ಬೆಂಗಳೂರು: ಯಾವುದೇ ಜಾತಿಗಳಿಗೂ ರೋಸ್ಟರ್ನಲ್ಲಿ ಅನ್ಯಾಯವಾಗದಂತೆ ಖಾತ್ರಿಪಡಿಸಬೇಕು ಎಂದು ಸಿಎಂ ಸಿದ್ದರಾಮಯ್ಯ ಅವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ವಿಧಾನಸೌಧದಲ್ಲಿ ನಡೆದ ಸಭೆಯಲ್ಲಿ ಪರಿಶಿಷ್ಟ ಜಾತಿ ಒಳ ಮೀಸಲಾತಿಯ ಅನುಷ್ಠಾನದ ಕುರಿತಂತೆ ಚರ್ಚೆ ನಡೆದಿದೆ. ಒಳ ಮೀಸಲಾತಿ ಕುರಿತಾಗಿ ಸಚಿವ ಸಂಪುಟ ಸಭೆಯ ತೀರ್ಮಾನಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಲು ಕ್ರಮ ಕೈಗೊಳ್ಳಬೇಕು. ರೋಸ್ಟರ್ ಜಾರಿ ಕುರಿತಾಗಿ ಎಲ್ಲರ ಅಹವಾಲುಗಳನ್ನು ಆಲಿಸಬೇಕು. ಯಾವುದೇ ಜಾತಿಗಳಿಗೂ ರೋಸ್ಟರ್ನಲ್ಲಿ ಅನ್ಯಾಯವಾಗದಂತೆ ಖಾತ್ರಿಪಡಿಸಬೇಕು ಎಂದು ಸಿಎಂ ಅವರು ಅಧಿಕಾರಿಗಳಿಗೆ ಸೂಚಿಸಿದರು. ಜಾತಿ ಪ್ರಮಾಣ ಪತ್ರ ಯಾವ ರೀತಿಯಲ್ಲಿ ನೀಡಬೇಕು ಎಂಬ ಕುರಿತು ವಿವರವಾದ ಮಾರ್ಗಸೂಚಿಯನ್ನು ಬಿಡುಗಡೆಗೊಳಿಸಲಾಗಿದೆ. ನೇಮಕಾತಿಗೆ ಇದ್ದ ನಿರ್ಬಂಧವನ್ನು ತೆರವುಗೊಳಿಸಿದ ಬಳಿಕ ಅಭ್ಯರ್ಥಿಗಳ ವಯೋಮಿತಿಯನ್ನು ಒಂದು ಅವಧಿಗೆ ಹೆಚ್ಚಳ ಮಾಡಲಾಗಿದೆ. ಕೆಇಎಯಲ್ಲಿ ಈಗಾಗಲೇ ನೇಮಕಾತಿ ಅಧಿಸೂಚನೆ ಹೊರಡಿಸಲಾಗಿದೆ ಎಂದವರು ತಿಳಿಸಿದರು. ಒಳ ಮೀಸಲಾತಿ ಜಾರಿ ಕುರಿತಾಗಿ ಸುಪ್ರೀಂಕೋರ್ಟ್ ನಿರ್ದೇಶನಗಳ ಪ್ರಕಾರ…
Category: ಪ್ರಮುಖ ಸುದ್ದಿ
ಸ್ಪೀಕರ್ ವಿರುದ್ಧ ಭ್ರಷ್ಟಾಚಾರ ಆರೋಪ; ಬಿಜೆಪಿ ನಾಯಕರ ಹೈಡ್ರಾಮಾ ಎಂದ ಕಾಂಗ್ರೆಸ್ ನಾಯಕ ಮನೋರಾಜ್
ಮಂಗಳೂರು: ವಿಧಾನಸಭೆ ಆಡಳಿತ ಸುಧಾರಣೆ ಮತ್ತು ಅಭಿವೃದ್ಧಿ ಹೆಸರಿನಲ್ಲಿ ದೊಡ್ಡ ಮಟ್ಟದ ಭ್ರಷ್ಟಾಚಾರ ನಡೆಡಿದ್ದು, ಸ್ಪೀಕರ್ ಯು.ಟಿ.ಖಾದರ್ ವಿರುದ್ಧ ಪ್ರತಿಪಕ್ಷ ಬಿಜೆಪಿ ಭ್ರಷ್ಟಾಚಾರ ಆರೋಪ ಮಾಡಿದೆ. ಹಣಕಾಸು ಇಲಾಖೆಯ ತಿರಸ್ಕಾರದ ನಡುವೆಯೂ ಸಿಎಂ ಸಿದ್ದರಾಮಯ್ಯ ಅವರ ಮಧ್ಯಪ್ರವೇಶದಿಂದ ಅನುಮತಿ ಪಡೆದು ದುಪ್ಪಟ್ಟು ದರದಲ್ಲಿ ಖರೀದಿ ನಡೆಸಿ ಭ್ರಷ್ಟಾಚಾರ ನಡೆಸಲಾಗಿದೆ ಎಂದು ಬಿಜೆಪಿ ನಾಯಕರು ಆರೋಪಿಸಿದ್ದಾರೆ. ಈ ಬಗ್ಗೆ ಬಿಜೆಪಿ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಸುದ್ದಿಗೋಷ್ಠಿ ನಡೆಸಿ ಮಾಡಿರುವ ಆರೋಪ ರಾಜಕೀಯದಲ್ಲಿ ಭಾರೀ ಚರ್ಚೆಗೆ ಎಡೆಮಾಡಿಕೊಟ್ಟಿದೆ. ಈ ವಿಚಾರದಲ್ಲಿ ಕರಾವಳಿಯ ಬಿಜೆಪಿ ನಾಯಕರೂ ಯು.ಟಿ.ಖಾದರ್ ವಿರುದ್ಧ ಟೀಕಾಸ್ತ್ರ ಪ್ರಯೋಗಿಸಿದ್ದಾರೆ. ಈ ಬೆಳವಣಿಗೆ ಬಗ್ಗೆ ಮಂಗಳೂರಿನಲ್ಲಿ ಪ್ರತಿಕ್ರಿಯಿಸಿರುವ ಹಿರಿಯ ವಕೀಲರೂ ಆದ, ಜಿಲ್ಲಾ ಕಾಂಗ್ರೆಸ್ ಕಾನೂನು ಘಟಕದ ಅಧ್ಯಕ್ಷರೂ ಆದ ಮನೋರಾಜ್ ರಾಜೀವ್, ಬಿಜೆಪಿ ನಾಯಕರ ವೈಫಲ್ಯಗಳನ್ನು ಮುಂದಿಟ್ಟು ಪ್ರತಿಪಕ್ಷದ ನಾಯಕರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಹಿಂದಿನ ಸರ್ಕಾರದಲ್ಲಿ ಬಿಜೆಪಿ…
ಹಿಂಗಾರು ಹಂಗಾಮಿಗೆ ರಸಗೊಬ್ಬರದ ಕೊರತೆ ಇಲ್ಲ: ಚಲುವರಾಯಸ್ವಾಮಿ
ಬೆಂಗಳೂರು: ಪ್ರಸಕ್ತ ಸಾಲಿನ ಹಿಂಗಾರು ಹಂಗಾಮಿಗೆ ಬೇಡಿಕೆಗೆ ಅನುಗುಣವಾಗಿ ರಸಗೊಬ್ಬರ ದಾಸ್ತಾನಿದ್ದು, ರೈತರಿಗೆ ಅನಾನುಕೂಲವಾಗದಂತೆ ರಸಗೊಬ್ಬರ ವಿತರಣೆ ಮಾಡುವಂತೆ ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ತಿಳಿಸಿದ್ದಾರೆ. ವಿಕಾಸಸೌಧದ ಸಮಿತಿ ಕೊಠಡಿಯಲ್ಲಿ ಬುಧವಾರ ಕೃಷಿ ಇಲಾಖೆ, ಜಲಾನಯನ ಅಭಿವೃದ್ಧಿ ಇಲಾಖೆ ಹಾಗು 5 ಕೃಷಿ ವಿಶ್ವವಿದ್ಯಾನಿಲಯಗಳ ಕುಲಪತಿಗಳೊಂದಿಗೆ ಪ್ರಗತಿ ಪರಿಶೀಲನೆ ನಡೆಸಿದ ಸಚಿವರು, ಸರ್ಕಾರದ ಆಶಯವನ್ನು ಅರಿತು ರೈತಾಪಿ ವರ್ಗದ ಶ್ರೇಯೋಭಿವೃದ್ಧಿಗೆ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಶ್ರಮಿಸಬೇಕು ಎಂದು ಕರೆ ನೀಡಿದರು. ಕರ್ನಾಟಕದಲ್ಲಿ ಕೃಷಿ ಬಹುಜನರ ಪ್ರಧಾನ ಕಾಯಕ, ಈ ಕ್ಷೇತ್ರದಲ್ಲಿ ತೊಡಗಿದ ರೈತರು ಹಾಗೂ ಕೃಷಿ ಕಾರ್ಮಿಕರ ಹಿತ ಕಾಯುವುದು ಸರ್ಕಾರ ಹಾಗೂ ಇಲಾಖೆಯ ಜವಾಬ್ದಾರಿ ಅವರನ್ನು ಅಲೆದಾಡಿಸದೆ ಮನೆ ಬಾಗಿಲಿಗೆ ಯೋಜನೆಗಳ ಫಲ ತಲುಪಿಸಿ ಎಂದು ಸಚಿವರು ನಿರ್ದೇಶನ ನೀಡಿದರು. ರಾಜ್ಯದಲ್ಲಿ ಕೃಷಿ ಬಹುತೇಕ ಮಳೆಯಾಶ್ರಿತವಾಗಿದೆ. ಹಾಗಾಗಿ ಬೆಳೆ ವಿಮೆ ಬಗ್ಗೆ ಹೆಚ್ಚಿನ ಅರಿವು ಮೂಡಿಸಿ ಎಲ್ಲಾ…
ಇಂದಿರಾ ಗಾಂಧಿ ವೃತ್ತಿ ಅಭಿವೃದ್ಧಿ ಕೇಂದ್ರ ಟೆಂಡರ್; ಅಕ್ರಮ ನಡೆದಿಲ್ಲ ಎಂದ ಸಚಿವ
ಬೆಂಗಳೂರು: ಇಂದಿರಾ ಗಾಂಧಿ ವೃತ್ತಿ ಅಭಿವೃದ್ಧಿ ಕೇಂದ್ರದಲ್ಲಿ ಹಗರಣ ನಡೆದಿದೆ ಎಂದು ಸುದ್ದಿ ಮಾಧ್ಯಮಗಳು ವರದಿ ಮಾಡಿದ್ದು ಅರ್ಹತೆ ಇಲ್ಲದ ಸಂಸ್ಥೆಗಳಿಗೆ ಟೆಂಡರ್ ನೀಡಲಾಗಿದೆ ಎಂಬ ಆರೋಪವನ್ನು ಸಚಿವ ಹೆಚ್.ಸಿ.ಮಹದೇವಪ್ಪ ಅಲ್ಲಗಳೆದಿದ್ದಾರೆ. ಆರೋಪ ಕುರಿತಂತೆ ಪ್ರತಿಕ್ರಿಯಿಸಿರುವ ಅವರು, ಇದು ವಾಸ್ತವಕ್ಕೆ ಸಂಪೂರ್ಣವಾಗಿ ವಿರುದ್ಧವಾಗಿರುವಂತಹ ಸಂಗತಿಯಾಗಿದ್ದು, ಮಾಧ್ಯಮಗಳ ಮೂಲಕ ತಪ್ಪಾದ ವಿವರಗಳನ್ನು ಸಾರ್ವಜನಿಕರಿಗೆ ನೀಡುವ ಪ್ರಯತ್ನ ಮಾಡಲಾಗಿದೆ ಎಂದಿದ್ದಾರೆ. ಆರೋಪ ಮಾಡುತ್ತಿರುವ ಜನರಿಗೆ ಸರ್ಕಾರದ ಯೋಜನೆಗಳಿಗೆ ನಿಗದಿ ಪಡಿಸಲಾದ ಅನುದಾನದ ಕುರಿತಾಗಿ ಮಾಹಿತಿಯೇ ಇಲ್ಲ ಎಂಬುದು ಸ್ಪಷ್ಟವಾಗಿದೆ. ಮುಖ್ಯವಾಗಿ ಇಲ್ಲಿ ನಿಯಮಾವಳಿಗಳ ಪ್ರಕಾರವೇ ಅರ್ಹ ಸಂಸ್ಥೆಗಳಿಗೆ ಟೆಂಡರ್ ನೀಡಲಾಗಿದ್ದು, ಟೆಂಡರ್ ನ ನಿಯಮಾವಳಿಗಳನ್ನು ಸರಿಯಾಗಿ ತಿಳಿಯದೇ ಯಾರೋ ಪಟ್ಟಭದ್ರ ಹಿತಾಸಕ್ತಿಗಳು ಮಾಡಿರುವ ಆಧಾರ ರಹಿತವಾದ ಆರೋಪಗಳನ್ನು ಆಧರಿಸಿ ಸುದ್ಧಿಯನ್ನು ಪ್ರಕಟಿಸಲಾಗಿದ್ದು, ದಯಮಾಡಿ ಮಾಧ್ಯಮಗಳು ಸರಿಯಾದ ಅಂಶಗಳನ್ನು ಪರಿಶೀಲನೆ ಮಾಡಿ ಸುದ್ದಿಯನ್ನು ಪ್ರಕಟಿಸುವ ಜವಾಬ್ದಾರಿ ತೋರಬೇಕೆಂದು ಅವರು ವಿನಂತಿಸಿದ್ದಾರೆ. ಇನ್ನು…
ಭ್ರಷ್ಟಾಚಾರ ಸ್ಪೀಕರ್ ಕಚೇರಿಯವರೆಗೂ ಹರಡಿದೆ: ಬಿ.ವೈ.ವಿಜಯೇಂದ್ರ
ಬೆಂಗಳೂರು: ಕಾಂಗ್ರೆಸ್ ಸರ್ಕಾರವು ಕರ್ನಾಟಕವನ್ನು ಕಾಂಗ್ರೆಸ್ ಹೈಕಮಾಂಡ್‌ಗೆ “ಎಟಿಎಂ” ಆಗಿ ಪರಿವರ್ತಿಸಿದೆ, ಕಳೆದ ಎರಡೂವರೆ ವರ್ಷಗಳಲ್ಲಿ ಅಭಿವೃದ್ಧಿ ಶೂನ್ಯ ಮತ್ತು ಭ್ರಷ್ಟಾಚಾರ ಸ್ಪೀಕರ್ ಕಚೇರಿಯವರೆಗೂ ಹರಡಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆರೋಪಿಸಿದ್ದಾರೆ. The Congress Government has turned Karnataka into an “ATM" for the Congress high command with zero development in the last two and a half years and corruption spreading even to the Speaker’s office. The administration has collapsed due to the open power tussle between… pic.twitter.com/atnQvqxbq5 — BJP Karnataka (@BJP4Karnataka) October 28, 2025 ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ನಡುವಿನ ಮುಕ್ತ ಅಧಿಕಾರ ಜಗಳದಿಂದಾಗಿ ಆಡಳಿತವು ಕುಸಿದಿದೆ, ಆದರೆ ಜನರು ಬಳಲುತ್ತಿದ್ದಾರೆ. ರೈತರು…
RSS ನಿರ್ಬಂಧ ಯತ್ನಕ್ಕೆ ಹಿನ್ನಡೆ; ಹೈಕೋರ್ಟ್ ಆದೇಶದಿಂದ ಸ್ವಯಂಸೇವಕರು ಖುಷ್
ಬೆಂಗಳೂರು: RSS ಮೇಲೆ ನಿರ್ಬಂಧ ವಿಧಿಸುವ ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಹೈಕೋರ್ಟ್ ಆಘಾತ ನೀಡಿದೆ. ಸಾರ್ವಜನಿಕ ಸ್ಥಳಗಳಲ್ಲಿ ಮತ್ತು ಸರ್ಕಾರಿ ಜಾಗಗಳಲ್ಲಿ ಚಟುವಟಿಕೆಗಳನ್ನು ನಿರ್ಬಂಧಿಸಿ ಸರ್ಕಾರ ಹೊರಡಿಸಿದ್ದ ಆದೇಶ ಆದೇಶಕ್ಕೆ ಹೈಕೋರ್ಟ್ ತಡೆ ನೀಡಿದೆ.ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಪೀಠ ಮಂಗಳವಾರ ಮಧ್ಯಂತರ ತಡೆಯಾಜ್ಞೆ ನೀಡಿದೆ. ಸರ್ಕಾರದ ಆದೇಶ ಪ್ರಶ್ನಿಸಿ ಹೈಕೋರ್ಟ್ನ ಧಾರವಾಡ ಪೀಠಕ್ಕೆ ಸಲ್ಲಿಸಲಾಗಿದ್ದ ದಾವೆ ಕುರಿತಂತೆ ವಿಚಾರಣೆ ನಡೆಸಿದ ನ್ಯಾ.ಎಂ. ನಾಗಪ್ರಸನ್ನ ಅವರಿದ್ದ ಪೀಠ ರಾಜ್ಯ ಸರ್ಕಾರ, ಗೃಹ ಇಲಾಖೆ, ಹುಬ್ಭಳ್ಳಿ ಕಮಿಷನರ್ಗೆ ನೋಟಿಸ್ ನೀಡಿದೆ. ಅಕ್ಟೋಬರ್18 ರಂದು ರಾಜ್ಯ ಸರ್ಕಾರ ಹೊರಡಿಸಿದ್ದ ಆದೇಶಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗಿತ್ತು. ರಸ್ತೆ, ಪಾರ್ಕ್, ಮೈದಾನ, ಕೆರೆ ಇತ್ಯಾದಿಗಳ ಪ್ರವೇಶಕ್ಕೆ ನಿರ್ಬಂಧ ವಿಧಿಸಿ ಹೊರಡಿಸಲಾಗಿದ್ದ ಆದೇಶವೂ RSS ನ ಶತಾಬ್ದಿ ಪಥಸಂಚಲನಕ್ಕೂ ಅಡ್ಡಿಯಾಗಿತ್ತು. ಈ ಆದೇಶ ಮೂಲಕ ಸಂವಿಧಾನದ ಆರ್ಟಿಕಲ್ 19 (1)A, B, ನೀಡಿರುವ ಹಕ್ಕನ್ನು…
ಕೇಂದ್ರ ಉಕ್ಕಿನ ಸಚಿವರ ಕ್ಷೇತ್ರದಲ್ಲೇ ಕಾಂಗ್ರೆಸ್ ಇತಿಹಾಸ ಸೃಷ್ಟಿಸಿದೆ: ಚೆಲುವರಾಯಸ್ವಾಮಿ
ಬೆಂಗಳೂರು: ಕೇಂದ್ರದ ಉಕ್ಕಿನ ಸಚಿವರ ಕ್ಷೇತ್ರದಲ್ಲಿ ಇತಿಹಾಸದಲ್ಲೇ ಮೊದಲ ಬಾರಿಗೆ ಡಿ.ಸಿ ಸಿ ಬ್ಯಾಂಕ್ ಚುನಾವಣೆಯಲ್ಲಿ 8 ಜನ ಕಾಂಗ್ರೆಸ್ ಬೆಂಬಲ 8 ಪ್ರತಿನಿಧಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಎನ್ ಚೆಲುವರಾಯಸ್ವಾಮಿ ಅವರು ಹೇಳಿದ್ದಾರೆ. ಸರ್ ಎಂ ವಿಶ್ವೇಶ್ವರಯ್ಯ ಕ್ರೀಡಾಂಗಣದಲ್ಲಿ ಪತ್ರಕರ್ತರ ಜೊತೆ ಮಾತನಾಡಿದ ಅವರು ಜಿಲ್ಲೆಯಲ್ಲಿ ಜೆ ಡಿಎಸ್ ಪಕ್ಷದವರು ಚೇಸ್ಟೆ ಬಿಟ್ಟು ಸೋಲು-ಗೆಲುವನ್ನ ಸಮವಾಗಿ ತೆಗೆದುಕೊಳ್ಳಬೇಕು. ಇಂದು ಕಾಂಗ್ರೆಸ್ ಬೆಂಬಲಿತ ಮತ್ತೋಬ್ಬ ಪ್ರತಿನಿಧಿ ಆಯ್ಕೆಯಾಗುವ ಸಾಧ್ಯತೆ ಇದೆ, ಉಳಿದ 3 ಸ್ಥಾನಕ್ಕೆ ಚುನಾವಣೆ ನಡೆಯಲಿದೆ. ಶಾಸಕರು, ಪಕ್ಷದ ಮುಖಂಡರು ಜವಾಬ್ದಾರಿ ತೆಗೆದುಕೊಂಡು ಚುನಾವಣೆ ಮಾಡಿದ್ದಾರೆ ಎಂದು ಹೇಳಿದರು. ಸಹಕಾರ ಕ್ಷೇತ್ರದ ಪರಿಕಲ್ಪನೆ ಕಟ್ಟಿದ್ದು ಶಂಕರೇಗೌಡರು, ನಾನು ಸಹ ಸಹಕಾರ ಕ್ಷೇತ್ರದಿಂದ ಬಂದಿಲ್ಲ ಸ್ಥಳಿಯ ಪಂಚಾಯತ್ ನಿಂದ ಬಂದವನು, ಸಹಕಾರ ಕ್ಷೇತ್ರ ಸಾರ್ವಜನಿಕರಿಗೆ ಅತ್ತಿರವಾಗಿದೆ ಎಂದು ತಿಳಿಸಿದರು. ನಮ್ಮ ಗೆಲುವಿಗೆ ಕಾರಣರಾದ ಕಾಂಗ್ರೆಸ್ ಕಾರ್ಯಕರ್ತರಿಗೆ ಶಕ್ತಿ…
ಗ್ರಾಮಗಳ ಬೆಳವಣಿಗೆಗೆ ಸರ್ಕಾರದಿಂದ ಮತ್ತೊಂದು ಮಹತ್ವದ ತೀರ್ಮಾನ
ಬೆಂಗಳೂರು: ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಸ್ಥಳೀಯ ಯೋಜನಾ ಪ್ರದೇಶವನ್ನು ಹೊರತುಪಡಿಸಿದ ಪ್ರದೇಶಗಳಲ್ಲಿನ ಭೂಪರಿವರ್ತಿತ ಜಮೀನುಗಳಲ್ಲಿ ಬಡಾವಣೆಗಳನ್ನು ನಿರ್ಮಿಸಲು ನಿಯಮಗಳ ಸುತ್ತೋಲೆಯನ್ನು ಸರ್ಕಾರ ಹೊರಡಿಸಿದೆ. ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ (ತಿದ್ದುಪಡಿ) ಅಧಿನಿಯಮ, 2025 ರ ಪ್ರಕರಣ 199(ಬಿ) ರಲ್ಲಿ ಕಟ್ಟಡ ನಿರ್ಮಾಣ ಉದ್ದೇಶಗಳಿಗಾಗಿ ಇರುವ ಕಟ್ಟಡ ನಿವೇಶನಗಳಿಗಾಗಿ ಹೊಸ ಖಾತಾ ಅಥವಾ ಪಿ.ಐ.ಡಿಯನ್ನು ನೀಡಲು, ಗ್ರಾಮ ಪಂಚಾಯತಿ ಅಥವಾ ಸರ್ಕಾರವು ಅಧಿಸೂಚನೆಯ ಮೂಲಕ ಗೊತ್ತುಪಡಿಸಲಾದ ಪ್ರಾಧಿಕಾರಗಳು, ಅಧಿಕಾರ ವ್ಯಾಪ್ತಿಯ ಯೋಜನಾ ಪ್ರಾಧಿಕಾರದ ಮೂಲಕ ಬಡಾವಣೆ ನಕ್ಷೆಗಾಗಿ ಪೂರ್ವಾನುಮೋದನೆಯನ್ನು ಪಡೆದುಕೊಳ್ಳಲು ಅಭಿವೃದ್ಧಿದಾರರು ನಮೂನೆ-1ರಲ್ಲಿ ಅರ್ಜಿಯನ್ನು ಅಗತ್ಯ ದಾಖಲೆಗಳೊಂದಿಗೆ ಗ್ರಾಮ ಪಂಚಾಯತಿಗೆ ಸಲ್ಲಿಸಬೇಕು. ವಿನ್ಯಾಸ ನಕ್ಷೆಯ ಪ್ರಕಾರ ಬಡಾವಣೆಯ ಮಾಲೀಕರು ಸಂಬಂಧಿಸಿದ ಗ್ರಾಮ ಪಂಚಾಯತಿಗೆ ವಿನ್ಯಾಸ ನಕ್ಷೆಯ ಪ್ರಕಾರ ರಸ್ತೆಗಳ ಅಗಲೀಕರಣಕ್ಕೆ ಮೀಸಲಿರಿಸಿದ ರಸ್ತೆಗಳು ಸೇರಿದಂತೆ ರಸ್ತೆಗಳು, ಪಾರ್ಕ್ಗಳು, ವಾಹನ ನಿಲ್ದಾಣಗಳು, ನಾಗರೀಕ ಸೌಲಭ್ಯದ ಪ್ರದೇಶಗಳು, ಸಾರ್ವಜನಿಕ…
ಹೊಸ ಸಿಜೆಐ: ನ್ಯಾಯಮೂರ್ತಿ ಸೂರ್ಯಕಾಂತ್ ಅವರೇ ಗವಾಯಿ ಅವರ ಉತ್ತರಾಧಿಕಾರಿ
ನವದೆಹಲಿ: ಭಾರತದ ಮುಖ್ಯ ನ್ಯಾಯಮೂರ್ತಿ ಭೂಷಣ್ ರಾಮಕೃಷ್ಣ ಗವಾಯಿ ಅವರು ನವೆಂಬರ್‌ನಲ್ಲಿ ನಿವೃತ್ತಿ ಹೊಂದುತ್ತಿದ್ದು, ತಮ್ಮ ಉತ್ತರಾಧಿಕಾರಿಯಾಗಿ ನ್ಯಾಯಮೂರ್ತಿ ಸೂರ್ಯಕಾಂತ್ ಅವರನ್ನು ನಾಮನಿರ್ದೇಶನ ಮಾಡಿದ್ದಾರೆ. ಸಿಜೆಐ ಗವಾಯಿ ಅವರು ನವೆಂಬರ್ 23 ರಂದು ನಿವೃತ್ತಿಯಾಗಲಿದ್ದು, ನ್ಯಾಯಮೂರ್ತಿ ಸೂರ್ಯಕಾಂತ್ ಹಿರಿತನದ ಆಧಾರದ ಮೇಲೆ ಭಾರತದ 53ನೇ ಮುಖ್ಯ ನ್ಯಾಯಮೂರ್ತಿ ಆಗಿ ಅಧಿಕಾರ ವಹಿಸಿಕೊಳ್ಳಲಿದ್ದಾರೆ. ಸಿಜೆಐ ಗವಾಯಿ ಅವರು ನ್ಯಾಯಮೂರ್ತಿ ಕಾಂತ್ ಅವರ ಹೆಸರನ್ನು ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಿದ್ದಾರೆ. ಸರ್ಕಾರದಿಂದ ಶೀಘ್ರದಲ್ಲೇ ಅಧಿಕೃತ ಅಧಿಸೂಚನೆ ಹೊರಬರುವ ನಿರೀಕ್ಷೆಯಿದೆ. ನ್ಯಾಯಮೂರ್ತಿ ಕಾಂತ್ ಅವರು ಸುಮಾರು 14 ತಿಂಗಳುಗಳ ಕಾಲ ಈ ಹುದ್ದೆಯಲ್ಲಿ ಸೇವೆ ಸಲ್ಲಿಸಲಿದ್ದು, ಫೆಬ್ರವರಿ 9, 2027 ರಂದು ನಿವೃತ್ತರಾಗಲಿದ್ದಾರೆ. ಸಂಪ್ರದಾಯದಂತೆ, ಸಿಜೆಐ ಗವಾಯಿ ಅವರು ಶೀಘ್ರದಲ್ಲೇ ನ್ಯಾಯಮೂರ್ತಿ ಕಾಂತ್ ಅವರಿಗೆ ಶಿಫಾರಸು ಪತ್ರದ ಪ್ರತಿಯನ್ನು ಹಸ್ತಾಂತರಿಸಲಿದ್ದಾರೆ. ಕೇಂದ್ರ ಸರ್ಕಾರವು ಗವಾಯಿ ಅವರನ್ನೇ ತಮ್ಮ ಉತ್ತರಾಧಿಕಾರಿಯ ಹೆಸರನ್ನು ಸೂಚಿಸಲು…
ಭಾರತದ ಏಕತೆಯ ಹಿಂದೆ ನಿಂತಿರುವ ಉಕ್ಕಿನ ಇಚ್ಛಾಶಕ್ತಿಯ ಹೆಸರೇ ಸರ್ದಾರ್ ವಲ್ಲಭಭಾಯಿ ಪಟೇಲ್
ನವದೆಹಲಿ: ಭಾರತದ ಏಕತೆಯ ಹಿಂದೆ ನಿಂತಿರುವ ಉಕ್ಕಿನ ಇಚ್ಛಾಶಕ್ತಿಯ ಹೆಸರೇ ಸರ್ದಾರ್ ವಲ್ಲಭಭಾಯಿ ಪಟೇಲ್. 1947ರಲ್ಲಿ ಭಾರತ ಸ್ವಾತಂತ್ರ್ಯ ಹೊಂದಿದಾಗ “ಒಂದು ಭಾರತ” ಎಂಬ ಕಲ್ಪನೆ ಕೇವಲ ಕನಸಷ್ಟೇ ಆಗಿತ್ತು. ಬ್ರಿಟಿಷರ ಆಡಳಿತ ಪ್ರದೇಶಗಳ ಜೊತೆಗೆ 560 ಕ್ಕೂ ಹೆಚ್ಚು ರಾಜಪ್ರಭುತ್ವದ ರಾಜ್ಯಗಳು ಪ್ರತ್ಯೇಕ ಅಸ್ತಿತ್ವವನ್ನು ಹೊಂದಿದ್ದವು. ಈ ವಿಚ್ಛಿನ್ನ ಪರಿಸ್ಥಿತಿಯಲ್ಲಿ ಹೊಸ ಭಾರತದ ಗೃಹ ಸಚಿವ ಹಾಗೂ ಉಪಪ್ರಧಾನಿಯಾಗಿ ಪಟೇಲ್ ಅವರು ರಾಷ್ಟ್ರ ಏಕೀಕರಣದ ಶಿಲ್ಪಿಯಾಗಿ ಹೊರಹೊಮ್ಮಿದರು. ಅವರ ದೃಢ ಸಂಕಲ್ಪ, ರಾಜತಾಂತ್ರಿಕತೆ ಹಾಗೂ ದೂರದೃಷ್ಟಿಯು ನೂರಾರು ಸಣ್ಣ ರಾಜ್ಯಗಳನ್ನು ಒಂದೇ ರಾಷ್ಟ್ರದ ಮಡಿಲಿಗೆ ತಂದಿತು. “ಪಟೇಲ್ ಅವರ ಕಾರ್ಯದ ಹಿನ್ನೆಲೆ ಏಕತೆಯ ಸ್ಫೂರ್ತಿ, ಆಧುನಿಕ ಭಾರತದ ಅಡಿಪಾಯವಾಗಿ ಉಳಿದಿದೆ,” ಎಂದು ಇತಿಹಾಸಕಾರ ರಾಜಮೋಹನ್ ಗಾಂಧಿ ಉಲ್ಲೇಖಿಸಿದ್ದಾರೆ. “ಆದರ್ಶವಾದಕ್ಕಿಂತ ಪಟೇಲ್ ಅವರ ವಾಸ್ತವಿಕತೆ ದೇಶವನ್ನು ಒಟ್ಟಿಗೆ ಹಿಡಿದಿಟ್ಟುಕೊಂಡಿತು,” ಎಂದು ಅವರು ಹೇಳಿದ್ದಾರೆ. One vision. One…
