ನವದೆಹಲಿ: 80ನೇ ಸ್ವಾತಂತ್ರ್ಯ ದಿನಾಚರಣೆಗೆ ಮುನ್ನ ಭಾರತೀಯ ಜನತಾ ಪಕ್ಷ (ಬಿಜೆಪಿ) ಭಾನುವಾರ ಹಲವು ರಾಜ್ಯಗಳಲ್ಲಿ ‘ತಿರಂಗ ಯಾತ್ರೆ’ಗೆ ಚಾಲನೆ ನೀಡಿದೆ. ಸ್ವಾತಂತ್ರ್ಯ ಹೋರಾಟಗಾರರು ಹಾಗೂ ಹುತಾತ್ಮರ ತ್ಯಾಗವನ್ನು ಸ್ಮರಿಸುವುದು ಮತ್ತು ರಾಷ್ಟ್ರಧ್ವಜದ ಗೌರವವನ್ನು ಎತ್ತಿಹಿಡಿಯುವುದು ಯಾತ್ರೆಯ ಉದ್ದೇಶ ಎಂದು ಪಕ್ಷದ ನಾಯಕರು ತಿಳಿಸಿದ್ದಾರೆ. ಮಧ್ಯಪ್ರದೇಶದಲ್ಲಿ ಮುಖ್ಯಮಂತ್ರಿ ಮೋಹನ್ ಯಾದವ್ ಯಾತ್ರೆಯಲ್ಲಿ ಭಾಗವಹಿಸಿ, ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಕ್ರಾಂತಿಕಾರಿಗಳು ಹಾಗೂ ಹುತಾತ್ಮರ ತ್ಯಾಗವನ್ನು ಸ್ಮರಿಸುವುದು ಪ್ರತಿಯೊಬ್ಬ ದೇಶಭಕ್ತನ ಕರ್ತವ್ಯ ಎಂದರು. ಸ್ವಾತಂತ್ರ್ಯ ದಿನಾಚರಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ದೇಶಾದ್ಯಂತ ತಿರಂಗ ಯಾತ್ರೆ ಆಯೋಜಿಸಲಾಗುತ್ತಿದೆ ಎಂದು ಹೇಳಿದರು. ಉತ್ತರ ಪ್ರದೇಶದಲ್ಲಿ ಉಪಮುಖ್ಯಮಂತ್ರಿ ಬ್ರಜೇಶ್ ಪಾಠಕ್ ಮಾತನಾಡಿ, ‘ಕಾಕೋರಿ ರೈಲು ಕ್ರಿಯಾ ದಿನ’ದ ಅಂಗವಾಗಿಯೂ ಕಾರ್ಯಕ್ರಮಗಳಿಗೆ ಮಹತ್ವವಿದೆ ಎಂದರು. ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಕೂಡ ತಿರಂಗ ರ‍್ಯಾಲಿಯಲ್ಲಿ ಭಾಗವಹಿಸಿ, ಯುವಜನತೆ ದೇಶದ ಸವಾಲುಗಳನ್ನು ಎದುರಿಸುವ ಶಕ್ತಿಯನ್ನು ಹೊಂದಿದ್ದು, ಅವರಿಗೆ ಸೂಕ್ತ ವೇದಿಕೆ…
Category: ಪ್ರಮುಖ ಸುದ್ದಿ
ಕ್ವಿಟ್ ಇಂಡಿಯಾ ಚಳುವಳಿ ಸ್ವಾತಂತ್ರ್ಯ ಹೋರಾಟಕ್ಕೆ ಹೊಸ ಶಕ್ತಿ ತುಂಬಿತ್ತು’: ಪ್ರಧಾನಿ ಮೋದಿ
ನವದೆಹಲಿ: ಐತಿಹಾಸಿಕ ಕ್ವಿಟ್ ಇಂಡಿಯಾ ಚಳುವಳಿಯಲ್ಲಿ ಭಾಗವಹಿಸಿದ ಎಲ್ಲರಿಗೂ ಪ್ರಧಾನಿ ನರೇಂದ್ರ ಮೋದಿ ಭಾನುವಾರ ಗೌರವ ಸಲ್ಲಿಸಿದರು. ಸ್ವಾತಂತ್ರ್ಯ ಹೋರಾಟದ ಸಂದರ್ಭದಲ್ಲಿ ಚಳುವಳಿಯ ಹೋರಾಟಗಾರರು ಪ್ರದರ್ಶಿಸಿದ ಧೈರ್ಯ, ತ್ಯಾಗ ಮತ್ತು ದೃಢಸಂಕಲ್ಪವನ್ನು ಸ್ಮರಿಸಿದ ಅವರು, ಅವರ ಕೊಡುಗೆಗಳು ಇಂದಿಗೂ ಭಾರತೀಯರಿಗೆ ಸ್ಫೂರ್ತಿಯಾಗಿವೆ ಎಂದು ಹೇಳಿದರು. ಕ್ವಿಟ್ ಇಂಡಿಯಾ ಚಳುವಳಿಯ ವಾರ್ಷಿಕೋತ್ಸವದ ಅಂಗವಾಗಿ ಸಾಮಾಜಿಕ ಮಾಧ್ಯಮ ‘X’ನಲ್ಲಿ ಸಂದೇಶ ನೀಡಿದ ಮೋದಿ, ಮಹಾತ್ಮ ಗಾಂಧಿಯವರ ನೇತೃತ್ವದಲ್ಲಿ ನೀಡಲಾದ ‘ಕ್ವಿಟ್ ಇಂಡಿಯಾ’ ಕರೆಯು ಭಾರತದ ಸ್ವಾತಂತ್ರ್ಯ ಹೋರಾಟಕ್ಕೆ ಹೊಸ ವೇಗ ನೀಡಿತ್ತು ಎಂದು ಹೇಳಿದರು. ವಸಾಹತುಶಾಹಿ ಆಡಳಿತದಿಂದ ಮುಕ್ತರಾಗಬೇಕೆಂಬ ಭಾರತೀಯರ ಸಾಮೂಹಿಕ ಸಂಕಲ್ಪವನ್ನು ಈ ಚಳುವಳಿ ಪ್ರತಿಬಿಂಬಿಸಿತ್ತು. ಚಳುವಳಿಯಲ್ಲಿ ಭಾಗವಹಿಸಿದವರ ಧೈರ್ಯ ಮತ್ತು ಬದ್ಧತೆ ಮುಂದಿನ ಪೀಳಿಗೆಗಳಿಗೂ ಸ್ಫೂರ್ತಿಯಾಗಿ ಉಳಿಯಲಿದೆ ಎಂದು ಪ್ರಧಾನಿ ಹೇಳಿದರು. 1942ರ ಆಗಸ್ಟ್‌ನಲ್ಲಿ ಮಹಾತ್ಮ ಗಾಂಧಿಯವರ ನೇತೃತ್ವದಲ್ಲಿ ಕ್ವಿಟ್ ಇಂಡಿಯಾ ಚಳುವಳಿ ಆರಂಭಗೊಂಡಿತ್ತು. ಬ್ರಿಟಿಷ್ ಆಡಳಿತವನ್ನು…
35ನೇ ಶ್ರೀ ರಾಜೀವ್ ಗಾಂಧಿ ಜ್ಯೋತಿ ಸದ್ಭಾವನಾ ಯಾತ್ರೆ; 2,982 ಕಿ.ಮೀ. ಪಯಣ
ಶ್ರೀಪೆರಂಬುದೂರು/ನವದೆಹಲಿ: ರಾಷ್ಟ್ರೀಯ ಏಕತೆ, ಕೋಮು ಸಾಮರಸ್ಯ, ಜಾತ್ಯತೀತತೆ ಹಾಗೂ ಶಾಂತಿಯ ಸಂದೇಶವನ್ನು ಸಾರುವ ಶ್ರೀ ರಾಜೀವ್ ಗಾಂಧಿ ಜ್ಯೋತಿ ಸದ್ಭಾವನಾ ಯಾತ್ರೆಯ 35ನೇ ಆವೃತ್ತಿಗೆ ಆಗಸ್ಟ್ 9ರಂದು ಶ್ರೀಪೆರಂಬುದೂರಿನಿಂದ ಚಾಲನೆ ದೊರೆಯಲಿದೆ. ಮಾಜಿ ಪ್ರಧಾನಿ ರಾಜೀವ್ ಗಾಂಧಿ ಹತ್ಯೆಗೀಡಾದ ಶ್ರೀಪೆರಂಬುದೂರಿನಲ್ಲಿ ಶಾಶ್ವತ ಜ್ಯೋತಿ ಬೆಳಗಿಸಿದ ಬಳಿಕ ಯಾತ್ರೆ ಆರಂಭವಾಗಲಿದೆ. ಸುಮಾರು 2,982 ಕಿಲೋಮೀಟರ್‌ಗಳ 12 ದಿನಗಳ ಯಾತ್ರೆ ಎಂಟು ರಾಜ್ಯಗಳ ಮೂಲಕ ಸಾಗಲಿದ್ದು, ಆಗಸ್ಟ್ 19ರಂದು ರಾಷ್ಟ್ರ ರಾಜಧಾನಿ ನವದೆಹಲಿಯನ್ನು ತಲುಪಲಿದೆ. ತಮಿಳುನಾಡಿನಿಂದ ಆರಂಭವಾಗುವ ಯಾತ್ರೆ ಕರ್ನಾಟಕ, ತೆಲಂಗಾಣ, ಮಹಾರಾಷ್ಟ್ರ, ಮಧ್ಯಪ್ರದೇಶ, ಉತ್ತರ ಪ್ರದೇಶ ಮತ್ತು ಹರಿಯಾಣ ಸೇರಿದಂತೆ ವಿವಿಧ ರಾಜ್ಯಗಳ ಪ್ರಮುಖ ನಗರಗಳು ಹಾಗೂ ಪಟ್ಟಣಗಳ ಮೂಲಕ ಸಾಗಲಿದೆ. ಕರ್ನಾಟಕದಲ್ಲಿ ಬೆಂಗಳೂರು, ಚಿತ್ರದುರ್ಗ, ರಾಯಚೂರು ಹಾಗೂ ಕಲಬುರಗಿ ಸೇರಿದಂತೆ ಪ್ರಮುಖ ಸ್ಥಳಗಳಲ್ಲಿ ಯಾತ್ರೆ ಸಾಗಲಿದೆ. ನಂತರ ಹೈದರಾಬಾದ್, ಆದಿಲಾಬಾದ್, ಬೇತುಲ್, ಗುಣ, ಗ್ವಾಲಿಯರ್ ಮತ್ತು ಗುರುಗ್ರಾಮ್…
ಬಾರಾಮತಿಯಲ್ಲಿ ವಿಮಾನ ನಿಲ್ದಾಣದಲ್ಲಿ ತರಬೇತಿ ವಿಮಾನ ಪತನ
ಬಾರಾಮತಿ: ಪುಣೆಯ ಬಾರಾಮತಿ ವಿಮಾನ ನಿಲ್ದಾಣದಲ್ಲಿ ಖಾಸಗಿ ಕಂಪನಿಯೊಂದು ನಿರ್ವಹಿಸುತ್ತಿದ್ದ ತರಬೇತಿ ವಿಮಾನ ಭಾನುವಾರ ಮಧ್ಯಾಹ್ನ ಅಪಘಾತಕ್ಕೀಡಾಗಿದೆ. ಘಟನೆಯಲ್ಲಿ ಯಾವುದೇ ಗಾಯಗಳಾಗಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ವಿಮಾನಕ್ಕೆ ಸಣ್ಣ ಪ್ರಮಾಣದ ಹಾನಿಯಾಗಿದೆ. ವಿಮಾನ ನಿಲ್ದಾಣದ ಆವರಣದಲ್ಲಿ ರನ್‌ವೇಯಿಂದ ಸ್ವಲ್ಪ ದೂರ ಮಧ್ಯಾಹ್ನ 12.35ರ ಸುಮಾರಿಗೆ ಅಪಘಾತ ಸಂಭವಿಸಿದೆ. ಮಾಹಿತಿ ತಿಳಿಯುತ್ತಿದ್ದಂತೆ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದರು. ಅಪಘಾತದ ನಿಖರ ಕಾರಣ ತಿಳಿದುಬಂದಿಲ್ಲ. ಜನವರಿಯಲ್ಲಿ ಇದೇ ಬಾರಾಮತಿ ವಿಮಾನ ನಿಲ್ದಾಣದ ಬಳಿ ಲಿಯರ್‌ಜೆಟ್ 45 ವಿಮಾನ ಅಪಘಾತಕ್ಕೀಡಾಗಿ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ಸೇರಿದಂತೆ ಐವರು ಮೃತಪಟ್ಟಿದ್ದರು. ಈ ಹಿನ್ನೆಲೆಯಲ್ಲಿ ಭಾನುವಾರದ ಘಟನೆ ಮತ್ತೆ ವಿಮಾನ ನಿಲ್ದಾಣದ ಸುರಕ್ಷತಾ ವ್ಯವಸ್ಥೆಗಳ ಬಗ್ಗೆ ಗಮನ ಸೆಳೆದಿದೆ. ಜನವರಿ 28ರಂದು ನಡೆದ ಅಪಘಾತದ ಕುರಿತು ವಿಮಾನ ಅಪಘಾತ ತನಿಖಾ ಬ್ಯೂರೋ (AAIB) ತನಿಖೆ ನಡೆಸಿತ್ತು. ಪ್ರಾಥಮಿಕ ವರದಿಯಲ್ಲಿ ಅಪಘಾತದ ಸಮಯದಲ್ಲಿ…
ಸಭಾಪತಿ ರಾಜೀನಾಮೆ ವಿವಾದ; ರಾಜ್ಯಪಾಲರಿಗೆ ಬಿಜೆಪಿ-ಜೆಡಿಎಸ್ ನಿಯೋಗ ದೂರು
ಬೆಂಗಳೂರು: ಮುಖ್ಯಮಂತ್ರಿ ಬದಲಾಗಿ ಸಂಪುಟ ಪುನಾರಚನೆಯಾಗುತ್ತಿದ್ದಂತೆಯೇ ವಿಧಾನ ಪರಿಷತ್ತಿನ ಚಿತ್ರಣವೂ ಬದಲಾಗಿದೆ. ಇದೀಗ ಆಡಳಿತಾರೂಢ ಕಾಂಗ್ರೆಸ್ ಪಕ್ಷವು ಮೇಲ್ಮನೆಯಲ್ಲಿ ಸಂಪೂರ್ಣ ಬಹುಮತವನ್ನು ಹೊಂದಿದೆ. ಈ ಸನ್ನಿವೇಶವನ್ನೇ ಮುಂದಿಟ್ಟು ಕಾಂಗ್ರೆಸ್ ಪಕ್ಷವು ಮೇಲ್ಮನೆಯಲ್ಲಿ ಹಿಡಿತ ಸಾಧಿಸಲು ಕಾರ್ಯತಂತ್ರ ರೂಪಿಸಿದೆ. ಸಚಿವ ಸ್ಥಾನ ವಂಚಿತ ನಾಯಕರನ್ನು ವಿಧಾನ ಪರಿಷತ್ತಿನ ಸಭಾಪತಿ ಹಾಗೂ ಉಪಸಭಾಪತಿ ಸ್ಥಾನಕ್ಕೆ ಮಾಡಿದ್ದು, ಈ ಹಿನ್ನೆಲೆಯಲ್ಲಿ ಸಂಭಾಪತಿ ಬಸವರಾಜ ಹೊರಟ್ಟಿ ಅವರಿಂದ ರಾಜೀನಾಮೆ ಪಡೆಯಲಾಗಿದೆ. ಆರಂಭದಲ್ಲಿ ರಾಜೀನಾಮೆಗೆ ಒಪ್ಪದ ಹೊರಟ್ಟಿಯವರು ಬಳಿಕ ಅವಿಶ್ವಾಸ ನಿರ್ಣಯಕ್ಕೆ ಬೆದರಿ ಪದತ್ಯಾಗ ಮಾಡಿದ್ದಾರೆ. ಈ ಬೆಳವಣಿಗೆಯು ಪ್ರತಿಪಕ್ಷಗಳನ್ನು ಕೆರಳುವಂತೆ ಮಾಡಿದೆ. ಈ ವಿವಾದವನ್ನು ಬಿಜೆಪಿ-ಜೆಡಿಎಸ್ ನಾಯಕರು ರಾಜ್ಯಪಾಲರ ಅಂಗಳಕ್ಕೆ ಒಯ್ದಿದ್ದು, ಸರ್ಕಾರದ ವಿರುದ್ಧ ರಾಜ್ಯಪಾಲರಿಗೆ ದೂರು ಸಲ್ಲಿಸಿದೆ. ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ನೇತೃತ್ವದ ನಿಯೋಗವು ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಅವರನ್ನು ಭೇಟಿಯಾಗಿ ದೂರು ಸಲ್ಲಿಸಿತು. ವಿಧಾನ ಪರಿಷತ್…
ಆ.13ರಿಂದ ವಿಧಾನಸಭೆ ಅಧಿವೇಶನ: ಹಂಗಾಮಿ ಸಭಾಧ್ಯಕ್ಷರಾಗಿ ಟಿ.ಬಿ.ಜಯಚಂದ್ರ
ಬೆಂಗಳೂರು: ಹಿರಿಯ ಶಾಸಕ ಹಾಗೂ ಮಾಜಿ ಸಚಿವರಾದ ಟಿಬಿ ಜಯಚಂದ್ರ ಅವರು ಸೋಮವಾರದಿಂದ (ಆ.10) ಹಂಗಾಮಿ ವಿಧಾನಸಭಾ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸಲಿದ್ದಾರೆ. ಆಗಸ್ಟ್ 13ರಿಂದ 27ರವರೆಗೆ 10 ದಿನಗಳ ಕಾಲ ನಡೆಯಲಿರುವ ಮಳೆಗಾಲದ ವಿಧಾನ ಸಭೆ ಅಧಿವೇಶನವನ್ನು ಅವರು ನಡೆಸಿಕೊಡಲಿದ್ದು, ಸೋಮವಾರ ವಿಧಾನಸಭಾ ಅಧ್ಯಕ್ಷರ ಕಚೇರಿಗೆ ತೆರಳಿ ಕಾರ್ಯ ಆರಂಭಿಸಲಿದ್ದಾರೆ. ಅಧಿವೇಶನದ ಮೊದಲ ದಿನವಾದ ಗುರುವಾರ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಚಿವ ಸಂಪುಟದಲ್ಲಿ ಸಚಿವರಾಗಿದ್ದ ಡಿ ಸುಧಾಕರ್ , ಮಾಜಿ ಪ್ರಧಾನಿ ದೇವೇಗೌಡ ಅವರ ಪತ್ನಿ ಚೆನ್ನಮ್ಮ ದೇವೇಗೌಡ ಸೇರಿದಂತೆ ಇತ್ತೀಚಿಗೆ ಅಗಲಿದ ಗಣ್ಯರಿಗೆ ಸಂತಾಪ ಸೂಚಿಸಲಾಗುವುದು. ಶುಕ್ರವಾರದಿಂದ ನಿಗದಿತ ವೇಳಾಪಟ್ಟಿಯಂತೆ ಕಲಾಪ ನಡೆಯಲಿದೆ. ಮುಖ್ಯಮಂತ್ರಿಯಾಗಿ ಡಿ.ಕೆ ಶಿವಕುಮಾರ್ ಅವರು ಪ್ರತಿಜ್ಞಾವಿಧಿ ಸ್ವೀಕರಿಸಿದ ಸಂದರ್ಭದಲ್ಲಿ ಅವರೊಂದಿಗೆ ಡಾ.ಜಿ.ಪರಮೇಶ್ವರ್ ಅವರು ಉಪ ಮುಖ್ಯಮಂತ್ರಿಯಾಗಿ ಹಾಗೂ 12 ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದರು. ಅವರುಗಳಿಗೆ ಖಾತೆಗಳನ್ನು ಹಂಚಿಕೆ ಮಾಡಲಾಗಿದೆ.…
ಚಂಡಿಪುರ ವೈರಸ್ ಆತಂಕ; 217 ಶಂಕಿತ ಪ್ರಕರಣ, 23 ಸಾವು
ಗಾಂಧಿನಗರ: ಗುಜರಾತ್‌ನಲ್ಲಿ ಚಂಡಿಪುರ ವೈರಸ್ ಸೋಂಕಿನ ಆತಂಕ ಹೆಚ್ಚಾಗಿದ್ದು, ಜೂನ್ 30ರಿಂದ ಆಗಸ್ಟ್ 8ರವರೆಗೆ 217 ಶಂಕಿತ ಪ್ರಕರಣಗಳು ವರದಿಯಾಗಿವೆ. ಈ ಪೈಕಿ 39 ಮಂದಿಯಲ್ಲಿ ಸೋಂಕು ದೃಢಪಟ್ಟಿದ್ದು, 23 ಮಂದಿ ಮೃತಪಟ್ಟಿದ್ದಾರೆ ಎಂದು ರಾಜ್ಯ ಆರೋಗ್ಯ ಇಲಾಖೆ ಶನಿವಾರ ತಿಳಿಸಿದೆ. ಒಟ್ಟು 217 ಮಾದರಿಗಳಲ್ಲಿ 208ರ ಪರೀಕ್ಷಾ ವರದಿ ಲಭ್ಯವಾಗಿದ್ದು, ಇನ್ನೂ ಒಂಬತ್ತು ಮಾದರಿಗಳ ಫಲಿತಾಂಶ ಬಾಕಿಯಿದೆ. ರಾಜ್ಯದಲ್ಲಿ ಕಣ್ಗಾವಲು ಮತ್ತು ಪರೀಕ್ಷೆ ಹೆಚ್ಚಿಸಿರುವ ಹಿನ್ನೆಲೆಯಲ್ಲಿ ಪ್ರಕರಣಗಳ ಸಂಖ್ಯೆ ಏರಿಕೆಯಾಗಿದೆ. ಜುಲೈ 14ರಂದು 27 ಶಂಕಿತ ಪ್ರಕರಣಗಳು ವರದಿಯಾಗಿದ್ದವು. ಈ ಪೈಕಿ ಏಳು ಮಂದಿಗೆ ಸೋಂಕು ದೃಢಪಟ್ಟಿದ್ದು, ಮೂವರು ಮಕ್ಕಳು ಮೃತಪಟ್ಟಿದ್ದರು. ಪಂಚಮಹಲ್ ಜಿಲ್ಲೆಯ ಗೋಧ್ರಾ ತಾಲ್ಲೂಕಿನ ಗ್ರಾಮಗಳಲ್ಲಿ ಇಬ್ಬರು ಮಕ್ಕಳು ಸೋಂಕಿನಿಂದ ಮೃತಪಟ್ಟ ಬಳಿಕ ಪ್ರಕರಣಗಳು ಗಮನ ಸೆಳೆದಿದ್ದವು. ಬಳಿಕ ಆರೋಗ್ಯ ಇಲಾಖೆ ಪೀಡಿತ ಪ್ರದೇಶಗಳಲ್ಲಿ ಮನೆ-ಮನೆಗೆ ತೆರಳಿ ತಪಾಸಣೆ, ಮಾದರಿ ಸಂಗ್ರಹ ಹಾಗೂ…
‘ನೈಸ್ ಕಂಪನಿ ಮಾಲೀಕರಿಗೆ ಸರ್ಕಾರ ಶೂ ಪಾಲಿಶ್ ಮಾಡುತ್ತಿದೆಯೇ?’; ಕುಮಾರಸ್ವಾಮಿ ಕಿಡಿ
ಬೆಂಗಳೂರು: ನೈಸ್ ಯೋಜನೆಗೆ ಸಂಬಂಧಿಸಿದ ಅಕ್ರಮಗಳ ಕುರಿತು ರಾಜ್ಯ ಸರ್ಕಾರದ ವಿರುದ್ಧ ಕೇಂದ್ರ ಸಚಿವ ಹಾಗೂ ಜೆಡಿಎಸ್ ನಾಯಕ ಎಚ್.ಡಿ. ಕುಮಾರಸ್ವಾಮಿ ತೀವ್ರ ವಾಗ್ದಾಳಿ ನಡೆಸಿದ್ದಾರೆ. ನೈಸ್ ಕಂಪನಿ ಮಾಲೀಕರ ಪರ ಸರ್ಕಾರ ನಿಂತಿದೆ ಎಂದು ಆರೋಪಿಸಿದ ಅವರು, ರೈತರ ಹಿತ ಕಡೆಗಣಿಸಲಾಗುತ್ತಿದೆ ಎಂದು ಟೀಕಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕುಮಾರಸ್ವಾಮಿ, “ಅಕ್ರಮ ಎಸಗಿರುವ ನೈಸ್ ಕಂಪನಿ ಮಾಲೀಕರಿಗೆ ಸರ್ಕಾರ ಶೂ ಪಾಲಿಶ್ ಮಾಡುತ್ತಿದೆಯೇ?” ಎಂದು ಪ್ರಶ್ನಿಸಿದರು. 2018ರ ವರದಿಯಲ್ಲೇ ನೈಸ್ ಯೋಜನೆಯಲ್ಲಿ ಅಕ್ರಮ ಹಾಗೂ ಲೂಟಿ ನಡೆದಿರುವ ಬಗ್ಗೆ ಸ್ಪಷ್ಟವಾಗಿ ಉಲ್ಲೇಖಿಸಲಾಗಿದ್ದರೂ, ಕಾಂಗ್ರೆಸ್ ಸರ್ಕಾರ ಈವರೆಗೆ ಯಾವ ಕ್ರಮ ಕೈಗೊಂಡಿದೆ ಎಂದು ಅವರು ಪ್ರಶ್ನಿಸಿದರು. 136 ಸ್ಥಾನಗಳನ್ನು ನೀಡಿ ಅಧಿಕಾರಕ್ಕೆ ತಂದ ಜನರಿಗೆ ಸರ್ಕಾರ ನೀಡುತ್ತಿರುವ ಉತ್ತರ ಇದೇನಾ ಎಂದು ವಾಗ್ದಾಳಿ ನಡೆಸಿದರು. ಸಾವಿರಾರು ರೈತರನ್ನು ಸಂಕಷ್ಟಕ್ಕೆ ಸಿಲುಕಿಸಿ, ಸುಮಾರು 20 ಸಾವಿರ ಎಕರೆ ಭೂಮಿಯನ್ನು ಕಬಳಿಸಲಾಗಿದೆ…
E20 ಪೆಟ್ರೋಲ್ ಸುರಕ್ಷಿತ; 500 ppm ಕ್ಲೋರೈಡ್ ಆರೋಪ ತಳ್ಳಿಹಾಕಿದ ತೈಲ ಕಂಪನಿಗಳು
ನವದೆಹಲಿ: E20 ಪೆಟ್ರೋಲ್‌ನಲ್ಲಿ ಹೆಚ್ಚಿನ ಪ್ರಮಾಣದ ಕ್ಲೋರೈಡ್ ಮತ್ತು ತೇವಾಂಶ ಮಾಲಿನ್ಯವಿದೆ ಎಂಬ ಆರೋಪಗಳನ್ನು ತೈಲ ಮಾರುಕಟ್ಟೆ ಕಂಪನಿಗಳು (OMC) ತಳ್ಳಿಹಾಕಿವೆ. ದೇಶಾದ್ಯಂತ ನಡೆಸಿದ ವ್ಯಾಪಕ ಪರೀಕ್ಷೆಗಳಲ್ಲಿ ಇಂಧನದ ಗುಣಮಟ್ಟ ನಿಗದಿತ ಮಾನದಂಡಗಳಲ್ಲೇ ಇರುವುದು ದೃಢಪಟ್ಟಿದೆ ಎಂದು ಕಂಪನಿಗಳು ತಿಳಿಸಿವೆ. E20 ಪೆಟ್ರೋಲ್‌ನಲ್ಲಿ 500 ppm ವರೆಗೆ ಕ್ಲೋರೈಡ್ ಮತ್ತು ತೇವಾಂಶ ಇದೆ ಎಂಬ ವರದಿಗಳ ಹಿನ್ನೆಲೆಯಲ್ಲಿ ಹೆಚ್ಚುವರಿ ಪರೀಕ್ಷೆಗಳನ್ನು ನಡೆಸಲಾಗಿದೆ. ಸಂಸ್ಕರಣಾಗಾರದಿಂದ ಚಿಲ್ಲರೆ ಮಾರಾಟ ಮಳಿಗೆಗಳವರೆಗೆ ಸಂಪೂರ್ಣ ಪೂರೈಕೆ ಸರಪಳಿಯಲ್ಲಿ ವೈಜ್ಞಾನಿಕ ವಿಧಾನದಲ್ಲಿ ಮಾದರಿಗಳನ್ನು ಸಂಗ್ರಹಿಸಿ ಪರೀಕ್ಷಿಸಲಾಗಿದೆ ಎಂದು OMCಗಳು ಹೇಳಿವೆ. ಸಂಸ್ಕರಣಾಗಾರಗಳಿಂದ ಸಂಗ್ರಹಿಸಿದ 100ಕ್ಕೂ ಹೆಚ್ಚು ಪೆಟ್ರೋಲ್ ಮಾದರಿಗಳಲ್ಲಿ ಕ್ಲೋರೈಡ್ ಪ್ರಮಾಣ 1 ppm ಅಥವಾ ಅದಕ್ಕಿಂತ ಕಡಿಮೆ ಇತ್ತು. ಇದೇ ವೇಳೆ, OMCಗಳು ಮತ್ತು ಸೆಂಟರ್ ಫಾರ್ ಹೈ ಟೆಕ್ನಾಲಜಿ (CHT) ಪ್ರತಿನಿಧಿಗಳನ್ನೊಳಗೊಂಡ ಕಾರ್ಯಪಡೆ ಕಳೆದ 10 ದಿನಗಳಲ್ಲಿ 80 ಡಿಸ್ಟಿಲರಿಗಳಿಂದ ಎಥೆನಾಲ್…
ಸಚಿವ ಸ್ಥಾನ ಸಿಗದ ಶಾಸಕರಿಗೆ JDS ಓಪನ್ ಆಫರ್; ರಾಜ್ಯ ಕಾಂಗ್ರೆಸ್‌ನಲ್ಲಿ ಮತ್ತಷ್ಟು ಸಂಚಲನ
ಹಾಸನ: ಕರ್ನಾಟಕದಲ್ಲಿ ಸಚಿವ ಸಂಪುಟ ಪುನಾರಚನೆ ಬೆನ್ನಲ್ಲೇ ಕಾಂಗ್ರೆಸ್‌ನಲ್ಲಿ ಅಸಮಧಾನ ಸ್ಫೋಟಗೊಂಡಿದೆ. ಮಂತ್ರಿ ಸ್ಥಾನ ಸಿಗದ ಶಾಸಕರು ಪಕ್ಷದ ನಡೆಗೆ ಬೇಸರಗೊಂಡಿದ್ದು, ಅನೇಕರು ರಾಜೀನಾಮೆಯ ಮಾತುಗಳನ್ನಾಡಿದ್ದಾರೆ. ಬಹುತೇಕ ಮಂದಿ ರಾಜೀನಾಮೆಯಿಂದ ಹಿಂದೆ ಸರಿದಿರುವುದಾಗಿ ಹೇಳಿಕೊಂಡರೂ ಕಾಂಗ್ರೆಸ್ ಶಾಸಕರ ಪಾಳಯದಲ್ಲಿ ಅಸಮಾಧಾನ ಇನ್ನೂ ಹೊಗೆಯಾಡುತ್ತಿದೆ. ಇದೀಗ ಅವರನ್ನು ಸಮಾಧಾನಪಡಿಸಲು ಸಿಎಂ ಡಿಕೆ ಶಿವಕುಮಾರ್, ಕೆಪಿಸಿಸಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಹಾಗೂ ಸಚಿವರು ಮನೆ ಮನೆಗೆ ತೆರಳಿ ಮಾತುಕತೆ ಮೂಲಕ ಮನವೊಲಿಸುವ ಯತ್ನ ನಡೆಸಿದ್ದಾರೆ. ಈ ಬೆಳವಣಿಗೆಗಳ ನಡುವೆ ಜೆಡಿಎಸ್ ನಾಯಕರೂ ಆದ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ನೀಡಿರುವ ಹೇಳಿಕೆ ಕುತೂಹಲಕ್ಕೆ ನಾಂದಿ ಹಾಡಿದೆ. ಕಾಂಗ್ರೆಸ್ ಅಸಮಧಾನಿತ ಶಾಸಕರಿಗೆ ಅವರು ಗಾಳ ಹಾಕಿದಂತಿದ್ದು, ಜೆಡಿಎಸ್ಗೆ ಬರುವಂತೆ ಓಪನ್ ಆಫರ್ ನೀಡಿದ್ದಾರೆ. ಹಾಸನದ ಹರದನಹಳ್ಳಿಯಲ್ಲಿ ಭಾನುವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಕುಮಾರಸ್ವಾಮಿ, ಜೆಡಿಎಸ್ ಪಕ್ಷ ನೋವು ಮತ್ತು ಸಮಸ್ಯೆಯಲ್ಲಿರುವವರಿಗೆ ಪರಿಹಾರ ನೀಡುವ ಪಕ್ಷ…
