ಬೆಂಗಳೂರು: ಅಪರೂಪದ ಮತ್ತು ಭಾರಿ ಸಮಸ್ಯೆಗಳಲ್ಲಿ ಬೆನ್ನು ಮೂಳೆ ಸ್ನಾಯು ಕ್ಷೀಣತೆಯೂ ಒಂದು, ಇದರಿಂದ ಬಳಲುತ್ತಿರುವವರಿಗೆ ಉತ್ತಮ ಚಿಕಿತ್ಸೆ ಒದಗಿಸುವ ಮೂಲಕ ಪರಿವರ್ತಕ ಆರೋಗ್ಯ ಚಿಕಿತ್ಸಾ ವಿಧಾನವನ್ನು ಹಾಗೂ ಉಚಿತ ಔಷಧವನ್ನು ವಿತರಿಸುವ ಮೂಲಕ ಸಮಾಜ ಸುರಕ್ಷತೆಗೆ ಆದ್ಯತೆ ನೀಡುತ್ತಿರುವುದು ಸ್ವಾಗತಾರ್ಹ ಎಂದು ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಸಚಿವ ಡಾ.ಶರಣ ಪ್ರಕಾಶ್ ಪಾಟೀಲ್ ಅವರು ತಿಳಿಸಿದ್ದಾರೆ. ಬೆಂಗಳೂರಿನ ಖಾಸಗಿ ಹೋಟೆಲಿನಲ್ಲಿ ಕೇರ್ ಅಂಡ್ ಪ್ರೊಟೆಕ್ಷನ್ ಆಫ್ ಚಿಲ್ಡ್ರನ್ ಟ್ರಸ್ಟ್ ಆಯೋಜಿಸಿದ್ದ ಬೆನ್ನುಮೂಳೆಯ ಸ್ನಾಯು ಕ್ಷೀಣತೆಯಿಂದ ಬಳಲುತ್ತಿರುವವರಿಗೆ ಉಚಿತ ಔಷಧ ನೀಡುವ ವಿಶೇಷ ಕಾರ್ಯಕ್ರಮ ಉದ್ಘಾಟನೆ ನೆರವೇರಿಸಿ ಸಚಿವರು ಮಾತನಾಡಿದರು. ಬೆನ್ನುಮೂಳೆಯ ಸ್ನಾಯು ಕ್ಷೀಣತೆಯಂಥ ಅಪರೂಪದ ಹಾಗೂ ಭಾರಿ ಅಪಾಯ ತಂದೊಡ್ಡುವ ರೋಗಗಳನ್ನು ನಿಯಂತ್ರಿಸುವುದಕ್ಕೆ ನಮ್ಮ ಸರ್ಕಾರ ಒತ್ತು ನೀಡುತ್ತಿದೆ. ಈ ರೀತಿಯ ಚಿಕಿತ್ಸಾ ವ್ಯವಸ್ಥೆಗಳು ಅಗಾಧವಾದ ಪ್ರಭಾವವನ್ನು ಬೀರುತ್ತವೆ. ಪ್ರಸವಪೂರ್ವ ರೋಗನಿರ್ಣಯ, ಆರಂಭಿಕ…
Category: ಪ್ರಮುಖ ಸುದ್ದಿ
ಸಿದ್ದು ಸರ್ಕಾರ ಉರುಳಿಸಲು ಶಾಸಕರಿಗೆ 59 ಕೋ.ರೂ.ಆಮಿಷ ಆರೋಪ; ತನಿಖೆಗೆ ಹಿಂದೇಟು ಯಾಕೆ ಎಂದು ವಿಜಯೇಂದ್ರ ಪ್ರಶ್ನೆ
ಬೆಂಗಳೂರು: ಶಾಸಕರಿಗೆ ಬಿಜೆಪಿ ನಾಯಕರು 50 ಕೋಟಿ ರೂ ಆಮಿಷ ಒಡ್ಡಿದ್ದಾರೆ ಎಂಬ ಸಿಎಂ ಸಿದ್ದರಾಮಯ್ಯ ಮಾಡಿರುವ ಆರೋಪ ರಾಜ್ಯ ರಾಜಕಾರಣದಲ್ಲಿ ಕೋಲಾಹಲ ಎಬ್ಬಿಸಿದೆ. ಇದೇ ವೇಳೆ ಸಿಎಂ ಮಾಡಿರುವ ಆರೋಪ ಬಗ್ಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ತೀಕ್ಷ್ಣ ಪ್ರತಿಕ್ರಿಯೆ ನೀಡಿದ್ದಾರೆ. 50 ಕೋಟಿ ರೂ ಆಮಿಷ ಬಗ್ಗೆ ತನಿಖೆ ನಡೆಸುವಂತೆ ವಿಜಯೇಂದ್ರ ಅವರು ಸರ್ಕಾರವನ್ನು ಒತ್ತಾಯಿಸಿದ್ದಾರೆ. ರಾಜ್ಯದಲ್ಲಿ ನಿಮ್ಮದೇ ಸರ್ಕಾರವಿದೆ, ನಿಮ್ಮದೇ ತನಿಖಾ ಸಂಸ್ಥೆಗಳಿವೆ, 50 ಕೋಟಿ ರೂಪಾಯಿ ಆಮಿಷದ ಮೂಲ ಯಾವುದು ಎಂಬುದನ್ನು ತನಿಖೆ ನಡೆಸಿ ಬಹಿರಂಗಪಡಿಸಿ ಎಂದು ವಿಜಯೇಂದ್ರ ಅವರು ಕಾಂಗ್ರೆಸ್ ನಾಯಕರಿಗೂ ಸಲಹೆ ಎದಿರೇಟು ನೀಡಿದ್ದಾರೆ. ಸರ್ಕಾರ ಉರುಳಿಸಲು 50 ಕಾಂಗ್ರೆಸ್ ಶಾಸಕರಿಗೆ ತಲಾ 50 ಕೋಟಿ ರೂಪಾಯಿ ಆಮಿಷ ನೀಡಲಾಗಿದೆ ಎಂಬ ಸಿದ್ದರಾಮಯ್ಯ ಅವರ ಆರೋಪ ನಿರಾಧಾರ ಎಂದು ವಿಜಯೇಂದ್ರ ಹೇಳಿದ್ದಾರೆ.
ಕೋವಿಡ್ ವರದಿಯನ್ನು ಸದನದಲ್ಲಿ ಬಿಡುಗಡೆ ಮಾಡಲಿ; ಸರ್ಕಾರಕ್ಕೆ ಅಶೋಕ್ ಟಾಂಗ್
ಬೆಂಗಳೂರು: ಕೋವಿಡ್ ವರದಿಯನ್ನು ಸದನದಲ್ಲಿ ಬಿಡುಗಡೆ ಮಾಡಲಿ ಎಂದು ರಾಜ್ಯ ಸರ್ಕಾರಕ್ಕೆವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್.ಅಶೋಕ್ ಟಾಂಗ್ ನೀಡಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಸರ್ಕಾರದ ಕಾರ್ಯವೈಖರಿ ಬಗ್ಗೆ ಕಿಡಿ ಕಾರಿದರು. ಅಬಕಾರಿ ಇಲಾಖೆಯಲ್ಲಿ ಹಗರಣ ಹಾಗೂ ವಕ್ಫ್ ಭೂ ಕಬಳಿಕೆ ಮುಂದುವರಿದಿದೆ. ಅಬಕಾರಿ ಇಲಾಖೆಯ ಹಗರಣದ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಮಾತಾಡಿದ್ದಾರೆ. ಇದನ್ನು ಸಿಬಿಐ ತನಿಖೆಗೆ ವಹಿಸುವುದು ಸೂಕ್ತ. ಕೋವಿಡ್ ತನಿಖೆಯ ಭಾಗ 1 ಮಾತ್ರ ಬಂದಿದೆ. ನ್ಯಾ.ಕೆಂಪಣ್ಣ ಆಯೋಗದ ಭಾಗ 1 ಕೂಡ ಬಂದಿಲ್ಲ. ಅದರ ವರದಿ ಸಂಪೂರ್ಣವಾಗಿ ಹೊರಬರಲಿ ಎಂದರು. ಕೋವಿಡ್ ಇಡೀ ಜಗತ್ತಿನಲ್ಲಿತ್ತು. ಆಗ ಯಾವ ಸರಕು ಯಾವ ದರದಲ್ಲಿತ್ತು ಎಂಬುದನ್ನು ಮೊದಲು ತಿಳಿಸಲಿ. ಎಲ್ಲ ರಾಜ್ಯದಲ್ಲಿ ಕಿಟ್ಗಳನ್ನು ಎಷ್ಟು ದರಕ್ಕೆ ಖರೀದಿ ಮಾಡಲಾಗಿದೆ ಎಂದು ತಿಳಿಸಲಿ. ತುರ್ತು ಖರೀದಿ ಮಾಡದೆ 60 ದಿನಗಳ ಟೆಂಡರ್ಗೆ ಕಾದುಕೊಂಡು ಕೂತಿದ್ದರೆ ಎಲ್ಲವೂ…
ಮಕ್ಕಳಿಗಾಗಿ ಕಾಂಗ್ರೆಸ್ ಪಕ್ಷದಿಂದ ನೂತನ ಘಟಕ; ಡಿಕೆಶಿ
ಬೆಂಗಳೂರು: ದೇಶದ ನಿರ್ಮಾಣಕ್ಕಾಗಿ ಮಾಜಿ ಪ್ರಧಾನಿ ಜವಾಹರ್ ಲಾಲ್ ನೆಹರೂ ಅವರು ಹಾಕಿರುವ ಭದ್ರ ಬುನಾದಿಗೆ ಬೆಂಗಳೂರು ಸಾಕ್ಷಿ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ಕೆಪಿಸಿಸಿ ಕಚೇರಿಯ ಭಾರತ ಜೋಡೋ ಭವನದಲ್ಲಿ ಗುರುವಾರ ನಡೆದ ಜವಾಹರ್ ಲಾಲ್ ನೆಹರೂ ಜಯಂತಿ ಹಾಗೂ ಮಕ್ಕಳ ದಿನಾಚರಣೆ ಕಾರ್ಯಕ್ರಮದಲ್ಲಿ ಶಿವಕುಮಾರ್ ಅವರು ಮಾತನಾಡಿ, ನೆಹರೂ ಅವರ ಕೊಡುಗೆ ಹಾಗೂ ಮಕ್ಕಳ ಏಳಿಗೆಗೆ ಕಾಂಗ್ರೆಸ್ ಪಕ್ಷದ ಕೊಡುಗೆಗಳನ್ನು ಸ್ಮರಿಸಿದರು. “ನೆಹರೂ ಅವರು ಬೆಂಗಳೂರಿನಲ್ಲಿ ಸಾರ್ವಜನಿಕ ಉದ್ದಿಮೆಗಳು ಹೆಚ್ಎಎಲ್, ಐಟಿಐ, ಬಿಇಎಂಎಲ್, ಬಿಇಎಲ್, ಇಸ್ರೋ ಸೇರಿದಂತೆ ಅನೇಕ ಉದ್ದಿಮೆಗಳು ಆರಂಭಿಸಿದರು. ಇಲ್ಲಿರುವ ಮಾನವ ಸಂಪನ್ಮೂಲ, ಗುಣಮಟ್ಟದ ಶಿಕ್ಷಣದ ಮೇಲೆ ವಿಶೇಷ ಆದ್ಯತೆ ನೀಡಿದರು. ಅವರು ಹಾಕಿಕೊಟ್ಟ ಅಡಿಪಾಯದಲ್ಲಿ ನಾವು ಇಂದು ಈ ದೇಶ ಕಟ್ಟುತ್ತಿದ್ದೇವೆ ಎಂದರು. ಮಕ್ಕಳಿಗೆ ಶಿಕ್ಷಣ ಸಿಗಬೇಕು, ಮಕ್ಕಳು ಶಾಲೆಯಿಂದ ವಿಮುಖರಾಗಬಾರದು ಎಂದು ಎಸ್ ಎಂ ಕೃಷ್ಣ ಅವರ…
ರಾಜ್ಯದಿಂದ ವೈಷ್ಣೋದೇವಿ ಯಾತ್ರೆಗೆ ತೆರಳುವ ಆಸ್ತಿಕರಿಗೆ ರಾಜ್ಯ ಸರ್ಕಾರದ ಬಂಪರ್ ನೆರವು: ಭಾರೀ ಮೊತ್ತದ ಸಹಾಯ ಧನ ಘೋಷಣೆ
ಬೆಂಗಳೂರು: ರಾಜ್ಯದಿಂದ ವೈಷ್ಣೋದೇವಿ ಯಾತ್ರೆಗೆ ತೆರಳುವ ಆಸ್ತಿಕರಿಗೆ ರಾಜ್ಯ ಸರ್ಕಾರ ಬಂಪರ್ ನೆರವು ಪ್ರಕಟಿಸಿದೆ. ವೈಷ್ಟೋದೇವಿಗೆ ಭೇಟಿ ನೀಡುವ ಯಾತ್ರಾರ್ಥಿಗಳಿಗೆ ಸಹಾಯ ಧನವನ್ನು ಸರ್ಕಾರ ಘೋಷಿಸಿದೆ. ಸಾರಿಗೆ ಹಾಗೂ ಮುಜರಾಯಿ ಸಚಿವರ ಅಧ್ಯಕ್ಷತೆಯಲ್ಲಿ ನಡೆದ ಕರ್ನಾಟಕ ರಾಜ್ಯ ಧಾರ್ಮಿಕ ಪರಿಷತ್ತಿನಲ್ಲಿ ವೈಷ್ಟೋದೇವಿಗೆ ಭೇಟಿ ನೀಡುವ ಯಾತ್ರಾರ್ಥಿಗಳಿಗೆ ಸಹಾಯ ಧನ ನೀಡುವ ತೀರ್ಮಾನವನ್ನು ಪ್ರಕಟಿಸಾಲಗಿದೆ. 13-11-2024 ರಂದು ಮುಜರಾಯಿ ಸಚಿವರ ಅಧ್ಯಕ್ಷತೆಯಲ್ಲಿ ನಡೆದ ಕರ್ನಾಟಕ ರಾಜ್ಯ ಧಾರ್ಮಿಕ ಪರಿಷತ್ತಿನಲ್ಲಿ ಹಲವು ಮಹತ್ವದ ನಿರ್ಣಯಗಳನ್ನು ಕೈಗೊಳ್ಳಲಾಗಿದೆ. ವೈಷ್ಟೋದೇವಿಗೆ ಭೇಟಿ ನೀಡುವ ಕರ್ನಾಟಕ ರಾಜ್ಯದ ಯಾತ್ರಾರ್ಥಿಗಳಿಗೆ ತಲಾ ರೂ.5000 ಸಹಾಯ ಧನ ನೀಡಲು ತೀರ್ಮಾನಿಸಲಾಯಿತು. ಸರ್ಕಾರದ ಬಹುಮಹಡಿಗಳ ಕಟ್ಟಡದ ಎದುರು ಇರುವ ಮುಜರಾಯಿ ಇಲಾಖೆಗೆ ಸೇರಿದ 3/4 ಎಕರೆ ಜಾಗದಲ್ಲಿ ರೂ. 10 ಕೋಟಿ ವೆಚ್ಚದಲ್ಲಿ ಧಾರ್ಮಿಕ ಸೌಧ ನಿರ್ಮಿಸಲು ತೀರ್ಮಾನಿಸಲಾಯಿತು. 120 ವರುಷಗಳ ಹಳೆಯದಾದ ಮೈಸೂರಿನ ಸಂಸ್ಕೃತ ಮಹಾರಾಜ ಕಾಲೇಜಿನ…
ಧರ್ಮಾಧಾರಿತ ಮೀಸಲಾತಿಯನ್ನು ಅಂಬೇಡ್ಕರ್ ಕೂಡಾ ಖಂಡಿಸಿದ್ದರು; ಸಿದ್ದು ಸರ್ಕಾರಕ್ಕೆ ಸಿ.ಟಿ.ರವಿ ಚಾಟಿ
ನಮ್ಮ ದೇಶದಲ್ಲಿ ಜಾತಿಯ ಕಾರಣಕ್ಕೆ, ಆರ್ಥಿಕ ಕಾರಣಕ್ಕೆ ಮೀಸಲಾತಿ ನೀಡಲು ಅವಕಾಶವಿದೆ. ಮತ ಆಧಾರಿತವಾಗಿ ಮೀಸಲಾತಿ ನೀಡಲು ಅವಕಾಶವಿಲ್ಲ ಎಂದು ಬಿಜೆಪಿ ಶಾಸಕ ಸಿ.ಟಿ.ಟಿವಿ ಹೇಳಿದ್ದಾರೆ. ನಮ್ಮ ದೇಶದಲ್ಲಿ ಜಾತಿಯ ಕಾರಣಕ್ಕೆ, ಆರ್ಥಿಕ ಕಾರಣಕ್ಕೆ ಮೀಸಲಾತಿ ನೀಡಲು ಅವಕಾಶವಿದೆ. ಮತ ಆಧಾರಿತವಾಗಿ ಮೀಸಲಾತಿ ನೀಡಲು ಅವಕಾಶವಿಲ್ಲ. ಧರ್ಮಾಧಾರಿತ ಮೀಸಲಾತಿಯನ್ನು ಸಂವಿಧಾನ ರಚನಾ ಸಭೆಯಲ್ಲಿ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಖಡಾಖಂಡಿತವಾಗಿ ಖಂಡಿಸಿದ್ದರು. ಮತ ಆಧಾರಿತ ಮೀಸಲಾತಿ ಅಸಂವಿಧಾನಿಕವಾದದ್ದು, ಸಂವಿಧಾನಕ್ಕೆ ವಿರುದ್ಧವಾದುದು.… pic.twitter.com/Smp9JZdqGA — BJP Karnataka (@BJP4Karnataka) November 12, 2024 ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ರಾಜ್ಯಸರ್ಕಾರದ ಕಾರ್ಯವೈಖರಿ ಬಗ್ಗೆ ಕಟು ಟೀಕೆ ಮಾಡಿದರು. ಮುಸ್ಲಿಮರಿಗೆ ಕಾಮಗಾರಿ ಗುತ್ತಿಗೆಯಲ್ಲೂ ಮೀಸಲಾತಿ ಕಲ್ಪಿಸಲು ಮುಂದಾಗಿರುವ ಸಿದ್ದರಾಮಯ್ಯ ಸರ್ಕಾರದ ನಡೆಯನ್ನು ಖಂಡಿಸಿರುವ ಸಿ.ಟಿ.ರವಿ, ಧರ್ಮಾಧಾರಿತ ಮೀಸಲಾತಿಯನ್ನು ಸಂವಿಧಾನ ರಚನಾ ಸಭೆಯಲ್ಲಿ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರು…
ಶಿಗ್ಗಾವಿ: ಕಾಂಗ್ರೆಸ್ ಅಭ್ಯರ್ಥಿ ವಿರುದ್ಧ ಚುನಾವಣಾ ಆಯೋಗಕ್ಕೆ ಬಿಜೆಪಿ ದೂರು
ಹಾವೇರಿ: ಶಿಗ್ಗಾವಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಯಾಸೀರ್ ಖಾನ್ ಪಠಾಣ್ ವಿರುದ್ಧ ಚುನಾವಣಾ ಆಯೋಗಕ್ಕೆ ಬಿಜೆಪಿ ದೂರು ದಾಖಲಿಸಿದೆ. ಶಿಗ್ಗಾವಿ ವಿಧಾನಸಭೆ ಉಪ ಚುನಾವಣೆಗೆ ಮತದಾನ ನಡೆಯುವ ಮುನ್ನವೇ ಕಾಂಗ್ರೆಸ್ ಅಭ್ಯರ್ಥಿ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು ಸಲ್ಲಿಕೆಯಾಗಿರುವುದು ಅಚ್ಚರಿಯ ಬೆಳವಣಿಗೆಯಾಗಿದೆ. ಕಾಂಗ್ರೆಸ್ ಅಭ್ಯರ್ಥಿ ಯಾಸೀರ್ ಖಾನ್ ಪಠಾಣ್ ರೌಡಿ ಶೀಟ್ ಪ್ರಕರಣ ಇದ್ದು, ಆದರೆ ಅವರು ನಾಮಪತ್ರದ ಅಫಡವಿಟ್ ನಲ್ಲಿ ತಮ್ಮ ವಿರುದ್ಧ ಯಾವುದೇ ಕೇಸ್ ಗಳಿಲ್ಲ ಎಂದು ಘೋಷಿಸಿಕೊಂಡಿದ್ದಾರೆ ಎಂದು ಆರೋಪಿಸಿ ಬಿಜೆಪಿ ಚುನಾವಣಾ ಏಜೆಂಟ್ ಎಸ್ ಕೆ ಅಕ್ಕಿ ಅವರು ಮುಖ್ಯ ಚುನಾವಣಾ ಆಯುಕ್ತರಿಗೆ ಇ–ಮೇಲ್ ಮೂಲಕ ದೂರು ನೀಡಿದ್ದಾರೆ ಎನ್ನಲಾಗಿದೆ.
ಚನ್ನಪಟ್ಟಣ, ಶಿಗ್ಗಾವಿ ಹಾಗೂ ಸಂಡೂರು ಕ್ಷೇತ್ರಗಳಲ್ಲಿ ಉಪಚುನಾವಣೆ; 45 ಅಭ್ಯರ್ಥಿಗಳ ಭವಿಷ್ಯ ನಿರ್ಧಾರ
ಬೆಂಗಳೂರು: ತೀವ್ರ ಕುತೂಹಲ ಕೆರಳಿಸಿರುವ ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ ಮತದಾನ ಇಂದು ನಡೆಯುತ್ತಿದೆ. ಚನ್ನಪಟ್ಟಣ, ಶಿಗ್ಗಾವಿ ಹಾಗೂ ಸಂಡೂರು ಕ್ಷೇತ್ರಗಳಲ್ಲಿ ಉಪ ಚುನಾವಣೆ ನಡೆಯುತ್ತಿದ್ದು, 45 ಮಂದಿ ಅಭ್ಯರ್ಥಿಗಳ ಭವಿಷ್ಯ ನಿರ್ಧಾರವಾಗಲಿದ್ದು, ಮೂರು ಕ್ಷೇತ್ರಗಳಮತಗಳ ಎಣಿಕೆ ನವೆಂಬರ್ 23 ರಂದು ನಡೆಯಲಿದೆ. ಶಿಗ್ಗಾವಿಯಲ್ಲಿ ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಅವರ ರಾಜೀನಾಮೆಯಿಂದ ತೆರವಾದ ಸ್ಥಾನಕ್ಕೆ ಚುನಾವಣಾ ಏರ್ಪಟ್ಟಿದೆ. ಚನ್ನಪಟ್ಟಣದಲ್ಲಿ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ರಾಜೀನಾಮೆ ನಂತರ ಇದೀಗ ಉಪಚುನಾವಣೆ ಘೋಷಣೆಯಾಗಿದೆ. ಸಂಡೂರಿನಲ್ಲಿ ತುಕಾರಾಮ್ ಸಂಸದರಾಗಿ ಆಯ್ಕೆಯಾದ ಹಿನ್ನೆಲೆ ಅವರು ಪ್ರತಿನಿಧಿಸುತ್ತಿರುವ ಕ್ಷೇತ್ರದಲ್ಲಿ ಉಪಚುನಾವಣೆ ನಡೆಯುತ್ತಿದೆ. ಚನ್ನಪಟ್ಟಣದಲ್ಲಿ ಎನ್ಡಿಎ ಮೈತ್ರಿ ಅಭ್ಯರ್ಥಿಯಾಗಿ ನಿಖಿಲ್ ಕುಮಾರಸ್ವಾಮಿ, ಕಾಂಗ್ರೆಸ್ ಪಕ್ಷದಿಂದ ಸಿ.ಪಿ.ಯೋಗೇಶ್ವರ್ ಸೇರಿದಂತೆ 31 ಮಂದಿ ಕಣದಲ್ಲಿದ್ದಾರೆ. ಶಿಗ್ಗಾಂವಿ ಕ್ಷೇತ್ರದಲ್ಲಿ ಬಿಜೆಪಿ ಹುರಿಯಲಾಗಿ ಭರತ್ ಬೊಮ್ಮಾಯಿ, ಕಾಂಗ್ರೆಸ್ನಿಂದ ಪಠಾಣ್ ಯಾಸೀರ್ ಅಹ್ಮದ್ಖಾನ್ ಸೇರಿದಂತೆ 8 ಅಭ್ಯರ್ಥಿಗಳಿದ್ದಾರೆ. ಸಂಡೂರು ವಿಧಾನಸಭಾ…
ರಾಜ್ಯದ 25ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ; ಹವಾಮಾನ ಇಲಾಖೆ ಮುನ್ಸೂಚನೆ
ಬೆಂಗಳೂರು : ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ 25ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆಯಾಗಲಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ರಾಮನಗರ, ತುಮಕೂರು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಗಳಿವೆ. ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ವಿಜಯಪುರ, ಯಾದಗಿರಿ, ವಿಜಯನಗರದಲ್ಲಿ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
DRDO ಮತ್ತೊಂದು ಯಶೋಗಾಥೆ: ಲಾಂಗ್ ರೇಂಜ್ ಲ್ಯಾಂಡ್ ಅಟ್ಯಾಕ್ ಕ್ರೂಸ್ ಕ್ಷಿಪಣಿ ಪರೀಕ್ಷೆ ಯಶಸ್ವಿ
ನವದೆಹಲಿ: ದೇಶದ ಪ್ರತಿಷ್ಠಿತ ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ (DRDO) ಮತ್ತೊಂದು ಮಹತ್ವದ ಸಾಧನೆ ಮಾಡಿದೆ. ಲಾಂಗ್ ರೇಂಜ್ ಲ್ಯಾಂಡ್ ಅಟ್ಯಾಕ್ ಕ್ರೂಸ್ ಕ್ಷಿಪಣಿಯ ಪರೀಕ್ಷೆಯನ್ನು ಯಶಸ್ವಿಯಾಗಿ ಮಾಡಿದೆ. LRLACM ಒಡಿಶಾದ ಚಂಡೀಪುರ ಪರೀಕ್ಷಾ ಕೇಂದ್ರದಿಂದ (ಮೊಬೈಲ್ ಆರ್ಟಿಕ್ಯುಲೇಟೆಡ್ ಲಾಂಚರ್ನಿಂದ) ಪರೀಕ್ಷಿಸಲಾಗಿದ್ದು ಈ ಪರೀಕ್ಷೆ ಯಶಸ್ವಿಯಾಗಿದೆ ಎಂದು ಇಸ್ರೋ ತಿಳಿಸಿದೆ. ದೀರ್ಘ ಶ್ರೇಣಿಗಳಲ್ಲಿ ನೆಲ ಆಧಾರಿತ ಗುರಿಗಳನ್ನು ಹೊಡೆಯಲು ನಿಖರವಾದ ಸ್ಟ್ರೈಕ್ ಸಾಮರ್ಥ್ಯಕ್ಕಾಗಿ LRLACM ಅನ್ನು ವಿಶಿಷ್ಟವಾಗಿ ವಿನ್ಯಾಸಗೊಳಿಸಲಾಗಿದೆ. Maiden flight-test of Long Range Land Attack Cruise Missile (LRLACM) was conducted today from the Integrated Test Range (ITR), Chandipur off the coast of Odisha. During the test, all sub-systems performed as per expectation and met the primary mission objectives…