ಬೆಂಗಳೂರು: ಹಿಂದುಳಿದ ವರ್ಗಗಳ ಸಮುದಾಯ ಭವನ ಮತ್ತು ವಿದ್ಯಾರ್ಥಿ ನಿಲಯಗಳ ನಿರ್ಮಾಣಕ್ಕೆ ನೀಡಲಾದ ಅನುದಾನದಲ್ಲಿ ತಾರತಮ್ಯ ನಡೆದಿದೆ ಎಂಬ ಆರೋಪಗಳಿಗೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ. ಕುರುಬ ಸಮುದಾಯಕ್ಕೆ ಹೆಚ್ಚಿನ ಅನುದಾನ ನೀಡಿರುವುದು ಉದ್ದೇಶಪೂರ್ವಕವಲ್ಲ, ಆ ಸಮುದಾಯದಿಂದ ಹೆಚ್ಚಿನ ಸಂಖ್ಯೆಯಲ್ಲಿ ಮನವಿಗಳು ಸಲ್ಲಿಕೆಯಾಗಿದ್ದರಿಂದ ಮಾತ್ರ ಎಂದು ತಿಳಿಸಿದ್ದಾರೆ. ಸಾಮಾಜಿಕ ಜಾಲತಾಣ ‘ಎಕ್ಸ್’ನಲ್ಲಿ ಈ ಕುರಿತು ಪ್ರತಿಕ್ರಿಯಿಸಿರುವ ಅವರು, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವಿವಿಧ ಸಂಘ-ಸಂಸ್ಥೆಗಳಿಂದ ಬಂದ ಮನವಿಗಳನ್ನು ಪರಿಶೀಲಿಸಿ, ಸುಮಾರು 155 ಸಂಘಟನೆಗಳಿಗೆ ₹71.85 ಕೋಟಿ ವೆಚ್ಚದಲ್ಲಿ ಸಮುದಾಯ ಭವನ ಮತ್ತು ವಿದ್ಯಾರ್ಥಿ ನಿಲಯ ನಿರ್ಮಾಣಕ್ಕೆ ಪೂರ್ವಭಾವಿ ಮಂಜೂರಾತಿ ನೀಡಿದೆ ಎಂದು ಹೇಳಿದ್ದಾರೆ. ಇದು ಅಂತಿಮ ಫಲಾನುಭವಿಗಳ ಪಟ್ಟಿ ಅಲ್ಲ. ಇತರೆ ಹಿಂದುಳಿದ ಜಾತಿಗಳಿಂದ ಬಂದಿರುವ ಮನವಿಗಳನ್ನೂ ಪರಿಶೀಲಿಸಿ ಮುಂದಿನ ಹಂತಗಳಲ್ಲಿ ಅನುದಾನ ಮಂಜೂರು ಮಾಡಲಾಗುವುದು ಎಂದು ಅವರು ತಿಳಿಸಿದ್ದಾರೆ. ರಾಜ್ಯದ ಹಿಂದುಳಿದ ವರ್ಗಗಳ…
Category: ರಾಜ್ಯ
ಖರ್ಗೆ ಸಹಿತ ಕರ್ನಾಟಕದ ನಾಲ್ವರು ರಾಜ್ಯಸಭೆಗೆ ಅವಿರೋಧ ಆಯ್ಕೆ
ಬೆಂಗಳೂರು: ಕರ್ನಾಟಕ ವಿಧಾನಸಭೆಯಿಂದ ರಾಜ್ಯಸಭೆಯ ನಾಲ್ಕು ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ನಾಲ್ವರು ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಚುನಾವಣಾ ಕಣದಲ್ಲಿ ಯಾವುದೇ ಪ್ರತಿಸ್ಪರ್ಧಿಗಳು ಇಲ್ಲದ ಹಿನ್ನೆಲೆಯಲ್ಲಿ ಮೂರು ಸ್ಥಾನಗಳನ್ನು ಕಾಂಗ್ರೆಸ್ ಹಾಗೂ ಒಂದು ಸ್ಥಾನವನ್ನು ಬಿಜೆಪಿ ಪಡೆದುಕೊಂಡಿದೆ. ಕಾಂಗ್ರೆಸ್ ಅಭ್ಯರ್ಥಿಗಳಾದ ಮಲ್ಲಿಕಾರ್ಜುನ ಖರ್ಗೆ, ಮನ್ಸೂರ್ ಅಲಿಖಾನ್, ಪವನ್ ಖೇರಾ ಹಾಗೂ ಬಿಜೆಪಿ ಅಭ್ಯರ್ಥಿ ನಾಗರಾಜು ಅವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ನಾಮಪತ್ರ ಹಿಂಪಡೆಯುವ ಅವಧಿ ಮುಕ್ತಾಯಗೊಂಡ ಬಳಿಕ ಯಾವುದೇ ಅಭ್ಯರ್ಥಿ ಎದುರಾಳಿಯಾಗಿ ಉಳಿಯದ ಕಾರಣ ಚುನಾವಣಾಧಿಕಾರಿಗಳು ಅವಿರೋಧ ಆಯ್ಕೆಯನ್ನು ಘೋಷಿಸಿದರು. ವಿಧಾನಸಭೆ ಕಾರ್ಯದರ್ಶಿ ಹಾಗೂ ಚುನಾವಣಾಧಿಕಾರಿ ಕೆ.ಎಂ. ವಿಶಾಲಾಕ್ಷಿ ಅವರು ಈ ಕುರಿತು ಅಧಿಕೃತ ಘೋಷಣೆ ಮಾಡಿದರು. ರಾಜ್ಯಸಭೆ ಚುನಾವಣೆಯಲ್ಲಿ ಆಡಳಿತಾರೂಢ ಕಾಂಗ್ರೆಸ್‌ಗೆ ಮೂರು ಸ್ಥಾನಗಳು ಲಭಿಸಿರುವುದು ಹಾಗೂ ಬಿಜೆಪಿ ಒಂದು ಸ್ಥಾನ ಪಡೆದಿರುವುದು ವಿಧಾನಸಭೆಯಲ್ಲಿನ ಪಕ್ಷಗಳ ಸಂಖ್ಯಾಬಲದ ಆಧಾರದಲ್ಲಿ ನಡೆದಿದೆ.
ಗೃಹಲಕ್ಷ್ಮಿ ಯೋಜನೆಗೆ ಈಗ ಕಂಡಿಷನ್ ಯಾಕೆ?: ಸಿ.ಟಿ.ರವಿ ಪ್ರಶ್ನೆ
ಬೆಂಗಳೂರು: ಗೃಹಲಕ್ಷ್ಮಿ ಯೋಜನೆಗೆ ಈಗ ಕಂಡಿಷನ್ ಯಾಕೆ? ಎಂದು ಬಿಜೆಪಿ ರಾಷ್ಟ್ರೀಯ ಮಾಜಿ ಪ್ರಧಾನ ಕಾರ್ಯದರ್ಶಿ ಹಾಗೂ ವಿಧಾನಪರಿಷತ್ ಸದಸ್ಯ ಸಿ.ಟಿ.ರವಿ ಅವರು ಕೇಳಿದ್ದಾರೆ. ಆಗ ಇಲ್ಲದ ಕಂಡಿಷನ್ ಈಗ ಯಾಕೆ ಎಂದಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕಾಕಾ ಪಾಟೀಲ್ ನಿಂಗೂ ಫ್ರೀ, ಜಮೀರ್ ಅಹ್ಮದ್, ಮಹದೇವಪ್ಪ ನಿಂಗೂ ಫ್ರೀ ಎಂದು ಚುನಾವಣೆ ಪ್ರಚಾರದ ವೇಳೆ ಸಿದ್ದರಾಮಯ್ಯನವರು ತಿಳಿಸಿದ್ದರು ಎಂದು ಗಮನ ಸೆಳೆದರು. 10 ಕೆಜಿ ಅಕ್ಕಿ ಕೊಟ್ಟಿದ್ದೀರಾ? ಮೋದಿಯವರು 5 ಕೆಜಿ ಅಕ್ಕಿ ಕೊಡದೇ ಇದ್ದರೆ, ನಿಮ್ಮನ್ನೇ ನಂಬಿದ್ದರೆ ಜನರು ಖಾಲಿ ಹೊಟ್ಟೆಯಲ್ಲಿ ನೀರು ಕುಡಿದು ಮಲಗಬೇಕಿತ್ತು ಎಂದು ತಿಳಿಸಿದರು. ನಿಮ್ಮ ಕಂಡಿಷನ್ ಯಾಕೆ, ಖಜಾನೆ ಖಾಲಿ ಎಂಬುದು ಜನರಿಗೆ ಗೊತ್ತಿದೆ ಎಂದು ತಿಳಿಸಿದರು. ಫಲಾನುಭವಿ ಜನರನ್ನು ಕಡಿಮೆ ಮಾಡಲು ಕಂಡಿಷನ್ ಹಾಕುತ್ತೀರಿ. ನಿಮ್ಮ ಹಳೆ ಭಾಷಣವನ್ನು ಜನರು ಕೇಳಿಸಿಕೊಳ್ಳುತ್ತಾರೆ ಎಂದರು. ಇದಕ್ಕೆ ಸೂಕ್ತ ಸಮಯದಲ್ಲಿ…
ಬೆಂಗಳೂರು ಮೆಟ್ರೋ ವಿಸ್ತರಣೆ ಸೇರಿ ಪ್ರಮುಖ ಯೋಜನೆಗಳಿಗೆ ಕೇಂದ್ರದ ಅನುಮೋದನೆ ಕೋರಿದ ಡಿಕೆಶಿ
ನವದೆಹಲಿ/ಬೆಂಗಳೂರು: ಬೆಂಗಳೂರು ನಗರದ ಸಂಚಾರ ವ್ಯವಸ್ಥೆಯನ್ನು ಮತ್ತಷ್ಟು ಬಲಪಡಿಸಲು ಹಾಗೂ ಭವಿಷ್ಯದ ಮೂಲಸೌಕರ್ಯ ಅಭಿವೃದ್ಧಿಗೆ ವೇಗ ನೀಡುವ ಉದ್ದೇಶದಿಂದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಕೇಂದ್ರ ಸರ್ಕಾರದ ಮುಂದೆ ಹಲವು ಮಹತ್ವದ ಯೋಜನೆಗಳಿಗೆ ತ್ವರಿತ ಅನುಮೋದನೆ ನೀಡುವಂತೆ ಮನವಿ ಮಾಡಿದ್ದಾರೆ. ಕೇಂದ್ರ ವಸತಿ ಮತ್ತು ನಗರ ವ್ಯವಹಾರಗಳ ಸಚಿವ ಮನೋಹರ್ ಲಾಲ್ ಖಟ್ಟರ್ ಅವರನ್ನು ನವದೆಹಲಿಯಲ್ಲಿ ಭೇಟಿಯಾದ ಡಿ.ಕೆ. ಶಿವಕುಮಾರ್, ಬೆಂಗಳೂರು ಮೆಟ್ರೋ ವಿಸ್ತರಣೆ, ಡಬಲ್ ಡೆಕ್ಕರ್ ಕಾರಿಡಾರ್, ಮೆಟ್ರೋ ಹಂತ-2ರ ಪರಿಷ್ಕೃತ ವೆಚ್ಚಗಳಿಗೆ ಅನುಮೋದನೆ, ಹಂತ-3ಎ ಯೋಜನೆ ಹಾಗೂ ಪ್ರಾದೇಶಿಕ ಕ್ಷಿಪ್ರ ರೈಲು ಸಾರಿಗೆ ವ್ಯವಸ್ಥೆ (RRTS) ಸೇರಿದಂತೆ ಹಲವು ಬಾಕಿ ಪ್ರಸ್ತಾವನೆಗಳ ಕುರಿತು ಚರ್ಚೆ ನಡೆಸಿದರು. ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಮಾಹಿತಿ ಹಂಚಿಕೊಂಡಿರುವ ಅವರು, ಅರ್ಬನ್ ಚಾಲೆಂಜ್ ಫಂಡ್ ಅಡಿಯಲ್ಲಿ ಬಾಕಿ ಇರುವ ಯೋಜನೆಗಳಿಗೂ ಶೀಘ್ರ ಅನುಮೋದನೆ ನೀಡುವಂತೆ ಕೇಂದ್ರವನ್ನು ಕೋರಿರುವುದಾಗಿ…
ದ್ವೇಷ ಬಿತ್ತುವವರ ವಿರುದ್ಧ ಕಠಿಣ ಕ್ರಮಕ್ಕೆ ಪದ್ಮರಾಜ್ ಆರ್. ಪೂಜಾರಿ ಆಗ್ರಹ
ಮಂಗಳೂರು : ತುಳುನಾಡು ಶಾಂತಿ, ಸಹಬಾಳ್ವೆ ಮತ್ತು ಭ್ರಾತೃತ್ವದ ನೆಲೆವೀಡು. ನಮ್ಮ ಈ ಪುಣ್ಯಭೂಮಿಯ ಪರಂಪರೆ ಮತ್ತು ಸಂಸ್ಕೃತಿ ನಮಗೆ ಹೆಮ್ಮೆಯ ವಿಷಯ. ಆದರೆ, ಇತ್ತೀಚೆಗೆ ‘ಅನಿತಾ ಕಾಸರಗೋಡು’ ಎಂಬುವವರು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿರುವ ವಿಡಿಯೋ ಅತ್ಯಂತ ಆಕ್ಷೇಪಾರ್ಹವಾಗಿದ್ದು, ನಮ್ಮ ಸುಂದರ ಸಮಾಜದ ಸೌಹಾರ್ದತೆಯನ್ನು ಹಾಳುಮಾಡುವ ಮತ್ತು ಕೋಮು ದ್ವೇಷವನ್ನು ಪ್ರಚೋದಿಸುವಂತಿದೆ. ಇಂತಹ ಅಮಾನವೀಯ ಕೃತ್ಯವು ಪ್ರತಿಯೊಬ್ಬ ಶಾಂತಿಪ್ರಿಯ ನಾಗರಿಕನಿಗೂ ನೋವನ್ನುಂಟು ಮಾಡಿದೆ ಎಂದು ಕಾಂಗ್ರೆಸ್ ಮುಖಂಡ ಪದ್ಮರಾಜ್ ಆರ್. ಪೂಜಾರಿ ಹೇಳಿದ್ದಾರೆ. ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿ, ಮಂಗಳೂರು ನಗರ ಪೊಲೀಸ್ ಆಯುಕ್ತರೊಂದಿಗೆ ಸಮಾಲೋಚನೆ ನಡೆಸಲಾಗಿದೆ. ಅವರು ಕೂಡಲೇ ಈ ಪ್ರಕರಣದ ಬಗ್ಗೆ ತನಿಖೆ ನಡೆಸಿ ಕಠಿಣ ಕಾನೂನು ಕ್ರಮ ಕೈಗೊಳ್ಳುವ ಭರವಸೆ ನೀಡಿದ್ದಾರೆ ಎಂದು ಅವರು ತಿಳಿಸಿದ್ದಾರೆ. ಆರೋಗ್ಯ ಸಚಿವರಾದ ಶ್ರೀ ಯು.ಟಿ. ಖಾದರ್ ಅವರು ಕೂಡಲೇ ಮಧ್ಯಪ್ರವೇಶಿಸಿ, ದ್ವೇಷ ಭಾಷಣ ಮಾಡುವವರ ವಿರುದ್ಧ…
‘ಭಾರತದ ಇತಿಹಾಸದಲ್ಲಿ ಸುವರ್ಣಾಕ್ಷರಗಳಲ್ಲಿ ದಾಖಲಾಗುವ ಮೈಲಿಗಲ್ಲು’; ಮೋದಿ ದಾಖಲೆ ಸಾಧನೆಗೆ ಯಡಿಯೂರಪ್ಪ ಅಭಿನಂದನೆ
ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರು ನಿರಂತರವಾಗಿ 4,399 ದಿನಗಳ ಕಾಲ ಪ್ರಧಾನಿಯಾಗಿ ಸೇವೆ ಸಲ್ಲಿಸಿ ಮಾಜಿ ಪ್ರಧಾನಿ ಜವಾಹರಲಾಲ್ ನೆಹರು ಅವರ ದಾಖಲೆಯನ್ನು ಮೀರಿದ ಹಿನ್ನೆಲೆಯಲ್ಲಿ ಮಾಜಿ ಮುಖ್ಯಮಂತ್ರಿ ಹಾಗೂ ಬಿಜೆಪಿ ಹಿರಿಯ ನಾಯಕ ಬಿ.ಎಸ್. ಯಡಿಯೂರಪ್ಪ ಅಭಿನಂದನೆ ಸಲ್ಲಿಸಿದ್ದಾರೆ. ಜೂನ್ 10, 2026ರಂದು ಬರೆದ ಪತ್ರದಲ್ಲಿ ಯಡಿಯೂರಪ್ಪ ಅವರು, ಈ ಸಾಧನೆ ಭಾರತದ ಗಣರಾಜ್ಯದ ಇತಿಹಾಸದಲ್ಲಿ ಸುವರ್ಣಾಕ್ಷರಗಳಲ್ಲಿ ದಾಖಲಾಗುವ ಮೈಲಿಗಲ್ಲು ಎಂದು ಬಣ್ಣಿಸಿದ್ದಾರೆ. 2014, 2019 ಮತ್ತು 2024ರ ಚುನಾವಣೆಗಳಲ್ಲಿ ಜನರು ನೀಡಿದ ನಿರಂತರ ಬೆಂಬಲದಿಂದ ಮೋದಿ ಈ ಸಾಧನೆ ಮಾಡಿದ್ದಾರೆ ಎಂದು ಅವರು ಹೇಳಿದ್ದಾರೆ. ಮೋದಿ ಅವರ ನಾಯಕತ್ವವು ವೈಯಕ್ತಿಕ ಸಾಧನೆಯಷ್ಟೇ ಅಲ್ಲ, ಹಲವು ದಶಕಗಳ ರಾಜಕೀಯ ಚಳವಳಿಯ ಫಲ ಎಂದು ಉಲ್ಲೇಖಿಸಿರುವ ಯಡಿಯೂರಪ್ಪ, ಭಾರತೀಯ ಜನಸಂಘದ ಸ್ಥಾಪಕರಿಂದ ಆರಂಭವಾದ ವಿಚಾರಧಾರೆ, ಅಟಲ್ ಬಿಹಾರಿ ವಾಜಪೇಯಿ ಮತ್ತು ಎಲ್.ಕೆ. ಅಡ್ವಾಣಿ ಅವರ ನಾಯಕತ್ವದ…
SIR ಪ್ರಕ್ರಿಯೆಗೆ ಅನುಕೂಲ ಕಲ್ಪಿಸಲು 2002ರ ಮತದಾರರ ಪಟ್ಟಿ ಒದಗಿಸಿ; ಚುನಾವಣಾ ಆಯೋಗಕ್ಕೆ ಕೆಪಿಸಿಸಿ ಮನವಿ
ಬೆಂಗಳೂರು: ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಪರಿಣಾಮಕಾರಿ ಭಾಗವಹಿಸುವಿಕೆ ಹಾಗೂ ಮತದಾರರ ವಿವರಗಳ ಪರಿಶೀಲನೆಗಾಗಿ 2002ರ ಕರ್ನಾಟಕದ 224 ವಿಧಾನಸಭಾ ಕ್ಷೇತ್ರಗಳ ಮತದಾರರ ಪಟ್ಟಿಯ ಮುದ್ರಿತ ಪ್ರತಿಗಳನ್ನು ಉಚಿತವಾಗಿ ಒದಗಿಸುವಂತೆ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (KPCC) ರಾಜ್ಯ ಮುಖ್ಯ ಚುನಾವಣಾಧಿಕಾರಿಗಳಿಗೆ ಮನವಿ ಸಲ್ಲಿಸಿದೆ. ಕೆಪಿಸಿಸಿ ಮಾಧ್ಯಮ ಮತ್ತು ಸಂವಹನ ವಿಭಾಗದ ಅಧ್ಯಕ್ಷ ಹಾಗೂ ವಿಧಾನ ಪರಿಷತ್ ಸದಸ್ಯ ರಮೇಶ್ ಬಾಬು ಈ ಸಂಬಂಧ ಪತ್ರ ಬರೆದು, ಚುನಾವಣಾ ಪ್ರಕ್ರಿಯೆಯ ಪಾರದರ್ಶಕತೆ ಮತ್ತು ನಿಖರತೆ ಕಾಪಾಡುವ ಉದ್ದೇಶದಿಂದ ಅಗತ್ಯ ದಾಖಲೆಗಳನ್ನು ನೀಡುವಂತೆ ಕೋರಿದ್ದಾರೆ. ಮನವಿಯಲ್ಲಿ 2002ರ ಎಲ್ಲಾ ವಿಧಾನಸಭಾ ಕ್ಷೇತ್ರಗಳ ಮತದಾರರ ಪಟ್ಟಿಗಳು, 2025ರ ಇತ್ತೀಚಿನ ಮತದಾರರ ಪಟ್ಟಿಗಳು ಹಾಗೂ ಸೇರ್ಪಡೆ, ಅಳಿಸುವಿಕೆ ಮತ್ತು ತಿದ್ದುಪಡಿಗಳನ್ನು ಒಳಗೊಂಡ ಪೂರಕ ದಾಖಲೆಗಳನ್ನು ಒದಗಿಸುವಂತೆ ಕೇಳಲಾಗಿದೆ. ಜೊತೆಗೆ ವಿಶೇಷ ಸಮಗ್ರ ಪರಿಷ್ಕರಣೆ ಪ್ರಕ್ರಿಯೆಗೆ ಸಂಬಂಧಿಸಿದ ಮಾರ್ಗಸೂಚಿಗಳು ಮತ್ತು ಅಧಿಸೂಚನೆಗಳ…
ಸಿಎಂ ಡಿ.ಕೆ. ಶಿವಕುಮಾರ್‌ಗೆ ಮುಖ್ಯ ಸಲಹೆಗಾರರಾಗಿ ಸುನೀಲ್ ಕನುಗೋಳು ನೇಮಕ
ಬೆಂಗಳೂರು: ಕಾಂಗ್ರೆಸ್‌ನ ಚುನಾವಣಾ ತಂತ್ರಗಾರ ಎಂದೇ ಗುರುತಿಸಿಕೊಂಡಿರುವ ಸುನೀಲ್ ಕನುಗೋಳು ಅವರನ್ನು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಮುಖ್ಯ ಸಲಹೆಗಾರರಾಗಿ ನೇಮಕ ಮಾಡಲಾಗಿದೆ. ಸುನೀಲ್ ಕನುಗೋಳು ಅವರಿಗೆ ಸಂಪುಟ ದರ್ಜೆ ಸ್ಥಾನಮಾನದೊಂದಿಗೆ ಸರ್ಕಾರದ ಸೌಲಭ್ಯಗಳನ್ನು ಒದಗಿಸಿ ನೇಮಕಾತಿ ಆದೇಶ ಹೊರಡಿಸಲಾಗಿದೆ. ಈ ಹಿಂದೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅವಧಿಯಲ್ಲಿಯೂ ಕನುಗೋಳು ಅವರು ಮುಖ್ಯ ಸಲಹೆಗಾರರಾಗಿ ಕಾರ್ಯನಿರ್ವಹಿಸಿದ್ದರು. ಕರ್ನಾಟಕ ವಿಧಾನಸಭಾ ಚುನಾವಣೆ ವೇಳೆ ಕಾಂಗ್ರೆಸ್‌ನ ‘ಪೇಸಿಎಂ’ ಅಭಿಯಾನ, ಗ್ಯಾರಂಟಿ ಯೋಜನೆಗಳ ಪ್ರಚಾರ ತಂತ್ರ ಹಾಗೂ ಪಕ್ಷದ ಚುನಾವಣಾ ಕಾರ್ಯತಂತ್ರ ರೂಪಿಸುವಲ್ಲಿ ಸುನೀಲ್ ಕನುಗೋಳು ಪ್ರಮುಖ ಪಾತ್ರ ವಹಿಸಿದ್ದರು ಎನ್ನಲಾಗಿದೆ. ಪಕ್ಷದ ಗೆಲುವಿಗೆ ತೆರೆಮರೆಯಲ್ಲಿ ತಂತ್ರಗಾರಿಕೆ ರೂಪಿಸಿದ್ದ ಅವರು, ಇದೀಗ ಆಡಳಿತಾತ್ಮಕ ವಿಚಾರಗಳಲ್ಲಿಯೂ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಸಲಹೆ ನೀಡುವ ಜವಾಬ್ದಾರಿ ವಹಿಸಿಕೊಳ್ಳಲಿದ್ದಾರೆ.
ರಸ್ತೆ ಹೊಂಡಗಳಿಂದ ಪ್ರಾಣಹಾನಿಯಾದರೆ ಇಂಜಿನಿಯರ್‌ಗಳೇ ಹೊಣೆ: ಯು.ಟಿ. ಖಾದರ್ ಎಚ್ಚರಿಕೆ
ಮಂಗಳೂರು: ಮಳೆಗಾಲದಲ್ಲಿ ರಸ್ತೆ ಹೊಂಡಗಳಿಂದ ಅಪಘಾತಗಳು ಸಂಭವಿಸಿ ಪ್ರಾಣಹಾನಿಯಾದರೆ ಸಂಬಂಧಿತ ಇಲಾಖೆಯ ಇಂಜಿನಿಯರ್‌ಗಳನ್ನೇ ನೇರ ಹೊಣೆಗಾರರನ್ನಾಗಿ ಮಾಡಲಾಗುವುದು ಎಂದು ಸಚಿವ ಯು.ಟಿ. ಖಾದರ್ ಎಚ್ಚರಿಕೆ ನೀಡಿದ್ದಾರೆ. ಮಂಗಳೂರಿನ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಜಿಲ್ಲಾ ವಿಪತ್ತು ನಿರ್ವಹಣಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ರಸ್ತೆ ದುರಸ್ತಿ ಕಾಮಗಾರಿಗಳ ಕುರಿತು ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ಕೇವಲ ತಾತ್ಕಾಲಿಕವಾಗಿ ಗುಂಡಿ ಮುಚ್ಚುವ ಕೆಲಸ ಮಾಡದೆ, ರಸ್ತೆಗಳ ಶಾಶ್ವತ ದುರಸ್ತಿಗೆ ಆದ್ಯತೆ ನೀಡಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು. ಸಾರ್ವಜನಿಕ ಹಿತಾಸಕ್ತಿ ಮತ್ತು ತುರ್ತು ಸಂದರ್ಭಗಳಲ್ಲಿ ಅಧಿಕಾರಿಗಳು ತಮ್ಮ ವ್ಯಾಪ್ತಿಯನ್ನು ಮೀರಿ ಕೂಡಲೇ ಪರಿಹಾರ ಕ್ರಮ ಕೈಗೊಳ್ಳಬೇಕು ಎಂದರು. ಮಳೆಗಾಲದಲ್ಲಿ ಸಂಭವಿಸಬಹುದಾದ ಪ್ರಕೃತಿ ವಿಕೋಪಗಳನ್ನು ಎದುರಿಸಲು ಎಲ್ಲಾ ಇಲಾಖೆಗಳು ಸಮನ್ವಯದಿಂದ ಕಾರ್ಯನಿರ್ವಹಿಸಬೇಕು ಎಂದು ಸೂಚಿಸಿದ ಸಚಿವರು, ವಿದ್ಯುತ್ ಕಂಬಗಳು ಮತ್ತು ತಂತಿಗಳು ಮುರಿದು ಬೀಳುವ ಘಟನೆಗಳನ್ನು ತಡೆಯಲು ಮೆಸ್ಕಾಂ ವಿಶೇಷ ಗಮನಹರಿಸಬೇಕು…
‘ಐಡಿ ಇಲ್ಲದೆ ಪಬ್, ಬಾರ್ ಪ್ರವೇಶವಿಲ್ಲ’ ಅಪ್ರಾಪ್ತರ ಮದ್ಯಪಾನ ತಡೆಗೆ ಗೃಹ ಸಚಿವರ ಖಡಕ್ ಸೂಚನೆ
ಬೆಂಗಳೂರು: ಹದಿಹರೆಯದವರಲ್ಲಿ ಹೆಚ್ಚುತ್ತಿರುವ ಮದ್ಯಪಾನ ಮತ್ತು ಮಾದಕ ವಸ್ತುಗಳ ಬಳಕೆಯನ್ನು ತಡೆಯಲು ರಾಜ್ಯ ಸರ್ಕಾರ ಕಟ್ಟುನಿಟ್ಟಿನ ಕ್ರಮಕ್ಕೆ ಮುಂದಾಗಿದೆ. ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರು ಬೆಂಗಳೂರಿನ ಎಲ್ಲಾ ಪಬ್‌ಗಳು, ಬಾರ್‌ಗಳು, ಕ್ಲಬ್‌ಗಳು, ಬ್ರೂವರೀಸ್, ಲಾಂಜ್‌ಗಳು ಹಾಗೂ ಮದ್ಯ ಸರಬರಾಜು ಮಾಡುವ ಸಂಸ್ಥೆಗಳಲ್ಲಿ ವಯಸ್ಸಿನ ಪರಿಶೀಲನೆಯನ್ನು ಕಡ್ಡಾಯಗೊಳಿಸುವಂತೆ ಪೊಲೀಸ್ ಇಲಾಖೆಗೆ ಸೂಚನೆ ನೀಡಿದ್ದಾರೆ. ಮಾನ್ಯ ಗುರುತಿನ ಚೀಟಿ ಇಲ್ಲದವರಿಗೆ ಪ್ರವೇಶ ನೀಡಬಾರದು ಮತ್ತು ಅಪ್ರಾಪ್ತ ವಯಸ್ಕರಿಗೆ ಮದ್ಯ ಪೂರೈಸುವ ಸಂಸ್ಥೆಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ. ಪ್ರವೇಶ ದ್ವಾರಗಳಲ್ಲಿರುವ ಸಿಸಿಟಿವಿ ಕ್ಯಾಮೆರಾಗಳು ಕಡ್ಡಾಯವಾಗಿ ಕಾರ್ಯನಿರ್ವಹಿಸಬೇಕು. ಅದರ ದೃಶ್ಯಾವಳಿಗಳನ್ನು ಸಂರಕ್ಷಿಸುವ ಜವಾಬ್ದಾರಿ ಸಂಸ್ಥೆಗಳ ಮಾಲೀಕರು, ವ್ಯವಸ್ಥಾಪಕರು ಮತ್ತು ಪರವಾನಗಿದಾರರ ಮೇಲಿದೆ ಎಂದು ಸಚಿವರು ತಿಳಿಸಿದ್ದಾರೆ. ಸೇಂಟ್ ಜಾನ್ಸ್ ಮೆಡಿಕಲ್ ಕಾಲೇಜು, ಕ್ರೈಸ್ಟ್ ವಿಶ್ವವಿದ್ಯಾಲಯ ಮತ್ತು ಮಣಿಪಾಲದ ಕಸ್ತೂರ್ಬಾ ಮೆಡಿಕಲ್ ಕಾಲೇಜು ನಡೆಸಿದ ಅಧ್ಯಯನದ ಹಿನ್ನೆಲೆಯಲ್ಲಿ…
