ಗೃಹಲಕ್ಷ್ಮಿ ಹಣ ಅಕ್ರಮ ಆರೋಪ; ಸಿಎಜಿ ವರದಿ ಸಂಬಂಧ ವಿಶೇಷ ತನಿಖೆಗೆ ಸಿ.ಟಿ.ರವಿ ಆಗ್ರಹ

ಬೆಂಗಳೂರು: ಗ್ಯಾರಂಟಿ ಯೋಜನೆ ಗೃಹಲಕ್ಷ್ಮಿ ಹಣದ ವಿಚಾರದಲ್ಲಿ ಸಿಎಜಿ, ನಕಲಿ ಖಾತೆಗಳಿಗೆ ಹಣ ಹೋಗಿದೆ. ಒಂದೇ ಖಾತೆಗೆ ಹಣ ಹಾಕಿದ್ದಾರೆ, ಸತ್ತವರ ಹೆಸರಿಗೆ ಹಣ ಹೋಗಿದೆ ಎಂದು ತಿಳಿಸಿದೆ. ಇದರ ಕುರಿತು ಯಾಕೆ ಇನ್ನೂ ಎಫ್‍ಐಆರ್ ದಾಖಲಿಸಿಲ್ಲ ಎಂದು ಬಿಜೆಪಿ ಮಾಜಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಅವರು ಕೇಳಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬಡವರ ಹೆಸರಿನಲ್ಲಿ ಲೂಟಿಯನ್ನು ಕಾಂಗ್ರೆಸ್ ಪಕ್ಷ ಸಮರ್ಥಿಸುವುದೇ ಎಂದು ಪ್ರಶ್ನೆ ಹಾಕಿದರು. ಯಾಕೆ ಇವತ್ತಿನವರೆಗೂ ಎಸ್‍ಐಟಿ ರಚಿಸಿಲ್ಲ? ಎಂದರು. ಗೃಹಲಕ್ಷ್ಮಿ ಯೋಜನೆಯ 2 ತಿಂಗಳಿನ 5 ಸಾವಿರ ಕೋಟಿ ಹಣ ಖಾತೆಗೇ ಜಮೆ ಆಗಿಲ್ಲವೆಂದು ವಿಧಾನಮಂಡಲದ ಅಧಿವೇಶನದಲ್ಲಿ ಚರ್ಚೆ ಆಗಿದೆ. ಅವತ್ತಿನ ಸಚಿವೆ ಆರಂಭದಲ್ಲಿ ಉಡಾಫೆ ಮಾತನಾಡಿದ್ದರು. ಮಹೇಶ್ ಟೆಂಗಿನಕಾಯಿಯವರು ದಾಖಲೆ ತಂದಿಟ್ಟರು. ಹೈದರಾಲಿ ಸೈನಿಕರ ಸಂಬಳ ಮುಂದೂಡಿ ಸಂಬಳ ಎಗರಿಸುತ್ತಿದ್ದ ವಿಚಾರವನ್ನು ಸುರೇಶ್…

ಅಯೋಧ್ಯೆ ಟ್ರಸ್ಟ್ ನಲ್ಲಿ ಬಿಜೆಪಿ ನಾಯಕರು ಇಲ್ಲ, ಆದರೂ ಕಾಂಗ್ರೆಸ್ ನಾಯಕರಿಂದ ಸುಳ್ಳು ಆರೋಪ; ಸಿ.ಟಿ.ರವಿ ಆಕ್ರೋಶ

ಬೆಂಗಳೂರು: ಅಯೋಧ್ಯೆ ರಾಮಮಂದಿರ ಹುಂಡಿ ಕಳವು ಸಂಬಂಧ ಕಾಂಗ್ರೆಸ್ ನವರು ಬಿಜೆಪಿ ವಿರುದ್ಧ ಅನಗತ್ಯ ಆರೋಪ ಮಾಡುತ್ತಿದ್ದಾರೆ. ಕಾಂಗ್ರೆಸ್ ನಾಯಕರು ಹೇಳುವ ರೀತಿ ಅಯೋಧ್ಯೆಯ ಟ್ರಸ್ಟ್’ನಲ್ಲಿ ಬಿಜೆಪಿಯವರು ಯಾರೂ ಇಲ್ಲ. ಆದರೂ ಬಿಜೆಪಿಯವರು ಲೂಟಿ ಮಾಡಿದ್ದಾರೆ ಎಂದು ಕಾಂಗ್ರೆಸ್ ನಾಯಕರು ಸುಳ್ಳು ಆರೋಪ ಮಾಡುತ್ತಿದ್ದಾರೆ ಎಂದು ಬಿಜೆಪಿ ಶಾಸಕ ಸಿ.ಟಿ.ರವಿ ಹೇಳಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿ.ಟಿ.ರವಿ, ಅಯೋಧ್ಯೆ ರಾಮಮಂದಿರ ಹುಂಡಿ ಕಳವು ಆಗಿರುವುದರಿಂದ ನಮಗೂ ನೋವಾಗಿದೆ. ಅಯೋಧ್ಯೆ ಐದು ಶತಮಾನಗಳ ಹೋರಾಟ. ಲಕ್ಷಾಂತರ ಜನ ರಾಮಮಂದಿರ ಪುನರ್ ನಿರ್ಮಾಣಕ್ಕಾಗಿ ಜೀವ ತೆತ್ತಿದ್ದಾರೆ. ಕೋಟ್ಯಂತರ ಜನರ ಭಾವನೆ ಬೆರೆಸಿ ಮಂದಿರ ನಿರ್ಮಾಣ ಆಗಿದೆ ಎಂದರು. ರಾಮಮಂದಿರದ ನಿರ್ಮಾಣ ವಿರೋಧಿಗಳನ್ನು ಸೋಲಿಸಿ ಪರವಾಗಿದ್ದವರಿಗೆ ಮತ ಹಾಕಿ ಜನ ಅವರನ್ನು ಅಧಿಕಾರಕ್ಕೆ ತಂದಿದ್ದಾರೆ. ಕೆಲವರು ಹಣ ದುರುಪಯೋಗ ಮಾಡಿದ್ದಾರೆ. ಆರೋಪ ಬಂದ ತಕ್ಷಣ ಸರ್ಕಾರ ಎಸ್‍ಐಟಿ ರಚಿಸಲಾಗಿದೆ. ಎಂಟಕ್ಕೂ ಹೆಚ್ಚು…

‘ನಾನು ಹಿಂದೂ ಎಂದು ಹೆಮ್ಮೆಯಿಂದ ಹೇಳಿಕೊಳ್ಳುತ್ತೇನೆ’; ಬಿ.ಕೆ.ಹರಿಪ್ರಸಾದ್

ಬೆಂಗಳೂರು: “ನಾನು ಹಿಂದೂ ಎಂದು ಹೆಮ್ಮೆಯಿಂದ ಹೇಳಿಕೊಳ್ಳುತ್ತೇನೆ. ಆದರೆ ನಾನು ಪಾಲಿಸುವ ಹಿಂದು ಧರ್ಮ ಮಹಾತ್ಮ ಗಾಂಧಿ, ಸ್ವಾಮಿ ವಿವೇಕಾನಂದ, ನಾರಾಯಣಗುರು, ಕನಕದಾಸ ಹಾಗೂ ಬಸವಣ್ಣ ಅವರು ಬೋಧಿಸಿದ ಧರ್ಮವೇ ಹೊರತು, ಗೋಲ್ವಾಲ್ಕರ್, ಗೋಡ್ಸೆ ಮತ್ತು ಹೆಡಗೆವಾರ್ ಪ್ರತಿಪಾದಿಸಿದ ಹಿಂದೂ ಧರ್ಮವಲ್ಲ” ಎಂದು ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಹೇಳಿದ್ದಾರೆ. ಕೆಪಿಸಿಸಿ ಕಚೇರಿ ಭಾರತ ಜೋಡೋ ಭವನದಲ್ಲಿ ವಿಚಾರ ಸಂಕಿರಣದಲ್ಲಿ ಮಾತನಾಡಿದ ಅವರು, ಬಿಜೆಪಿ ಹಾಗೂ ಆರ್‌ಎಸ್‌ಎಸ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. “ಬಿಜೆಪಿಯವರು ದೇಶವನ್ನು ಹಿಮ್ಮುಖ ದಿಕ್ಕಿನಲ್ಲಿ ಕೊಂಡೊಯ್ಯುತ್ತಿದ್ದಾರೆ. ಜನರು ಅನಕ್ಷರಸ್ಥರಾಗಿದ್ದಷ್ಟು ಅಂಧಭಕ್ತರನ್ನು ಸೃಷ್ಟಿಸಲು ಸಾಧ್ಯವಾಗುತ್ತದೆ. ಜಾತಿ ಹಾಗೂ ಧರ್ಮದ ಹೆಸರಿನಲ್ಲಿ ಸಮಾಜವನ್ನು ವಿಭಜಿಸುವ ಪ್ರಯತ್ನ ನಡೆಯುತ್ತಿದೆ. ಜಾತಿ-ಧರ್ಮದ ಗಲಭೆಗಳಲ್ಲಿ ಜೈಲು ಸೇರುವವರು ದಲಿತರು ಮತ್ತು ಶೂದ್ರರೇ ಹೊರತು, ಲೂಟಿ ನಡೆಸುವವರು ಅಲ್ಲ” ಎಂದು ಆರೋಪಿಸಿದರು. ದೇವಾಲಯಗಳ ಲೂಟಿ ಕುರಿತು ಮಾತನಾಡಿದ ಅವರು, “ದೇವರ ಬಗ್ಗೆ…

‘ನಮ್ಮ ಮೆಟ್ರೋ’ ತಾಂತ್ರಿಕ ಲೋಪಗಳಿಗೆ ಬ್ರೇಕ್ ಹಾಕಿ; ತನಿಖೆ ನಡೆಸಿ ವರದಿ ಸಲ್ಲಿಸಲು BMRCLಗೆ ಕೇಂದ್ರದ ನಿರ್ದೇಶನ

ಬೆಂಗಳೂರು: ರಾಜಧಾನಿ ಬೆಂಗಳೂರಿನ ನಮ್ಮ ಮೆಟ್ರೋ ರೈಲು ಸೇವೆಯಲ್ಲಿ ಪದೇಪದೇ ಉಂಟಾಗುತ್ತಿರುವ ತಾಂತ್ರಿಕ ಸಮಸ್ಯೆಗಳ ಕುರಿತು ಗಂಭೀರವಾಗಿ ಪರಿಗಣಿಸಿರುವ ಕೇಂದ್ರ ಸರ್ಕಾರ, ಸಮಗ್ರ ತನಿಖೆ ನಡೆಸಿ ವರದಿ ಸಲ್ಲಿಸುವಂತೆ ಬೆಂಗಳೂರು ಮೆಟ್ರೋ ರೈಲು ನಿಗಮ (BMRCL)ಕ್ಕೆ ನಿರ್ದೇಶನ ನೀಡಿದೆ. ಇತ್ತೀಚಿನ ದಿನಗಳಲ್ಲಿ ನಮ್ಮ ಮೆಟ್ರೋ ಸೇವೆಯಲ್ಲಿ ಆಗಾಗ್ಗೆ ತಾಂತ್ರಿಕ ದೋಷಗಳು ಕಾಣಿಸಿಕೊಂಡು ರೈಲು ಸಂಚಾರದಲ್ಲಿ ವ್ಯತ್ಯಯ ಉಂಟಾಗುತ್ತಿರುವ ಹಿನ್ನೆಲೆಯಲ್ಲಿ ಪ್ರಯಾಣಿಕರಿಂದ ತೀವ್ರ ಅಸಮಾಧಾನ ವ್ಯಕ್ತವಾಗಿತ್ತು. ಈ ಸಂಬಂಧ ಬೆಂಗಳೂರು ದಕ್ಷಿಣ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯ ಕೇಂದ್ರದ ಗಮನ ಸೆಳೆದಿದ್ದರು. ಇದರ ಬೆನ್ನಲ್ಲೇ ಕೇಂದ್ರ ರೈಲ್ವೆ ಸುರಕ್ಷತಾ ಆಯುಕ್ತರು ಕಳೆದ ಮೂರು ವರ್ಷಗಳಲ್ಲಿ ಸಂಭವಿಸಿರುವ ಮೆಟ್ರೋ ಸೇವೆಯ ವ್ಯತ್ಯಯಗಳ ಕುರಿತು ತನಿಖೆ ನಡೆಸಿ, ಕೈಗೊಂಡಿರುವ ಸರಿಪಡಿಸುವ ಕ್ರಮಗಳ ಸಮಗ್ರ ವರದಿ ಸಲ್ಲಿಸುವಂತೆ BMRCLಗೆ ಸೂಚನೆ ನೀಡಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣ ‘X’ನಲ್ಲಿ ಮಾಹಿತಿ ಹಂಚಿಕೊಂಡಿರುವ ಸಂಸದ…

ಯಾರು ಏನು ಹೇಳಿದರೂ ಬಿಜೆಪಿ ರಾಜ್ಯಾಧ್ಯಕ್ಷರ ಬದಲಾವಣೆ ಅಸಾಧ್ಯ: ಅಶೋಕ್

ಬೆಂಗಳೂರು: ಮೂರು ತಿಂಗಳ ಬಳಿಕ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ರನ್ನು ಹುದ್ದೆಯಿಂದ ಕೆಳಗಿಳಿಸುವಂತೆ ಮಾಜಿ ಸಿಎಂ ಸದಾನಂದ ಗೌಡ ಹೇಳಿದ್ದಾರೆಂಬ ಆಡಿಯೋ ಬಿಜೆಪಿ ಪಾಳ್ಯದಲ್ಲಿ ತಳಮಳ ಸೃಷ್ಟಿಸಿದೆ. ಈ ಕುರಿತ ಚರ್ಚೆ ಬಗ್ಗೆ ಪ್ರತಿಕ್ರಿಯಿಸಿರುವ ವಿಧಾನಸಭಾ ಪ್ರತಿಪಕ್ಷ ನಾಯಕ ಆರ್.ಅಶೋಕ್, ಯಾರು ಏನು ಹೇಳಿದರೂ ಬಿಜೆಪಿ ರಾಜ್ಯಾಧ್ಯಕ್ಷರ ಬದಲಾವಣೆ ಅಸಾಧ್ಯ ಎಂದಿದ್ದಾರೆ. ಬೆಂಗಳೂರಿನಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ತಾವು ಏನೂ ಹೇಳಿಲ್ಲ ಎಂದು ಮಾಜಿ ಸಿಎಂ ಡಿ.ವಿ.ಸದಾನಂದಗೌಡರು ಹೇಳಿದ್ದಾರೆ. ಯಾರು ಏನು ಹೇಳಿದರೂ ಬಿಜೆಪಿ ರಾಜ್ಯಾಧ್ಯಕ್ಷರ ಬದಲಾವಣೆ ಸಾಧ್ಯವಿಲ್ಲ. ಅದನ್ನು ವರಿಷ್ಠರು ಮಾತ್ರ ತೀರ್ಮಾನಿಸುತ್ತಾರೆ’ ಎಂದರು. ಎಲ್ಲರ ಮನೆಯಲ್ಲಿ ದೋಸೆ ತೂತಾದರೆ ಕಾಂಗ್ರೆಸ್‌ನವರದ್ದು ಹೆಚ್ಚು ತೂತಾಗಿರುವುದರಿಂದ ಅವರ ಬಗ್ಗೆ ಹೇಳಲು ಸಾಧ್ಯವಿಲ್ಲ ಎಂದು ಅಶೋಕ್ ಟೀಕಿಸಿದರು. ಶಾಸಕ ಎಸ್‌.ಆರ್‌.ವಿಶ್ವನಾಥ್‌ ಕೆಂಪೇಗೌಡ ಜಯಂತಿ ವಿಚಾರದಲ್ಲಿ ಹೇಳಿಕೆ ನೀಡಿದ್ದಾರೆ. ಅದನ್ನು ಅಲ್ಲಿಗೆ ಮುಕ್ತಾಯ ಮಾಡಿದ್ದು, ಆ ರೀತಿ…

ಎಕ್ಸ್‌ಪ್ರೆಸ್‌ವೇಯಲ್ಲಿ ಟ್ರಕ್‌ಗೆ ಡಿಕ್ಕಿ ಹೊಡೆದು ಹೊತ್ತಿ ಉರಿದ ಬಸ್, 8 ಮಂದಿ ಸಜೀವ ದಹನ

ಜೈಪುರ: ರಾಜಸ್ಥಾನದ ದೌಸಾ ಜಿಲ್ಲೆಯಲ್ಲಿ ಬುಧವಾರ ಮುಂಜಾನೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಕನಿಷ್ಠ ಎಂಟು ಮಂದಿ ಸಜೀವ ದಹನವಾಗಿದ್ದು, 24ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದಾರೆ. ದೆಹಲಿ-ಮುಂಬೈ ಎಕ್ಸ್‌ಪ್ರೆಸ್‌ವೇಯಲ್ಲಿ ಖಾಸಗಿ ಬಸ್ ಟ್ರಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಎರಡೂ ವಾಹನಗಳಿಗೆ ಬೆಂಕಿ ಹೊತ್ತಿಕೊಂಡು ಈ ದುರಂತ ಸಂಭವಿಸಿದೆ. ದೌಸಾ ಜಿಲ್ಲೆಯ ಕೊಲ್ವಾ ಪೊಲೀಸ್ ಠಾಣೆ ವ್ಯಾಪ್ತಿಯ ಧನವಾಡಾ ಸಮೀಪ ಈ ಅಪಘಾತ ನಡೆದಿದೆ. ಉತ್ತರಾಖಂಡದ ಋಷಿಕೇಶದಿಂದ ಮಧ್ಯಪ್ರದೇಶದ ಇಂದೋರ್‌ಗೆ ತೆರಳುತ್ತಿದ್ದ ಖಾಸಗಿ ಪ್ರಯಾಣಿಕರ ಬಸ್, ತನ್ನ ಮುಂದೆ ಸಾಗುತ್ತಿದ್ದ ಟ್ರಕ್‌ಗೆ ಹಿಂದಿನಿಂದ ಡಿಕ್ಕಿ ಹೊಡೆದಿದೆ ಎಂದು ಪ್ರಾಥಮಿಕ ತನಿಖೆಯಲ್ಲಿ ತಿಳಿದುಬಂದಿದೆ. ಡಿಕ್ಕಿಯ ರಭಸಕ್ಕೆ ಬಸ್ ಹಾಗೂ ಟ್ರಕ್‌ಗೆ ಕ್ಷಣಾರ್ಧದಲ್ಲೇ ಬೆಂಕಿ ಹೊತ್ತಿಕೊಂಡಿದ್ದು, ಎರಡೂ ವಾಹನಗಳು ಬೆಂಕಿಗಾಹುತಿಯಾಗಿವೆ. ಬಸ್‌ನೊಳಗಿದ್ದ ಪ್ರಯಾಣಿಕರಲ್ಲಿ ಆತಂಕ ಉಂಟಾಗಿ, ಹಲವರು ಪ್ರಾಣ ಉಳಿಸಿಕೊಳ್ಳಲು ವಾಹನದಿಂದ ಹೊರಗೆ ಜಿಗಿದಿದ್ದಾರೆ. ಅಪಘಾತದಲ್ಲಿ ಗಾಯಗೊಂಡ 24ಕ್ಕೂ ಹೆಚ್ಚು ಮಂದಿಯನ್ನು…

ಕರಾವಳಿಯಲ್ಲಿ ಭಾರೀ ಮಳೆ: ಮಂಗಳೂರಿನಲ್ಲಿ ಮನೆ ಮೇಲ್ಚಾವಣಿ ಕುಸಿದು ಮೂವರು ಸಾವು

ಮಂಗಳೂರು: ಕರಾವಳಿ ಕರ್ನಾಟಕದಲ್ಲಿ ಸುರಿಯುತ್ತಿರುವ ಭಾರೀ ಮಳೆಯ ನಡುವೆ ಮಂಗಳೂರಿನ ಕಂಕನಾಡಿಯಲ್ಲಿ ಹೃದಯವಿದ್ರಾವಕ ದುರಂತ ಸಂಭವಿಸಿದೆ. ನಿರಂತರ ಮಳೆಯಿಂದ ಹಳೆಯ ಹಂಚಿನ ಮನೆಯ ಮೇಲ್ಚಾವಣಿ ಕುಸಿದು ಬಿದ್ದ ಪರಿಣಾಮ ಮಹಿಳೆಯೊಬ್ಬರು ಹಾಗೂ ಇಬ್ಬರು ಬಾಲಕಿಯರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮಂಗಳವಾರ ರಾತ್ರಿ ಆರಂಭವಾದ ಭಾರೀ ಮಳೆ ಬುಧವಾರವೂ ಮುಂದುವರಿದಿದ್ದು, ಇದೇ ವೇಳೆ ಕಂಕನಾಡಿಯಲ್ಲಿದ್ದ ಹಳೆಯ ಮನೆ ಏಕಾಏಕಿ ಕುಸಿದಿದೆ. ಅವಶೇಷಗಳಡಿ ಸಿಲುಕಿದ್ದವರನ್ನು ರಕ್ಷಿಸಲು ಸ್ಥಳೀಯರು ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ತಕ್ಷಣ ಕಾರ್ಯಾಚರಣೆ ನಡೆಸಿದರು. ರಕ್ಷಣಾ ಕಾರ್ಯಾಚರಣೆಯಲ್ಲಿ ಅವಶೇಷಗಳಡಿ ಸಿಲುಕಿದ್ದ ಒಬ್ಬ ಪುರುಷ ಹಾಗೂ ಇಬ್ಬರು ಬಾಲಕಿಯರನ್ನು ಜೀವಂತವಾಗಿ ಹೊರತೆಗೆದು ಆಸ್ಪತ್ರೆಗೆ ದಾಖಲಿಸಲಾಗಿದೆ. ಗಾಯಾಳುಗಳು ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮೃತರು ಹಾಗೂ ಗಾಯಾಳುಗಳು ಮೂಲತಃ ಬಿಹಾರ ರಾಜ್ಯದವರಾಗಿದ್ದು, ಕಂಕನಾಡಿಯಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು ಎಂದು ತಿಳಿದುಬಂದಿದೆ. ಕಂಕನಾಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು…

ಸಿದ್ದರಾಮಯ್ಯರನ್ನು ಸೈಡ್ ಲೈನ್ ಮಾಡಿದ್ರೆ ಜೋಕೆ; ಕಾಂಗ್ರೆಸ್ ಪಕ್ಷದಲ್ಲಿ ಸಂಚಲನ ಸೃಷ್ಟಿಸಿದ ನಾಯಕನ ಎಚ್ಚರಿಕೆ

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಪಕ್ಷದಲ್ಲಿ ಕಡೆಗಣಿಸುವ ಯಾವುದೇ ಪ್ರಯತ್ನ ಕಾಂಗ್ರೆಸ್‌ಗೆ ಭಾರೀ ಹಿನ್ನಡೆಯಾಗಲಿದೆ ಎಂದು ಸಚಿವ ಎನ್. ರಾಜಣ್ಣ ಎಚ್ಚರಿಕೆ ನೀಡಿದ್ದು, ಅವರ ಹೇಳಿಕೆ ರಾಜ್ಯ ರಾಜಕೀಯದಲ್ಲಿ ಹೊಸ ಚರ್ಚೆಗೆ ಕಾರಣವಾಗಿದೆ. ಸಿದ್ದರಾಮಯ್ಯ ಅವರನ್ನು ಸೈಡ್‌ಲೈನ್ ಮಾಡಿ ಪಕ್ಷ ಸಂಘಟನೆ ನಡೆಸಲು ಯತ್ನಿಸಿದರೆ ಅದು ಕಾಂಗ್ರೆಸ್‌ಗೆ ದೊಡ್ಡ ತಪ್ಪಾಗಲಿದೆ ಎಂದು ರಾಜಣ್ಣ ಹೇಳಿದ್ದಾರೆ. ಸಿದ್ದರಾಮಯ್ಯ ಅವರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಸಾಗಿದರೆ ಮಾತ್ರ 2028ರ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬರಲು ಸಾಧ್ಯ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ. ಸರ್ಕಾರದ ಕಾರ್ಯಕ್ರಮಗಳಲ್ಲಿ ಸಿದ್ದರಾಮಯ್ಯ ಅವರಿಗೆ ಸಮರ್ಪಕ ಸ್ಥಾನಮಾನ ನೀಡಿಲ್ಲ ಎಂಬ ಆರೋಪಗಳ ಕುರಿತು ಪ್ರತಿಕ್ರಿಯಿಸಿದ ಅವರು, ಸರ್ಕಾರದ ಕಾರ್ಯಕ್ರಮಗಳಿಗೆ ನಿಗದಿತ ಪ್ರೋಟೋಕಾಲ್ ಇರುತ್ತದೆ. ಅದರಂತೆ ವ್ಯವಸ್ಥೆ ಮಾಡಲಾಗುತ್ತದೆ. ಎಲ್ಲಿಯಾದರೂ ಲೋಪವಾಗಿದ್ದರೆ ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಸ್ಪಷ್ಟಪಡಿಸಿದರು. ಸಿದ್ದರಾಮಯ್ಯ ಅವರು ಜನಬೆಂಬಲ ಹೊಂದಿರುವ…

‘ಗೃಹಜ್ಯೋತಿ’ ಅಕ್ರಮ ಫಲಾನುಭವಿಗಳ ಪತ್ತೆಗೆ SIR ಮಾದರಿಯಲ್ಲಿ ಮನೆ-ಮನೆ ಪರಿಶೀಲನೆಗೆ ಚಾಲನೆ

ಬೆಂಗಳೂರು: ಚುನಾವಣಾ ಆಯೋಗ ಮತದಾರರ ವಿಶೇಷ ತೀವ್ರ ಪರಿಷ್ಕರಣೆ (SIR) ನಡೆಸುತ್ತಿರುವ ನಡುವೆಯೇ, ರಾಜ್ಯ ಸರ್ಕಾರವೂ ತನ್ನ ಮಹತ್ವಾಕಾಂಕ್ಷೆಯ ಗೃಹಜ್ಯೋತಿ ಯೋಜನೆಯ ಫಲಾನುಭವಿಗಳ ಮನೆ-ಮನೆ ಪರಿಶೀಲನೆಗೆ ಮುಂದಾಗಿದೆ. ಯೋಜನೆಯ ಅಕ್ರಮ ಫಲಾನುಭವಿಗಳನ್ನು ಗುರುತಿಸಿ ಕೈಬಿಡುವ ಉದ್ದೇಶದಿಂದ ಎಸ್ಕಾಂ ಸಿಬ್ಬಂದಿ ಮನೆ-ಮನೆ ಭೇಟಿ ನೀಡಿ ಪರಿಶೀಲನೆ ನಡೆಸಲಿದ್ದಾರೆ. ಪರಿಶೀಲನೆ ವೇಳೆ ಮೊಬೈಲ್ ಆ್ಯಪ್ ಹಾಗೂ ಘೋಷಣಾ ಪತ್ರದ ಮೂಲಕ ಫಲಾನುಭವಿಗಳ ವಿವರಗಳನ್ನು ಸಂಗ್ರಹಿಸಲಾಗುತ್ತದೆ. ಈ ಸಂದರ್ಭದಲ್ಲಿ ಆಧಾರ್ ಕಾರ್ಡ್, ಮತದಾರರ ಗುರುತಿನ ಚೀಟಿ (ವೋಟರ್ ಐಡಿ), ಪ್ಯಾನ್ ಕಾರ್ಡ್, ಪಾಸ್‌ಪೋರ್ಟ್ ಅಳತೆಯ ಭಾವಚಿತ್ರ, ರೇಷನ್ ಕಾರ್ಡ್, ಜಾತಿ ಪ್ರಮಾಣ ಪತ್ರ ಹಾಗೂ ಬಾಡಿಗೆ ಮನೆಯಲ್ಲಿ ವಾಸಿಸುವವರಾದರೆ ಬಾಡಿಗೆ ಒಪ್ಪಂದ ಪತ್ರ ಸೇರಿದಂತೆ ಅಗತ್ಯ ದಾಖಲೆಗಳನ್ನು ಪರಿಶೀಲನೆಗೆ ಸಿದ್ಧವಾಗಿಡುವಂತೆ ಬೆಸ್ಕಾಂ ಮನವಿ ಮಾಡಿದೆ. ಮೀಟರ್ ರೀಡರ್‌ಗಳ ಮೂಲಕ ಸ್ಥಳದಲ್ಲೇ ಪರಿಶೀಲನೆ ನಡೆಸುವುದು ಈ ಪ್ರಕ್ರಿಯೆಯ ಪ್ರಮುಖ ಭಾಗವಾಗಿದ್ದು, ಗ್ರಾಹಕರು ಹಾಗೂ…

ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ಬೆಲೆಯಲ್ಲಿ ಭಾರಿ ಇಳಿಕೆ; 183.50 ರೂ. ಕಡಿತ

ನವದೆಹಲಿ: ವಾಣಿಜ್ಯ ಬಳಕೆಯ 19 ಕೆಜಿ ಎಲ್‌ಪಿಜಿ ಸಿಲಿಂಡರ್ ಬೆಲೆಯಲ್ಲಿ ಕೇಂದ್ರ ತೈಲ ಕಂಪನಿಗಳು 183.50 ರೂಪಾಯಿ ಕಡಿತ ಘೋಷಿಸಿವೆ. ಪರಿಷ್ಕೃತ ದರಗಳು ಜುಲೈ 1ರಿಂದಲೇ ಜಾರಿಗೆ ಬಂದಿದ್ದು, ಹೋಟೆಲ್, ರೆಸ್ಟೋರೆಂಟ್ ಹಾಗೂ ಇತರೆ ವಾಣಿಜ್ಯ ಬಳಕೆದಾರರಿಗೆ ಇದರಿಂದ ಆರ್ಥಿಕ ನಿರಾಳತೆ ದೊರೆಯಲಿದೆ. ಇತ್ತೀಚಿನ ಬೆಲೆ ಕಡಿತದ ಬಳಿಕ 19 ಕೆಜಿ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ದರವು 3,021 ರೂಪಾಯಿಯಿಂದ 2,930 ರೂಪಾಯಿಗೆ ಇಳಿಕೆಯಾಗಿದೆ. ಕಳೆದ ಜೂನ್ ತಿಂಗಳಲ್ಲಿ ಈ ಸಿಲಿಂಡರ್ ಬೆಲೆ 3,198 ರೂಪಾಯಿವರೆಗೆ ಏರಿಕೆಯಾಗಿತ್ತು. ಅಮೆರಿಕಾ–ಇರಾನ್ ಸಂಘರ್ಷದ ಹಿನ್ನೆಲೆಯಲ್ಲಿ ಜಾಗತಿಕ ಇಂಧನ ಮಾರುಕಟ್ಟೆಯಲ್ಲಿ ಉಂಟಾದ ಅನಿಶ್ಚಿತತೆ ಹಾಗೂ ಹಾರ್ಮುಜ್ ಜಲಸಂಧಿಯಲ್ಲಿನ ಪೂರೈಕೆ ವ್ಯತ್ಯಯದಿಂದ ಭಾರತದಲ್ಲಿ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ಬೆಲೆಯಲ್ಲಿ ಕಳೆದ ಕೆಲವು ತಿಂಗಳುಗಳಲ್ಲಿ ನಿರಂತರ ಏರಿಕೆ ಕಂಡುಬಂದಿತ್ತು. ತೈಲ ಕಂಪನಿಗಳು ಮಾರ್ಚ್‌ನಲ್ಲಿ 144 ರೂ., ಏಪ್ರಿಲ್‌ನಲ್ಲಿ 195.50 ರೂ., ಮೇ ತಿಂಗಳಲ್ಲಿ 993…