗಳೂರು ಮೂಲದ ಯುವಕರ ತಂಡಕ್ಕೆ ಭೀಕರ ದುರಂತ ಎದುರಾಗಿದ್ದು, ಸ್ನೇಹಿತರ ಕಣ್ಣೆದುರೇ ಮೂವರು ಯುವಕರು ಹೇಮಾವತಿ ಜಲಾಶಯದ ಹಿನ್ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. ಬೆಂಗಳೂರು ಮೂಲದ ಯುವಕರ ತಂಡ ಧರ್ಮಸ್ಥಳ ಪ್ರವಾಸ ಮುಗಿಸಿ ವಾಪಸ್ ಆಗುತ್ತಿದ್ದ ವೇಳೆ ಹಾಸನ ಜಿಲ್ಲೆಯ ಗೊರೂರು ಸಮೀಪದ ಹೇಮಾವತಿ ಜಲಾಶಯದ ಹಿನ್ನೀರಿಗೆ ಈಜಾಡಲು ಇಳಿದಿತ್ತು. ಈ ವೇಳೆ ನೀರಿನ ಆಳ ತಿಳಿಯದೆ ಮೂವರು ಯುವಕರು ಮುಳುಗಿ ನೀರುಪಾಲಾಗಿದ್ದಾರೆ. ಈಜು ಬಾರದಿದ್ದರೂ ಜಲಾಶಯದ ನೀರಿಗೆ ಇಳಿದಿದ್ದೇ ದುರಂತಕ್ಕೆ ಕಾರಣ ಎನ್ನಲಾಗಿದೆ. ಸ್ನೇಹಿತರ ಕಣ್ಣೆದುರೇ ಯುವಕರು ಮುಳುಗುತ್ತಿದ್ದರೂ ರಕ್ಷಿಸಲು ಸಾಧ್ಯವಾಗದೆ ಉಳಿದವರು ಅಸಹಾಯಕವಾಗಿ ನೋಡಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ಮೃತರನ್ನು 20 ವರ್ಷದ ಮಣಿಕಂಠ, ಚರಣ್ ಹಾಗೂ 23 ವರ್ಷದ ಮಿಲನ್ ಎಂದು ಗುರುತಿಸಲಾಗಿದೆ. ಘಟನೆ ಸಂಬಂಧ ಗೊರೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮಾಹಿತಿ ತಿಳಿಯುತ್ತಿದ್ದಂತೆ ಗೊರೂರು ಪೊಲೀಸರು ಹಾಗೂ ಅಗ್ನಿಶಾಮಕ…

ಬೆಂಗಳೂರು: ಗ್ಯಾರಂಟಿ ಯೋಜನೆಗಳ ಬಗ್ಗೆ ಡಿ.ಕೆ. ಶಿವಕುಮಾರ್ ಸ್ಪಷ್ಟನೆ – ವಿಪಕ್ಷ ಆರೋಪಕ್ಕೆ ತಿರುಗೇಟು

ರಾಜ್ಯ ರಾಜಕಾರಣದಲ್ಲಿ ಗ್ಯಾರಂಟಿ ಯೋಜನೆಗಳ ಕುರಿತು ನಡೆಯುತ್ತಿರುವ ಪರ-ವಿರೋಧ ಚರ್ಚೆಗಳ ನಡುವೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮಹತ್ವದ ಸ್ಪಷ್ಟನೆ ನೀಡಿದ್ದಾರೆ. ಗೃಹಲಕ್ಷ್ಮೀ ಹಾಗೂ ಗೃಹಜ್ಯೋತಿ ಸೇರಿದಂತೆ ಯಾವುದೇ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವ ಪ್ರಶ್ನೆಯೇ ಇಲ್ಲ ಎಂದು ಅವರು ಖಡಕ್ ಆಗಿ ಹೇಳಿದ್ದಾರೆ. ರಾಜ್ಯ ಕಾಂಗ್ರೆಸ್ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳಲ್ಲಿ ಗೃಹಲಕ್ಷ್ಮೀ ಯೋಜನೆ ಆರ್ಥಿಕವಾಗಿ ಹೆಚ್ಚು ಹೊರೆಯಾಗುತ್ತಿದೆ ಎಂಬ ಚರ್ಚೆಗಳು ನಡೆಯುತ್ತಿವೆ. ಕಳೆದ ಮೂರು ವರ್ಷಗಳಲ್ಲಿ ಈ ಯೋಜನೆಗೆ ಸುಮಾರು 120 ಕೋಟಿಗೂ ಅಧಿಕ ಹಣ ಖರ್ಚಾಗಿದೆ ಎಂಬ ಮಾಹಿತಿ ಹೊರಬಿದ್ದಿದೆ. ಈ ನಡುವೆ ಅನರ್ಹರು ಕೂಡ ಯೋಜನೆಯ ಲಾಭ ಪಡೆಯುತ್ತಿದ್ದಾರೆ ಎಂಬ ಆರೋಪದ ಹಿನ್ನೆಲೆಯಲ್ಲಿ ಸರ್ಕಾರ ಪರಿಶೀಲನೆ ಹಾಗೂ ಪರಿಷ್ಕರಣೆ ಪ್ರಕ್ರಿಯೆಗೆ ಮುಂದಾಗಿದೆ. ಇದೇ ವಿಚಾರವನ್ನು ಅಸ್ತ್ರವಾಗಿಸಿಕೊಂಡಿರುವ ವಿಪಕ್ಷ ನಾಯಕರು, ಗ್ಯಾರಂಟಿ ಯೋಜನೆಗಳನ್ನು ಪರಿಷ್ಕರಣೆ ಹೆಸರಿನಲ್ಲಿ ಸಂಪೂರ್ಣವಾಗಿ ರದ್ದು ಮಾಡುವ ಹುನ್ನಾರ ನಡೆದಿದೆ ಎಂದು ಆರೋಪಿಸಿದ್ದಾರೆ.…

ಸಚಿವ ಸಂಪುಟ ವಿಸ್ತರಣೆ ವಿಳಂಬ: ಬಿಜೆಪಿ ಗೇಲಿ, BSY ಸರ್ಕಾರವನ್ನು ನೆನಪಿಸಿದ ಕಾಂಗ್ರೆಸ್

ಬೆಂಗಳೂರು: ರಾಜ್ಯ ಸಚಿವ ಸಂಪುಟದ ಖಾತೆ ಹಂಚಿಕೆ ಮತ್ತು ಸಚಿವರ ನೇಮಕಾತಿ ವಿಚಾರವಾಗಿ ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ಸಾಮಾಜಿಕ ಮಾಧ್ಯಮ X ನಲ್ಲಿ ವಾಕ್ಸಮರ ನಡೆದಿದೆ. ರಾಜ್ಯದ 20 ಇಲಾಖೆಗಳಿಗೆ ಇನ್ನೂ ಸಚಿವರನ್ನು ನೇಮಕ ಮಾಡಿಲ್ಲ ಎಂದು ಆರೋಪಿಸಿರುವ ಬಿಜೆಪಿ, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದ ಸರ್ಕಾರದಲ್ಲಿ ಆಡಳಿತ ಯಂತ್ರ ಸ್ಥಗಿತಗೊಂಡಿದ್ದು, ಜನರ ಕೆಲಸಗಳು ವಿಳಂಬವಾಗುತ್ತಿವೆ ಎಂದು ಟೀಕಿಸಿದೆ. “20 ಇಲಾಖೆಗಳಿಗೆ ಇನ್ನೂ ಸಚಿವರಿಲ್ಲ. ಈಗಾಗಲೇ ಪ್ರಮಾಣ ವಚನ ಸ್ವೀಕರಿಸಿರುವ ಕೆಲ ಸಚಿವರೂ ಅತೃಪ್ತರಾಗಿದ್ದಾರೆ. ಕರ್ನಾಟಕ ಕಾಂಗ್ರೆಸ್‌ನ ಆಂತರಿಕ ಭಿನ್ನಾಭಿಪ್ರಾಯಗಳನ್ನು ಬದಿಗಿಟ್ಟು ಉಳಿದ ಖಾತೆಗಳ ಹಂಚಿಕೆಗೆ ಯಾವಾಗ ದಿನಾಂಕ ನಿಗದಿಪಡಿಸುತ್ತೀರಿ?” ಎಂದು ಬಿಜೆಪಿ ಪ್ರಶ್ನಿಸಿದೆ. ಇದಕ್ಕೆ ಪ್ರತಿಕ್ರಿಯಿಸಿರುವ ಕಾಂಗ್ರೆಸ್, ಹಿಂದಿನ ಬಿಜೆಪಿ ಸರ್ಕಾರಗಳ ಉದಾಹರಣೆಗಳನ್ನು ಉಲ್ಲೇಖಿಸಿ ತಿರುಗೇಟು ನೀಡಿದೆ. “2019ರಲ್ಲಿ ಬಿ.ಎಸ್. ಯಡಿಯೂರಪ್ಪ ಮುಖ್ಯಮಂತ್ರಿ ಆದಾಗ ಒಂದು ತಿಂಗಳ ಕಾಲ ಏಕಸದಸ್ಯ ಸಚಿವ ಸಂಪುಟವೇ ಇತ್ತು.…

ಬಿಡದಿ ಟೌನ್‌ಶಿಪ್ ವಿವಾದ; CM ಎಂದರೆ ‘Chief Minister’ ಅಲ್ಲ, ಅದು ‘Commission Minister’ ಎಂದ ಅಶೋಕ್

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರನ್ನು ಕಮೀಷನ್ ಮಿನಿಸ್ಟರ್ ಎಂದಿರುವ ಪ್ರತಿಪಕ್ಷ ನಾಯಕ ಡಿ.ಕೆ.ಶಿವಕುಮಾರ್, ರೈತರ ಜಮೀನಿನ ಮೇಲೆ ಬುಲ್ಡೋಜರ್ ಓಡಿಸಿ, ರಿಯಲ್ ಎಸ್ಟೇಟ್ ಸಾಮ್ರಾಜ್ಯ ಕಟ್ಟಲು ಹೊರಟಿರುವ ಅವರೇ, ಅನ್ನದಾತರಆಕ್ರೋಶದ ಜ್ವಾಲೆಯಲ್ಲಿ ಕಾಂಗ್ರೆಸ್ ಸರ್ಕಾರ ಭಸ್ಮವಾಗಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ. ಸುಮಾರು 470 ದಿನಗಳಿಂದ ಅನ್ನದಾತರು ನಡೆಸುತ್ತಿರುವ ಹೋರಾಟ, ಕಣ್ಣೀರು ಮತ್ತು ಆಕ್ರೋಶವನ್ನು ಲೆಕ್ಕಿಸದೆ, ಬಿಡದಿ ಟೌನ್‌ಶಿಪ್ ಹೆಸರಿನಲ್ಲಿ 499 ಎಕರೆ ಫಲವತ್ತಾದ ಕೃಷಿ ಭೂಮಿಯನ್ನು ಕಬಳಿಸಲು ಅಂತಿಮ ಅಧಿಸೂಚನೆ ಹೊರಡಿಸಿರುವುದು ಕಾಂಗ್ರೆಸ್ ಸರ್ಕಾರದ ನಿಜವಾದ ಮುಖವನ್ನು ಬಯಲು ಮಾಡಿದೆ ಎಂದು ಅಶೋಕ್ ಪ್ರತಿಕ್ರಿಯಿಸಿದ್ದಾರೆ. ರಾಜ್ಯದ ರೈತರನ್ನು ನೀವು ದುರ್ಬಲರೆಂದು ಭಾವಿಸಿದ್ದರೆ ಅದು ನಿಮ್ಮ ದೊಡ್ಡ ತಪ್ಪು! ಇನ್ನು ಕೇವಲ ಒಂದೂವರೆ ವರ್ಷದಲ್ಲಿ ನಿಮ್ಮ ಈ ಜನವಿರೋಧಿ ಸರ್ಕಾರ ಇತಿಹಾಸದ ಪುಟ ಸೇರಲಿದೆ ಎಂದು ಅವರು ಸಾಮಾಜಿಕ ಮಾಧ್ಯಮ X ನಲ್ಲಿ ಪ್ರತಿಕ್ರಿಯಿಸಿದ್ದಾರೆ. 2028ರಲ್ಲಿ ಬಿಜೆಪಿ ಸರ್ಕಾರ…

ಗೃಹಲಕ್ಷ್ಮಿ, ಗೃಹಜ್ಯೋತಿ ಫಲಾನುಭವಿಗಳಿಗೆ ಮರು ಅರ್ಜಿ ಕಡ್ಡಾಯ

ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳಾದ ಗೃಹಲಕ್ಷ್ಮಿ ಹಾಗೂ ಗೃಹಜ್ಯೋತಿ ಯೋಜನೆಗಳ ಫಲಾನುಭವಿಗಳು ಮರು ಅರ್ಜಿ ಸಲ್ಲಿಸಬೇಕೆಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸೂಚಿಸಿದ್ದಾರೆ. ಯೋಜನೆಗಳ ದುರ್ಬಳಕೆಯನ್ನು ತಡೆಗಟ್ಟುವುದು ಹಾಗೂ ನೈಜ ಫಲಾನುಭವಿಗಳನ್ನು ಗುರುತಿಸುವ ಉದ್ದೇಶದಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಅವರು ತಿಳಿಸಿದ್ದಾರೆ. ಗೃಹಲಕ್ಷ್ಮಿ ಯೋಜನೆಯಡಿ ನೂರಾರು ಕೋಟಿ ರೂಪಾಯಿ ಹಣ ಈಗಾಗಲೇ ಮೃತಪಟ್ಟಿರುವ ವ್ಯಕ್ತಿಗಳ ಖಾತೆಗಳಿಗೆ ಜಮೆಯಾಗಿರುವುದು ಪರಿಶೀಲನೆಯ ವೇಳೆ ಬೆಳಕಿಗೆ ಬಂದಿದೆ. ಅಲ್ಲದೆ, ಹಲವು ಫಲಾನುಭವಿಗಳ ಬ್ಯಾಂಕ್ ಖಾತೆ ಮಾಹಿತಿಯಲ್ಲೂ ಸ್ಪಷ್ಟತೆ ಅಗತ್ಯವಿರುವುದರಿಂದ ಮರು ಪರಿಶೀಲನೆ ನಡೆಸಲಾಗುತ್ತಿದೆ ಎಂದು ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ಇದೇ ವೇಳೆ, ಗೃಹಜ್ಯೋತಿ ಯೋಜನೆಯಡಿ ಉಚಿತ ವಿದ್ಯುತ್ ಸೌಲಭ್ಯ ಪಡೆಯುತ್ತಿರುವ ಸುಮಾರು 1.64 ಲಕ್ಷ ಫಲಾನುಭವಿಗಳೂ ಸಹ ಮರು ಅರ್ಜಿ ಸಲ್ಲಿಸಬೇಕಿದ್ದು, ಅರ್ಜಿಗಳ ಮರು ಪರಿಶೀಲನೆಯ ಬಳಿಕ ಅರ್ಹ ಫಲಾನುಭವಿಗಳಿಗೆ ಮಾತ್ರ ಯೋಜನೆಯ ಸೌಲಭ್ಯ ಮುಂದುವರಿಯಲಿದೆ ಎಂದು ಅವರು…

ಬಿಡದಿ ಟೌನ್‌ಶಿಪ್‌ಗೆ ರೈತರ ವಿರೋಧ: ಜೂನ್ 22ರಂದು ‘ಬೈರಮಂಗಲ ಚಲೋ’ ಪ್ರತಿಭಟನೆ

ರಾಮನಗರ: ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಕನಸಿನ ಯೋಜನೆ ಎಂದು ಬಿಂಬಿಸಲಾಗಿರುವ ಬಿಡದಿ ಟೌನ್‌ಶಿಪ್ ನಿರ್ಮಾಣಕ್ಕೆ ರಾಜ್ಯ ಸರ್ಕಾರ ಭೂಸ್ವಾಧೀನ ಪ್ರಕ್ರಿಯೆ ಆರಂಭಿಸಿರುವುದಕ್ಕೆ ರೈತರಿಂದ ತೀವ್ರ ವಿರೋಧ ವ್ಯಕ್ತವಾಗಿದೆ. ಯೋಜನೆಗೆ ಸಂಬಂಧಿಸಿದಂತೆ ಸರ್ಕಾರ ಅಂತಿಮ ಅಧಿಸೂಚನೆ ಹೊರಡಿಸಿರುವ ಕ್ರಮವನ್ನು ಖಂಡಿಸಿರುವ ರೈತರು, ಭೂಮಿ ಕಳೆದುಕೊಳ್ಳುವ ಆತಂಕ ವ್ಯಕ್ತಪಡಿಸಿದ್ದು, ಹೋರಾಟದ ಎಚ್ಚರಿಕೆ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ರಾಮನಗರದ ಎಪಿಎಂಸಿ ಆವರಣದಲ್ಲಿರುವ ರೈತಭವನದಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ, ಕರ್ನಾಟಕ ರಾಜ್ಯ ರೈತ ಸಂಘದ ನೇತೃತ್ವದಲ್ಲಿ ಜೂನ್ 22ರಂದು ‘ಬೈರಮಂಗಲ ಚಲೋ’ ಹೆಸರಿನಲ್ಲಿ ಬೃಹತ್ ಪ್ರತಿಭಟನೆ ನಡೆಸಲು ತೀರ್ಮಾನಿಸಲಾಗಿದೆ. ಬಿಡದಿಯ ಬಿಜಿಎಸ್ ವೃತ್ತದಿಂದ ಬೈರಮಂಗಲ ಗ್ರಾಮದವರೆಗೆ ಬೈಕ್ ರ್ಯಾಲಿ ಹಾಗೂ ಬೃಹತ್ ಮೆರವಣಿಗೆ ಆಯೋಜಿಸಲಾಗಿದ್ದು, ಸಾವಿರಾರು ರೈತರು ಪ್ರತಿಭಟನೆಯಲ್ಲಿ ಭಾಗವಹಿಸುವ ನಿರೀಕ್ಷೆಯಿದೆ ಎಂದು ರೈತ ಸಂಘದ ಮುಖಂಡರು ತಿಳಿಸಿದ್ದಾರೆ. ಭೂಸ್ವಾಧೀನ ಪ್ರಕ್ರಿಯೆಯನ್ನು ಸರ್ಕಾರ ತಕ್ಷಣ ಹಿಂಪಡೆಯಬೇಕು ಹಾಗೂ ರೈತರ ಹಿತಾಸಕ್ತಿಗೆ…

ಬಾಂಬ್ ಸ್ಫೋಟ ಪ್ರಕರಣದ ಆರೋಪಿ ಜೈಲಿನಲ್ಲಿ ಹೃದಯಾಘಾತದಿಂದ ಸಾವು

ಬೆಂಗಳೂರು: 2008ರ ಬೆಂಗಳೂರು ಸರಣಿ ಬಾಂಬ್ ಸ್ಫೋಟ ಪ್ರಕರಣದ ಪ್ರಮುಖ ಆರೋಪಿಗಳಲ್ಲೊಬ್ಬರಾಗಿದ್ದ ಅಬ್ದುಲ್ ಖಾದರ್ (60) ಅವರು ನ್ಯಾಯಾಲಯದ ತೀರ್ಪು ಹೊರಬೀಳುವ ಮುನ್ನವೇ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಮಡಿಕೇರಿ ಜಿಲ್ಲೆಯ ವಿರಾಜಪೇಟೆ ಮೂಲದ ಅಬ್ದುಲ್ ಖಾದರ್ ಅವರನ್ನು 2010ರಿಂದ ಬೆಂಗಳೂರಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ನ್ಯಾಯಾಂಗ ಬಂಧನದಲ್ಲಿ ಇರಿಸಲಾಗಿತ್ತು. ಶುಕ್ರವಾರ ಅವರ ಆರೋಗ್ಯ ಹಠಾತ್ತನೆ ಹದಗೆಟ್ಟ ಹಿನ್ನೆಲೆಯಲ್ಲಿ ಜಯದೇವ ಆಸ್ಪತ್ರೆಗೆ ಕರೆದೊಯ್ಯಲಾಗುತ್ತಿತ್ತು. ಆದರೆ ಮಾರ್ಗಮಧ್ಯೆಯೇ ಹೃದಯಾಘಾತಕ್ಕೊಳಗಾಗಿ ಮೃತಪಟ್ಟಿದ್ದಾರೆ ಎಂದು ಜೈಲು ಅಧಿಕಾರಿಗಳು ತಿಳಿಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಲಾಗಿದ್ದು, ಕುಟುಂಬ ಸದಸ್ಯರಿಗೆ ಮಾಹಿತಿ ನೀಡಲಾಗಿದೆ. 2008ರ ಜುಲೈ 25ರಂದು ಬೆಂಗಳೂರಿನಲ್ಲಿ ಅರ್ಧ ಗಂಟೆಯೊಳಗೆ ಏಳು ಕಡೆ ಬಾಂಬ್ ಸ್ಫೋಟಗಳು ಸಂಭವಿಸಿದ್ದವು. ಮಡಿವಾಳ ಪೊಲೀಸ್ ಚೆಕ್‌ಪೋಸ್ಟ್ ಸಮೀಪದ ಬಸ್ ನಿಲ್ದಾಣದಲ್ಲಿ ನಡೆದ ಸ್ಫೋಟದಲ್ಲಿ ಮಹಿಳೆಯೊಬ್ಬರು ಸೇರಿದಂತೆ ಇಬ್ಬರು ಮೃತಪಟ್ಟಿದ್ದರು ಹಾಗೂ ಹಲವರು ಗಾಯಗೊಂಡಿದ್ದರು. ಈ ಪ್ರಕರಣದ…

₹39,000 ಕೋಟಿ ಘನತ್ಯಾಜ್ಯ ಟೆಂಡರ್ ರಾಜ್ಯದ ಅತಿದೊಡ್ಡ ಹಗರಣ: ಕುಮಾರಸ್ವಾಮಿ

ಬೆಂಗಳೂರು: ಸುಮಾರು ₹39,000 ಕೋಟಿ ಮೌಲ್ಯದ ಘನತ್ಯಾಜ್ಯ ನಿರ್ವಹಣಾ ಟೆಂಡರ್‌ನ್ನು ಕರ್ನಾಟಕ ಕಂಡ ಅತಿದೊಡ್ಡ ಹಗರಣಗಳಲ್ಲಿ ಒಂದೆಂದು ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಸಚಿವ ಎಚ್.ಡಿ. ಕುಮಾರಸ್ವಾಮಿ ಆರೋಪಿಸಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಕುರಿತು ಶೀಘ್ರದಲ್ಲೇ ದಾಖಲೆಗಳನ್ನು ಬಹಿರಂಗಪಡಿಸಿ ವಿವರವಾದ ಮಾಹಿತಿ ನೀಡುವುದಾಗಿ ತಿಳಿಸಿದರು. ಟೆಂಡರ್ ಅಂದಾಜು ವೆಚ್ಚಕ್ಕಿಂತ ಐದು ಶೇಕಡಕ್ಕಿಂತ ಹೆಚ್ಚು ಏರಿದರೆ ಒಪ್ಪಂದ ನೀಡಲು ಅವಕಾಶವಿಲ್ಲ ಎಂಬ ನಿಯಮವಿದ್ದರೂ, ಸರ್ಕಾರವು ಒಂದು ಕಂಪನಿಗೆ ಸುಮಾರು 38 ವರ್ಷಗಳ ಅವಧಿಗೆ ₹38,000 ಕೋಟಿಗೂ ಅಧಿಕ ಮೊತ್ತದ ಒಪ್ಪಂದ ನೀಡಲು ಮುಂದಾಗಿದೆ ಎಂದು ಆರೋಪಿಸಿದರು. “ಕಪ್ಪುಪಟ್ಟಿಗೆ ಸೇರಿದ್ದ ಕಂಪನಿಗೆ ಇಷ್ಟು ದೊಡ್ಡ ಟೆಂಡರ್ ಯಾವ ಆಧಾರದ ಮೇಲೆ ನೀಡಲಾಗಿದೆ ಎಂಬುದಕ್ಕೆ ಉತ್ತರಿಸಬೇಕು,” ಎಂದು ಕುಮಾರಸ್ವಾಮಿ ಪ್ರಶ್ನಿಸಿದರು. ಹಣಕಾಸು ಇಲಾಖೆಯ ಆಕ್ಷೇಪಣೆಗಳಿದ್ದರೂ ಯೋಜನೆಯನ್ನು ಮುಂದೂಡಲಾಗಿದೆ ಎಂದು ಆರೋಪಿಸಿದ ಅವರು, ಅಧಿಕಾರಿಗಳ ಮೇಲೆ ಒತ್ತಡ ಹೇರಿ…

ಸೆಲೂನ್, ಸ್ಪಾ, ಮಸಾಜ್ ಕೇಂದ್ರಗಳ ನಿಯಂತ್ರಣಕ್ಕೆ ವಿಶೇಷ ಕಾನೂನು: ರಾಜ್ಯ ಸರ್ಕಾರಕ್ಕೆ ಕಾನೂನು ಆಯೋಗ ಮಹತ್ವದ ಶಿಫಾರಸು

ಬೆಂಗಳೂರು: ರಾಜ್ಯದಲ್ಲಿ ಕಾರ್ಯನಿರ್ವಹಿಸುತ್ತಿರುವ ಸೆಲೂನ್‌ಗಳು, ಸ್ಪಾ/ಮಸಾಜ್ ಕೇಂದ್ರಗಳು, ಬ್ಯೂಟಿ ಪಾರ್ಲರ್‌ಗಳು, ಯುನಿಸೆಕ್ಸ್ ಸಲೂನ್‌ಗಳು ಹಾಗೂ ಜಿಮ್ನೇಷಿಯಂಗಳ ನಿಯಂತ್ರಣಕ್ಕಾಗಿ ಪ್ರತ್ಯೇಕ ಕಾನೂನು ಜಾರಿಗೆ ತರಲು ಕರ್ನಾಟಕ ಕಾನೂನು ಆಯೋಗ ಸರ್ಕಾರಕ್ಕೆ ಮಹತ್ವದ ಶಿಫಾರಸು ಮಾಡಿದೆ. ಮಂಗಳೂರಿನ ಮಾಜಿ ಸರ್ಕಾರಿ ವಕೀಲ ಮನೋರಾಜ್ ರಾಜೀವ ಅವರು ಸಲ್ಲಿಸಿದ್ದ ಮನವಿಯನ್ನು ಪರಿಗಣಿಸಿ ಆಯೋಗ ತನ್ನ 76ನೇ ವರದಿಯಲ್ಲಿ ಈ ಶಿಫಾರಸುಗಳನ್ನು ನೀಡಿದೆ. ಪ್ರಸ್ತುತ ರಾಜ್ಯದಲ್ಲಿ ಸ್ಪಾ ಮತ್ತು ಮಸಾಜ್ ಕೇಂದ್ರಗಳ ಕಾರ್ಯನಿರ್ವಹಣೆಯನ್ನು ನೇರವಾಗಿ ನಿಯಂತ್ರಿಸುವ ಸ್ಪಷ್ಟ ಕಾನೂನು ಇಲ್ಲ. ಈ ಹಿನ್ನೆಲೆಯಲ್ಲಿ ಆಯೋಗವು ದೇಶ-ವಿದೇಶಗಳ ಕಾನೂನು ಮಾದರಿಗಳನ್ನು ಅಧ್ಯಯನ ನಡೆಸಿದ್ದು, ವಿಶೇಷವಾಗಿ ಸಿಂಗಾಪುರ್, ಅಮೆರಿಕದ ಹಲವು ರಾಜ್ಯಗಳು ಹಾಗೂ ಫಿಲಿಪ್ಪೀನ್ಸ್‌ನಲ್ಲಿ ಜಾರಿಯಲ್ಲಿರುವ ನಿಯಮಾವಳಿಗಳನ್ನು ಪರಿಶೀಲಿಸಿದೆ. ಕಾನೂನು ಆಯೋಗವು ಗ್ರೇಟರ್ ಬೆಂಗಳೂರು ಗವರ್ನನ್ಸ್ ಕಾಯ್ದೆ-2024ಕ್ಕೆ ತಿದ್ದುಪಡಿ ತಂದು, ಆಯುರ್ವೇದ ಆರೋಗ್ಯ ಕೇಂದ್ರಗಳು, ಸ್ಪಾ, ಯುನಿಸೆಕ್ಸ್ ಸಲೂನ್‌ಗಳು, ಬ್ಯೂಟಿ ಪಾರ್ಲರ್‌ಗಳು ಮತ್ತು ಜಿಮ್‌ಗಳಿಗೆ ಕಡ್ಡಾಯ…

ವಿದ್ಯಾರ್ಥಿಗಳ ಉಚಿತ ಬಸ್ ಪಾಸ್ ಮಾರ್ಗಸೂಚಿ; ಕರ್ನಾಟಕ ಒನ್, ಬೆಂಗಳೂರು ಒನ್ ನಲ್ಲಿ ಅರ್ಜಿ, ಈಗಾಗಲೇ ಪಾವತಿಸಿದ್ದಾರೆ ಹಣ ವಾಪಸ್

ಬೆಂಗಳೂರು: ರಾಜ್ಯದಲ್ಲಿ ಇದೇ ಮೊದಲ ಬಾರಿಗೆ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ವಿತರಣೆ ಮಾಡುವ ಐತಿಹಾಸಿಕ ಗ್ಯಾರಂಟಿ ಯೋಜನೆಗೆ ರಾಜ್ಯ ಸರ್ಕಾರ ಚಾಲನೆ ನೀಡಿದೆ. ಸಾರಿಗೆ ಸಚಿವರಾದ ಬೈರತಿ ಸುರೇಶ್ ಅವರು ಈ ವಿಷಯವನ್ನು ಘೋಷಿಸಿದ್ದಾರೆ. ಈಗಾಗಲೇ ಹಣ ಪಾವತಿ ಮಾಡಿ ಬಸ್ ಪಾಸ್ ಖರೀದಿಸಿರುವ ವಿದ್ಯಾರ್ಥಿಗಳಿಗೆ ಆ ಹಣವನ್ನು ವಾಪಸ್ ನೀಡಲಾಗುವುದು ಎಂದೂ ಅವರು ವಿದ್ಯಾರ್ಥಿ ಸಮೂಹಕ್ಕೆ ಸಿಹಿ ಸುದ್ದಿ ನೀಡಿದ್ದಾರೆ. ಈ ಬಗ್ಗೆ ಮಾಹಿತಿ ನೀಡಿರುವ ಅವರು, ಇದುವರೆಗೆ ವಿದ್ಯಾರ್ಥಿನಿಯರಿಗೆ ಮಾತ್ರ ಉಚಿತ ಬಸ್ ಪಾಸ್ ವಿತರಣೆ ಮಾಡಲಾಗುತ್ತಿತ್ತು. ಇದೀಗ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರ ಗಂಡುಮಕ್ಕಳಿಗೂ ಈ ಸೌಲಭ್ಯವನ್ನು ಕಲ್ಪಿಸುವ ಮಹತ್ವದ ನಿರ್ಧಾರ ಕೈಗೊಂಡಿದೆ ಎಂದರು. ಉಚಿತ ಬಸ್ ಪಾಸ್ ವಿತರಣೆಗೆ ಸಂಬಂಧಿಸಿದಂತೆ ಮಾರ್ಗಸೂಚಿಗಳನ್ನು ಸಿದ್ಧಪಡಿಸಲಾಗಿದ್ದು, ಬಿಡುಗಡೆ ಮಾಡಲಾಗುವುದು ಎಂದು ತಿಳಿಸಿದರು. ಬಡವ ಶ್ರೀಮಂತ ಎನ್ನದೇ ಪ್ರತಿಯೊಬ್ಬ ಮಕ್ಕಳೂ ಆರ್ಥಿಕ ಹೊರೆ…