ಮನಿಲಾ(ಫಿಲಿಪೈನ್ಸ್): ರಾಜ್ಯದಲ್ಲಿ ಭತ್ತದ ತಳಿಗಳ ಆಧುನಿಕ ಸಂಶೋಧನೆ ಮತ್ತು ಸಂವರ್ಧನೆಗೆ ನೆರವಾಗುವ ಕುರಿತು ಫಿಲಿಫೈನ್ಸ್ ನ ಅಂತರಾಷ್ಟ್ರೀಯ ಭತ್ತ ಸಂಶೋಧನಾ ಕೇಂದ್ರದೊಂದಿಗೆ ಮಂಡ್ಯ ಕೃಷಿ ವಿಶ್ವವಿದ್ಯಾಲಯ ಮಹತ್ವದ ಒಡಂಬಡಿಕೆ ಮಾಡಿಕೊಂಡಿದೆ. ಫಿಲಿಪೈನ್ಸ್ ನ ಮನಿಲಾದಲ್ಲಿರುವ ಅಂತರಾಷ್ಟ್ರೀಯ ಭತ್ತ ಸಂಶೋಧನಾ ಕೇಂದ್ರಕ್ಕೆ ಉನ್ನತ ಮಟ್ಟದ ನಿಯೋಗದೊಂದಿಗೆ ತೆರಳಿರುವ ಕೃಷಿ ಸಚಿವರಾದ ಎನ್ ಚಲುವರಾಯಸ್ವಾಮಿ ಅವರು ಒಪ್ಪಂದಕ್ಕೆ ಸಹಿ ಮಾಡಿದರು. ರಾಜ್ಯದಲ್ಲಿ ನೆರೆ ಹಾವಳಿ ,ಬರ ಪರಿಸ್ಥಿತಿ ಗಳು ಕರಾವಳಿ,ಮಲೆನಾಡು ಬಯಲು ಸೀಮೆ ವಿಭಿನ್ನ ಭೌಗೋಳಿಕ ಪರಿಸರಕ್ಕೆ ಹೊಂದಾಣಿಕೆಯಾಗುವ ವಿವಿಧ ಜೈವಿಕ, ಅಜೈವಿಕ ಒತ್ತಡಗಳಿಗೆ ನಿರೋಧಕತೆ ಜೊತೆಗೆ ಪೌಷ್ಠಿಕಾಂಶ ಉಳ್ಳ, ಅಧಿಕ ಇಳುವರಿ ತರುವ ಬೇಸಾಯ ಕ್ರಮಗಳು ಮತ್ತು ಭತ್ತದ ತಳಿಗಳ ಸಂಶೋಧನೆಗೆ ಈ ಒಡಂಬಡಿಕೆ ನೆರವಾಗಲಿದೆ. ಇದೇ ಸಂದರ್ಭದಲ್ಲಿ ಕರ್ನಾಟಕದಲ್ಲಿಯೂ ಅಂತರಾಷ್ಟ್ರೀಯ ಮಟ್ಟದ ಭತ್ತ ಸಂಶೋಧನಾ ಕೇಂದ್ರ ಸ್ಥಾಪನೆ ಬಗ್ಗೆಯೂ ಸಚಿವರು ಮಹತ್ವದ ಚರ್ಚೆ ನಡೆಸಿದರು. ಅಲ್ಲದೆ ಭತ್ತದ…
Category: ಪ್ರಮುಖ ಸುದ್ದಿ
ಬಿಜೆಪಿ ಆಡಳಿತವಿರುವ ರಾಜ್ಯಗಳಿಗಿಂತ ಕರ್ನಾಟಕದ ಸಾರಿಗೆ ವ್ಯವಸ್ಥೆಯೇ ಮೇಲು; ರಾಮಲಿಂಗಾ ರೆಡ್ಡಿ
ಬೆಂಗಳೂರು: ರಾಜ್ಯದ ಸಾರಿಗೆ ವ್ಯವಸ್ಥೆ ಬಗ್ಗೆ ಟೀಕಿಸಿರುವ, ಅದರಲ್ಲೂ ಬೆಂಗಳೂರಿನ ಸಾರಿಗೆ ವ್ಯವಸ್ಥೆ ಬಗ್ಗೆ ವ್ಯಂಗ್ಯವಾಡಿರುವ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಹಾಗೂ ಉದ್ಯಮಿ ಮೋಹನದಾಸ್ ಪೈ ಅವರನ್ನು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ತರಾಟೆಗೆ ತೆಗೆದುಕೊಂಡಿದ್ದಾರೆ. ಕರ್ನಾಟಕದ ಸಾರಿಗೆ ನಿಗಮಗಳ ಸುಧಾರಣೆ ಬಗ್ಗೆ ಅಂಕಿಅಂಶಗಳನ್ನು ಮುಂದಿಟ್ಟಿರುವ ರಸಚಿವ ರಾಮಲಿಂಗಾ ರೆಡ್ಡಿ, ಬಿಜೆಪಿ ಆಡಳಿತವಿರುವ ಉತ್ತರ ಪ್ರದೇಶ, ಮಹಾರಾಷ್ಟ್ರ, ಬಿಹಾರ, ಗುಜರಾತ್, ರಾಜಸ್ಥಾನ, ಒಡಿಶಾಗಳಲ್ಲಿ ಪ್ರತಿ ಸಾವಿರ ಜನರಿಗೆ ಲಭ್ಯವಿರುವ ಬಸ್ಸುಗಳ ಸಂಖ್ಯೆ ಕಡಿಮೆಯಿದೆ. ಕರ್ನಾಟಕ ಆ ಎಲ್ಲಾ ರಾಜ್ಯಗಳಿಗಿಂತ ಪ್ರಗತಿ ಸಾಧಿಸಿದೆ ಎಂದು ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಂಗಳವಾರ ಸುದ್ದಿಗೋಷ್ಠಿ ನಡೆಸಿದ ರಾಮಲಿಂಗಾ ರೆಡ್ಡಿ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಹಾಗೂ ಉದ್ಯಮಿ ಮೋಹನದಾಸ್ ಪೈ ಅವರ ಟೀಕೆಗಳಿಗೆ ತಮ್ಮದೇ ಶೈಲಿಯಲ್ಲಿ ಎದಿರೇಟು ನೀಡಿದರು. ಬೆಂಗಳೂರು ನಗರದ ಜೀವನಾಡಿಯಾಗಿರುವ ಬಿಎಂಟಿಸಿಯು ಪ್ರತಿದಿನ 48 ಲಕ್ಷ ಜನರಿಗೆ ಸಾರಿಗೆ…
ಬೆಂಗಳೂರಿನಲ್ಲಿ ಸಣ್ಣ ವಿಸ್ತೀರ್ಣದ ಮನೆಗಳಿಗೆ ಇನ್ನು OC ಅಗತ್ಯವಿಲ್ಲ
ಬೆಂಗಳೂರು: ರಾಜಧಾನಿ ಬೆಂಗಳೂರು ನಗರದಲ್ಲಿ ಬಡವರು ಹಾಗೂ ಮಧ್ಯಮ ವರ್ಗದವರು ನಿರ್ಮಿಸಿರುವ ಸಣ್ಣ ವಿಸ್ತೀರ್ಣದ ಮನೆಗಳಿಗೆ ಈಗ ಸ್ವಾಧೀನಾನುಭವ (Occupancy Certificate–OC) ಅಗತ್ಯವಿಲ್ಲ ಎಂಬ ಮಹತ್ವದ ಆದೇಶವನ್ನು ರಾಜ್ಯ ಸರ್ಕಾರ ಹೊರಡಿಸಿದೆ. ಇದುವರೆಗೆ ಓಸಿ ಇಲ್ಲದ ಕಟ್ಟಡಗಳಿಗೆ ಬೆಸ್ಕಾಂ ವಿದ್ಯುತ್ ಸಂಪರ್ಕ ಹಾಗೂ ಜಲಮಂಡಳಿ ನೀರಿನ ಸಂಪರ್ಕ ನೀಡುತ್ತಿರಲಿಲ್ಲ. ಆದರೆ ಇದೀಗ 30×40 ಅಡಿ ವಿಸ್ತೀರ್ಣದ ನಿವೇಶನಗಳ ಮನೆಗಳಿಗೆ ಓಸಿ ವಿನಾಯಿತಿ ನೀಡುವಂತೆ ಸರ್ಕಾರ ತೀರ್ಮಾನಿಸಿದೆ. ಸಚಿವ ಸಂಪುಟದ ಅನುಮೋದನೆಯಂತೆ ನಗರಾಭಿವೃದ್ಧಿ ಇಲಾಖೆ ಮಂಗಳವಾರ ಅಧಿಕೃತ ಆದೇಶ ಹೊರಡಿಸಿದ್ದು, ಸಾವಿರಾರು ಸಣ್ಣ ಮನೆಮಾಲೀಕರಿಗೆ ಇದರಿಂದ ದೊಡ್ಡದಾದ ತಾತ್ಕಾಲಿಕ ನಿಟ್ಟಿನಲ್ಲಿಯೇ ನಿಟ್ಟಿನ ಸುಧಾರಣೆಯಾಗಿದೆ ಎಂದು ನಗರಾಭಿವೃದ್ಧಿ ವಲಯದಲ್ಲಿ ಅಭಿಪ್ರಾಯ ವ್ಯಕ್ತವಾಗಿದೆ.
‘ಮನ ಶಂಕರ ವರ ಪ್ರಸಾದ್ ಗರು’: ಮೊದಲ ಸಿಂಗಲ್ ‘ಮೀಸಲ ಪಿಲ್ಲ್’ ಆಕರ್ಷಣೆ
ಚೆನ್ನೈ: ಮೆಗಾಸ್ಟಾರ್ ಚಿರಂಜೀವಿ ಮತ್ತು ನಟಿ ನಯನತಾರಾ ನಾಯಕತ್ವದ ನಿರೀಕ್ಷೆಯ ಬಹುಚಿತ್ರ ‘ಮನ ಶಂಕರ ವರ ಪ್ರಸಾದ್ ಗರು’ ಚಿತ್ರದ ಮೊದಲ ಸಿಂಗಲ್ ‘ಮೀಸಲ ಪಿಲ್ಲ್’ ಮಂಗಳವಾರ ಬಿಡುಗಡೆಗೊಂಡಿದ್ದು, ಅಭಿಮಾನಿಗಳಲ್ಲಿ ಸಂತೋಷ ಮತ್ತು ಹರ್ಷ ತಂದಿದೆ. ಭೀಮ್ಸ್ ಸೆಸಿರೊಲಿಯೊ ಸಂಗೀತ ನಿರ್ದೇಶನ ಮಾಡಿರುವ ಈ ಟ್ರ್ಯಾಕ್, ಎಲೆಕ್ಟ್ರಾನಿಕ್ ಬೀಟ್, ಬಾಸ್ ಲೈನ್‌ಗಳು, ಆಕರ್ಷಕ ಸಿಂಥ್ ಮೆಲೋಡಿಗಳು ಹಾಗೂ ಸಾಂಪ್ರದಾಯಿಕ ತಾಳವಾಡ್ಯಗಳೊಂದಿಗೆ ಶ್ರೋತೃಹೃದಯ ಗೆದ್ದಿದೆ. ಭಾಸ್ಕರ ಭಟ್ಲ ರಚಿಸಿರುವ ಸಾಹಿತ್ಯದಲ್ಲಿ ಚಿರಂಜೀವಿ–ನಯನತಾರಾ ನಡುವಿನ ತಮಾಷೆಯ ಹಾಸ್ಯ ಮತ್ತು ಕೀರ್ತಿಪೂರ್ಣ ಸಂವಾದ ಚೆನ್ನಾಗಿ ವ್ಯಕ್ತವಾಗಿದೆ. ಹಾಡಿನ ವಿಶೇಷ ಆಕರ್ಷಣೆ ಎಂದರೆ ಉಚಿತ್ ನಾರಾಯಣ್ ಅವರ ಗಾಢ ಧ್ವನಿ, ದೀರ್ಘ ವಿರಾಮದ ನಂತರ ಚಿತ್ರಕ್ಕೆ ತಮ್ಮ ಮೆಚ್ಚಿನ ಹಾಡನ್ನು ನೀಡಿದ್ದಾರೆ. ಶ್ವೇತಾ ಮೋಹನ್ ಅವರ ಸ್ತ್ರೀಯ ಧ್ವನಿ ನಯನತಾರಾ ಪಾತ್ರದ ಶೈಲಿ ಮತ್ತು ಲವಲವಿಕೆಗೆ ಸೂಕ್ತ ಪೂರಕವಾಗಿದೆ. ಚಿರಂಜೀವಿ ನಯವಾದ ಸೂಟ್‌ನಲ್ಲಿ…
ಬಸ್ ಧಗಧಗಿಸಿ ಹೊತ್ತಿಉರಿದ ಬಸ್; ಸಾವಿನ ಸಂಖ್ಯೆ ಕ್ಕೆ ಏರಿಕೆ
ಜೈಸಲ್ಮೇರ್: ಜೈಸಲ್ಮೇರ್-ಜೋಧಪುರ ಹೆದ್ದಾರಿಯ ಥೈಯಾತ್ ಗ್ರಾಮದ ಬಳಿ ಪ್ರಯಾಣಿಕರಿದ್ದ ಬಸ್ ಧಗಧಗಿಸಿ ಹೊತ್ತಿಉರಿದಿದೆ. ಈ ಘಟನೆಯಲ್ಲಿ ಸಾವನ್ನಪಿದವರ ಸಂಖ್ಯೆ 15 ಕ್ಕೇರಿದೆ. #breakingnews राजस्थान के जैसलमेर में चलती एसी स्लीपर बस में आग लग गई। देखते ही देखते आग ने भीषण रूप ले लिया,बचने के लिए लोग चलती बस से कूद गए। बस में 57 लोग सवार थे। हादसे में 10-12 लोगों की जलने से मौत होने की आशंका है।#news #jaisalmer pic.twitter.com/79hsBUVtVz — Nihar Nath (@NiharNath01) October 14, 2025 ಜೈಸಲ್ಮೇರ್-ಜೋಧಪುರ ಹೆದ್ದಾರಿಯ ಥೈಯಾತ್ ಗ್ರಾಮದ ಬಳಿ ಮಧ್ಯಾಹ್ನ 3:30ರ ಸುಮಾರಿಗೆ ರಾಜಸ್ಥಾನದ ಜೈಸಲ್ಮೇರ್‌ನಿಂದ ಜೋಧಪುರಕ್ಕೆ ಹೋಗುತ್ತಿದ್ದ ಖಾಸಗಿ ಬಸ್‌ನಲ್ಲಿ ಇದ್ದಕ್ಕಿದ್ದಂತೆ ಬೆಂಕಿ ಕಾಣಿಸಿಕೊಂಡಿತ್ತು.…
‘ಎರಡು ಐತಿಹಾಸಿಕ ವಿಶ್ವ ದಾಖಲೆಗಳೊಂದಿಗೆ KSRTC ಜಾಗತಿಕ ವೇದಿಕೆಗೆ ಪ್ರವೇಶಿಸಿದೆ’
ಬೆಂಗಳೂರು: ಲಂಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ಸ್ ನಿಂದ ಪ್ರಮಾಣೀಕರಿಸಲ್ಪಟ್ಟ ಎರಡು ಐತಿಹಾಸಿಕ ವಿಶ್ವ ದಾಖಲೆಗಳೊಂದಿಗೆ ಕರ್ನಾಟಕ ಜಾಗತಿಕ ವೇದಿಕೆಗೆ ಪ್ರವೇಶಿಸಿದೆ ಎಂದು ಸಿಎಂ ಸಿದ್ದರಾಮಯ್ಯ ಸಂತಸ ವ್ಯಕ್ತಪಡಿಸಿದ್ದಾರೆ. ಶಕ್ತಿ ಯೋಜನೆಯ ಯಶಸ್ಸಿನ ಬಗ್ಗೆ ಸಾಮಾಜಿಕ ಮಾಧ್ಯಮದಲ್ಲಿ ಮಾಹಿತಿ ಹಂಚಿಕೊಂಡಿರುವ ಸಿಎಂ, ಶಕ್ತಿ ಯೋಜನೆ ಮಹಿಳೆಯರು ಪಡೆದ ಅತಿ ಹೆಚ್ಚು ಉಚಿತ ಬಸ್ ಪ್ರಯಾಣಗಳು – 564.10 ಕೋಟಿ ಪ್ರಯಾಣಗಳು, ದೈನಂದಿನ ಚಲನಶೀಲತೆಯನ್ನು ಸಬಲೀಕರಣಗೊಳಿಸುತ್ತವೆ ಎಂದಿದ್ದಾರೆ. ಕೆಎಸ್‌ಆರ್‌ಟಿಸಿ ವಿಶ್ವದ ಅತಿ ಹೆಚ್ಚು ಪ್ರಶಸ್ತಿ ವಿಜೇತ ರಸ್ತೆ ಸಾರಿಗೆ ನಿಗಮ – 1997 ರಿಂದ 464 ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಗೌರವಗಳನ್ನು ಪಡೆದುಕೊಂಡಿದೆ. ನಮ್ಮ ಆಡಳಿತದ ದೃಷ್ಟಿಕೋನವು ಸಾಮಾಜಿಕ ನ್ಯಾಯ, ಮಹಿಳಾ ಸಬಲೀಕರಣ ಮತ್ತು ವಿಶ್ವ ದರ್ಜೆಯ ಸಾರ್ವಜನಿಕ ಸೇವೆಯಲ್ಲಿ ಬೇರೂರಿದೆ. ಈ ಮನ್ನಣೆಗಳು ಸಮಗ್ರ ಮತ್ತು ಸಹಾನುಭೂತಿಯ ನೀತಿ ನಿರೂಪಣೆಯು ಏನನ್ನು ಸಾಧಿಸಬಹುದು ಎಂಬುದರ ಪ್ರತಿಬಿಂಬವಾಗಿದೆ ಎಂದವರು…
ನಂಜೇಗೌಡರ ಶಾಸಕ ಸ್ಥಾನ ರದ್ದುಗೊಳಿಸಿದ್ದ ಹೈಕೋರ್ಟ್ ತೀರ್ಪಿಗೆ ಸುಪ್ರೀಂ ಕೋರ್ಟ್ ತಡೆ
ಬೆಂಗಳೂರು: ಮಾಲೂರು ಕಾಂಗ್ರೆಸ್ ಶಾಸಕ ಕೆವೈ ನಂಜೇಗೌಡ ಅವರ ಶಾಸಕ ಸ್ಥಾನ ರದ್ದುಗೊಳಿಸಿ ಹೈಕೋರ್ಟ್ ನೀಡಿದ್ದ ತೀರ್ಪಿಗೆ ಸುಪ್ರೀಂ ಕೋರ್ಟ್ ತಡೆ ನೀಡಿದೆ. ಹಾಗಾಗಿ ಶಾಸಕ ಸ್ಥಾನವನ್ನು ಉಳಿಸಿಕೊಳ್ಳುವ ನಂಜೇಗೌಡರ ಪ್ರಯತ್ನ ಬಗ್ಗೆ ಕುತೂಹಲ ಹೆಚ್ಚಾಗಿದೆ. ಮರುಮತ ಎಣಿಕೆ ಮಾಡಲು ಮಹತ್ವದ ಸೂಚನೆ ನೀಡಿರುವ ಸುಪ್ರೀಂ ಕೋರ್ಟ್, ಫಲಿತಾಂಶವನ್ನು ಯಾವುದೇ ಕಾರಣಕ್ಕೂ ಬಹಿರಂಗ ಪಡಿಸದೇ, ಮುಚ್ಚಿದ ಲಕೋಟೆಯಲ್ಲಿ ಕೋರ್ಟ್‌ಗೆ ಸಲ್ಲಿಸುವಂತೆ ಕರ್ನಾಟಕದ ಮುಖ್ಯ ಚುನಾವಣಾಧಿಕಾರಿಗೆ ನಿರ್ದೇಶನ ನೀಡಿದೆ. 2023 ರ ವಿಧಾನಸಭಾ ಚುನಾವಣೆಯಲ್ಲಿ ಮಾಲೂರು ಕ್ಷೇತ್ರದ ಮತ ಎಣಿಕೆಯಲ್ಲಿ ಅಕ್ರಮ ಪ್ರಕರಣದಲ್ಲಿ ಸೆಪ್ಟೆಂಬರ್ 16 ರಂದು ಕರ್ನಾಟಕ ಹೈಕೋರ್ಟ್ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಕೆವೈ ನಂಜೇಗೌಡ ಆಯ್ಕೆಯನ್ನು ರದ್ದುಪಡಿಸಿತ್ತು. ಹೈಕೋರ್ಟ್ ಶಾಸಕ ಸ್ಥಾನ ರದ್ದು ಮಾಡಿ ನೀಡಿರುವ ತೀರ್ಪನ್ನು ಪ್ರಶ್ನಿಸಿ ನಂಜೇಗೌಡರು ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದರು. ವಿಚಾರಣೆ ನಡೆಸಿದ ನ್ಯಾ. ಸೂರ್ಯಕಾಂತ್ ಹಾಗೂ ನ್ಯಾ. ಜೊಯಮಲ್ಯ…
ಬಿಹಾರ ವಿಧಾನಸಭಾ ಚುನಾವಣೆ: ಬಿಜೆಪಿ ಅಭ್ಯರ್ಥಿ ಮೊದಲ ಪಟ್ಟಿ ಬಿಡುಗಡೆ
ನವದೆಹಲಿ: ಬಿಹಾರ ವಿಧಾನಸಭಾ ಚುನಾವಣೆ 2025ಕ್ಕಾಗಿ ಬಿಜೆಪಿಯ ಮೊದಲ ಅಭ್ಯರ್ಥಿ ಪಟ್ಟಿ ಪ್ರಕಟವಾಗಿದೆ. ಪಕ್ಷವು ಸ್ಪರ್ಧಿಸಲಿರುವ 101 ಸ್ಥಾನಗಳಲ್ಲಿ 71 ಕ್ಷೇತ್ರಗಳ ಅಭ್ಯರ್ಥಿಗಳ ಹೆಸರುಗಳನ್ನು ಘೋಷಿಸಿದೆ. ಉಳಿದ 30 ಸ್ಥಾನಗಳ ಅಭ್ಯರ್ಥಿಗಳನ್ನು ಶೀಘ್ರದಲ್ಲೇ ಘೋಷಿಸಲಾಗುವುದು ಎಂದು ಮೂಲಗಳು ತಿಳಿಸಿವೆ. ಈ ಪಟ್ಟಿಯಲ್ಲಿ ಮಾಜಿ ಸಚಿವರು ಮಂಗಲ್ ಪಾಂಡೆ, ರೇಣು ದೇವಿ ಮತ್ತು ತಾರಕೇಶ್ವರ ಪ್ರಸಾದ್ ಸಿಂಗ್ ಸೇರಿದಂತೆ ಹಲವರಿಗೆ ಟಿಕೆಟ್ ನೀಡಲಾಗಿದೆ. ಆದರೆ ಪ್ರಸ್ತುತ ವಿಧಾನಸಭಾಧ್ಯಕ್ಷ ನಂದ ಕಿಶೋರ್ ಯಾದವ್ ಅವರಿಗೆ ಟಿಕೆಟ್ ನೀಡದಿರುವುದು ಗಮನಾರ್ಹವಾಗಿದೆ. 243 ಸದಸ್ಯರ ಬಿಹಾರ ವಿಧಾನಸಭೆಗಾಗಿ ಚುನಾವಣೆ ನವೆಂಬರ್ 6 ಮತ್ತು 11ರಂದು ಎರಡು ಹಂತಗಳಲ್ಲಿ ನಡೆಯಲಿದ್ದು, ನವೆಂಬರ್ 14ರಂದು ಮತ ಎಣಿಕೆ ನಡೆಯಲಿದೆ.
ಸಿಜೆಐ ಮೇಲಿನ ದಾಳಿ ಸಮರ್ಥಿಸಿ ಪೋಸ್ಟ್; ವಕೀಲರ ಆಕ್ರೋಶ, ಕ್ರಿಮಿನಲ್ ಪ್ರಕ್ರಿಯೆಗೆ ಆದೇಶಿಸಲು ಸಿಎಂಗೆ ಆಗ್ರಹ
ಮಂಗಳೂರು: ಸುಪ್ರೀಂ ಕೋರ್ಟ್ ನಲ್ಲಿ ಮುಖ್ಯ ನ್ಯಾಯಮೂರ್ತಿ ಗವಾಯಿ ಅವರ ಮೇಲೆ ವಕೀಲ ರಾಕೇಶ್ ಕಿಶೋರ್ ಶೂ ಎಸೆದು ಅಪಮಾನಿಸಿದ ಕೃತ್ಯದ ವಿರುದ್ಧ ಕೃತ್ಯದ ಬಗ್ಗೆ ವ್ಯಾಪಕ ಖಂಡನೆ ವ್ಯಕ್ತವಾಗಿದೆ. ಅಷ್ಟೇ ಅಲ್ಲ ದೇಶದ ಹಲವೆಡೆ ಪ್ರಕರಣಗಳು ದಾಖಲಾಗಿವೆ. ಆದರೆ. ಇನ್ನೊಂದೆಡೆ ಮುಖ್ಯ ನ್ಯಾಯಮೂರ್ತಿ ಗವಾಯಿ ಅವರ ಮೇಲೆ ವಕೀಲ ನಡೆಸಿದ ಕೃತ್ಯವನ್ನು ಸಮರ್ಥಿಸುತ್ತಿರುವ ಸನ್ನಿವೇಶವೂ ಕಂಡುಬರುತ್ತಿದೆ. ಈ ಬೆಳವಣಿಗೆ ಬಗ್ಗೆ ಕಾನೂನು ತಜ್ಞರು ಹಾಗೂ ವಕೀಲರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ರಾಕೇಶ್ ಕಿಶೋರ್ ನಡೆಸಿರುವ ಸಂವಿಧಾನ ವಿರೋಧಿ ಕೃತ್ಯವನ್ನು ಕೆಲವರು ಸಮರ್ಥಿಸಿ ಸಾಮಾಜಿಕ ಮಾಧ್ಯಮಗಳಲ್ಲಿ ಪೋಸ್ಟ್ ಹಾಕಿರುವ ಪ್ರಕರಣಕ್ಕೆ ಕರ್ನಾಟಕವೂ ಸಾಕ್ಷಿಯಾಗಿವೆ. ಈ ಬಗ್ಗೆ ತೀಕ್ಷ್ಣ ಪ್ರತಿಕ್ರಿಯೆ ನೀಡಿರುವ ಮಾಜಿ ಸರ್ಕಾರಿ ಅಭಿಯೋಜಕರೂ ಆದ ಮಂಗಳೂರಿನ ಹಿರಿಯ ವಕೀಲ ಮನೋರಾಜ್ ರಾಜೀವ್, ಅಂತಹಾ ಕೃತ್ಯವನ್ನು ಬೆಂಬಲಿಸಿ ಪ್ರಚಾರ ಮಾಡುವವರ ವಿರುದ್ಧ ಕ್ರಿಮಿನಲ್ ನ್ಯಾಯಾಂಗ ನಿಂದನೆ ಪ್ರಕರಣ ದಾಖಲಿಸಬೇಕು…
ಕಾರ್ಕಳದ ಮಾಜಿ ಶಾಸಕಗೋಪಾಲ ಭಂಡಾರಿ ಅವರ ಪುತ್ರ ಸುದೀಪ್ ವಿಧಿವಶ
ಕಾರ್ಕಳ: ಮಾಜಿ ಶಾಸಕ ದಿವಂಗತ ಹೆಚ್. ಗೋಪಾಲ ಭಂಡಾರಿ ಅವರ ಪುತ್ರ ಸುದೀಪ್ ಭಂಡಾರಿ ಅವರು ಸಾವಿಗೆ ಶರಣಾಗಿದ್ದಾರೆ. ಅವರ ಮೃತದೇಹ ಬಾರ್ಕೂರು ಬಳಿ ಪತ್ತೆಯಾಗಿದೆ. ಬ್ರಹ್ಮಾವರ ಪೊಲೀಸ್ ಠಾಣೆ ಬಳಿ ಘಟನೆ ಸಂಭವಿಸಿದ್ದು, ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ. ಹೆಬ್ರಿ ತಾಲ್ಲೂಕಿನ ನಿವಾಸಿಯಾಗಿರುವ ಸುದೀಪ್ ಅವರು, ಬಾರ್ಕೂರು ರೈಲು ಮಾರ್ಗದ ಬಳಿ ಸಾವಿಗೆ ಶರಣಾಗಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಸುದೀಪ್ ಅವರ ತಂದೆ ಹೆಚ್. ಗೋಪಾಲ ಭಂಡಾರಿ ಅವರು 1999ರಲ್ಲಿ ಮತ್ತು ನಂತರ 2008ರಲ್ಲಿ ಕಾರ್ಕಳ ವಿಧಾನಸಭಾ ಕ್ಷೇತ್ರದಿಂದ ಎರಡು ಅವಧಿ ಶಾಸಕರಾಗಿದ್ದರು. ಅವರು ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರಾಗಿದ್ದು, ತಮ್ಮ ಪ್ರಾಮಾಣಿಕತೆ ಮತ್ತು ಸರಳ ರಾಜಕೀಯ ಜೀವನಕ್ಕಾಗಿ ಹೆಸರುವಾಸಿಯಾಗಿದ್ದರು.
