‘ದೈನಂದಿನ UPI ವಹಿವಾಟಿಗೆ ಶುಲ್ಕವಿಲ್ಲ’; ಗ್ರಾಹಕರಿಗೆ ಕೇಂದ್ರ ಸರ್ಕಾರದ ಭರವಸೆ

ನವದೆಹಲಿ: ಯುಪಿಐ ಮೂಲಕ ಹಣ ಪಾವತಿಸುವ ಗ್ರಾಹಕರಿಗೆ ಯಾವುದೇ ವಹಿವಾಟು ಶುಲ್ಕ ವಿಧಿಸುವುದಿಲ್ಲ ಎಂದು ಕೇಂದ್ರ ಸರ್ಕಾರ ಸ್ಪಷ್ಟಪಡಿಸಿದೆ. ಪಾವತಿ ಮತ್ತು ವಸಾಹತು ವ್ಯವಸ್ಥೆಗಳ (PSS) ಕಾಯ್ದೆಗೆ ಇತ್ತೀಚೆಗೆ ಮಾಡಲಾದ ತಿದ್ದುಪಡಿ ಕುರಿತು ಮೂಡಿದ್ದ ಗೊಂದಲದ ನಡುವೆಯೇ ಸರ್ಕಾರ ಈ ಸ್ಪಷ್ಟನೆ ನೀಡಿದೆ. ಎಲ್ಲಾ ವ್ಯಕ್ತಿಯಿಂದ ವ್ಯಕ್ತಿಗೆ (P2P) ಯುಪಿಐ ವಹಿವಾಟುಗಳು ಉಚಿತವಾಗಿಯೇ ಮುಂದುವರಿಯಲಿವೆ. ಭವಿಷ್ಯದಲ್ಲಿ ವ್ಯಾಪಾರಿ ರಿಯಾಯಿತಿ ದರ (MDR) ಜಾರಿಗೊಳಿಸಿದರೂ, ಅದು ನಿರ್ದಿಷ್ಟ ಮಿತಿಗಿಂತ ಹೆಚ್ಚಿನ ಸೀಮಿತ ವ್ಯಾಪಾರಿ ವಹಿವಾಟುಗಳಿಗೆ ಮಾತ್ರ ಅನ್ವಯಿಸಲಿದೆ ಎಂದು ಸರ್ಕಾರ ತಿಳಿಸಿದೆ. ಅಲ್ಲದೆ, MDR ನಾಮಮಾತ್ರವಾಗಿದ್ದು, ಡೆಬಿಟ್ ಅಥವಾ ಕ್ರೆಡಿಟ್ ಕಾರ್ಡ್‌ಗಳಿಗೆ ವಿಧಿಸುವ MDRಗಿಂತ ಕಡಿಮೆ ಇರಲಿದೆ ಎಂದು ಸ್ಪಷ್ಟಪಡಿಸಿದೆ. ಯುಪಿಐನಲ್ಲಿನ ಬಹುಪಾಲು ವ್ಯಾಪಾರಿ ವಹಿವಾಟುಗಳೂ ಉಚಿತವಾಗಿಯೇ ಮುಂದುವರಿಯಲಿವೆ ಎಂದು ಕೇಂದ್ರ ಹೇಳಿದೆ. PSS ಕಾಯ್ದೆಗೆ ತಿದ್ದುಪಡಿ ಮಾಡಿದ ಹಿನ್ನೆಲೆಯಲ್ಲಿ ಯುಪಿಐ ಬಳಕೆದಾರರಿಗೆ ಶೀಘ್ರದಲ್ಲೇ ದೈನಂದಿನ ವಹಿವಾಟುಗಳಿಗೆ ಶುಲ್ಕ…

ಯಶ್‌ ಅಭಿನಯದ ‘ಟಾಕ್ಸಿಕ್’ ಟ್ರೈಲರ್ ರಿಲೀಸ್; ಅಭಿಮಾನಿಗಳಲ್ಲಿ ಹೆಚ್ಚಿದ ನಿರೀಕ್ಷೆ

ಬೆಂಗಳೂರು: ರಾಕಿಂಗ್ ಸ್ಟಾರ್ ಯಶ್‌, ಕಿಯಾರಾ ಅಡ್ವಾಣಿ ಹಾಗೂ ನಯನತಾರಾ ಅಭಿನಯದ ಬಹುನಿರೀಕ್ಷಿತ ‘ಟಾಕ್ಸಿಕ್: ಎ ಫೇರಿ ಟೇಲ್ ಫಾರ್ ಗ್ರೋನ್-ಅಪ್ಸ್’ ಚಿತ್ರದ ಟ್ರೈಲರ್‌ ಕೊನೆಗೂ ಬಿಡುಗಡೆಯಾಗಿದೆ. ಶನಿವಾರ ಅದ್ಧೂರಿ ಕಾರ್ಯಕ್ರಮದಲ್ಲಿ ಚಿತ್ರತಂಡ ಟ್ರೈಲರ್‌ ಅನಾವರಣಗೊಳಿಸಿದೆ. ಈಗಾಗಲೇ ‘ಟಾಕ್ಸಿಕ್’ ಚಿತ್ರದ ಟೀಸರ್‌, ಹಾಡುಗಳು ಹಾಗೂ ಕೆಲ ತುಣುಕುಗಳು ಬಿಡುಗಡೆಯಾಗಿ ಸಿನಿಪ್ರಿಯರಲ್ಲಿ ಕುತೂಹಲ ಮೂಡಿಸಿವೆ. ಟೀಸರ್‌ ಮತ್ತು ಹಾಡುಗಳಿಗೆ ಅಭಿಮಾನಿಗಳಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದ್ದರೆ, ಕೆಲವರು ಚಿತ್ರತಂಡದ ಪ್ರಯತ್ನದ ಬಗ್ಗೆ ಟೀಕೆಯನ್ನೂ ವ್ಯಕ್ತಪಡಿಸಿದ್ದರು. ಇದೀಗ ಚಿತ್ರದ ಟ್ರೈಲರ್‌ ಬಿಡುಗಡೆಯಾಗಿದ್ದು, ಸಿನಿಮಾ ಕುರಿತ ನಿರೀಕ್ಷೆ ಮತ್ತಷ್ಟು ಹೆಚ್ಚಾಗಿದೆ. ಹೈ-ವೋಲ್ಟೇಜ್‌ ಆ್ಯಕ್ಷನ್‌, ಅದ್ಧೂರಿ ದೃಶ್ಯಗಳು ಹಾಗೂ ಯಶ್‌ ಅವರ ವಿಭಿನ್ನ ಲುಕ್‌ ಈಗಾಗಲೇ ಅಭಿಮಾನಿಗಳ ಗಮನ ಸೆಳೆದಿದೆ. ಹೈದರಾಬಾದ್‌ನ ಎಎಂಬಿ ಮಾಲ್‌ನಲ್ಲಿ ನಡೆದ ಅದ್ಧೂರಿ ಕಾರ್ಯಕ್ರಮದಲ್ಲಿ ‘ಟಾಕ್ಸಿಕ್’ ಚಿತ್ರದ ಟ್ರೈಲರ್‌ ಅನ್ನು ಚಿತ್ರತಂಡ ಬಿಡುಗಡೆ ಮಾಡಿದೆ. ಕಾರ್ಯಕ್ರಮದಲ್ಲಿ ಚಿತ್ರತಂಡದ ಪ್ರಮುಖರು ಹಾಗೂ…

ಸೆ.1ರಿಂದ ತಮಿಳುನಾಡಿನ ಪ್ರಮುಖ ದೇವಾಲಯಗಳಲ್ಲಿ ಮೊಬೈಲ್ ಫೋನ್ ನಿರ್ಬಂಧ

ಚೆನ್ನೈ: ದೇವಾಲಯಗಳ ಪಾವಿತ್ರ್ಯ ಕಾಪಾಡುವುದು ಹಾಗೂ ಅನಧಿಕೃತ ಛಾಯಾಗ್ರಹಣ ಮತ್ತು ವೀಡಿಯೊಗ್ರಫಿಗೆ ಕಡಿವಾಣ ಹಾಕುವ ಉದ್ದೇಶದಿಂದ ಸೆಪ್ಟೆಂಬರ್ 1ರಿಂದ ತಮಿಳುನಾಡಿನ ಪ್ರಮುಖ ದೇವಾಲಯಗಳಲ್ಲಿ ಮೊಬೈಲ್ ಫೋನ್ ಬಳಕೆಯನ್ನು ಸಂಪೂರ್ಣವಾಗಿ ನಿಷೇಧಿಸಲು ಹಿಂದೂ ಧಾರ್ಮಿಕ ಮತ್ತು ದತ್ತಿ (HR&CE) ಇಲಾಖೆ ನಿರ್ಧರಿಸಿದೆ. ದೇವಾಲಯಗಳಿಗೆ ಭೇಟಿ ನೀಡುವ ನಟರು, ರಾಜಕೀಯ ನಾಯಕರು ಹಾಗೂ ಇತರ ಗಣ್ಯರಿಗೆ ಸಂಬಂಧಿಸಿದ ನಿಯಮಗಳನ್ನೂ ಇಲಾಖೆ ಬಿಗಿಗೊಳಿಸಿದೆ. ಗಣ್ಯರ ಭೇಟಿಯಿಂದ ಸಾಮಾನ್ಯ ಭಕ್ತರಿಗೆ ತೊಂದರೆಯಾಗದಂತೆ ಹಾಗೂ ದರ್ಶನಕ್ಕೆ ಅಡ್ಡಿಯಾಗದಂತೆ ವ್ಯವಸ್ಥೆ ಮಾಡುವಂತೆ ದೇವಾಲಯ ಆಡಳಿತಗಳಿಗೆ ಸೂಚಿಸಲಾಗಿದೆ. ಗಣ್ಯರ ಭೇಟಿಯ ಕುರಿತು ಕನಿಷ್ಠ ಒಂದು ದಿನ ಮುಂಚಿತವಾಗಿ HR&CE ಆಯುಕ್ತರಿಗೆ ಮಾಹಿತಿ ನೀಡಬೇಕು. ಭೇಟಿಯ ದಿನಾಂಕ, ಸಮಯ ಹಾಗೂ ಅವರೊಂದಿಗೆ ಬರುವವರ ಸಂಖ್ಯೆಯ ವಿವರಗಳನ್ನು ನೀಡಬೇಕಿದೆ. ತುರ್ತು ಭೇಟಿಗಳ ಸಂದರ್ಭದಲ್ಲೂ ತಕ್ಷಣ ಇಲಾಖೆಗೆ ಮಾಹಿತಿ ನೀಡಿ ಅಗತ್ಯ ವ್ಯವಸ್ಥೆ ಕಲ್ಪಿಸಬೇಕು. ದೇವಾಲಯದ ಆವರಣದಲ್ಲಿ ಗಣ್ಯರ ಭೇಟಿಯ ವೇಳೆ…

‘ಜೀವನ ಲೀಡರ್‌ಬೋರ್ಡ್ ಅಲ್ಲ, ನಿಮ್ಮ ಸ್ಪರ್ಧೆ ನಿಮ್ಮೊಂದಿಗೇ’; ಯುವಕರಿಗೆ ಪ್ರಧಾನಿ ಮೋದಿ ಸಲಹೆ

ನವದೆಹಲಿ: ಹೊಸ ವಿಷಯಗಳನ್ನು ತಿಳಿದುಕೊಳ್ಳುವ ಕುತೂಹಲವನ್ನು ಜೀವಂತವಾಗಿರಿಸಿಕೊಂಡು, ನಿರಂತರವಾಗಿ ಕಲಿಯುತ್ತಾ ಸವಾಲುಗಳಿಗೆ ಪರಿಹಾರ ಕಂಡುಕೊಳ್ಳುವ ಧೈರ್ಯ ಬೆಳೆಸಿಕೊಳ್ಳಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಐಐಟಿ ದೆಹಲಿ ಪದವೀಧರರಿಗೆ ಕರೆ ನೀಡಿದ್ದಾರೆ. ಐಐಟಿ ದೆಹಲಿಯ 57ನೇ ಘಟಿಕೋತ್ಸವ ಸಮಾರಂಭವನ್ನುದ್ದೇಶಿಸಿ ಮಾತನಾಡಿದ ಮೋದಿ, ಪದವಿ ಪಡೆದ ವಿದ್ಯಾರ್ಥಿಗಳು, ಅವರ ಪೋಷಕರು ಹಾಗೂ ಅಧ್ಯಾಪಕರಿಗೆ ಅಭಿನಂದನೆ ಸಲ್ಲಿಸಿದರು. ಐಐಟಿ ಪದವಿ ಕೇವಲ ಉತ್ತಮ ಅಂಕಗಳು ಅಥವಾ ಉದ್ಯೋಗ ಪಡೆಯುವುದಕ್ಕೆ ಸೀಮಿತವಾಗಬಾರದು. ಸಂಕೀರ್ಣ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವ ಸಾಮರ್ಥ್ಯವನ್ನು ಪ್ರತಿಬಿಂಬಿಸಬೇಕು ಎಂದರು. ತಂತ್ರಜ್ಞಾನ ಹಾಗೂ ಭೌಗೋಳಿಕ ರಾಜಕೀಯ ಕ್ಷೇತ್ರಗಳಲ್ಲಿ ವೇಗವಾಗಿ ಬದಲಾಗುತ್ತಿರುವ ಪರಿಸ್ಥಿತಿ ಹೊಸ ಸವಾಲುಗಳು ಮತ್ತು ಅವಕಾಶಗಳನ್ನು ಸೃಷ್ಟಿಸುತ್ತಿದೆ. ಇಂತಹ ಸಂದರ್ಭದಲ್ಲಿ ಪದವೀಧರರು ತಮ್ಮ ಕಲಿಕೆಯ ಮನೋಭಾವವನ್ನು ಸದಾ ಜೀವಂತವಾಗಿರಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು. ಜನರು ಸಾಮಾನ್ಯವಾಗಿ ಪ್ರಶ್ನಿಸದೇ ಸ್ವೀಕರಿಸುವ ಸಂಗತಿಗಳನ್ನು ಪ್ರಶ್ನಿಸುವಂತೆ ಕರೆ ನೀಡಿದ ಪ್ರಧಾನಿ, ಪ್ರಶ್ನೆಗಳನ್ನು ಕೇಳುವುದರಲ್ಲೇ ನಿಲ್ಲದೆ…

ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಸಹೋದರ ಗೋಪಾಲ್ ಜೋಶಿ ಬಂಧನಕ್ಕೆ ಆಗ್ರಹಿಸಿ ಕಾಂಗ್ರೆಸ್‌ ಪ್ರತಿಭಟನೆ

ಬೆಂಗಳೂರು: ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ,, ಜೀವ ಬೆದರಿಕೆ ಹಾಕಿರುವ ಆರೋಪದದಲ್ಲಿರುವ ಕೇಂದ್ರ ಶಿಕ್ಷಣ ಸಚಿವ ಪ್ರಹ್ಲಾದ್ ಜೋಶಿ ಸಹೋದರ ಗೋಪಾಲ್ ಜೋಶಿಯನ್ನು ಕೂಡಲೇ ಬಂಧಿಸಬೇಕೆಂದು ಆಗ್ರಹಿಸಿ ಕಾಂಗ್ರೆಸ್‌ನಿಂದ ಪ್ರತಿಭಟನೆ ನಡೆಯಿತು. ಗೋಪಾಲ್ ಜೋಶಿ ವಿರುದ್ಧ ಮಹಿಳೆಯೊಬ್ಬರು ಮಾಡಿರುವ ಲೈಂಗಿಕ ದೌರ್ಜನ್ಯದ ಆರೋಪಗಳ ಕುರಿತು ಸಮಗ್ರ ಹಾಗೂ ನಿಷ್ಪಕ್ಷಪಾತ ತನಿಖೆಗೆ ನಾಯಕರು ಆಗ್ರಹಿಸಿದೂರು. ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಸ್. ಮನೋಹರ್ ಅವರ ನೇತೃತ್ವದಲ್ಲಿ ನಡೆದ ಈ ಪ್ರತಿಭಟನೆಯಲ್ಲಿ “ಮಹಿಳೆಯೊಬ್ಬರು ಮಾಡಿರುವ ಅತ್ಯಂತ ಗಂಭೀರ ಆರೋಪಗಳ ಬಗ್ಗೆ ಸರ್ಕಾರ ಹಾಗೂ ಪೊಲೀಸ್ ತನಿಖಾ ಸಂಸ್ಥೆಗಳು ಯಾವುದೇ ರಾಜಕೀಯ ಒತ್ತಡವಿಲ್ಲದೆ ಸತ್ಯಾಸತ್ಯತೆಯನ್ನು ಪರಿಶೀಲಿಸಬೇಕು. ಆರೋಪಗಳು ಸಾಬೀತಾದಲ್ಲಿ ತಪ್ಪಿತಸ್ಥ ಆರೋಪಿಯನ್ನು ಕಾನೂನಿನ ಪ್ರಕಾರ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು. ಇದೀಗ ಅವರ ಸಹೋದರ ಗೋಪಾಲ್ ಜೋಶಿ ಚುನಾವಣೆಯಲ್ಲಿ ಟಿಕೆಟ್ ಕೊಡಿಸುವುದಾಗಿ ಪ್ರಧಾನಿ ನರೇಂದ್ರ ಮೋದಿ ಗೃಹ ಸಚಿವ ಅಮಿತ್ ಶಾ ರವರ…

ಮಂಡ್ಯದಲ್ಲಿ ಮಳೆ ಕೊರತೆ; 24,123 ಹೆಕ್ಟೇರ್ ಪ್ರದೇಶದಲ್ಲಿ ಮಾತ್ರ ಬಿತ್ತನೆ

ಮಂಡ್ಯ: ಜಿಲ್ಲೆಯಲ್ಲಿ ಮುಂಗಾರು ಮಳೆ ಕೊರತೆ, ಬೆಳೆಗಳ ಸ್ಥಿತಿಗತಿ ಹಾಗೂ ಕೆರೆಗಳಲ್ಲಿನ ನೀರಿನ ಲಭ್ಯತೆ ಕುರಿತು ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ಅವರ ಅಧ್ಯಕ್ಷತೆಯಲ್ಲಿ ಅಧಿಕಾರಿಗಳ ಸಭೆ ನಡೆಯಿತು. ಸಚಿವ ಪಿ.ಎಂ. ನರೇಂದ್ರಸ್ವಾಮಿ ಉಪಸ್ಥಿತರಿದ್ದರು. ಸಭೆಯಲ್ಲಿ ಮಾತನಾಡಿದ ಚಲುವರಾಯಸ್ವಾಮಿ, ಮಳೆ ಕೊರತೆ ಹಾಗೂ ಹವಾಮಾನ ವೈಪರೀತ್ಯದಿಂದ ರೈತರಿಗೆ ತೊಂದರೆಯಾಗದಂತೆ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳಬೇಕು. ಬಿತ್ತನೆ ಬೀಜ, ರಸಗೊಬ್ಬರ ಹಾಗೂ ಕೃಷಿ ಪರಿಕರಗಳ ಕೊರತೆಯಾಗದಂತೆ ನೋಡಿಕೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು. ಕುಡಿಯುವ ನೀರಿನ ಸಮಸ್ಯೆ ಎದುರಾಗಬಹುದಾದ ಗ್ರಾಮಗಳನ್ನು ಮುಂಚಿತವಾಗಿ ಗುರುತಿಸಿ ಪರ್ಯಾಯ ವ್ಯವಸ್ಥೆ ಮಾಡಬೇಕು. ಕೃಷಿ ಮತ್ತು ಕಂದಾಯ ಸೇರಿದಂತೆ ಎಲ್ಲ ಇಲಾಖೆಗಳು ಸಮನ್ವಯದಿಂದ ಕಾರ್ಯನಿರ್ವಹಿಸಬೇಕು ಎಂದು ತಿಳಿಸಿದರು. ಜಿಲ್ಲಾಧಿಕಾರಿ ಡಾ. ಕುಮಾರ ಮಾತನಾಡಿ, ಪೂರ್ವ ಮುಂಗಾರು ಮಳೆ ಕೊರತೆಯಿಂದ 6,175 ಹೆಕ್ಟೇರ್ ಪ್ರದೇಶದಲ್ಲಿ ಶೇ.31.83ರಷ್ಟು ಮಾತ್ರ ಬಿತ್ತನೆಯಾಗಿದೆ. ಮುಂಗಾರು ಹಂಗಾಮಿನಲ್ಲೂ ಮಳೆ ಕೊರತೆ ಮುಂದುವರಿದಿದ್ದು, 17,948 ಹೆಕ್ಟೇರ್…

ಬೆಂಗಳೂರಿನಲ್ಲಿ ‘ಆಪರೇಷನ್ ಮುಕ್ತ’ ಕಾರ್ಯಾಚರಣೆ; ವೈಟ್‌ಫೀಲ್ಡ್‌ನಲ್ಲಿ ಅಕ್ರಮ ವಲಸಿಗರ ಪತ್ತೆಗೆ ಶೋಧ

ಬೆಂಗಳೂರು: ಉದ್ಯಾನ ನಗರಿಯಲ್ಲಿ ರಹಸ್ಯವಾಗಿ ನೆಲೆಯೂರಿರುವ ಬಾಂಗ್ಲಾದೇಶಿ ಪ್ರಜೆಗಳ ವಿರುದ್ಧ ಬೆಂಗಳೂರಿನ ವೈಟ್‌ಫೀಲ್ಡ್ ಪೋಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದಾರೆ. ವೈಟ್‌ಫೀಲ್ಡ್ ಉಪವಿಭಾಗದ ಎಸಿಪಿ ರೀನಾ ಸುವರ್ಣ ನೇತೃತ್ವದ ಪೊಲೀಸರು ಬೆಳ್ಳಂಬೆಳಿಗ್ಗೆ ಅಖಾಡಕ್ಕಿಳಿದಿದ್ದು, ನಿರಾಶ್ರಿತರ ಸೋಗಿನಲ್ಲಿ ತಾತ್ಕಾಲಿಕ ಟೆಂಟ್ ನಿರ್ಮಿಸಿ ವಾಸವಾಗಿದ್ದ ಬಾಂಗ್ಲಾದೇಶ ಮೂಲದ ಹಲವಾರು ಕುಟುಂಬಗಳನ್ನು ಪತ್ತೆ ಮಾಡಿದ್ದಾರೆ. ಬೆಂಗಳೂರಿನ ವಿವಿಧ ಭಾಗಗಳಲ್ಲಿ ವಾಸಿಸುತ್ತಿದ್ದಾರೆ ಎನ್ನಲಾದ ಅಕ್ರಮ ವಲಸಿಗರನ್ನು ಗುರುತಿಸಲು ಮತ್ತು ಪತ್ತೆಹಚ್ಚಲು ಬೆಂಗಳೂರು ಪೊಲೀಸರು ಶನಿವಾರ ‘ಆಪರೇಷನ್ ಮುಕ್ತ’ ಎಂಬ ವಿಶೇಷ ಅಭಿಯಾನವನ್ನು ಪ್ರಾರಂಭಿಸಿದ್ದು, ಹಲವಾರು ಪ್ರದೇಶಗಳಲ್ಲಿ ದಾಳಿ ಮತ್ತು ಪರಿಶೀಲನಾ ಕಾರ್ಯಾಚರಣೆಗಳನ್ನು ನಡೆಸಲಾಗುತ್ತಿದೆ. ಈ ಅಭಿಯಾನ ವೈಟ್‌ಫೀಲ್ಡ್ ಸುತ್ತಮುತ್ತಲ ಪ್ರದೇಶಗಳ್ಲಲಿ ಬಿರುಸಿನಿಂದ ಸಾಗಿದೆ. ವೈಟ್‌ಫೀಲ್ಡ್ ಉಪವಿಭಾಗದ ಎಸಿಪಿ ರೀನಾ ಸುವರ್ಣ ಅವರೇ ವಿವಿಧ ತಂಡಗಳ ನೇತೃತ್ವ ವಹಿಸಿ ಸ್ವತಃ ಕಾರ್ಯಾಚರಣೆಗಿಳಿದಿದ್ದಾರೆ. ಬೆಂಗಳೂರಿನ ಪ್ರಮುಖ ತಂತ್ರಜ್ಞಾನ ಕಾರಿಡಾರ್‌ಗಳ ಭಾಗವಾಗಿರುವ ವೈಟ್‌ಫೀಲ್ಡ್, ಕಾಡುಗೋಡಿ, ಮಹದೇವಪುರ ಮತ್ತು ಇತರ…

ಓಣಂ ಪ್ರಯಾಣಿಕರಿಗೆ KSRTCಯಿಂದ ಗುಡ್‌ನ್ಯೂಸ್; ಆ.21ರಿಂದ 25ರವರೆಗೆ ವಿಶೇಷ ಬಸ್ ಸೇವೆ

ಬೆಂಗಳೂರು: ಆಗಸ್ಟ್ 26ರಂದು ನಡೆಯಲಿರುವ ತಿರು ಓಣಂ ಹಬ್ಬದ ಹಿನ್ನೆಲೆಯಲ್ಲಿ ಕೇರಳಕ್ಕೆ ತೆರಳುವ ಪ್ರಯಾಣಿಕರ ಅನುಕೂಲಕ್ಕಾಗಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (KSRTC) ವಿಶೇಷ ಬಸ್ ಸೇವೆ ಆರಂಭಿಸಲು ಸಿದ್ಧತೆ ನಡೆಸಿದೆ. ಹಬ್ಬದ ಸಂದರ್ಭದಲ್ಲಿ ಪ್ರಯಾಣಿಕರ ಸಂಖ್ಯೆ ಹೆಚ್ಚಾಗುವ ಹಿನ್ನೆಲೆಯಲ್ಲಿ ಬೆಂಗಳೂರಿನಿಂದ ಕೇರಳದ ವಿವಿಧ ನಗರಗಳಿಗೆ ಹೆಚ್ಚುವರಿ ಬಸ್‌ಗಳನ್ನು ಕಾರ್ಯಾಚರಣೆ ಮಾಡಲಾಗುತ್ತಿದೆ. ಆಗಸ್ಟ್ 21ರಿಂದ 25ರವರೆಗೆ ಬೆಂಗಳೂರಿನಿಂದ ಕೇರಳದ ಪ್ರಮುಖ ಸ್ಥಳಗಳಿಗೆ 90 ಹೆಚ್ಚುವರಿ ಬಸ್‌ಗಳನ್ನು ಕಾರ್ಯಾಚರಣೆ ಮಾಡಲಾಗುವುದು ಎಂದು ಕೆಎಸ್‌ಆರ್‌ಟಿಸಿ ತಿಳಿಸಿದೆ. ಕೇರಳದಿಂದ ಬೆಂಗಳೂರಿಗೆ ವಾಪಸ್ ಬರುವ ಪ್ರಯಾಣಿಕರಿಗಾಗಿ ಆಗಸ್ಟ್ 30ರಂದು ವಿಶೇಷ ಬಸ್‌ಗಳನ್ನು ಓಡಿಸಲಾಗುತ್ತದೆ. ಬೆಂಗಳೂರಿನ ಮೈಸೂರು ರಸ್ತೆ ಬಸ್ ನಿಲ್ದಾಣ ಹಾಗೂ ಶಾಂತಿನಗರ ಬಸ್ ನಿಲ್ದಾಣದಿಂದ ಕಣ್ಣೂರು, ಕೋಝಿಕ್ಕೋಡ್, ಎರ್ನಾಕುಲಂ, ಪಾಲಕ್ಕಾಡ್, ತ್ರಿಶೂರ್, ಕೊಟ್ಟಾಯಂ, ತಿರುವನಂತಪುರ ಸೇರಿದಂತೆ ಕೇರಳದ ಪ್ರಮುಖ ನಗರಗಳಿಗೆ ವಿಶೇಷ ಸಾರಿಗೆ ವ್ಯವಸ್ಥೆ ಮಾಡಲಾಗಿದೆ. ಕೆಲವು ಪ್ರತಿಷ್ಠಿತ ಸಾರಿಗೆಗಳನ್ನು…

ಸಚಿವರಾದ ನಂತರ ಮೊದಲ ಭೇಟಿ; ಮಂಡ್ಯದಲ್ಲಿ ಚಲುವರಾಯಸ್ವಾಮಿ, ನರೇಂದ್ರಸ್ವಾಮಿಗೆ ಅದ್ಧೂರಿ ಸ್ವಾಗತ

ಮಂಡ್ಯ: ನೂತನ ಸಚಿವರಾದ ಎನ್. ಚಲುವರಾಯಸ್ವಾಮಿ ಹಾಗೂ ಪಿ.ಎಂ. ನರೇಂದ್ರಸ್ವಾಮಿ ಶನಿವಾರ ಮಂಡ್ಯ ಜಿಲ್ಲೆಗೆ ಆಗಮಿಸಿದ್ದು, ಜಿಲ್ಲೆಯ ಗಡಿ ನಿಡಘಟ್ಟದಲ್ಲಿ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಅದ್ದೂರಿಯಾಗಿ ಸ್ವಾಗತಿಸಿದರು. ಮದ್ದೂರು ತಾಲೂಕಿನ ನಿಡಘಟ್ಟ ಬಳಿ ಸಚಿವರಿಬ್ಬರನ್ನು ಮದ್ದೂರು ಶಾಸಕ ಕೆ. ಉದಯ್, ಜಿಲ್ಲಾಧಿಕಾರಿ ಡಾ. ಕುಮಾರ್, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ನಂದಿನಿ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶೋಭಾರಾಣಿ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಆತ್ಮೀಯವಾಗಿ ಬರಮಾಡಿಕೊಂಡರು. ಈ ವೇಳೆ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ನೂತನ ಸಚಿವರಿಗೆ ಶುಭಾಶಯ ಕೋರಿದರು. ಸಚಿವರ ಆಗಮನದ ಹಿನ್ನೆಲೆಯಲ್ಲಿ ಸ್ಥಳೀಯರು ಹಾಗೂ ಮಂಡ್ಯ ಜಿಲ್ಲೆಯ ಸಾರ್ವಜನಿಕರೂ ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದರು. ಸಚಿವರಾದ ಬಳಿಕ ಮೊದಲ ಬಾರಿಗೆ ಜಿಲ್ಲೆಗೆ ಆಗಮಿಸಿದ ಹಿನ್ನೆಲೆಯಲ್ಲಿ ನಿಡಘಟ್ಟದಲ್ಲಿ ಕಾರ್ಯಕರ್ತರು ಹಾಗೂ ಸಾರ್ವಜನಿಕರಲ್ಲಿ ಉತ್ಸಾಹದ ವಾತಾವರಣ ಕಂಡುಬಂತು. ಜಿಲ್ಲೆಯ ಅಭಿವೃದ್ಧಿ ಹಾಗೂ ಜನರ ಸಮಸ್ಯೆಗಳಿಗೆ ಸ್ಪಂದಿಸುವಂತೆ ಸಾರ್ವಜನಿಕರು…

ಸಿಲಿಂಡರ್ ತುಂಬಿದ್ದ ಲಾರಿಗೆ ಕಾರು ಡಿಕ್ಕಿ; ಮೂವರು ಸ್ಥಳದಲ್ಲೇ ಸಾವು, ಇಬ್ಬರಿಗೆ ಗಂಭೀರ ಗಾಯ

ಚಿಕ್ಕಮಗಳೂರು: ಜಿಲ್ಲೆಯ ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ ಬಳಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಕೊಟ್ಟಿಗೆಹಾರದ ಪೆಟ್ರೋಲ್ ಬಂಕ್‌ವೊಂದರ ಮುಂಭಾಗ ರಸ್ತೆ ಬದಿಯಲ್ಲಿ ನಿಲ್ಲಿಸಲಾಗಿದ್ದ ಸಿಲಿಂಡರ್ ತುಂಬಿದ ಲಾರಿಗೆ ಕಾರು ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಕಾರು ಸಂಪೂರ್ಣ ಜಖಂಗೊಂಡಿದ್ದು, ಅದರಲ್ಲಿದ್ದ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತರನ್ನು ಗುರುಕಿರಣ್ (28), ಮೋಹನ್ (30) ಹಾಗೂ ಜ್ಞಾನೇಶ್ (28) ಎಂದು ಗುರುತಿಸಲಾಗಿದೆ. ಕಾರಿನಲ್ಲಿದ್ದ ಪ್ರೇಮ್ ಕುಮಾರ್ ಹಾಗೂ ಹೃತಿಕ್ ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ತಕ್ಷಣ ಹಾಸನ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಮೃತರೆಲ್ಲರೂ ತುಮಕೂರು ಜಿಲ್ಲೆಯ ಗುಬ್ಬಿ ಮೂಲದವರು ಎಂದು ತಿಳಿದುಬಂದಿದೆ. ತುಮಕೂರಿನಿಂದ ಧರ್ಮಸ್ಥಳಕ್ಕೆ ಪ್ರವಾಸಕ್ಕೆ ತೆರಳುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ ಎನ್ನಲಾಗಿದೆ. ಬಣಕಲ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆನಡೆದಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.