ಬೆಂಗಳೂರು: ಗೃಹಲಕ್ಷ್ಮಿ ಹಣವನ್ನು ಶೀಘ್ರವೇ ಬಿಡುಗಡೆ ಮಾಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ. ಮೈಸೂರಿನಲ್ಲಿ ಸುದ್ದಿಗಂಗರೊಂದಿಗೆ ಮಾತನಾಡಿದ ಅವರು, ಫೆಬ್ರವರಿ – ಮಾರ್ಚ್ ತಿಂಗಳ ಗೃಹಲಕ್ಷ್ಮಿ ಹಣ ಬಿಡುಗಡೆಯಾಗಿಲ್ಲ. ಪರಿಶೀಲಿಸಿ ಬಿಡುಗಡೆ ಮಾಡಲಾಗುವುದು ಎಂದರು. 23 ತಿಂಗಳ ಗೃಹಲಕ್ಷ್ಮಿ ಹಣವನ್ನು ಸರ್ಕಾರದ ಬಳಿ ಹಣವಿಲ್ಲದೆ ಕೊಡಲು ಸಾಧ್ಯವಾಗುತ್ತಿತ್ತೇ? ಗೃಹಲಕ್ಷ್ಮಿ ಹಣ ಫಲಾನುಭವಿಗಳ ಖಾತೆಗೆ ನೇರವಾಗಿ ವರ್ಗಾವಣೆ ಆಗುವಾಗ ಲಪಟಾಯಿಸುವ ಪ್ರಶ್ನೆ ಎಲ್ಲಿಂದ ಉದ್ಭವವಾಗುತ್ತದೆ? ಹಣವನ್ನು ಯಾರು ತೆಗೆದುಕೊಳ್ಳಲಾಗುವುದಿಲ್ಲ, ಹಣ ಇನ್ನು ಬಿಡುಗಡೆಯಾಗಿಲ್ಲ ಅಷ್ಟೆ ಎಂದರು.
Category: ಪ್ರಮುಖ ಸುದ್ದಿ
ಲಕ್ಷ್ಮೀ ಹೆಬ್ಬಾಳ್ಕರ್ ರಾಜೀನಾಮೆಗೆ ಜೆಡಿಎಸ್ ಆಗ್ರಹ
ಬೆಂಗಳೂರು: ಗೃಹಲಕ್ಷ್ಮೀ ಹಣ ₹5 ಸಾವಿರ ಕೋಟಿ ಎಲ್ಲಿ ಹೋಯ್ತು ಎಂದು ಜೆಡಿಎಸ್ ನಾಯಕ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ. ವಿಧಾನಸಭೆಯಲ್ಲಿನ ಬೆಳವಣಿಗೆ ಕುರಿತಂತೆ ಪ್ರತಿಕ್ರಿಯಿಸಿರುವ ಕುಮಾರಸ್ವಾಮಿ, ಫಲಾನುಭವಿಗಳ 2 ತಿಂಗಳ ಗೃಹಲಕ್ಷ್ಮೀ ಹಣ ₹5 ಸಾವಿರ ಕೋಟಿ ಎಲ್ಲಿ ಹೋಯ್ತು ? ಸದನಕ್ಕೆ ತಪ್ಪು ಮಾಹಿತಿ ನೀಡಿದ ಸಚಿವೆಯ ತಲೆದಂಡ ಯಾಕಿಲ್ಲ? ಎಂದು ಪ್ರಶ್ನಿಸಿದ್ದಾರೆ. ಫಲಾನುಭವಿಗಳ 2 ತಿಂಗಳ ಗೃಹಲಕ್ಷ್ಮೀ ಹಣ ₹5 ಸಾವಿರ ಕೋಟಿ ಎಲ್ಲಿ ಹೋಯ್ತು ? ಸದನಕ್ಕೆ ತಪ್ಪು ಮಾಹಿತಿ ನೀಡಿದ ಸಚಿವೆಯ ತಲೆದಂಡ ಯಾಕಿಲ್ಲ ? – ಶ್ರೀ @hd_kumaraswamy , ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವರು pic.twitter.com/u78yxmZSuJ — Janata Dal Secular (@JanataDal_S) December 22, 2025
ದೆಹಲಿ ಪೊಲೀಸರ ನೋಟಿಸ್ ಬಗ್ಗೆ ಕೋರ್ಟ್ ಮೊರೆಹೋಗಲು ಡಿ.ಕೆ.ಶಿವಕುಮಾರ್ ನಿರ್ಧಾರ
ಬೆಂಗಳೂರು: ದೆಹಲಿ ಪೊಲೀಸರು ನೀಡಿರುವ ನೋಟಿಸ್ ಕುರಿತಂತೆ ಕೋರ್ಟ್ ಮೊರೆಹೋಗಲು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನಿರ್ಧರಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಾ ಈ ವಿಷಯ ತಿಳಿಸಿದರು. “ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಯಾವುದೇ ಎಫ್ ಐಆರ್ ಇಲ್ಲದೇ ಇ.ಡಿ ಈ ಪ್ರಕರಣವನ್ನು ಹೇಗೆ ಕೈಗೆತ್ತಿಕೊಂಡಿತು. ನಮ್ಮ ಮೇಲೂ ಇ.ಡಿ ಬೇಕಾದಷ್ಟು ಪ್ರಕರಣಗಳನ್ನು ದಾಖಲಿಸಿತ್ತು. ಕೊನೆಗೆ ಏನಾಯಿತು? ಜೈಲಿನಲ್ಲಿ ಇಟ್ಟರು. ತುಘಲಕ್ ಪೊಲೀಸ್ ಠಾಣೆಯಲ್ಲಿ ಇಟ್ಟರು” ಎಂದರು. “ಸೋನಿಯಾಗಾಂಧಿ ಅವರು ಹಾಗೂ ರಾಹುಲ್ ಗಾಂಧಿ ಅವರಿಗೂ ಇದೇ ರೀತಿ ಮಾಡಲು ಹೊರಟರು ಆದರೆ ಧೈರ್ಯ ಸಾಲದೆ ಚಾರ್ಜ್ ಶೀಟ್ ಹಾಕಿದರು. ನ್ಯಾಯಾಲಯ ಇದನ್ನು ತಿರಸ್ಕರಿಸಿತು. ನ್ಯಾಯಾಲಯವು ಪೊಲೀಸರ ಬಳಿ ಚಾರ್ಜ್ ಶೀಟ್ ಎಲ್ಲಿ, ಎಫ್ ಐಆರ್ ಎಲ್ಲಿ ಎಂದು ಕೇಳಿತು. ನಮ್ಮ ವಕೀಲರಾದ ಅಭಿಷೇಕ್ ಮನುಸಿಂಗ್ವಿ ಅವರು ವಾದ ಮಾಡಿದರು. ಇವರು ಕಾನೂನುಗಳನ್ನು ಪರಿಶೀಲಿಸಿದಾಗ, ಯಾವುದೇ ವ್ಯಕ್ತಿ ದೂರು ನೀಡಿದರೆ ಪ್ರಕರಣದಾಖಲಿಸಲು ಬರುವುದಿಲ್ಲ.…
ಮನರೇಗ ವಿವಾದ; ಗ್ರಾಮ ಪಂಚಾಯಿತಿಗಳ ಅಧಿಕಾರ ಮೊಟಕುಗೊಳಿಸಲಾಗಿದೆ ಎಂದ ಕಾಂಗ್ರೆಸ್
ಬೆಂಗಳೂರು: ಮನರೇಗ ಯೋಜನೆಯಲ್ಲಿ ಬದಲಾವಣೆ ತರುವ ಮೂಲಕ ಕೇಂದ್ರ ಬಿಜೆಪಿ ಸರ್ಕಾರ ಗ್ರಾಮೀಣ ಭಾಗದ ಆರ್ಥಿಕ ಭದ್ರತೆಯನ್ನು ಸಂಪೂರ್ಣವಾಗಿ ನಾಶ ಮಾಡುತ್ತಿದೆ” ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಸಚಿನ್ ಪೈಲಟ್ ಅವರು ತಿಳಿಸಿದರು. ಕೆಪಿಸಿಸಿ ಕಚೇರಿಯಲ್ಲಿ ಸೋಮವಾರ ಮಾಧ್ಯಮಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, “ಭಾರತ ಸರ್ಕಾರವು ಐತಿಹಾಸಿಕ ಪ್ರಮಾದವನ್ನು ಮಾಡಿದೆ. ದೇಶದ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ರಾಷ್ಟ್ರಪಿತ ಮಹಾತ್ಮಾ ಗಾಂಧೀಜಿ ಅವರ ಹೆಸರಿನಲ್ಲಿದ್ದ ಯೋಜನೆಯ ಹೆಸರನ್ನು ಬದಲಿಸಲಾಗಿದೆ. ಇಷ್ಟು ದಿನ ಬೇರೆ ಹೆಸರಿನಲ್ಲಿದ್ದ ಯೋಜನೆಗಳ ಹೆಸರನ್ನು ಮಹಾತ್ಮಾ ಗಾಂಧೀಜಿ ಹೆಸರಿಗೆ ಬದಲಿಸಲಾಗುತ್ತಿತ್ತು. ಭಾರತ ಸರ್ಕಾರವು ದೇಶದ ಗ್ರಾಮೀಣ ಭಾಗದ ಆರ್ಥಿಕ ಭದ್ರತೆಯನ್ನು ಸಂಪೂರ್ಣವಾಗಿ ನಾಶ ಮಾಡುತ್ತಿದೆ. ಮನರೇಗಾ ಯೋಜನೆ ಕಾಂಗ್ರೆಸ್ ಸರ್ಕಾರದ ದೂರದೃಷ್ಟಿ ಯೋಜನೆಯಾಗಿದ್ದು, ಇದು ಆರ್ಥಿಕವಾಗಿ ತೀರಾ ಹಿಂದುಳಿದ ಜನರಿಗೆ ಸಂವಿಧಾನಿಕವಾಗಿ ಉದ್ಯೋಗ ಖಾತರಿ ಹಕ್ಕನ್ನು ನೀಡಲಾಗಿತ್ತು. ಗ್ರಾಮೀಣ ಭಾಗದ ಬಡ ಕುಟುಂಬದ ವ್ಯಕ್ತಿಗೆ ವರ್ಷಕ್ಕೆ 100…
ಹಿಂಸೆ ತಡೆಯಲು ‘ದ್ವೇಷ ಪ್ರತಿಬಂಧಕ ವಿಧೇಯಕ’ ಪ್ರಬಲ ಅಸ್ತ್ರ; ಪದ್ಮರಾಜ್ ಆರ್. ಪೂಜಾರಿ
ಮಂಗಳೂರು: ರಾಜ್ಯ ಸರ್ಕಾರ ಮಂಡಿಸಿರುವ ‘ದ್ವೇಷ ಭಾಷಣ ಮತ್ತು ದ್ವೇಷ ಅಪರಾಧಗಳ (ಪ್ರತಿಬಂಧಕ) ವಿಧೇಯಕ–2025’ ರಾಷ್ಟ್ರ ರಾಜಕಾರಣದಲ್ಲಿ ಚರ್ಚೆಯ ಕೇಂದ್ರಬಿಂದುವಾಗಿರುವ ನಡುವೆ, ಈ ಮಸೂದೆ ಸಾಮಾಜಿಕ ಸಾಮರಸ್ಯ ಕಾಪಾಡಲು ಸಹಕಾರಿ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್ ಆರ್. ಪೂಜಾರಿ ಹೇಳಿದ್ದಾರೆ. ‘ದ್ವೇಷ ಭಾಷಣ ಮತ್ತು ದ್ವೇಷ ಅಪರಾಧಗಳ (ಪ್ರತಿಬಂಧಕ) ವಿಧೇಯಕ’ ಜಾರಿಗೆ ತರುವಂತೆ ಸರ್ಕಾರಕ್ಕೆ ಸಲಹೆ ನೀಡಿದ್ದ ಮೊದಲ ವ್ಯಕ್ತಿ ಪದ್ಮರಾಜ್ ಆರ್. ಪೂಜಾರಿ. ಇದೀಗ ಈ ವಿದೇಯಕ ಜಾರಿಯಾಗುತ್ತಿರುವ ಬಗ್ಗೆ ಅವರು ಸಂತಸ ಹಂಚಿಕೊಂಡಿದ್ದಾರೆ. ವಿಧೇಯಕವು ಯಾರ ವಿರುದ್ದವೂ ಸೇಡು ತೀರಿಸಲು ಅಲ್ಲ, ಸಾಮಾಜಿಕ ಸ್ವಾಸ್ತ್ಯ ಕಾಪಾಡುವುದಕ್ಕಷ್ಟೇ’ ಎಂದವರು ಹೇಳಿದ್ದಾರೆ. ವಿಧೇಯಕವನ್ನು ಪ್ರತಿಪಕ್ಷಗಳು ಜನವಿರೋಧಿ ಎಂದು ಟೀಕಿಸುತ್ತಿರುವುದಕ್ಕೆ ಪ್ರತಿಕ್ರಿಯಿಸಿದ ಅವರು, ಇದೊಂದು ಜನಸ್ನೇಹಿ ಮತ್ತು ಕಾಲದ ಅಗತ್ಯಕ್ಕೆ ತಕ್ಕ ಕ್ರಮವಾಗಿದೆ ಎಂದು ಸಮರ್ಥಿಸಿಕೊಂಡಿದ್ದಾರೆ. ದ್ವೇಷ ಭಾಷಣ ನಿಯಂತ್ರಣಕ್ಕೆ ಕರ್ನಾಟಕಕ್ಕೆ ಸೂಕ್ತ ಕಾನೂನು ಅಗತ್ಯವಿದೆ ಎಂಬುದನ್ನು…
ಸಿಎಂ ಮತ್ತು ಡಿಸಿಎಂ ನೇತೃತ್ವದಲ್ಲಿ ಎಲ್ಲವೂ ಸುಸೂತ್ರವಾಗಿ ಸಾಗುತ್ತಿದೆ
ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷದಲ್ಲಾಗಲಿ ಅಥವಾ ಸರ್ಕಾರದಲ್ಲಾಗಲಿ ಯಾವುದೇ ಗೊಂದಲಗಳಿಲ್ಲ. ಸರ್ಕಾರ ಸುಭದ್ರವಾಗಿದೆ. ಸಮರ್ಥ ಆಡಳಿತ ನಡೆಸುತ್ತಿದೆ ಎಂದು ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಜೀವನೋಪಾಯ ಮತ್ತು ರಾಯಚೂರು ಜಿಲ್ಲಾ ಉಸ್ತುವಾರಿ ಶಿಕ್ಷಣ ಸಚಿವರಾದ ಡಾ. ಶರಣಪ್ರಕಾಶ ಆರ್. ಪಾಟೀಲ್ ಸ್ಪಷ್ಟಪಡಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಅಧಿಕಾರ ಹಸ್ತಾಂತರ ಅಥವಾ ಇನ್ನಾವುದೇ ವಿಷಯಗಳಿದ್ದರೂ ನಮ್ಮ ಪಕ್ಷದ ವರಿಷ್ಠ ನಾಯಕರು ತೀರ್ಮಾನ ಕೈಗೊಳ್ಳುತ್ತಾರೆ ಎಂದರು. ಮುಖ್ಯಮಂತ್ರಿಗಳು ಹಾಗೂ ಉಪ ಮುಖ್ಯಮಂತ್ರಿಗಳ ನಡುವೆ ಒಪ್ಪಂದ ಎಂಬ ವಿಷಯವನ್ನು ಮಾಧ್ಯಮಗಳಲ್ಲಿ ನೋಡಿದೆ. ಆದರೆ ಈ ಬಗ್ಗೆ ನಮಗೆ ಯಾವುದೇ ಮಾಹಿತಿ ಇಲ್ಲ. ಆದರೆ ಪಕ್ಷದ ಎಲ್ಲಾ ನಾಯಕರ ತೀರ್ಮಾನ ಒಂದೇ. ಹೈಕಮಾಂಡ್ ಏನು ಹೇಳುತ್ತದೆಯೋ ಅದನ್ನು ನಾವೆಲ್ಲರೂ ಪಾಲಿಸುತ್ತೇವೆ ಎಂದರು. ಸರ್ಕಾರದಲ್ಲಿ ಎಲ್ಲರೂ ಒಟ್ಟಾಗಿದ್ದೇವೆ. ಸಿಎಂ ಮತ್ತು ಡಿಸಿಎಂ ನೇತೃತ್ವದಲ್ಲಿ ಎಲ್ಲವೂ ಸುಸೂತ್ರವಾಗಿ ಸಾಗುತ್ತಿದೆ ಇಷ್ಟು ಮಾತ್ರ ನಾನೂ ಹೇಳಬಲ್ಲೇ ಎಂದು…
ಭ್ರಷ್ಟಾಚಾರ ಪ್ರಕರಣ: ಇಮ್ರಾನ್ ಖಾನ್, ಬುಶ್ರಾ ಬೀಬಿಗೆ 17 ವರ್ಷ ಜೈಲು
ಇಸ್ಲಾಮಾಬಾದ್: ತೋಷಖಾನಾ–2 ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಪಾಕಿಸ್ತಾನದ ಮಾಜಿ ಪ್ರಧಾನಿ ಹಾಗೂ ಪಾಕಿಸ್ತಾನ ತೆಹ್ರೀಕ್-ಇ-ಇನ್ಸಾಫ್ (ಪಿಟಿಐ) ಮುಖ್ಯಸ್ಥ ಇಮ್ರಾನ್ ಖಾನ್ ಮತ್ತು ಅವರ ಪತ್ನಿ ಬುಶ್ರಾ ಬೀಬಿಗೆ ಪಾಕಿಸ್ತಾನ ನ್ಯಾಯಾಲಯ ಶನಿವಾರ ತಲಾ 17 ವರ್ಷಗಳ ಜೈಲು ಶಿಕ್ಷೆಯ ತೀರ್ಪು ಪ್ರಕಟಿಸಿದೆ. ಮೇ 2021ರಲ್ಲಿ ಸೌದಿ ಅರೇಬಿಯಾದ ಕಿರೀಟ ರಾಜಕುಮಾರರಿಂದ ಅಧಿಕೃತ ಭೇಟಿಯ ಸಂದರ್ಭದಲ್ಲಿ ಉಡುಗೊರೆಯಾಗಿ ದೊರೆತ ದುಬಾರಿ ಆಭರಣ ಸೆಟ್ ಅನ್ನು ಅತಿ ಕಡಿಮೆ ಬೆಲೆಗೆ ಖರೀದಿಸಿದ ಆರೋಪ ಈ ಪ್ರಕರಣಕ್ಕೆ ಕಾರಣವಾಗಿದೆ. ರಾವಲ್ಪಿಂಡಿಯ ಅಡಿಯಾಲಾ ಜೈಲಿನಲ್ಲಿ ನಡೆಯುತ್ತಿರುವ ವಿಚಾರಣೆಯ ವೇಳೆ ಫೆಡರಲ್ ತನಿಖಾ ಸಂಸ್ಥೆ (ಎಫ್‌ಐಎ)ಯ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಶಾರುಖ್ ಅರ್ಜುಮಂದ್ ತೀರ್ಪು ಪ್ರಕಟಿಸಿದರು. ತೀರ್ಪಿನಂತೆ, ಪಾಕಿಸ್ತಾನ ದಂಡ ಸಂಹಿತೆಯ ವಿವಿಧ ವಿಧಿಗಳ ಅಡಿಯಲ್ಲಿ ಇಮ್ರಾನ್ ಖಾನ್ ಅವರಿಗೆ 10 ವರ್ಷಗಳ ಕಠಿಣ ಜೈಲು ಶಿಕ್ಷೆ ಮತ್ತು ಭ್ರಷ್ಟಾಚಾರ ತಡೆ ಕಾಯ್ದೆಯಡಿ ಏಳು…
ರಾಜಧಾನಿ ಎಕ್ಸ್‌ಪ್ರೆಸ್ ಡಿಕ್ಕಿ: ಏಳು ಆನೆಗಳ ಸಾವು
ನವದೆಹಲಿ/ಗುವಾಹಟಿ: ಶನಿವಾರ ಬೆಳಗಿನ ಜಾವ ಅಸ್ಸಾಂನ ಹೊಜೈ ಸಮೀಪ ಸೈರಾಂಗ್–ನವದೆಹಲಿ ರಾಜಧಾನಿ ಎಕ್ಸ್‌ಪ್ರೆಸ್ ರೈಲು ಆನೆಗಳ ಹಿಂಡಿಗೆ ಡಿಕ್ಕಿ ಹೊಡೆದ ಪರಿಣಾಮ ಕನಿಷ್ಠ ಏಳು ಆನೆಗಳು ಸಾವನ್ನಪ್ಪಿದ್ದು, ಒಂದು ಮರಿ ಗಾಯಗೊಂಡಿದೆ. ಅಪಘಾತದಿಂದ ರೈಲಿನ ಕೆಲವು ಬೋಗಿಗಳು ಹಳಿತಪ್ಪಿದ್ದು, ಈಶಾನ್ಯ ಭಾಗದ ರೈಲು ಸಂಚಾರದಲ್ಲಿ ವ್ಯತ್ಯಯ ಉಂಟಾಗಿದೆ. ಅಧಿಕಾರಿಗಳ ಮಾಹಿತಿ ಪ್ರಕಾರ, ನವದೆಹಲಿಗೆ ತೆರಳುತ್ತಿದ್ದ ರಾಜಧಾನಿ ಎಕ್ಸ್‌ಪ್ರೆಸ್ ಬೆಳಿಗ್ಗೆ 2.17ರ ಸುಮಾರಿಗೆ ಹಳಿ ದಾಟುತ್ತಿದ್ದ ಆನೆಗಳ ಹಿಂಡಿಗೆ ಡಿಕ್ಕಿ ಹೊಡೆದಿದೆ. ಘಟನಾ ಸ್ಥಳಕ್ಕೆ ಧಾವಿಸಿದ ಅರಣ್ಯ ಇಲಾಖೆ ಅಧಿಕಾರಿಗಳು ಏಳು ಆನೆಗಳ ಸಾವನ್ನು ದೃಢಪಡಿಸಿದ್ದು, ಗಾಯಗೊಂಡ ಮರಿಯನ್ನು ರಕ್ಷಿಸಿ ಚಿಕಿತ್ಸೆ ನೀಡಲಾಗಿದೆ. ಡಿಕ್ಕಿಯ ಪರಿಣಾಮ ರೈಲಿನ ಕೆಲ ಬೋಗಿಗಳು ಹಳಿ ತಪ್ಪಿದ್ದರೂ, ಘಟನೆಯಲ್ಲಿ ಯಾವುದೇ ಪ್ರಯಾಣಿಕರು ಅಥವಾ ರೈಲ್ವೆ ಸಿಬ್ಬಂದಿಗೆ ಗಾಯಗಳಾಗಿಲ್ಲ ಎಂದು ರೈಲ್ವೆ ಇಲಾಖೆ ಸ್ಪಷ್ಟಪಡಿಸಿದೆ. ಮಿಜೋರಾಂನ ಐಜ್ವಾಲ್ ಸಮೀಪದ ಸೈರಾಂಗ್‌ನಿಂದ ದೆಹಲಿಯ ಆನಂದ್ ವಿಹಾರ್…
ಕರ್ನಾಟಕದಲ್ಲಿ ಅಕ್ರಮ ವಲಸಿಗರ ಹಾವಳಿ ಮಿತಿ ಮೀರಿದೆ: ಬಿಜೆಪಿ ಆರೋಪ
ಬೆಂಗಳೂರು: ಕರ್ನಾಟಕದಲ್ಲಿ ಅಕ್ರಮ ವಲಸಿಗರ ಹಾವಳಿ ಎಲ್ಲ ಮಿತಿಗಳನ್ನು ಮೀರಿದೆ ಎಂದು ಆರೋಪಿಸಿರುವ ಬಿಜೆಪಿ, ಕೇಂದ್ರದ ನಿರ್ದೇಶನಗಳನ್ನು ಕಟ್ಟುನಿಟ್ಟಾಗಿ ಜಾರಿಗೆ ತಂದು ಕಠಿಣ ಕ್ರಮ ಕೈಗೊಳ್ಳುವಂತೆ ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರವನ್ನು ಒತ್ತಾಯಿಸಿದೆ. ಶನಿವಾರ ಮಾತನಾಡಿದ ಪ್ರತಿಪಕ್ಷದ ನಾಯಕ ಆರ್. ಅಶೋಕ, ರಾಜ್ಯದಲ್ಲಿ ಸುಮಾರು 15–20 ಲಕ್ಷ ಅಕ್ರಮ ವಲಸಿಗರು ವಾಸಿಸುತ್ತಿದ್ದಾರೆ ಎಂಬ ಅಂದಾಜುಗಳಿದ್ದು, ಅವರನ್ನು ಗಡೀಪಾರು ಮಾಡುವ ಬದಲು ಕಾಂಗ್ರೆಸ್ ಸರ್ಕಾರವು “ಮತಬ್ಯಾಂಕ್ ಆಗಿ ವ್ಯವಸ್ಥಿತವಾಗಿ ಪೋಷಿಸುತ್ತಿದೆ” ಎಂದು ಆರೋಪಿಸಿದರು. ಅಕ್ರಮ ವಲಸಿಗರು ರಾಷ್ಟ್ರೀಯ ಭದ್ರತೆಗೆ ಗಂಭೀರ ಬೆದರಿಕೆ ಉಂಟುಮಾಡುತ್ತಿದ್ದಾರೆ; ಅವರ ವಿರುದ್ಧ ಕ್ರಮ ಕೈಗೊಳ್ಳುವಾಗಲೆಲ್ಲ ಕಾಂಗ್ರೆಸ್ ಮೃದು ಧೋರಣೆ ತಾಳುತ್ತಿದೆ ಎಂದರು. ಮತದಾರರ ಪಟ್ಟಿಯಿಂದ ಅಕ್ರಮ ವಲಸಿಗರನ್ನು ಹೊರಗಿಡಲು ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ವ್ಯಾಯಾಮವನ್ನು ಉಲ್ಲೇಖಿಸಿದ ಅಶೋಕ, ಈ ಕ್ರಮವನ್ನು ವಿರೋಧಿಸಿ ಕಾಂಗ್ರೆಸ್ ‘ಮತ ಕಳ್ಳತನ’ ಎಂಬ ನೆಪದಲ್ಲಿ…
ಮತ್ತೆ ಸಿಎಂ ಬದಲಾವಣೆ ಚರ್ಚೆ; ಸಿಎಂ, ನನ್ನನ್ನು ಸೂಕ್ತ ಸಮಯದಲ್ಲಿ ಕರೆಯುವುದಾಗಿ ಹೈಕಮಾಂಡ್ ತಿಳಿಸಿದೆ ಎಂದ ಡಿಕೆಶಿ
ಬೆಂಗಳೂರು: “ನಮ್ಮ ಹೈಕಮಾಂಡ್ ನಾಯಕರು ಸಿಎಂ ಮತ್ತು ನನಗೆ ಇಬ್ಬರಿಗೂ ಏನೋ ಹೇಳಿದ್ದಾರೆ. ಸೂಕ್ತ ಸಮಯದಲ್ಲಿ ಕರೆಸುತ್ತೇವೆ ಎಂದೂ ಇಬ್ಬರಿಗೂ ಹೇಳಿದ್ದಾರೆ. ಆಗ ಇಬ್ಬರೂ ದಿಲ್ಲಿಗೆ ಹೋಗುತ್ತೇವೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮಗಳಿಗೆ ಶನಿವಾರ ಪ್ರತಿಕ್ರಿಯೆ ನೀಡಿದ ಡಿ.ಕೆ. ಶಿವಕುಮಾರ್, “ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ಇ.ಡಿ ಹಾಕಿದ್ದ ಚಾರ್ಜ್ ಶೀಟ್ ಕೋರ್ಟ್ ನಲ್ಲಿ ತಿರಸ್ಕೃತಗೊಂಡಿದ್ದು, ಈಗ ಒಂದು ಎಫ್ಐಆರ್ ಬಾಕಿ ಉಳಿದುಕೊಂಡಿದೆ. ನಮ್ಮ ಮೇಲೆ ಯಾವ ರೀತಿ ದಬ್ಬಾಳಿಕೆ ನಡೆಯುತ್ತಿದೆ ಎಂದು ತಿಳಿಸಲು ನಾವು ಪ್ರತಿಭಟನೆ ನಡೆಸುತ್ತಿದ್ದೇವೆ” ಎಂದರು. ವಿಧಾನ ಮಂಡಲ ಅಧಿವೇಶನದ ಬಳಿಕ ನೀವು ಮತ್ತು ಸಿಎಂ ದೆಹಲಿಗೆ ಹೋಗಿ ಹೈಕಮಾಂಡ್ ನಾಯಕರನ್ನು ಭೇಟಿ ಮಾಡುವ ಎಂದು ಚರ್ಚೆ ಇದೆಯಲ್ಲ ಎಂದು ಕೇಳಿದಾಗ, “ಆ ರೀತಿ ಇದ್ದರೆ ನಿಮಗೂ ತಿಳಿಸುತ್ತೇವೆ. ನಿಮಗೆ ತಿಳಿಸದೇ ಏನೂ ಮಾಡುವುದಿಲ್ಲ. ನಾನು ಕದ್ದುಮುಚ್ಚಿ ಹೋಗುವುದಿಲ್ಲ”…
