ಬೆಂಗಳೂರು: ರಾಕಿಂಗ್ ಸ್ಟಾರ್ ಯಶ್ ಅಭಿನಯದ ಬಹುನಿರೀಕ್ಷಿತ ‘ಟಾಕ್ಸಿಕ್’ ಸಿನಿಮಾ ಬಿಡುಗಡೆಗೆ ಕೊನೆಗೂ ದಿನಾಂಕ ನಿಗದಿಯಾಗಿದೆ. ಎರಡು ಬಾರಿ ಮುಂದೂಡಿಕೆಯಾಗಿದ್ದ ಈ ಚಿತ್ರ ಇದೇ ವರ್ಷದ ಆಗಸ್ಟ್ 26ರಂದು ತೆರೆಗೆ ಬರಲಿದೆ ಎಂದು ಚಿತ್ರತಂಡ ಅಧಿಕೃತವಾಗಿ ಘೋಷಿಸಿದೆ. ‘ಕೆಜಿಎಫ್: ಚಾಪ್ಟರ್ 2’ ಬಳಿಕ ಯಶ್ ಒಪ್ಪಿಕೊಂಡಿರುವ ಮೊದಲ ಸಿನಿಮಾ ಎಂಬ ಕಾರಣಕ್ಕೆ ‘ಟಾಕ್ಸಿಕ್’ ಮೇಲೆ ಸಿನಿಪ್ರಿಯರ ನಿರೀಕ್ಷೆ ಹೆಚ್ಚಾಗಿದೆ. ಭಾರಿ ಬಜೆಟ್‌ನಲ್ಲಿ ನಿರ್ಮಾಣವಾಗುತ್ತಿರುವ ಈ ಚಿತ್ರವನ್ನು ಖ್ಯಾತ ನಿರ್ದೇಶಕಿ ಗೀತು ಮೋಹನ್‌ದಾಸ್ ನಿರ್ದೇಶಿಸುತ್ತಿದ್ದು, ‘ಕೆವಿಎನ್ ಪ್ರೊಡಕ್ಷನ್ಸ್’ ನಿರ್ಮಾಣದ ಹೊಣೆ ಹೊತ್ತಿದೆ. ಮೊದಲಿಗೆ ನಿಗದಿಯಾಗಿದ್ದ ಬಿಡುಗಡೆ ದಿನಾಂಕವನ್ನು ಮಧ್ಯಪ್ರಾಚ್ಯ ರಾಷ್ಟ್ರಗಳ ಯುದ್ಧ ಪರಿಸ್ಥಿತಿಯ ಹಿನ್ನೆಲೆಯಲ್ಲಿ ಮುಂದೂಡಲಾಗಿತ್ತು. ಬಳಿಕ ಚಿತ್ರದ ಜಾಗತಿಕ ಮಾರುಕಟ್ಟೆ ವಿಸ್ತರಣೆ ಮತ್ತು ಪ್ರಚಾರ ಕಾರ್ಯತಂತ್ರದ ಕಾರಣದಿಂದ ಮತ್ತೊಮ್ಮೆ ಬಿಡುಗಡೆ ದಿನಾಂಕ ಬದಲಾವಣೆ ಮಾಡಲಾಗಿತ್ತು. ಚಿತ್ರದಲ್ಲಿ ಯಶ್‌ಗೆ ನಾಯಕಿಯಾಗಿ ರುಕ್ಮಿಣಿ ವಸಂತ್ ಹಾಗೂ ಕಿಯಾರಾ ಅಡ್ವಾಣಿ ನಟಿಸಿದ್ದು,…
Category: ಪ್ರಮುಖ ಸುದ್ದಿ
ಮೇಕೆದಾಟು ಯೋಜನೆಗೆ ತಮಿಳುನಾಡು ಸಹಕಾರ ನೀಡಲಿ: ಹೆಚ್.ಡಿ. ಕುಮಾರಸ್ವಾಮಿ
ಮಂಡ್ಯ: ಮೇಕೆದಾಟು ಕುಡಿಯುವ ನೀರಿನ ಯೋಜನೆಗೆ ತಮಿಳುನಾಡು ಸರ್ಕಾರ ನಿರಂತರವಾಗಿ ಆಕ್ಷೇಪ ವ್ಯಕ್ತಪಡಿಸುತ್ತಿರುವುದಕ್ಕೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಮಂಡ್ಯದಲ್ಲಿ ಮಾತನಾಡಿದ ಅವರು, ಬೆಂಗಳೂರು ಹಾಗೂ ಸುತ್ತಮುತ್ತಲಿನ ಪ್ರದೇಶಗಳ ಕುಡಿಯುವ ನೀರಿನ ಅಗತ್ಯವನ್ನು ಪೂರೈಸುವ ಉದ್ದೇಶದಿಂದ ಮೇಕೆದಾಟು ಯೋಜನೆ ರೂಪಿಸಲಾಗಿದೆ. ಆದ್ದರಿಂದ ತಮಿಳುನಾಡು ಈ ಯೋಜನೆಗೆ ಸಹಮತ ವ್ಯಕ್ತಪಡಿಸಬೇಕು ಎಂದು ಆಗ್ರಹಿಸಿದರು. ರಾಜಕೀಯ ಅಥವಾ ಪ್ರತಿಷ್ಠೆಯ ಕಾರಣಕ್ಕಾಗಿ ತಮಿಳುನಾಡಿನ ರಾಜಕೀಯ ಪಕ್ಷಗಳು ಯೋಜನೆಗೆ ಅಡ್ಡಿಪಡಿಸುವುದು ಸರಿಯಲ್ಲ. ಕಾವೇರಿ ನೀರಿನ ಹಂಚಿಕೆ ವಿಚಾರ ಸುಮಾರು 50 ವರ್ಷಗಳ ಹಳೆಯ ಸಮಸ್ಯೆಯಾಗಿದ್ದು, ಇದಕ್ಕೆ ಶಾಶ್ವತ ಪರಿಹಾರ ಕಂಡುಕೊಳ್ಳುವ ಅಗತ್ಯವಿದೆ ಎಂದು ಹೇಳಿದರು. ಉತ್ತಮ ಮಳೆಯಾದ ಸಂದರ್ಭಗಳಲ್ಲಿ ಕರ್ನಾಟಕವು ನ್ಯಾಯಮಂಡಳಿ ನಿಗದಿಪಡಿಸಿದ ಪ್ರಮಾಣಕ್ಕಿಂತಲೂ ಎರಡು ಪಟ್ಟು ಹೆಚ್ಚು ನೀರನ್ನು ತಮಿಳುನಾಡಿಗೆ ಹರಿಸಿದೆ. ಆದರೆ ರಾಜ್ಯದ ಜಲಾಶಯಗಳು ಪೂರ್ಣ ಪ್ರಮಾಣದಲ್ಲಿ ಭರ್ತಿಯಾಗದ ಸಂದರ್ಭದಲ್ಲಿಯೂ ಹೆಚ್ಚುವರಿ ನೀರು ಬಿಡುಗಡೆ ಮಾಡುವಂತೆ ಒತ್ತಾಯಿಸುವುದು…
YOGA DAY: ‘ಯೋಗ ಮಾನವ ಏಕತೆಯನ್ನು ಬಲಪಡಿಸುವ ಶಕ್ತಿ’ ಎಂದ ಮೋದಿ
ಕೋಲ್ಕತ್ತಾ: ಯೋಗವು ರಾಷ್ಟ್ರ, ಭಾಷೆ ಹಾಗೂ ಸಂಸ್ಕೃತಿಗಳ ಗಡಿಗಳನ್ನು ಮೀರಿ ಜನರನ್ನು ಒಗ್ಗೂಡಿಸುವ ಶಕ್ತಿಯಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. 12ನೇ ಅಂತರರಾಷ್ಟ್ರೀಯ ಯೋಗ ದಿನದ ರಾಷ್ಟ್ರೀಯ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಈ ಅಭಿಪ್ರಾಯ ವ್ಯಕ್ತಪಡಿಸಿದರು. ಕೋಲ್ಕತ್ತಾದ ರೆಡ್ ರೋಡ್‌ನಲ್ಲಿ ನಡೆದ ಯೋಗ ದಿನಾಚರಣೆಗೆ ಸಾವಿರಾರು ಮಂದಿ ಸಾಕ್ಷಿಯಾದರು. ಈ ವೇಳೆ ಮಾತನಾಡಿದ ಪ್ರಧಾನಿ ಮೋದಿ, ಯೋಗವು ಕೇವಲ ವ್ಯಾಯಾಮವಲ್ಲ, ಅದು ಆರೋಗ್ಯ, ಸಾಮರಸ್ಯ ಮತ್ತು ಮಾನವ ಏಕತೆಯನ್ನು ಬೆಸೆಯುವ ಜೀವನ ಪದ್ಧತಿಯಾಗಿ ಜಾಗತಿಕ ಮಟ್ಟದಲ್ಲಿ ಬೆಳೆಯುತ್ತಿದೆ ಎಂದು ಹೇಳಿದರು. ಈ ವರ್ಷದ ಅಂತರರಾಷ್ಟ್ರೀಯ ಯೋಗ ದಿನದ ಧ್ಯೇಯವಾಕ್ಯ ‘ಆರೋಗ್ಯಕರ ವಯಸ್ಸಿಗೆ ಯೋಗ’ ಎಂಬುದಾಗಿದ್ದು, ಜೀವನದ ಪ್ರತಿಯೊಂದು ಹಂತದಲ್ಲೂ ಆರೋಗ್ಯಕರ ಮತ್ತು ಚೈತನ್ಯಭರಿತ ಬದುಕಿಗೆ ಯೋಗ ಸಹಕಾರಿಯಾಗಿದೆ ಎಂದು ತಿಳಿಸಿದರು. ಯೋಗಾಭ್ಯಾಸದಿಂದ ದೇಹದ ನಮ್ಯತೆ ಹೆಚ್ಚುವುದರ ಜೊತೆಗೆ ಒತ್ತಡ ಕಡಿಮೆಯಾಗುತ್ತದೆ ಹಾಗೂ ಜೀವನಶೈಲಿ ಸಂಬಂಧಿತ ಕಾಯಿಲೆಗಳನ್ನು…
ಸಾರ್ವಜನಿಕ ಆರೋಗ್ಯ ಹಿತದೃಷ್ಟಿಯಿಂದ 16 ಔಷಧ ಸಂಯೋಜನೆಗಳಿಗೆ ಕೇಂದ್ರ ಸರ್ಕಾರ ನಿಷೇಧ
ನವದೆಹಲಿ: ಸಾರ್ವಜನಿಕ ಆರೋಗ್ಯದ ಸುರಕ್ಷತೆ ಹಾಗೂ ಔಷಧಗಳ ತರ್ಕಬದ್ಧ ಬಳಕೆಗೆ ಒತ್ತು ನೀಡಿರುವ ಕೇಂದ್ರ ಸರ್ಕಾರ, 16 ಸ್ಥಿರ-ಡೋಸ್ ಔಷಧ ಸಂಯೋಜನೆಗಳ (ಎಫ್‌ಡಿಸಿ) ತಯಾರಿಕೆ, ಮಾರಾಟ ಮತ್ತು ವಿತರಣೆಯನ್ನು ತಕ್ಷಣದಿಂದ ಜಾರಿಗೆ ಬರುವಂತೆ ನಿಷೇಧಿಸಿದೆ. ವೈಜ್ಞಾನಿಕ ಪರಿಶೀಲನೆಯಲ್ಲಿ ಈ ಔಷಧ ಸಂಯೋಜನೆಗಳಿಗೆ ಚಿಕಿತ್ಸಾ ದೃಷ್ಟಿಯಿಂದ ಸಮರ್ಪಕ ಸಮರ್ಥನೆ ಇಲ್ಲದೇ ಇರುವುದರ ಜೊತೆಗೆ ಸಾರ್ವಜನಿಕ ಆರೋಗ್ಯಕ್ಕೆ ಅಪಾಯ ಉಂಟುಮಾಡುವ ಸಾಧ್ಯತೆಗಳಿರುವುದು ಕಂಡುಬಂದ ಹಿನ್ನೆಲೆಯಲ್ಲಿ ಕೇಂದ್ರ ಆರೋಗ್ಯ ಸಚಿವಾಲಯ ಈ ನಿರ್ಧಾರ ಕೈಗೊಂಡಿದೆ. ಔಷಧಗಳು ಮತ್ತು ಸೌಂದರ್ಯವರ್ಧಕಗಳ ಕಾಯ್ದೆ-1940ರ ಸೆಕ್ಷನ್ 26ಎ ಅಡಿಯಲ್ಲಿ ಅಧಿಸೂಚನೆ ಹೊರಡಿಸಿರುವ ಸಚಿವಾಲಯ, ದೇಶಾದ್ಯಂತ ನಿಷೇಧ ಜಾರಿಗೆ ತಂದಿದೆ. ಸ್ಥಿರ-ಡೋಸ್ ಔಷಧ ಸಂಯೋಜನೆಗಳ ಸಮಗ್ರ ಪರಿಶೀಲನೆ ನಡೆಸುವಂತೆ ಸುಪ್ರೀಂ ಕೋರ್ಟ್ ನೀಡಿದ್ದ ನಿರ್ದೇಶನದ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ನ್ಯಾಯಾಲಯದ ಸೂಚನೆಯಂತೆ ಔಷಧಗಳ ತಾಂತ್ರಿಕ ಸಲಹಾ ಮಂಡಳಿ (ಡಿಟಿಎಬಿ) ತಜ್ಞರ ಸಮಿತಿಯನ್ನು ರಚಿಸಿ ವಿವಿಧ ಎಫ್‌ಡಿಸಿಗಳ…
12 ವರ್ಷಗಳ ಪಿಂಚಣಿ ಸುಧಾರಣೆ: ಡಿಜಿಟಲ್ ವ್ಯವಸ್ಥೆಯಿಂದ ನಿವೃತ್ತರಿಗೆ ಹೆಚ್ಚು ಅನುಕೂಲ
ನವದೆಹಲಿ: ಕಳೆದ 12 ವರ್ಷಗಳಲ್ಲಿ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಪಿಂಚಣಿ ಸುಧಾರಣೆಗಳಿಂದ ನಿವೃತ್ತ ಸರ್ಕಾರಿ ನೌಕರರ ಜೀವನ ಮತ್ತಷ್ಟು ಸುಲಭವಾಗಿದ್ದು, ಪಿಂಚಣಿ ಪ್ರಕ್ರಿಯೆಯಲ್ಲಿ ವಿಳಂಬ ಮತ್ತು ದಾಖಲೆಗಳ ದೋಷಗಳು ಗಣನೀಯವಾಗಿ ಕಡಿಮೆಯಾಗಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಸಿಬ್ಬಂದಿ, ಸಾರ್ವಜನಿಕ ಕುಂದುಕೊರತೆಗಳು ಮತ್ತು ಪಿಂಚಣಿ ಸಚಿವಾಲಯದ ಅಧೀನದಲ್ಲಿರುವ ಪಿಂಚಣಿ ಮತ್ತು ಪಿಂಚಣಿದಾರರ ಕಲ್ಯಾಣ ಇಲಾಖೆ (DoPPW) ಪಿಂಚಣಿ ವ್ಯವಸ್ಥೆಯನ್ನು ಸಂಪೂರ್ಣ ಡಿಜಿಟಲೀಕರಣಗೊಳಿಸುವ ಮೂಲಕ ಹಲವು ಮಹತ್ವದ ಸುಧಾರಣೆಗಳನ್ನು ಜಾರಿಗೊಳಿಸಿದೆ. ಈ ಸುಧಾರಣೆಗಳ ಕೇಂದ್ರಬಿಂದುವಾಗಿರುವ ‘ಭವಿಷ್ಯ’ (Bhavishya) ಆನ್‌ಲೈನ್ ವೇದಿಕೆ, ಪಿಂಚಣಿ ಮಂಜೂರಾತಿ ಮತ್ತು ಪಾವತಿ ಪ್ರಕ್ರಿಯೆಯನ್ನು ಸಂಪೂರ್ಣ ಡಿಜಿಟಲ್ ಮಾದರಿಯಲ್ಲಿ ನಿರ್ವಹಿಸುತ್ತಿದೆ. ಪಿಂಚಣಿ ಪಾವತಿ ಆದೇಶ (PPO) ವಿತರಣೆಯಲ್ಲಿ ಉಂಟಾಗುತ್ತಿದ್ದ ವಿಳಂಬ, ದಾಖಲೆಗಳ ದೋಷಗಳು ಹಾಗೂ ನಿವೃತ್ತರ ಆರ್ಥಿಕ ಸಂಕಷ್ಟಗಳನ್ನು ನಿವಾರಿಸುವ ಉದ್ದೇಶದಿಂದ ಈ ವ್ಯವಸ್ಥೆಯನ್ನು ಜಾರಿಗೆ ತರಲಾಗಿತ್ತು. 2017ರ ಜನವರಿ 1ರಿಂದ ಎಲ್ಲಾ ಕೇಂದ್ರ ನಾಗರಿಕ…
ರಕ್ಷಣಾ ಕ್ಷೇತ್ರದಲ್ಲಿ ತಾಂತ್ರಿಕ ಸನ್ನದ್ಧತೆ, ಸ್ವಾವಲಂಬನೆ ಅಗತ್ಯ: ರಾಜನಾಥ್ ಸಿಂಗ್
ಶಿಲ್ಲಾಂಗ್: ಹೆಚ್ಚುತ್ತಿರುವ ಅನಿಶ್ಚಿತ ಜಾಗತಿಕ ಪರಿಸ್ಥಿತಿಯಲ್ಲಿ ಉದಯೋನ್ಮುಖ ಭದ್ರತಾ ಸವಾಲುಗಳನ್ನು ಎದುರಿಸಲು ಸಶಸ್ತ್ರ ಪಡೆಗಳು ತಾಂತ್ರಿಕವಾಗಿ ಸದಾ ಸಿದ್ಧವಾಗಿರಬೇಕು ಎಂದು ರಕ್ಷಣಾ ಸಚಿವ Rajnath Singh ಹೇಳಿದರು. ತಾಂತ್ರಿಕ ಚುರುಕುತನ, ಕಾರ್ಯತಂತ್ರದ ದೂರದೃಷ್ಟಿ ಮತ್ತು ಸಾಂಸ್ಥಿಕ ನವೀನತೆ ಇಂದಿನ ಅಗತ್ಯವೆಂದು ಅವರು ಒತ್ತಿ ಹೇಳಿದರು. ಶಿಲ್ಲಾಂಗ್‌ನಲ್ಲಿರುವ Eastern Air Command ಪ್ರಧಾನ ಕಚೇರಿಯಲ್ಲಿ ಸೈನಿಕರನ್ನು ಉದ್ದೇಶಿಸಿ ಮಾತನಾಡಿದ ಅವರು, ಆಧುನಿಕ ಯುದ್ಧ ವೇಗವಾಗಿ ರೂಪಾಂತರಗೊಳ್ಳುತ್ತಿದೆ ಎಂದರು. ಹೈಬ್ರಿಡ್ ಬೆದರಿಕೆಗಳು, ಸೈಬರ್ ದಾಳಿಗಳು, ಮಾಹಿತಿ ಯುದ್ಧ, ಪೂರೈಕೆ-ಸರಪಳಿ ಭದ್ರತೆ ಮತ್ತು ಡ್ರೋನ್ ತಂತ್ರಜ್ಞಾನಗಳು ನಿರ್ಣಾಯಕ ಅಂಶಗಳಾಗಿವೆ; ಸಾಂಪ್ರದಾಯಿಕ ಸೈನಿಕ ಸನ್ನದ್ಧತೆ ಮಾತ್ರ ಸಾಕಾಗುವುದಿಲ್ಲ ಎಂದು ಸ್ಪಷ್ಟಪಡಿಸಿದರು. ರಕ್ಷಣಾ ಕ್ಷೇತ್ರದಲ್ಲಿ ಸ್ವಾವಲಂಬನೆಯ ಮಹತ್ವವನ್ನು ಎತ್ತಿ ತೋರಿಸಿದ ಸಚಿವರು, ಆತ್ಮನಿರ್ಭರ ಭಾರತವೇ ದೇಶದ ಭದ್ರತೆಯನ್ನು ನಮ್ಮದೇ ನಿಯಮಗಳಂತೆ ಕಾಪಾಡುವ ಶಕ್ತಿ ಎಂದು ಹೇಳಿದರು. ಆಪರೇಷನ್ ಸಿಂಧೂರ್ ಭಾರತದ ಬೆಳೆಯುತ್ತಿರುವ ರಕ್ಷಣಾ ಸಾಮರ್ಥ್ಯಕ್ಕೆ…
Bengaluru to resume towing drive against illegal parking from next week
Bengaluru: In a bid to tackle the growing menace of illegal parking on city roads, the Greater Bengaluru Authority will resume towing operations from next week, targeting vehicles parked in violation of traffic rules. The authority said three new towing vehicles have been inducted for deployment in the Jayanagar zone under the Bangalore South Municipal Corporation. The move is aimed at discouraging indiscriminate parking and easing congestion on major roads. Sharing the update on social media platform X, the authority said strict enforcement would begin in the Jayanagar zone before…
International Yoga Day: Modi says yoga strengthens human unity
Kolkata: Prime Minister Narendra Modi led the national celebrations of the 12th International Day of Yoga in Kolkata on Sunday, describing yoga as a powerful force that connects people across nations and cultures. Addressing thousands of participants at Red Road, Modi said yoga has evolved into a global movement for wellness and harmony. “When yoga becomes a way of life, it becomes the foundation of human unity,” he said, noting that people across India and the world were participating in the celebrations. The Prime Minister said this year’s theme, ‘Yoga…
ಅನಧಿಕೃತ ಪಾರ್ಕಿಂಗ್‌ಗೆ ಬ್ರೇಕ್: ಬೆಂಗಳೂರಿನಲ್ಲಿ ಮತ್ತೆ ಆರಂಭವಾಗಲಿದೆ ಟೋಯಿಂಗ್ ಕಾರ್ಯಾಚರಣೆ
ಬೆಂಗಳೂರು: ನಗರದ ಪ್ರಮುಖ ರಸ್ತೆಗಳಲ್ಲಿ ಹೆಚ್ಚುತ್ತಿರುವ ಅನಧಿಕೃತ ಪಾರ್ಕಿಂಗ್ ಸಮಸ್ಯೆಗೆ ಕಡಿವಾಣ ಹಾಕಲು ಗ್ರೇಟರ್ ಬೆಂಗಳೂರು ಪ್ರಾಧಿಕಾರ ಮುಂದಾಗಿದೆ. ಎಲ್ಲೆಂದರಲ್ಲಿ ವಾಹನ ನಿಲ್ಲಿಸುವ ವಾಹನ ಸವಾರರಿಗೆ ಬಿಸಿ ಮುಟ್ಟಿಸಲು ಮುಂದಿನ ವಾರದಿಂದ ಟೋಯಿಂಗ್ ಕಾರ್ಯಾಚರಣೆ ಮತ್ತೆ ಆರಂಭವಾಗಲಿದೆ. ಬೆಂಗಳೂರು ದಕ್ಷಿಣ ನಗರ ಪಾಲಿಕೆಯ ಜಯನಗರ ವಲಯ ವ್ಯಾಪ್ತಿಯಲ್ಲಿ ಅನಧಿಕೃತ ವಾಹನ ಪಾರ್ಕಿಂಗ್ ನಿಯಂತ್ರಣಕ್ಕಾಗಿ ಮೂರು ನೂತನ ಟೋಯಿಂಗ್ ವಾಹನಗಳನ್ನು ಕಾರ್ಯಾಚರಣೆಗೆ ಇಳಿಸಲಾಗುತ್ತಿದೆ ಎಂದು ಗ್ರೇಟರ್ ಬೆಂಗಳೂರು ಪ್ರಾಧಿಕಾರ ತಿಳಿಸಿದೆ. ಈ ಕುರಿತು ಸಾಮಾಜಿಕ ಜಾಲತಾಣ ‘ಎಕ್ಸ್’ನಲ್ಲಿ ಮಾಹಿತಿ ಹಂಚಿಕೊಂಡಿರುವ ಪ್ರಾಧಿಕಾರ, ಮುಂದಿನ ವಾರದಿಂದ ಜಯನಗರ ವಲಯದಲ್ಲಿ ಕಟ್ಟುನಿಟ್ಟಿನ ಟೋಯಿಂಗ್ ಕಾರ್ಯಾಚರಣೆ ಜಾರಿಯಾಗಲಿದೆ ಎಂದು ಹೇಳಿದೆ. ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಮುಖ್ಯ ಆಯುಕ್ತ ಮಹೇಶ್ವರ್ ರಾವ್ ಹಾಗೂ ಬೆಂಗಳೂರು ದಕ್ಷಿಣ ನಗರ ಪಾಲಿಕೆ ಆಯುಕ್ತ ಕೆ.ಎನ್. ರಮೇಶ್ ಅವರು ಶನಿವಾರ ಟೋಯಿಂಗ್ ವಾಹನಗಳನ್ನು ಪರಿಶೀಲನೆ ನಡೆಸಿದರು. ಸಂಚಾರ ದಟ್ಟಣೆ…
ಟೈರ್ ಸ್ಫೋಟ; ಬೈಕ್‌ಗೆ ಖಾಸಗಿ ಬಸ್ ಡಿಕ್ಕಿ: ಇಬ್ಬರು ಸ್ಥಳದಲ್ಲೇ ಸಾವು
ಕೋಲಾರ: ಟೈರ್ ಸ್ಫೋಟಗೊಂಡು ನಿಯಂತ್ರಣ ತಪ್ಪಿದ ಖಾಸಗಿ ಬಸ್ ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಯುವಕರು ಸ್ಥಳದಲ್ಲೇ ಮೃತಪಟ್ಟಿರುವ ದುರ್ಘಟನೆ ಕೋಲಾರ ಜಿಲ್ಲೆಯ ಕೆಜಿಎಫ್ ತಾಲೂಕಿನ ಗೆನ್ನೆರಹಳ್ಳಿ ಗೇಟ್ ಸಮೀಪ ನಡೆದಿದೆ. ಮೃತರನ್ನು ಕೆಜಿಎಫ್ ನಗರದ ನಿವಾಸಿಗಳಾದ ವಿನಯ್ ಹಾಗೂ ವಿನಾಯಕ್ ಎಂದು ಗುರುತಿಸಲಾಗಿದೆ. ಬೈಕ್‌ನಲ್ಲಿ ತೆರಳುತ್ತಿದ್ದ ವೇಳೆ ಖಾಸಗಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರೂ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಘಟನೆಯಲ್ಲಿ ಬಸ್‌ನಲ್ಲಿದ್ದ ಪ್ರಯಾಣಿಕರಿಗೆ ಯಾವುದೇ ಗಾಯಗಳಾಗಿಲ್ಲ. ಅಪಘಾತದ ಸುದ್ದಿ ತಿಳಿಯುತ್ತಿದ್ದಂತೆಯೇ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಕೆಜಿಎಫ್ ಎಸ್ಪಿ ಶಿವಾಂಶು ರಜಪೂತ್ ಅವರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಮಾಹಿತಿ ಪಡೆದುಕೊಂಡಿದ್ದಾರೆ. ಈ ಸಂಬಂಧ ಬೇತಮಂಗಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.
