Aಬೆಂಗಳೂರು: ಕರ್ನಾಟಕ, ತಮಿಳುನಾಡು ಮತ್ತು ಕೇರಳ ರಾಜ್ಯಗಳ ನಡುವೆ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು ಸೇವೆಗೆ ತಯಾರಿ ನಡೆದಿದೆ. ರೈಲ್ವೆ ಸಚಿವಾಲಯವು ಬೆಂಗಳೂರು–ಎರ್ನಾಕುಲಂ ವಂದೇ ಭಾರತ್ ಎಕ್ಸ್‌ಪ್ರೆಸ್‌ನ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದೆ. ರೈಲ್ವೆ ಸಚಿವಾಲಯದ ಅಧಿಸೂಚನೆ ಪ್ರಕಾರ, ರೈಲು ಸಂಖ್ಯೆ 26651 ಕೆಎಸ್‌ಆರ್ ಬೆಂಗಳೂರು–ಎರ್ನಾಕುಲಂ ವಂದೇ ಭಾರತ್ ಎಕ್ಸ್‌ಪ್ರೆಸ್ ಪ್ರತಿ ದಿನ ಬೆಳಗ್ಗೆ 5:10ಕ್ಕೆ ಬೆಂಗಳೂರು ನಿಲ್ದಾಣದಿಂದ ಹೊರಟು, ಕೃಷ್ಣರಾಜಪುರಂ, ಸೇಲಂ, ಈರೋಡ್, ತಿರುಪ್ಪೂರು, ಕೊಯಮತ್ತೂರು, ಪಾಲಕ್ಕಾಡ್ ಮತ್ತು ತ್ರಿಶೂರ್ ನಿಲ್ದಾಣಗಳಲ್ಲಿ ನಿಗದಿತ ನಿಲುಗಡೆ ನಂತರ ಮಧ್ಯಾಹ್ನ 1:50ಕ್ಕೆ ಎರ್ನಾಕುಲಂ ಜಂಕ್ಷನ್ ತಲುಪಲಿದೆ. ಮರಳಿ, ರೈಲು ಸಂಖ್ಯೆ 26652 ಎರ್ನಾಕುಲಂನಿಂದ ಮಧ್ಯಾಹ್ನ 2:20ಕ್ಕೆ ಹೊರಟು, ರಾತ್ರಿ 11:00ಕ್ಕೆ ಬೆಂಗಳೂರಿಗೆ ತಲುಪಲಿದೆ. . ಈ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು ದಕ್ಷಿಣ ಭಾರತದ ರಾಜ್ಯಗಳ ಪ್ರಮುಖ ನಗರಗಳ ನಡುವಿನ ಸಂಚಾರ ಸಮಯವನ್ನು ಗಣನೀಯವಾಗಿ ಕಡಿಮೆ ಮಾಡುವ ನಿರೀಕ್ಷೆಯಿದೆ.
Category: ಪ್ರಮುಖ ಸುದ್ದಿ
ಖಾದರ್ ವಿರುದ್ಧ ಭ್ರಷ್ಟಾಚಾರ ಆರೋಪ ಮಡಿದ ಬಿಜೆಪಿ ನಾಯಕರ ವಿರುದ್ಧ ಹಕ್ಕುಚ್ಯುತಿ ದೂರು
ಮಂಗಳೂರು: ರಾಜ್ಯ ವಿಧಾನಸಭಾಧ್ಯಕ್ಷ ಯು.ಟಿ.ಖಾದರ್ ವಿರುದ್ದ ಬಿಜೆಪಿ ನಾಯಕರು ಮಾಡಿರುವ ಭ್ರಷ್ಟಾಚಾರದ ಆರೋಪ ಸತ್ಯಕ್ಕೆ ದೂರವಾದುದು. ರಾಜಕೀಯ ದುರುದ್ದೇಶದಿಂದ ಈ ಆರೋಪಗಳನ್ನು ಮಾಡಲಾಗಿದ್ದು, ಇದರಿಂದ ಸದನ ಹಕ್ಕುಚ್ಯುತಿ ಉಂಟಾಗಿದೆ ಎಂದು ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜಾ ಪ್ರತಿಕ್ರಿಯಿಸಿದ್ದಾರೆ. ಮಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿದ ಐವನ್ ಡಿಸೋಜಾ, ಯು.ಟಿ.ಖಾದರ್ ಅವರು ಶಾಸನ ಸಭೆಯ ಅತ್ಯನ್ನತ ಹುದ್ದೆಯಾಗಿರುವ ವಿಧಾನಸಭಾಧ್ಯಕ್ಷರಾಗಿದ್ದಾರೆ. ಆ ಸ್ಥಾನದಲ್ಲಿರುವವರ ವಿರುದ್ಧ ಭ್ರಷ್ಟಾಚಾರ ಆರೋಪ ಮಾಡುವ ಸಂದರ್ಭದಲ್ಲಿ ಶಾಸನಾತ್ಮಕ ಪ್ರಕ್ರಿಯೆಗಳನ್ನು ಅನುಸಬೇಕಾಗುತ್ತದೆ. ಅದನ್ನು ಹೊರತಾಗಿ ವಿಧಾನಸಭೆಯ ಮಾಜಿ ಅಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಹಾಗೂ ಹಾಲಿ ಶಾಸಕ ಡಾ.ವೈ.ಭರತ್ ಶೆಟ್ಟಿ ಅವರು ಹಾಲಿ ಸ್ಪೀಕರ್ ವಿರುದ್ಧ ಸುಳ್ಳು ಆರೋಪ ಮಾಡಿದ್ದಾರೆ ಎಂದು ದೂರಿದರು. ಇದು ಸದನವನ್ನು ನಿಂದಿಸಿದ ಹಾಗೂ ಹಕ್ಕುಚ್ಯುತಿಯ ನಡೆಯಾಗಿರುವುದರಿಂದ ಅವರ ವಿರುದ್ದ ಹಕ್ಕುಚ್ಯುತಿ ದೂರನ್ನು ನೀಡಲಾಗುವುದು ಎಂದು ಐವನ್ ಡಿಸೋಜಾ ತಿಳಿಸಿದರು. ಯು.ಟಿ.ಖಾದರ್ ರವರು ವಿಧಾನಸಭಾ…
‘RamalingaReddyForCM’ ಅಭಿಯಾನ ಈ ಬಗ್ಗೆ ಸಾರಿಗೆ ಸಚಿವರ ಸ್ಪಷ್ಟನೆ
ಬೆಂಗಳೂರು: ಪ್ರ’ಸ್ತುತ ಮುಖ್ಯಮಂತ್ರಿ ಸ್ಥಾನ ಸಹ ಖಾಲಿ ಇರುವುದಿಲ್ಲ ಮತ್ತು ನಾನು ಅದರ ಆಕಾಂಕ್ಷಿಯಲ್ಲ’ ಎಂದು ಸಾರಿಗೆ ರಾಮಲಿಂಗ ರೆಡ್ಡಿ ಸ್ಪಷ್ಟಪಡಿಸಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಕಳೆದ ಕೆಲವು ದಿನಗಳಿಂದ ‘RamalingaReddyForCM’ ಎಂದು ಪೋಸ್ಟ್’ಗಳು ಹರಿದಾಡುತ್ತಿವೆ. ಈ ಬಗ್ಗೆ ಸಾಮಾಜಿಕ ಮಾಧ್ಯಮದಲ್ಲಿ ಸ್ಪಷ್ಟನೆ ನೀಡಿರುವ ರಾಮಲಿಂಗಾ ರೆಡ್ಡಿ, ‘ರಾಜ್ಯದಲ್ಲಿ ಸರ್ಕಾರ ಸದೃಢವಾಗಿದ್ದು, ಪ್ರಸ್ತುತ ಮುಖ್ಯಮಂತ್ರಿ ಸ್ಥಾನ ಸಹ ಖಾಲಿ ಇರುವುದಿಲ್ಲ ಮತ್ತು ನಾನು ಅದರ ಆಕಾಂಕ್ಷಿಯಲ್ಲ’ ಎಂದು ತಿಳಿಸಿದ್ದಾರೆ. ‘ನನ್ನ ಮೇಲೆ ಮತ್ತು ಪಕ್ಷದ ಮೇಲೆ ಗೌರವವಿದ್ದರೆ, ದಯವಿಟ್ಟು ಈ ರೀತಿಯ ಆಧಾರರಹಿತ ಪ್ರಚಾರವನ್ನು ತಕ್ಷಣವೇ ನಿಲ್ಲಿಸಬೇಕು’ ಎಂದವರು ಮನವಿ ಮಾಡಿದ್ದಾರೆ. ರಾಜ್ಯದ ಮುಖ್ಯಮಂತ್ರಿಯಾಗಲು ಎಲ್ಲಾ ರೀತಿಯಿಂದಲೂ ತಾವು ಅರ್ಹರಿದ್ದೀರಿ, ನಿಮ್ಮ ಸ್ಥಾನಮಾನದ ವಿಚಾರವಾಗಿ ಪಕ್ಷದ ಕಾರ್ಯಕರ್ತರ ಅಭಿಪ್ರಾಯ ತಪ್ಪೇನಿಲ್ಲ. — Umesh Gowda (@Umeshgowda6975) November 2, 2025 ‘ಮುಖ್ಯಮಂತ್ರಿಗಳ ನೇತೃತ್ವದಲ್ಲಿ ನಮ್ಮ ಸರ್ಕಾರ ಉತ್ತಮವಾಗಿ ಜನಪರ…
ದೇಶದ ಹಿತಾಸಕ್ತಿ ಬಗ್ಗೆಯೇ RSS ಅಖಿಲ ಭಾರತ ಕಾರ್ಯಕಾರಿ ಮಂಡಳಿಯಲ್ಲಿ ಚರ್ಚೆ
ಭೋಪಾಲ್: ಆರ್‌ಎಸ್‌ಎಸ್ ದೇಶದ ಏಕತೆ, ಭದ್ರತೆ, ಸಂಸ್ಕೃತಿ ಮತ್ತು ಅಭಿವೃದ್ಧಿಗಾಗಿ ಕೆಲಸ ಮಾಡುವ ಸಂಸ್ಥೆಯಾಗಿದೆ ಎಂದು ಸಮಾಜವು ಸ್ವೀಕರಿಸಿದೆ. ಕೆಲ ರಾಜಕಾರಣಿಗಳ ಬಯಕೆಯಂತೆ ಸಂಘವನ್ನು ನಿಷೇಧಿಸುವುದು ಸಾಧ್ಯವಿಲ್ಲ,” ಎಂದು ಆರ್‌ಎಸ್‌ಎಸ್ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ದತ್ತಾತ್ರೇಯ ಹೊಸಬಾಳೆ ಹೇಳಿದ್ದಾರೆ. ಆರ್‌ಎಸ್‌ಎಸ್ ನಿಷೇಧಿಸಬೇಕು ಎಂಬ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿದ ಹೊಸಬಾಳೆ, “ಸಂಘವನ್ನು ಸಮಾಜವೇ ರಾಷ್ಟ್ರದ ಏಕತೆ ಮತ್ತು ಅಭಿವೃದ್ಧಿಗಾಗಿ ಕೆಲಸ ಮಾಡುವ ಸಂಸ್ಥೆಯೆಂದು ಗುರುತಿಸಿದೆ. ಹಿಂದೆ ಮೂರು ಬಾರಿ ನಿಷೇಧಿಸಲಾಗಿತ್ತು, ನಂತರ ಏನಾಯಿತು ಎಂಬುದು ಎಲ್ಲರಿಗೂ ತಿಳಿದಿದೆ. ರಾಜಕಾರಣಿಗಳು ಇತಿಹಾಸದಿಂದ ಪಾಠ ಕಲಿಯಬೇಕು,” ಎಂದರು. ಮಧ್ಯಪ್ರದೇಶದ ಜಬಲ್‌ಪುರದಲ್ಲಿ ನಡೆದ ಮೂರು ದಿನಗಳ ಆರ್‌ಎಸ್‌ಎಸ್ ಅಖಿಲ ಭಾರತ ಕಾರ್ಯಕಾರಿ ಮಂಡಳಿ ಸಭೆಯ ಸಮಾರೋಪದ ಸಂದರ್ಭದಲ್ಲಿ ಅವರು ಮಾತನಾಡಿದರು. 2014 ರ ನಂತರ ಆರ್‌ಎಸ್‌ಎಸ್ ಮತ್ತು ಬಿಜೆಪಿ ನಡುವಿನ ಸಂಬಂಧದ ಚಲನಶೀಲತೆ ಕುರಿತು ತಮ್ಮದೇ ದಾಟಿಯಲ್ಲಿ ಅವರು…
ಮಾನಸಿಕ ಒತ್ತಡ ತಗ್ಗಿಸಲು ಚಾಕಲೇಟ್ ಕೂಡಾ ಔಷಧಿಯಾಗಬಹುದು
ಸ್ಮರಣಶಕ್ತಿ ಕುಗ್ಗುತ್ತಿರುವುದೇ ಅಥವಾ ಒತ್ತಡ ಹೆಚ್ಚಿದೆಯೇ? ಹಾಗಾದರೆ, ಸ್ವಲ್ಪ ಡಾರ್ಕ್ ಚಾಕೊಲೇಟ್ ಅಥವಾ ಕೆಲವು ಬೆರ್ರಿ ಹಣ್ಣುಗಳನ್ನು ಸೇವಿಸಿ ನೋಡಿ. ಇತ್ತೀಚಿನ ಪ್ರಾಣಿ ಅಧ್ಯಯನದ ಪ್ರಕಾರ, ಇವುಗಳಲ್ಲಿ ಇರುವ ವಿಶೇಷ ರಾಸಾಯನಿಕಗಳು ಮೆದುಳಿನ ಚಟುವಟಿಕೆಯನ್ನು ಉತ್ತೇಜಿಸಿ, ಸ್ಮರಣಶಕ್ತಿಯನ್ನು ಹೆಚ್ಚಿಸುವುದಲ್ಲದೆ ಒತ್ತಡವನ್ನು ಸಹ ಕಡಿಮೆ ಮಾಡುತ್ತವೆ. ಜಪಾನ್‌ನ ಶಿಬೌರಾ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯ ವಿಜ್ಞಾನಿಗಳ ಅಧ್ಯಯನವು ಕೋಕೋ ಹಾಗೂ ಬೆರ್ರಿ ಹಣ್ಣುಗಳಲ್ಲಿ ದೊರೆಯುವ ಫ್ಲಾವನಾಲ್‌ಗಳು ಎಂಬ ಸಂಯೋಗಗಳು ಸ್ಮರಣಶಕ್ತಿ ಮತ್ತು ಅರಿವನ್ನು ಸುಧಾರಿಸುತ್ತವೆ ಎಂದು ತೋರಿಸಿದೆ. ‘ಕರಂಟ್ ರಿಸರ್ಚ್ ಇನ್ ಫುಡ್ ಸೈನ್ಸ್’ ಪತ್ರಿಕೆಯಲ್ಲಿ ಪ್ರಕಟವಾದ ಈ ಅಧ್ಯಯನ ಪ್ರಕಾರ, ಫ್ಲಾವನಾಲ್‌ಗಳ ಸೇವನೆಯು ವ್ಯಾಯಾಮದಂತೆಯೇ ಶಾರೀರಿಕ ಪ್ರತಿಕ್ರಿಯೆಗಳನ್ನು ಉಂಟುಮಾಡುತ್ತದೆ — ಕೇಂದ್ರ ನರಮಂಡಲವನ್ನು ಸಕ್ರಿಯಗೊಳಿಸಿ ಗಮನ, ಪ್ರೇರಣೆ ಮತ್ತು ಸ್ಮರಣೆಯನ್ನು ಹೆಚ್ಚಿಸುತ್ತದೆ. ಇವು ನರಕೋಶಗಳನ್ನು ಹಾನಿಯಿಂದ ಕೂಡ ರಕ್ಷಿಸುತ್ತವೆ. “ಫ್ಲಾವನಾಲ್ ಸೇವನೆಯಿಂದ ಉಂಟಾಗುವ ಒತ್ತಡ ಪ್ರತಿಕ್ರಿಯೆಗಳು ದೈಹಿಕ ವ್ಯಾಯಾಮದಿಂದ…
ಬೆಳಗಾವಿ ವಿಚಾರದಲ್ಲಿ ರಾಜಿ ಇಲ್ಲ. ಮಹಾಜನ್ ವರದಿಯೇ ಅಂತಿಮ
ಬೆಂಗಳೂರು: ಕನ್ನಡ ಹೋರಾಟಗಾರರ ಮೇಲಿನ ಕೇಸುಗಳನ್ನು ವಾಪಾಸ್ ಪಡೆಯುವುದಾಗಿ ಸಿಎಂ ಸಿದ್ದರಾಮಯ್ಯ ಪ್ರಕಟಿಸಿದ್ದಾರೆ. ಮೈಸೂರು ಬ್ಯಾಂಕ್ ವೃತ್ತದ ನೃಪತುಂಗ ಮಂಟಪದಲ್ಲಿ ಭುವನೇಶ್ವರಿ ಹಾಗೂ ಅಣ್ಣಮ್ಮ ದೇವತೆಯ ವೈಭವದ ಮೆರವಣಿಗೆಗೆ ಚಾಲನೆ ನೀಡಿ ಮಾತನಾಡಿದ ಸಿದ್ದರಾಮಯ್ಯ, ವಾಟಾಳ್ ಕನ್ನಡದ ವಿಚಾರದಲ್ಲಿ ರಾಜಿ ಮಾಡಿಕೊಳ್ಳದ ಹೋರಾಟಗಾರರು. ದೇವರಾಜ ಅರಸು ಅವರು ಮಂತ್ರಿ ಸ್ಥಾನ ಕೊಡ್ತೀನಿ ಎಂದು ಕರೆದರೂ ಕನ್ನಡ ಪಕ್ಷ ಮತ್ತು ಕನ್ನಡ ಹೋರಾಟ ಬಿಡಲು ವಾಟಾಳ್ ಅವರು ಒಪ್ಪಲಿಲ್ಲ ಎಂದು ನೆನಪಿಸಿದರು. ನಾವೆಲ್ಲರೂ ಕನ್ನಡ ನೆಲ, ಜಲ, ಭಾಷೆ, ಸಂಸ್ಕೃತಿ ಬಗ್ಗೆ ಅಭಿಮಾನ, ಪ್ರೀತಿ ಬೆಳೆಸಿಕೊಳ್ಳಬೇಕು. ನಮ್ಮ ನೆಲದಲ್ಲಿ ಕನ್ನಡದ ವಾತಾವರಣ ಬೆಳೆಸಬೇಕು. ಇದಕ್ಕಾಗಿ ಯಾರು ಯಾವುದೇ ಭಾಷೆಯಲ್ಲಿ ಮಾತನಾಡಿದರೂ ನೀವು ಕನ್ನಡದಲ್ಲೇ ಉತ್ತರ ಕೊಡಬೇಕು ಎಂದು ಹೇಳಿದರು. . ಮೈಸೂರು ವಿಶ್ವ ವಿದ್ಯಾಲಯದಿಂದ ದೇವರಾಜು ಅರಸು ಅವರಿಗೆ ಮರಣೋತ್ತರ ಡಾಕ್ಟರೇಟ್ ಪ್ರಶಸ್ತಿ ನೀಡಬೇಕು ಎನ್ನುವ ವಾಟಾಳ್ ನಾಗರಾಜ್…
ಮಂಗಳೂರು ಮೂಲದ ರೌಡಿಶೀಟರ್ ತುಕ್ಕ ನೌಫಲ್ ಬರ್ಬರ ಹತ್ಯೆ
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಕುಖ್ಯಾತ ರೌಡಿ ತುಕ್ಕ ನೌಫಲ್ ಎಂಬಾತ ಬರ್ಬರವಾಗಿ ಕೊಲೆಯಾಗಿದ್ದಾನೆ. ಕೇರಳ ರಾಜ್ಯದ ಕಾಸರಗೋಡು ಉಪ್ಪಳ ಬಳಿ ಹಂತಕರು ಕುಖ್ಯಾತ ರೌಡಿ ತುಕ್ಕ ನೌಫಲ್’ನನ್ನ ಕೊಲೆ ಮಾಡಿದ್ದಾರೆ. ಮಂಗಳೂರು ಮೂಲದ ರೌಡಿಶೀಟರ್ ತುಕ್ಕ ನೌಫಲ್ ಕರಾವಳಿ ಜಿಲ್ಲೆಗಳಲ್ಲಿ 10ಕ್ಕೂ ಹೆಚ್ಚು ಪ್ರಕರಣಗಲ್ಲಿ ಭಾಗಿಯಾಗಿದ್ದ ಆರೋಪ ಹೊಂದಿದ್ದಾನೆ. ಕೊಲೆ, ಸುಲಿಗೆ, ದರೋಡೆ ಸಹಿತ ಅನೇಕ ಪ್ರಕರಣಗಳಲ್ಲಿ ಪೊಲೀಸರಿಗೆ ಬೇಕಾಗಿದ್ದ ಈತ ಪೊಲೀಸರ ಎಚ್ಚರಿಕೆಗೂ ಜಗ್ಗಲಿಲ್ಲ. ಮಂಗಳೂರು ಪೊಲೀಸರ ಹೇಳಿಕೆ ಪ್ರಕಾರ ಈತ ಕ್ಲಾಸ್ ಒನ್ ರೌಡಿ ಎಂದು ಬಿಂಬಿತನಾಗಿದ್ದ. ಮಂಗಳೂರಿನ ಫೈಝಲ್ ನಗರ ನಿವಾಸಿ ನೌಫಲ್ ಕೊಲೆಯಾಗಿರುವ ಬಗ್ಗೆ ಪಡೆದ ಮಂಗಳೂರು ನಗರ ಪೊಲೀಸರ ತಂಡ ಕಾಸರಗೋಡಿಗೆ ತೆರಳಿ ಕಲೆಹಾಕಿದೆ.
ಶ್ರೀಕಾಕುಳಂ ಜಿಲ್ಲೆಯ ಶ್ರೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಭೀಕರ ಕಾಲ್ತುಳಿತ; 10ಕ್ಕೂ ಹೆಚ್ಚು ಮಂದಿ ಸಾವು
ಜನಸಂದಣಿ ಸೇರುವ ಸ್ಥಳಗಳಲ್ಲಿ ಕಾಲ್ತುಳಿತ ಘಟನೆಗಳು ಮರುಕಳಿಸುತ್ತಲೇ ಇದ್ದು, ಕಾರ್ತಿಕ ಮಾಸದ ಏಕಾದಶಿ ಸಂದರ್ಭದ ಕೈಂಕರ್ಯ 10ಕ್ಕೂ ಹೆಚ್ಚು ಜನರ ಸಾವಿಗೆ ಸಾಕ್ಷಿಯಾಯಿತು. . ಪ್ರಾರ್ಥನೆ ಸಲ್ಲಿಸಲು ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಸೇರಿದ್ದ ಸಮಯದಲ್ಲಿ ದುರಂತ ಸಂಭವಿಸಿದೆ. ಶ್ರೀಕಾಕುಳಂ ಜಿಲ್ಲೆಯ ಶ್ರೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಶನಿವಾರ ಈ ದುರ್ಘಟನೆ ಸಂಭವಿಸಿದೆ. TRAGIC NEWS 9 people DIED and several others INJURED after a STAMPEDE at Venkateswara Swamy Mandir in Kasibugga, Srikakulam (Andhra Pradesh) during Ekadashi celebrations of devotees. — PRAYERS pic.twitter.com/6owZPIdOxd — Megh Updates ™ (@MeghUpdates) November 1, 2025 ಕರ್ನೂಲ್ ಬಸ್ ದುರಂತದ ಕಹಿ ನೆನಪು ಮಾಸುವ ಮುನ್ನವೇ ಆಂಧ್ರ ಪ್ರದೇಶದಲ್ಲಿ ಮತ್ತೊಂದು ಭೀಕರ ದುರಂತ ಇದಾಗಿದೆ. ಶ್ರೀಕಾಕುಳಂ ಜಿಲ್ಲೆಯ ಕಾಶಿಬುಗ್ಗ…
ಸೋನಿಯಾ, ರಾಹುಲ್ ಒತ್ತಡಕ್ಕೆ ಮಣಿದು RSS ನಿಷೇಧಕ್ಕೆ ಖರ್ಗೆ ಆಗ್ರಹ; AICC ಅಧ್ಯಕ್ಷ ಖರ್ಗೆಗೆ ಶೋಭಾ ತರಾಟೆ
ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ನಿಷೇಧಿಸಬೇಕೆಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನೀಡಿದ ಹೇಳಿಕೆಗೆ ಪ್ರತಿಕ್ರಿಯಿಸಿರುವ ಕೇಂದ್ರ ಸಚಿವ ಶೋಭಾ ಕರಂದ್ಲಾಜೆ, “ಈ ಹೇಳಿಕೆ ಖರ್ಗೆ ಅವರದೇ ಅಲ್ಲ, ಅದು ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಅವರ ಒತ್ತಡದ ಫಲ” ಎಂದು ಟೀಕಿಸಿದ್ದಾರೆ. ಬೆಂಗಳೂರಿನ ಬಿಜೆಪಿ ಪ್ರಧಾನ ಕಚೇರಿಯಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ನಾನು ಖರ್ಗೆ ಅವರನ್ನು ಗೌರವಿಸುತ್ತೇನೆ. ಅವರು ರಾಷ್ಟ್ರ ಮಟ್ಟದ ಹಿರಿಯ ರಾಜಕಾರಣಿ. ಆದರೆ ಅವರ ಪಕ್ಷದಲ್ಲಿ ಒಂದು ಕುಟುಂಬದ ಪ್ರಭಾವದಿಂದ ಅವರು ಸ್ವತಂತ್ರವಾಗಿ ಯೋಚಿಸಲು ಸಾಧ್ಯವಾಗುತ್ತಿಲ್ಲ. ತಮ್ಮ 50 ವರ್ಷಗಳ ರಾಜಕೀಯ ಜೀವನದಲ್ಲಿ ಅವರು ಆರ್‌ಎಸ್‌ಎಸ್ ವಿರುದ್ಧ ಒಂದೇ ಸಲವೂ ಮಾತನಾಡಿಲ್ಲ” ಎಂದು ಹೇಳಿದರು. “ಜವಾಹರಲಾಲ್ ನೆಹರು ಮತ್ತು ಇಂದಿರಾ ಗಾಂಧಿ ಯವರಿಂದಲೂ ಆರ್‌ಎಸ್‌ಎಸ್ ನಿಷೇಧಿಸಲು ಸಾಧ್ಯವಾಗಲಿಲ್ಲ. ಹಾಗಿದ್ದಾಗ ನಿಮ್ಮಿಂದ ಅದು ಸಾಧ್ಯವೇ? ಏನು ಪ್ರಶ್ನಿಸಿದ ಶೋಭಾ, ಈ…
ಕನ್ನಡದಲ್ಲೇ ರಾಜ್ಯೋತ್ಸವ ಶುಭ ಹಾರೈಸಿದ ಮೋದಿ
ನವದೆಹಲಿ: ಕರುನಾಡು ಮಾತ್ರವಲ್ಲ ಎಲ್ಲೆಡೆ ಕನ್ನಡಿಗರು ರಾಜ್ಯೋತ್ಸವ ಸಡಗರದಲ್ಲಿ ಇದ್ದಾರೆ. ಎಲ್ಲೆಲ್ಲೂ ಕನ್ನಡಮ್ಮನ ಉತ್ಸವ ಸಾಗಿದೆ. ಗಣ್ಯಾತಿಗಣ್ಯರು ಶುಭಾಶಯ ಕೋರುತ್ತಿದ್ದಾರೆ. ಇದೇ ವೇಳೆ, ಪ್ರಧಾನಿ ನರೇಂದ್ರ ಮೋದಿಯವರು ಕನ್ನಡಲ್ಲೇ ಕನ್ನಡಿಗರಿಗೆ ಶುಭ ಹಾರಿಸಿ ಗಮನಸೆಳೆದಿದ್ದಾರೆ. ‘ನಾವು ಕನ್ನಡ ರಾಜ್ಯೋತ್ಸವವನ್ನು ಆಚರಿಸುತ್ತಿರುವಾಗ, ಕರ್ನಾಟಕದ ಜನರಿಗೆ ಪ್ರತೀಕವಾಗಿರುವ ಶ್ರೇಷ್ಠತೆ ಮತ್ತು ಶ್ರಮಶೀಲ ಸ್ವಭಾವವನ್ನು ನಾವು ಆಚರಿಸುತ್ತೇವೆ. ಸಾಹಿತ್ಯ, ಕಲೆ, ಸಂಗೀತ ಮತ್ತಿತರ ಕ್ಷೇತ್ರಗಳಲ್ಲಿ ಪ್ರತಿಫಲಿಸುವ ಕರ್ನಾಟಕದ ಶ್ರೀಮಂತ ಸಂಸ್ಕೃತಿಯನ್ನು ಸಹ ನಾವು ಆಚರಿಸುತ್ತೇವೆ. ಈ ರಾಜ್ಯವು ಜ್ಞಾನದಲ್ಲಿ ಅಡಗಿರುವ ಪ್ರಗತಿಯ ಮನೋಭಾವವನ್ನು ಪ್ರತಿಬಿಂಬಿಸುತ್ತದೆ. ರಾಜ್ಯದ ಜನರು ಸಂತೋಷ ಮತ್ತು ಆರೋಗ್ಯದಿಂದ ಇರಲಿ ಎಂದು ಪ್ರಾರ್ಥಿಸುತ್ತೇನೆ’ ಎಂದು ನರೇಂದ್ರ ಮೋದಿ ಸಾಮಾಜಿಕ ಮಾಧ್ಯಮ ‘X’ ನಲ್ಲಿ ಪೋಸ್ಟ್ ಹಾಕಿದ್ದಾರೆ. ಇಂದು, ನಾವು ಕನ್ನಡ ರಾಜ್ಯೋತ್ಸವವನ್ನು ಆಚರಿಸುತ್ತಿರುವಾಗ, ಕರ್ನಾಟಕದ ಜನರಿಗೆ ಪ್ರತೀಕವಾಗಿರುವ ಶ್ರೇಷ್ಠತೆ ಮತ್ತು ಶ್ರಮಶೀಲ ಸ್ವಭಾವವನ್ನು ನಾವು ಆಚರಿಸುತ್ತೇವೆ. ಸಾಹಿತ್ಯ, ಕಲೆ,…
