ನವದೆಹಲಿ: ನೈಋತ್ಯ ಮಾನ್ಸೂನ್ ದುರ್ಬಲಗೊಳ್ಳುವ ಲಕ್ಷಣಗಳು ಕಾಣಿಸಿಕೊಳ್ಳುತ್ತಿರುವ ಹಾಗೂ ಎಲ್ ನಿನೋ ಪರಿಣಾಮದ ಆತಂಕ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ, ಖಾರಿಫ್ ಹಂಗಾಮಿಯನ್ನು ರಕ್ಷಿಸಲು ಕೇಂದ್ರ ಸರ್ಕಾರ ರಾಷ್ಟ್ರವ್ಯಾಪಿ ತುರ್ತು ಯೋಜನೆಯನ್ನು ಸಕ್ರಿಯಗೊಳಿಸಿದೆ. ಸಂಭಾವ್ಯ ಬೆಳೆ ನಷ್ಟದಿಂದ ರೈತರನ್ನು ಕಾಪಾಡಲು ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ನೇತೃತ್ವದಲ್ಲಿ ನಡೆದ ಉನ್ನತ ಮಟ್ಟದ ಸಭೆಯಲ್ಲಿ, ಪರಿಸ್ಥಿತಿ ಗಂಭೀರವಾಗುವವರೆಗೆ ಕಾಯದೆ ಮುಂಚಿತ ತುರ್ತು ಸಿದ್ಧತೆ ನಡೆಸಲಾಗುತ್ತಿದೆ ಎಂದು ತಿಳಿಸಲಾಯಿತು. ಸಭೆಯಲ್ಲಿ ರಾಜ್ಯಗಳ ಕೃಷಿ ಸಚಿವರು, ಜಿಲ್ಲಾಧಿಕಾರಿಗಳು, ಭಾರತೀಯ ಹವಾಮಾನ ಇಲಾಖೆ (IMD), ಐಸಿಎಆರ್ ಹಾಗೂ ಇತರ ಸಂಸ್ಥೆಗಳ ಅಧಿಕಾರಿಗಳು ಭಾಗವಹಿಸಿದ್ದರು. ದೇಶದಾದ್ಯಂತ 315 ಜಿಲ್ಲೆಗಳು ಕಡಿಮೆ ಮಳೆಯ ಅಪಾಯದಲ್ಲಿವೆ ಎಂದು ಗುರುತಿಸಲಾಗಿದ್ದು, ಅವುಗಳಲ್ಲಿ 111 ಜಿಲ್ಲೆಗಳು ಅತ್ಯಂತ ಸೂಕ್ಷ್ಮ ಪ್ರದೇಶಗಳೆಂದು ವರ್ಗೀಕರಿಸಲಾಗಿದೆ. ಕರ್ನಾಟಕ, ಮಹಾರಾಷ್ಟ್ರ, ಮಧ್ಯಪ್ರದೇಶ, ಗುಜರಾತ್, ರಾಜಸ್ಥಾನ, ಬಿಹಾರ, ಜಾರ್ಖಂಡ್, ತೆಲಂಗಾಣ, ಆಂಧ್ರಪ್ರದೇಶ ಮತ್ತು…
Category: ಪ್ರಮುಖ ಸುದ್ದಿ
‘ನೀಟ್’ ಹಚ್ಚಿದ ಕಿಚ್ಚು; ಕೇಂದ್ರದ ವಿರುದ್ಧ ದೇಶವ್ಯಾಪಿ ‘ಛತ್ರೋಂ ಕಿ ಗೂಂಜ್’ ಅಭಿಯಾನಕ್ಕೆ ಕಾಂಗ್ರೆಸ್ ಮುನ್ನುಡಿ
ನವದೆಹಲಿ: ದೇಶದ ಶಿಕ್ಷಣ ವ್ಯವಸ್ಥೆಯ ಸಮಗ್ರ ಸುಧಾರಣೆಗೆ ಆಗ್ರಹಿಸಿ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಜೂನ್ 25ರಂದು ‘ಛತ್ರೋಂ ಕಿ ಗೂಂಜ್’ (ವಿದ್ಯಾರ್ಥಿಗಳ ಪ್ರತಿಧ್ವನಿ) ಹೆಸರಿನ ರಾಷ್ಟ್ರವ್ಯಾಪಿ ಅಭಿಯಾನ ಆರಂಭಿಸುವುದಾಗಿ ಘೋಷಿಸಿದೆ. ಇದರ ಭಾಗವಾಗಿ ದೇಶದ 28 ಪ್ರಮುಖ ನಗರಗಳಲ್ಲಿ ಪತ್ರಿಕಾಗೋಷ್ಠಿಗಳು ನಡೆಯಲಿವೆ. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿರುವ ಕಾಂಗ್ರೆಸ್, ಕೇಂದ್ರ ಸರ್ಕಾರದ ಶಿಕ್ಷಣ ನೀತಿಯಲ್ಲಿ ದೂರದೃಷ್ಟಿಯ ಕೊರತೆ ಹಾಗೂ ಸೈದ್ಧಾಂತಿಕ ಹಸ್ತಕ್ಷೇಪವಿದೆ ಎಂದು ಆರೋಪಿಸಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಬಿಡುಗಡೆ ಮಾಡಿದ ಪ್ರಕಟಣೆಯಲ್ಲಿ, ಕಳೆದ 12 ವರ್ಷಗಳಲ್ಲಿ ಶಿಕ್ಷಣ ಕ್ಷೇತ್ರದಲ್ಲಿ ಖಾಸಗೀಕರಣ, ಕೇಂದ್ರೀಕರಣ ಮತ್ತು ಸೈದ್ಧಾಂತಿಕ ನಿಯಂತ್ರಣ ಹೆಚ್ಚಾಗಿದ್ದು, ಯುವಜನರನ್ನು ಭವಿಷ್ಯದ ಸವಾಲುಗಳಿಗೆ ಸಿದ್ಧಗೊಳಿಸುವಲ್ಲಿ ಸರ್ಕಾರ ವಿಫಲವಾಗಿದೆ ಎಂದು ಹೇಳಲಾಗಿದೆ. ದೇಶವು ಕೇವಲ ನಿರುದ್ಯೋಗವಷ್ಟೇ ಅಲ್ಲ, ಉದ್ಯೋಗಾರ್ಹತೆಯ ಬಿಕ್ಕಟ್ಟನ್ನೂ ಎದುರಿಸುತ್ತಿದೆ. ಪ್ರಸ್ತುತ ಶಿಕ್ಷಣ ವ್ಯವಸ್ಥೆ ವಿದ್ಯಾರ್ಥಿಗಳನ್ನು ಆಧುನಿಕ ಅಗತ್ಯಗಳಿಗೆ…
ಆರ್. ಮಾಧವನ್‌ಗೆ ಪದ್ಮಶ್ರೀ ಗೌರವ; ಗೌರವಕ್ಕೆ ‘ಧುರಂಧರ್’ ನಟ ಭಾವನಾತ್ಮಕ ಪ್ರತಿಕ್ರಿಯೆ
ನವದೆಹಲಿ: ಭಾರತೀಯ ಚಿತ್ರರಂಗದ ಖ್ಯಾತ ನಟ ಆರ್. ಮಾಧವನ್ ಅವರಿಗೆ ಭಾರತ ಸರ್ಕಾರದ ಪ್ರತಿಷ್ಠಿತ ನಾಗರಿಕ ಗೌರವಗಳಲ್ಲಿ ಒಂದಾದ ಪದ್ಮಶ್ರೀ ಪ್ರಶಸ್ತಿ ಪ್ರದಾನ ಮಾಡಲಾಗಿದೆ. ರಾಷ್ಟ್ರಪತಿ ಭವನದಲ್ಲಿ ನಡೆದ ಸಮಾರಂಭದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಮಾಧವನ್ ಅವರಿಗೆ ಪ್ರಶಸ್ತಿ ನೀಡಿ ಗೌರವಿಸಿದರು. ಈ ಸಂದರ್ಭದಲ್ಲಿ ಅವರ ಪತ್ನಿ ಸರಿತಾ ಹಾಗೂ ಪುತ್ರ ವೇದಾಂತ್ ಉಪಸ್ಥಿತರಿದ್ದು ಸಂಭ್ರಮಿಸಿದರು. ಮಾಧವನ್ ಪ್ರಶಸ್ತಿ ಸ್ವೀಕರಿಸಲು ವೇದಿಕೆಯತ್ತ ತೆರಳುತ್ತಿದ್ದಂತೆ, ಪ್ರೇಕ್ಷಕರ ಸಾಲಿನಲ್ಲಿದ್ದ ಅವರ ಪತ್ನಿ ಮತ್ತು ಪುತ್ರ ಹೆಮ್ಮೆಯಿಂದ ಎದ್ದು ನಿಂತು ಚಪ್ಪಾಳೆ ತಟ್ಟಿ ಅಭಿನಂದಿಸಿದರು. ಈ ಭಾವನಾತ್ಮಕ ಕ್ಷಣ ಸಮಾರಂಭದ ಪ್ರಮುಖ ಆಕರ್ಷಣೆಯಾಗಿತ್ತು. ತಮಿಳು, ಹಿಂದಿ ಸೇರಿದಂತೆ ಹಲವು ಭಾಷೆಗಳ ಚಿತ್ರಗಳಲ್ಲಿ ಅಭಿನಯದ ಮೂಲಕ ವಿಶೇಷ ಗುರುತಿಸಿಕೊಂಡಿರುವ ಮಾಧವನ್, ಇತ್ತೀಚೆಗೆ ಬಿಡುಗಡೆಯಾದ ಧುರಂಧರ್ ಸೇರಿದಂತೆ ಅನೇಕ ಸಿನಿಮಾಗಳಲ್ಲಿ ತಮ್ಮ ಅಭಿನಯದ ಛಾಪು ಮೂಡಿಸಿದ್ದಾರೆ. ಪದ್ಮಶ್ರೀ ಗೌರವಕ್ಕೆ ಭಾವನಾತ್ಮಕ ಪ್ರತಿಕ್ರಿಯೆ ಪದ್ಮಶ್ರೀ…
ಜೂನ್ 28ರ ನಂತರ ಸಚಿವ ಸಂಪುಟ ವಿಸ್ತರಣೆ ಸಾಧ್ಯತೆ; ಪ್ರಮುಖರೊಬ್ಬರಿಗೆ ಸ್ಪೀಕರ್ ಹುದ್ದೆ
ಬೆಂಗಳೂರು: ರಾಜ್ಯ ಕಾಂಗ್ರೆಸ್‌ನಲ್ಲಿ ಸಚಿವ ಸಂಪುಟ ವಿಸ್ತರಣೆ ಕುರಿತು ಚರ್ಚೆಗಳು ತೀವ್ರಗೊಂಡಿವೆ. ಪ್ರಸ್ತುತ ಸಚಿವ ಸಂಪುಟದಲ್ಲಿ 20 ಹುದ್ದೆಗಳು ಖಾಲಿ ಇದ್ದು, ಅವುಗಳ ಭರ್ತಿಗೆ ಸಂಬಂಧಿಸಿದಂತೆ ಅಂತಿಮ ಹಂತದ ಮಾತುಕತೆಗಳು ನಡೆಯುತ್ತಿವೆ ಎಂದು ಮೂಲಗಳು ತಿಳಿಸಿವೆ. ಸಚಿವ ಸ್ಥಾನಾಕಾಂಕ್ಷಿಗಳ ಸಂಖ್ಯೆ ಹೆಚ್ಚಿರುವ ಹಿನ್ನೆಲೆ, ಹೈಕಮಾಂಡ್‌ನ ತೀರ್ಮಾನದಂತೆ ಮುಂದುವರಿಯಲು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನಿರ್ಧರಿಸಿದ್ದಾರೆ ಎನ್ನಲಾಗಿದೆ. ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಜೂನ್ 28ರಂದು ವಿದೇಶ ಪ್ರವಾಸದಿಂದ ಭಾರತಕ್ಕೆ ಮರಳುವ ನಿರೀಕ್ಷೆಯಿದ್ದು, ಅವರ ಆಗಮನದ ಬಳಿಕ ಸಚಿವ ಸಂಪುಟ ವಿಸ್ತರಣೆ ಕುರಿತು ಮಹತ್ವದ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ. ಮೂಲಗಳ ಪ್ರಕಾರ, ಡಿ.ಕೆ. ಶಿವಕುಮಾರ್ ಅವರು ಜೂನ್ 27ರಂದು ದೆಹಲಿಗೆ ಭೇಟಿ ನೀಡಿ ಪಕ್ಷದ ಹೈಕಮಾಂಡ್ ನಾಯಕರೊಂದಿಗೆ ಈ ಕುರಿತು ಚರ್ಚೆ ನಡೆಸುವ ಸಾಧ್ಯತೆ ಇದೆ. ಸಚಿವ ಸ್ಥಾನಕ್ಕಾಗಿ ಕಾಂಗ್ರೆಸ್‌ನ ಹಲವು ಶಾಸಕರು ಮತ್ತು…
ಅಡ್ಡ ಮತದಾನ ವಿಚಾರಕ್ಕೆ ಬಿಜೆಪಿ ಹೈಕಮಾಂಡ್ ಗರಂ; ರಾಜ್ಯ ನಾಯಕರಿಗೆ ಪ್ರಶ್ನೆಗಳ ಸುರಿಮಳೆ
ಬೆಂಗಳೂರು: ವಿಧಾನ ಪರಿಷತ್ ಚುನಾವಣೆಯಲ್ಲಿ ನಡೆದ ಅಡ್ಡ ಮತದಾನ ಪ್ರಕರಣದ ಕುರಿತು ವರಿಷ್ಠರಿಗೆ ವರದಿ ನೀಡಲು ನವದೆಹಲಿಗೆ ತೆರಳಿದ್ದ ರಾಜ್ಯ ಬಿಜೆಪಿ ನಾಯಕರಿಗೆ ಪಕ್ಷದ ಹೈಕಮಾಂಡ್ ತೀವ್ರ ತರಾಟೆ ತೆಗೆದುಕೊಂಡಿದೆ ಎನ್ನಲಾಗಿದೆ. ಬಿಜೆಪಿ ಕೇಂದ್ರ ಕಚೇರಿಯಲ್ಲಿ ಸುಮಾರು 45 ನಿಮಿಷಗಳ ಕಾಲ ನಡೆದ ಸಭೆಯಲ್ಲಿ ರಾಜ್ಯ ಉಸ್ತುವಾರಿ ರಾಧಾ ಮೋಹನ್ ದಾಸ್ ಅಗರವಾಲ್ ಉಪಸ್ಥಿತಿಯಲ್ಲೇ ಚುನಾವಣಾ ಸಿದ್ಧತೆ ಮತ್ತು ಮತದಾನ ನಿರ್ವಹಣೆ ಕುರಿತು ರಾಜ್ಯ ನಾಯಕರಿಂದ ವಿವರವಾದ ಮಾಹಿತಿ ಪಡೆಯಲಾಗಿದೆ. ಸಭೆಯಲ್ಲಿ ಹೈಕಮಾಂಡ್ ನಾಯಕರು, ಚುನಾವಣೆ ಘೋಷಣೆಯಾದ ಬಳಿಕ ಎಷ್ಟು ಸಭೆಗಳನ್ನು ನಡೆಸಿದ್ದೀರಿ, ಶಾಸಕಾಂಗ ಪಕ್ಷದ ಸಭೆ ಯಾವಾಗ ಆಯೋಜಿಸಿದ್ದೀರಿ, ಮತಗಳ ಹಂಚಿಕೆ ಹೇಗೆ ಮಾಡಿದ್ದೀರಿ, ಶಾಸಕರಿಗೆ ವಿಪ್ ಯಾವಾಗ ನೀಡಿದ್ದೀರಿ ಹಾಗೂ ಜೆಡಿಎಸ್ ಜತೆ ಎಷ್ಟು ಬಾರಿ ಸಮನ್ವಯ ಸಭೆ ನಡೆಸಿದ್ದೀರಿ ಎಂಬ ಪ್ರಶ್ನೆಗಳನ್ನು ಕೇಳಿದ್ದಾರೆ ಎನ್ನಲಾಗಿದೆ. ಇದೇ ವೇಳೆ, ಅಡ್ಡ ಮತದಾನದ ಸಾಧ್ಯತೆ ಬಗ್ಗೆ…
ಕಬ್ಬನ್ ಪಾರ್ಕ್ ತಾಂತ್ರಿಕ ದೋಷ ಸರಿಪಡಿಕೆ: ನೇರಳೆ ಮಾರ್ಗದ ಮೆಟ್ರೋ ಸಂಚಾರ ಯಥಾಸ್ಥಿತಿಗೆ
ಬೆಂಗಳೂರು: ನಮ್ಮ ಮೆಟ್ರೋದ ನೇರಳೆ ಮಾರ್ಗದಲ್ಲಿ (ಕಾಡುಗೋಡಿಯಿಂದ ಚಲ್ಲಘಟ್ಟ) ರೈಲು ಸಂಚಾರ ಸಂಪೂರ್ಣವಾಗಿ ಪುನರಾರಂಭಗೊಂಡಿದ್ದು, ಪ್ರಯಾಣಿಕರ ಆತಂಕಕ್ಕೆ ತೆರೆ ಬಿದ್ದಿದೆ. ಮಂಗಳವಾರ ಸಂಜೆ ಕಬ್ಬನ್ ಪಾರ್ಕ್ ಮೆಟ್ರೋ ನಿಲ್ದಾಣದ ಬಳಿ ‘ಥರ್ಡ್ ರೈಲ್ ಸಿಸ್ಟಮ್’ನ ಕರೆಂಟ್ ಕಲೆಕ್ಟರ್ ಶೂನಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡ ಪರಿಣಾಮ ಮೆಜೆಸ್ಟಿಕ್ ಮತ್ತು ಎಂ.ಜಿ. ರಸ್ತೆ ನಡುವಿನ ಸಂಚಾರಕ್ಕೆ ಅಡಚಣೆ ಉಂಟಾಗಿತ್ತು. ಇದರಿಂದ ಸಾವಿರಾರು ಪ್ರಯಾಣಿಕರು ತೊಂದರೆ ಅನುಭವಿಸಿದ್ದರು. ಬಿಎಂಆರ್‌ಸಿಎಲ್ ತಾಂತ್ರಿಕ ತಂಡಗಳು ರಾತ್ರಿಯಿಡೀ ದುರಸ್ತಿ ಕಾರ್ಯ ನಡೆಸಿ, ಬುಧವಾರ ಮುಂಜಾನೆ 3:30ರ ವೇಳೆಗೆ ಸಮಸ್ಯೆಯನ್ನು ಯಶಸ್ವಿಯಾಗಿ ಬಗೆಹರಿಸಿವೆ. ಇದಾದ ಬಳಿಕ ನಿಗದಿತ ವೇಳಾಪಟ್ಟಿಯಂತೆ ಬೆಳಗ್ಗೆ 5 ಗಂಟೆಯಿಂದ ಮೆಟ್ರೋ ರೈಲುಗಳ ಸಂಚಾರ ಆರಂಭವಾಗಿದ್ದು, ಕಾಡುಗೋಡಿಯಿಂದ ಚಲ್ಲಘಟ್ಟದವರೆಗಿನ ಸಂಪೂರ್ಣ ನೇರಳೆ ಮಾರ್ಗದಲ್ಲಿ ಯಾವುದೇ ವ್ಯತ್ಯಯವಿಲ್ಲದೆ ಸೇವೆ ಮುಂದುವರಿದಿದೆ. ಕಚೇರಿ ಹಾಗೂ ದೈನಂದಿನ ಕಾರ್ಯಗಳಿಗೆ ತೆರಳುವ ಸಾರ್ವಜನಿಕರು ಇದೀಗ ನಿರಾತಂಕವಾಗಿ ಮೆಟ್ರೋ ಸೇವೆಯನ್ನು ಬಳಸುತ್ತಿದ್ದಾರೆ…
ಪದ್ಮ ಪ್ರಶಸ್ತಿ 2026 ಪ್ರದಾನ: ಕರ್ನಾಟಕದ ಐವರು ಸಾಧಕರಿಗೆ ರಾಷ್ಟ್ರಪತಿ ಗೌರವ
ನವದೆಹಲಿ : ರಾಷ್ಟ್ರ ರಾಜಧಾನಿಯ ರಾಷ್ಟ್ರಪತಿ ಭವನದಲ್ಲಿ ಭಾನುವಾರ ನಡೆದ ಭವ್ಯ ಸಮಾರಂಭದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ದೇಶದ ವಿವಿಧ ಕ್ಷೇತ್ರಗಳ ಗಣ್ಯ ಸಾಧಕರಿಗೆ ಪ್ರತಿಷ್ಠಿತ ಪದ್ಮ ಪ್ರಶಸ್ತಿ 2026ನ್ನು ಪ್ರದಾನ ಮಾಡಿದರು. ಈ ಗೌರವ ಪಟ್ಟಿಯಲ್ಲಿ ಕರ್ನಾಟಕದ ಐವರು ಸಾಧಕರು ಸ್ಥಾನ ಪಡೆದಿದ್ದು, ರಾಜ್ಯಕ್ಕೆ ಹೆಮ್ಮೆಯ ಕ್ಷಣವಾಗಿ ಪರಿಣಮಿಸಿದೆ. ಗ್ರಾಮೀಣ ಶಿಕ್ಷಣ ಮತ್ತು ಆರೋಗ್ಯ ಸೇವೆ ಕ್ಷೇತ್ರದಲ್ಲಿ ಅಪಾರ ಕೊಡುಗೆ ನೀಡಿರುವ ಕೆಎಲ್‌ಇ ಸಂಸ್ಥೆಯ ನಾಯಕ, ಮಹಾದಾನಿ ಡಾ. ಪ್ರಭಾಕರ್ ಕೋರೆ ಅವರಿಗೆ ಪದ್ಮಶ್ರೀ ಪ್ರದಾನ ಮಾಡಲಾಯಿತು. ಜೊತೆಗೆ, ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಗಳಲ್ಲಿ ಬಳಕೆಯಲ್ಲಿರುವ ‘ದೃಷ್ಟಿ’ ವ್ಯವಸ್ಥೆಯನ್ನು ಆವಿಷ್ಕರಿಸಿ, ‘ಅಗ್ನಿ’ ಕ್ಷಿಪಣಿಯ ತಾಂತ್ರಿಕ ದೋಷ ನಿವಾರಣೆಗೆ ಕಾರಣರಾದ ವಿಜ್ಞಾನಿ ಡಾ. ಶುಭಾ ವೆಂಕಟೇಶ್ ಅಯ್ಯಂಗಾರ್ ಅವರಿಗೂ ಪದ್ಮಶ್ರೀ ಗೌರವ ಲಭಿಸಿದೆ. ಪ್ರೆಸ್ಟೀಜ್ ಸಂಸ್ಥೆಯನ್ನು ಬಿಲಿಯನ್ ಡಾಲರ್ ಉದ್ಯಮವಾಗಿ ರೂಪಿಸಿದ ಉದಾರ ಉದ್ಯಮಿ ಶ್ರೀ ಟಿ.ಟಿ.…
‘ಮಾ ಇಂಟಿ ಬಂಗಾರಂ’ಗೆ ಮೆಚ್ಚುಗೆ; . ತಾಯಿ ಆಗಲಿರುವ ಸಮಂತಾಗೆ ವಿಶೇಷ ಉಡುಗೊರೆ ನೀಡಿದ ಮೆಗಾಸ್ಟಾರ್
ಸಮಂತಾ ಋತ್ ಪ್ರಭು ನಟನೆಯ ‘ಮಾ ಇಂಟಿ ಬಂಗಾರಂ’ ಸಿನಿಮಾವನ್ನು ತೆಲುಗು ಚಿತ್ರರಂಗದ ಮೆಗಾಸ್ಟಾರ್ ಚಿರಂಜೀವಿ ಮೆಚ್ಚಿಕೊಂಡಿದ್ದಾರೆ. ಸಿನಿಮಾ ವೀಕ್ಷಿಸಿದ ಬಳಿಕ ಅವರು ತಮ್ಮ ಕುಟುಂಬದೊಂದಿಗೆ ಸಮಂತಾ ಅವರನ್ನು ಮನೆಗೆ ಆಹ್ವಾನಿಸಿ ಆತ್ಮೀಯವಾಗಿ ಸತ್ಕರಿಸಿದ್ದಾರೆ. ತಾಯಿ ಆಗಲಿರುವ ಸಮಂತಾ ಅವರಿಗೆ ವಿಶೇಷ ಉಡುಗೊರೆಗಳೊಂದಿಗೆ ಆಶೀರ್ವಾದವೂ ನೀಡಿದ್ದಾರೆ. ಚಿರಂಜೀವಿ ಮತ್ತು ಅವರ ಪತ್ನಿ ಸುರೇಖಾ, ಸಮಂತಾ ಅವರಿಗೆ ಸೀರೆ, ಪವಿತ್ರ ವಸ್ತುಗಳು ಹಾಗೂ ಶಂಖವನ್ನು ಉಡುಗೊರೆಯಾಗಿ ನೀಡಿದ್ದಾರೆ. ಈ ಸಂದರ್ಭದ ಚಿತ್ರಗಳನ್ನು ಚಿರಂಜೀವಿ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡು ಸಮಂತಾಗೆ ಅಭಿನಂದನೆ ಸಲ್ಲಿಸಿದ್ದಾರೆ. ತಮ್ಮ ಪೋಸ್ಟ್‌ನಲ್ಲಿ ಚಿರಂಜೀವಿ, “‘ಮಾ ಇಂಟಿ ಬಂಗಾರಂ’ ಚಿತ್ರ ಅತ್ಯಂತ ಆಸಕ್ತಿದಾಯಕವಾಗಿದೆ. ಅವಿಭಕ್ತ ಕುಟುಂಬದ ಹಿನ್ನೆಲೆಯಲ್ಲಿನ ಆಕ್ಷನ್ ಮತ್ತು ಭಾವನೆಗಳನ್ನು ನಿರ್ದೇಶಕಿ ನಂದಿನಿ ರೆಡ್ಡಿ ತಮ್ಮ ವಿಶಿಷ್ಟ ಶೈಲಿಯಲ್ಲಿ ಸುಂದರವಾಗಿ ಬೆರೆಸಿದ್ದಾರೆ” ಎಂದು ಪ್ರಶಂಸಿಸಿದ್ದಾರೆ. ಸಮಂತಾ ಅವರ ನಟನೆ, ವಿಶೇಷವಾಗಿ ಸೀರೆಯಲ್ಲಿನ ಆಕ್ಷನ್ ದೃಶ್ಯಗಳು ಗಮನ…
‘ಅಡ್ಡ’ ವಿಚಾರ; ಧರ್ಮಸ್ಥಳದಲ್ಲಿ ಶಾಸಕಾಂಗ ಸಭೆ ತೀರ್ಮಾನ ಕೈಬಿಟ್ಟ ಬಿಜೆಪಿ
ಬೆಂಗಳೂರು: ಎಂಎಲ್‌ಸಿ ಚುನಾವಣೆಯಲ್ಲಿ ನಡೆದ ಅಡ್ಡಮತದಾನದ ಕುರಿತು ಧರ್ಮಸ್ಥಳದಲ್ಲಿ ಬಿಜೆಪಿ ಶಾಸಕಾಂಗ ಸಭೆ ನಡೆಸುವುದಿಲ್ಲ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಸ್ಪಷ್ಟಪಡಿಸಿದ್ದಾರೆ. ಧರ್ಮಸ್ಥಳವನ್ನು ರಾಜಕೀಯ ಚಟುವಟಿಕೆಗಳ ವೇದಿಕೆಯಾಗಿ ಬಳಸಬಾರದು ಎಂದು ಹೇಳಿದ ಅವರು, ಪಕ್ಷದ ಆಂತರಿಕ ವಿಚಾರಗಳನ್ನು ಪಕ್ಷದ ವೇದಿಕೆಯಲ್ಲಿಯೇ ಚರ್ಚಿಸಲಾಗುವುದು ಎಂದು ತಿಳಿಸಿದ್ದಾರೆ. ಎಂಎಲ್‌ಸಿ ಚುನಾವಣೆಯಲ್ಲಿ ಅಡ್ಡಮತದಾನ ನಡೆಸಿದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದ ಅಶೋಕ್, ಪಕ್ಷಕ್ಕೆ ದ್ರೋಹ ಮಾಡಿದವರನ್ನು ಗುರುತಿಸಿ ಸೂಕ್ತ ಪಾಠ ಕಲಿಸಲಾಗುವುದು ಎಂದರು. “ಯಾರು ಪಕ್ಷಕ್ಕೆ ಮೋಸ ಮಾಡಿದ್ದಾರೆ ಎಂಬುದನ್ನು ಪತ್ತೆಹಚ್ಚಿ ಕ್ರಮ ಕೈಗೊಳ್ಳುತ್ತೇವೆ. ಇಂತಹ ಘಟನೆಗಳು ಮತ್ತೆ ಮರುಕಳಿಸದಂತೆ ನೋಡಿಕೊಳ್ಳಲಾಗುವುದು,” ಎಂದು ಅವರು ಹೇಳಿದರು. ಅಡ್ಡಮತದಾನದ ವಿಚಾರದಲ್ಲಿ ಪಕ್ಷ ಗಂಭೀರವಾಗಿ ಪರಿಶೀಲನೆ ನಡೆಸುತ್ತಿದ್ದು, ಸಂಘಟನೆಯ ಶಿಸ್ತು ಕಾಪಾಡಲು ಅಗತ್ಯ ಕ್ರಮಗಳನ್ನು ಕೈಗೊಳ್ಳಲಿದೆ ಎಂದು ಅವರು ತಿಳಿಸಿದರು.
ಭಾರತದಲ್ಲಿ 5 ಲಕ್ಷ ಅಂಗಾಂಗ ದಾನ ಪ್ರತಿಜ್ಞೆಗಳ ಮೈಲಿಗಲ್ಲು
ನವದೆಹಲಿ: ಭಾರತವು 5 ಲಕ್ಷ ಅಂಗಾಂಗ ದಾನ ಪ್ರತಿಜ್ಞೆಗಳ ಮಹತ್ವದ ಮೈಲಿಗಲ್ಲನ್ನು ದಾಟಿದ್ದು, ಅಂಗಾಂಗ ಮತ್ತು ಅಂಗಾಂಶ ದಾನ ಕುರಿತ ಜಾಗೃತಿ ಹಾಗೂ ಸಾರ್ವಜನಿಕ ಭಾಗವಹಿಸುವಿಕೆ ಹೆಚ್ಚುತ್ತಿರುವುದನ್ನು ಇದು ಪ್ರತಿಬಿಂಬಿಸಿದೆ. ಈ ಸಾಧನೆಯು ಅಂಗಾಂಗ ಕಸಿಗಾಗಿ ಕಾಯುತ್ತಿರುವ ಸಾವಿರಾರು ರೋಗಿಗಳಿಗೆ ಹೊಸ ಭರವಸೆ ಮೂಡಿಸಿದ್ದು, ಜೀವ ಉಳಿಸುವ ಮಾನವೀಯ ಕಾರ್ಯವಾಗಿ ಅಂಗಾಂಗ ದಾನದ ಮಹತ್ವವನ್ನು ಮತ್ತೊಮ್ಮೆ ಎತ್ತಿ ತೋರಿಸಿದೆ. ರಾಷ್ಟ್ರೀಯ ಅಂಗಾಂಗ ಮತ್ತು ಅಂಗಾಂಶ ಕಸಿ ಸಂಸ್ಥೆ (NOTTO) ನಿರ್ದೇಶಕ ಡಾ. ಅನಿಲ್ ಕುಮಾರ್, ಈ ಅಭಿಯಾನಕ್ಕೆ ಬೆಂಬಲ ನೀಡಿದ ನಾಗರಿಕರು, ವೈದ್ಯಕೀಯ ವೃತ್ತಿಪರರು, ಶಿಕ್ಷಣ ಸಂಸ್ಥೆಗಳು, ಮಾಧ್ಯಮಗಳು ಹಾಗೂ ಸ್ವಯಂಸೇವಾ ಸಂಘಟನೆಗಳಿಗೆ ಕೃತಜ್ಞತೆ ಸಲ್ಲಿಸಿದ್ದಾರೆ. ರಾಜ್ಯ ಸರ್ಕಾರಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಜಾಗೃತಿ ಕಾರ್ಯಕ್ರಮಗಳ ಕೊಡುಗೆಯನ್ನೂ ಅವರು ಶ್ಲಾಘಿಸಿದ್ದಾರೆ. ಅಂಗಾಂಗಗಳ ಬೇಡಿಕೆ ಮತ್ತು ಲಭ್ಯತೆಯ ನಡುವಿನ ಅಂತರವನ್ನು ಕಡಿಮೆ ಮಾಡಲು ಜಾಗೃತಿ ಅಭಿಯಾನಗಳು, ಸುಧಾರಿತ ಮೂಲಸೌಕರ್ಯ…
