ಕರಾವಳಿ, ಮಲೆನಾಡಿನಲ್ಲಿ ಭಾರಿ ಮಳೆ ಮುನ್ಸೂಚನೆ, ಯೆಲ್ಲೋ ಅಲರ್ಟ್

ಬೆಂಗಳೂರು: ಕರ್ನಾಟಕದಲ್ಲಿ ಮಾನ್ಸೂನ್ ಮಳೆ ಮತ್ತಷ್ಟು ಚುರುಕಾಗಿದ್ದು, ರಾಜ್ಯದ ವಿವಿಧ ಭಾಗಗಳಲ್ಲಿ ಬಿರುಗಾಳಿ ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ವಿಶೇಷವಾಗಿ ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ಬಲವಾದ ಗಾಳಿ ಬೀಸುವ ಸಾಧ್ಯತೆಯಿದ್ದು, ಜನರು ಎಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ. ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಗಂಟೆಗೆ 30ರಿಂದ 40 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ನಿರೀಕ್ಷೆಯಿರುವುದರಿಂದ ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ. ಮೀನುಗಾರರು ಹಾಗೂ ಕರಾವಳಿ ನಿವಾಸಿಗಳು ಮುನ್ನೆಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ. ದಕ್ಷಿಣ ಒಳನಾಡಿನ ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಗಳ ಕೆಲವೆಡೆ ಕೂಡ 30ರಿಂದ 40 ಕಿ.ಮೀ ವೇಗದ ಗಾಳಿಯೊಂದಿಗೆ ಭಾರಿ ಮಳೆಯಾಗುವ ಸಾಧ್ಯತೆಯಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಉಳಿದಂತೆ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮಂಡ್ಯ, ಮೈಸೂರು, ರಾಮನಗರ,…

ಕರ್ನಾಟಕ ಜಾಗತಿಕ ಸಂಶೋಧನೆ, ಕೌಶಲ್ಯದ ತವರೂರು: ಡಿಕೆಶಿ

ಬೆಂಗಳೂರು: ಕರ್ನಾಟಕವು ಜಾಗತಿಕ ಸಂಶೋಧನೆ ಮತ್ತು ಕೌಶಲ್ಯದ ತವರೂರಾಗಬೇಕು ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಕರೆ ನೀಡಿದರು. ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ನಡೆದ ವಿಶ್ವ ಯುವ ಕೌಶಲ್ಯ ದಿನಾಚರಣೆ ಉದ್ಘಾಟಿಸಿ ಮಾತನಾಡಿದ ಅವರು, ವಿದ್ಯೆಯೊಂದಿಗೆ ಕೌಶಲ್ಯ ಹೊಂದಿರುವುದು ಜೀವನದಲ್ಲಿ ಯಶಸ್ಸು ಸಾಧಿಸಲು ಅತ್ಯಂತ ಮುಖ್ಯ ಎಂದರು. “ನೃಪರಪಹರಿಸದ, ದಾಯಾದಿ ದಕ್ಕಿಸದ, ನೀರಿನಲ್ಲಿ ನೆನೆಯದ, ಅಗ್ನಿಯಲ್ಲಿ ಸುಡದ ಗುಪ್ತ ನಿಧಿ ಕೌಶಲ್ಯ ವಿದ್ಯೆ. ಅಧಿಕಾರ ಕೊನೆಯಾಗಬಹುದು. ಆದರೆ ಕೌಶಲ್ಯ ಮತ್ತು ವಿದ್ಯೆಯನ್ನು ಯಾರೂ ಕದಿಯಲು ಸಾಧ್ಯವಿಲ್ಲ” ಎಂದು ಹೇಳಿದರು. ಪ್ರತಿಯೊಬ್ಬರಲ್ಲೂ ಒಂದಲ್ಲ ಒಂದು ಕೌಶಲ್ಯವಿದೆ. ಅಕ್ಕಸಾಲಿಗ, ಮರಗೆಲಸ ಸೇರಿದಂತೆ ಪ್ರತಿಯೊಂದು ವೃತ್ತಿಯಲ್ಲೂ ಕೌಶಲ್ಯ ಅಡಗಿದೆ. ಆಧುನಿಕ ತಂತ್ರಜ್ಞಾನವಿಲ್ಲದ ಕಾಲದಲ್ಲಿಯೇ ಖೈದಿಗಳ ಕೌಶಲ್ಯ ಬಳಸಿಕೊಂಡು ವಿಧಾನಸೌಧದಂತಹ ಭವ್ಯ ಕಟ್ಟಡ ನಿರ್ಮಿಸಲಾಗಿದೆ ಎಂದು ತಿಳಿಸಿದರು. ಬೆಂಗಳೂರು ಜಾಗತಿಕ ಐಟಿ ಶಕ್ತಿಯಾಗಿ ಬೆಳೆದಿದ್ದು, ಕ್ಯಾಲಿಫೋರ್ನಿಯಾದಲ್ಲಿ 13 ಲಕ್ಷ ಐಟಿ ಎಂಜಿನಿಯರ್‌ಗಳಿದ್ದರೆ ಬೆಂಗಳೂರಿನಲ್ಲಿ ಸುಮಾರು…

RRBಗಳ ಸಾಲ ವಿತರಣೆ ಶೇ.10.3ರಷ್ಟು ಹೆಚ್ಚಳ; ₹5.78 ಲಕ್ಷ ಕೋಟಿಗೆ ಏರಿಕೆ

ನವದೆಹಲಿ: ಪ್ರಾದೇಶಿಕ ಗ್ರಾಮೀಣ ಬ್ಯಾಂಕುಗಳು (RRB) 2025–26ನೇ ಹಣಕಾಸು ವರ್ಷದಲ್ಲಿ ಸಾಲ ವಿತರಣೆಯಲ್ಲಿ ಗಮನಾರ್ಹ ಬೆಳವಣಿಗೆ ದಾಖಲಿಸಿವೆ. RRBಗಳ ಒಟ್ಟು ಸಾಲ ಬಾಕಿ ಶೇ.10.3ರಷ್ಟು ಹೆಚ್ಚಾಗಿ ₹5.78 ಲಕ್ಷ ಕೋಟಿಗೆ ತಲುಪಿದೆ ಎಂದು ಸರ್ಕಾರದ ಅಂಕಿಅಂಶಗಳು ತಿಳಿಸಿವೆ. 2024–25ರಲ್ಲಿ ₹5.24 ಲಕ್ಷ ಕೋಟಿಯಷ್ಟಿದ್ದ ಒಟ್ಟು ಸಾಲವು 2025–26ರಲ್ಲಿ ₹5.78 ಲಕ್ಷ ಕೋಟಿಗೆ ಏರಿಕೆಯಾಗಿದೆ. ಗ್ರಾಮೀಣ ಆರ್ಥಿಕತೆ ಮತ್ತು ಆರ್ಥಿಕ ಸೇರ್ಪಡೆಗೆ RRBಗಳ ಕೊಡುಗೆ ಮುಂದುವರಿದಿರುವುದನ್ನು ಈ ಬೆಳವಣಿಗೆ ಪ್ರತಿಬಿಂಬಿಸುತ್ತದೆ. RBI ನಿಗದಿಪಡಿಸಿರುವ ಶೇ.75ರ ಆದ್ಯತಾ ವಲಯ ಸಾಲ (PSL) ಗುರಿಗೆ ಹೋಲಿಸಿದರೆ, RRBಗಳು ಹೊಂದಾಣಿಕೆಯ ನಿವ್ವಳ ಬ್ಯಾಂಕ್ ಸಾಲದ (ANBC) ಸರಾಸರಿ ಶೇ.91.7ರಷ್ಟು ಸಾಧನೆ ಮಾಡಿವೆ. ಬಹುತೇಕ RRBಗಳು ನಿಗದಿತ PSL ಗುರಿ ತಲುಪಿವೆ. ಕೃಷಿ ಮತ್ತು ಸಂಬಂಧಿತ ಚಟುವಟಿಕೆಗಳಿಗೆ ನೀಡಿರುವ ಸಾಲ ₹3.78 ಲಕ್ಷ ಕೋಟಿಯಾಗಿದ್ದು, ಒಟ್ಟು PSLನ ಶೇ.77ರಷ್ಟಿದೆ. ಇದರ ಬಹುಪಾಲು ಬೆಳೆ ಕೃಷಿ…

₹5 ಕೋಟಿ ಮೌಲ್ಯದ ನಕಲಿ ಔಷಧಿ ಮರುಪ್ಯಾಕಿಂಗ್ ಜಾಲ ಪತ್ತೆ: ಓರ್ವ ಬಂಧನ

ರಾಮನಗರ: ಬೆಂಗಳೂರು ದಕ್ಷಿಣ ಜಿಲ್ಲೆಯಲ್ಲಿ ಬೃಹತ್ ನಕಲಿ ಔಷಧಿ ಮರುಪ್ಯಾಕಿಂಗ್ ಜಾಲವನ್ನು ಅಧಿಕಾರಿಗಳು ಪತ್ತೆಹಚ್ಚಿದ್ದಾರೆ. ಫಾರ್ಮ್‌ಹೌಸ್‌ವೊಂದರಲ್ಲಿ ಯಾವುದೇ ಪರವಾನಗಿ ಇಲ್ಲದೆ ನಡೆಯುತ್ತಿದ್ದ ಘಟಕದ ಮೇಲೆ ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆ ಅಧಿಕಾರಿಗಳು ದಾಳಿ ನಡೆಸಿ, ಸುಮಾರು ₹5 ಕೋಟಿ ಮೌಲ್ಯದ ನಕಲಿ ಔಷಧಿಗಳು ಹಾಗೂ ಇತರ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಸ್ಥಳೀಯರಿಂದ ಫಾರ್ಮ್‌ಹೌಸ್‌ನ್ನು ಲೀಸ್‌ಗೆ ಪಡೆದಿದ್ದ ಪ್ರಶಾಂತ್ ಎಂಬಾತ ಕಳೆದ ಒಂದು ವರ್ಷದಿಂದ ದಂಧೆ ನಡೆಸುತ್ತಿದ್ದ ಎನ್ನಲಾಗಿದೆ. ತೆಲಂಗಾಣ ಮತ್ತು ಹಿಮಾಚಲ ಪ್ರದೇಶದಿಂದ ಕಡಿಮೆ ಬೆಲೆಯ ಔಷಧಿಗಳನ್ನು ತರಿಸಿ, ಪ್ರತಿಷ್ಠಿತ ಔಷಧ ಕಂಪನಿಗಳ ಹೆಸರಿನ ಲೇಬಲ್‌ಗಳನ್ನು ಅಂಟಿಸಿ ಮರುಪ್ಯಾಕಿಂಗ್ ಮಾಡಲಾಗುತ್ತಿತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಸುಮಾರು ₹600 ಮೌಲ್ಯದ ಔಷಧಿಗಳಿಗೆ ₹6,000ರಿಂದ ₹8,000 ಮೌಲ್ಯದ ಔಷಧಿಗಳ ಲೇಬಲ್‌ಗಳನ್ನು ಅಂಟಿಸಿ ಮಾರಾಟ ಮಾಡಲಾಗುತ್ತಿತ್ತು ಎನ್ನಲಾಗಿದೆ. ಕ್ಯಾನ್ಸರ್ ಚಿಕಿತ್ಸೆಗೆ ಬಳಸುವ ಔಷಧಿಗಳನ್ನೂ ಇದೇ ರೀತಿ ಮರುಪ್ಯಾಕಿಂಗ್ ಮಾಡಿ ಮಾರುಕಟ್ಟೆಗೆ…

ಮಾಜಿ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ನಿಧನ; ರಾಜ್ಯ ರಾಜಕೀಯ ವಲಯದಲ್ಲಿ ಸಂತಾಪ

ಬೆಂಗಳೂರು: ಬಿಜೆಪಿಯ ಹಿರಿಯ ನಾಯಕ ಹಾಗೂ ರಾಜ್ಯದ ಮಾಜಿ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ (67) ಅವರು ಅನಾರೋಗ್ಯದಿಂದ ಮಂಗಳವಾರ ರಾತ್ರಿ ನಿಧನರಾದರು. ದೀರ್ಘಕಾಲದಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಬೆಂಗಳೂರಿನ ಜಯನಗರದಲ್ಲಿರುವ ಪುತ್ರಿಯ ನಿವಾಸದಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ತಿಪಟೂರು ವಿಧಾನಸಭಾ ಕ್ಷೇತ್ರದಿಂದ ಬಿಜೆಪಿಯ ಅಭ್ಯರ್ಥಿಯಾಗಿ ಎರಡು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದ ನಾಗೇಶ್, ಬಸವರಾಜ ಬೊಮ್ಮಾಯಿ ನೇತೃತ್ವದ ಸರ್ಕಾರದಲ್ಲಿ 2021ರಿಂದ 2023ರವರೆಗೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಸಕಾಲ ಇಲಾಖೆಯ ಸಚಿವರಾಗಿ ಕಾರ್ಯನಿರ್ವಹಿಸಿದ್ದರು. ಬ್ರೈನ್ ಟ್ಯೂಮರ್ ಸೇರಿದಂತೆ ಹಲವು ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದ ಅವರು ಕೆಲಕಾಲದಿಂದ ಜಯನಗರದಲ್ಲೇ ಚಿಕಿತ್ಸೆ ಪಡೆಯುತ್ತಿದ್ದರು. ಮಂಗಳವಾರ ರಾತ್ರಿ ಆರೋಗ್ಯ ಸ್ಥಿತಿ ಗಂಭೀರಗೊಂಡು ಕೊನೆಯುಸಿರೆಳೆದಿದ್ದಾರೆ ಎಂದು ಕುಟುಂಬದ ಮೂಲಗಳು ತಿಳಿಸಿವೆ. ನಾಗೇಶ್ ಅವರ ನಿಧನಕ್ಕೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ, ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ…

ಕೆಪಿಎಸ್‌ಸಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌ಗೆ ಹೈಕೋರ್ಟ್ ರಿಲೀಫ್

ಬೆಂಗಳೂರು, ಆಗಸ್ಟ್ 18: ಗಂಭೀರ ಆರೋಪಗಳ ಹಿನ್ನೆಲೆಯಲ್ಲಿ ಕೆಪಿಎಸ್‌ಸಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ಅವರನ್ನು ಅಮಾನತುಗೊಳಿಸಿದ್ದ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಅವರ ಆದೇಶವನ್ನು ಕರ್ನಾಟಕ ಹೈಕೋರ್ಟ್ ರದ್ದುಪಡಿಸಿದೆ. ಏಳು ದಿನಗಳೊಳಗೆ ಅವರನ್ನು ಕೆಪಿಎಸ್‌ಸಿ ಅಧ್ಯಕ್ಷರಾಗಿ ಮರುನೇಮಕ ಮಾಡುವಂತೆ ನ್ಯಾಯಾಲಯ ಸೂಚಿಸಿದೆ. ಜುಲೈ 10ರಂದು ರಾಜ್ಯಪಾಲರು ಶಿವಶಂಕರಪ್ಪ ಅವರನ್ನು ಅಮಾನತುಗೊಳಿಸಿದ್ದರು. ಇದನ್ನು ಪ್ರಶ್ನಿಸಿ ಅವರು ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ನ್ಯಾಯಮೂರ್ತಿ ಸೂರಜ್ ಗೋವಿಂದರಾಜ್ ಅವರ ಏಕಸದಸ್ಯ ಪೀಠ ಅರ್ಜಿಯ ವಿಚಾರಣೆ ನಡೆಸಿ ಈ ಆದೇಶ ನೀಡಿದೆ. ಶಿವಶಂಕರಪ್ಪ ಅವರನ್ನು ಅಮಾನತುಗೊಳಿಸುವಂತೆ ರಾಜ್ಯ ಸಚಿವ ಸಂಪುಟ ಯಾವುದೇ ಸಲಹೆ ಅಥವಾ ಶಿಫಾರಸು ಮಾಡಿರಲಿಲ್ಲ. ರಾಜ್ಯಪಾಲರು ಸಚಿವ ಸಂಪುಟದ ತೀರ್ಮಾನಕ್ಕೆ ಅನುಗುಣವಾಗಿ ಕಾರ್ಯನಿರ್ವಹಿಸಬೇಕು ಎಂದು ಕೋರ್ಟ್ ಹೇಳಿದೆ. ಹೀಗಾಗಿ ಜುಲೈ 10ರಂದು ಹೊರಡಿಸಿದ್ದ ಅಮಾನತು ಆದೇಶವನ್ನು ರದ್ದುಪಡಿಸಲಾಗಿದೆ. ಶಿವಶಂಕರಪ್ಪ ಅವರ ಪುತ್ರಿಯರ ನೇಮಕಾತಿಗೆ ಸಂಬಂಧಿಸಿದಂತೆ ಯಾವುದೇ ನಿರ್ಧಾರ ಕೈಗೊಳ್ಳಬಾರದು ಎಂದು ನ್ಯಾಯಾಲಯ…

ಮಂಕಾಳ ವೈದ್ಯ, ಉಮಾಶ್ರೀ ಅವಿರೋಧ ಆಯ್ಕೆ: ವಿಧಾನಸಭೆ, ಪರಿಷತ್ತಿಗೆ ಹೊಸ ಉಪಾಧ್ಯಕ್ಷರು

ಬೆಂಗಳೂರು: ಕರ್ನಾಟಕ ವಿಧಾನಸಭೆಯ ಉಪಸಭಾಧ್ಯಕ್ಷರಾಗಿ ಭಟ್ಕಳ ಶಾಸಕ ಮಂಕಾಳ ವೈದ್ಯ ಹಾಗೂ ವಿಧಾನಪರಿಷತ್ತಿನ ಉಪಸಭಾಪತಿಯಾಗಿ ಕಾಂಗ್ರೆಸ್‌ ಎಂಎಲ್‌ಸಿ ಉಮಾಶ್ರೀ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಉಪಸಭಾಧ್ಯಕ್ಷ ಸ್ಥಾನಕ್ಕೆ ಮಂಕಾಳ ವೈದ್ಯ ಮತ್ತು ಪರಿಷತ್‌ ಉಪಸಭಾಪತಿ ಸ್ಥಾನಕ್ಕೆ ಉಮಾಶ್ರೀ ಮಾತ್ರ ನಾಮಪತ್ರ ಸಲ್ಲಿಸಿದ್ದರು. ಬೇರೆ ಯಾವುದೇ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸದ ಹಿನ್ನೆಲೆಯಲ್ಲಿ ಇಬ್ಬರ ಆಯ್ಕೆ ಅವಿರೋಧವಾಗಿ ನಡೆಯಿತು. ವಿಧಾನಸಭೆಯಲ್ಲಿ ಮಂಕಾಳ ವೈದ್ಯ ಅವರ ಹೆಸರನ್ನು ಪ್ರಸ್ತಾಪಿಸಲಾಗಿದ್ದು, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಸಚಿವ ಲಕ್ಷ್ಮಣ್ ಸವದಿ ಅವರು ಅನುಮೋದಿಸಿದರು. ಬಳಿಕ ಸ್ಪೀಕರ್ ಜಿ.ಎಸ್. ಪಾಟೀಲ್ ಅವರು ಧ್ವನಿಮತದ ಮೂಲಕ ವೈದ್ಯರನ್ನು ಉಪಸಭಾಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ ಎಂದು ಘೋಷಿಸಿದರು. ಇತ್ತೀಚೆಗೆ ಸಚಿವ ಸಂಪುಟ ವಿಸ್ತರಣೆಯಲ್ಲಿ ರುದ್ರಪ್ಪ ಲಮಾಣಿ ಸೇರ್ಪಡೆಯಾದ ಬಳಿಕ ಅವರು ಉಪಸಭಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಇದರಿಂದ ಹುದ್ದೆ ಖಾಲಿಯಾಗಿತ್ತು. ಈ ಹಿಂದೆ ಕಾಂಗ್ರೆಸ್ ಶಾಸಕ ಎ.ಎಸ್. ಪೊನ್ನಣ್ಣ ಅವರನ್ನು ಉಪಸಭಾಧ್ಯಕ್ಷ…

ಪಶು ವೈದ್ಯಾಧಿಕಾರಿ ನೇಮಕಾತಿ ಅಕ್ರಮ: ಮಾಜಿ KPSC ಅಧ್ಯಕ್ಷ ಶಿವಶಂಕರಪ್ಪ ವಶಕ್ಕೆ

ಬೆಂಗಳೂರು: ಪಶು ವೈದ್ಯಾಧಿಕಾರಿಗಳ ನೇಮಕಾತಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ED) ಅಧಿಕಾರಿಗಳು ಮಾಜಿ KPSC ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ಅವರನ್ನು ವಶಕ್ಕೆ ಪಡೆದಿದ್ದಾರೆ. ಮಂಗಳವಾರ ಬೆಳಗ್ಗೆ 6 ಗಂಟೆಗೆ ಬೆಂಗಳೂರಿನ ಡಾಲರ್ಸ್‌ ಕಾಲೋನಿಯಲ್ಲಿರುವ ಅವರ ನಿವಾಸದ ಮೇಲೆ ED ಅಧಿಕಾರಿಗಳು ದಾಳಿ ನಡೆಸಿದ್ದು, ಮೊಬೈಲ್ ಸೇರಿದಂತೆ ಹಲವು ದಾಖಲೆಗಳನ್ನು ಪರಿಶೀಲನೆಗಾಗಿ ವಶಪಡಿಸಿಕೊಂಡಿದ್ದಾರೆ. ಕಲಬುರಗಿ ಜಿಲ್ಲೆಯ ಆಳಂದದಲ್ಲಿರುವ ಅವರ ನಿವಾಸ ಹಾಗೂ ಕಚೇರಿಯ ಮೇಲೂ ಶೋಧ ನಡೆಸಲಾಗಿದೆ. ಪಶು ವೈದ್ಯಾಧಿಕಾರಿ ನೇಮಕಾತಿಯಲ್ಲಿ ಕೋಟ್ಯಂತರ ರೂಪಾಯಿ ಅಕ್ರಮ ನಡೆದಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ರಾಜ್ಯದ 8 ಜಿಲ್ಲೆಗಳ 21ಕ್ಕೂ ಹೆಚ್ಚು ಸ್ಥಳಗಳಲ್ಲಿ ಏಕಕಾಲದಲ್ಲಿ ಕಾರ್ಯಾಚರಣೆ ನಡೆದಿದೆ. KPSC ಸದಸ್ಯೆ ಶಾಂತಾ ಹೊಸಮನಿ ಅವರ ನಿವಾಸ ಹಾಗೂ ಆಯ್ಕೆಯಾದ ಕೆಲವು ಅಭ್ಯರ್ಥಿಗಳ ಮನೆಗಳಲ್ಲೂ ಶೋಧ ನಡೆಸಲಾಗಿದೆ. ನೇಮಕಾತಿ ಅಕ್ರಮದ ಹಣದ ಜಾಡು ಹಾಗೂ ಡಿಜಿಟಲ್ ಸಾಕ್ಷ್ಯಗಳಿಗಾಗಿ ED ಅಧಿಕಾರಿಗಳು…

ಬಿಜೆವೈಎಂಗೆ ಹೊಸ ಸಾರಥಿ: ತೇಜಸ್ವಿ ಸೂರ್ಯ ಸ್ಥಾನಕ್ಕೆ ಹೇಮಂಗ್ ಜೋಶಿ ನೇಮಕ

ನವದೆಹಲಿ: ಬಿಜೆಪಿ ರಾಷ್ಟ್ರೀಯ ಸಂಘಟನೆಯಲ್ಲಿ ಮಹತ್ವದ ಬದಲಾವಣೆಯಾಗಿದ್ದು, ವಡೋದರ ಲೋಕಸಭಾ ಕ್ಷೇತ್ರದ ಸಂಸದ ಹೇಮಂಗ್ ಜೋಶಿ ಅವರನ್ನು ಭಾರತೀಯ ಜನತಾ ಯುವ ಮೋರ್ಚಾ (BJYM) ರಾಷ್ಟ್ರೀಯ ಅಧ್ಯಕ್ಷರಾಗಿ ನೇಮಕ ಮಾಡಲಾಗಿದ್ದು,  ಬೆಂಗಳೂರು ದಕ್ಷಿಣ ಸಂಸದ ತೇಜಸ್ವಿ ಸೂರ್ಯ ಅವರಿಗೆ ಗೆಟ್ ಪಾಸ್ ನೀಡಲಾಗಿದೆ. ಬಿಜೆವೈಎಂ ಅಧ್ಯಕ್ಷರಾಗಿ 14 ವರ್ಷಗಳ ತಮ್ಮ ಪಯಣವನ್ನು ಸ್ಮರಿಸಿರುವ ತೇಜಸ್ವಿ ಸೂರ್ಯ, ಪಕ್ಷದ ಹಿರಿಯ ನಾಯಕತ್ವಕ್ಕೆ ಧನ್ಯವಾದ ಅರ್ಪಿಸಿದ್ದಾರೆ. ಸಾಮಾಜಿಕ ಜಾಲತಾಣ ‘ಎಕ್ಸ್’ನಲ್ಲಿ ಈ ಕುರಿತಂತೆ ಪೋಸ್ಟ್ ಮಾಡಿರುವ ಅವರು, ನಗರದ ಯುವ ಮೋರ್ಚಾ ಘಟಕದಲ್ಲಿ ಸಾಮಾನ್ಯ ಕಾರ್ಯಕರ್ತನಾಗಿ ಆರಂಭವಾದ ತಮ್ಮ ಪಯಣ ರಾಷ್ಟ್ರೀಯ ನಾಯಕತ್ವದವರೆಗೆ ತಲುಪುತ್ತದೆ ಎಂದು ಎಂದಿಗೂ ಊಹಿಸಿರಲಿಲ್ಲ ಎಂದಿದ್ದಾರೆ. ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ಅಧ್ಯಕ್ಷ ನಿತಿನ್ ನಬಿನ್, ಕೇಂದ್ರ ಗೃಹ ಸಚಿವ ಅಮಿತ್ ಶಾ, ಮಾಜಿ ಬಿಜೆಪಿ ಅಧ್ಯಕ್ಷ ಜೆ.ಪಿ. ನಡ್ಡಾ ಹಾಗೂ ಸಂಘಟನಾ ಪ್ರಧಾನ ಕಾರ್ಯದರ್ಶಿ…

‘ನೀವು ಆರಂಭಿಸಿದ ಯೋಜನೆಗಳನ್ನು ಬೇರೆ ಸರ್ಕಾರಗಳು ಪೂರ್ತಿ ಮಾಡಬಾರದೇ?’; ಜೆಡಿಎಸ್ ನಾಯಕರಿಗೆ ಕಾಂಗ್ರೆಸ್ ಪ್ರಶ್ನೆ

ಬೆಂಗಳೂರು: ಬಿಡದಿ ಟೌನ್‌ಶಿಪ್ ಮತ್ತು ನೈಸ್ ಯೋಜನೆ ವಿಚಾರವಾಗಿ ಕಾಂಗ್ರೆಸ್‌ ಪಕ್ಷವು ಜೆಡಿಎಸ್‌ ನಾಯಕರ ವಿರುದ್ಧ ವಾಗ್ದಾಳಿ ನಡೆಸಿದೆ. ಮಾಜಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಹಾಗೂ ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡರ ಅವಧಿಯಲ್ಲಿ ಆರಂಭವಾದ ಯೋಜನೆಗಳನ್ನು ಬೇರೆ ಸರ್ಕಾರಗಳು ಪೂರ್ಣಗೊಳಿಸಬಾರದೇ ಎಂದು ಪ್ರಶ್ನಿಸಿದೆ. ಈ ಕುರಿತು ಸಾಮಾಜಿಕ ಜಾಲತಾಣ Xನಲ್ಲಿ ಪೋಸ್ಟ್ ಮಾಡಿರುವ ಕಾಂಗ್ರೆಸ್‌, ಜೆಡಿಎಸ್‌ ನಾಯಕರಿಗೆ ಹಲವು ಪ್ರಶ್ನೆಗಳನ್ನು ಮುಂದಿಟ್ಟಿದೆ. ‘ಯೋಜನೆ ಆರಂಭಿಸಿದ್ದು ನೀವೇ, ಪೂರ್ಣಗೊಳಿಸಿದರೆ ತಪ್ಪೇ?’ ಬಿಡದಿ ಟೌನ್‌ಶಿಪ್ ಯೋಜನೆಯನ್ನು ಕುಮಾರಸ್ವಾಮಿ ಆರಂಭಿಸಿದ್ದರೆ, ನೈಸ್ ಯೋಜನೆಯ ಪಿತಾಮಹರು ದೇವೇಗೌಡರು ಎಂದು ಕಾಂಗ್ರೆಸ್‌ ಹೇಳಿದೆ. ನೀವು ಆರಂಭಿಸಿದ ಯೋಜನೆಗಳನ್ನು ಬೇರೆ ಸರ್ಕಾರಗಳು ಪೂರ್ಣಗೊಳಿಸಬಾರದೇ? ಎಂದು ಪ್ರಶ್ನಿಸಿದೆ. ‘ನೀವು ಮಾಡಿದರೆ ಸರಿ, ಬೇರೆಯವರು ಮಾಡಿದರೆ ತಪ್ಪು ಎಂದು ಹೇಳಲು ಹೇಗೆ ಸಾಧ್ಯ?’ ಎಂದು ಜೆಡಿಎಸ್‌ ನಾಯಕರನ್ನು ತರಾಟೆಗೆ ತೆಗೆದುಕೊಂಡಿದೆ. 2018ರಲ್ಲಿ ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿದ್ದಾಗ ಬಿಡದಿ ಟೌನ್‌ಶಿಪ್ ಯೋಜನೆಯನ್ನು…