ಮುಂಬೈ: ಶಿವಸೇನಾ ಸಂಸ್ಥಾಪಕ ಬಾಳಾಸಾಹೇಬ್ ಠಾಕ್ರೆ ಅವರ ಜನ್ಮ ಶತಮಾನೋತ್ಸವದ ಆರಂಭದ ಹಿನ್ನೆಲೆಯಲ್ಲಿ ಶಿವಸೇನಾ (ಯುಬಿಟಿ) ಮುಖ್ಯಸ್ಥ ಉದ್ಧವ್ ಠಾಕ್ರೆ ಶುಕ್ರವಾರ ಏಕನಾಥ್ ಶಿಂಧೆ ಬಣ ಹಾಗೂ ಬಿಜೆಪಿಯ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. ವಿಶ್ವಾಸಘಾತುಕತೆ ಮಹಾರಾಷ್ಟ್ರಕ್ಕೆ ಹೊಸದಲ್ಲ, ಅದು ಇತಿಹಾಸದ ಶಾಪ ಎಂದು ಅವರು ಹೇಳಿದರು. “ಬಿರುಗಾಳಿಗಳು ನಮ್ಮನ್ನು ಹೆದರಿಸುವುದಿಲ್ಲ. ನಾವು ಅವುಗಳಲ್ಲೇ ಬೆಳೆದಿದ್ದೇವೆ,” ಎಂದು ಹೇಳಿದ ಠಾಕ್ರೆ, ಶತ್ರುಗಳು ನೇರವಾಗಿ ಗೆಲ್ಲಲು ಸಾಧ್ಯವಾಗದಾಗ ದೇಶದ್ರೋಹಿಗಳ ಸಹಾಯವನ್ನು ಪಡೆದುಕೊಳ್ಳುತ್ತಾರೆ ಎಂದು ಆರೋಪಿಸಿದರು. ಕೇಸರಿ ಧ್ವಜವನ್ನು ಒಳಗಿನಿಂದ ದ್ರೋಹ ಮಾಡದೇ ಇದ್ದಿದ್ದರೆ, ಮಹಾರಾಷ್ಟ್ರ ಇತಿಹಾಸವನ್ನೇ ಮರುಬರೆಯುತ್ತಿತ್ತು ಎಂದು ಅವರು ಅಭಿಪ್ರಾಯಪಟ್ಟರು. ಇತ್ತೀಚಿನ ಚುನಾವಣೆಗಳಲ್ಲಿ ಹಣದ ಶಕ್ತಿಯನ್ನು ಹಿಂದೆಂದೂ ಕಾಣದ ರೀತಿಯಲ್ಲಿ ಬಳಸಲಾಗಿದೆ ಎಂದು ಆರೋಪಿಸಿದ ಅವರು, “ಹಣದಿಂದ ಮತಗಳನ್ನು ಖರೀದಿಸಬಹುದು, ಆದರೆ ಹೃದಯಗಳನ್ನು ಖರೀದಿಸಲು ಸಾಧ್ಯವಿಲ್ಲ” ಎಂದು ಹೇಳಿದರು. ಕೇಂದ್ರದ ನಾಯಕತ್ವವನ್ನು ಉಲ್ಲೇಖಿಸಿ, “ಇಬ್ಬರು ವ್ಯಾಪಾರಿಗಳು ಪಕ್ಷದವರನ್ನೇ…
Category: ಪ್ರಮುಖ ಸುದ್ದಿ
ಪಿಎಸ್‌ಜಿಐಸಿಗಳು, ನಬಾರ್ಡ್, ಆರ್‌ಬಿಐಗಳಿಗೆ ವೇತನ–ಪಿಂಚಣಿ ಪರಿಷ್ಕರಣೆ; ಕೇಂದ್ರ ಸರ್ಕಾರ ಅನುಮೋದನೆ
ನವದೆಹಲಿ: ಸಾರ್ವಜನಿಕ ವಲಯದ ಸಾಮಾನ್ಯ ವಿಮಾ ಕಂಪನಿಗಳು (ಪಿಎಸ್‌ಜಿಐಸಿಗಳು), ರಾಷ್ಟ್ರೀಯ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಬ್ಯಾಂಕ್ (ನಬಾರ್ಡ್) ಹಾಗೂ ಭಾರತೀಯ ರಿಸರ್ವ್ ಬ್ಯಾಂಕ್ (ಆರ್‌ಬಿಐ) ಉದ್ಯೋಗಿಗಳು ಮತ್ತು ನಿವೃತ್ತರಿಗೆ ದೀರ್ಘಕಾಲದಿಂದ ಬಾಕಿ ಇದ್ದ ವೇತನ ಮತ್ತು ಪಿಂಚಣಿ ಪರಿಷ್ಕರಣೆಗೆ ಕೇಂದ್ರ ಸರ್ಕಾರ ಶುಕ್ರವಾರ ಅನುಮೋದನೆ ನೀಡಿದೆ. ಈ ನಿರ್ಧಾರದಿಂದ ಒಟ್ಟು ಸುಮಾರು 46,322 ಉದ್ಯೋಗಿಗಳು, 23,570 ಪಿಂಚಣಿದಾರರು ಮತ್ತು 23,260 ಕುಟುಂಬ ಪಿಂಚಣಿದಾರರು ಪ್ರಯೋಜನ ಪಡೆಯಲಿದ್ದಾರೆ. ಪಿಎಸ್‌ಜಿಐಸಿಗಳ ಉದ್ಯೋಗಿಗಳಿಗೆ ವೇತನ ಪರಿಷ್ಕರಣೆ 2022ರ ಆಗಸ್ಟ್ 1ರಿಂದ ಜಾರಿಗೆ ಬರಲಿದೆ. ವೇತನ ಬಿಲ್‌ನಲ್ಲಿ ಒಟ್ಟಾರೆ ಶೇ.12.41ರಷ್ಟು ಹೆಚ್ಚಳವಾಗಿದ್ದು, ಮೂಲ ವೇತನ ಮತ್ತು ತುಟ್ಟಿ ಭತ್ಯೆಯ ಮೇಲೆ ಶೇ.14ರಷ್ಟು ಹೆಚ್ಚಳ ನೀಡಲಾಗಿದೆ. ಒಟ್ಟು 43,247 ಉದ್ಯೋಗಿಗಳು ಇದರಿಂದ ಲಾಭ ಪಡೆಯಲಿದ್ದಾರೆ. ಜೊತೆಗೆ, 2010ರ ಏಪ್ರಿಲ್ 1 ನಂತರ ನೇಮಕವಾದ ಉದ್ಯೋಗಿಗಳ ಎನ್‌ಪಿಎಸ್ ಕೊಡುಗೆಯನ್ನು ಶೇ.10ರಿಂದ ಶೇ.14ಕ್ಕೆ ಹೆಚ್ಚಿಸಲಾಗಿದೆ. ಕುಟುಂಬ ಪಿಂಚಣಿಯನ್ನು…
ರಾಜ್ಯದಲ್ಲೂ ಭಾಷಾ ಮಸೂದೆ ಜಾರಿಗೆ ಕಸರತ್ತು? ಎಲ್ಲಾ ಶಾಸಕರಿಗೆ CRF ನೀಡಿರುವ ಪ್ರಸ್ತಾವನೆ ಹೀಗಿದೆ.
ಬೆಂಗಳೂರು: ನರೇಗಾ (MGNREGA) ಹೆಸರು ಬದಲಾವಣೆ ವಿಚಾರದಲ್ಲಿ ಮೋದಿ ಸರ್ಕಾರದ ವಿರುದ್ಧ ಸಮರ ಸಾರಿರುವ ಕರ್ನಾಟಕದಲ್ಲಿರುವ ಕಾಂಗ್ರೆಸ್ ಸರ್ಕಾರ, ಇದೀಗ ಕನ್ನಡ ಭಾಷಾ ವಿಚಾರದಲ್ಲೂ ಕಾನೂನು ಜಾರಿ ಸಂಬಂಧ ತೆರೆಮರೆಯಲ್ಲಿ ಕಸರತ್ತು ನಡೆಸುತ್ತಿದೆ. ಈ ಸಂಬಂಧ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಲ್ಲಿ ಪರಿಶೀಲನೆ ನಡೆದಿದ್ದು, ಒಂದೊಮ್ಮೆ ಕನ್ನಡ ಸಂಬಂಧದ ಕಾನೂನು ಜಾರಿಗೆ ಬಂದರೆ, ಕೇರಳದ ಭಾಷಾ ಮಸೂದೆಗೆ ಪರ್ಯಾಯ ಕ್ರಮ ಎಂಬಂತಾಗಬಹುದು, ಜೊತೆಗೆ ಹಿಂದಿ ಏರಿಕೆಯ ವಿವಾದಕ್ಕೂ ತೆರೆ ಬೀಳುವ ಸಾಧ್ಯತೆಗಳಿವೆ. ಹಿಂದಿ ಭಾಷಾ ಏರಿಕೆ ವಿಚಾರದಲ್ಲಿ ದಕ್ಷಿಣ ಭಾರತದ ರಾಜ್ಯಗಳ ನಿಲುವು ಒಂದೇ ರೀತಿ ಇದ್ದು, ಎಲ್ಲಾ ರಾಜಕೀಯ ಪಕ್ಷಗಳೂ ಮಾತೃ ಭಾಷೆಯ ಬಗ್ಗೆ ಪ್ರತಿಪಾದಿಸುತ್ತಿವೆ. ಇದಕ್ಕೆ ಪರ್ಯಾಯ ಎಂಬಂತೆ ಮಾನವ ಹಕ್ಕುಗಳ ಹೋರಾಟದಲ್ಲಿ ಮುಂಚೂಣಿಯಲ್ಲಿರುವ ‘ಸಿಟಿಜನ್ ರೈಟ್ಸ್ ಫೌಂಡೇಷನ್ (CRF)’ ಕಾರ್ಯದರ್ಶಿ ಜಯಪ್ರಕಾಶ್ ಅವರು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳಿಗೆ 2025ರ ಏಪ್ರಿಲ್ ಹಾಗೂ…
ಸ್ಥಳೀಯರಿಗೆ ಜಾಗತಿಕ ವೃತ್ತಿ ಅವಕಾಶ ಒದಗಿಸಲು ಆಸ್ಟ್ರೇಲಿಯ ಜೊತೆ ಜಿಟಿಸಿಸಿ ಒಪ್ಪಂದ
ಬೆಂಗಳೂರು: ಕೌಶಲ್ಯ ತರಬೇತಿ ಪಡೆದಿರುವ ಕರ್ನಾಟಕದ ಪ್ರತಿಭಾನ್ವಿತರಿಗೆ ಜಾಗತಿಕ ಮಟ್ಟದಲ್ಲಿ ಉದ್ಯೋಗ ಅವಕಾಶಗಳನ್ನು ಒದಗಿಸುವ ನಿಟ್ಟಿನಲ್ಲಿ ಸರ್ಕಾರಿ ಉಪಕರಣ ಮತ್ತು ತರಬೇತಿ ಕೇಂದ್ರ (ಜಿಟಿಟಿಸಿ) ಈಗ ಆಸ್ಟ್ರೇಲಿಯಾದ ಜೊತೆ ಒಪ್ಪಂದಕ್ಕೆ ಸಹಿ ಹಾಕಿದೆ. ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಜೀವನೋಪಾಯ ಸಚಿವ ಡಾ. ಶರಣಪ್ರಕಾಶ ಆರ್. ಪಾಟೀಲ್ ಸಮ್ಮುಖದಲ್ಲಿ ಜಿಟಿಟಿಸಿ ವ್ಯವಸ್ಥಾಪಕ ನಿರ್ದೇಶಕ ಸಿದ್ದಲಿಂಗಪ್ಪ ಪೂಜಾರಿ ಮತ್ತು ವರ್ಕ್ ಇನಿಶಿಯೇಟಿವ್ಸ್‌ನ ಸ್ಥಾಪಕ ಮತ್ತು ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಕ್ರಿಸ್ ಕಾರ್ಮನ್ ಗುರುವಾರ ವಿಕಾಸಸೌಧದಲ್ಲಿ ಒಪ್ಪಂದಕ್ಕೆ ಸಹಿ ಹಾಕಿದರು. ಆಸ್ಟ್ರೇಲಿಯಾದಲ್ಲಿ ಕೌಶಲ್ಯಭರಿತ ಉದ್ಯೋಗಿಗಳ ಕೊರತೆಯನ್ನು ನೀಗಿಸಲು ಮತ್ತು ಕರ್ನಾಟಕದ ಕೌಶಲ್ಯಪೂರ್ಣ ಕಾರ್ಯಪಡೆಗೆ ಜಾಗತಿಕ ವೃತ್ತಿ ಮಾರ್ಗ ಸೃಷ್ಟಿಸಲು ಈ ಕ್ರಮ ಕೈಗೊಳ್ಳಲಾಗಿದೆ. ಕರ್ನಾಟಕದ ವೃತ್ತಿಪರರು, ವ್ಯಾಪಾರಿಗಳು ಮತ್ತು ಸಮುದಾಯ ಕಾರ್ಯಕರ್ತರನ್ನು ಆಸ್ಟ್ರೇಲಿಯಾದ ಉದ್ಯೋಗದಾತರು ಸಂಪರ್ಕಸಲಿದ್ದಾರೆ. ನಿರ್ಮಾಣ, ಆರೋಗ್ಯ ರಕ್ಷಣೆ, ಉತ್ಪಾದನೆ ಮತ್ತು ತಂತ್ರಜ್ಞಾನದಂತಹ ಕ್ಷೇತ್ರಗಳಲ್ಲಿ ಅವಕಾಶಗಳು ಸಿಗಲಿದೆ. ಈ ಪಾಲುದಾರಿಕೆಯಡಿ…
ಉಡುಪಿ ಪರ್ಯಾಯ ಮಹೋತ್ಸವದಲ್ಲಿ ಸಾಂಸ್ಕೃತಿಕ ದಾಖಲೆ; ಒಂದೇ ವೇದಿಕೆಯಲ್ಲಿ 40ಕ್ಕೂ ಹೆಚ್ಚು ಗಾಯಕರ ಸಂಗೀತ ರಸದೌತಣ
ಉಡುಪಿ: ಆಧ್ಯಾತ್ಮಿಕ ಪರಂಪರೆಯಲ್ಲಿ ದೇವರ ನಾಡು ಎಂದೇ ಪ್ರಸಿದ್ಧಿಯಾಗಿರುವ ಉಡುಪಿ ಪರ್ಯಾಯ ಮಹೋತ್ಸವ ದೇಶದ ಗಮನಸೆಳೆಯಿತು. ಶಿರೂರು ಪರ್ಯಾಯ 2026ರ ಶುಭ ಸಂದರ್ಭದಲ್ಲಿ ನಡೆದ ಸಾಂಸ್ಕೃತಿಕ ವೈಭವವು ಈ ಮಹಾಕೈಂಕರ್ಯಕ್ಕೆ ಆಕರ್ಷಣೆ ತುಂಬಿತು. ಶ್ರೀ ದುರ್ಗಾ ಮ್ಯೂಸಿಕ್ ಮೀಟ್ ತಂಡ ಆಯೋಜಿಸಿದ ವಿಶಿಷ್ಟ ಸಂಗೀತ ರಸಮಂಜರಿ ಕಾರ್ಯಕ್ರಮ ಪರ್ಯಾಯ ಇತಿಹಾಸದಲ್ಲೇ ವಿಶಿಷ್ಟ ಎನಿಸಿತು. ಉಡುಪಿ ಪರ್ಯಾಯದ ಇತಿಹಾಸದಲ್ಲೇ ಮೊದಲ ಬಾರಿಗೆ 40ಕ್ಕೂ ಹೆಚ್ಚು ಹವ್ಯಾಸಿ ಗಾಯಕರನ್ನು ಒಂದೇ ವೇದಿಕೆಯಲ್ಲಿ ಕರೆತರಲಾಗಿತ್ತು, 70ಕ್ಕೂ ಹೆಚ್ಚು ಹಾಡುಗಳು ಸಂಗೀತಾಸಕ್ತರ ಮನಸೂರೆಗೊಳಿಸಿತು. ಒಂದೇ ವೇದಿಕೆಯಲ್ಲಿ ಇಷ್ಟು ಸಂಖ್ಯೆಯ ಗಾಯಕರ ಸಮ್ಮಿಲನವು ಸಂಸ್ಕೃತಿಕ ವೈಭವಕ್ಕೆ ಸಾಕ್ಷಿಯಾಯಿತು. ಶ್ರೀಕೃಷ್ಣನ ನಾಡಿನಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಹೊಸ ಪ್ರತಿಭೆಗಳು ತಮ್ಮ ಗಾಯನ ಸಾಮರ್ಥ್ಯವನ್ನು ಪ್ರದರ್ಶಿಸಿದ್ದು ವಿಶೇಷ. ಪ್ರಸಾದ್ ನೇತ್ರಾಲಯ, ಯುನೈಟೆಡ್ ರೆಡಿಮಿಕ್ಸ್ ಕಾಂಕ್ರೀಟ್ ಕಂಪನಿ ಹಾಗೂ ಯೋಶಿಕಾ ಕನ್ಸಕ್ಷನ್ ಮತ್ತು ಫ್ಯಾಬ್ರಿಕೇಶನ್ಸ್ ಸಂಸ್ಥೆಗಳ ಪ್ರಾಯೋಜಕತ್ವದಲ್ಲಿ ನಡೆದ…
ಉಡುಪಿ ಪರ್ಯಾಯ ಮಹೋತ್ಸವದಲ್ಲಿ ಕೇಸರಿ ಧ್ವಜ ನಿಶಾನೆ ತೋರಿದ ಡಿಸಿ ಅಮಾನತಿಗೆ ಕಾಂಗ್ರೆಸ್ ನಾಯಕರ ಆಗ್ರಹ
ಉಡುಪಿ: ಉಡುಪಿ ಪರ್ಯಾಯ ಮಹೋತ್ಸವದಲ್ಲಿ ಕೇಸರಿ ಧ್ವಜ ನಿಶಾನೆ ತೋರಿದ ಜಿಲ್ಲಾಧಿಕಾರಿಯನ್ನು ಅಮಾನತುಗೊಳಿಸುವಂತೆ ಕಾಂಗ್ರೆಸ್ ನಾಯಕರು ಸರ್ಕಾರಕ್ಕೆ ಮನವಿ ಸಲ್ಲಿಸಿದ್ದಾರೆ. ಕಾಂಗ್ರೆಸ್ ನಾಯಕರ ಈ ನಡೆಯನ್ನು ಬಿಜೆಪಿ ಕಟುವಾಗಿ ಟೀಕಿಸಿದೆ. ನೂರಾರು ವರ್ಷಗಳ ಇತಿಹಾಸವಿರುವ ಉಡುಪಿ ಪರ್ಯಾಯ ಮಹೋತ್ಸವದ ವೇಳೆ ಜಿಲ್ಲಾಧಿಕಾರಿಗಳು ನಗರಸಭೆಯ ಆಡಳಿತಾಧಿಕಾರಿಯಾಗಿ ಹಿಂದೂ ಸಂಪ್ರದಾಯದಂತೆ ಕೇಸರಿ ಧ್ವಜ ನಿಶಾನೆ ತೋರುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದ್ದಕ್ಕೆ ಜಿಲ್ಲಾಧಿಕಾರಿಗಳನ್ನು ಅಮಾನತುಗೊಳಿಸುವಂತೆ ಉಡುಪಿ ಕಾಂಗ್ರೆಸ್ ಪಕ್ಷವು ಸರ್ಕಾರಕ್ಕೆ ಮನವಿ ಮಾಡಿಕೊಂಡಿರುವುದು ಕಾಂಗ್ರೆಸ್ಸಿನ ಹಿಂದೂ ವಿರೋಧಿ ನೀತಿಗೆ ಹಿಡಿದ ಕೈಗನ್ನಡಿಯಾಗಿದೆ ಎಂದು ಬಿಜೆಪಿ ಆರೋಪಿಸಿದೆ. ಕಾಂಗ್ರೆಸ್ ಪಕ್ಷವು ತನ್ನ ಓಲೈಕೆ ರಾಜಕಾರಣಕ್ಕಾಗಿ ಬಹುಸಂಖ್ಯಾತ ಹಿಂದೂಗಳ ಪ್ರತಿ ಆಚರಣೆಗಳಿಗೆ ನಿರಂತರ ಅಡ್ಡಗಾಲು ಹಾಕುತ್ತಿದೆ ಎಂದು ಬಿಜೆಪಿ ಆರೋಪ ಮಾಡಿದೆ. ಉಡುಪಿ ಜಿಲ್ಲಾ ಕಾಂಗ್ರೆಸ್ ನಾಯಕರು ಸಿಎಂಗೆ ಬರೆದಿದ್ದಾರೆ ಎನ್ನಲಾದ ಪತ್ರದ ಪ್ರತಿಯನ್ನು ಸಾಮಾಜಿಕ ಮಾಧ್ಯಮ X ನಲ್ಲಿ ಹಂಚಿಕೊಂಡಿರುವ ಬಿಜೆಪಿ,…
ರಾಯಚೂರು ಬಳಿ ಭೀಕರ ಅಪಘಾತ; ಐವರು ದುರ್ಮರಣ
ರಾಯಚೂರು: ಸಿಂಧನೂರು ತಾಲೂಕಿನ ಕನ್ನಾರಿ ಕ್ರಾಸ್ ಬಳಿ ಲಾರಿ ಹಾಗೂ ಎರಡು ಗೂಡ್ಸ್ ವಾಹನಗಳ ನಡುವೆ ಸರಣಿ ಅಪಘಾತ ಸಂಭವಿಸಿದೆ. ಮಂಗಳವಾರ ಸಂಜೆ ಸಂಭವಿಸಿದ ಈ ಅಪಘಾತದಲ್ಲಿ ಐವರು ಮೃತಪಟ್ಟಿದ್ದಾರೆ. ಕುರಿ ಸಾಗಿಸುತ್ತಿದ್ದ ಬೊಲೆರೊ ಪಿಕಪ್ ವಾಹನ ಹಾಗೂ ಟಾಟಾ ಏಸ್ ಗೆ ನಡುವೆ ಡಿಕ್ಕಿ ಸಂಭವಿಸಿದೆ. ಈ ಭೀಕರ ಸರಣಿ ಅಪಘಾತದಲ್ಲಿ ಐವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಇಬ್ಬರು ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಾಗಿದ್ದಾರೆ.
ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷರಾಗಿ ಅರಣ್ಯ ಸಚಿವ ಈಶ್ವರ ಬಿ ಖಂಡ್ರೆ ಆಯ್ಕೆ
ಬೆಂಗಳೂರು: ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷರಾಗಿ ಅರಣ್ಯ ಸಚಿವ ಈಶ್ವರ ಬಿ ಖಂಡ್ರೆ ಆಯ್ಕೆಯಾಗಿದ್ದಾರೆ. ಮಾಜಿ ಸಚಿವ ಶಾಮನೂರು ಶಿವಶಂಕರಪ್ಪ ಅವರ ನಿಧನದಿಂದ ತೆರವಾಗಿದ್ದ ಸ್ಥಾನಕ್ಕೆ ವೀರಶೈವ ಲಿಂಗಾಯತ ಮಹಾಸಭಾದ ಮಹಾ ಪ್ರಧಾನ ಕಾರ್ಯದರ್ಶಿಯಾಗಿರುವ ಈಶ್ವರ ಬಿ ಖಂಡ್ರೆ ಅವರನ್ನು ಆಯ್ಕೆ ಮಾಡಲಾಗಿದೆ. ಮಂಗಳವಾರ ಬೆಂಗಳೂರಿನಲ್ಲಿ ನಡೆದ ಸಭಾದ ಕಾರ್ಯಕಾರಿಣಿ ಸಭೆಯಲ್ಲಿ ಈ ಬಗ್ಗೆ ನಿರ್ಣಯ ಕೈಗೊಳ್ಳಲಾಯಿತು ಎಂದು ಸಭಾದ ರಾಜ್ಯಾಧ್ಯಕ್ಷ ಶಂಕರ ಎಂ ಬಿದರಿ ಅವರು ತಿಳಿಸಿದ್ದಾರೆ.
‘ನಾನು ಜೆಡಿಎಸ್‌ನಲ್ಲಿಯೇ ಇದ್ದೇನೆ. ಎಲ್ಲಿಯೂ ಹೋಗುವುದಿಲ್ಲ’: ಜಿ.ಟಿ. ದೇವೇಗೌಡ
ಮೈಸೂರು: ರಾಜ್ಯ ಕಾಂಗ್ರೆಸ್‌ನಲ್ಲಿ ದಿನಕ್ಕೊಂದು ರಾಜಕೀಯ ಬೆಳವಣಿಗೆ ನಡೆಯುತ್ತಿರುವ ನಡುವೆ, ಜೆಡಿಎಸ್‌ನಲ್ಲೂ ಚರ್ಚೆಗಳು ತೀವ್ರಗೊಂಡಿವೆ. ಈ ಹಿನ್ನೆಲೆಯಲ್ಲಿ ಚಾಮುಂಡೇಶ್ವರಿ ಕ್ಷೇತ್ರದ ಶಾಸಕ ಜಿ.ಟಿ. ದೇವೇಗೌಡ ಅವರು ತಮ್ಮ ಪಕ್ಷ ನಿಷ್ಠೆಯನ್ನು ಸ್ಪಷ್ಟಪಡಿಸಿದ್ದು, “ನಾನು ಜೆಡಿಎಸ್‌ನಲ್ಲಿಯೇ ಇದ್ದೇನೆ. ಎಲ್ಲಿಯೂ ಹೋಗುವುದಿಲ್ಲ. ಮುಂದಿನ ಚುನಾವಣೆಯಲ್ಲೂ ಜೆಡಿಎಸ್‌ನಿಂದಲೇ ಸ್ಪರ್ಧಿಸುತ್ತೇನೆ” ಎಂದು ಹೇಳಿದ್ದಾರೆ. ನಾನು ಯಾವುದೇ ನಾಯಕರಿಗೂ ದ್ರೋಹ ಮಾಡಿಲ್ಲ ಎಂದು ಸ್ಪಷ್ಟಪಡಿಸಿದ ಅವರು, ಐದು ಬಾರಿ ಶಾಸಕನಾಗಿ ಆಯ್ಕೆಯಾಗಿದ್ದೇನೆ. ಇದರಲ್ಲಿ ಎರಡು ಬಾರಿ ಹುಣಸೂರು ಕ್ಷೇತ್ರದಿಂದ ಹಾಗೂ ಮೂರು ಬಾರಿ ಚಾಮುಂಡೇಶ್ವರಿ ಕ್ಷೇತ್ರದಿಂದ ಗೆಲುವು ಸಾಧಿಸಿದ್ದೇನೆ. ಜೆಡಿಎಸ್ ಪಕ್ಷದ ಸಂಘಟನೆಗಾಗಿ ಅನೇಕ ಕಾರ್ಯಕ್ರಮಗಳನ್ನು ನಡೆಸಿದ್ದು, ಈಗಲೂ ಪಕ್ಷದಿಂದ ದೂರ ಉಳಿದಿಲ್ಲ ಎಂದು ಹೇಳಿದರು. ಯಾರನ್ನೂ ಟೀಕಿಸದೆ, ಕ್ಷೇತ್ರದ ಅಭಿವೃದ್ಧಿ ಕೆಲಸಗಳಲ್ಲಿಯೇ ತೊಡಗಿಸಿಕೊಂಡಿದ್ದೇನೆ. ಜೆಡಿಎಸ್ ಪಕ್ಷವನ್ನು ಕಟ್ಟುವಲ್ಲಿ ನಾನು ವಹಿಸಿದ ಪಾತ್ರದ ಬಗ್ಗೆ ಹಿರಿಯ ನಾಯಕ ಹೆಚ್.ಡಿ. ದೇವೇಗೌಡ ಹಾಗೂ ಮಾಜಿ ಮುಖ್ಯಮಂತ್ರಿ…
ಎಐಸಿಐಸಿ ಹೋರಾಟಕ್ಕೆ ರಾಜ್ಯದ ಸಾಥ್.. ಮಂಗಳೂರಿನಲ್ಲಿ ಮೊದಲ ಲೀಗಲ್ ಬ್ಯಾಂಕ್ ಅಸ್ತಿತ್ವಕ್ಕೆ
ಮಂಗಳೂರು: ಪ್ರದೇಶ ಕಾಂಗ್ರೆಸ್ ಪಕ್ಷ ಇದೀಗ ಹೊಸ ಮನ್ವಂತರಕ್ಕೆ ಮುನ್ನುಡಿ ಬರೆದಿದೆ. ಕೇಂದ್ರದ ವಿರುದ್ಧ ‘ಓಟ್ ಚೋರಿ’ ಅಭಿಯಾನವನ್ನು ಬಿರುಸುಗೊಳಿಸಿರುವ ಕಾಂಗ್ರೆಸ್ ಪಕ್ಷ ಇದೀಗ ತನ್ನ ಈ ಹೋರಾಟವನ್ನು ಚುರುಕುಗೊಳಿಸಲು ‘ಲೀಗಲ್ ಬ್ಯಾಂಕ್’ ಅಸ್ತಿತ್ವಕ್ಕೆ ತಂದಿದೆ. ಲೋಕಸಭೆಯ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಅವರ ಪರಿಕಲ್ಪನೆಯಂತೆ ಕರ್ನಾಟಕದಲ್ಲಿ ‘ಲೀಗಲ್ ಬ್ಯಾಂಕ್’ ಅಸ್ತಿತ್ವಕ್ಕೆ ಬಂದಿದೆ. ಪಕ್ಷ ಸಂಘಟನೆಗೆ ಕಾನೂನು ಶಕ್ತಿ ತುಂಬುವ ಉದ್ದೇಶದಿಂದ ಈ ವ್ಯವಸ್ಥೆಯನ್ನು ಆರಂಭಿಸಲಾಗಿದ್ದು, ದಕ್ಷಿಣ ಭಾರತದಲ್ಲೇ ಮೊದಲೆಂಬಂತೆ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಘಟಕ ಈ ‘ಲೀಗಲ್ ಬ್ಯಾಂಕ್’ ಸ್ಥಾಪಿಸಿ ಗಮನಸೆಳೆದಿದೆ. ಸುಮಾರು 250 ವಕೀಲರ ತಂಡ ಈ ‘ಲೀಗಲ್ ಬ್ಯಾಂಕ್’ ನಲ್ಲಿ ಕೈಜೋಡಿಸಿರುವುದು ವಿಶೇಷ. ಕೇಂದ್ರದ ವಿರುದ್ಧ ಪರಿಣಾಮಕಾರಿ ಹೋರಾಟ ನಡೆಸಲು ಅನುಕೂಲವಾಗುವಂತೆ ಎಲ್ಲಾ ಪ್ರಾದೇಶಿಕ ಸಮಿತಿಗಳು (PCC) ಹಾಗೂ ಜಿಲ್ಲಾ ಸಮಿತಿ (PCC), ಪ್ರತೀ ವಿಧಾನಸಭಾ ಕ್ಷೇತ್ರಗಳಲ್ಲಿ ‘ಲೀಗಲ್ ಬ್ಯಾಂಕ್’ ಸ್ಥಾಪಿಸಬೇಕೆಂಬುದು…
